Author: AIN Author

ಬಾಲಿವುಡ್ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ರಾಮಾಯಣ ಚಿತ್ರೀಕರಣ ಪ್ರಾರಂಭವಾಗಿದೆ. ಭಾರತೀಯ ಪುರಾಣದ ಕಥೆಯನ್ನು ತೆರೆದಿಡುವ ರಾಮಾಯಣ ಚಿತ್ರಕ್ಕಾಗಿ ರಾಕಿಂಗ್ ಸ್ಟಾರ್ ಯಶ್ ಹಾಗೂ ನಮಿತ್ ಮಲ್ಹೋತ್ರಾ ಕೈ ಜೋಡಿಸಿದ್ದಾರೆ. ರಾಮಾಯಣಕ್ಕೆ ರಾಕಿ ಕೂಡ ನಿರ್ಮಾಪಕ ರಾಮಾಯಣ ಸಿನಿಮಾವನ್ನು ಬಹಳ ಅದ್ಧೂರಿಯಾಗಿ ದೃಶ್ಯ ರೂಪಕ್ಕೆ ಇಳಿಸುವುದಕ್ಕೆ ದಂಗಲ್ ನಿರ್ದೇಶಕ ನಿತೀಶ್ ತಿವಾರಿ ಹೊರಟಿದ್ದಾರೆ. ಅದರಂತೆ ಬಹು ಕೋಟಿ ಬಜೆಟ್ ಹಾಕಿ ಈ ಚಿತ್ರ ನಿರ್ಮಾಣ ಮಾಡೋದಿಕ್ಕೆ ರಾಕಿಭಾಯ್ ಹಾಗೂ ನಮಿತ್ ಮಲ್ಹೋತ್ರಾ ಒಂದಾಗಿದ್ದಾರೆ. ಯಶ್ ಒಡೆತನದ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ ಹಾಗೂ ನಮಿತ್ ಮಲ್ಹೋತ್ರಾ ಸಾರಥ್ಯದ ಪ್ರೈಮ್ ಫೋಕಸ್ ಸ್ಟುಡಿಯೋ ರಾಮಾಯಣ ಸಿನಿಮಾವನ್ನು ನಿರ್ಮಿಸುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ನಮಿತ್ ಮಲ್ಹೋತ್ರಾ, ರಾಮಾಯಣ ಕಥೆಗೆ ನ್ಯಾಯ ಸಲ್ಲಿಸಲು ನಾನು ಸಿದ್ಧನಾಗಿದ್ದೇನೆ. ನಮ್ಮ ಸಂಸ್ಕ್ರತಿಯನ್ನು ಜಗತ್ತಿಗೆ ಪರಿಚಯಿಸಲು ನಾನು ಉತ್ಸಕನಾಗಿದ್ದು, ನಾನು ಯಶ್ ಅವರಲ್ಲಿಯೂ ಇದನ್ನು ಕಂಡುಕೊಂಡಿದ್ದೇನೆ. ಅವರ ಪಯಣದಿಂದ ನಾನು ಸ್ಪೂರ್ತಿ ಪಡೆದಿದ್ದೇನೆ. ಯಶ್ ಅವರಲ್ಲಿರುವ ಯೋಜನೆಯನ್ನು ಅರಿತುಕೊಂಡಿದ್ದೇನೆ. ರಾಮಾಯಣ ದೃಶ್ಯಕಾವ್ಯವನ್ನು ತೆರೆಗೆ…

Read More

ಭೋಪಾಲ್: ಕೇಂದ್ರ ಸರ್ಕಾರ ರದ್ದು ಮಾಡಿರುವ ಆರ್ಟಿಕಲ್ 370ಯನ್ನು (Article 370) ಮತ್ತೆ ಬದಲಾಯಿಸುವ ಧೈರ್ಯ ಮಾಡಬೇಡಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಕಾಂಗ್ರೆಸ್‍ಗೆ (Congress) ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಮಧ್ಯಪ್ರದೇಶದ ಮಂಡ್ಲಾದಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸುವ ನಿರ್ಧಾರ, ಬಿಜೆಪಿ ಕಾರ್ಯಕರ್ತರು ಮತ್ತು ಪ್ರಧಾನಿ ನರೇಂದ್ರ ಮೋದಿಯವರದ್ದಾಗಿತ್ತು. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಮರಳಲು ಸಾಧ್ಯವಿಲ್ಲ, ಆಕಸ್ಮಿಕವಾಗಿ ಗೆದ್ದರೆ, 370ನೇ ವಿಧಿಯನ್ನು ಬದಲಾಯಿಸಲು ಧೈರ್ಯ ಮಾಡಬೇಡಿ ಎಂದು ನಾನು ಕಾಂಗ್ರೆಸ್‍ಗೆ ಎಚ್ಚರಿಕೆ ನೀಡುತ್ತೇನೆ ಎಂದಿದ್ದಾರೆ. ಬಿಜೆಪಿ ಸರ್ಕಾರವು ದೇಶದಲ್ಲಿ ಬುಡಕಟ್ಟು ಜನಾಂಗದವರ ಉನ್ನತಿಗೆ ಹಲವಾರು ಯೋಜನೆಗಳನ್ನು ಪರಿಚಯಿಸಿದೆ. ಕಳೆದ 10 ವರ್ಷಗಳಲ್ಲಿ ಪ್ರಧಾನಿ ಮೋದಿಯವರ (Narendra Modi) ಪ್ರಮುಖ ಯೋಜನೆಗಳನ್ನು ವಿಶೇಷವಾಗಿ ಬುಡಕಟ್ಟು ಜನಾಂಗದವರಿಗೆ ಮಾಡಿದ್ದಾರೆ. https://ainlivenews.com/the-wife-pays-her-ex-husband-rs-10000-every-month-alimony-to-be-given-high-court-orders/ ಬುಡಕಟ್ಟು ಜನಾಂಗದ ಐಕಾನ್ ಬಿರ್ಸಾ ಮುಂಡಾ ಅವರ ಜನ್ಮದಿನವನ್ನು `ಜನಜಾತಿಯ ಗೌರವ್ ದಿವಸ್’ ಎಂದು…

Read More

ಬೆಂಗಳೂರು: “ಕುಮಾರಸ್ವಾಮಿ ಹಾಗು ದೇವೇಗೌಡರು ತಮ್ಮ ಕುಟುಂಬದ ಸದಸ್ಯರನ್ನು ಬಿಜೆಪಿಯಿಂದ ಕಣಕ್ಕೆ ಇಳಿಸಿ, ಜೆಡಿಎಸ್ ಪಕ್ಷವನ್ನು ಹೇಗೆ ಕಟ್ಟುತ್ತಾರೆ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಲೇವಡಿ ಮಾಡಿದರು. ಕೆಪಿಸಿಸಿ ಕಚೇರಿಯಲ್ಲಿ ಚನ್ನಪಟ್ಟಣದ ಜೆಡಿಎಸ್ ನಾಯಕರಾದ ಅಕ್ಕೂರುದೊಡ್ಡಿ ಶಿವಣ್ಣ, ಮತ್ತಿತರರ ನಾಯಕರು ಹಾಗೂ ಕಾರ್ಯಕರ್ತರನ್ನು ಗುರುವಾರ ರಾತ್ರಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡ ನಂತರ ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು; https://ainlivenews.com/the-wife-pays-her-ex-husband-rs-10000-every-month-alimony-to-be-given-high-court-orders/ “ದೇವೇಗೌಡರು ಪಕ್ಷದ ಅಧಿಕಾರವನ್ನು ಕುಮಾರಸ್ವಾಮಿ ಅವರಿಗೆ ಕೊಟ್ಟ ಪರಿಣಾಮ ಆ ಪಕ್ಷ ಈ ಸ್ಥಿತಿ ತಲುಪಿದೆ. ಈಗ ತಮ್ಮನ್ನು ಅಧಿಕಾರದಿಂದ ಕೆಳಗೆ ಇಳಿಸಿದವರನ್ನೇ ಕರೆದುಕೊಂಡು ಒಕ್ಕಲಿಗರ ಮಠಕ್ಕೆ ಹೋಗಿದ್ದಾರೆ. ಕುಮಾರಸ್ವಾಮಿ ಅವರು ಅಧಿಕಾರದಲ್ಲಿದ್ದಾಗ ತಮ್ಮ ಪಕ್ಷದ ಕಾರ್ಯಕರ್ತರಿಗೆ ಒಂದು ಸಣ್ಣ ಅಧಿಕಾರವನ್ನಾದರೂ ಕೊಟ್ಟರಾ? ಅಧಿಕಾರ ಇದ್ದಾಗಲೇ ಏನು ಮಾಡಲಿಲ್ಲ. ಕಾರ್ಯಕರ್ತರು ಇಲ್ಲದೆ ಯಾವ ಪಕ್ಷ ಇರಲು ಸಾಧ್ಯ? ಒಬ್ಬರಿಗೊಬ್ಬರು ರಾಜಕೀಯವಾಗಿ ಒಂದು ಗತಿ ಕಾಣಿಸುತ್ತಾರೆ: ಚನ್ನಪಟ್ಟಣದವರಿಗೆ ರಾಜಕಾರಣ ಹೊಸದಲ್ಲ. ಆದರೆ ಇಂದು ನಡೆಯುತ್ತಿರುವ ರಾಜಕಾರಣ ನೋಡಿದರೆ ಯಾರನ್ನು ನಂಬಬೇಕು, ಯಾರನ್ನು…

Read More

ಮುಂಬೈ ಇಂಡಿಯನ್ಸ್ ವಿರುದ್ಧ ಹೀನಾಯವಾಗಿ ಸೋತಿರುವ RCB ತಂಡದ ಬೌಲಿಂಗ್ ವಿರುದ್ಧ ಫ್ಯಾನ್ಸ್ ಆಕ್ರೋಶ ಹೊರ ಹಾಕಿದ್ದಾರೆ. https://ainlivenews.com/rameswaram-cafe-spota-case-bomb-planter-arrested/ 197 ರನ್​ಗಳ ಬೃಹತ್ ಮೊತ್ತವನ್ನು ಮುಂಬೈ ಇಂಡಿಯನ್ಸ್ ತಂಡ 15 ಓವರ್​ಗಳಲ್ಲಿ ಕೇವಲ ಮೂರು ವಿಕೆಟ್​ ನಷ್ಟಕ್ಕೆ ಚೇಸ್ ಮಾಡಿದೆ. ಇದರಿಂದ ಆರ್​ಸಿಬಿ ಅಭಿಮಾನಿಗಳು ಬೇಸರಗೊಂಡಿದ್ದಾರೆ. ಆರ್​ಸಿಬಿ ಹೀನಾಯ ಬೌಲಿಂಗ್ ಇದಕ್ಕೆ ಕಾರಣ. ಆರ್​ಸಿಬಿ ತಂಡದ ನಾಯಕ ಫಾಪ್ ಡುಪ್ಲೆಸಿಸ್ ಒದ್ದೆ ಪಿಚ್​ನ ದೂರಿದ್ದಾರೆ. ಇದರಿಂದ ನಮ್ಮ ಬೌಲರ್​ಗಳು ಎಡವಿದರು ಎಂದಿದ್ದಾರೆ. ಫಾಪ್ ಡುಪ್ಲೆಸಿಸ್, ರಜತ್ ಪಟಿದಾರ್ ಹಾಗೂ ದಿನೇಶ್ ಕಾರ್ತಿಕ್ ಅರ್ಧಶತಕ ಸಿಡಿಸಿ ತಂಡಕ್ಕೆ ಆಸರೆ ಆದರು. ಅಂತಿಮವಾಗಿ 20 ಓವರ್​ಗಳ ಮುಕ್ತಾಯಕ್ಕೆ ಆರ್​ಸಿಬಿ 196 ರನ್​ಗಳನ್ನು ಗಳಿಸಿದೆ. ಇದು ಸಣ್ಣ ಮೊತ್ತವೇನು ಅಲ್ಲ. ಆದರೆ, ಮುಂಬೈ ಇಂಡಿಯನ್ಸ್ ಆಟಗಾರರು ನೀರು ಕುಡಿದಷ್ಟೇ ಸುಲಭದಲ್ಲಿ ರನ್ ಚೇಸ್ ಮಾಡಿದರು. ಆರ್​ಸಿಬಿ ಬೌಲರ್​ಗಳು ಬೆವರಿ ಬೆಂಡಾದರು. ಇಬ್ಬನಿಯಿಂದ ಪಿಚ್ ಒದ್ದೆ ಆಗಿರುವುದು ಪ್ರಮುಖ ಪಾತ್ರವಹಿಸುತ್ತದೆ ಅನ್ನೋದು ನಮಗೆ ಗೊತ್ತಿತ್ತು. ನಾವು 250+…

Read More

ಬೆಂಗಳೂರು:- ರಾಜಧಾನಿ ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬ್ ಇಟ್ಟಿದ್ದ ಉಗ್ರನನ್ನು ಎನ್ ಐಎಯಿಂದ ಅರೆಸ್ಟ್ ಮಾಡಲಾಗಿದೆ. https://ainlivenews.com/jasprit-bumrah-created-history-in-the-rcb-vs-mi-match/ ಉಗ್ರ ಮುಸಾಫೀರ್ ಶಾಜೀನ್ ಹುಸೇನ್ ಬಂಧಿತ ಆರೋಪಿ. ಉತ್ತರ ಭಾರತದ ರಾಜ್ಯದಲ್ಲಿ ಬಾಂಬರ್ ಅರೆಸ್ಟ್ ಮಾಡಲಾಗಿದೆ. ಎನ್ ಐಎ ತಂಡದಿಂದ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಅಸ್ಸಾಂ ಹಾಗೂ ಪಶ್ಚಿಮ ಬಂಗಾಳ ಕಡೆ ತಲೆಮರೆಸಿಕೊಂಡು ಉಗ್ರ ಓಡಾಡುತ್ತಿದ್ದ. ಈ ವೇಳೆ ಉಗ್ರನನ್ನು ಅರೆಸ್ಟ್ ಮಾಡಲಾಗಿದೆ. ಉಗ್ರ ಮುಸಾಮೀರ್ ಶಾಜೀನ್ ಹುಸೇನ್ ಜೊತೆ ಮತ್ತೊಬ್ಬ ಉಗ್ರ ಮತೀನ್ ತಾಹಾ ಕೂಡ ಬಂಧಿಸಲಾಗಿದೆ.

Read More

ಜಸ್ಪ್ರೀತ್ ಬುಮ್ರಾ ಅವರು RCB V/s MI ಪಂದ್ಯದಲ್ಲಿ 5 ವಿಕೆಟ್ ಕಬಳಿಸಿ ಇತಿಹಾಸ ಸೃಷ್ಟಿಸಿದ್ದಾರೆ. ಇದರೊಂದಿಗೆ ಆರ್‌ಸಿ‌ಬಿ ವಿರುದ್ಧ ಈ ಸಾಧನೆ ಮಾಡಿದ ವಿಶ್ವದ ಮೊದಲ ಬೌಲರ್ ಎಂದೆನಿಸಿಕೊಂಡಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು -ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್- ಎಂಐ ಏಳು ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಪ್ರಮುಖ ಕ್ರೆಡಿಟ್ ಸ್ಟಾರ್ ವೇಗ ಬೌಲರ್ ಜಸ್ಪ್ರೀತ್ ಬುಮ್ರಾ ಅವರಿಗೆ ಸಲ್ಲುತ್ತದೆ. https://ainlivenews.com/a-young-man-committed-suicide-by-jumping-from-the-nayandahalli-flyover/ ಅದ್ಭುತ ಶೈಲಿಯಲ್ಲಿ ಪಂದ್ಯವನ್ನು ಪ್ರಾರಂಭಿಸಿದ ಜಸ್ಪ್ರೀತ್ ಬುಮ್ರಾ (Jasprit Bumrah), ಅವರ ಮೊದಲ ಓವರ್‌ನಲ್ಲಿ ರಾಯಲ್ ಚಾಲೆಂಜರ್ಸ್ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ವಿಕೆಟ್ ಕಬಳಿಸಿದರು. ನಂತರ ತಮ್ಮ ಮೂರನೇ ಓವರ್‌ನಲ್ಲಿ ನಿನ್ನೆಯ ಪಂದ್ಯದಲ್ಲಿ ತಮ್ಮ ಮೊದಲ ಅರ್ಧಶತಕವನ್ನು ಸಿಡಿಸುವಲ್ಲಿ ಯಶಸ್ವಿಯಾದ ಫಾಫ್ ಡು ಪ್ಲೆಸಿಸ್ ಬಳಿಕ ಮಹಿಪಾಲ್ ಲೊಮ್ರೋರ್ ಅವರನ್ನು ಬ್ಯಾಕ್-ಟು-ಬ್ಯಾಕ್ ಔಟ್ ಮಾಡಿದ. ಆರ್‌ಸಿ‌ಬಿ ಇನ್ನಿಂಗ್ಸ್ ನ 19ನೇ ಓವರ್‌ನಲ್ಲಿ ಸೌರವ್ ಚೌಹಾಣ್ ಮತ್ತು ವಿಜಯ್ ಕುಮಾರ್ ವೈಶಾಕ್ ಅವರ…

Read More

ಬೆಂಗಳೂರು:- ನಗರದ ನಾಯಂಡಹಳ್ಳಿ ಫ್ಲೈ ಓವರ್ ಮೇಲಿಂದ ಕೆಳಗೆ ಜಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ. https://ainlivenews.com/if-bjp-comes-to-power-again-i-will-definitely-become-cm/ ಬೈಕನ್ನ ಫ್ಲೈ ಓವರ್ ಮೇಲೆ ಪಾರ್ಕಿಂಗ್ ಮಾಡಿ ಏಕಾಏಕಿ ಯುವಕ ಕೆಳಗೆ ಜಿಗಿದಿದ್ದಾನೆ. ಕೂಡಲೇ ತೀವ್ರ ರಕ್ತಸ್ರಾವವಾಗಿ ಯುವಕ ಸಾವನ್ನಪ್ಪಿದ್ದಾನೆ. ಇನ್ನೂ ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ದೌಡಾಯಿಸಿ ಪರಿಶೀಲನೆ ಮಾಡಿದ್ದಾರೆ. ಮೃತ ಯುವಕನ ಗುರುತು ಪತ್ತೆಯಾಗಿಲ್ಲ ಎನ್ನಲಾಗಿದೆ.

Read More

ಬೆಳಗಾವಿ:- ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದ್ರೆ ನಾನು ಸಿಎಂ ಆಗುವುದು ಖಚಿತ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಮುಂದಿನ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದರೇ ಉತ್ತರ ಕರ್ನಾಟಕದ, ನಾನೇ ಮುಖ್ಯಮಂತ್ರಿಯಾಗುತ್ತೇನೆ. ಜಾತಿ ಜಾತಿ ಅಂತ ನೋಡದೆ, ದೇಶ ಉಳಿಸುವುದಕ್ಕಾಗಿ ಎಲ್ಲರೂ ವೋಟ್ ಹಾಕಿ ಎಂದರು. https://ainlivenews.com/the-number-of-heat-stroke-cases-increased-due-to-the-heat-of-the-sun-alert-in-hospitals/ ಜಾರಕಿಹೊಳಿ ಅವರ ಕಾಲಿಗೆ ನಮಸ್ಕರಿಸಿ, ಸಾಹುಕಾರ್ ಸಾಹುಕಾರ್ ಯಾಕೆ ಅನ್ನುತ್ತೀರಿ. ಅವರ ಮನೆಯ ತೊಟ್ಟಿಲನಲ್ಲಿರುವ ಕಂದಮ್ಮಗಳಿಗೂ ನಮಸ್ಕರಿಸುತ್ತೀರಿ. ಯಾಕೆ ನಿಮಗೆ ಸ್ವಾಭಿಮಾನ ಇಲ್ಲವೇ? ನಿಮ್ಮ ಜಮೀನಿನಲ್ಲಿ ಕಬ್ಬು ಬೆಳಯುತ್ತೀರಾ ಅಥವಾ ಅವರ ಜಮೀನಿನಲ್ಲಿ ಬೆಳೆಯುತ್ತೀರಾ? ಯಾರಿಗೂ ನಮಸ್ಕರಿಸಬೇಡಿ, ಸ್ವಾವಲಂಭಿಗಳಾಗಿ. ಪ್ರಧಾನಿ ನರೇಂದ್ರ ಮೋದಿಯವರೇ ಕಾಲಿಗೆ ನಮಸ್ಕಾರ ಮಾಡಿಸಿಕೊಳ್ಳುವುದಿಲ್ಲ. ಅಂದಮೇಲೆ ಇವರ ಕಾಲಿಗೆ ಏಕೆ ನಮಸ್ಕಾರ ಮಾಡುತ್ತೀರಿ ಎಂದು ಗುಡುಗಿದರು. ನಾನು ಯಾರಿಗೂ ಅಪ್ಪಾಜಿ ಅಪ್ಪಾಜಿ ಅಂತ ಕಾಲಿಗೆ ನಮಸ್ಕರಿಸುವುದಿಲ್ಲ. ದೇವರು ನನಗೆ ಎಲ್ಲವನ್ನು ಕೊಟ್ಟಿದ್ದಾನೆ. ನಾನು ಯಾರಿಗೂ ವಂಚನೆ ಮಾಡುವುದಿಲ್ಲ. ರೈತರು ಬರಗಾಲ ಬರಲಿ ಅಂತ ಬಯಸುತ್ತಾರೆ, ಐದು…

Read More

ಬೆಂಗಳೂರು:- ಬಿಸಿಲಿನ ಬೇಗೆಗೆ ಬಳಲಿ ಬೆಂಡಾಗಿರುವ ಸಿಲಿಕಾನ್ ಸಿಟಿ ಜನರಿಗೆ ಶಾಕ್ ಎದುರಾಗಿದ್ದು, ಬಿಸಿಲಿನ ತಾಪಕ್ಕೆ ಹೀಟ್ ಸ್ಟ್ರೋಕ್ ಪ್ರಕರಣಗಳ ಸಂಖ್ಯೆ ಏರಿಕೆ ಆಗಿದೆ. https://ainlivenews.com/dozens-of-stacks-were-burnt-by-accidental-fire/ ದಿನದಿಂದ ದಿನಕ್ಕೆ ರೋಗಿಗಳ ಸಂಖ್ಯೆ ದುಪ್ಪಟ್ಟಾಗುತ್ತಿದ್ದು, ಆಸ್ಪತ್ರೆಗಳು ಹೈ ಅಲರ್ಟ್ ಘೋಷಿಸಲಾಗಿದೆ. ಇದಕ್ಕಾಗಿಯೇ ನಗರದ ಕೆಲ ಆಸ್ಪತ್ರೆಗಳಲ್ಲಿ ವಿಶೇಷ ಕೊಠಡಿಗಳ ಸ್ಥಾಪನೆ ಮಾಡಲಾಗಿದೆ. ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಸ್ಪೆಷಲ್ ವಾರ್ಡ್ ಸಿದ್ದವಾಗಿದ್ದು, ಹೀಟ್ ಸ್ಟ್ರೋಕ್ ಹಾಗೂ ಹೀಟ್ ರಿಲೆಟೆಡ್ ರೋಗಿಗಳಿಗೆ ಪ್ರತ್ಯೇಕ ವಾರ್ಡ್ ವ್ಯವಸ್ಥೆ ಮಾಡಲಾಗಿದೆ. ಒಂದು ವಾರ್ಡ್ ಪ್ರತ್ಯೇಕವಾಗಿ ಹೀಟ್ ಸ್ಟ್ರೋಕ್ ರೋಗಿಗಳಿಗೆ ಮೀಸಲಿಡಲಾಗಿದ್ದು, ಕೆಸಿ ಜನರಲ್ ಆಸ್ಪತ್ರೆಯು ಒಟ್ಟು 10 ಪ್ರತ್ಯೇಕ ಬೆಡ್ ವ್ಯವಸ್ಥೆ ಮಾಡಿದೆ. ORS, ಗ್ಲೂಕೋಸ್ ಸೇರಿದಂತೆ ಇನ್ನಿತರ ಅಗತ್ಯ ಔಷಧಿಗಳ ವ್ಯವಸ್ಥೆ ಮಾಡಲಾಗಿದೆ.

Read More

ವಿಜಯನಗರ : ಆಕಸ್ಮಿಕ ಬೆಂಕಿ ತಗಲಿ ಹತ್ತಾರು ಬಣವೆಗಳು ಸುಟ್ಟು ಕರಕಲಾದ ಘಟನೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಉತ್ತಂಗಿ ಗ್ರಾಮದಲ್ಲಿ ಜರುಗಿದೆ. https://ainlivenews.com/social-media-users-beware-fraudsters-hack-accounts/ ರೈತರ ಮೇವಿನ ಬಣವೆಗಳಿಗೆ ಬೆಂಕಿ ಹತ್ತಿದ್ದು, ಕೆಲವೇ ಸಮಯದಲ್ಲಿ , ಬೆಂಕಿ ಆವರಸಿದೆ. ಒಂದು ಬಣವೆಯಿಂದ ಮತ್ತೊಂದು ಬಣವೆಗೆ ಬೆಂಕಿ ಚಾಚಿದೆ. ಭತ್ತದ ಹುಲ್ಲು, ಶೇಂಗಾ ಹೊಟ್ಟು, ತೊಗರಿ ಹೊಟ್ಟು, ಜೋಳದ ಮೇವು ಬಣವೆಗೆ ಬೆಂಕಿ ಬಿದ್ದಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಮೇವಿನ ಬಣವೆಗಳು ಸುಟ್ಟು ಕರಕಲಾಗಿದೆ. ದನಕರಿಗಳಿಗೆ ರೈತರು ಸಂಗ್ರಹಿಸಿದ್ದ ಮೇವು ಬೆಂಕಿಗೆ ಆಹುತಿ ಆಗಿದೆ ಸ್ಥಳಕ್ಕೆ ಅಗ್ನಿಶಾಮಕ ಸಳ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸಿದ್ದಾರೆ.

Read More