Author: AIN Author

ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ವಿರುದ್ಧ ವಾಗ್ದಾಳಿ ಮುಂದುರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರಿಗೆ ಇದ್ದದ್ದನ್ನು ಇದ್ದ ಹಾಗೆ ಹೇಳಿದರೆ ಸಿಟ್ಟು ಎಂದು ವ್ಯಂಗ್ಯವಾಡಿದ್ದಾರೆ. ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಈ ವೇಳೆ ದೇವೇಗೌಡರ ವಿರುದ್ಧ ಹರಿಹಾಯ್ದ ಅವರು, ಮೋದಿಯವರು ಮತ್ತೆ ಪ್ರಧಾನಿಯಾದರೆ ಭಾರತ ತೊರೆಯುವುದಾಗಿ ಹೇಳಿದ್ದ ದೇವೇಗೌಡರು ಈಗ ಮೋದಿಯವರ ಜತೆಗೇ ಸೇರಿದ್ದಾರೆ. ಮುಸಲ್ಮಾನರನ್ನು ಓಲೈಸುವ ಸಲುವಾಗಿ ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟುವುದಾಗಿ ಹೇಳಿದರು. ಇದ್ದದ್ದು ಇದ್ದಂಗೆ ಹೇಳಿದರೆ ದೇವೇಗೌಡರಿಗೆ ಸಿಟ್ಟು ಎಂದರು. https://ainlivenews.com/you-will-get-2-lakh-insurance-from-the-government-rs-3000-thousand-per-month/ ಮೋದಿ ಅವರು ಕಳೆದ ಹತ್ತು ವರ್ಷಗಳಲ್ಲಿ ಹೇಳಿದ ಯಾವುದನ್ನೂ ಜಾರಿ ಮಾಡಲೇ ಇಲ್ಲ. ಕಪ್ಪು ಹಣ ತರಲಿಲ್ಲ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸಲಿಲ್ಲ, ಪೆಟ್ರೋಲ್, ಡೀಸೆಲ್, ಗ್ಯಾಸ್, ರಸಗೊಬ್ಬರ, ಅಡುಗೆ ಎಣ್ಣೆ, ಬೇಳೆ ಕಾಳು ಯಾವುದರ ಬೆಲೆಯನ್ನೂ ಇಳಿಸಲಿಲ್ಲ. ಬರೀ ಬಾಯಲ್ಲಿ ಅಚ್ಛೇ ದಿನ್ ಆಯೆಗಾ ಎಂದು ಭಾಷಣ ಭಾರಿಸಿದ್ದು ಬಿಟ್ಟರೆ ಭಾರತೀಯರ ಬದುಕಿಗೆ ಅಚ್ಛೆ ದಿನ್ ಬರಲೇ ಇಲ್ಲ…

Read More

ಬೆಂಗಳೂರು : ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಶಿರಹಟ್ಟಿಯ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಪಕ್ಷೇತರವಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಇದರಿಂದ ಹಾಲಿ ಸಂಸದ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿಗೆ ದೊಡ್ಡ ಸವಾಲು ಎದುರಾಗಿದ್ದು, ಧಾರವಾಡ ಲೋಕಸಭಾ ಕ್ಷೇತ್ರ ರಾಜ್ಯದ ಗಮನ ಸೆಳೆಯುತ್ತಿದೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,  ಅಧಿಕೃತವಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ರಾಜಕೀಯ ರಂಗವನ್ನು ಪ್ರವೇಶಿಸುತ್ತೇಣೆ ಎಂದು ಘೋಷಿಸಿದರು. ಅಧಿಕಾರದ ಮತ್ತು ಸಂಪತ್ತಿನ ಮದದಲ್ಲಿ ಪ್ರಹ್ಲಾದ್‌ ಜೋಶಿ ಬದುಕುತ್ತಿದ್ದಾರೆ. ಪ್ರಹ್ಲಾದ್ ಜೋಷಿ ಅವರ ಚೇಲಾಗಳು ಸಾಮಾಜಿಕ ಜಾಲತಾಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ನನ್ನ ವಿರುದ್ಧ ಷಡ್ಯಂತ್ರ ಮಾಡ್ತಿದ್ದಾರೆ. ಪ್ರಹ್ಲಾದ್ ಜೋಷಿ ಅವರೇ ನಿಮ್ಮ ಯಾವುದೇ ಕುತಂತ್ರ ನಮ್ಮ ಮುಂದೆ ನಡೆಯಲ್ಲ ಎಂದು ಕಿಡಿಕಾರಿದರು. https://ainlivenews.com/you-will-get-2-lakh-insurance-from-the-government-rs-3000-thousand-per-month/ ಪ್ರಹ್ಲಾದ್‌ ಜೋಶಿ ದುರಾಡಳಿತ ಬಗ್ಗೆ ಹೈಕಮಾಂಡ್ ನಾಯಕರು ಗಮನಹರಿಸಿತ್ತಿಲ್ಲ, ಅವರಿಗೆ ಅದೇ ಬೇಕಾಗಿದೆ ಅನ್ಸುತ್ತೆ. ಹೀಗಾಗಿ ಈ ದಿಂಗಾಲೇಶ್ವರ ರಾಜಕೀಯ ಪ್ರವೇಶ ಮಾಡಬೇಕಾಯಿತು. ಈ ಚುನಾವಣೆ ಎರಡು ರಾಷ್ಟ್ರೀಯ ಪಕ್ಷದ ವಿರುದ್ಧ ಸ್ವಾಭಿಮಾನದ…

Read More

ಬೆಂಗಳೂರು: ಕಾರಿನ ಡೋರ್ ಓಪನ್ ಮಾಡುವಾಗ ನಮ್ಮ ಕಾರ್ಯಕರ್ತ ಹಿಂದಿನಿಂದ ಬಂದು ಗುದ್ದಿದ್ದಾನೆ. ಈ ವೇಳೆ ಬೈಕ್‍ನಿಂದ ಬಿದ್ದಾಗ ಅವನ ಮೇಲೆ ಬಸ್ ಹರಿದಿದೆ ಎಂದು ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ (Shobha Karandlaje) ಪ್ರತಿಕ್ರಿಯಿಸಿದರು. ಘಟನೆ ಸಂಬಂಧ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಇವತ್ತು ನಮ್ಮ ಪಕ್ಷದ ರ‍್ಯಾಲಿ ಇತ್ತು. ಎಲ್ಲರೂ ರ‍್ಯಾಲಿ ಮುಗಿಸಿಕೊಂಡು ಬರುವಾಗ ಕೆಆರ್ ಪುರಂ ಸರ್ಕಲ್ (KR Puram Circle) ಬಳಿ ಕಾರು ನಿಲ್ಲಿಸಿದ್ವಿ. ನಮ್ಮ ಕಾರ್ಯಕರ್ತ ಹಿಂಬದಿಯಿಂದ ಬಂದು ಗುದ್ದಿಕೊಂಡಿದ್ದಾನೆ. https://ainlivenews.com/you-will-get-2-lakh-insurance-from-the-government-rs-3000-thousand-per-month/  ಕಾರ್ ನಮ್ಮದೇ, ಡೋರ್ ತೆಗೆದಾಗ ಬಿದ್ದಿದ್ದಾರೆ. ನಂತರ ಅವರ ಮೇಲೆ ಬಸ್ ಹರಿದಿದೆ. ಪೋಸ್ಟ್ ಮಾರ್ಟಮ್ ವರದಿ ಬಂದ ನಂತರ ಎಲ್ಲವೂ ತಿಳಿಯುತ್ತೆ ಎಂದು ಶೋಭಾ ಹೇಳಿದರು. ಪ್ರಕಾಶ್ ಸಾವು ಸಂಭವಿಸಿರೋದು ನಿಜಕ್ಕೂ ದುರ್ದೈವ. ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ನಾವು ಅವರ ಕುಟುಂಬಕ್ಕೆ ಏನು ಸಹಾಯ ಮಾಡಬೇಕೋ ಮಾಡ್ತೀವಿ. ಅವರ ಕುಟುಂಬದ ಜೊತೆಗೆ ನಾವೀದ್ದೇವೆ. ಅಲ್ಲದೇ ಕುಟುಂಬಕ್ಕೆ ಪರಿಹಾರ ನೀಡುವ…

Read More

ನವದೆಹಲಿ: ವಿವಿಧ ರಾಜ್ಯಗಳು ನ್ಯಾಯಾಲಯವನ್ನು ಸಂಪರ್ಕಿಸುವ ಬೆಳವಣಿಗೆ ಹೆಚ್ಚುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ಈ ರೀತಿಯ ಯಾವುದೇ ಪೈಪೋಟಿ ಬೇಡ ಎಂದು ಸುಪ್ರೀಂಕೋರ್ಟ್ (Supreme Court) ಸಲಹೆ ನೀಡಿದೆ. ಬರ ಪರಿಹಾರ ನಿಧಿ  ಬಿಡುಗಡೆಗೆ ನಿರ್ದೇಶನ ಕೋರಿ ಕರ್ನಾಟಕ ಸರ್ಕಾರ (Government of Karnataka) ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಬಿ.ಆರ್ ಗವಾಯಿ ಮತ್ತು ಸಂದೀಪ್ ಮೆಹ್ತಾ ನೇತೃತ್ವದ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ಸ್ಪರ್ಧೆ ಬೇಡ ಎಂದು ಪೀಠ ಕಿವಿಮಾತು ಹೇಳಿದೆ. ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಕಪಿಲ್ ಸಿಬಲ್ ಇನ್ನೊಂದು ತಿಂಗಳಲ್ಲಿ ಬರ ಪರಿಹಾರ ಬಿಡುಗಡೆ ಬಗ್ಗೆ ಕೇಂದ್ರ ಸರ್ಕಾರ ನಿರ್ಧರಿಸಬೇಕು ಎಂದರು. https://ainlivenews.com/you-will-get-2-lakh-insurance-from-the-government-rs-3000-thousand-per-month/ ಕೇಂದ್ರ ಸರ್ಕಾರದ ಪರ ವಾದಿಸಿದ ಸಾಲಿಸಿಟರ್ ಜನರಲ್ (ಎಸ್‍ಜಿ) ತುಷಾರ್ ಮೆಹ್ತಾ, ಆರ್ಟಿಕಲ್ 32ರ ಅಡಿಯಲ್ಲಿ ಅರ್ಜಿ ಸಲ್ಲಿಸುವ ಬದಲು…

Read More

ಲಕ್ನೋ: 17ನೇ ಆವೃತ್ತಿಯ ಐಪಿಎಲ್‌ನಲ್ಲಿ ತಮ್ಮ ವೇಗದ ಬೌಲಿಂಗ್‌ನಿಂದಲೇ ಭಾರೀ ಸದ್ದು ಮಾಡುತ್ತಿದ್ದ ಲಕ್ನೂ ಸೂಪರ್‌ ಜೈಂಟ್ಸ್‌ (LSG) ತಂಡದ ಮಯಾಂಕ್‌ ಯಾದವ್‌ (Mayank Yadav) ಪಕ್ಕೆಲುಬು ಗಾಯದ ಸಮಸ್ಯೆಗೆ ತುತ್ತಾಗಿದ್ದಾರೆ. ಸೂಪರ್‌ ಸಂಡೇ ಲಕ್ನೋ ಕ್ರೀಡಾಂಗಣದಲ್ಲಿ ಗುಜರಾತ್‌ ಟೈಟಾನ್ಸ್‌ (Gujarat Titans) ವಿರುದ್ಧದ ಪಂದ್ಯದಲ್ಲಿ ಕೇವಲ ಒಂದು ಓವರ್‌ ಬೌಲಿಂಗ್‌ ಮಾಡಿದ ಮಯಾಂಕ್‌, ಯಾವುದೇ ವಿಕೆಟ್‌ ಪಡೆಯದೇ 13 ರನ್‌ ಬಿಟ್ಟುಕೊಟ್ಟರು. https://ainlivenews.com/you-will-get-2-lakh-insurance-from-the-government-rs-3000-thousand-per-month/  ಈ ಓವರ್‌ನ ಮೊದಲ ಎರಡು ಎಸೆತಗಳು ಗಂಟೆಗೆ 140 ಕಿಮೀ ವೇಗದಲ್ಲಿತ್ತು. ಒಂದು ಓವರ್‌ ಬೌಲಿಂಗ್‌ ಬಳಿಕ ತಕ್ಷಣವೇ ಪಕ್ಕೆಲುಬು ಸಮಸ್ಯೆಗೆ ತುತ್ತಾಗಿ ಮೈದಾನ ತೊರೆದರು. ಇದರ ಹೊರತಾಗಿಯೂ ಯಶ್‌ ಠಾಕೂರ್‌‌ ಅವರ ಮಾರಕ ದಾಳಿ, ಕೃನಾಲ್‌ ಪಾಂಡ್ಯ ಅವರ ಸ್ಪಿನ್‌ ಮೋಡಿಯಿಂದ ಕೆ.ಎಲ್‌ ರಾಹುಲ್‌ (KL Rahul) ಬಳಗ 33 ರನ್‌ಗಳ ಗೆಲುವು ಸಾಧಿಸಿತು. ಬಿಗ್‌ ಅಪ್ಡೇಟ್‌ ಕೊಟ್ಟ ಕೃನಾಲ್‌ ಪಾಂಡ್ಯ: ಮಯಾಂಕ್‌ ಯಾದವ್‌ ಅವರ ಗಾಯದ ಸಮಸ್ಯೆ ಕುರಿತು ಮಾತನಾಡಿದ ಕೃನಾಲ್‌ ಪಾಂಡ್ಯ (Krunal…

Read More

ಬೆಂಗಳೂರು: ಖಾಸಗಿ ಹೋಟೆಲ್‌ನ 19ನೇ ಫ್ಲೋರ್‌ನಿಂದ ಬಿದ್ದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಾದವನಗರದಲ್ಲಿರುವ ಖಾಸಗಿ ಹೋಟೆಲ್‌ವೊಂದರಲ್ಲಿ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ತಮಿಳುನಾಡು ಮೂಲದ ಶರಣ್ (28) ಎಂದು ತಿಳಿದುಬಂದಿದೆ. ಈತ ಭಾನುವಾರ ಹೋಟೆಲ್‌ಗೆ ಬಂದು ಚೆಕ್ ಇನ್ ಆಗಿದ್ದು, ಬ್ಯುಸಿನೆಸ್ ವಿಚಾರವಾಗಿ ಬಂದಿರುವುದಾಗಿ ರಿಸೆಪ್ಷನ್ ಬುಕ್‌ನಲ್ಲಿ ಎಂಟ್ರಿ ಮಾಡಿದ್ದ. ಈ ಹಿಂದೆ ಕೂಡ ಈತ ಹೋಟೆಲ್‌ಗೆ ಬಂದು ಉಳಿದುಕೊಂಡಿದ್ದ. ಈ ಬಾರಿ ಎರಡು ದಿನ ಉಳಿಯೋದಾಗಿ ಹೋಟೆಲ್ ಸಿಬ್ಬಂದಿಗೆ ಹೇಳಿದ ಈತ ಇಂದು ಮಧ್ಯಾಹ್ನ 2 ಗಂಟೆಯ ಸುಮಾರಿಗೆ 19ನೇ ಫ್ಲೋರ್‌ನ ಬಾಲ್ಕನಿಗೆ ಬಂದು ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. https://ainlivenews.com/you-will-get-2-lakh-insurance-from-the-government-rs-3000-thousand-per-month/ ಆತ್ಮಹತ್ಯೆ ಮಾಡಿಕೊಳ್ಳುವ ಅರ್ಧಗಂಟೆಗೂ ಮೊದಲು ಈತ ತನ್ನ ರೂಮಿನಿಂದ ಹೊರಗೆ ಬಂದು ಬಾಲ್ಕನಿಯಲ್ಲಿ ಕುಳಿತಿದ್ದು, ಆತ್ಮಹತ್ಯೆ ಮಾಡಿಕೊಳ್ಳಬೇಕೋ ಬೇಡವೋ ಎಂದು ಯೋಚಿಸಿದ್ದ ಎಂದು ಶಂಕಿಸಲಾಗಿದೆ. ಕೊನೆಗೆ 19ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ಹೈಗ್ರೌಂಡ್ಸ್ ಪೊಲೀಸರು ಭೇಟಿ ನೀಡಿ…

Read More

ಬಾಗಲಕೋಟೆ: ನಗರದ ಚರಂತಿಮಠ ಕಲ್ಯಾಣ ಮಂಟಪದಲ್ಲಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಮಾವೇಶದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತಾ ಪಾಟೀಲ್ ಅವರು ಮಾತನಾಡಿದರು. ನಾನು ಗಜಕೇಸರಿ ಯೋಗದಲ್ಲಿ ಹುಟ್ಟಿದ್ದೇನೆ. ನಾನು ಹುಟ್ಟಿದಾಗ ತಂದೆ ಶಾಸಕರಾದರು. ಚಿಕ್ಕವಳಿದ್ದಾಗ ಏನಾಗುತ್ತಿಯಾ ಅಂದರೆ ಪ್ರಧಾನಿ ಆಗುತ್ತೇನೆ ಅಂತಿದ್ದೆ. ಈಗ ಸಂಸದಳಾಗುವ ಅವಕಾಶ ಬಂದಿದೆ. ಮುಂದೆ ಪ್ರಧಾನಿಯಾಗಲೂಬಹುದು ಎಂದು ಹೇಳಿದರು. ಸಚಿವ ಶಿವಾನಂದ ಪಾಟೀಲ ಮಾತನಾಡಿ, ಕೇವಲ ಹಣೆಬರಹ ಇದ್ದರೆ ಸಂಸದರಾಗಲ್ಲ, ಕಾರ್ಯಕರ್ತರ ಕಠಿಣ ಪರಿಶ್ರಮ ಇದ್ದರೆ ಮಾತ್ರ ಗೆಲವು ಸಾಧಿಸಬಹುದು. ಹಣೆಬರಹ ಬಗ್ಗೆ ನಾನು ನಂಬಲ್ಲ. ವ್ಯಕ್ತಿಗಿಂತ ಪಕ್ಷ ದೊಡ್ಡದು, ನನ್ನಿಂದಲೇ ಕಾಂಗ್ರೆಸ್ ಪಕ್ಷ ಅಂತ ತಿಳಿಯುವುದು ಸರಿಯಲ್ಲ. ಮನೆಯವರು ಬಂದ ಮೇಲೆ ಮನೆಯಲ್ಲಿ ಇರುವವರು ಎಲ್ಲರೂ ಬರುತ್ತಾರೆ. https://ainlivenews.com/you-will-get-2-lakh-insurance-from-the-government-rs-3000-thousand-per-month/  ಎಲ್ಲರೂ ಪಕ್ಷದ ಸಂಘಟನೆ ಮಾಡಿ, ಜವಾಬ್ದಾರಿಯಿಂದ ಮತದಾನ ಮಾಡಿಸಿದರೆ ಪಕ್ಷದ ಗೆಲುವು ನೂರಕ್ಕೆ ನೂರರಷ್ಟು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಮಾಜಿ ಸಚಿವ ಎಸ್.ಆರ್.ಪಾಟೀಲ, ಬೀಳಗಿ ಶಾಸಕ ಜೆ.ಟಿ. ಪಾಟೀಲ, ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ, ಅಜೇಯಕುಮಾರ್​…

Read More

ಬೆಂಗಳೂರು: ರಾಜ್ಯಕ್ಕೆ ಬಿಸಿಲಿನ ಶಾಖ ಹೆಚ್ಚಾಗುತ್ತಿದ್ದು, ಜನರು ಕಂಗಾಲಾಗುತ್ತಿದ್ದಾರೆ. ರಣ ಬಿಸಿಲಿನ ಮಧ್ಯೆ ಜನರಿಗೆ ನೀರಿನ ಹಾಹಾಕಾರ ಕೂಡ ಉಂಟಾಗಿದೆ. ಇದರ ಮಧ್ಯೆ ಈಗ ಕಾಲರಾ ಆತಂಕ ಜನರನ್ನು ಕಾಡುತ್ತಿದೆ.ನಗರದಲ್ಲಿ ಕಾಲರಾ  ಸೋಂಕು ಹರಡುತ್ತಿದ್ದಂತೆಯೇ ಈ ವಿಷಯಕ್ಕೆ ಸಂಬಂಧಿಸಿದಂತೆ ಹೋಟೆಲ್‌  ಮತ್ತು ಬೀದಿಬದಿ ವ್ಯಾಪಾರಿಗಳ  ನಡುವೆ ವಾಕ್ಸಮರ ಪ್ರಾರಂಭವಾಗಿದೆ. ಇದರ ಬಗ್ಗೆ ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್.. ಯೆಸ್., ಕೆಲವು ದಿನಗಳ ಹಿಂದಷ್ಟೇ ಪಾನಿಪುರಿ ತಿಂದು ಮಕ್ಕಳ ಆರೋಗ್ಯ ಹದಗೆಟ್ಟ ಪ್ರಕರಣ ನಡೆದಿತ್ತು. ನಗರದಲ್ಲಿ ಅಧಿಕೃತವಲ್ಲದ ಸಾವಿರಾರು ಬೀದಿ ಬದಿ ವ್ಯಾಪಾರಿಗಳು ಅಂಗಡಿ ನಡೆಸುತ್ತಿದ್ದಾರೆ. ಬೀದಿಬದಿಯಲ್ಲಿ ಸಿಲಿಂಡರ್ ಇಟ್ಟು ಕೊಳ್ಳುವುದು ಸುರಕ್ಷತೆಯೂ ಅಲ್ಲ. ಸ್ವಚ್ಛತೆಯಿಲ್ಲದ ಸ್ಥಳದಲ್ಲಿ ಆಹಾರ ತಯಾರಿಸುವುದರಿಂದ ಕಾಲರಾ ಬಹುಬೇಗ ಹರಡಬಹುದು ಎಂದು ಹೊಟೆಲ್‌ ಮಾಲಿಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್‌ ಆರೋಪಿಸಿದ್ದಾರೆ. ಜೊತೆಗೆ, ನಗರದಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ನಿಗಾ ವಹಿಸುವುದು ಪಾಲಿಕೆ ಹಾಗೂ ಆರೋಗ್ಯ ಇಲಾಖೆ ಜವಾಬ್ದಾರಿಯಾಗಿದ್ದು, ಈ ಕೂಡಲೇ ಬೀದಿ ಬದಿಯಲ್ಲಿ ತಿಂಡಿ ತಿನಿಸುಗಳನ್ನು ಮಾರಾಟ ಮಾಡುತ್ತಿರುವ ಅಂಗಡಿಗಳನ್ನು…

Read More

ಬೆಂಗಳೂರು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂಬ ತಮ್ಮ ವಿವಾದಾತ್ಮಕ ಹೇಳಿಕೆಯನ್ನು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಸಮರ್ಥಿಸಿಕೊಂಡಿದ್ದಾರೆ. ಈ ವಿಚಾರವಾಗಿ ಕಾಂಗ್ರಸ್ ಟೀಕೆಗೆ ತಿರುಗೇಟು ನೀಡಿರುವ ಅವರು ನನ್ನ ಹೇಳಿಕೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿ ಎನ್ಐಎ ಅಧಿಕಾರಿಗಳು ಬಿಜೆಪಿ ಕಾರ್ಯಕರ್ತನನ್ನು ವಿಚಾರಣೆ ನಡೆಸಿರುವುದಕ್ಕೆ ಸಂಬಂಧಿಸಿ ದಿನೇಶ್ ಗುಂಡೂರಾವ್ ಅವರು ಬಿಜೆಪಿಯನ್ನು ಟೀಕಿಸಿದ್ದರು. ಇದಕ್ಕೆ ಸಂಬಂಧಿಸಿ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಯತ್ವಾಳ್ ಅವರು ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲೇ ಅರ್ಥ ಪಾಕಿಸ್ತಾನ ಇದೆ ಎಂದು ಟೀಕಿಸಿದ್ದರು. https://ainlivenews.com/you-will-get-2-lakh-insurance-from-the-government-rs-3000-thousand-per-month/ ಈ ವಿಚಾರವಾಗಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದ ಕರ್ನಾಟಕ ಕಾಂಗ್ರೆಸ್, ಸಚಿವ ದಿನೇಶ್ ಗುಂಡೂರಾವ್ ಅವರ ಕುಟುಂಬದ ಕುರಿತು ಆಡಿದ ಬಸನಗೌಡ ಪಾಟೀಲ ಯತ್ನಾಳ್ ಅವರ ಮಾತುಗಳು ಅಕ್ಷಮ್ಯವಾದವು. ಘನತೆಯಿಂದಿದ್ದ ರಾಜಕೀಯವನ್ನು ಅತ್ಯಂತ ಕೀಳು ಅಭಿರುಚಿಗೆ ಇಳಿಸಿದ ಕೀರ್ತಿ ಕರ್ನಾಟಕ…

Read More

ಬೆಂಗಳೂರು: ಸಿಎಂ‌ ಸಿದ್ದರಾಮಯ್ಯ ರಾಜಧಾನಿಯಲ್ಲಿ 2ನೇ‌ದಿನವೂ ಕಾಂಗ್ರೆಸ್ ಅಭ್ಯರ್ಥಿಗಳ ಪರ‌‌ ಭರ್ಜರಿ ರೋಡ್ ಶೋ ನಡೆಸಿದ್ರು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ಸೌಮ್ಯ ರೆಡ್ಡಿಪರ ಕ್ಯಾಂಪೇನ್ ಮಾಡಿದ್ರು. ಜಯನಗರದ ರಾಗಿಗುಡ್ಡ 1st ಬ್ಲಾಕ್ ನಿಂದ ಆರಂಭವಾದ ರೋಡ್ ಶೋ ಕಾರ್ಪೊರೇಷನ್ ಕಾಲೋನಿ, ಅರಸು ಕಾಲೋನಿ, ಗುಂಡಪ್ಪ ಲೇಔಟ್, ಲಿಡ್ ಕರ್ ಹೊಸೂರು ರೋಡ್‌ಮೂಲಕ ಈಜೀಪುರ ಬಸ್ ಸ್ಟಾಂಡ್ ನಲ್ಲಿ‌ರೋಡ್ ಶೋ ಅಂತ್ಯವಾಯ್ತು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ಬಿಜೆಪಿ ಸಂಸದರು, ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ರು. ಪ್ರಧಾನಿ ಮೋದಿ ಕಳೆದ 10 ವರ್ಷಗಳಲ್ಲಿ ಹೇಳಿದ ಯಾವುದನ್ನೂ ಜಾರಿ ಮಾಡಿಲ್ಲ, ಕಪ್ಪು ಹಣ ತರಲಿಲ್ಲ, https://ainlivenews.com/you-will-get-2-lakh-insurance-from-the-government-rs-3000-thousand-per-month/ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸಲಿಲ್ಲ, ಪೆಟ್ರೋಲ್, ಡೀಸೆಲ್, ಗ್ಯಾಸ್ ಹೆಚ್ಚಾಗ್ತಾನೆ ಇದೆ ಹಿಂದುತ್ವ ಅಂತ ಜನರಲ್ಲಿ ಕೋಮುದ್ವೇಶ ಸೃಷ್ಟಿಮಾಡ್ತಿದ್ದಾರೆ‌. ರಾಜ್ಯದ ಸಂಸದರು ಏನು ಕೆಲಸ ಮಾಡಿಲ್ಲ ನಮ್ಮನ್ನು ನೋಡಬೇಡಿ ಮೋದಿ ಮುಖ ನೋಡಿ ಓಟು ಹಾಕಿ…

Read More