Author: AIN Author

ನಿರ್ದೇಶಕ, ನಟ, ಬರಹಗಾರ ಮಠ ಖ್ಯಾತಿಯ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿದ್ದು ಈಗ ಎಲ್ಲರಲ್ಲೂ ಅಚ್ಚರಿಯನ್ನುಂಟು ಮಾಡಿದೆ. ಬರ್ತ್‌ಡೇಗೂ ಮುನ್ನವೇ ಗುರುಪ್ರಸಾದ್ ಡೆತ್‌ ಡೇ ಮಾಡಿಕೊಂಡಿದ್ದಾರೆ. ಡೈರೆಕ್ಟರ್ ಗುರುಪ್ರಸಾದ್ ಅವರು ಮೂಲತಃ ರಾಮನಗರದವರು. ನವೆಂಬರ್ 02, 1972ರಂದು ಜನಿಸಿದ್ದರು. ಆದರೆ, ಇದೀಗ ಅವರ ಜನ್ಮದಿನಕ್ಕೆ ಮುನ್ನವೇ ಆತ್ಮಹತ್ಯೆ ಶರಣಾಗಿದ್ದಾರೆ. ಈ ಮೂಲಕ ಬದುಕಿನ ಆಟಕ್ಕೆ ಅಂತ್ಯ ಹಾಡಿದ್ದಾರೆ. ಅವರ ಆತ್ಮಹತ್ಯೆಯ ಸುದ್ದಿ ಕುಟುಂಬಕ್ಕೆ, ಆಪ್ತರಿಕೆ ಆಘಾತವುಂಟು ಮಾಡಿದೆ. 1972ರಲ್ಲಿ ಕನಕಪುರದಲ್ಲಿ ಜನಿಸಿದ ಗುರುಪ್ರಸಾದ್ ರಾಮಚಂದ್ರ ಶರ್ಮಾ 2006 ರಲ್ಲಿ ತೆರೆಕಂಡ ‘ಮಠ’ ಚಿತ್ರದ ಮೂಲಕ ನಿರ್ದೇಶಕನಾಗಿ ಕನ್ನಡ ಚಿತ್ರರಂಗದಲ್ಲಿ ಸಿನಿಪಯಣ ಆರಂಭಿಸಿದರು. ಇದು ನವರಸ ನಾಯಕ ಜಗ್ಗೇಶ್‌ರ 100ನೇ ಚಿತ್ರ. 2009 ರಲ್ಲಿ ಇದೇ ಜೋಡಿ ‘ಎದ್ದೇಳು ಮಂಜುನಾಥ’ ಚಿತ್ರದ ಮೂಲಕ ಮತ್ತೊಂದು ಸಮಾಜಿಕ ಚಿತ್ರ ನೀಡಿತು. ಈ ಚಿತ್ರಕ್ಕೆ ಫಿಲ್ಮಫೇರ್ ಪ್ರಶಸ್ತಿ ದೊರಕಿತು. ನಂತರ ‘ಡೈರೆಕ್ಟರ್ ಸ್ಪೇಷಲ್’,’ಎರಡನೇ ಸಲ’ ಚಿತ್ರಗಳನ್ನು ನಿರ್ದೇಶಿಸಿದರು. ನಿರ್ದೇಶಕ ಮಾತ್ರವಲ್ಲದೇ ನಟನಾಗಿ ‘ಮಠ’, ‘ಎದ್ದೇಳು ಮಂಜುನಾಥ’,’ಮೈಲಾರಿ’, ‘ಹುಡುಗರು’,’ಅನಂತು…

Read More

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ವಕ್ಫ್ ಕಾಯ್ದೆ ದುರ್ಬಳಿಕೆ ಮಾಡಿ ರೈತರ ಜಮೀನು ಮತ್ತು ಮಠ ಮಾನ್ಯಗಳು ಹಿಂದೂ ದೇವಾಲಯಗಳನ್ನು ಸೇರಿದಂತೆ ಎಲ್ಲ ಜಾಗವನ್ನು ವಕ್ಫ್ ಬೋಡಿಗೆ ಸೇರಿಸುವ ಹುನ್ನಾರ ನಡೆಸುತ್ತಿದೆ. ವಕ್ಫ್ ಕಾಯ್ದೆ ಮುಸ್ಲಿಂ ಜನಾಂಗವನ್ನು ತುಷ್ಟೀಕರಣಕ್ಕಾಗಿ ಮತ್ತು ಮತಗಳಿಕೆಯ ಆಸೆಯೊಂದಿಗೆ ಇಂಥ ಕಾಯ್ದೆಯನ್ನು ತಂದು ಹಿಂದುಗಳಿಗೆ ಅನ್ಯಾಯ ಮಾಡುತ್ತಿದೆ. ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ಹಾಗೂ ವಕ್ಫ್ ಸಚಿವ ಜಮೀರ್ ಅಹ್ಮದಖಾನ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಪ್ರವಾಸ ಮಾಡಿ ವಕ್ಫ್ ಪ್ರಗತಿ ಪರಿಶೀಲನ ಹಾಗೂ ಅದಾಲತ್ ನಡೆಸಿ ಕರ್ನಾಟಕ ಸರ್ಕಾರದ 1974ರ ಗೆಜೆಟ್ ಆಗಿರುವ ಪ್ರಕಾರ ರೈತರ ಕೃಷಿ ಜಮೀನವನ್ನು ಮಠ ಮಂದಿರದ ಆಸ್ತಿಗಳನ್ನು ಸೇರಿದಂತೆ ಬಹುದೊಡ್ಡ ಪ್ರಮಾಣದ ಆಸ್ತಿಗಳನ್ನು ವಕ್ಫ್ ಹೆಸರಿನಲ್ಲಿ ತಕ್ಷಣ ಕಂದಾಯ ದಾಖಲೆಗಳಲ್ಲಿ ಇಂದಿರಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳ ಸೂಚನೆ ನೀಡಿದ್ದು ಖಂಡನೀಯ ಎಂದು ತೇರದಾಳ ಶಾಸಕ ಸಿದ್ದು ಸವದಿ ಹೇಳಿದರು. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿಯ ಬಿಜೆಪಿ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಒಂದು ಜನಾಂಗದ…

Read More

ತುಮಕೂರು: ಯುವಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಕದ್ದು ಮುಚ್ಚಿ ಅಕ್ರಮವಾಗಿ ಅಮಲು ಬರಿಸುವ ಮಾತ್ರೆಗಳನ್ನು ಮಾರಾಟ ಮಾಡ್ತಿದ್ದ ಆರೋಪಿಗಳ‌ನ್ನು ತಿಲಕ್ ಪಾರ್ಕ್ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಅಬ್ದುಲ್ ಖಾದರ್ , ಬಿರೇಶ್ ಬಂಧೀತ ಆರೋಪಿಗಳಾಗಿದ್ದು, ತುಮಕೂರು ನಗರದ ನಿವಾಸಿಗಳಾಗಿದ್ದಾರೆ. ತುಮಕೂರು ನಗರದ ವಿವಿಧ ಬಡಾವಣೆಗಳಲ್ಲಿ ಅಕ್ರಮವಾಗಿ ಅಮಲು ಬರಿಸುವ ಮಾತ್ರೆಗಳನ್ನು ಮಾರಾಟ ಮಾಡ್ತಿದ್ದರು. https://ainlivenews.com/by-following-this-method-if-you-grow-a-ball-flower-you-can-earn-lakhs-in-1-acre/ ಯುವಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಕದ್ದು ಮುಚ್ಚಿ ಅಕ್ರಮವಾಗಿ ಮಾರಾಟ ಮಾಡ್ತಿದ್ದರು ಎಂಬ ಮಾಹಿತಿ ಮೇರೆಗೆ ತಿಲಕ್ ಪಾರ್ಕ್ ಪೊಲೀಸರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 56 ಸಾವಿರ ಬೆಲೆ ಬಾಳುವ 1700 ಮಾತ್ರೆಗಳ ವಶಕ್ಕೆ ಪಡೆದಿದ್ದು, ತಿಲಕ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಮಂಡ್ಯ: ಒಂದೆಡೆ ರೈತರು ತಮ್ಮ ಜಮೀನುಗಳನ್ನು ಕಾಪಾಡಿಕೊಳ್ಳಲು ಪರದಾಡುತ್ತಿದ್ದರೆ, ಮತ್ತೊಂದೆಡೆ ರೈತರ ಭೂಮಿಯನ್ನ ವಕ್ಫ್​ ಬೋರ್ಡ್​ ಕಬಳಿಸುತ್ತಿದೆ ಎನ್ನುವ ರಾಜ್ಯದ ಹಲವು ಜಿಲ್ಲೆಗಳ ರೈತರ ಆರೋಪ ಇದೀಗ ತೀವ್ರ ಸ್ವರೂಪಕ್ಕೆ ತಿರುಗಿದೆ.. ಹೌದು ರೈತರ ಜಮೀನನ್ನು ವಕ್ಫ್​ ಖಾತೆಗೆ ಸೇರಿಸಲು ತೋರಿದ ಕೈಚಳಕ ಬಯಲಾಗಿತ್ತು. ಇದರಿಂದ ಆಕ್ರೋಶಗೊಂಡ ರೈತರು ಹೋರಾಟಕ್ಕೆ ಇಳಿದಿದ್ದರು. ಇದರ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ, ಪಹಣಿಗಳಲ್ಲಿದ್ದ ವಕ್ಫ್​ ಹೆಸರನ್ನು ಡಿಲೀಟ್​ ಮಾಡಲಾಗಿದೆ. https://ainlivenews.com/by-following-this-method-if-you-grow-a-ball-flower-you-can-earn-lakhs-in-1-acre/ ಇದರ ಬೆನ್ನಲ್ಲೇ   ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಚಂದಗಾಲು ಗ್ರಾಮದ ಸರ್ಕಾರಿ ಶಾಲೆ ಜಾಗದ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿದೆ. ಸರ್ವೆ ನಂ.215ರ 30 ಗುಂಟೆ ಜಾಗದಲ್ಲಿ ಸರ್ಕಾರಿ ಶಾಲೆ ಇದೆ. ಈ ಶಾಲೆಯ ಜಾಗದ ಪಹಣಿ ಪತ್ರದಲ್ಲಿ ವಕ್ಫ್‌ ಆಸ್ತಿ ನಮೂದಾಗಿದೆ. ಸರ್ಕಾರಿ ಶಾಲೆ ಜಾಗ ಕಬಳಿಕೆಗೆ ಮುಂದಾದ ವಕ್ಫ್ ವಿರುದ್ಧ ಗ್ರಾಮಸ್ಥರು ಸಿಡಿದೆದ್ದಿದ್ದಾರೆ. ಸರ್ಕಾರದ ವಿರುದ್ಧ ಕಿಡಿ ಕಾರಿ ರಾಜ್ಯದ ವಕ್ಫ್ ಮಂಡಳಿ ವಜಾಗೊಳಿಸಲು ಆಗ್ರಹಿಸಿದ್ದಾರೆ. ಚಿಕ್ಕಮ ದೇವಿ ದೇವಸ್ಥಾನದ…

Read More

ನ್ಯೂಯಾರ್ಕ್: ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಹಿಂದೂ ಅಸ್ತ್ರ ಪ್ರಯೋಗಿಸಿದ್ದಾರೆ. ಅಮೆರಿಕಾದ ಹಿಂದೂಗಳಿಗೆ ದೀಪಾವಳಿ ಶುಭಾಶಯ ತಿಳಿಸಿದ ಟ್ರಂಪ್, ಇತ್ತೀಚಿಗೆ ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆದ ದಾಳಿಯನ್ನು ಖಂಡಿಸಿದ್ದಾರೆ. ಕ್ರಿಶ್ಚಿಯನ್ನರು ಮತ್ತು ಇತರೆ ಅಲ್ಪಸಂಖ್ಯಾಕರ ಮೇಲೆ ನಡೆಯುತ್ತಿರುವ ಹಿಂಸೆಯನ್ನು ಖಂಡಿಸಿದ್ದರು. “ನಾನು ಅಧ್ಯಕ್ಷನಾಗಿರುತ್ತಿದ್ದರೆ ಇಂಥದ್ದು ನಡೆಯಲು ಬಿಡುತ್ತಿರಲಿಲ್ಲ. ಆದರೆ ಹಾಲಿ ಅಧ್ಯಕ್ಷ ಬೈಡೆನ್‌, ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಅಮೆರಿಕದಲ್ಲಿರುವ ಮತ್ತು ಜಗತ್ತಿನಲ್ಲಿರುವ ಹಿಂದೂಗಳನ್ನು ನಿರ್ಲಕ್ಷಿಸಿದ್ದಾರೆ.  ಕಟ್ಟರ್‌ ಎಡಪಂಥೀಯರ ಹಿಂದೂ ವಿರೋಧಿ ಅಜೆಂಡಾದಿಂದ ಹಿಂದೂ ಅಮೆರಿಕನ್ನರನ್ನು ನಾನು ರಕ್ಷಿಸುತ್ತೇನೆ. https://ainlivenews.com/by-following-this-method-if-you-grow-a-ball-flower-you-can-earn-lakhs-in-1-acre/ ನನ್ನ ಆಡಳಿತಾವಧಿಯಲ್ಲಿ ನಾನು ನನ್ನ ಸ್ನೇಹಿತ ಮೋದಿ ಹಾಗೂ ಭಾರತದೊಂದಿಗೆ ಉತ್ತಮ ಪಾಲುದಾರಿಕೆ ಹೊಂದುತ್ತೇನೆ ಎಂದು ಘೋಷಿಸಿದ್ದರು.ತಾನು ಅಧ್ಯಕ್ಷನಾದ್ರೆ ಭಾರತದ ಜೊತೆಗಿನ ಸಂಬಂಧವನ್ನು ಮತ್ತಷ್ಟು ಬಲಗೊಳಿಸುವ ಭರವಸೆ ನೀಡಿದ್ದಾರೆ. ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಕಮಲಾ ಹ್ಯಾರಿಸ್‌ಗೆ ಹಿಂದೂಗಳ ಬಗ್ಗೆ ಕಾಳಜಿ ಇಲ್ಲ ಎಂದು ಟ್ರಂಪ್ ಟೀಕಿಸಿದ್ದಾರೆ. ಅಂದಹಾಗೇ, ಅಮೆರಿಕಾದಲ್ಲಿ ಈವರೆಗೂ 6.1 ಕೋಟಿ ಮತದಾರರು ತಮ್ಮ ಹಕ್ಕು…

Read More

ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ, ನಟ ಗುರುಪ್ರಸಾದ್ (52) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಫ್ಯಾನಿಗೆ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದ ನಿರ್ದೇಶಕ ಗುರುಪ್ರಸಾದ್‌ 3 ದಿನಗಳ ಹಿಂದೆ ನೇಣಿಗೆ ಶರಣಾಗಿದ್ದು, ಅವರ ಮೃತದೇಹ ಅಪಾರ್ಟ್‌ಮೆಂಟ್‌ ಪ್ಲಾಟ್‌ ಪತ್ತೆಯಾಗಿದೆ. ಇನ್ನೂ ನವೆಂಬರ್‌ 2ರಂದು ಗುರುಪ್ರಸಾದ್‌ ಹುಟ್ಟುಹಬ್ಬ. ಈ ಬೆನ್ನಲ್ಲೇ ಅವರ ಸಾವಿನ ಸುದ್ದಿ ಚಿತ್ರರಂಗದ ಮಂದಿಗೆ ಶಾಕ್‌ ಕೊಟ್ಟಿದೆ. ಮೂರು ದಿನಗಳ ಹಿಂದೆ ಗುರುಪ್ರಸಾದ್‌ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಇಂದು ಬೆಳಗ್ಗೆಯಿಂದ ಸ್ಥಳೀಯ ನಿವಾಸಿಗಳಿಗೆ ವಾಸನೆ ಬರತೊಡಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಬಾಗಿಲನ್ನು ತೆರೆಯಲಾಗಿದೆ ಎಂಬ ಪ್ರಾಥಮಿಕ ಮಾಹಿತಿ ಈಗ ಲಭ್ಯವಾಗಿದೆ. https://ainlivenews.com/by-following-this-method-if-you-grow-a-ball-flower-you-can-earn-lakhs-in-1-acre/ ಗುರುಪ್ರಸಾದ್ ಅವರು ಸಾಲದ ಬಾಧೆಯಿಂದ ಬಳಲುತ್ತಿದ್ದರು. ಅವರು ನಿರ್ದೇಶನ ಮಾಡಿದ್ದ ಇತ್ತೀಚೆಗಿನ ಸಿನಿಮಾ ‘ರಂಗನಾಯಕ’ ಹೀನಾಯ ಸೋಲು ಕಂಡಿತ್ತು. ‘ರಂಗನಾಯಕ’ ಸಿನಿಮಾದ ಫ್ಲಾಪ್ ಬಳಿಕ ಗುರುಪ್ರಸಾದ್ ಸಾಲಗಳಿಗೆ ಸಿಲುಕಿದ್ದರು. ಮಾತ್ರವಲ್ಲದೆ…

Read More

ಮುಂಬೈ: ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ ಹಾಗೂ ನಟ ಸಲ್ಮಾನ್‌ ಖಾನ್‌ ಅವರ ಬಾಂದ್ರಾ ನಿವಾಸದ ಮೇಲೆ ಗುಂಡಿನ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್‌ಸ್ಟರ್ ಲಾರೆನ್ಸ್‌ ಬಿಷ್ಣೋಯ್‌ ಸಹೋದರ ಅನ್ಮೋಲ್ ಬಿಷ್ಣೋಯ್‌ನನ್ನಅಮೆರಿಕದಿಂದ ಕರೆತರಲು ಮುಂಬೈ ಪೊಲೀಸ್ ಕ್ರೈಂ ವಿಭಾಗವು ಹಸ್ತಾಂತರ ಪ್ರಕ್ರಿಯೆ ಪ್ರಾರಂಭಿಸಿದೆ. ಮಹಾರಾಷ್ಟ್ರದ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (MCOCA) ಪ್ರಕರಣಗಳ ವಿಶೇಷ ನ್ಯಾಯಾಲಯವು ಅನ್ಮೋಲ್ ಬಿಷ್ಣೋಯ್ ಬಂಧನಕ್ಕೆ ಜಾಮೀನು ರಹಿತ ವಾರಂಟ್ ಹೊರಡಿಸಿದೆ. ಆದ್ರೆ ಔಪಚಾರಿಕವಾಗಿ ಪ್ರಕ್ರಿಯೆ ಪೂರ್ಣಗೊಳಿಸಲು ನ್ಯಾಯಾಲಯದ ಕೆಲವು ದಾಖಲೆಗಳಿಗಾಗಿ ನಾವು ಕಾಯುತ್ತಿದ್ದೇವೆ. ನಂತರ ಮುಂದಿನ ಕ್ರಮಕ್ಕಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ಮುಂಬೈ ಪೊಲೀಸ್ ಮೂಲಗಳು ತಿಳಿಸಿವೆ. https://ainlivenews.com/by-following-this-method-if-you-grow-a-ball-flower-you-can-earn-lakhs-in-1-acre/ ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ದಾಖಲಿಸಿದ ಎರಡು ಪ್ರಕರಣಗಳು ಮತ್ತು ಇತರ 18 ಪ್ರಕರಣಗಳಲ್ಲಿ ಕ್ರಿಮಿನಲ್‌ ಆರೋಪ ಎದುರಿಸುತ್ತಿದ್ದಾನೆ. ಇತ್ತೀಚೆಗಷ್ಟೇ ಎನ್‌ಐಎ ಅನ್ಮೋಲ್ ಬಿಷ್ಣೋಯ್ ಬಂಧನಕ್ಕೆ ಸಹಕಾರಿಯಾಗುವ ಮಾಹಿತಿ ನೀಡಿದವರಿಗೆ 10 ಲಕ್ಷ…

Read More

ಪೇಟಾ’ಸ್ ಸಿನಿ ಕೆಫೆ ಮತ್ತು ಫಿಲ್ಮಿ ಮಾಂಕ್ ಸಹಯೋಗದೊಂದಿಗೆ ಕಿರಾತಕ ಪ್ರದೀಪ್ ರಾಜ್, ಪಿ ಸಿ ಶೇಖರ್, ಪ್ರಶಾಂತ್ ರಾಜಪ್ಪ ನಿರ್ದೇಶನ ತಂಡದಲ್ಲಿ ಕೆಲಸ ಮಾಡಿದ ಅನುಭವ ಇರುವ ವಿಶ್ವ ನಿರ್ದೇಶನದ ಚೊಚ್ಚಲ ಚಿತ್ರ ‘ಅಣ್ತಮ್ತನ’ ಘೋಷಣೆ ಆಗಿದೆ. ಈ ಚಿತ್ರದಲ್ಲಿ ಬಹುಭಾಷಾ ನಟ ಅಚ್ಯುತ್ ಕುಮಾರ್ ಮತ್ತು ಬಹುಬೇಡಿಕೆಯ ನಟ ಗೋಪಾಲಕೃಷ್ಣ ದೇಶಪಾಂಡೆ ಅಣ್ಣ ತಮ್ಮಂದಿರಾಗಿ ಮುಖ್ಯಭೂಮಿಕೆಯಲ್ಲಿ ಮತ್ತು ಒಂದ್ ಕಥೆ ಹೇಳ್ಲಾ ಹಾಗೂ ಶಾಲಿವಾಹನ ಶಕೆ ಖ್ಯಾತಿಯ ಗಿರೀಶ್ ಜಿ ಮತ್ತೊಂದು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ವಿಶ್ವಜಿತ್ ರಾವ್ ಛಾಯಾಗ್ರಹಣ ಪೂರ್ಣಚಂದ್ರ ತೇಜಸ್ವಿ ಎಸ್ ವಿ ಅವರ ಸಂಗೀತ, ಶೈಲೇಶ್ ಕುಮಾರ್ ಸಂಭಾಷಣೆ, ಹರಿ ಪರಾಕ್ ಸಾಹಿತ್ಯ ಇರುವ ಚಿತ್ರ ಅಣ್ತಮ್ತನ. ಈ ಚಿತ್ರ ಅಣ್ಣ ತಮ್ಮ ಸಂಬಂಧ, ನಮ್ಮ ಮಣ್ಣಿನ ಆಚರಣೆ, ಹಳೆ ಮೈಸೂರು ಸಂಸ್ಕೃತಿ, ನಂಬಿಕೆ ಮೂಢನಂಬಿಕೆಗಳ ಸುತ್ತ ಹೆಣೆದಿರುವ ಕಥೆ ಹೊಂದಿದೆ. ಆದಿಚುಂಚನಗಿರಿ, ನಾಗಮಂಗಲ, ಮದ್ದೂರು, ಮಂಡ್ಯ ಸುತ್ತ-ಮುತ್ತ ಚಿತ್ರೀಕರಣ ನಡೆಯಲಿದ್ದು, ಶೀಘ್ರದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ.

Read More

ಹುಬ್ಬಳ್ಳಿ: ಅನ್ವರ್ ಮಾನಿಪ್ಪಾಡಿ ವರದಿಯಲ್ಲಿರುವಂತೆ ವಕ್ಪ್ ಆಸ್ತಿ ಕಬಳಿಸಿರುವ ಕಾಂಗ್ರೆಸ್ ನಾಯಕರಿಂದ ವಕ್ಪ್ ಆಸ್ತಿ ವಶಪಡಿಸಿಕೊಳ್ಳುವಂತೆ ವಕ್ಪ್ ಬೋರ್ಡ್ ಗೆ ಹೇಳಿದ್ದೆ ವಿನಹ ರೈತರ ಆಸ್ತಿಯನ್ನಲ್ಲಾ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ‌. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಕ್ಪ್ ಸಚಿವ ಜಮೀರ್ ಅಹಮದ್ ಅವರು ನನ್ನ ಹಳೆಯ ವಿಡಿಯೊ ಬಿಡುಗಡೆ ಮಾಡಿ, ನಾನು ರೈತರ ಜಮೀನು ವಶಪಡಿಸಿಕೊಳ್ಳಲು ವಕ್ಪ್ ಗೆ ಹೇಳಿದ್ದೆ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ‌. ನಾನು ವಕ್ಪ್ ಸಮಾರಂಭದಲ್ಲಿ ಮಾತನಾಡಿದ್ದೆ. ವಕ್ಪ್ ಬೋರ್ಡ್ ನ ಯಾವುದೇ ಸಭೆ ಮಾಡಿಲ್ಲ. ನಾನು ಅಂದು ಹೇಳಿರುವುದು ಅನ್ವರ್ ಮಾನಿಪ್ಪಾಡಿ ಅವರ ಸಮಿತಿ ವರದಿ ನೀಡಿದೆ. ಯಾವ ಕಾಂಗ್ರೆಸ್ ನ್ ದೊಡ್ಡ ದೊಡ್ಡ ನಾಯಕರು ಮೋಸದಿಂದ ಎಷ್ಡೆಷ್ಟು ವಕ್ಪ್ ಆಸ್ತಿ ನುಂಗಿದ್ದಾರೆ ಎಂದು ಅನ್ವರ್ ಮಾನಿಪ್ಪಾಡಿ ವರದಿಯಲ್ಕಿ ಸ್ಪಷ್ಟವಾಗಿದೆ‌. ನಾವು ರೈತರಿಗೆ ಯಾವುದೇ ನೊಟಿಸ್ ಕೊಟ್ಟಿಲ್ಲ ರೈತರ ಜಮೀನು ವಶ ಪಡೆದುಕೊಂಡಿಲ್ಲ ಎಂದು ಹೇಳಿದರು. https://ainlivenews.com/by-following-this-method-if-you-grow-a-ball-flower-you-can-earn-lakhs-in-1-acre/…

Read More

ಚಿತ್ರದುರ್ಗ: ಸಚಿವ ಜಮೀರ್ ಗಡಿಪಾರು ಮಾಡಿ ರಾಜ್ಯಕ್ಕೆ ಒಳಿತಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಎಲ್ಲವೂ ಜಮೀರ್ ಸೃಷ್ಟಿ ಮಾಡುತ್ತಿದ್ದಾರೆ, ಬೆಂಕಿ ಹಚ್ಚುವ ಕೆಲಸ ಮಾಡ್ತಿದ್ದಾರೆ. ಗೊಂದಲ ಸೃಷ್ಠಿ ಮಾಡಿದ್ದು ಸಿದ್ದರಾಮಯ್ಯ, ಬೆಂಕಿ ಹಚ್ಚಿದ್ದು ಜಮೀರ್ ಎಂದು ಆರೋಪಿಸಿದ್ದಾರೆ. ಸಚಿವ ಜಮೀರ್ ಅಹ್ಮದ್ ಸಂವಿಧಾನದ ಬಗ್ಗೆ ಮಾತಾಡುತ್ತಿದ್ದಾರೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಅಧಿಕಾರಿಗಳ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ಗೂಂಡಾಗಿರಿ ಮಾಡಿ, ರೈತರ ಜಮೀನು, ಮಠಮಾನ್ಯಗಳ ಆಸ್ತಿ ಕಬಳಿಕೆ ಮಾಡಲಾಗುತ್ತಿದೆ. ವಕ್ಫ್ ಮೂಲಕ ಸಚಿವ ಜಮೀರ್ ಅಹ್ಮದ್ ಭೂಕಬಳಿಕೆ ಕೆಲಸ ಮಾಡ್ತಿದ್ದಾರೆ. ಅವರನ್ನ ಗಡಿಪಾರು ಮಾಡಿದ್ರೆ ಈ ರಾಜ್ಯಕ್ಕೆ ಒಳಿತು ಎಂದಿದ್ದಾರೆ. https://ainlivenews.com/by-following-this-method-if-you-grow-a-ball-flower-you-can-earn-lakhs-in-1-acre/ ಇನ್ನೂ ಯತ್ನಾಳ್ ಏನೂ ಮಾತನಾಡ್ತಾರೆ, ಆ ಭಗವಂತನಿಗೆ ಗೊತ್ತು ಎಂದು ಯತ್ನಾಳ್ ವಿರುದ್ದ ವಿಜಯೇಂದ್ರ ಗುಡುಗಿದ್ದಾರೆ. ಯಡಿಯೂರಪ್ಪ ವೇದಿಕೆ ಮೇಲೆ ಹತ್ತಬಾರ್ದು ಎಂದು ಹೇಳಿದ್ದಾರೆ. ಯಡಿಯೂರಪ್ಪ 3-4 ದಶಕದಿಂದ ರಾಜ್ಯದಲ್ಲಿ ರೈತರ ಪರ ದ್ವನಿ ಎತ್ತಿದ ರೈತ ನಾಯಕನಾಗಿದ್ದು, ಯಡಿಯೂರಪ್ಪ & ಆನಂತ್…

Read More