Author: AIN Author

ಕೋಲಾರ:- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುರುಡುಮಲೆ ವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಲೋಕಸಭಾ ಚುನಾವಣೆ ಪ್ರಚಾರ ಕಾರ್ಯವನ್ನು ಇಂದು ಆರಂಭಿಸಿದರು. DCM ಡಿಕೆಶಿ ಹಾಗೂ ಸಿಎಂ ಸಿದ್ದರಾಮಯ್ಯ ಅವರು ಇತಿಹಾಸ ಪ್ರಸಿದ್ಧ ಕೋಲಾರದ ಮುಳಬಾಗಿಲಿನ ಕುರುಡುಮಲೆ ಗಣಪತಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. https://ainlivenews.com/the-congress-office-was-locked-during-the-election/ ತಾಲ್ಲೂಕಿನ ಕುರುಡುಮಲೆ ದೇಗುಲದಲ್ಲಿ ಶನಿವಾರ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಕಾಂಗ್ರೆಸ್ ಪಕ್ಷದ ‘ಪ್ರಜಾಧ್ವನಿ-2’ ಯಾತ್ರೆ ಹಾಗೂ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಅಧಿಕೃತ ಚಾಲನೆ ಲಭಿಸಿತು. ಬಳಿಕ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕುರುಡುಮಲೆಗೆ ತೆರಳಿದ ಡಿ.ಕೆ.ಶಿವಕುಮಾರ್, ಕುರುಡುಮಲೆ ಗಣೇಶ ದೇಗುಲದಲ್ಲಿ ಪೂಜೆ ಸಲ್ಲಿಸಿದ್ದಾರೆ. ಬಳಿಕ ಕೋಲಾರದಲ್ಲಿ ಜನಧ್ವನಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಪಕ್ಷ ಸಂಘಟನೆ ಮಾಡುವ ನಿಟ್ಟಿನಲ್ಲಿ ಇಂದು ಕುರುಡುಮಲೆಗೆ ಭೇಟಿ ನೀಡಿ ವಿನಾಯಕನಿಗೆ ಪೂಜೆ ಸಲ್ಲಿಸಲಾಗಿದೆ. ದರ್ಗಾಗೆ ಡಿಕೆಶಿ ಭೇಟಿ ಮುಳಬಾಗಿಲು ಪಟ್ಟಣದಲ್ಲಿರುವ ಪುರಾತನ ಇತಿಹಾಸ ಹೋದಿರುವ ಹೈದರ್ ಸಾಬ್ ದರ್ಗಾಕ್ಕೆ ಡಿಕೆಶಿ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಡಿಕೆಶಿ…

Read More

ಬಳ್ಳಾರಿ:- ಚುನಾವಣೆ ಸಮಯದಲ್ಲೇ ಬಳ್ಳಾರಿ ನಗರದಲ್ಲಿರುವ ಕಾಂಗ್ರೆಸ್ ಕಚೇರಿಗೆ ಬೀಗ ಹಾಕಲಾಗಿದೆ. ಹೊಸ ಜಿಲ್ಲಾಧ್ಯಕ್ಷರ ನೇಮಕದ ಎಫೆಕ್ಟ್ ನಿಂದ ಕಾಂಗ್ರೆಸ್ ಕಚೇರಿಗೆ ಬೀಗ ಹಾಕಲಾಗಿದೆ ಎನ್ನಾಲಾಗಿದೆ.‌ ಮೊನ್ನೆ ಅಷ್ಟೇ ಕೆಲವು ಜಿಲ್ಲೆಗಳಲ್ಲಿ ಹೊಸ ಜಿಲಾಧ್ಯಕ್ಷರನ್ನ ನೇಮಕ ಮಾಡಿರುವ ಕಾಂಗ್ರೆಸ್, ಅದರಲ್ಲಿ ಬಳ್ಳಾರಿಯಿಂದ ಮೋಹಮ್ಮದ್ ರಫಿಕ್ ಅವರನ್ನು ಬದಲಾಯಿಸಿ, ಅಲ್ಲಂ ಪ್ರಶಾಂತ್ ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ಮಾಡಿದೆ. ಆದರೆ ಬಳ್ಳಾರಿಯಲ್ಲಿ ಕಾಂಗ್ರೆಸ್ ಗೆ ಸ್ವಂತ ಕಚೇರಿ ಇಲ್ಲ, ಇಲ್ಲಿ ಅಧ್ಯಕ್ಷರಾದವರೇ ಕಚೇರಿ ಮಾಡಿಕೊಂಡು ಪಕ್ಷ ನಡೆಸೋದು ವಾಡಿಕೆ ಆಗಿದೆ. ಕಳೆದ ಆರು ವರ್ಷದಿಂದ ಮಹಮ್ಮದ್ ರಫಿಕ್ ಬಾಡಿಗೆ ಕಟ್ಟುತ್ತಾ ಬಂದಿದ್ದರು,‌ ಈಗ ಅಲ್ಲಂ ಪ್ರಶಾಂತ್ ಅಧ್ಯಕ್ಷರಾಗಿದ್ದಾರೆ, ಇದೇ ರೀತಿ ಬಾಡಿಗೆ ಕಟ್ಟಡದಲ್ಲಿ ಕಚೇರಿ ಮಾಡುತ್ತಾರಾ ಅಥವಾ ಇದೇ ಕಛೇರಿಯಲ್ಲಿ ಮುಂದುವರೆಯುತ್ತಾರಾ ಎಂಬ ಪ್ರಶ್ನೆ ಕಾಡುತ್ತಿದೆ. https://ainlivenews.com/rcb-v-s-rr-big-fight-big-change-in-bangalore-team/#google_vignette ಈಗ ಏಕಾಏಕಿ ಅಧ್ಯಕ್ಷರ ಬದಲಾವಣೆ ಹಿನ್ನೆಲೆ ಕಚೇರಿಗೆ ಬೀಗ ಹಾಕಿಸಿದ ಮೋಹಮದ್ ರಫಿಕ್ ಅಸಾಮಾಧನಾ ಹೊರ ಹಾಕಿದ್ದಾರೆ.‌ ಕೇಳಿದ್ದರೆ ನಾನೇ ರಾಜಿನಾಮೆ ಕೊಡ್ತಾ ಇದ್ದೆ, ಏಕಾಏಕಿ ಬದಲಾವಣೆ…

Read More

ಬೆಂಗಳೂರು: ”ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜನತೆ ಬದಲಾವಣೆ ಬಯಸಿದ್ದಾರೆ. ನನ್ನನ್ನು ಗೆಲ್ಲಿಸಲು ಕ್ಷೇತ್ರದ ಜನತೆಯ ಹೃದಯ ಮಿಡಿಯುತ್ತಿದೆ” ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿಎನ್ ಮಂಜುನಾಥ್ ಹೇಳಿದರು. ಸಭೆ ನಂತರ ಮಾತನಾಡಿದ ಬಿಜೆಪಿ ಅಭ್ಯರ್ಥಿ ಡಾ.ಸಿಎನ್ ಮಂಜುನಾಥ್, ”ಕ್ಷೇತ್ರದಲ್ಲಿ ಕೈಗೊಳ್ಳಬೇಕಾದ ಚುನಾವಣಾ ಪ್ರಚಾರ ಪ್ರವಾಸದ ಕಾರ್ಯಕ್ರಮವನ್ನು ನಿಗದಿ ಮಾಡಿದ್ದೇವೆ. ಜೆಡಿಎಸ್ – ಬಿಜೆಪಿ ನಾಯಕರು ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಎರಡು ದಿನಕ್ಕೆ ಒಂದು ವಿಧಾನಸಭಾ ಕ್ಷೇತ್ರ ಕವರ್ ಮಾಡುವ ಬಗ್ಗೆ ಚರ್ಚೆ ಮಾಡಲಾಯಿತು. ಯಾವುದೇ ಗೊಂದಲ ಇಲ್ಲ, ನಾವೆಲ್ಲ ಒಟ್ಟಾಗಿ ಹೋಗುತ್ತಿದ್ದೇವೆ ” ಎಂದರು. https://ainlivenews.com/let-bangalore-director-kempegowdas-movie-come-to-the-screen-who-is-directing/ ”ಕ್ಷೇತ್ರದಲ್ಲಿ ಉತ್ತಮ ಪ್ರತಿಕ್ರಿಯೆ ಬರುತ್ತಿದೆ, ಜನರು ಮೋದಿ ನಾಯಕತ್ವ ಬಯಸಿದ್ದಾರೆ. ಈ ಬಾರಿ ಬದಲಾವಣೆ ನಿರೀಕ್ಷೆ ಇದೆ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಜನರ ಹೃದಯ ಡಾ.ಸಿ.ಎನ್.ಮಂಜುನಾಥ್ ಅವರನ್ನ ಗೆಲ್ಲಿಸಲು ಮಿಡಿಯುತ್ತಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

Read More

ಜೈಪುರದ ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ಫಾಫ್‌ ಡುಪ್ಲೆಸಿಸ್‌ ನೇತೃತ್ವದ ಆರ್‌ಸಿಬಿ ಹಾಗೂ ಸಂಜು ಸ್ಯಾಮ್ಸನ್‌ ನೇತೃತ್ವದ ಆರ್‌ಆರ್‌ ತಂಡಗಳು ಎದುರಾಗುತ್ತಿವೆ. ರಾಜಸ್ಥಾನ್‌ ರಾಯಲ್ಸ್‌ ತಂಡವು ಹ್ಯಾಟ್ರಿಕ್‌ ಗೆಲುವಿನೊಂದಿಗೆ ಬೀಗುತ್ತಿದ್ದು, ಅತ್ತ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಸತತ ಸೋಲುಗಳಿಂದ ಕಂಗೆಟ್ಟಿದೆ. ಬೆಂಗಳೂರು ತಂಡಕ್ಕೆ ಗೆಲುವು ಅನಿವಾರ್ಯವಾಗಿದ್ದು, ಸ್ಯಾಮ್ಸನ್‌ ಪಡೆಯನ್ನು ಅವರದ್ದೇ ತವರಲ್ಲಿ ಮಣಿಸಬೇಕಾದ ಒತ್ತಡವೂ ಇದೆ. ಪಂದ್ಯದ ಸಂಪೂರ್ಣ ಅಪ್ಡೇಟ್‌ ಇಲ್ಲಿದೆ. https://ainlivenews.com/bjp-complaint-against-home-minister-parameshwar-do-you-know-why/ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸತತ ಸೋಲುಗಳಿಂದ ಕಂಗೆಟ್ಟಿದೆ. ಕಳೆದ ಎರಡು ಪಂದ್ಯಗಳಲ್ಲಿ ತವರಿನಲ್ಲೇ ಎದುರಾಳಿಗೆ ಶರಣಾಗಿರುವ ಆರ್​ಸಿಬಿ, ಈಗ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೆಣಸಲು ಸಜ್ಜಾಗಿದೆದೆ. ಉಭಯ ತಂಡಗಳು ಏಪ್ರಿಲ್ 6ರಂದು ಜೈಪುರದ ಸವಾಯಿ ಮಾನ್ಸಿಂಗ್​ ಸ್ಟೇಡಿಯಂನಲ್ಲಿ ಸೆಣಸಾಟಕ್ಕೆ ರೆಡಿಯಾಗಿವೆ. ಈ ಪಂದ್ಯಕ್ಕೆ ಆರ್‌ಸಿಬಿ ಸಂಭಾವ್ಯ ತಂಡ ಹೀಗಿದೆ. ಫಾಫ್‌ ಡು ಪ್ಲೆಸಿಸ್‌ (ನಾಯಕ), ವಿರಾಟ್‌ ಕೊಹ್ಲಿ, ಗ್ಲೆನ್‌ ಮ್ಯಾಕ್ಸ್‌ವೆಲ್‌, ಸುಯೇಶ್ ಪ್ರಭುದೇಸಾಯಿ, ದಿನೇಶ್‌ ಕಾರ್ತಿಕ್‌, ಮಹಿಪಾಲ್ ಲೊಮ್ರರ್, ವಿಲ್‌ ಜ್ಯಾಕ್ಸ್​, ವೈಶಾಖ್ ವಿಜಯ್‌ಕುಮಾರ್‌, ಲಾಕಿ ಫರ್ಗ್ಯುಸನ್,…

Read More

ಬೆಂಗಳೂರು: ಕಾಶ್ಮೀರದ ಪುಲ್ವಾಮ ದಾಳಿಗೆ ಬಿಜೆಪಿ ಕಾರಣ ಎಂಬ ಗೃಹ ಸಚಿವ ಪರಮೇಶ್ವರ್ (G Parameshwar) ಮತ್ತು ಕೆಲ ಕಾಂಗ್ರೆಸ್ ಶಾಸಕರ ಹೇಳಿಕೆ ವಿಚಾರವಾಗಿ ಚುನಾವಣಾ ಆಯೋಗಕ್ಕೆ (Election Commission) ಬಿಜೆಪಿ ದೂರು ಸಲ್ಲಿಕೆ ಮಾಡಿದೆ. ಸಚಿವ ಪರಮೇಶ್ವರ್ ಮತ್ತು ಶಾಸಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ದೂರು ನೀಡಲಾಗಿದೆ. ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ, ಬಿಜೆಪಿ ರಾಜ್ಯ ವಕ್ತಾರ ಅಶೋಕ್ ಗೌಡ, ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ವಸಂತ್ ಕುಮಾರ್ ಅವರಿಂದ ನೃಪತುಂಗ ರಸ್ತೆಯಲ್ಲಿರುವ ಮುಖ್ಯ ಚುನಾವಣಾ ಅಧಿಕಾರಿಯವರಿಗೆ ದೂರು ನೀಡಲಾಗಿದೆ. ಪುಲ್ವಾಮ ದಾಳಿಗೆ ಬಿಜೆಪಿಯವರೇ ಕಾರಣ ಎಂಬ ಕಾಂಗ್ರೆಸ್ ಶಾಸಕರು ಮತ್ತು ಗೃಹ ಸಚಿವರ ಹೇಳಿಕೆ ಖಂಡನೀಯ. ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗಳಾಗಿದ್ದು, https://ainlivenews.com/let-bangalore-director-kempegowdas-movie-come-to-the-screen-who-is-directing/ ಪುಲ್ವಾಮ ದಾಳಿಗೆ ಪಾಕಿಸ್ತಾನವೇ ಕಾರಣ ಎಂಬುದಕ್ಕೆ ಸ್ಪಷ್ಟವಾದ ಆಧಾರಗಳು ಸಿಕ್ಕಿವೆ. ಕರ್ನಾಟಕದ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎನ್ನುವುದನ್ನು ಟೀಕಿಸದೆ ಅದು ಆ ರೀತಿ ಹೇಳಿರಲಿಲ್ಲ ಎಂಬ ಹೇಳಿಕೆಯನ್ನು ನೋಡಿದ್ದೇವೆ. ಕಾಂಗ್ರೆಸ್‌ಗೆ ಪಾಕಿಸ್ತಾನ ಎನ್ನುವ ದೇಶದ…

Read More

ಕಾರವಾರ:  ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂದು ಅಭಿಮಾನಿಯೊಬ್ಬ ಕಾಳಿ ಮಾತೆಗೆ ತನ್ನ ಬೆರಳನ್ನೇ ತುಂಡು ಮಾಡಿ ನೀಡಿದ ಘಟನೆಯೊಬ್ಬ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸೋನಾರವಾಡದಲ್ಲಿ ನಡೆದಿದೆ. ಸೋನಾರವಾಡದ ಅರುಣ್ ವರ್ಣೇಕರ್ ಅವರು ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ತನ್ನ ಎಡಗೈನ ಬೆರಳನ್ನೇ ಕಾಳಿ ಮಾತೆಗೆ ಅರ್ಪಿಸಿದವರು. ಅರುಣ್ ಅವರು ಈಗಾಗಲೇ ಮೋದಿಗಾಗಿ ಗುಡಿಯನ್ನು ನಿರ್ಮಿಸಿ ಪೂಜೆ ಮಾಡುತ್ತಿದ್ದಾರೆ. https://ainlivenews.com/let-bangalore-director-kempegowdas-movie-come-to-the-screen-who-is-directing/ ಬೆರಳು ತುಂಡುಮಾಡಿಕೊಂಡು ರಕ್ತದಲ್ಲಿ “ಮಾ ಕಾಳಿಮಾತಾ ಮೋದಿ ಬಾಬಾಕೋ ರಕ್ಷಾ ಕರೋ”. “ಮೋದಿ ಬಾಬಾ ಪಿ.ಎಂ, 3 ಬಾರ್ 78ತಕ್ 378, 378+ ಮೇರಾ ಮೋದಿ ಬಾಬಾ ಸಬ್ಸೆ ಮಹಾನ್” ಎಂದು ಗೋಡೆ ಹಾಗೂ ಪೋಸ್ಟರ್ ನಲ್ಲಿ ಬರೆದುಕೊಂಡಿದ್ದಾರೆ. ಮೋದಿ ಮೊದಲ ಬಾರಿಗೆ ಚುನಾವಣೆಗೆ ನಿಂತಾಗ ರಕ್ತದಲ್ಲಿ ಕಾಳಿಗೆ ಹರಕೆ ಕಟ್ಟಿದ್ದರು. ಈ ಹಿಂದೆಯೂ ಬೆರಳು ಕೊಯ್ದುಕೊಂಡು ಮೋದಿ ಗೆಲುವಿಗಾಗಿ ಕಾಳಿ ಮಾತೆಗೆ ಹರಕೆ ನೀಡಿದ್ದರು. ಇದು ಕೊನೆಯ ಬಾರಿ ಆದ್ದರಿಂದ ಮೋದಿ ಪ್ರಧಾನಿಯಾಗಬೇಕು ಎಂದು ಬೆರಳನ್ನೇ ತುಂಡರಿಸಿ ಅರುಣ್…

Read More

ಜೈಪುರ: ರಾಜಸ್ಥಾನ್‌ ರಾಯಲ್ಸ್ ತಂಡವು ಶನಿವಾರ (ಇಂದು) ಆರ್‌ಸಿಬಿ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಪಿಂಕ್‌ ಬಣ್ಣದ ವಿಶೇಷ ಜೆರ್ಸಿ ಧರಿಸಿ ಕಣಕ್ಕಿಳಿಯಲಿದೆ. ರಾಜಸ್ಥಾನದ ಮಹಿಳೆಯರ (Rajasthan Women) ಸಬಲೀಕರಣಕ್ಕೆ ನೆರವಾಗುವ ಉದ್ದೇಶವೂ ಇದಾಗಿದೆ. ರಾಜಸ್ಥಾನ್‌ ರಾಯಲ್ಸ್‌ ಮತ್ತು ಆರ್‌ಸಿಬಿ (RR vs RCB) ನಡುವಿನ ಪಂದ್ಯ ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿದೆ. ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದೆ. ಮಹಿಳೆಯರಿಗೆ ನೆರವಾಗುವ ಉದ್ದೇಶದಿಂದ #PinkPromise ಅಭಿಯಾನ ಆರಂಭಿಸಿದೆ. ಏನಿದು ʻಪಿಂಕ್‌ ಪ್ರಾಮಿಸ್‌ʼಅಭಿಯಾನ? ರಾಜಸ್ಥಾನ್‌ ರಾಯಲ್ಸ್‌ ತಂಡವು ಮಹಿಳಾ ಸಬಲೀಕರಣ ಉದ್ದೇಶದಿಂದ ಈ ಅಭಿಮಾನ ಆರಂಭಿಸಿದೆ. ಅದಕ್ಕಾಗಿ ವಿಶೇಷ ಪಿಂಕ್‌ ಜೆರ್ಸಿ ಧರಿಸಿ ಆರ್‌ಸಿಬಿ ವಿರುದ್ಧ ಕಣಕ್ಕಿಳಿಯಲಿದೆ. ಈ ಪಂದ್ಯದ ಪ್ರತಿ ಟಿಕೆಟ್‌ ಬೆಲೆಯಲ್ಲಿ 100 ರೂ.ಗಳನ್ನ ಮಹಿಳಾ ಸಬಲೀಕರಣ ಕಾರ್ಯಕ್ಕೆ ಸಮರ್ಪಿಸಲಿದೆ. ಜೊತೆಗೆ ʻಆಲ್ ಪಿಂಕ್ ರಾಯಲ್ಸ್ʼ ಜೆರ್ಸಿ ಮಾರಾಟದ ಮೊತ್ತವನ್ನೂ ಇದಕ್ಕೆ ವಿನಿಯೋಗಿಸಲಿದೆ. ಅಷ್ಟೇ ಅಲ್ಲದೇ ರಾಜಸ್ಥಾನ-ಆರ್‌ಸಿಬಿ ತಂಡಗಳು ಈ ಪಂದ್ಯದಲ್ಲಿ ಸಿಡಿಸುವ ಪ್ರತಿ ಸಿಕ್ಸರ್‌ಗೆ ಜೈಪುರ ಜಿಲ್ಲೆಯ ಸಂಭರ್…

Read More

ಹುಬ್ಬಳ್ಳಿ: ನನ್ನ ವಿರುದ್ದ ಪ್ರತಿ ಚುನಾವಣೆಯಲ್ಲಿ ಷಡ್ಯಂತ್ರ ನಡೆದಿದೆ. ಪ್ರತಿ ಸಾರಿ ಷಡ್ಯಂತ್ರ ಮೀರಿ ನನಗೆ ಜನ ಆಶೀರ್ವಾದ ಮಾಡಿದ್ದಾರೆ. ಈ ಬಾರಿಯೂ ಜನರು ನನಗೆ ಆಶೀರ್ವಾದ ಮಾಡುತ್ತಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಸಾರಿ ಚುನಾವಣೆಯಲ್ಲಿ ಷಡ್ಯಂತ್ರ ನಡೆಸಿದರೂ ಸಹ ಜನ ನನಗೆ ಆಶೀರ್ವಾದ ಮಾಡಿದ್ದಾರೆ. ಕಾಂಗ್ರೆಸ್ ಕಳೆದ ಬಾರಿ ಪಿಎಂ ಅಭ್ಯರ್ಥಿಯಾಗಿ ನ್ಯಾಯ ಅಂತ ರಾಹುಲ್ ಗಾಂಧಿ ಘೋಷಣೆ ಮಾಡಿದ್ದರು. ಘೋಷಣೆ ಮಾಡಿ ಇವರು ಯಾವತ್ತೂ ನ್ಯಾಯ ಕೊಟ್ಟಿಲ್ಲ ಎಂದು ದೂರಿದರು. https://ainlivenews.com/let-bangalore-director-kempegowdas-movie-come-to-the-screen-who-is-directing/ ಕಾಂಗ್ರೆಸ್’ನವರು ಭ್ರಷ್ಟಾಚಾರ ಮಾಡಿದ್ದರು. ಇವರು ಬಡವರಿಗೆ ಏನೂ ಕೊಟ್ಟಿಲ್ಲ. ಇವರೇನು ಮಾಡಿದ್ರು ಜನ ಇವರನ್ನು ನಂಬಲ್ಲ. ಅಧಿಕಾರಕ್ಕೆ ಬರಲ್ಲ ಅನ್ನೋ ಕಾರಣಕ್ಕೆ ಕಾಂಗ್ರೆಸ್ ತನ್ನ ಪ್ರಾಣಾಳಿಕೆಯಲ್ಲಿ ಬೇಕಾಬಿಟ್ಟಿಯಾಗಿ ಘೋಷಣೆ ಮಾಡತ್ತಿದ್ದಾರೆ ಎಂದರು. ಪುಲ್ವಾಮಾ ದಾಳಿ, ಅಕ್ಕಿ ಬಗ್ಗೆ ಮಾತಾಡಿದಾಗ ನನಗೆ ಕನಿಕರ ಉಂಟಾಗತ್ತೆ. ಪುಲ್ವಾಮಾ ದಾಳಿ ವೇಳೆ ಅಭಿನಂದನ್ ಸಿಕ್ಕಿ ಹಾಕಿಕೊಂಡಾಗ ಕಾಂಗ್ರೆಸ್ ಗೆ…

Read More

ನವದೆಹಲಿ: ಭಯೋತ್ಪಾದಕರನ್ನು ಯಾವುದೇ ಕಾರಣಕ್ಕೂ ಸುಮ್ಮನೆ ಬಿಡಲ್ಲ. ಪಾಕಿಸ್ತಾನಕ್ಕೆ ನುಗ್ಗಿಯಾದರೂ ಸರಿ ಅವರನ್ನು ಕೊಲ್ಲುವುದಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅವರು ಎಚ್ಚರಿಕೆ ನೀಡಿದ್ದಾರೆ. ಟಿವಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ರಕ್ಷಣಾ ಸಚಿವರು, ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಪ್ರಯತ್ನಿಸಿದ ನಂತರ ಗಡಿಯಾಚೆ ಪಲಾಯನ ಮಾಡುವವರನ್ನು ನಿರ್ಮೂಲನೆ ಮಾಡಲು ಭಾರತವು ಪಾಕಿಸ್ತಾನದೊಳಗೆ (India- Pakistan) ಪ್ರವೇಶಿಸಲಿದೆ. ಯಾವುದೇ ಭಯೋತ್ಪಾದಕನನ್ನು ಬಿಡುವುದಿಲ್ಲ, ಮನೆಗೆ ನುಗ್ಗಿ ಅವನನ್ನು ಕೊಲ್ಲುತ್ತೇವೆ. ದೇಶದ ಶಾಂತಿ ಕದಡಲು ಯತ್ನಿಸಿದರೆ ಅದಕ್ಕೆ ತಕ್ಕ ಉತ್ತರ ನೀಡುತ್ತೇವೆ ಎಂದು ತಿಳಿಸಿದ್ದಾರೆ. https://ainlivenews.com/let-bangalore-director-kempegowdas-movie-come-to-the-screen-who-is-directing/ ಭಾರತವು ತನ್ನ ನೆರೆಹೊರೆಯವರೊಂದಿಗೆ ಸೌಹಾರ್ದಯುತ ಸಂಬಂಧವನ್ನು ಕಾಪಾಡಿಕೊಳ್ಳಲು ಬಯಸುತ್ತದೆ.  ನಮ್ಮ ಇತಿಹಾಸವನ್ನು ನೋಡಿ. ನಾವು ಯಾವುದೇ ದೇಶದ ಮೇಲೆ ದಾಳಿ ಮಾಡಿಲ್ಲ ಅಥವಾ ಯಾವುದೇ ದೇಶದ ಭೂಪ್ರದೇಶದ ಒಂದು ಇಂಚು ಕೂಡ ಆಕ್ರಮಿಸಿಕೊಂಡಿಲ್ಲ. ಇದು ಭಾರತದ ಲಕ್ಷಣವಾಗಿದೆ. ಆದರೆ ಯಾರಾದರೂ ನಮ್ಮ ನೆಲದಲ್ಲಿ ಭಯೋತ್ಪಾದನೆಯನ್ನು ಹರಡುವ ಮೂಲಕ ಭಾರತವನ್ನು ಹೆದರಿಸಲು ಪ್ರಯತ್ನಿಸಿದರೆ, ಅವರನ್ನು ಯಾವುದೇ ಕಾರಣಕ್ಕೂ…

Read More

ಮೈಸೂರು: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳಲ್ಲಿ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಈಗಾಗಲೇ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಅಂತೆಯೇ ಮೈಸೂರು ಪ್ರಚಾರ ಕಣದಲ್ಲಿ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಬಿಜೆಪಿ ಅಭ್ಯರ್ಥಿ ಯದುವೀರ್ ವಿರುದ್ಧ ಟೀಕೆ ಮಾಡಿದ್ದಾರೆ. ಪ್ರಚಾರ ಭಾಷಣದಲ್ಲಿ ಯತೀಂದ್ರ (Dr. Yathindra Siddaramaiah) ಅವರು, ಬಿಜೆಪಿ ಅಭ್ಯರ್ಥಿ ರಾಜ ಮನೆತನದವರು. ದಂತದ ಗೋಪುರದಲ್ಲಿ ಇದ್ದಂತವರು. ಅವರಿಗೆ ಯಾವತ್ತೂ ಜನರ ಮಧ್ಯೆ ಇದ್ದು ಗೊತ್ತಿಲ್ಲ. ಅವರಿಗೆ ಜನರ ಸಮಸ್ಯೆಗಳು ಏನೂ ಅಂತ ಗೊತ್ತಿಲ್ಲ. ನೀವ್ಯಾರು ಅರಮನೆ ಮುಂದೆ ಹೋಗಿ ನಿಂತುಕೊಳ್ಳಲು ಆಗಲ್ಲ. ಕಾರ್ಯಕರ್ತರೇ ಹೋಗಿ ಭೇಟಿ ಮಾಡೊಕೆ ಆಗಲ್ಲ. https://ainlivenews.com/let-bangalore-director-kempegowdas-movie-come-to-the-screen-who-is-directing/ ಇನ್ನು ಜನಸಾಮಾನ್ಯರು ಭೇಟಿ ಮಾಡಲು ಸಾಧ್ಯವಾ ಎಂದು ಪ್ರಶ್ನಿಸುವ ಮೂಲಕ ಟೀಕಿಸಿದ್ದಾರೆ. ಅಂದು ಬಿಜೆಪಿ ಅಭ್ಯರ್ಥಿ ಯಾರು ಎಂದು ಗೊತ್ತಿಲ್ಲ ಅಂತಾ ಕಾಂಗ್ರೆಸ್ (Congress) ಸಚಿವ ಕೆ.ವೆಂಕಟೇಶ್ ಹೇಳಿದ್ದರು. ಇಂದು ಬಿಜೆಪಿ ಅಭ್ಯರ್ಥಿಗಿಂತಲೂ ನಮ್ಮ ಅಭ್ಯರ್ಥಿ ಎಂ.ಲಕ್ಷ್ಮಣ್ (M. Laxman) ಉತ್ತಮ ಎಂದು ಸಿಎಂ…

Read More