Author: AIN Author

ಚಿಕ್ಕಬಳ್ಳಾಪುರ:- ಎಂದೂ ನಾನು ರಾಜಕೀಯ ಜಾತಿ ಮಾಡಿದವನಲ್ಲ ಎಂದು ಹೇಳಿ ಮಾಜಿ ಸಚಿವ ಕೆ ಸುಧಾಕರ್ ಬಿಕ್ಕಿ-ಬಿಕ್ಕಿ ಕಣ್ಣೀರು ಹಾಕಿದ್ದಾರೆ. https://ainlivenews.com/dont-cheat-manjunath-like-you-did-to-nikhil/ ನಾನು ಎಂದೂ ರಾಜಕೀಯ ಜಾತಿ ಮಾಡಿದವನಲ್ಲ. ನನ್ನನ್ನ ಜಾತಿಯಿಂದ ನೋಡಬೇಡಿ. ಎಲ್ಲ ಸಮುದಾಯಗಳನ್ನ ನಾನು ಸಮನಾಗಿ ಕಾಣುತ್ತೇನೆ ಅಂತ ಭಗವಂತನ ಮೇಲೆ ಪ್ರಮಾಣ ಮಾಡುತ್ತೇನೆ ಎಂದರು. ಮಣ್ಣಿನ ಮಗನಾಗಿ ನನಗೆ ಮತ್ತೊಮ್ಮೆ ಸೇವೆ ಮಾಡಲು ಅವಕಾಶ ಮಾಡಿಕೊಡಿ. ನನ್ನನ್ನು ದೂರ ಮಾಡಿದ್ದೀರಿ. 10 ತಿಂಗಳಿಂದ ನಾನು ಅಜ್ಞಾತವಾಸ ಅನುಭವಿಸಿದ್ದೇನೆ. ನಾನೇನು ತಪ್ಪು ಮಾಡಿಲ್ಲ, ನಿಮ್ಮ ಸೇವೆಯನ್ನ ಮಗನಾಗಿ ಮಾಡುತ್ತೇನೆ. ಮತ್ತೊಮ್ಮೆ ಅವಕಾಶ ಕೊಡಿ ಅಂತ ಭಾವುಕರಾಗಿ ಕಣ್ಣೀರಿಟ್ಟರು ಬಳಿಕ ಮಾತನಾಡಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್- ಬಿಜೆಪಿ ಮೈತ್ರಿ ನಮ್ಮ ಸ್ವಾರ್ಥಕ್ಕಾಗಿ ಅಲ್ಲ. ಸುಧಾಕರ್ ಹಾಗೂ ನಾನು ಸೇರಿ ಬಯಲುಸೀಮೆಗೆ ಶಾಶ್ವತ ನೀರಾವರಿ ಯೋಜನೆಗಳನ್ನ ತರುತ್ತೇವೆ. ಇಲ್ಲವಾದಲ್ಲಿ ನಾವು ರಾಜಕೀಯದಿಂದಲೇ ನಿವೃತ್ತಿ ಆಗುತ್ತೇವೆ ಅಂತ ಸಾವಲು ಹಾಕಿದರು.

Read More

ರಾಮನಗರ:- ನಿಖಿಲ್ ಗೆ ಮಾಡಿದಂತೆ ಮಂಜುನಾಥ ಗೆ ಮೋಸ ಮಾಡ್ಬೇಡಿ ಎಂದು ರಾಮನಗರ ಜನತೆಗೆ ಮುನಿರತ್ನ ಮನವಿ ಮಾಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮುಗ್ದ ಯುವಕನನ್ನ 5 ಸಾವಿರದ ಗಿಫ್ಟ್ ಕಾರ್ಡ್ ಕೊಟ್ಟು ಸೋಲಿಸಿದರು. ಆ ದೇವರು ನಿಮ್ಮನ್ನ ಕ್ಷಮಿಸಲ್ಲ. ಆ ಪಾಪಕ್ಕೆ ಪ್ರಾಯಶ್ಚಿತ್ತ ಆಗಬೇಕು ಅಂದ್ರೆ ಮಂಜುನಾಥ್‌ ಅವರನ್ನ ಗೆಲ್ಲಿಸಬೇಕು ಅಂತಾ ಜನತೆಗೆ ಕರೆ ನೀಡಿದ್ದಾರೆ https://ainlivenews.com/let-the-government-pay-drought-relief-from-its-treasury-and-show-the-man/ ಡಾ.ಮಂಜುನಾಥ್ ಅವರು 75 ಲಕ್ಷ ಆಪರೇಷನ್ ಮಾಡಿದ್ದಾರೆ. ಆರೋಗ್ಯ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ್ದಾರೆ. ಇವರ ಸ್ಪರ್ಧೆಯಿಂದ ಇಲ್ಲಿ ಅಣ್ಣತಮ್ಮಂದಿರ ಹೃದಯ ಬಡಿತ ಜಾಸ್ತಿ ಆಗಿದೆ. ಹೆಂಗೋ ಕುಕ್ಕರು, ತವ ಕೊಟ್ಟು ಗೆಲ್ತಿದ್ವಿ, ಈಗ ಡಾಕ್ಟರ್‌ ವಕ್ಕರಿಸಕೊಂಡ್ರು ಅಂತ ಟೆನ್ಷನ್ ಮಾಡಿಕೊಂಡಿದ್ದಾರೆ. ಧರ್ಮಸ್ಥಳದ ಮಂಜುನಾಥ ನಂತೆ ನಮ್ಮ ಡಾ.ಮಂಜುನಾಥ್. 91 ವರ್ಷ ವಯಸ್ಸಿನ ದೇವೆಗೌಡರ ಮಾತುಕೇಳಿದ್ರೆ ಮೈ ರೋಮಾಂಚನ ಆಗುತ್ತೆ. ಸಿದ್ದರಾಮಯ್ಯಗೆ ಜನತಾದಳ ಇರೋದನ್ನ ತೋರಿಸುತ್ತೇನೆ ಅಂತಾ ಎಚ್ಚರಿಸುತ್ತಾರೆ. ಅದಕ್ಕೆ ಕಾರಣ ರಾಮನಗರದ ಜನ. ಮಂಜುನಾಥ್‌ರಿಗೆ ವೋಟ್‌…

Read More

ಹಾವೇರಿ: ರಾಜ್ಯ ಸರ್ಕಾರ ತನ್ನ ಖಜಾನೆಯಿಂದ ಬರ ಪರಿಹಾರ ಬಿಡುಗಡೆ ಮಾಡಿ ತನ್ನ ಗಂಡಸ್ತನ ತೋರಿಸಲಿ, ನಾವು ಅಧಿಕಾರದಲ್ಲಿದ್ದಾಗ ಪ್ರವಾಹಕ್ಕೆ ಎರಡು ಪಟ್ಟು ಪರಿಹಾರ ನೀಡಿ ನಮ್ಮ ಗಂಡಸ್ತನ ತೋರಿಸಿದ್ದೇವೆ‌ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. https://ainlivenews.com/yatnals-explosive-statement-about-eshwarappa/#google_vignette ಹಾನಗಲ್ ತಾಲೂಕು ಆಡೂರು ಗ್ರಾಮದಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಮುಂದೆ ಬರಗಾಲದ ಬಗ್ಗೆ ಮಾತನಾಡಲು ಒಬ್ಬೇ ಒಬ್ಬ ಬಿಜೆಪಿ ನಾಯಕರು ಗಂಡಸರಾಗಿ ನಿಂತಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಅವರು, ನೋಡಿ, ಈಗ ಸದ್ಯ ಗಂಡಸ್ಥನ ಟೆಸ್ಟ್ ಆಗೋದು ಯಾರು ಅಧಿಕಾರದಲ್ಲಿದ್ದಾರೆ ಅವರದ್ದು, ಸಿದ್ದರಾಮಯ್ಯರನ್ನು ಜನ ಅಧಿಕಾರಕ್ಕೆ ತಂದಿದ್ದಾರೆ. ಅಧಿಕಾರಕ್ಕೆ ತಂದ ಮಾಲೀಕರು ಕಷ್ಟದಲ್ಲಿದ್ದಾರೆ. ಅವರ ಕಷ್ಟಕ್ಕೆ ಧಾವಿಸುವುದು ಅವರ ಕೆಲಸ. ನಮ್ಮ ಅವಧಿಯಲ್ಲಿ ಪ್ರವಾಹ ಬಂದಾಗ ಯಾರಿಗೂ ಕಾಯದೇ ಪ್ರವಾಹ ಪರಿಹಾರ ಎರಡು ಪಟ್ಟು ಬಿಡುಗಡೆ ಮಾಡಿದ್ದೇವೆ. 17 ಲಕ್ಷ ಜನರಿಗೆ…

Read More

ಕಾರವಾರ:- ಮಾಜಿ ಸಚಿವ ಈಶ್ವರಪ್ಪ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. https://ainlivenews.com/ipl-2024-this-time-kkr-says-the-cup-is-namde/#google_vignette ಈಶ್ವರಪ್ಪನವರ ದೆಹಲಿ ಎಪಿಸೋಡ್ ಬಗ್ಗೆ ಮಾತಾಡಿದರು. ಅಮಿತ್ ಶಾ ಯಾಕೆ ಭೇಟಿಯಾಗಿಲ್ಲ ಅನ್ನೋದು ತನಗೆ ಗೊತ್ತಿಲ್ಲ, ಪ್ರಾಯಶಃ ಚುನಾವಣೆ ಕೆಲಸದಲ್ಲಿ ವ್ಯಸ್ತರಾಗಿರಬಹುದು ಎಂದ ಹೇಳಿದ ಅವರು, ಈಶ್ವರಪ್ಪ ಆಡುತ್ತಿರುವ ಮಾತುಗಳನ್ನು ಮತ್ತು ಅವರು ಎತ್ತಿರುವ ಪ್ರಶ್ನೆಗಳನ್ನು ಪಕ್ಷದ ವರಿಷ್ಠರು ಗಂಭೀರವಾಗಿ ಪರಿಗಣಿಸಬೇಕು ಮತ್ತು ಅವುಗಳ ಇತ್ಯರ್ಥಕ್ಕೆ ಮುಂದಾಗಬೇಕು ಎಂದರು ಸಮಸ್ಯೆಗಳನ್ನು ಪಕ್ಷಕ್ಕೆ ಮುಜುಗುರವಾಗದ ಹಾಗೆ ಬಗೆಹರಿಸಿದರೆ ರಾಜ್ಯದಲ್ಲಿ ಎಲ್ಲ 28 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವುದು ಸುಲಭವಾಗುತ್ತದೆ ಎಂದು ಯತ್ನಾಳ್ ಹೇಳಿದರು

Read More

IPL ಸೀಸನ್ 17 ರಲ್ಲಿ KKR ತಂಡ ಆಡಿದ ಮೂರಕ್ಕೆ ಮೂರೂ ಪಂದ್ಯಗಳನ್ನು ಗೆದ್ದು ಬೀಗಿದೆ. ಈ ಮೂರು ಪಂದ್ಯಗಳಲ್ಲೂ ತಂಡ ಆಲ್​ರೌಂಡರ್ ಪ್ರದರ್ಶನ ನೀಡುವ ಮೂಲಕ ಪಂದ್ಯವನ್ನು ಗೆದ್ದುಕೊಂಡಿದೆ. ಇದು ತಂಡದ ಯಶಸ್ಸಿಗೆ ಪ್ರಮುಖ ಕಾರಣವಾಗಿದೆ. https://ainlivenews.com/punjab-won-the-toss-and-chose-to-bowl-gujarat-batting/ ಪ್ರಸ್ತುತ ಕೆಕೆಆರ್ ಇಡೀ ತಂಡವಾಗಿ ಪ್ರದರ್ಶನವನ್ನು ನೀಡುತ್ತಿರುವುದನ್ನು ನೋಡಿದರೆ ಈ ಸಲ ಕಪ್ ಶಾರೂಖ್ ತಂಡಕ್ಕೆ ಎಂದರೆ ತಪ್ಪಾಗಲಾರದು. ಈ ನಡುವೆ ಹೀಗೊಂದು ಕಾಕತಾಳಿಯ ಹುಟ್ಟಿಕೊಂಡಿದ್ದು, ಈ ಬಾರಿ ಕೆಕೆಆರ್ ಚಾಂಪಿಯನ್ ಆಗುವುದು ಖಚಿತ ಎಂದು ಹೇಳಲಾಗುತ್ತಿದೆ. ವಾಸ್ತವವಾಗಿ ಈ ಕಾಕತಾಳೀಯ ತಂಡದ ಮೆಂಟರ್ ಗೌತಮ್ ಗಂಭೀರ್ ಹಾಗೂ ನಾಯಕ ಶ್ರೇಯಸ್ ಅಯ್ಯರ್ ಅವರಿಗೆ ಸಂಬಂಧಿಸಿದ್ದಾಗಿದೆ. ಈ ಕಾಕತಾಳೀಯವನ್ನು ನೋಡಿದರೆ, ಕೆಕೆಆರ್ ಮೂರನೇ ಬಾರಿ ಟ್ರೋಫಿ ಎತ್ತಿ ಹಿಡಿಯಬಹುದು ಎನಿಸುತ್ತಿದೆ. ಹಾಗಾದರೆ ಈ ವಿಶೇಷ ಕಾಕತಾಳೀಯ ಏನು ಎಂಬುದನ್ನು ನೋಡುವುದಾದರೆ… ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಇದುವರೆಗೆ ಎರಡು ಬಾರಿ (2012, 2014) ಐಪಿಎಲ್ ಪ್ರಶಸ್ತಿ ಗೆದ್ದಿದೆ. ಗೌತಮ್ ಗಂಭೀರ್ ನಾಯಕತ್ವದಲ್ಲಿ…

Read More

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ಗುಜರಾತ್ ಟೈಟಾನ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವೆ ಮೊದಲಿಗೆ ಟಾಸ್ ಗೆದ್ದ ಪಂಜಾಬ್ ನಾಯಕ ಶಿಖರ್ ಧವನ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ https://ainlivenews.com/do-you-know-the-total-property-value-of-kumaraswamy/ ಇಂದು, ಐಪಿಎಲ್ 2024 ರ 17 ನೇ ಪಂದ್ಯವು ಗುಜರಾತ್ ಟೈಟಾನ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತೊಮ್ಮೆ ತವರು ನೆಲದಲ್ಲಿ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಮತ್ತೊಂದೆಡೆ ಕಳೆದೆರಡು ಪಂದ್ಯಗಳಲ್ಲಿ ಸೋತಿರುವ ಶಿಖರ್ ಧವನ್ ನೇತೃತ್ವದ ತಂಡ ಮತ್ತೆ ಗೆಲುವಿನ ಹಾದಿಗೆ ಮರಳಲು ಪ್ರಯತ್ನಿಸಲಿದೆ.

Read More

ಮಂಡ್ಯ:- ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಇಂದು ನಾಮಪತ್ರ ಸಲ್ಲಿಸಿದರು. ಉಮೇದುವಾರಿಕೆಯ ಅಫಿಡೆವಿಟ್​​ನಲ್ಲಿ ತಮ್ಮ ಆಸ್ತಿಯನ್ನು ಘೋಷಣೆ ಮಾಡಿದ್ದು, ಕುಮಾರಸ್ವಾಮಿ ಬರೋಬ್ಬರಿ 217.21 ಕೋಟಿ ರೂಪಾಯಿ ಒಡೆಯರಾಗಿದ್ದಾರೆ. https://ainlivenews.com/illegal-child-adoption-case-queen-of-reels-sonu-gowda-granted-bail/ ಕುಟುಂಬದ ಒಟ್ಟು ಚರಾಸ್ತಿ– 102.23 ಕೋಟಿ ರೂ. ಹಾಗೂ ಕುಟುಂಬದ ಒಟ್ಟು ಸ್ಥಿರಾಸ್ತಿ-114.98 ಕೋಟಿ ರೂ. ಒಟ್ಟು 217.21 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ. ವಿಶೇಷ ಅಂದ್ರೆ ಕಳೆದ ವರ್ಷಕ್ಕಿಂತ ಎಚ್​ಡಿಕೆ ಆಸ್ತಿ ಮೌಲ್ಯ 50.07 ಕೋಟಿ ರೂ. ಹೆಚ್ಚಳವಾಗಿದೆ. ಕುಮಾರಸ್ವಾಮಿ ದಂಪತಿ ಕೋಟ್ಯಾಂತರ ರೂ ಮೌಲ್ಯದ ಆಸ್ತಿಯೊಂದಿಗೆ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣ ಹೊಂದಿರುವುದು ವಿಶೇಷ. ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ಬಳಿ ಚಿನ್ನ ಬೆಳ್ಳಿ ಮತ್ತು ವಜ್ರಾಭರಣಗಳು ಸಹ ಇವೆ. ಮೊದಲಿಗೆ ಕುಮಾರಸ್ವಾಮಿಯವರದ್ದು ನೋಡುವುದಾದರೆ, 47 ಲಕ್ಷ ರೂ. ಮೌಲ್ಯದ 750 ಗ್ರಾಂ ಚಿನ್ನಾಭರಣ, 9.62 ಲಕ್ಷ ರೂಪಾಯಿ ಮೌಲ್ಯದ 12.5ಕೆಜಿ ಬೆಳ್ಳಿ ಮತ್ತು 2.60 ಲಕ್ಷ ರೂ.…

Read More

ಬೆಂಗಳೂರು:- ಮಗು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನು ಶ್ರೀನಿವಾಸ್ ಗೌಡಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. https://ainlivenews.com/davangere-inspection-of-sp-vehicles-at-chuck-post/ ಇದೀಗ ಬಿಗ್‌ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡಗೆ ಜಾಮೀನು ಮಂಜೂರು ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಪ್ರಧಾನ ಜಿಲ್ಲಾ ನ್ಯಾಯಾಲಯ ಈ ಕುರಿತಾಗಿ ಆದೇಶ ಹೊರಡಿಸಿದೆ. ಇಂದು ಅಥವಾ ನಾಳೆ ಜೈಲಿನಿಂದ ಸೋನು ಶ್ರೀನಿವಾಸ್ ಗೌಡ ಬಿಡುಗಡೆ ಸಾಧ್ಯತೆ ಇದೆ. ಇನ್ನೂ ಇತ್ತೀಚೆಗೆ ಹೆಣ್ಣು ಮಗುವನ್ನು ಅಕ್ರಮವಾಗಿ ದತ್ತು ಪಡೆದುಕೊಂಡ ಆರೋಪದ ಮೇಲೆ ‘ಬಿಗ್ ಬಾಸ್’ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಅವರನ್ನು ಪೊಲೀಸರು ಬಂಧಿಸಿ, ಕೇಂದ್ರ ಕಾರಾಗೃಹಕ್ಕೆ ಕಳುಹಿಸಿದ್ದರು.

Read More

ದಾವಣಗೆರೆ :-ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿವಿಧ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಕದೇ, ಚೆಕ್ ಪೋಸ್ಟ್ ಗಳಲ್ಲಿ ವಾಹನಗಳನ್ನು ತಪಾಸಣೆ ನಡೆಸಿ ಯಾವುದೇ ವಾಹನಗಳನ್ನು ತಪಾಸಣೆ ನಡೆದಸೇ ಹಾಗೆ ಬಿಡದಂತೆ ಚೆಕ್ ಪೋಸ್ಟ್ ಸಿಬ್ಬಂದಿಗೆ ಸೂಚನೆ ನೀಡಿದತು. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಜೀನಹಳ್ಳಿ ಚೆಕ್ ಪೋಸ್ಟ್ ಹಾಗೂ ಚನ್ನಗಿರಿ ರಸ್ತೆಯ ಚೆಕ್‌ ಪೋಸ್ಟ್ ಗಳಿಗೆ ಬೇಟ ನೀಡಿ ಪರಿಶೀಲಿಸಿದರು. ಯಾವುದೇ ಚುನಾವಣೆ ಅಕ್ರಮಗಳು ನಡೆಯದಂತೆ ಕಟ್ಟುನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ಸೂಚನೆಗಳನ್ನು ನೀಡಿದರು. ಈ ಸಂಧರ್ಭದಲ್ಲಿ ಚನ್ನಗಿರಿ ಡಿವೈಎಸ್ಪಿ ಪ್ರಶಾಂತ್ ಮನ್ನೋಳಿ, ನ್ಯಾಮತಿ ಪೊಲೀಸ್ ಠಾಣೆಯ ಪಿಐ ರವಿ ಹಾಗೂ ಚೆಕ್ ಪೋಸ್ಟ್ ಸಿಬ್ಬಂದಿ ಉಪಸ್ಥಿತರಿದ್ದರು.

Read More

ಹಸಿವಾದಾಗ ಆಹಾರಗಳನ್ನು ಸೇವನೆ ಮಾಡುವುದರಿಂದ ಹೊಟ್ಟೆ ತುಂಬುತ್ತದೆ ಏನೋ ನಿಜ. ಈ ಎಲ್ಲಾ ಆಹಾರಗಳನ್ನು ಒಟ್ಟಿಗೆ ತಿಂದರೆ, ಹುಳಿತೇಗು ಸೇರಿದಂತೆ ಇನ್ನಿತ್ತರ ಸಮಸ್ಯೆಗಳು ಎದುರಾಗುತ್ತದೆ. ಚಹಾದೊಂದಿಗೆ ಈ ಆಹಾರವನ್ನು ಸೇವಿಸಬೇಡಿ:ಕೆಲವರಿಗೆ ಚಹಾದೊಂದಿಗೆ ಏನಾದರೂ ತಿನ್ನುವ ಅಭ್ಯಾಸವಿರುತ್ತದೆ. ಹಾಗಂತ ನಟ್ಸ್‌, ಹಸಿರು ಎಲೆಗಳ ತರಕಾರಿಗಳು ಹಾಗೂ ಧಾನ್ಯಗಳಂತಹ ಆಹಾರ ಪದಾರ್ಥಗಳನ್ನು ಮುಟ್ಟಲೇ ಬೇಡಿ. https://ainlivenews.com/soon-bjp-free-from-family-politics-yatnal/ ಅಯೋಡಿನ್ ಭರಿತ ಆಹಾರದೊಂದಿಗೆ ಇದರ ಸೇವನೆ ಆದಷ್ಟು ತಪ್ಪಿಸಿ: ಥೈರಾಯ್ಡ್ ಸಮಸ್ಯೆಯಿರುವವರು ಈ ಎಲೆಕೋಸು, ಹೂಕೋಸು ಹಾಗೂ ಕೋಸುಗಡ್ಡೆಯನ್ನು ಅಯೋಡಿನ್ ಭರಿತ ಆಹಾರಗಳೊಂದಿಗೆ ಅಪ್ಪಿ ತಪ್ಪಿಯೂ ಸೇವಿಸಲೇ ಬೇಡಿ. ಸೇವನೆ ಮಾಡಿದರೆ ಥೈರಾಯ್ಡ್ ಗ್ರಂಥಿಯ ಕಾರ್ಯವು ನಿಧಾನವಾಗಿ ಸಮಸ್ಯೆಯು ಅತಿರೇಕಕ್ಕೆ ತಿರುಗುವ ಸಾಧ್ಯತೆಯಿರುತ್ತದೆ. ಬಾದಾಮಿ, ಕಡಲೆಕಾಯಿ, ಸೋಯಾಬೀನ್ ಮತ್ತು ವಾಲ್‌ನಟ್‌ ಗಳಲ್ಲಿ ಫೈಟಿಕ್ ಆಮ್ಲ ಇರುತ್ತವೆ. ಇದನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ಸೇವಿಸುವ ಅಭ್ಯಾಸವಿರಲಿ. ಇಲ್ಲದಿದ್ದರೆ ಈ ಆಹಾರಗಳು ಜೀರ್ಣವಾಗಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ವಿಟಮಿನ್ ಸಿ ಹೇರಳವಾಗಿರುವ ಕಿತ್ತಳೆ, ನಿಂಬೆ ಸೇರಿದಂತೆ ಇನ್ನಿತ್ತರ ಹಣ್ಣುಗಳನ್ನು ಈ…

Read More