Author: AIN Author

ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ (BJP) ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ (Dr.CN Manjunath) ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ನಗರದ ಚಾಮುಂಡೇಶ್ವರಿ ದೇವಾಲಯದಲ್ಲಿ, ಅಶ್ವಥ್ ನಾರಾಯಣ್, ಮುನಿರತ್ನ ಹಾಗೂ ಡಾ.ಮಂಜುನಾಥ್ ಪೂಜೆ ಸಲ್ಲಿಸಿದ್ದಾರೆ. ಬಳಿಕ ನಾಮಪತ್ರ ಸಲ್ಲಿಸಲು ತಡವಾದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಮೆರವಣಿಗೆ ರದ್ದು ಮಾಡಿ ನೇರವಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಮಂಜುನಾಥ್ ಅವರಿಗೆ ಅವರ ಪತ್ನಿ ಅನುಸೂಯ, ಎಮ್.ಕೃಷ್ಣಪ್ಪ ಹಾಗೂ ಚಿಂತಕಿ ಸುಧಾ ಬರಗೂರು ಸಾಥ್ ಕೊಟ್ಟಿದ್ದಾರೆ. ಮೆರವಣಿಗೆ ರದ್ದಾಗಿದ್ದರೂ ಸಾವಿರಾರು ಸಂಖ್ಯೆಯಲ್ಲಿ ಮೈತ್ರಿ ಪಕ್ಷದ ಕಾರ್ಯಕರ್ತರು ಆಗಮಿಸಿ ಮಂಜುನಾಥ್ ಅವರನ್ನು ಬೆಂಬಲಿಸಿದ್ದರು.ಈ ವೇಳೆ ಮಾತನಾಡಿದ ಅವರು, ಕಾರ್ಯಕರ್ತರ ಉತ್ಸಾಹ ನೋಡಿದರೆ, ಗೆಲುವು ಖಚಿತ ಎನ್ನಿಸುತ್ತಿದೆ. https://ainlivenews.com/are-you-wearing-the-same-saree-repeatedly-beware-of-cancer/ ಅಮಿತ್ ಶಾ ಕೂಡಾ ಆಗಮಿಸಿ ನನ್ನ ಪರ ರೋಡ್ ಶೋ ಮಾಡಿದ್ದಾರೆ. ಇದರಿಂದ ನಮ್ಮ ಹೋರಾಟಕ್ಕೆ ಮತ್ತಷ್ಟು ಬಲ ಬಂದಿದೆ. ಎರಡೂ ಪಕ್ಷಗಳ ಕಾರ್ಯಕರ್ತರ ಹೃದಯ ಒಂದಾಗಿದೆ. ನನ್ನ ಗೆಲುವಿಗಾಗಿ ಎರಡೂ ಪಕ್ಷದ ಕಾರ್ಯಕರ್ತರು…

Read More

ಮೈಸೂರು: ಕಳೆದ ಕೆಲ ದಿನಗಳಿಂದ ಸೈಲೆಂಟ್ ಆಗಿದ್ದ ಪ್ರತಾಪ್ ಸಿಂಹ ಮತ್ತೆ ಗುಡುಗಿದ್ದಾರೆ. ಪ್ರತಾಪ್ ಸಿಂಹಗೆ ಹೆಚ್.ಡಿ.ದೇವೇಗೌಡ್ರು ಟಿಕೆಟ್ ತಪ್ಪಿಸಿದ್ರು ಎಂಬ ಸಚಿವ ಕೆ.ವೆಂಕಟೇಶ್ ಹೇಳಿಕೆಗೆ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು, “ಅನ್ನ ತಿನ್ನುವಂತಹ ಬಾಯಿಯಲ್ಲಿ ಏನೇನೋ ಮಾತನಾಡಬೇಡಿ. ಹೇಳಿಕೆ ನೋಡಿ ವೆಂಕಟೇಶ್ ಅವರ ಮೇಲಿದ್ದ ಗೌರವ ಮರೆಯಾಗಿದೆ” ಎಂದು ಅವರು ಗುಡುಗಿದ್ದಾರೆ. “ದೇವೇಗೌಡರಿಗೆ ನಾಯಕರನ್ನು ಬೆಳೆಸಿ ಗೊತ್ತೆ ಹೊರತು, ತುಳಿದು ಗೊತ್ತಿಲ್ಲ. ನಿಮ್ಮನ್ನ ರಾಜಕೀಯವಾಗಿ ಬೆಳೆಸಿ ಶಕ್ತಿ ತುಂಬಿದ್ದು HDD, ಮರೆಯಬೇಡಿ. ನನಗೆ ಟಿಕೆಟ್ ಕೊಡಿಸಬೇಕು ಎಂದು 1 ಗಂಟೆಗಳ ಕಾಲ ಕಾದು ಅಮಿತ್ ಶಾ ಅವರ ಜೊತೆ ಫೋನ್ನಲ್ಲಿ ಮಾತನಾಡಿದ್ದು ದೇವೇಗೌಡರು. ನನಗೆ ಟಿಕೆಟ್ ಕೊಡಿ ಎಂದು ಕೇಳಿದವರಲ್ಲಿ ದೇವೇಗೌಡರು ಪ್ರಮುಖರು, ಅಂತಹ ವ್ಯಕ್ತಿ ನನಗೆ ಟಿಕೆಟ್ ತಪ್ಪಿಸುತ್ತಾರೆ ಅಂತ ಹೇಳಿದರೆ ಹೇಗೆ..? ವೆಂಕಟೇಶ್ ಅವರು ಇಂತಹ ಹೇಳಿಕೆ ಕೊಡುವುದನ್ನು ನಿಲ್ಲಿಸಬೇಕು ಎಂದು ಪ್ರತಾಪ್ ಸಿಂಹ ಕಿಡಿಕಾರಿದರು. https://ainlivenews.com/are-you-wearing-the-same-saree-repeatedly-beware-of-cancer/ “ಕಾಂಗ್ರೆಸ್ ನವರು ಮೊದಲು…

Read More

ಹುಬ್ಬಳ್ಳಿ: ಸೋಲಿನ ಭೀತಿಯಿಂದ ಸಿದ್ದರಾಮಯ್ಯ ರಾಜಕೀಯ ನಿವೃತ್ತಿಯ ಮಾತನಾಡುತ್ತಿದ್ದಾರೆ. ಅಮಿತ್ ಶಾ ಸತ್ಯ ಹೇಳಿದ್ರೆ ರಾಜಕೀಯ ನಿವೃತ್ತಿ ಪಡೆಯೋದಾಗಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು. ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿದ್ಧರಾಮಯ್ಯ ಅವರಿಗೆ ಸೋಲಿನ‌ಭೀತಿ ಎದುರಾಗಿದೆ. ಹೀಗಾಗಿ ಈ ರೀತಿ ಮಾತನಾಡುತ್ತಿದ್ದಾರೆ. ಬರ ಪರಿಹಾರದ ವಿಚಾರದಲ್ಲಿ ವಿನಾಕಾರಣ ಕಾಂಗ್ರೆಸ್ ಆರೋಪ ಮಾಡ್ತಿದೆ. ಕಾಂಗ್ರೆಸ್ ಪಕ್ಷ ಸದಾಕಾಲ ಸುಳ್ಳು ಹೇಳುತ್ತಲೇ ಬಂದಿದೆ ಎಂದರು. “ಎನ್ ಡಿ ಆರ್ ಎಫ್ ನಲ್ಲಿ 75 ಪರ್ಸೆಂಟ್ ದುಡ್ಡು ಕೊಡುತ್ತೇವೆ. ಇವರು ಹೇಗೆ ಖರ್ಚು ಮಾಡ್ತಾರೋ ಹಾಗೆ ದುಡ್ಡು ಕೊಡ್ತಾ ಹೋಗ್ತಿವಿ. ಹಿಂದೆ ಯಡಿಯೂರಪ್ಪ ಸರ್ಕಾರವಿದ್ದಾಗಲು ಮನೆ ಬಿದ್ದವರಿಗೆ 5 ಲಕ್ಷ, ಎಕೆರೆಗೆ 5 ಸಾವಿರ ಪರಿಹಾರ ನೀಡಿದ್ದೆವು. https://ainlivenews.com/are-you-wearing-the-same-saree-repeatedly-beware-of-cancer/ ಆದ್ರೆ ಕಾಂಗ್ರೆಸ್ ಸರ್ಕಾರ ಯಾಕೆ ಬರ‌ಪರಿಹಾರ ವಿಚಾರದಲ್ಲಿ‌ ಸುಳ್ಳು ಹೇಳುತ್ತಿದೆ..? ನೀತಿ ಸಂಹಿತೆ ಮುಗಿದ ನಂತರ ಎಲ್ಲ ವಿಚಾರದ ಕುರಿತು ಸ್ಪಷ್ಟಪಡಿಸುತ್ತೇವೆ” ಎಂದು ಅವರು ಹೇಳಿದರು. “ಮೋದಿಯವರನ್ನು ದೇಶದ ಜನ ಈಗಾಗಲೇ…

Read More

ಬೆಂಗಳೂರು:  ಲೋಕಸಭಾ ಚುನಾವಣಾ ಕಣ ರಂಗೇರಿದ್ದು, ಇಂದು(ಏ.04) ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅದರಂತೆ ಈ ಬಾರಿ ಹೈವೋಲ್ಟೇಜ್​ ಕ್ಷೇತ್ರವಾಗಿರುವ ಬೆಂಗಳೂರು ಗ್ರಾಮಾಂತರದಿಂದ ಎನ್​ಡಿಎ ಅಭ್ಯರ್ಥಿ ಅಭ್ಯರ್ಥಿ ಡಾ.‌ಸಿ.ಎನ್ ಮಂಜುನಾಥ್ (Dr C N Manjunath) ಅವರು ಇಂದು 11:30 ಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಹೌದು, ಬೆಳಿಗ್ಗೆ 10 ಗಂಟೆಗೆ ರಾಮನಗರ‌ದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಲಿದರು https://ainlivenews.com/what-did-ks-eshwarappa-say-after-coming-from-delhi/ ಮೊದಲು ರಾಮನಗರಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನದಲ್ಲಿ (Chamundeshwari temple) ಪೂಜೆ ಸಲ್ಲಿಸಿದರು. ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ಮನಸ್ಸು ಮತ್ತು ಹೃದಯಗಳು ಒಂದಾಗಿವೆ, ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು. ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸುಮಾರು 6.75 ಲಕ್ಷ ಮತ ಗಳಿಸಿದ ಶಾಸಕ ಡಾ ಅಶ್ವಥ್ ನಾರಾಯಣ ಅವರೊಂದಿಗೆ ಎಲ್ಲ 8 ವಿಧಾನಸಭಾಅ ಕ್ಷೇತ್ರಗಳ ಕಾರ್ಯಕರ್ತರೊಂದಿಗೆ ಸಭೆ ನಡೆಸಲಾಗಿದೆ, ಎಲ್ಲ ಕಡೆ ಅತ್ಯುತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಮೊನ್ನೆ ಪಕ್ಷದ ವರಿಷ್ಠರಾದ…

Read More

ತೆಲುಗು ನಟ ನಿಖಿಲ್ ಸಿದ್ದಾರ್ಥ್ ನಟಿಸುತ್ತಿರುವ ಕ್ರೇಜಿ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಸ್ವಯಂಭು ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಸಹಸ್ರಮಾನಗಳ ಹಿಂದಿನ ಕಥೆಯನ್ನೊಳಗೊಂಡಿರುವ ಈ ಚಿತ್ರದ ಮೂಲಕ ವಜ್ರಕಾಯದ ಪಟಾಕ ಕಂಬ್ಯಾಕ್ ಮಾಡುತ್ತಿದ್ದಾರೆ. ಕನ್ನಡತಿ ನಭಾ ನಟೇಶ್ಗೆ 2023ರಲ್ಲಿ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಈ ವೇಳೆ ಅವರು ಸರ್ಜರಿಗೂ ಒಳಗಾಗಬೇಕಾಯಿತು. ಈಗ ಸಂಪೂರ್ಣ ಚೇತರಿಕೆ ಕಂಡಿರುವ ಶೃಂಗೇರಿ ಸುಂದರಿ ಸ್ವಯಂಭು ಸಿನಿಮಾ ಮೂಲಕ ಬಣ್ಣದ ಲೋಕದಲ್ಲಿ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡುತ್ತಿದ್ದಾರೆ. ಸ್ವಯಂಭು ಶೂಟಿಂಗ್ ಅಖಾಡಕ್ಕೆ ನಭಾ ಎಂಟ್ರಿ ಕೊಟ್ಟಿದ್ದಾರೆ. ಸಣ್ಣ ಝಲಕ್ ಮೂಲಕ ಚಿತ್ರತಂಡ ಆಕೆಯನ್ನು ಚಿತ್ರಪ್ರೇಮಿಗಳಿಗೆ ಪರಿಚಯಿಸಿದೆ. ರಾಣಿಯಂತೆ ಕಂಗೊಳಿಸುತ್ತಿರುವ ನಭಾ ಲುಕ್ ರಿವೀಲ್ ಮಾಡಲಾಗಿದೆ. ಆದ್ರೆ ಪಾತ್ರದ ಬಗ್ಗೆ ಚಿತ್ರತಂಡ ಗುಟ್ಟುಬಿಟ್ಟುಬಿಟ್ಟುಕೊಟ್ಟಿಲ್ಲ. ಶಿವಣ್ಣ ನಟನೆಯ ವಜ್ರಕಾಯ ಚಿತ್ರದ ಮೂಲಕ ಸಿನಿಮಾ ಲೋಕದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದ ನಭಾ, ಪೂರಿ ಜಗನ್ನಾಥ್ ನಿರ್ದೇಶನದ ಇಸ್ಮಾರ್ಟ್ ಶಂಕರ್ ಮೂಲಕ ಪ್ರಖ್ಯಾತಿ ಗಳಿಸಿದರು. ನಿಖಿಲ್ ನಾಯಕನಟನಾಗಿರುವ ಸ್ವಯಂಭು ಸಿನಿಮಾದಲ್ಲಿ ಸಂಯುಕ್ತ ಮೆನನ್ ನಾಯಕಿಯಾಗಿ…

Read More

ತಿರುವನಂತಪುರಂ: ವಯನಾಡ್ ಲೋಕಸಭಾ ಕ್ಷೇತ್ರಕ್ಕೆ (Wayanad) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ನಾಮಪತ್ರ ಸಲ್ಲಿಸಿದ್ದಾರೆ. ಇದೇ ವೇಳೆ 9.24 ಕೋಟಿ ರೂ. ಆಸ್ತಿ ಘೋಷಿಸಿ ಕೊಂಡಿದ್ದಾರೆ. ನಾಮಿನೇಷನ್‌ಗಾಗಿ ಚುನಾವಣಾಧಿಕಾರಿಯ ಮುಂದೆ ಸಲ್ಲಿಸಿದ ಚುನಾವಣಾ ಅಫಿಡವಿಟ್‌ನಲ್ಲಿ, ರಾಹುಲ್ ಗಾಂಧಿ 2022-23 ರ ಹಣಕಾಸು ವರ್ಷದಲ್ಲಿ 1.02 ಕೋಟಿ ರೂಪಾಯಿ ಆದಾಯವನ್ನು ಘೋಷಿಸಿದ್ದಾರೆ. ಬಾಡಿಗೆ, ಸಂಸದರ ವೇತನ, ರಾಯಲ್ಟಿ ಆದಾಯ, ಬ್ಯಾಂಕ್‌ಗಳಿಂದ ಬಡ್ಡಿ, ಬಾಂಡ್‌ಗಳು, ಡಿವಿಡೆಂಡ್ ಮತ್ತು ಮ್ಯೂಚುವಲ್ ಫಂಡ್‌ಗಳು ಮತ್ತು ಷೇರುಗಳಿಂದ ಬಂಡವಾಳದ ಲಾಭವನ್ನು ಪಡೆಯುತ್ತಾರೆ ಎಂದು ಅಫಿಡವಿಟ್ ಹೇಳಿದೆ. ಮಾರ್ಚ್ 15 ರ ವೇಳೆಗೆ ತಮ್ಮ ಕೈಯಲ್ಲಿ 55,000 ರೂಪಾಯಿ ನಗದು, ಉಳಿತಾಯ ಖಾತೆಯಲ್ಲಿ 26 ಲಕ್ಷ ರೂಪಾಯಿ ಇದೆ ಎಂದು ರಾಹುಲ್ ಗಾಂಧಿ ಅಫಿಡವಿಟ್‌ನಲ್ಲಿ ಉಲ್ಲೇಖಿಸಿದ್ದಾರೆ. https://ainlivenews.com/are-you-wearing-the-same-saree-repeatedly-beware-of-cancer/ ಕಾಂಗ್ರೆಸ್ ಸಂಸದ ಈಕ್ವಿಟಿ ಷೇರುಗಳಲ್ಲಿ 4.33 ಕೋಟಿ ರೂ. ಹೂಡಿಕೆ ಮಾಡಿದ್ದರೆ, 3.81 ಕೋಟಿ ರೂ. ಮ್ಯೂಚುವಲ್ ಫಂಡ್‌ಗಳಲ್ಲಿ ಹೂಡಿಕೆ ಮಾಡಿದ್ದಾರೆ. ವಾಣಿಜ್ಯ ಕಟ್ಟಡಗಳು, ಕೃಷಿಯೇತರ ಮತ್ತು ಕೃಷಿ…

Read More

ಬೆಂಗಳೂರು: ರಾಜ್ಯದಲ್ಲಿ ಯಡಿಯೂರಪ್ಪ ಕುಟುಂಬ ರಾಜಕಾರಣ ಕೊನೆಯಾಗಬೇಕು ಎಂದು ಶಿವಮೊಗ್ಗ ಪಕ್ಷೇತರ ಅಭ್ಯರ್ಥಿ  ಕೆ.ಎಸ್​ ಈಶ್ವರಪ್ಪ ಹೇಳಿದ್ದಾರೆ. ಕೆಂಪೇಗೌಡ ಏರ್ಪೋಟ್​ನಲ್ಲಿ ಮಾತನಾಡಿದ ಅವರು, ಅಮಿತ್ ಷಾ ದೆಹಲಿಯಲ್ಲಿ ಬಂದು ಭೇಟಿಯಾಗಿ ಎಂದು ಕರೆದಿದ್ದರು. ಅವರ ಕರೆ ಮೇರೆಗೆ ಹೋಗಿ ಭೇಟಿ ಸಾಧ್ಯವಾಗದೆ ವಾಪಸ್ ಬಂದೆ.ಕರೆದು ಈ ರೀತಿ ಅವಮಾನ ಮಾಡಿದ್ದಾರೆ ಎಂದು ನಾನು ಭಾವಿಸಲ್ಲ. ರಾಜ್ಯ ಬಿಜೆಪಿಯ ಕುಟುಂಬ ರಾಜಕಾರಣವನ್ನು ಪ್ರಶ್ನೆ ಮಾಡಿದ್ದೆ ಹಾಗಾಗಿ ನಮಗೆ ಲೋಕಸಭೆ ಟಿಕೆಟ್ ಸಿಕ್ಕಿಲ್ಲ ಎಂದರು. https://ainlivenews.com/record-temperature-rises-in-silicon-city-bengaluru-how-hot-where/ ಪಕ್ಷೇತರವಾಗಿ ನಿಂತ ನನಗೆ ಶಿವಮೊಗ್ಗದಲ್ಲಿ ಭಾರಿ ಬೆಂಬಲ ವ್ಯಕ್ತವಾಗ್ತಿದೆ.ದೆಹಲಿಯಲ್ಲಿ ಅಮಿತ್ ಷಾ ಭೇಟಿಗೆ ಸಿಗದೇ ಇದ್ದದ್ದು ನನಗೆ ವರವಾಗಿದೆ. ಭೇಟಿಯಾಗಿ ಸ್ಪರ್ದೆ ವಾಪಸ್ ಪಡೆಯಿರಿ ಎಂದಿದ್ದರೆ ನನಗೆ ಹಿನ್ನಡೆ ಆಗ್ತಿತ್ತು.ಈಗ ಪರೋಕ್ಷವಾಗಿ ನೀವು ಸ್ಪರ್ದೆ ಮಾಡಿ ಎಂಬ ಸಂದೇಶ ಕೊಟ್ಟಂಗಿದೆ.ಆದ್ದರಿಂದ ನಾನು ಶಿವಮೊಗ್ಗದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಿಲ್ತೇನೆ ಎಂದರು. ರಾಜ್ಯದಲ್ಲಿ ಬಿಜೆಪಿ ಬಹುಸಂಖ್ಯೆಯಲ್ಲಿ ಗೆಲ್ಲಲಿ,ನಾನು ಶಿವಮೊಗ್ಗದಲ್ಲಿ ಗೆದ್ದು ಹಿಂದುತ್ವದ ರಕ್ಷಣೆಗಾಗಿ ಮೋದಿ ಕೈ ಬಲಪಡಿಸುತ್ತೇನೆ.ರಾಜ್ಯದಲ್ಲಿ ಯಡಿಯೂರಪ್ಪ ಕುಟುಂಬ ರಾಜಕಾರಣ…

Read More

ವಿಜಯಪುರ: ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದ ತೋಟದ ಕೊಳವೆ ಬಾವಿಗೆ (Borewell) ಬಿದ್ದ 2 ವರ್ಷದ ಸಾತ್ವಿಕ್‌ ಕೊನೆಗೆ ಸಾವಿನ ದವಡೆಯಿಂದ ಪಾರಾಗಿದ್ದಾನೆ. 17 ಗಂಟೆಗಳ ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ಕಾರ್ಯಾಚರಣೆ ಯಶಸ್ವಿಯಾಗಿದೆ. ತಲೆ ಕೆಳಗೆ ಬಿದ್ದ ಮಗು ಬದುಕಿ ಉಳಿಯುತ್ತಾ ಎಂಬ ಪ್ರಶ್ನೆ ಎಲ್ಲರನ್ನು ಕಾಡಿತ್ತು. ಆದರೆ ಪವಾಡ ಎಂಬಂತೆ ಸಾತ್ವಿಕ್‌ ಬದುಕಿ ಉಳಿದಿದ್ದು ಅಳುತ್ತಿರುವ ಧ್ವನಿ ಕೇಳಿಸಿದೆ. 20 ಅಡಿ ಆಳದಲ್ಲಿ ಸಿಲುಕಿದ್ದ ಬಾಲಕನ ರಕ್ಷಣೆಗೆ ಕೊಳವೆಬಾವಿ ಪಕ್ಕದಲ್ಲಿ ಸಮಾನಾಂತರವಾಗಿ 2 ಜೆಸಿಬಿ ಬಳಸಿ ಗುಂಡಿಯನ್ನು ತೋಡಲಾಗಿತ್ತು. ಕೊಳವೆ ಬಾವಿಗೆ ಕ್ಯಾಮೆರಾ ಇಳಿಬಿಟ್ಟು ಬಾಲಕನ ಚಲನವಲನ ಗಮನಿಸಲಾಗುತ್ತಿತ್ತು. ಜಿಲ್ಲಾಧಿಕಾರಿ ಟಿ.ಭೂಬಾಲನ್, https://youtube.com/shorts/x_fP6GL7_rc?feature=share ಎಸ್ ಪಿ ಋಷಿಕೇಶ ಸೋನಾವಣೆ, ಉಪ ವಿಭಾಗಾಧಿಕಾರಿ ಅಬೀದ್ ಗದ್ಯಾಳ ಅವರು ಸ್ಥಳದಲ್ಲೇ ಬೀಡು ಬಿಟ್ಟು ಕಾರ್ಯಾಚರಣೆ ಗಮನಿಸಿದ್ದರು. ಸತೀಶ್-ಪೂಜಾ ದಂಪತಿಗೆ ನಾಲ್ಕು ಎಕರೆ ಜಮೀನಿದ್ದು, ನಿಂಬೆ ಮತ್ತು ಕಬ್ಬಿಗೆ ನೀರಿನ ಕೊರತೆ ಎದುರಾಗಿದ್ದ ಹಿನ್ನೆಲೆಯಲ್ಲಿ ಮೊನ್ನೆಯಷ್ಟೇ ಕೊಳವೆ ಬಾವಿ ಕೊರೆಸಿದ್ದರು. ನೀರು ಸಿಕ್ಕಿದ ಹಿನ್ನೆಲೆಯಲ್ಲಿ ಅದನ್ನು…

Read More

ಮಂಡ್ಯ: ಲೋಕಸಭೆ ಚುನಾವಣೆಗೆ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಹೆಚ್ ​ಡಿ ಕುಮಾರಸ್ವಾಮಿ ಅವರು ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯುತ್ತಿದ್ದು, ಇಂದು ನಾಮಪತ್ರ ಸಲ್ಲಿಸಿದ್ದಾರೆ.  ಕಾಂಗ್ರೆಸ್‌ ಪಕ್ಷದ ಒಕ್ಕಲಿಗ ಅಸ್ತ್ರಕ್ಕೆ ದಳಪತಿಗಳು ಪ್ರತ್ಯಸ್ತ್ರ ಸಿದ್ಧಪಡಿಸಿದ್ದು, ಮಂಡ್ಯದಲ್ಲಿ ದೋಸ್ತಿಗಳ ಬೃಹತ್ ಶಕ್ತಿ ಪ್ರದರ್ಶನ ಮಾಡುತ್ತಿದ್ದಾರೆ. ಒಂದೇ ವೇದಿಯಲ್ಲಿ ಒಕ್ಕಲಿಗ, ಲಿಂಗಾಯಿತ, ಮೈಸೂರು ಅರಸರ ಸಮಾಗಮವಾಗುತ್ತಿದೆ. ಮಂಡ್ಯ ಜಿಲ್ಲಾಧಿಕಾರಿಗಳ ಕಛೇರಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ ಇನ್ನೂ  ಮಂಡ್ಯ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ನಾಮಪತ್ರ  ಸಲ್ಲಿಕೆಗೂ ಮುನ್ನ, ಮಂಡ್ಯ ನಗರದ ವಿವಿಧ ದೇಗುಲಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಅಂಬೇಡ್ಕರ್, ಕಾವೇರಿ, ವಿಶ್ವೇಶ್ವರಯ್ಯ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ಮಂಡ್ಯ ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದಾರೆ. ನಾಮಪತ್ರ ಸಲ್ಲಿಕೆ ನಂತರ ಜೆಡಿಎಸ್‌-ಬಿಜೆಪಿ ಮೈತ್ರಿ ಸಮಾವೇಶ ನಡೆಯುತ್ತಿದೆ. ಮಂಡ್ಯ ವಿವಿ ಆವರಣದಲ್ಲಿ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಹಲವು ಸಮುದಾಯದ ಮುಖಂಡರು ಭಾಗಿಯಾಗಲಿದ್ದಾರೆ.

Read More

ತೆಲಂಗಾಣ: ಔಷಧ ತಯಾರಿಕಾ ಘಟಕದಲ್ಲಿ ಬೃಹತ್‌ ಸ್ಫೋಟ ಸಂಭವಿಸಿದ್ದು, 5 ಮಂದಿ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಹೌದು ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಔಷಧ ತಯಾರಿಕಾ ಘಟಕದಲ್ಲಿ ರಿಯಾಕ್ಟರ್ ಸ್ಫೋಟಗೊಂಡ ಪರಿಣಾಮ ಐವರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಇನ್ನೂ ಹಲವರು ಸಿಕ್ಕಿಬಿದ್ದಿದ್ದು, ಅವರನ್ನು ರಕ್ಷಿಸುವ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಿದರು. ಸ್ಫೋಟದ ವೇಳೆ ಕಟ್ಟಡದಲ್ಲಿ ಸುಮಾರು 50 ಮಂದಿ ಇದ್ದರು ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳದಿಂದ ಗೊಂದಲದ ವೀಡಿಯೊಗಳು ಹೊರ ಹೊಮ್ಮಿವೆ, ಇದು ಸ್ಫೋಟದ ಪ್ರಮಾಣವನ್ನು ತೋರಿಸುತ್ತದೆ. https://ainlivenews.com/falling-into-the-tube-well-and-groaning-a-childs-leg-caught-on-camera/ ಔಷಧ ಕಂಪನಿಯಲ್ಲಿನ ರಿಯಾಕ್ಟರ್‌ನಲ್ಲಿ ಸ್ಫೋಟ ಸಂಭವಿಸಿದೆ ಮತ್ತು ಸ್ಫೋಟದ ಪ್ರಭಾವದಿಂದಾಗಿ ಅಲ್ಲೇ ಆಸುಪಾಸಿನಲ್ಲಿ ಕೆಲಸ ಮಾಡುತ್ತಿದ್ದವರು ಕುಸಿದುಬಿದ್ದಿದ್ದಾರೆ. 7 ಮಂದಿ ಸಾವನ್ನಪ್ಪಿರುವ ಕುರಿತು ವರದಿಯಾಗಿದೆ. 30 ಮಂದಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದರು. ಪರಿಹಾರ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Read More