Author: AIN Author

ಬೆಂಗಳೂರು: ವಿದ್ಯುತ್ ಬಳಕೆದಾರರಿಗೆ ಗುಡ್‌ ನ್ಯೂಸ್‌  ಸಿಕ್ಕಿದ್ದು, 100 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಸೋರಿಗೆ ಬಂಪರ್ ಸುದ್ದಿ ಹೊರ ಬಿದ್ದಿದೆ.ಇಂದಿನಿಂದ ಕೆಇಆರ್‌ಸಿ ನೂತನ ವಿದ್ಯುತ್ ಜಾರಿಗೆ ಬರಲಿದ್ದು, ಆ ಮೂಲಕ ನೂತನ ವಿದ್ಯುತ್ ದರ ಪರಿಷ್ಕರಣೆಯಾಗಲಿದೆ. https://ainlivenews.com/increased-heat-in-bangalore-department-of-energy-warns-to-be-alert-send-feedback-side-panels-history-saved-contribute-translation-results-available/ ಕಳೆದ ವರ್ಷ ಆಗಸ್ಟ್‌ 5ರಂದು ಗೃಹಜ್ಯೋತಿ ಯೋಜನೆಗೆ ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿತ್ತು. ವಿದ್ಯುತ್‌ ಪೂರೈಕೆಗಾಗಿ ಬೆಸ್ಕಾಂ 235.07 ಮೆಸ್ಕಾಂ 52.73, ಹೆಸ್ಕಾಂ 82.02, ಜೆಸ್ಕಾಂ 53.46, ಚೆಸ್ಕಾಂ 51.26, ಹುಕ್ಕೇರಿ 1.46 ಕೋಟಿ ರೂ. ಸಹಾಯಧನ ಬಿಡುಗಡೆ ಮಾಡಿತ್ತು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ವಿದ್ಯುತ್‌ ದರ ಪರಿಷ್ಕರಣೆ ಮಾಡಲಿದ್ದು ವಿದ್ಯುತ್​ ದರ ಇಳಿಕೆ ಮಾಡಿದೆ.‌

Read More

ಕೇರಳ: ಲೋಕಸಭಾ ಚುನಾವಣೆಗೆ ಕೇರಳದ ವಯನಾಡಿನ ಕಾಂಗ್ರೆಸ್ ಸಂಸದ ಹಾಗೂ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇಂದು ವಯನಾಡಿನಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.  ನಾಮಪತ್ರ ಸಲ್ಲಿಸುವ ಮುನ್ನ ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿ ಅವರೊಂದಿಗೆ ರೋಡ್ ಶೋ ನಡೆಸಿದರು ಮತ್ತು ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ರಾಹುಲ್ ಗಾಂಧಿ ಅವರ ರೋಡ್ ಶೋನಲ್ಲಿ ಭಾರಿ ಜನಸ್ತೋಮ ಕಂಡುಬಂತು. https://ainlivenews.com/such-students-will-get-rs-12400-per-month-scholarship-apply-today/ ಹೊರಬಿದ್ದ ಚಿತ್ರಗಳಲ್ಲಿ ರಾಹುಲ್ ಗಾಂಧಿ ಅವರ ಬೆಂಗಾವಲು ಪಡೆ ಜನರಿಂದ ಸುತ್ತುವರಿದಿರುವುದು ಕಂಡುಬಂದಿತ್ತು. ವಯನಾಡಿನ ಹಾಲಿ ಸಂಸದ ರಾಹುಲ್ ಗಾಂಧಿ ವಿರುದ್ಧ ಭಾರತೀಯ ಜನತಾ ಪಕ್ಷ ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ಅವರನ್ನು ಕಣಕ್ಕಿಳಿಸಿದೆ. ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (ಎಲ್‌ಡಿಎಫ್) ವಯನಾಡ್‌ನಿಂದ ಭಾರತೀಯ ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕಿ ಅನ್ನಿ ರಾಜಾ ಅವರನ್ನು ಕಣಕ್ಕಿಳಿಸಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ವಯನಾಡ್ ನಿಂದ ಗೆದ್ದಿದ್ದಾರೆ.

Read More

ಬೆಂಗಳೂರು: ಕರ್ನಾಟಕದಲ್ಲಿ ಸಂಚಲನ ಸೃಷ್ಟಿ ಮಾಡಿದ್ದ ಬಿಟ್ ಕಾಯಿನ್ ಪ್ರಕರಣದ (Bit Coin Scam) ಆರೋಪಿ ಶ್ರೀಕಿಗೆ (Sriki) ಈಗ ಗನ್ ಮ್ಯಾನ್ (Gunman) ನೀಡಲಾಗಿದೆ. ಬಿಟ್ ಕಾಯಿನ್ ಹಗರಣದ ತನಿಖೆ ನಡೆಸಲು ಸರ್ಕಾರ ವಿಶೇಷ ತನಿಖಾ ದಳ (SIT) ರಚನೆ ಮಾಡಿತ್ತು. ಎಸ್‌ಐಟಿ ಮುಂದೆ ಸ್ಫೋಟಕ ಮಾಹಿತಿ ನೀಡಿದ್ದ ಶ್ರೀಕಿಗೆ ಈಗ ಕೊಲೆ ಬೆದರಿಕೆ ಇದೆ. ಅಷ್ಟೇ ಅಲ್ಲದೇ ಶ್ರೀಕಿ ಪೊಲೀಸರ ಕೈಯಲ್ಲಿ ಸಿಗದೇ ತಪ್ಪಿಸಿಕೊಂಡು ಓಡಾಡುತ್ತಿರುತ್ತಾನೆ. ಹೀಗಾಗಿ ಎಸ್‌ಐಟಿ ಶ್ರೀಕಿಗೆ ಗನ್ ಮ್ಯಾನ್ ನೀಡಿದೆ. https://ainlivenews.com/man-commits-suicide-in-front-of-high-court-chief-justice/ ವಿಧಾನಸಭಾ ಚುನಾವಣೆಯಲ್ಲಿ (Vidhan Sabha Election) ಬಿಟ್‌ ಕಾಯಿನ್‌ ಹಗರಣ ರಾಜ್ಯದಲ್ಲಿ ಕೋಲಾಹಲ ಎಬ್ಬಿಸಿತ್ತು. ಇದರಲ್ಲಿ ಕೆಲವು ಪ್ರಭಾವಿ ರಾಜಕಾರಣಿಗಳು ಹಾಗೂ ಅಧಿಕಾರಿಗಳು ಕೈ ಜೋಡಿಸಿದ್ದಾರೆ ಎಂಬ ವದಂತಿ ದಟ್ಟವಾಗಿತ್ತು. ಈ ಹಗರಣದ ಸೂತ್ರಧಾರ ಎನ್ನಲಾಗಿದ್ದ ಅಂತಾರಾಷ್ಟ್ರೀಯ ಹ್ಯಾಕರ್‌ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿಯನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು. ಶ್ರೀಕಿಯನ್ನು ಬಳಸಿಕೊಂಡು ರಾಜಕಾರಣಿಗಳು ಬಿಟ್‌ಕಾಯಿನ್ ಹಗರಣಗಳನ್ನು ಎಸಗಿದ ಆರೋಪವಿದೆ. ವಿವಿಧ…

Read More

ಉಡುಪಿ: . 50 ವರ್ಷಗಳ ಅವಧಿವರೆಗೆ ಅಧಿಕಾರ ನಡೆಸಿದ ಕಾಂಗ್ರೆಸ್ ಮಾಡಬಾರದ ಹಗರಣಗಳನ್ನೆಲ್ಲ ಮಾಡಿದೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಶಿವಕುಮಾರ್ ತಿಹಾರ್ ಜೈಲಿಗೆ ಬಂದಿದ್ದನ್ನು ಉಲ್ಲೇಖಿಸಿದ ಅವರು, ಬಿಜೆಪಿ ಸರ್ಕಾರ ಭರವಸೆ ನೀಡಿದ್ದ ₹ 15 ಲಕ್ಷ ಎಲ್ಲಿ ಅಂತ ಕೇಳುತ್ತಾರೆ. ಅವರಿಗಿರುವ ಆಸ್ತಿಯನ್ನು ಮಾರಿದರೆ ಎಲ್ಲ ಭಾರತೀಯರಿಗೆ ₹ 15 ಲಕ್ಷ ಸಿಗುತ್ತವೆ ಎಂದು ಯತ್ನಾಳ್ ವ್ಯಂಗ್ಯವಾಡಿದರು. https://ainlivenews.com/such-students-will-get-rs-12400-per-month-scholarship-apply-today/  50 ವರ್ಷಗಳ ಅವಧಿವರೆಗೆ ಅಧಿಕಾರ ನಡೆಸಿದ ಕಾಂಗ್ರೆಸ್ ಮಾಡಬಾರದ ಹಗರಣಗಳನ್ನೆಲ್ಲ ಮಾಡಿದೆ, ಪ್ರಧಾನಿ ನರೇಂದ್ರ ಮೋದಿಯವರ ಈವರೆಗಿನ 10 ವರ್ಷಗಳ ಆಡಳಿತ ಕೇವಲ ಟ್ರೇಲರ್ ಅಗಿದ್ದು ಮುಂದಿನ 5 ವರ್ಷಗಳ ಅವಧಿಯಲ್ಲಿ ಪೂರ್ತಿ ಸಿನಿಮಾ ಅನಾವರಣಗೊಳ್ಳಲಿದೆ ಎಂದು ಹೇಳಿದ ಅವರು ಕೇಜ್ರಿವಾಲ್, ಡಿಂಗ್ರಿವಾಲ್ ಗಳೆಲ್ಲ ಜೈಲು ಸೇರಲಿದ್ದಾರೆ ಎಂದರು.

Read More

ಬೆಂಗಳೂರು: ಈ ಬಾರಿ ಬೇಸಿಗೆ ಆರಂಭವಾಗುತ್ತಿದಂತೆ  ರಾಜ್ಯದಲ್ಲಿ ಬಿರು ಬಿಸಿಲು ಶುರುವಾಗಿದೆ‌. ಉರಿ ಬಿಸಿಲು ಜನರನ್ನು ಸುಡಲು ಆರಂಭಿಸಿದ್ರೆ. ಒಂದು ಕಡೆ ಬೇಸಿಗೆ ತಾಪದಿಂದ ಜನ ಬೇಸತ್ತು ಹೋಗಿದ್ರೆ ಮತ್ತೊಂದು ಕಡೆ  ನಾನಾ ಕಾಯಿಲೆಯಿಂದ ಜನ ತತ್ತರಿಸಿ ಹೋಗಿದ್ದು ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಆರೋಗ್ಯ ಇಲಾಖೆ ಸಲಹೆ ನೀಡಿದೆ.ಈ ಕುರಿತ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ ಹೌದು… ಈ ಬಾರಿ ಫೆಬ್ರವರಿಯಿಂದಲೇ ಸುಡುಬಿಸಿಲು ಶುರುವಾಗಿದ್ದು, ಜನ ಬೇಸತ್ತು ಹೋಗಿದ್ದಾರೆ. ಬೆಳ್ಳಗೆ 8 ಗಂಟೆಯಾದರೆ ಸಾಕು ಮನೆಯಿಂದ ಹೊರ ಬರಲು ಆಗದೇ ಜನ ತತ್ತರಿಸಿದ್ದು, ಸಾಮಾನ್ಯವಾಗಿ ಬೆಂಗಳೂರಿನಲ್ಲಿ 29ರಿಂದ 30ಡಿಗ್ರಿ ತಾಪಾಮಾನ ತಲುಪುತ್ತಿತ್ತು. ಆದರೆ ಈ ವರ್ಷ 36 ಡಿಗ್ರಿ ದಾಟಿದೆ ಹಾಗೂ ಉತ್ತರ ಕರ್ನಾಟಕದ ರಾಯಚೂರು, ಬೀದರ್ ಸೇರಿದಂತೆ ಹಲವು ಜಿಲ್ಲೆಗಳ‌ ಉಷ್ಣಾಂಶ 46- 48 ಡಿಗ್ರಿ ದಾಟುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಉಷ್ಣಾಂಶ ಏರಿಕೆಯಾಗುವ ಸಾಧ್ಯತೆ ಇದೆ. https://ainlivenews.com/good-news-for-people-suffering-from-sunburn-heavy-rain-for-five-days/ ಇನ್ನೂ… ಬೇಸಿಗೆ ಆರಂಭವಾಗುತ್ತಿದ್ದಂತೆ ಸಾಂಕ್ರಾಮಿಕ ರೋಗಗಳು ಜನರನ್ನು ಕಾಡಲು ಶುರು…

Read More

ಬೆಂಗಳೂರು: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಮುಂದೆಯೇ  ವ್ಯಕ್ತಿಯೋರ್ವ  ಆತ್ಮಹತ್ಯೆಗೆ ಯತ್ನಿಸಿರುವ  ಘಟನೆ ಹೈಕೋರ್ಟ್ ಆವರಣದಲ್ಲೇ ನಡೆದಿದೆ. ಇಂದು  ವಿಚಾರಣೆಯ ಅಂತ್ಯದ ವೇಳೆಗೆ ನ್ಯಾಯಮೂರ್ತಿಗಳ ಮುಂದೆ ಬಂದ ವ್ಯಕ್ತಿ ತನ್ನ ಪ್ರಕರಣದ ಬಗ್ಗೆ ಹೇಳಿ ಕೈ ಕೊಯ್ದುಕೊಂಡಿದ್ದು ಈ ವೇಳೆ ನ್ಯಾಯಮೂರ್ತಿಗಳು ತಕ್ಷಣ ಆಸ್ಪತ್ರೆಗೆ ಸೇರಿಸಲು ಸೂಚನೆ ನೀಡಿದರು. https://ainlivenews.com/good-news-for-people-suffering-from-sunburn-heavy-rain-for-five-days/ ಅರ್ಜಿಯೊಂದನ್ನು ಕೋರ್ಟ್ ಸಿಬ್ಬಂದಿಗೆ ನೀಡಿ ಸಣ್ಣದಾದ ಚೂಪಾದ ವಸ್ತುವಿನಿಂದ ಕೊಯ್ದುಕೊಂಡಿದ್ದಾನೆ ಸ್ಥಳದಲ್ಲಿದ್ದ ಪೊಲೀಸರು ತಕ್ಷಣ ಶ್ರೀನಿವಾಸ್​ ಅವರನ್ನು ರಕ್ಷಿಸಿ ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನು ಹೈಕೊರ್ಟ್​ಗೆ ಕೇಂದ್ರ ವಿಭಾಗದ ಡಿಸಿಪಿ, ಕಬ್ಬನ್ ಪಾರ್ಕ್ ಇನ್ಸ್​ಪೆಕ್ಟರ್ ಭೇಟಿ ನೀಡಿದ್ದಾರೆ. ವ್ಯಕ್ತಿಯ ಪೂರ್ವಾಪರ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.

Read More

ಕಂಪ್ಲಿ : ಚುನಾವಣೆ ಎಂಬುದು ಪ್ರಜಾಪ್ರಭುತ್ವ ಹಬ್ಬ ಇದ್ದಂತೆ. ಎಲ್ಲರೂ ಖುಷಿಯಿಂದ ಪಾಲ್ಗೊಳ್ಳಬೇಕು ಎಂದು ಕಂಪ್ಲಿ ತಾಸಿಲ್ದಾರ್ ಎಸ್ ಶಿವರಾಜ್ ಶಿವಪುರ್ . ಹೇಳಿದ್ದಾರೆ. ನಗರದ ಅಂಬೇಡ್ಕರ್ ಸರ್ಕಲ್ ರಿಂದ ಪ್ರಮುಖ ರಸ್ತೆಗಳಲ್ಲಿ ಜಿಲ್ಲಾ ಸ್ವೀಪ್ ಸಮಿತಿ, ತಾಲೂಕು ಸ್ವೀಪ್ ಸಮಿತಿಯಿಂದ ಲೋಕಸಭೆ ಚುನಾವಣೆ ಅಂಗವಾಗಿ ಮತದಾನ ಜಾಗೃತಿಗಾಗಿ ಬುಧವಾರ ಆಯೋಜಿಸಿದ್ದ ಸೈಕಲ್ ಜಾತಾ ಗೆ ಚಾಲನೆ ನೀಡಿ ಮಾತನಾಡಿದರು. ಮೇ 7 ರಂದು ನಡೆಯುವ ಲೋಕಸಭೆ ಚುನಾವಣೆಯಲ್ಲಿ ಎಲ್ಲರೂ ತಪ್ಪದೇ ಮತದಾನ ಮಾಡಬೇಕು. ಸದೃಢ ದೇಶ ಕಟ್ಟಲು ಶೇ.100 ರಷ್ಟು ಮತದಾನ ಆಗಬೇಕು. ಯಾರೊಬ್ಬರೂ ಮತದಾನ ಪ್ರಕ್ರಿಯೆಯಿಂದ ದೂರ ಉಳಿಯಬಾರದು. ಯಾವುದೇ ಆಸೆ, ಆಮೀಷಕ್ಕೆ ಬಲಿಯಾಗದೇ ಮತದಾನ ಮಾಡಬೇಕು ಎಂದು ಹೇಳಿದರು. ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಆರ್ ಕೆ ಶ್ರೀಕುಮಾರ್ ಅವರು ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಳಕ್ಕೆ ಸ್ವೀಪ್ ಕಾರ್ಯಕ್ರಮ ಮಾಡಲಾಗುತ್ತಿದ್ದು, ಪ್ರತಿಯೊಬ್ಬರೂ ತಪ್ಪದೇ ಮತ ಚಲಾಯಿಸಬೇಕು ಎಂದರು. ಕಂಪ್ಲಿ ಪುರಸಭೆಯ ಮುಖ್ಯ ಅಧಿಕಾರಿಗಳು ಮಾತನಾಡಿ,…

Read More

ಬೆಂಗಳೂರು: ಬಿಸಿಲ ಧಗೆಯಿಂದ ಪರಿತಪಿಸುತ್ತಿರುವ ಕರ್ನಾಟಕದ ಜನತೆಗೆ ಮಳೆರಾಯ ತಂಪೆರೆಯಲಿದ್ದಾನೆ, ವಿವಿಧ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. https://ainlivenews.com/the-state-government-postponed-the-scheduled-date-of-kas-exam/ ಇಂದಿನಿಂದ ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ಕೊಪ್ಪಳ ಹಾಗೂ ರಾಯಚೂರು, ವಿಜಯಪುರದಲ್ಲಿ ಅಧಿಕ ಮಳೆ ಸುರಿಯಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ ಹಾಗೂ ಹಾಸನ, ಕೊಡಗು ಸೇರಿದಂತೆ ಮಂಡ್ಯ, ಮೈಸೂರು, ರಾಮನಗರದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ರಾಮನಗರ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ. ಮುಂದಿನ ಮೂರು ದಿನಗಳಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

Read More

ಗದಗ: ನರೇಗಾ ಯೋಜನೆ ಕಾಮಗಾರಿಗೆ ತೆರಳಿದ್ದ ಕೂಲಿ ಕಾರ್ಮಿಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಹಿರೇಕೊಪ್ಪ ಗ್ರಾಮದಲ್ಲಿ ನಡೆದಿದೆ. ಬಸಪ್ಪ ಯಲ್ಲಪ್ಪ ಕುರಹಟ್ಟಿ( 55) ಮೃತ ದುರ್ದೈವಿಯಾಗಿದ್ದು, ಗ್ರಾಮ ಪಂಚಾಯತ್ ನಿಂದ ನೀಡಿದ ನರೇಗಾ ಯೋಜನೆ ಕಾಮಗಾರಿಗೆ ರೈತರ ಜಮೀನಲ್ಲಿ ಬದು ನಿರ್ಮಾಣದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬೆಟಗೇರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ತುಮಕೂರು: ತುಮಕೂರಿನಲ್ಲಿ ಎನ್ ಡಿ ಎ ಅಭ್ಯರ್ಥಿ ಸೋಮಣ್ಣ ಶಕ್ತಿ ಪ್ರದರ್ಶನ ಮುಂದುವರೆಸಿದ್ದಾರೆ. ತುಮಕೂರಿನ ವಿನೋಭಾನಗರದಲ್ಲಿರುವ ಅರ್ಧ ನಾರೀಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲದಲಿಸಲಿದ್ದಾರೆ. ಪೂಜೆ ಬಳಿಕ ರ್ಯಾಲಿ ಮೂಲಕ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಸೋಮಣ್ಣರ ರ್ಯಾಲಿಗೆ ಯಡಿಯೂರಪ್ಪ, ಶಾಸಕ ಜನಾರ್ದನ್ ರೆಡ್ಡಿ ಆಗಮಿಸಿದ್ದು, ಸಾವಿರಾರು ಸಂಖ್ಯೆಯಲ್ಲಿ ಬಿಜೆಪಿ ಜೆಡಿಎಸ್ ಬಾವುಟ ಹಿಡಿದು ಎರಡು ಕಾರ್ಯಕರ್ತರು ಭಾಗಿಯಾಗಿದ್ದಾರೆ. ಸೋಮಣ್ಣಗೆ ಶಾಸಕರಾದ ಗೋಪಾಲಯ್ಯ,ಸುರೇಶ್ ಗೌಡ,ಜ್ಯೋತಿ ಗಣೇಶ್, ಜೆಡಿಎಸ್ ಶಾಸಕರಾದ ಸುರೇಶ್ ಬಾಬು,ಎಮ್ ಟಿ ಕೃಷ್ಣಪ್ಪ ಸೇರಿದಂತೆ ಹಲವರು ಸಾಥ್ ನೀಡಿದ್ದಾರೆ.

Read More