Author: AIN Author

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್‌ ಪಂಚಮಸಾಲಿ ಸಮುದಾಯಕ್ಕೆ ಸೇರಿದವರಲ್ಲ. ಪಂಚಮಸಾಲಿಗರ ಮತ ಸೆಳೆಯುವುದಕ್ಕಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ಸುಳ್ಳು ಹೇಳುತ್ತಿದ್ದಾರೆ. ಮೃಣಾಲ್‌ ತಂದೆ ರವೀಂದ್ರ ಹೆಬ್ಬಾಳಕರ್‌ ಅವರು ಲಿಂಗಾಯತ ವೀರಶೈವ ಬಣಜಿಗ ಸಮುದಾಯದವರು ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ತಿರುಗೇಟು ನೀಡಿದ್ದಾರೆ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ”ಮದುವೆಗೆ ಮುನ್ನ ಲಕ್ಷ್ಮೀ ಹಟ್ಟಿಹೊಳಿಯಾಗಿದ್ದ ಅವರು ಹಿಂದೂ ಪರಂಪರೆಯಂತೆ ಈಗ ಅವರು ಮತ್ತು ಅವರ ಮಕ್ಕಳು ರವೀಂದ್ರ ಹೆಬ್ಬಾಳಕರ್‌ ಸಮುದಾಯಕ್ಕೆ ಸೇರುತ್ತಾರೆ,” ಎಂದರು. ”ಸ್ವಾತಂತ್ರ್ಯ ಸಂಗ್ರಾಮದ ಬೆಳ್ಳಿಚುಕ್ಕಿ ಕಿತ್ತೂರು ರಾಣಿ ಚನ್ನಮ್ಮ ಅವರನ್ನು ಮತ್ತೊಬ್ಬರಿಗೆ ಹೋಲಿಕೆ ಮಾಡುವ ಅಧಿಕಾರ ಯಾರಿಗೂ ಇಲ್ಲ. https://ainlivenews.com/navodaya-vidyalaya-has-huge-job-opportunities-for-puc-and-sslc-passers/  ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ತಮ್ಮನ್ನು ರಾಣಿ ಚನ್ನಮ್ಮ ಅವರೊಂದಿಗೆ ಹೋಲಿಸಿಕೊಳ್ಳುವುದು ಸೂಕ್ತವಲ್ಲ. ನಮ್ಮ ಮೀಸಲಾತಿ ಹೋರಾಟ ಕಳೆದ 25 ವರ್ಷಗಳಿಂದ ನಡೆಯುತ್ತಿದೆ. ಆದರೆ, ಲಕ್ಷ್ಮೀ ಹೆಬ್ಬಾಳಕರ್‌ ಮೂರ್ನಾಲ್ಕು ವರ್ಷಗಳಿಂದ ಹೋರಾಟದಲ್ಲಿ ಭಾಗವಹಿಸುತ್ತಿದ್ದಾರೆ. ಬಿಜೆಪಿ ಸರಕಾರ ಅನ್ಯ ಸಮುದಾಯಗಳಿಗೆ ಅನ್ಯಾಯ ಮಾಡದೇ ಪಂಚಮಸಾಲಿ…

Read More

ವಿರಾಟ್ ಕೊಹ್ಲಿಯ ಮೌಲ್ಯ ಸ್ಟ್ರೈಕ್‌ರೇಟ್‌ ಗಿಂತ ಮಿಗಿಲಾದದ್ದು. ಅವರು ಟಿ20 ವಿಶ್ವಕಪ್ ತಂಡದಲ್ಲಿ ಇರಬೇಕು ಎಂದು ವೆಸ್ಟ್‌ ಇಂಡೀಸ್ ದಿಗ್ಗಜ ಬ್ರಿಯಾನ್ ಲಾರಾ ಹೇಳಿದ್ದಾರೆ. ಇದೇ ವೇಳೆ ಮುಂಬರುವ ಟಿ20 ವಿಶ್ವಕಪ್ ಟೂರ್ನಿಗೆ ಭಾರತದ ಮೂವರು ಅಗ್ರಕ್ರಮಾಂಕದ ಬ್ಯಾಟರ್‌ಗಳು ಯಾರಿರಬೇಕು ಎನ್ನುವುದನ್ನು ಹೆಸರಿಸಿದ್ದಾರೆ. ಈ ಕುರಿತಂತೆ ಸ್ಟಾರ್‌ಸ್ಟೋರ್ಟ್ಸ್ ಬಗ್ಗೆ ಜೊತೆ ಮಾತನಾಡಿದ ಅವರು, ಸ್ಟ್ರೈಕ್‌ರೇಟ್‌ ಯಾವತ್ತೂ ಬ್ಯಾಟಿಂಗ್ ಕ್ರಮಾಂಕದ ಮೇಲೆ ಅವಲಂಬಿತವಾಗಿರುತ್ತದೆ. ಆರಂಭಿಕ ಆಟಗಾರನ ಸ್ಟ್ರೈಕ್‌ರೇಟ್‌ 130-140 ಇರುವುದು ತಪ್ಪಲ್ಲ ಎಂದಿದ್ದಾರೆ. ಅಲ್ಲದೆ, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶುಭಮನ್ ಗಿಲ್ ಮುಂಬರುವ ಟಿ20 ವಿಶ್ವಕಪ್‌ನಲ್ಲಿ ಭಾರತದ ಅಗ್ರ-3 ಆಟಗಾರರಾಗಿರಬೇಕು ಎಂದು ಲಾರಾ ತಿಳಿಸಿದ್ದಾರೆ. https://ainlivenews.com/navodaya-vidyalaya-has-huge-job-opportunities-for-puc-and-sslc-passers/ ಇಂಗ್ಲೆಂಡ್ ಎದುರಿನ ಟೆಸ್ಟ್ ಸರಣಿಯಲ್ಲಿ ಅದ್ಭುತ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದ ಯಶಸ್ವಿ ಜೈಸ್ವಾಲ್, ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಮಂಕಾಗಿದ್ದಾರೆ. ಜೈಸ್ವಾಲ್ 17ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಆಡಿದ ಮೊದಲ 4 ಪಂದ್ಯಗಳಲ್ಲಿ ಕೇವಲ 9.75ರ ಸರಾಸರಿಯಲ್ಲಿ 39 ರನ್ ಗಳಿಸಿದ್ದಾರೆ. ಹೀಗಾಗಿ ಯಶಸ್ವಿ…

Read More

ಬೀದರ್ (ಏ.09): ಕಾಂಗ್ರೆಸ್ ನವ್ರು ದೇಶದ ರೈತರ ಸಾಲಮನ್ನಾ ಮಾಡ್ತಿವಿ ಅಂತ ಪ್ರಣಾಳಿಕೆಯಲ್ಲಿ ಹೇಳಿದ್ದಾರೆ. ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಇದೇ ಅವ್ರಿಗೆ ದಮ್ಮಿದ್ರೆ ಮೊದ್ಲು ರಾಜ್ಯದ ರೈತರ ಸಾಲಮನ್ನಾ ಮಾಡ್ಲಿ ಎಂದು ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಸವಾಲು ಹಾಕಿದರು. ಬೀದರ್ ಲೋಕಸಭಾ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವ ಭಗವಂತ ಖೂಬಾರವರ ಪರವಾಗಿ ಬೀದರ್ ನಗರದ ಗುಂಪಾದಲ್ಲಿ ಸೋಮವಾರ ರಾತ್ರಿ ನಡೆದ ಭಾರತೀಯ ಜನತಾ ಪಾರ್ಟಿಯ ಸಿದ್ಧಾರೂಡ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ಅವರು ರೈತರ ಸಾಲಮನ್ನಾ ಮಾಡ್ಲಿ. https://ainlivenews.com/navodaya-vidyalaya-has-huge-job-opportunities-for-puc-and-sslc-passers/ ಉದ್ರಿ ಮಾತು ಬೇಡ ನಗದಿ ಕೆಲಸ ಮಾಡಲಿ ಎಂದರು.ಈ ಹಿಂದೆ ಅಧಿಕಾರದಲ್ಲಿ ಇದ್ದಾಗಲೆಲ್ಲಾ ಕುಮಾರಸ್ವಾಮಿರವರು ರೈತರ ಸಾಲಮನ್ನಾ ಮಾಡಿದ್ದರು. ಅವರು ಉದ್ರಿ ಮಾತು ಯಾವತ್ತೂ ಕೂಡ ಹೇಳಿಲ್ಲ. ನಗದಿ ಕೆಲಸವನ್ನು ಮಾಡಿದ್ದಾರೆ ಎಂದು ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.…

Read More

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ (Second PUC Exam Result) ಬುಧವಾರ ಪ್ರಕಟವಾಗಲಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಸುದ್ದಿಗೋಷ್ಠಿ ನಡೆಸಿದ ಬಳಿಕ ವೆಬ್‌ಸೈಟ್‌ನಲ್ಲಿ ಫಲಿತಾಂಶ  ಪ್ರಕಟವಾಗಲಿದೆ. ರಾಜ್ಯಾದ್ಯಂತ ಈ ಬಾರಿ 1,124 ಕೇಂದ್ರಗಳಲ್ಲಿ 6.98 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.  https://ainlivenews.com/navodaya-vidyalaya-has-huge-job-opportunities-for-puc-and-sslc-passers/ 2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಇನ್ನು ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ. ವಿದ್ಯಾರ್ಥಿಗಳು ಮತ್ತು ಪೋಷಕರು ‌ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ www.karresultsnic.in ಭೇಟಿ ನೀಡಿ ಫಲಿತಾಂಶವನ್ನು ವೀಕ್ಷಿಸಬಹುದು.  

Read More

ಮುಲ್ಲಾನ್ಪುರ: ಒಂದೆಡೆ ಅಸ್ಥಿರ ಆಟಕ್ಕೆ ಹೆಸರುವಾಸಿಯಾಗಿರುವ ಪಂಜಾಬ್‌ ಕಿಂಗ್ಸ್‌. ಮತ್ತೊಂದೆಡೆ ಸ್ಫೋಟಕ ಬ್ಯಾಟಿಂಗ್‌ ಮೂಲಕವೇ ಗಮನ ಸೆಳೆಯುತ್ತಿರುವ ಸನ್‌ರೈಸರ್ಸ್‌ ಹೈದರಾಬಾದ್‌. ಇತ್ತಂಡಗಳು ಪರಸ್ಪರ ಮುಖಾಮುಖಿಯಾಗಲಿದ್ದು, ಟೂರ್ನಿಯ 3ನೇ ಗೆಲುವಿಗಾಗಿ ಕಾತರಿಸುತ್ತಿದೆ. ಎರಡೂ ತಂಡಗಳು ತಲಾ 4 ಪಂದ್ಯಗಳನ್ನಾಡಿದ್ದು, 2ರಲ್ಲಿ ಗೆದ್ದು 2 ಪಂದ್ಯಗಳಲ್ಲಿ ಪರಾಭವಗೊಂಡಿವೆ. ಸನ್‌ರೈಸರ್ಸ್‌ ಹೈದರಾಬಾದ್‌ನ ಸ್ಫೋಟಕ ಬ್ಯಾಟರ್‌ಗಳು ಅತ್ಯುತ್ತಮ ಲಯದಲ್ಲಿದ್ದಾರೆ. https://ainlivenews.com/navodaya-vidyalaya-has-huge-job-opportunities-for-puc-and-sslc-passers/ ಅಭಿಷೇಕ್‌ ಶರ್ಮಾ, ಹೆನ್ರಿಚ್ ಕ್ಲಾಸೆನ್‌, ಟ್ರ್ಯಾವಿಸ್‌ ಹೆಡ್‌, ಏಯ್ಡನ್ ಮಾರ್ಕ್‌ರಮ್ ಮತ್ತೊಮ್ಮೆ ಅಬ್ಬರಿಸಿದರೆ ಪಂಜಾಬ್‌ ಬೌಲರ್‌ಗಳಿಗೆ ಉಳಿಗಾಲವಿಲ್ಲ. ಆದರೆ ತಂಡದ ಬೌಲಿಂಗ್‌ ವಿಭಾಗ ಅಷ್ಟೇನೂ ಬಲಿಷ್ಠವಾಗಿಲ್ಲ. ಭುವನೇಶ್ವರ್‌ ಕುಮಾರ್, ಜಯದೇವ್ ಉನಾದ್ಕಟ್, ಮಯಾಂಕ್‌ ಮಾರ್ಕಂಡೆ ದುಬಾರಿಯಾಗುತ್ತಿದ್ದಾರೆ. ಇದು ನಾಯಕ ಪ್ಯಾಟ್‌ ಕಮಿನ್ಸ್‌ ಮೇಲೆ ಒತ್ತಡ ಸೃಷ್ಟಿಸುತ್ತಿದೆ. ಇನ್ನು ಪಂಜಾಬ್‌ ದೇಸಿ ಬ್ಯಾಟರ್‌ಗಳ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದು, ನಾಯಕ ಶಿಖರ್ ಧವನ್‌ ಜೊತೆ ಪ್ರಭ್‌ಸಿಮ್ರನ್‌, ಜಿತೇಶ್ ಶರ್ಮಾ, ಶಶಾಂಕ್‌ ಸಿಂಗ್‌ ಅಬ್ಬರಿಸಬೇಕಾದ ಅಗತ್ಯವಿದೆ. ಬೌಲಿಂಗ್‌ ವಿಭಾಗ ಸುಧಾರಿತ ಪ್ರದರ್ಶನ ನೀಡಬೇಕಿದ್ದು, ಇಲ್ಲದಿದ್ದರೆ ಸನ್‌ರೈಸರ್ಸ್‌ನ ರನ್ ಮಳೆಗೆ…

Read More

ಮಂಡ್ಯ: ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿಗೆ ಸಂಸದೆ ಸುಮಲತಾ ಬೆಂಬಲ ಸೂಚಿಸಿದ ಬೆನ್ನಲ್ಲೇ, ಕಾಂಗ್ರೆಸ್ (Congress) ಅಭ್ಯರ್ಥಿ ಸ್ಟಾರ್ ಚಂದ್ರು ಪರ ಮಾಜಿ ಸಂಸದೆ, ನಟಿ ರಮ್ಯಾ ಪ್ರಚಾರಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಸಂಸದರಾಗಿದ್ದ 6 ತಿಂಗಳಲ್ಲೇ ಜನಮನ ಗೆದ್ದಿದ್ದ ರಮ್ಯ ಅವರನ್ನು ಪ್ರಚಾರಕ್ಕೆ ಕರೆಸಿ ಮತದಾರರನ್ನ ಸೆಳೆಯಲು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್ ಮಾಡಿದೆ. ರಮ್ಯಾ ಜೊತೆ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಈಗಾಗಲೇ ಮಾತುಕತೆ ನಡೆಸಿದ್ದು, ಮಂಡ್ಯ ಕ್ಷೇತ್ರದ ಕ್ಯಾಂಪೇನ್‍ಗೆ ಬರಲು ಅವರು ಒಪ್ಪಿಗೆ ಸೂಚಿಸಿದ್ದಾರೆ. ಮುಂದಿನ ವಾರ ಅಭ್ಯರ್ಥಿ ಜೊತೆ ರೋಡ್ ಶೋ ನಡೆಸುವ ಸಾಧ್ಯತೆ ಇದೆ.  ಒಕ್ಕಲಿಗರ ಭದ್ರಕೋಟೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸಹ ಎಂಟ್ರಿ ಕೊಡಲಿದ್ದಾರೆ. ಏಪ್ರಿಲ್ 17 ಅಥವಾ 20 ರಂದು ಮಂಡ್ಯದಲ್ಲಿ ಬೃಹತ್ ಸಮಾವೇಶ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಸಮಾವೇಶದಲ್ಲಿ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಹೆಚ್‍ಡಿಕೆ ವಿರುದ್ಧ ತಂತ್ರ…

Read More

ನವದೆಹಲಿ: ದೆಹಲಿ ಮದ್ಯ ಹಗರಣಕ್ಕೆ (Delhi Liquor Scam) ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ಬಂಧಿಸಿದ್ದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ (Delhi CM) ಅರವಿಂದ್ ಕೇಜ್ರಿವಾಲ್ (Aravind Kejriwal) ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ (High Court) ಮಂಗಳವಾರ ವಜಾಗೊಳಿಸಿದೆ. ಅರವಿಂದ್ ಕೇಜ್ರಿವಾಲ್ ಅವರು “ಇತರರೊಂದಿಗೆ ಪಿತೂರಿ ನಡೆಸಿದ್ದಾರೆ” ಮತ್ತು”ಅಪರಾಧದ ಆದಾಯವನ್ನು ಬಳಸಿಕೊಳ್ಳುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ” ಎಂದು ಜಾರಿ ನಿರ್ದೇಶನಾಲಯ ಹಂಚಿಕೊಂಡ ವಿವರವನ್ನು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ. https://ainlivenews.com/navodaya-vidyalaya-has-huge-job-opportunities-for-puc-and-sslc-passers/ ರದ್ದುಗೊಂಡಿರುವ ಮದ್ಯ ನೀತಿಯನ್ನು ರೂಪಿಸುವಲ್ಲಿ ಮತ್ತು ಕಿಕ್‌ಬ್ಯಾಕ್‌ಗೆ ಬೇಡಿಕೆಯಿಡುವಲ್ಲಿ ಕೇಜ್ರಿವಾಲ್ ಭಾಗಿಯಾಗಿದ್ದಾರೆ ಎಂದು ಹೈಕೋರ್ಟ್ ಹೇಳಿದೆ. ಪೂರಕ ಸಾಕ್ಷ್ಮಧಾರಗಳಿರುವ ಹಿನ್ನಲೆಯಲ್ಲಿ ಕೇಜ್ರಿವಾಲ್‌ ಬಂಧನ ಕಾನೂನು ಬದ್ಧವಾಗಿದೆ ಎಂದು ಅಭಿಪ್ರಾಯಪಟ್ಟ ಕೋರ್ಟ್‌ ಕೇಜ್ರಿವಾಲ್‌ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

Read More

ತುಮಕೂರು: ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣದಲ್ಲಿ ಬಿಜೆಪಿ ಕಾರ್ಯಕರ್ತನ ವಿಚಾರಣೆಗೆ ಒಳಪಡಿಸಿದ ವಿಚಾರದ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯಿಸಿದರು. ಆರೋಪಿಗಳಿಗೆ ಯಾರೆಲ್ಲ ಸಂಪರ್ಕದಲ್ಲಿದ್ದರೂ, ಅವರನ್ನೆಲ್ಲ ವಿಚಾರಣೆ ಮಾಡುತ್ತಿದ್ದಾರೆ. ತನಿಖೆ ಬಗ್ಗೆ ಅನೇಕ ವಿಚಾರವನ್ನು ನಮಗೆ ತಿಳಿಸಿಲ್ಲ ಎಂದು ಉತ್ತರಿಸಿದರು. https://ainlivenews.com/navodaya-vidyalaya-has-huge-job-opportunities-for-puc-and-sslc-passers/ ಇದೇ ವೇಳೆ, ಲೋಕಸಭೆ ಚುನಾವಣೆ ಕುರಿತು ಮಾತನಾಡಿ, ಮುದ್ದಹನುಮೇಗೌಡ ಸೋಲು, ಗೆಲುವಿನ ಕ್ರೆಡಿಟ್ ಕಾಂಗ್ರೆಸ್‌ಗೆ ಸೇರಿದ್ದು, ಮಾಜಿ ಸಚಿವ ಮಾಧುಸ್ವಾಮಿ‌ ಕಾಂಗ್ರೆಸ್​ಗೆ ಬಂದ್ರೆ ನಾನೇ ಸ್ವಾಗತ ಮಾಡುತ್ತೇನೆ. ಮುದ್ದಹನುಮೇಗೌಡರು ಭೇಟಿ ಮಾಡಿದ್ದಾರೆ. ಸಂದರ್ಭ ಬಂದಾಗ‌ ಮತ್ತೆ ಭೇಟಿ ಮಾಡುತ್ತೇವೆ ಎಂದು ತಿಳಿಸಿದರು.

Read More

ನವದೆಹಲಿ: ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆಸಿಆರ್ ಪುತ್ರಿ ಕೆ. ಕವಿತಾ (K Kavitha) ಮನವಿಯನ್ನು ತಿರಸ್ಕರಿಸಿದ್ದು, ನ್ಯಾಯಾಂಗ ಬಂಧನದ ಅವಧಿಯನ್ನು ಏಪ್ರಿಲ್ 23 ರವರೆಗೆ ವಿಸ್ತರಿಸಲಾಗಿದೆ. ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಸೋಮವಾರ ರೋಸ್ ಅವೆನ್ಯೂ ಕೋರ್ಟ್‌ನಲ್ಲಿ (Rose Avenue Court) ನಡೆದ ವಿಚಾರಣೆಯಲ್ಲಿ, ನ್ಯಾಯಾಲಯವು ಈಗಾಗಲೇ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಅರ್ಜಿಯನ್ನು ತಿರಸ್ಕರಿಸಿದ ವಿಶೇಷ ನ್ಯಾ. ಕಾವೇರಿ ಬವೇಜಾ, ಅವರಿಗೆ ಮಧ್ಯಂತರ ಜಾಮೀನು ನೀಡಲು ಇದು ಸೂಕ್ತ ಸಮಯವಲ್ಲ ಎಂದು ಹೇಳಿದ್ದರು. ಪತ್ರದ ಮೂಲಕ ಮನವಿ: ಕವಿತಾ ಅವರು ನಾಲ್ಕು ಪುಟಗಳ ಪತ್ರವನ್ನು ನೀಡಿದ್ದರು. ಪತ್ರದಲ್ಲಿ ಮದ್ಯ ಹಗರಣದಲ್ಲಿ ಭಾಗಿಯಾಗಿಲ್ಲ. ಅಲ್ಲದೇ ಹಗರಣದಿಂದ ನಾನು ಯಾವುದೇ ಪ್ರಯೋಜನಗಳನ್ನು ಪಡೆದಿಲ್ಲ. ಇಡಿ ಮತ್ತು ಸಿಬಿಐ ತನಿಖೆ ಮಾಧ್ಯಮ ವಿಚಾರಣೆಯಾಗಿದೆ ಎಂದು ದೂರಿದ್ದಾರೆ. 16 ವರ್ಷದ ಮಗನ ಪರೀಕ್ಷೆಯನ್ನು ಉಲ್ಲೇಖಿಸಿದ ಅವರು ಪರೀಕ್ಷೆಗೆ ತನ್ನ ಮಗನಿಗೆ ತಾಯಿಯ ನೈತಿಕ ಮತ್ತು ಭಾವನಾತ್ಮಕ ಬೆಂಬಲದ ಅಗತ್ಯವಿದೆ ಎಂದು ನ್ಯಾಯಾಲಯದ ಬಳಿ ಅವರು ಮನವಿ ಮಾಡಿದರು.  https://ainlivenews.com/navodaya-vidyalaya-has-huge-job-opportunities-for-puc-and-sslc-passers/…

Read More

ಉಡುಪಿ: ಏಪ್ರಿಲ್ 14ರ ಸಂಜೆ 4ಕ್ಕೆ ಮಂಗಳೂರಿನ (Mangaluru) ಗೋಲ್ಡ್ ಫಿಂಚ್ (Gold Finch) ಮೈದಾನದಲ್ಲಿ ಪ್ರಧಾನಿ ಮೋದಿ (Narendra Modi) ಸಮಾವೇಶ ಉದ್ದೇಶಿಸಿ ಮಾತನಾಡುತ್ತಾರೆ. ಲಕ್ಷ ಸಂಖ್ಯೆಯಲ್ಲಿ ಕಾರ್ಯಕರ್ತರು, ಮತದಾರರು ಭಾಗಿಯಾಗಲಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ (Nalin Kumar Kateel) ಹೇಳಿದರು. ಈ ಕುರಿತು ಉಡುಪಿಯಲ್ಲಿ (Udupi) ಮಾತನಾಡಿದ ಅವರು, ಪ್ರಧಾನಿ ಕಾರ್ಯಕ್ರಮದಿಂದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಬರಲಿದೆ. ಪ್ರಧಾನಿ ಎಲ್ಲಾ ಜಿಲ್ಲೆಗೆ ಬಂದು ಮತದಾರರಿಂದ ಆಶೀರ್ವಾದ ಪಡೆಯಬೇಕು ಎಂಬ ಆಕಾಂಕ್ಷೆ ಕಾರ್ಯಕರ್ತರಲ್ಲಿದೆ ಎಂದರು. https://ainlivenews.com/navodaya-vidyalaya-has-huge-job-opportunities-for-puc-and-sslc-passers/ ಈಶ್ವರಪ್ಪ (KS Eshwarappa) ನಮ್ಮ ಕಟ್ಟಾಳು ಇಡೀ ರಾಜ್ಯದಲ್ಲಿ ಬಿಜೆಪಿ (BJP) ಬೆಳವಣಿಗೆಗೆ ಅವರೂ ಕಾರಣರಾದವರು. ಸಹಜವಾಗಿಯೇ ತನ್ನ ಭಾವನೆಯನ್ನು ವ್ಯಕ್ತಪಡಿಸುತ್ತಿದ್ದಾರೆ. ಹಿರಿಯರು ಅವರ ಜೊತೆ ಮಾತನಾಡುತ್ತಾರೆ. ಇದು ವಿಚಾರಧಾರೆಗಳ ನಡುವಿನ ಚುನಾವಣೆ. ಇಲ್ಲಿ ಜಾತಿ ರಾಜಕೀಯ ಇಲ್ಲ. ಕಾಂಗ್ರೆಸ್ ವಿರುದ್ಧ ನಮ್ಮ ಹೋರಾಟ ಎಂದು ಹೇಳಿದರು. 

Read More