Author: AIN Author

ಬೆಂಗಳೂರು: ಕಲುಷಿತ ನೀರು ಸೇವನೆಯಿಂದ ಅಸ್ವಸ್ಥಗೊಂಡು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನೆ ಸಂಸ್ಥೆಯ (ಬಿಎಂಸಿಆರ್‌ಐ) ಬಾಲಕಿಯರ ಹಾಸ್ಟೆಲ್‌ನ 47 ವಿದ್ಯಾರ್ಥಿನಿಯರ ಪೈಕಿ ಇಬ್ಬರಲ್ಲಿಕಾಲರಾ ಸೋಂಕಿನ ಲಕ್ಷಣಗಳು ಕಂಡುಬಂದಿವೆ. ಮತ್ತೊಬ್ಬ ವಿದ್ಯಾರ್ಥಿನಿಯ ವರದಿ ಬರಬೇಕಿದೆ. ಏ.5ರಂದು ವಾಂತಿ-ಭೇದಿಯಿಂದ ತೀವ್ರ ಅಸ್ವಸ್ಥಗೊಂಡಿದ್ದ 47 ವೈದ್ಯಕೀಯ ವಿದ್ಯಾರ್ಥಿನಿಯರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. https://ainlivenews.com/job-opportunity-for-puc-passers-direct-recruitment-without-exam-salary-%e2%82%b963000-per-month/ ಹಾಸ್ಟೆಲ್‌ ವಾರ್ಡನ್ ಅಮಾನತು ವೈದ್ಯಕೀಯ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಟೆಲ್‌ ವಾರ್ಡನ್‌ ಡಾ.ಅಖಿಲಾಂಡೇಶ್ವರಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಲು ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸೂಚಿಸಿದ್ದಾರೆ. ಹಾಸ್ಟೆಲ್‌ಗಳ ನಿರ್ವಹಣೆಗಾಗಿ ಸಮಿತಿ ರಚಿಸಲು ಮತ್ತು ಮಾಸಿಕ ಸಭೆ ನಡೆಸಲು, ತಿಂಗಳಿಗೊಮ್ಮೆ ಹಾಸ್ಟೆಲ್‌ ಆವರಣಕ್ಕೆ ಭೇಟಿ ನೀಡಲು ಬಿಎಂಸಿಆರ್‌ಐ ಡೀನ್‌ ಮತ್ತು ನಿರ್ದೇಶಕರಿಗೆ ಆದೇಶಿಸಿದ್ದಾರೆ.

Read More

ಜೈಪುರ: ಇಂದು ಸಾರ್ವಜನಿಕರಿಗೆ ಇವಿಎಂಗಳ (EVM) ಮೇಲೆ ನಂಬಿಕೆ ಇಲ್ಲದಂತಹ ಪರಿಸ್ಥಿತಿ ಬಂದಿದೆ. ಮೋದಿಯವರು (Narendra Modi) ಪೊಳ್ಳು ಜಗತ್ತಿನಲ್ಲಿ ಬದುಕುತ್ತಿದ್ದಾರೆ. ಸತ್ಯವನ್ನು ಮರೆಮಾಚಲು ದೊಡ್ಡ ಘಟನೆಗಳನ್ನು ತೋರಿಸಲಾಗಿದೆ ಎಂದು ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ (Priyanka Gandhi Vadra) ವಾಗ್ದಾಳಿ ನಡೆಸಿದ್ದಾರೆ. ರಾಜಸ್ಥಾನದ (Rajastan) ಜೈಪುರದಲ್ಲಿ ನಡೆದ ಪಕ್ಷದ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದು ಎಲ್ಲ ವಿಪಕ್ಷಗಳ ಮೇಲೆ ದಾಳಿ ನಡೆಯುತ್ತಿದೆ. ಇಬ್ಬರು ಮುಖ್ಯಮಂತ್ರಿಗಳು ಜೈಲಿನಲ್ಲಿದ್ದಾರೆ. ಭ್ರಷ್ಟಾಚಾರದ ಮೇಲೆ ದಾಳಿ ನಡೆಸಿ ಭ್ರಷ್ಟರನ್ನು ತಮ್ಮ ಪಕ್ಷಗಳಿಗೆ ತೆಗೆದುಕೊಳ್ಳುತ್ತಿದ್ದಾರೆ. ಇಂದು ನೀವು ಹಾಕಲಿರುವ ಮತ ದೇಶದ ಪ್ರಜಾಪ್ರಭುತ್ವವನ್ನು ಉಳಿಸಲಿದೆ ಎಂದರು. https://ainlivenews.com/job-opportunity-for-puc-passers-direct-recruitment-without-exam-salary-%e2%82%b963000-per-month/ ಕಳೆದ 45 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ದೊಡ್ಡ ಪ್ರಮಾಣದಲ್ಲಿ ನಿರುದ್ಯೋಗ ಸಮಸ್ಯೆ ಬಾಧಿಸುತ್ತಿದೆ. ಬಿಜೆಪಿ ದೊಡ್ಡ ಭರವಸೆಗಳನ್ನು ನೀಡಿದ್ದರೂ ಒಂದನ್ನೂ ಈಡೇರಿಸಿಲ್ಲ. ಅಗ್ನಿವೀರ್‌ನಂತಹ ಯೋಜನೆಗಳನ್ನು ತಂದು ಮಕ್ಕಳ ಭರವಸೆಯನ್ನು ಛಿದ್ರಗೊಳಿಸಿದ್ದಾರೆ. ದೇಶದ ಎಲ್ಲೆಡೆ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗುತ್ತಿವೆ.…

Read More

ಬೆಂಗಳೂರು ಏ 7: ಪ್ರೊ.ರಾಜೀವ್ ಗೌಡ ಅವರು ಉತ್ತಮ ತಿಳಿವಳಿಕೆ, ಕಾಳಜಿ, ಜನಪರ ಸಿದ್ಧಾಂತ ಹೊಂದಿರುವ ಅರ್ಹ ಅಭ್ಯರ್ಥಿ. ಇವರು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಗೆದ್ದೇ ಗೆಲ್ಲುವ ಅವಕಾಶಗಳಿವೆ ಎಂದು ಸಿ.ಎಂ.ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿ‌ ಮಹಿಳಾ ಸಮಾವೇಶ ಮತ್ತು ಬೂತ್ ಮುಖಂಡರುಗಳ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರಿಂದಲೇ ಗೋ-ಬ್ಯಾಕ್ ಅನ್ನಿಸಿಕೊಂಡ ಶೋಭಾ ಕರಂದ್ಲಾಜೆ ಅವರಿಗೆ ಇಲ್ಲಿ ಟಿಕೆಟ್ ಕೊಟ್ಟಿದ್ದಾರೆ. ಉತ್ತರ ಲೋಕಸಭಾ ಕ್ಷೇತ್ರದ ಪ್ರಜ್ಞಾವಂತ ಮತದಾರರು ಶೋಭಾ ಅವರಿಗೆ ಇಲ್ಲಿಂದಲೂ ನೀವು ವಾಪಾಸ್ ಕಳಿಸಿ ಎಂದು ಕರೆ ನೀಡಿದರು. ಶೋಭಾ ಕರಂದ್ಲಾಜೆ ಅವರು ಐದು ವರ್ಷಗಳ ಕಾಲ ರಾಜ್ಯಕ್ಕೆ ಆದ ಅನ್ಯಾಯಗಳ ಬಗ್ಗೆ ಒಂದೇ ಒಂದು ದಿನವೂ ದ್ವನಿ ಎತ್ತಲಿಲ್ಲ. ಇಂಥವರಿಂದ ನಿಮ್ಮ ಮತಕ್ಕೆ ಬೆಲೆ ಬರುತ್ತದಾ? ನೀತಿ ಆಯೋಗದ ಉಪಾಧ್ಯಕ್ಷರಾಗಿ, ಉನ್ನತ ಶೈಕ್ಷಣಿಕ ಅರ್ಹತೆ ಮತ್ತು ತಿಳಿವಳಿಕೆ ಹೊಂದಿ ರಾಜ್ಯಕ್ಕೆ ಆದ ಅನ್ಯಾಯಗಳ ಬಗ್ಗೆ…

Read More

ನಿವೃತ ಶಿಕ್ಷಕ ಶ್ರೀ ಎಂ ಎಸ ಮುನ್ನೋಳ್ಳಿ ಅವರ ಅಭಿಮಾನಿ ಬಳಗದ ವತಿಯಿಂದ ಕಾಯಕ ಯೋಗಿ ಶ್ರೀ ಎಂ ಎಸ್ ಮುನ್ನೋಳಿಯವರ 98 ನೇ ಜನ್ಮ ದಿನೋತ್ಸವ ಸಮಾರಂಭದ ನಿಮಿತ್ಯ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿಯ ಬಂಗಾರೆವ್ವ ತಟ್ಟಿಮನಿ ಸಮುದಾಯ ಭವನದಲ್ಲಿ ಉತ್ತಮ ಶಿಕ್ಷಕರಿಗೆ ಕಾಯಕ ಯೋಗಿ ಪ್ರಶಸ್ತಿ ಪ್ರಧಾನ ಸಮಾರಂಭವು ಜರುಗಿತು. ನಗರದ ಸರ್ಕಾರಿ ಪ ಪೂ ಕಾಲೇಜು ಪ್ರೌಢ ವಿಭಾಗದ ಗಣಿತ ಸಹ ಶಿಕ್ಷಕಿಯಾದ ಭುವನೇಶ್ವರಿ ಖವಾಸಿ ( ಜಂಬಗಿ) ಇವರು ಶೈಕ್ಷಣಿಕ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಕಾಯಕ ಶ್ರೀ ಪ್ರಶಸ್ತಿಯನ್ನು ರಬಕವಿಯ ಪ ಪೂ ಶ್ರೀ ಗುರುಸಿದ್ದೇಶ್ವರ ಶ್ರೀಗಳು ಸನ್ಮಾನಿಸಿ ಗೌರವಿಸಿದರು, ಈ ಸಂದರ್ಭದಲ್ಲಿ ಎಂ ಎಸ್ ಮುನ್ನೋಳಿ ಅಭಿಮಾನಿ ಬಳಗದ ಅಧ್ಯಕ್ಷ ಶ್ರೀಶೈಲ ದಬಾಡಿ,ಆಯ್ ಆರ್ ಮಠಪತಿ,ಡಾ, ಶ್ರೀನಿವಾಸ ಬಳ್ಳಿ,ಸುರೇಶ ಕೋಲಾರ,ಎಸ್ ಬಿ ಹಾವಿನಾಳ,ಪ್ರೊ ವೈ ಬಿ ಕೊರಡೂರ, ಬೊರಮ್ಮ ಬಾಗಲಕೋಟ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಪ್ರಕಾಶ ಕುಂಬಾರ ಬಾಗಲಕೋಟೆ

Read More

ಹೈದರಾಬಾದ್:‌ ಯಾವುದೇ ರಾಜಕೀಯ ಪಕ್ಷಕ್ಕೆ ಅದರ ಬೆಂಬಲಿಗರು ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿರುತ್ತಾರೆ. ತಮ್ಮ ಪಕ್ಷದ ರಕ್ಷಣೆಗಾಗಿ ಇತರರೊಂದಿಗೆ ಹೋರಾಡಲು ಸಹ ಸಿದ್ಧರಾಗಿರುವ ಇಂತಹ ಅನೇಕ ಬೆಂಬಲಿಗರನ್ನು ನೀವು ಇಲ್ಲಿಯವರೆಗೆ ನೋಡಿರಬೇಕು. ಆದರೆ ಆಂಧ್ರಪ್ರದೇಶದ (Andhrapradesh) ವ್ಯಕ್ತಿಯೊಬ್ಬರು ತಮ್ಮ ನೆಚ್ಚಿನ ಪಕ್ಷದ ಬಗ್ಗೆ ಅಂತಹ ಉತ್ಸಾಹವನ್ನು ತೋರುವ ಮೂಲಕ ಇದೀಗ ಭಾರೀ ಸುದ್ದಿಯಾಗಿದ್ದಾರೆ. https://twitter.com/ANI/status/1776499468525043935?ref_src=twsrc%5Etfw%7Ctwcamp%5Etweetembed%7Ctwterm%5E1776499468525043935%7Ctwgr%5E1a0106994f53b64965d1d2a60b8ec95dfecf013a%7Ctwcon%5Es1_&ref_url=https%3A%2F%2Fpublictv.in%2Floksabha-election-2024-pawan-kalyan-jansena-party-supporter-printed-party-manifesto-in-weeding-card%2F ಆಂಧ್ರಪ್ರದೇಶದ ಕಾಕಿನಾಡ ನಿವಾಸಿಯೊಬ್ಬರ ಮದುವೆ ಕಾರ್ಡ್‌ʼನಲ್ಲಿ ಜನಸೇನಾ ಪಕ್ಷದ (Janasena Party) ಪ್ರಣಾಳಿಕೆಯನ್ನು ಮುದ್ರಿಸಲಾಗಿದೆ. ವ್ಯಕ್ತಿ ಪಕ್ಷದ ನಾಯಕ ಪವನ್ ಕಲ್ಯಾಣ್ (Pawan Kalyan) ಅವರ ಬೆಂಬಲಿಗರಾಗಿದ್ದು, ಪಿಠಾಪುರಂನಲ್ಲಿ ಪವನ್ ಕಲ್ಯಾಣ್ ಅವರಿಗೆ ಮತ ನೀಡುವಂತೆ ಆಹ್ವಾನಿತರನ್ನು ಒತ್ತಾಯಿಸಿದ್ದಾರೆ. ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ವೈರಲ್‌ ಆಗುತ್ತಿದೆ. ವೀಡಿಯೋದಲ್ಲಿ ವ್ಯಕ್ತಿ ಜನರಿಗೆ ಮದುವೆ ಕಾರ್ಡ್‌ಗಳನ್ನು ವಿತರಿಸುತ್ತಿರುವುದನ್ನು ಕಾಣಬಹುದಾಗಿದೆ. ಬಿಜೆಪಿ-ಟಿಡಿಪಿ ಜೊತೆ ಮೈತ್ರಿ: ತೆಲುಗು ಸೂಪರ್ ಸ್ಟಾರ್ ಪವನ್ ಕಲ್ಯಾಣ್ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು, ಜನಸೇನಾ ಪಕ್ಷವನ್ನೂ ಕಟ್ಟಿದ್ದಾರೆ ಎಂಬುದು ಗಮನಾರ್ಹ. ಇತ್ತೀಚಿನ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಅವರ ಪಕ್ಷವು…

Read More

ಬೆಂಗಳೂರು: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳಿದ್ದು, ತಮ್ಮ ತಮ್ಮ ಪಕ್ಷದ ನಾಯಕರು ಅಬ್ಬರದ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಅಂತೆಯೇ ಪ್ರಧಾನಿ ನರೇಂದ್ರ ಮೊದಿಯವರು (Narendra Modi) ಚುನಾವಣಾ ಪ್ರಚಾರಕ್ಕಾಗಿ ಏಪ್ರಿಲ್ 14 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರಿನಲ್ಲಿ ಪ್ರಧಾನಿ ಬಿರುಸಿನ ಪ್ರಚಾರ (Election Campaign) ನಡೆಸಲಿದ್ದಾರೆ. ಏಪ್ರಿಲ್ 14 ರಂದು ಮಧ್ಯಾಹ್ನ 3 ಗಂಟೆಗೆ ಚಿಕ್ಕಬಳ್ಳಾಪುರ ಕ್ಷೇತ್ರದ ದೇವನಹಳ್ಳಿಯಲ್ಲಿ ಬೃಹತ್ ಸಾರ್ವಜನಿಕ ಸಮಾವೇಶವನ್ನು ಆಯೋಜನೆ ಮಾಡಲಾಗಿದೆ. ಅಲ್ಲದೇ ಅದೇ ದಿನ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಬೃಹತ್ ರೋಡ್ ಶೋಗೆ ಪ್ಲಾನ್ ಮಾಡಿಕೊಳ್ಳಲಾಗಿದೆ. https://ainlivenews.com/job-opportunity-for-puc-passers-direct-recruitment-without-exam-salary-%e2%82%b963000-per-month/ ಬೆಂಗಳೂರಿನಲ್ಲಿ ಎರಡು ವಿಧಾನಸಭೆ ಕ್ಷೇತ್ರಗಳನ್ನು ಒಳಗೊಂಡು ರೋಡ್ ಶೋ (Namo Road Show) ನಡೆಸಲು ಪ್ಲಾನ್ ರೂಪಿಸಲಾಗಿದೆ. ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ವ್ಯಾಪ್ತಿಯ ಬ್ಯಾಟರಾಯನಪುರ ಮತ್ತು ಹೆಬ್ಬಾಳ ಕ್ಷೇತ್ರ ಒಳಗೊಂಡ ರೋಡ್ ಶೋ ನಡೆಸುವ ಸಾಧ್ಯತೆ ಇದೆ. ನಮೋ ರೋಡ್ ಶೋಗೆ ಇಂದು ರೂಟ್‍ಮ್ಯಾಪ್ ಸಿದ್ಧಪಡಿಸುವ ಸಾಧ್ಯತೆಗಳಿವೆ.

Read More

ಹಾಸನ: ದೇಶದ ಮೂರು ರಾಜ್ಯಗಳಲ್ಲಷ್ಟೇ ಅಧಿಕಾರದಲ್ಲಿರುವ ಕಾಂಗ್ರೆಸ್, ಕೇಂದ್ರದಲ್ಲಿ ಅಧಿಕಾರ ಹಿಡಿಯುವುದು ಅಸಾಧ್ಯ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (H.D.Deve Gowda) ಭವಿಷ್ಯ ನುಡಿದರು. ಹಾಸನದ ನಾಗರಹಳ್ಳಿ ಗ್ರಾಮದಲ್ಲಿ ಜೆಡಿಎಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನವರು ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. 28 ಗ್ಯಾರೆಂಟಿಗಳನ್ನು ದೇಶದಲ್ಲಿ ಜಾರಿಗೆ ತರ್ತೀವಿ ಅಂತ ಹೇಳಿದ್ದಾರೆ. ಮೂವತ್ತು ಲಕ್ಷ ಜನಕ್ಕೆ ಕೆಲಸ ಕೊಡ್ತೀವಿ ಎಂದಿದ್ದಾರೆ. ಆದರೆ ದೇಶದಲ್ಲಿ ಕರ್ನಾಟಕ, ತೆಲಂಗಾಣ, ಹಿಮಾಚಲ ಪ್ರದೇಶದಲ್ಲಿ ಮಾತ್ರ ಅವರ ಅಧಿಕಾರ ಇದೆ. ಇಂಥವರು ಕೇಂದ್ರದಲ್ಲಿ ಅಧಿಕಾರಕ್ಕೆ ಬರಲು ಸಾಧ್ಯವೇ ಎಂದು ಪ್ರಶ್ನಿಸಿದರು. ಎಲ್ಲಾ ರೀತಿಯ ಸಾಲಮನ್ನಾ ಮಾಡ್ತೀವಿ ಎಂದಿದ್ದಾರೆ. ಮೋದಿ ಅವರಿಂದ ಹೆಣ್ಣುಮಕ್ಕಳಿಗೆ 33 ಪರ್ಸೆಂಟ್ ಮೀಸಲಾತಿ ಮಸೂದೆ ಪಾಸ್ ಆಯ್ತು. ಇದನ್ನು ನಾನು ಮಾಡಿದ್ದು. ಅದನ್ನು ಪಾಸ್ ಮಾಡಿದ್ದಾರೆ. ಕಾಂಗ್ರೆಸ್‌ನವರು ಸುಳ್ಳು ಹೇಳಿ ಜನರಿಗೆ ಮೋಸ ಮಾಡಲು ಸಾಧ್ಯನಾ? ಎಲ್ಲಾ ಸಾಲ ಮನ್ನಾ ಮಾಡಲು ಎಲ್ಲಿದೆ ಬಜೆಟ್? ಕೇಂದ್ರದ ಬಜೆಟ್‌ನ ನಾಲ್ಕು ಪಟ್ಟು ಭರವಸೆ ಪ್ರಣಾಳಿಕೆಯಲ್ಲಿದ್ದು, ಈಡೇರಿಸಲು…

Read More

ತುಮಕೂರು: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳಿದ್ದು, ತಮ್ಮ ತಮ್ಮ ಪಕ್ಷದ ನಾಯಕರು ಅಬ್ಬರದ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಅದೇ ರೀತಿ ತುಮಕೂರು ಲೋಕಸಭಾ ಕ್ಷೇತ್ರ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಮಾಧುಸ್ವಾಮಿಯನ್ನ‌ ಭೇಟಿಯಾಗಿದ್ದಾರೆ. ಹೌದು ಚಿಕ್ಕನಾಯಕನಹಳ್ಳಿಯ ಜೆಸಿಪುರದ ಮಾಧುಸ್ವಾಮಿ ನಿವಾಸದಲ್ಲಿ ಚಿಕ್ಕನಾಯಕನಹಳ್ಳಿಯ, ಜೆಸಿಪುರದ ಮಾಧುಸ್ವಾಮಿ ನಿವಾಸದಲ್ಲಿ ಇಂದು ಮುಂಜಾನೆ ಮುದ್ದಹನುಮೇಗೌಡ ಭೇಟಿಯಾಗಿದ್ದಾರೆ. ಭೇಟಿ ವೇಳೆ ಮಾಧುಸ್ವಾಮಿಗೆ ಹೂಗುಚ್ಚ ನೀಡಿದರು. ಮಾಧುಸ್ವಾಮಿ-ಮುದ್ದಹನುಮೇಗೌಡ ಕೆಲಕಾಲ ಚರ್ಚೆ ನಡೆಸಿದರು. ಈವರೆಗೂ ಬಿಜೆಪಿ ಅಭ್ಯರ್ಥಿ ಸೋಮಣ್ಣ ಪರ ಪ್ರಚಾರಕ್ಕೆ  ಮಾಧುಸ್ವಾಮಿ ಆಗಮಿಸದ ಕಾರಣ ಮಾಧುಸ್ವಾಮಿ ಅವರ ಮುಂದಿನ‌ ನಡೆ ಕುತೂಹಲ ಮೂಡಿಸಿದೆ.

Read More

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಬರ, ಪ್ರಕೃತಿ ವಿಕೋಪಗಳನ್ನು ಎದುರಿಸಲು ಮುಂಚಿತವಾಗಿಯೇ ಎಸ್‌ಡಿಆರ್‌ಎಫ್ ಅಡಿ 697 ಕೋಟಿ ರೂ. ಕೊಡಲಾಗಿದೆ. ಅದರಲ್ಲೇ ಬರಕ್ಕೂ ಹಣ ವಿನಿಯೋಗ ಮಾಡಿಕೊಳ್ಳಬಹುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿ ನಡೆಸಿದ ನಿರ್ಮಲಾ ಸೀತಾರಾಮನ್, ಎಸ್‌ಡಿಆರ್‌ಎಫ್ ಅಡಿ 929.60 ಅನುದಾನ ಇದೆ. ಇದರಲ್ಲಿ 697 ಕೋಟಿ ಕೇಂದ್ರ ಪಾಲನ್ನು ಎರಡು ಕಂತುಗಳಲ್ಲಿ ಕೊಡಲಾಗಿದೆ. ಈ ಹಣ ಮುಂಚಿತವಾಗಿಯೇ ಬಿಡುಗಡೆ ಮಾಡಲಾಗಿದೆ. ಇದರಲ್ಲೇ ಬರ ಪರಿಹಾರಕ್ಕೂ ಅನುದಾನ ಬಳಸಿಕೊಳ್ಳಲು ಅವಕಾಶ ಇದೆ.‌ ಕೇಂದ್ರದಿಂದ ಬರ ಪರಿಹಾರ ವಿಳಂಬವಾಗಿಲ್ಲ ಎಂದಿದ್ದಾರೆ.  https://ainlivenews.com/job-opportunity-for-puc-passers-direct-recruitment-without-exam-salary-%e2%82%b963000-per-month/ ಬರಕ್ಕೆ ಕೇಂದ್ರ ಹಣ ಕೊಟ್ಟಿಲ್ಲ ಅನ್ನೋದು ತಪ್ಪು. ಸದ್ಯದಲ್ಲೇ ಕೇಂದ್ರದ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿ ಬರ ಪರಿಹಾರ ಬಿಡುಗಡೆ ಮಾಡಲಿದೆ. ಈ ಸಭೆಯಲ್ಲಿ ತೀರ್ಮಾನವಾಗುವ ಬರ ಪರಿಹಾರ ಬಿಡುಗಡೆಗೆ ಕೇಂದ್ರ ಚುನಾವಣಾ ಆಯೋಗದ ಅನುಮತಿಯನ್ನೂ ಕೇಳಲಾಗಿದೆ ಎಂದು ತಿಳಿಸಿದ್ದಾರೆ. ಈಗಾಗಲೇ ತೆರಿಗೆ ಹಂಚಿಕೆ ಕಳೆದ…

Read More

ಕನಕಪುರ: “ತೆರಿಗೆ ವಿಚಾರದಲ್ಲಿ ಕನ್ನಡ ನಾಡಿಗೆ ಆಗಿರುವ ದ್ರೋಹದ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ, ಕೇಂದ್ರ ಸರಕಾರದಿಂದ ಕರ್ನಾಟಕಕ್ಕೆ ಆಗುತ್ತಿರುವ ತಾರತಮ್ಯ ಧೋರಣೆ ತಿಳಿಸಿದ್ದಕ್ಕೆ ನನ್ನನ್ನೇ ದೇಶದ್ರೋಹಿ ಎಂದು ಬಿಜೆಪಿಯವರು ಬಿಂಬಿಸಲು ಹೊರಟಿದ್ದಾರೆ. ಅವರಿಗೆ ಕರ್ನಾಟಕದ ಜನತೆ ತಕ್ಕ ಪಾಠ ಕಲಿಸಬೇಕಿದೆ” ಎಂದು ಸಂಸದ ಡಿ.ಕೆ.ಸುರೇಶ್‌ ಹೇಳಿದರು. ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದರು. ರಾಜ್ಯದಿಂದ ಕೇಂದ್ರಕ್ಕೆ ಸುಮಾರು 24 ಲಕ್ಷ ಕೋಟಿ ತೆರಿಗೆ ಹಣ ಹೋಗುತ್ತಿದೆ. ಒಬ್ಬ ಕನ್ನಡಿಗ ತಲಾ 13,428 ತೆರಿಗೆ ಕಟ್ಟುತ್ತಿದ್ದಾನೆ. ಉತ್ತರ ಪ್ರದೇಶದ ಒಬ್ಬ ವ್ಯಕ್ತಿ ಕೇವಲ 2793 ತೆರಿಗೆ ಕಟ್ಟುತ್ತಿದ್ದಾನೆ. ಆದರೆ ಕೇಂದ್ರ ಸರಕಾರ ತೆರಿಗೆ ಹಣ ಹಂಚಿಕೆಯಲ್ಲಿ ತಾರತಮ್ಯ ಮಾಡಿ ಬಹುಪಾಲು ಹಣವನ್ನು ಉತ್ತರ ರಾಜ್ಯಗಳಿಗೆ ಹಂಚಿಕೆ ಮಾಡಿ ದಕ್ಷಿಣ ರಾಜ್ಯಗಳಿಗೆ ವಂಚನೆ ಮಾಡುತ್ತಿದೆ ಎಂದು ದೂರಿದರು. https://ainlivenews.com/job-opportunity-for-puc-passers-direct-recruitment-without-exam-salary-%e2%82%b963000-per-month/ ಕೋವಿಡ್‌ ಸಂದರ್ಭದಲ್ಲಿಇಡೀ ದೇಶವನ್ನೇ ಲಾಕ್‌ಡೌನ್‌ ಮಾಡಿದಾಗ ರಾಜ್ಯ ಸರಕಾರ ಕೈಚೆಲ್ಲಿ ಕುಳಿತ್ತಿತ್ತು. ಆ ಸಂದರ್ಭದಲ್ಲಿ ರೈತರು ಬೆಳೆದ ಬೆಳೆಗಳು ಮಾರಾಟವಾಗದೆ ಅವರು ಕಷ್ಟದಲ್ಲಿದ್ದರು. ಅವರಿಂದ ಬೆಳೆಗಳನ್ನು…

Read More