ಬೆಂಗಳೂರು:- ಉಪಚುನಾವಣೆಯಲ್ಲಿ ಮೂರಕ್ಕೆ ಮೂರು ಕ್ಷೇತ್ರ ಗೆಲ್ಲಲೇಬೇಕೆಂದು ಅಂದುಕೊಂಡಿದ್ದ ಕಾಂಗ್ರೆಸ್ಸಿಗರಿಗೆ ಅದೊಂದು ಹೇಳಿಕೆ ಇದೀಗ ಪಕ್ಷಕ್ಕೆ ಹೊಡೆತ ಬೀಳುವ ಸಾಧ್ಯತೆ ಇದೆ. https://ainlivenews.com/640-ancient-artefacts-that-were-taken-abroad-returned-to-india/ ಶಕ್ತಿ ಯೋಜನೆ ಪರಿಷ್ಕರಣೆ ಮಾಡಲಾಗುತ್ತದೆ ಎಂಬ ಡಿಕೆ ಶಿವಕುಮಾರ್ ಅವರ ಹೇಳಿಕೆಯಿಂದ ಮಹಿಳೆಯರು ಕೆರಳಿದ್ದಾರೆ. ಡಿಕೆ ಶಿವಕುಮಾರ್ ಅವರ ಹೇಳಿಕೆಯಿಂದ ಶಕ್ತಿ ಯೋಜನೆ ಮುಂದುವರೆಯುವ ಬಗ್ಗೆ ಮಹಿಳೆಯರಲ್ಲಿ ಅನುಮಾನ ಹುಟ್ಟಿದೆ. ಇದು ಕಾಂಗ್ರೆಸ್ಗೆ ಬರುವ ಮತಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ. ಡಿಕೆ ಶಿವಕುಮಾರ್ ಅವರ ಹೇಳಿಕೆಗೆ ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಮಹಿಳೆಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಗೆ ಚುನಾವಣೆ ಯಲ್ಲಿ ಗ್ಯಾರಂಟಿ ಬಿಟ್ಟು ಬೇರೆ ಅಸ್ತ್ರವೇ ಇಲ್ಲದಂತಾಗಿತ್ತು. ಇದೀಗ ಕಾಂಗ್ರೆಸ್ ಅದೇ ವಿಚಾರದಲ್ಲಿ ಎಡವಟ್ಟು ಮಾಡಿಕೊಂಡಿದೆ. ನೆರೆ ರಾಜ್ಯದ ಚುನಾವಣೆ ಮೇಲೂ ಗ್ಯಾರಂಟಿ ಮರುಪರಿಶೀಲನೆ ಹೇಳಿಕೆ ನೇರ ಪರಿಣಾಮ ಬೀರುವ ಸಾಧ್ಯತೆ ಇದೆ. ಚುನಾವಣೆ ಹೊತ್ತಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೇಳಿಕೆ ಪಕ್ಷಕ್ಕೆ ಸಾಕಷ್ಟು ಹಾನಿಯಂತು ಉಂಟು ಮಾಡಲಿದೆ ಎಂದು ಹೇಳಲಾಗುತ್ತಿದೆ.…
Author: AIN Author
ನವದೆಹಲಿ:- ವಿದೇಶಗಳಿಗೆ ಒಯ್ಯಲ್ಪಟ್ಟಿದ್ದ 640 ಪುರಾತನ ಕಲಾಕೃತಿ ಭಾರತಕ್ಕೆ ವಾಪಸ್ ಬಂದಿದೆ. https://ainlivenews.com/ipl-2025-rinku-jumps-from-lakhs-to-crores-kkr-melts-with-the-young-strikers-rule/ ಈ ಬಗ್ಗೆ X ಮಾಡಿರುವ ಭಾರತೀಯ ಪುರಾತತ್ವ ಇಲಾಖೆ ವಿದೇಶಗಳಿಂದ ವಾಪಸ್ ತಂದಿರುವ ಕಲಾಕೃತಿಗಳ ಪೈಕಿ ಅತಿಹೆಚ್ಚು ಅಮೆರಿಕದಿಂದಲೇ ತರಲಾಗಿದೆ ಎಂದು ಇಲಾಖೆ ತಿಳಿಸಿದೆ. ಕಳೆದ ಒಂದು ದಶಕದಲ್ಲಿ ವಿವಿಧ ದೇಶಗಳಿಂದ 640 ಕಲಾಕೃತಿಗಳನ್ನು ವಾಪಸ್ ತರಿಸಲಾಗಿದೆ. ಅತ್ಯಧಿಕ ಸಂಖ್ಯೆಯ ಅಂದರೆ, 578 ಕಲಾಕೃತಿಗಳನ್ನು ಅಮೆರಿಕದಿಂದಲೇ ತರಲಾಗಿದೆ ಎಂದು ಇಲಾಖೆ ಉಲ್ಲೇಖಿಸಿದೆ. ಜತೆಗೆ, ವಾಪಸ್ ತಂದಿರುವ ಕಲಾಕೃತಿಗಳ ವಿಡಿಯೋವನ್ನೂ ಪ್ರಕಟಿಸಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕಳೆದ ಬಾರಿ ಅಮೆರಿಕಕ್ಕೆ ಭೇಟಿ ನೀಡಿದ್ದಾಗ, ವಿವಿಧ ಕಾರಣಗಳಿಂದ ಅಮೆರಿಕ ಸೇರಿದ್ದ ಭಾರತದ ರಾಷ್ಟ್ರೀಯ ಪರಂಪರೆಯ ಕಲಾಕೃತಿಗಳನ್ನು ವಾಪಸ್ ತರುವ ಬಗ್ಗೆಯೂ ಸಮಾಲೋಚನೆಗಳನ್ನು ನಡೆಸಿದ್ದರು. ಪ್ರಧಾನಿಯವರ ಮೂರು ದಿನಗಳ ಅಮೇರಿಕ ಭೇಟಿ ಸಂದರ್ಭದಲ್ಲೇ ಭಾರತಕ್ಕೆ 297 ಪುರಾತನ ವಸ್ತುಗಳನ್ನು ಹಸ್ತಾಂತರಿಸಲಾಗಿತ್ತು. ಈಗ ಪುರಾತತ್ವ ಇಲಾಖೆ ಹೇಳಿರುವ 640 ಪುರಾತನ ಕಲಾಕೃತಿಗಳಲ್ಲಿ ಅವೂ ಸಹ ಸೇರಿವೆ. ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ…
ರಿಂಕು ಸಿಂಗ್ ನಿಯತ್ತಿಗೆ KKR ಪ್ರಾಂಚೈಸಿಯು ಕೋಟಿ ಕೋಟಿ ಹಣ ಕೊಟ್ಟಿದೆ. https://ainlivenews.com/ipl-2025-disappointment-for-rcb-fans-kgf-chapter-ends-in-bengaluru/ 2018 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ರಿಂಕು ಸಿಂಗ್ ಅವರನ್ನು ಖರೀದಿಸಿದ್ದು ಬರೋಬ್ಬರಿ 80 ಲಕ್ಷ ರೂ.ಗೆ, ಆದರೆ ಆ ಬಳಿಕ ಏರಿಕೆಯತ್ತ ಸಾಗಬೇಕಿದ್ದ ರಿಂಕು ಅವರ ಸಂಭಾವನೆ ಇಳಿಮುಖವಾಗಿದ್ದು ಮಾತ್ರ ವಿಪರ್ಯಾಸ. ಅದರಲ್ಲೂ 2022 ರಲ್ಲಿ ಕೆಕೆಆರ್ ಫ್ರಾಂಚೈಸಿಯು ಯುವ ದಾಂಡಿಗನನ್ನು ಕೇವಲ 55 ಲಕ್ಷ ರೂ.ಗೆ ರಿಟೈನ್ ಮಾಡಿಕೊಂಡಿತ್ತು. ಅಷ್ಟೇ ಅಲ್ಲದೆ ಈ ಬಾರಿಯ ಐಪಿಎಲ್ ಮೆಗಾ ಹರಾಜಿಗೆ ರಿಂಕು ಸಿಂಗ್ ಎಂಟ್ರಿ ಕೊಡಲಿದ್ದಾರೆ ಎಂಬ ಸುದ್ದಿಗಳು ಕೂಡ ಹರಿದಾಡಿದ್ದವು. ಇದರ ನಡುವೆ ಕೆಕೆಆರ್ ಆಟಗಾರ ನೀಡಿದ ಹೇಳಿಕೆಯು ಆತನಿಗೆ ನೈಟ್ ರೈಡರ್ಸ್ ತಂಡದ ಮೇಲಿನ ನಿಯತ್ತನ್ನು ಬಹಿರಂಗಪಡಿಸಿತ್ತು. ನನ್ನ ಪಾಲಿಗೆ 50-55 ಲಕ್ಷ ರೂ. ದೊಡ್ಡ ಮೊತ್ತ. ನಾನು ಕೆರಿಯರ್ ಶುರು ಮಾಡಿದಾಗ ಇಷ್ಟು ಮೊತ್ತ ಗಳಿಸುತ್ತೇನೆ ಎಂದು ಅಂದುಕೊಂಡಿರಲಿಲ್ಲ. ಬಾಲ್ಯದಲ್ಲಿ 10-5 ರೂಪಾಯಿಗೂ ಒದ್ದಾಡುತ್ತಿದ್ದವನಿಗೆ 55 ಲಕ್ಷ ರೂ. ಸಿಗುತ್ತಿದೆ.…
ಇದು ನಿಜಕ್ಕೂ RCB ಅಭಿಮಾನಿಗಳು ಬೇಸರ ಮಾಡಿಕೊಳ್ಳುವಂತಹ ಸುದ್ದಿ. ಹೀಗಾಗಲೇ IPL ಎಲ್ಲಾ ಪ್ರಾಂಚೈಸಿಗಳು ರಿಟೇನ್ ಲಿಸ್ಟ್ ಬಿಡುಗಡೆ ಮಾಡಿದ್ದು, ಅದರಂತೆ RCB ಈ ಮೂರು ಆಟಗಾರರನ್ನು ಮಾತ್ರ ಉಳಿಸಿಕೊಂಡಿದೆ. https://ainlivenews.com/ipl-2025-5-teams-to-change-captains/ ಈ ಮೂಲಕ KGF ಅಧ್ಯಾಯನ ಮುಗಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ KGF ಜೋಡಿ ಬೇರ್ಪಟ್ಟಂತಾಗಿದೆ. ಈ ಹಿಂದೆ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್ವೆಲ್ ಹಾಗೂ ಫಾಫ್ ಡುಪ್ಲೆಸಿಸ್ ಆರ್ಸಿಬಿ ತಂಡದ ಕೆಜಿಎಫ್ ಜೋಡಿಗಳಾಗಿ ಗುರುತಿಸಿಕೊಂಡಿದ್ದರು. ಇದೀಗ ತ್ರಿವಳಿ ಗುಂಪಿನಿಂದ ಇಬ್ಬರು ಆಟಗಾರರು ಹೊರಬಿದ್ದಿದ್ದಾರೆ. ಅಲ್ಲದೆ ಮುಂಬರುವ ಸೀಸನ್ನಲ್ಲಿ ಆರ್ಸಿಬಿ ತಂಡವನ್ನು ಹೊಸ ನಾಯಕ ಮುನ್ನಡೆಸುವ ಸಾಧ್ಯತೆಯಿದೆ. 2022 ರಿಂದ ಆರ್ಸಿಬಿ ತಂಡವನ್ನು ಫಾಫ್ ಡುಪ್ಲೆಸಿಸ್ ಮುನ್ನಡೆಸಿದ್ದರು. ಅಲ್ಲದೆ 45 ಪಂದ್ಯಗಳಲ್ಲಿ ಆರ್ಸಿಬಿ ಪರ ಕಣಕ್ಕಿಳಿದಿರುವ ಫಾಫ್ 15 ಅರ್ಧಶತಕಗಳೊಂದಿಗೆ ಒಟ್ಟು 1636 ರನ್ ಕಲೆಹಾಕಿದ್ದಾರೆ. ಇದಾಗ್ಯೂ ಫಾಫ್ ಡುಪ್ಲೆಸಿಸ್ ಅವರನ್ನು ಆರ್ಸಿಬಿ ಉಳಿಸಿಕೊಳ್ಳದಿರಲು ಮುಖ್ಯ ಕಾರಣ ಅವರ ವಯಸ್ಸು. ಏಕೆಂದರೆ ಈಗಾಗಲೇ 40 ವರ್ಷ ದಾಟಿರುವ ಅವರು…
ಐಪಿಎಲ್ 2025 ರಲ್ಲಿ 5 ತಂಡಗಳ ನಾಯಕರುಗಳು ಬದಲಾಗುವುದು ಖಚಿತ ಎನ್ನಬಹುದಾಗಿದೆ. https://ainlivenews.com/bengaluru-an-electric-bike-caught-fire-in-the-middle-of-the-road-a-missed-disaster/ 1- ಫಾಫ್ ಡುಪ್ಲೆಸಿಸ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ನಾಯಕ ಫಾಫ್ ಡುಪ್ಲೆಸಿಸ್ ಅವರನ್ನು ಬಿಡುಗಡೆ ಮಾಡಿದೆ. ಕಳೆದ ಮೂರು ಸೀಸನ್ಗಳಲ್ಲಿ ಫಾಫ್ ಆರ್ಸಿಬಿ ತಂಡವನ್ನು ಮುನ್ನಡೆಸಿದ್ದರು. ಇದೀಗ ಅವರು ತಂಡದಿಂದ ಹೊರಬಿದ್ದಿರುವ ಕಾರಣ ಮುಂದಿನ ಸೀಸನ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಹೊಸ ನಾಯಕ ಮುನ್ನಡೆಸುವುದು ಖಚಿತ ಎನ್ನಬಹುದು. 2- ಕೆಎಲ್ ರಾಹುಲ್: 2022 ರಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಕೆಎಲ್ ರಾಹುಲ್ ಕೂಡ ಈ ಬಾರಿಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಐಪಿಎಲ್ 2025 ರಲ್ಲಿ ಎಲ್ಎಸ್ಜಿ ತಂಡವನ್ನು ನಿಕೋಲಸ್ ಪೂರನ್ ಮುನ್ನಡೆಸುವ ಸಾಧ್ಯತೆಯಿದೆ. 3- ರಿಷಭ್ ಪಂತ್: ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಕೂಡ ಐಪಿಎಲ್ ಮೆಗಾ ಹರಾಜಿಗೆ ಎಂಟ್ರಿ ಕೊಟ್ಟಿದ್ದಾರೆ. ಹೀಗಾಗಿ ಸೀಸನ್-18 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಹೊಸ ಕ್ಯಾಪ್ಟನ್ ಮುನ್ನಡೆಸುವುದು ಖಚಿತ…
ಬೆಂಗಳೂರು:- ನಡು ರಸ್ತೆಯಲ್ಲೇ ಎಲೆಕ್ಟ್ರಿಕ್ ಬೈಕ್ ಹೊತ್ತಿ ಉಳಿದಿದ್ದು, ಅನಾಹುತ ತಪ್ಪಿದೆ. ಈ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಜರುಗಿದೆ. https://ainlivenews.com/it-is-difficult-for-women-to-travel-free-in-the-bus/ ನಗರದ ಬೆಮೆಲ್ ಲೇಔಟ್ ರಸ್ತೆಯಲ್ಲಿ ಘಟನೆ ಜರುಗಿದೆ. ಶಿವಾನಂದ ಎಂಬುವರು ಬೆಳಗ್ಗೆ ಮನೆಯಿಂದ ಕೆಲಸಕ್ಕೆ ಆರ್‌ಆರ್ ನಗರದ ಕಚೇರಿಗೆ ಬಂದಿದ್ದರು. ನಂತರ ಕಚೇರಿಯಿಂದ ನಾಗರಭಾವಿಗೆ ತೆರಳಲು ಸ್ಕೂಟರ್ ತೆಗೆದು ಹೊರ ಬರುವಾಗ ಸಣ್ಣ ಪ್ರಮಾಣದ ಹೊಗೆ ಕಾಣಿಸಿಕೊಂಡಿದೆ. ಹೊಗೆ ಬರುತ್ತಿರುವುದನ್ನು ನೋಡಿ ರಸ್ತೆ ಬದಿ ಶಿವಾನಂದ ಸ್ಕೂಟರ್ ನಿಲ್ಲಿಸಿದ್ದಾರೆ. ಈ ವೇಳೆ ಕ್ಷಣ ಮಾತ್ರದಲ್ಲೇ ಎಲೆಕ್ಟ್ರಿಕ್ ಸ್ಕೂಟರ್ ಹೊತ್ತಿ ಉರಿದಿದೆ. ಸ್ಥಳೀಯರು ಬ್ಯಾಟರಿ ಹೊರ ತೆಗೆದು ನೀರು ಹಾಕಿ ಬೆಂಕಿ ನಂದಿಸಿದ್ದಾರೆ. ಎಲೆಕ್ಟ್ರಿಕ್ ಬೈಕ್ ಸುಟ್ಟು ಕರಕಲಾಗಿದ್ದು ಸ್ಥಳಕ್ಕೆ ಆರ್ ಆರ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು:- ಶಕ್ತಿ ಯೋಜನೆ ನಡೆಸೋದು ಸ್ವಲ್ಪ ಕಷ್ಟವಾಗ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. https://ainlivenews.com/x-owned-by-elon-musk-laid-off-employees/ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಯನ್ನು ನಡೆಸುವುದು ಸಾರಿಗೆ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ. ಆದರೆ, ಯಾವುದೇ ಕಾರಣಕ್ಕೂ ನಾವು ಯೋಜನೆಯನ್ನು ನಿಲ್ಲಿಸುವುದಿಲ್ಲ. ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ. ಅನ್ನಭಾಗ್ಯ ಯೋಜನೆ ಅಡಿ ನೇರನಗದು ವರ್ಗಾವಣೆ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಮಾತ್ರ ಅನ್ವಯವಾಗುತ್ತದೆ. ಆದರೆ ಶಕ್ತಿ ಯೋಜನೆ ಹಾಗಲ್ಲ. ಎಲ್ಲ ಮಹಿಳೆಯರಿಗೂ ಇದರ ಪ್ರಯೋಜನ ದೊರೆಯುತ್ತಿದೆ. ಈ ಯೋಜನೆ ಅಡಿ ಯಾವ ಮಹಿಳೆಯರು ಬೇಕಾದರೂ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಹೀಗಾಗಿ ಇದನ್ನು ನಡೆಸುವುದು ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ. ಆದರೂ ಯೋಜನೆಯನ್ನು ಸ್ಥಗಿತಗೊಳಿಸುವುದಿಲ್ಲ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಬೆಂಗಳೂರು:- ಕುಮಾರಸ್ವಾಮಿಗೆ ಅಳು ಬರೋದು ಎಲೆಕ್ಷನ್ ಟೈಮ್‌ನಲ್ಲಿ ಮಾತ್ರ ಎಂದು ಹೇಳುವ ಮೂಲಕ DK ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. https://ainlivenews.com/cm-instructs-farmers-to-withdraw-waqf-notice-g-parameshwar/ ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ವೇಳೆ ಏಕವಚನದಲ್ಲೇ ಮಾತು ಶುರು ಮಾಡಿದ ಡಿಕೆಶಿ, ಕೇಂದ್ರ ಸಚಿವನಾಗಿರುವ ಆ ಕುಮಾರಸ್ವಾಮಿ ಒಂದು ದಿನಕ್ಕೂ ರಾಷ್ಟ್ರ ಹಾಗೂ ಕನ್ನಡ ಧ್ವಜಕ್ಕೆ ಗೌರವ ಕೊಟ್ಟಿಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ. ಮಿಸ್ಟರ್ ಕುಮಾರಸ್ವಾಮಿ, ನಿಮ್ಮ ಅವಧಿಯಲ್ಲಿ ರಾಷ್ಟ್ರಧ್ವಜ ಹಾರಿಸೋಕೆ ಒಂದು ದಿನವೂ ರಾಮನಗರಕ್ಕೆ ಹೋಗಿಲ್ಲ. ಚನ್ನಪಟ್ಟಣಕ್ಕೂ ಹೋಗಿಲ್ಲ. ಕನ್ನಡ ಬಾವುಟ ಹಾರಿಸಲು ಸಂವಿಧಾನದ ವ್ಯವಸ್ಥೆಯಲ್ಲಿ ನಿನ್ನನ್ನು ರಾಮನಗರ, ಚನ್ನಪಟ್ಟಣದ ಜನ ಆಯ್ಕೆ ಮಾಡಿ ಕಳುಹಿಸಿಕೊಟ್ಟಿದ್ದರು. ಒಂದು ದಿನವೂ ಹೋಗಿ ನೀನು ರಾಷ್ಟ್ರಧ್ವಜಕ್ಕೆ ಗೌರವ ಕೊಟ್ಟಿಲ್ಲ, ಕನ್ನಡ ಧ್ವಜಕ್ಕೂ ಗೌರವ ಕೊಟ್ಟಿಲ್ಲ ಎಂದರು. ಇವರ ಅಳು ಎಲ್ಲಾ ಬರೋದೇ ಎಲೆಕ್ಷನ್ ಟೈಮ್‌ನಲ್ಲಿ. ಯಾವುದಾದರೂ ಒಂದು ಗುರುತಿಸುವ ಕೆಲಸ ಚನ್ನಪಟ್ಟಣಕ್ಕೆ ಮಾಡಿರೋದನ್ನ ತೋರಿಸು. ಕೆರೆ ಮಾಡಿದ್ದು ಯೋಗೇಶ್ವರ್, ದುಡ್ಡು ಕೊಟ್ಟಿದ್ದು ನಾನು. ನೀನು ಮುಖ್ಯಮಂತ್ರಿ ಆಗಿದ್ದಾಗಲೇ ಮಾಡಿಲ್ಲ. ಎಂಎಲ್‌ಎ ಆಗಿದ್ದಾಗ…
ಬೆಂಗಳೂರು:- ರೈತರಿಗೆ ವಕ್ಫ್ ಕೊಟ್ಟ ನೋಟಿಸ್ ವಾಪಸ್ ಪಡೆಯಲು CM ಸೂಚನೆ ಕೊಟ್ಟಿದ್ದಾರೆ ಎಂದು ಜಿ ಪರಮೇಶ್ವರ್ ಹೇಳಿದ್ದಾರೆ. ವಕ್ಫ್ ಬೋರ್ಡ್ ಆಸ್ತಿ ವಿಚಾರವಾಗಿ ರೈತರಿಗೆ ನೋಟಿಸ್ ಯಾವುದೇ ನೋಟಿಸ್ ಕೊಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೊಟ್ಟಿರುವ ನೋಟಿಸ್ ವಾಪಸ್ ಪಡೆಯಿರಿ ಎಂದಿದ್ದಾರೆ. ತುಮಕೂರಿನಲ್ಲಿ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. https://ainlivenews.com/america-has-announced-425-million-dollars-in-security-assistance-to-ukraine/ ಇಲ್ಲಿಗೆ ಇದು ಮುಗಿದು ಹೋದ ಅಧ್ಯಾಯ. ಮುಂದೆ ಯಾವ ರೀತಿ ಬೆಳವಣಿಗೆ ಆಗುತ್ತೆ ಗೊತ್ತಿಲ್ಲ. ಕಂದಾಯ ಇಲಾಖೆಯಲ್ಲಿನ ದಾಖಲಾತಿ ಹಾಗೂ ವಕ್ಫ್ ದಾಖಲಾತಿಯಲ್ಲಿ ಒಂದೇ ಇದ್ದರೆ ಮಾತ್ರ ಯಾವುದೇ ಗೊಂದಲ ಆಗುವುದಿಲ್ಲ. ಅಂತಿಮವಾಗಿ ಕಂದಾಯ ದಾಖಲಾತಿ ಮುಖ್ಯ. ಅದರಲ್ಲಿ ಏನಿದೆಯೋ ಅದರಂತೆ ದಾಖಲಾಗಲಿದೆ. ಸರ್ಕಾರ ಯಾವುದೇ ಕ್ರಮ ಕೈಗೊಳ್ಳುವ ಕೆಲಸ ಮಾಡಲ್ಲ ಎಂದು ಭರವಸೆ ನೀಡಿದರು. ಪ್ರಧಾನಿ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ರಾಜಕೀಯ ಪುಡಾರಿ ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ರಾಜಕೀಯ ಪುಡಾರಿ…
ಆನೇಕಲ್:- ಸ್ಕ್ರಾಪ್ ಗೋಡೌನ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ರಾಜ್ಯ ಗಡಿಭಾಗ ತಮಿಳುನಾಡಿನ ಹೊಸೂರಿನಲ್ಲಿ ಜರುಗಿದೆ. https://ainlivenews.com/bjp-is-a-party-of-betrayal-and-false-promises-kharge-lashes-out-at-modi/ ಘಟನೆಯಲ್ಲಿ ಸ್ಕ್ರಾಪ್ ಶೆಡ್ ಧಗಧಗನೆ ಹೊತ್ತಿ ಉರಿದಿದೆ. ಕಳೆದ ರಾತ್ರಿ ಈ ಘಟನೆ ಜರುಗಿದೆ. ಗೋದಾಮಿನಲ್ಲಿದ್ದ ಸ್ಕ್ರಾಪ್ ವಸ್ತುಗಳೆಲ್ಲವೂ ಬೆಂಕಿಗಾಹುತಿ ಆಗಿದೆ. ಸ್ಥಳಕ್ಕೆ ಹೊಸೂರು ಅಗ್ನಿಶಾಮಕ ತಂಡ ಭೇಟಿ ನೀಡಿ ಪರಿಶೀಲಿಸಿದರು. ಬೆಂಕಿ ನಂದಿಸಲು ಅಗ್ನಿ ಶಾಮಕ ತಂಡ ಹರಸಾಹಸ ಪಟ್ಟಿದೆ. ಹೆಚ್ಚು ಪ್ಲಾಸ್ಟಿಕ್ ಮತ್ತು ಪೇಪರ್ ವಸ್ತುಗಳಿದ್ದ ಸ್ಕ್ರಾಪ್ ಗೋಡೌನ್ ಇದಾಗಿದ್ದು, ಪಟಾಕಿ ತಗುಲಿ ಅಥವಾ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ. ಹೊಸೂರು ಟೌನ್ ಪೊಲೀಸರು ಭೇಟಿ ಪರಿಶೀಲನೆ ಮಾಡಿದ್ದಾರೆ.