Author: AIN Author

ಗದಗ: ಬಸವರಾಜ ಬೊಮ್ಮಾಯಿ ದಾವಣಗೆರೆ ಚಾರ್ಲಿ ಇದ್ದಂತೆ ಅಂತಾ ಸಚಿವ ಹೆಚ್.ಕೆ.ಪಾಟೀಲ್ ವ್ಯಂಗ್ಯ ವಿಚಾರ ಸಂಬಂಧ  ವಿಷಾದ ವ್ಯಕ್ತಪಡಿಸಿದ ಸಚಿವರು ನಗದಲ್ಲಿ ಮಾತನಾಡಿದ ಎಚ್.ಕೆ. ಪಾಟೀಲ್‌  ನಾನು ಅಂದು ಹೇಳಿದ್ದು ಹಿರಿಯ ಪೈಲ್ವಾನ್, ಕಿರಿಯ ಪೈಲ್ವಾನ್ ಹೋಲಿಕೆಯ ವಿಷಯ ಇತ್ತು ಅಷ್ಟೇ ಆದ್ರೆ ಅದನ್ನ ಕೆಲವರು ತಪ್ಪು ಗ್ರಹಿಕೆ ಮಾಡಿಕೊಂಡಿದ್ದಾರೆ ಬೊಮ್ಮಾಯಿಯವರೂ ಅದನ್ನ ತಪ್ಪು ಗ್ರಹಿಸಿದ್ರೇನೋ ಅನ್ನಿಸ್ತದೆ ಎಂದು ಹೇಳಿದರು. ಉಪಮೇಯ, ಉದಾಹರಣೆ ಕೊಡೋದರಲ್ಲಿ ಬೊಮ್ಮಾಯಿ ಅವರನ್ನೂ ಒಳಗೊಂಡಂತೆ ಯಾರಿಗಾದ್ರೂ ಮನಸಿಗೆ ನೋವಾಗಿದ್ರೆ ವಿಷಾದ ವ್ಯಕ್ತಪಡಿಸ್ತೇನೆ ಎಂದರು.

Read More

ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಾ ರಾಮಯ್ಯ ಮತ್ತು ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೌತಮ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದರು. ಮುಖ್ಯಮಂತ್ರಿಗಳು ರಕ್ಷಾ ರಾಮಯ್ಯ  ಹಾಗೂ ಗೌತಮ್ ಅವರಿಗೆ ಶುಭ ಹಾರೈಸಿದರು. ಹಾಗೆ ಕೆಲವೊಂದು ಸಲಹೆಗಳನ್ನು ಸಹ ನೀಡಿದರು. ಎರಡೂ ಲೋಕಸಭಾ ಕ್ಷೇತ್ರಗಳಲ್ಲೂ ಜನರ ಅಭಿಪ್ರಾಯ, ಒಲವು ಕಾಂಗ್ರೆಸ್ ಪರವಾಗಿದೆ. ಜನರ ನಡುವೆ ನಿಂತು ಕೆಲಸ ಮಾಡಿ ಎಂದು ಸಲಹೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.

Read More

ದೆಹಲಿ: ದೆಹಲಿ ಮದ್ಯ ನೀತಿ ಹಗರಣ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಬಂಧನಕ್ಕೊಳಗಾಗಿದ್ದಾರೆ. ಅವರ ಬೆನ್ನಲ್ಲೇ ದೆಹಲಿ ಸಚಿವ ಕೈಲಾಶ್‌ ಗೆಹ್ಲೋಟ್‌ಗೆ (Kailash Gahlot) ಇ.ಡಿ ಸಮನ್ಸ್‌ ನೀಡಿದೆ. ಎಎಪಿ ನಾಯಕ ಗೆಹ್ಲೋಟ್‌ ಅವರು ದೆಹಲಿ ಸರ್ಕಾರದಲ್ಲಿ ಗೃಹ, ಸಾರಿಗೆ ಮತ್ತು ಕಾನೂನು ಸಚಿವರಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಕರೆದಿದೆ. https://ainlivenews.com/union-minister-amit-shah-will-visit-the-state-on-april-2/ ಇ.ಡಿ ಸಮನ್ಸ್‌ ಬರುತ್ತಿದ್ದಂತೆ ಗೆಹ್ಲೋಟ್ ಅವರು ಈಗಾಗಲೇ ತನಿಖಾ ಸಂಸ್ಥೆಯ ಕಚೇರಿಯನ್ನು ತಲುಪಿದ್ದಾರೆ. ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ ಕೆಲವೇ ದಿನಗಳಲ್ಲಿ ಸಮನ್ಸ್ ಬಂದಿದೆ. ಈ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಕೈಲಾಶ್ ಗಹ್ಲೋಟ್ ಅವರನ್ನು ಕೇಳಲಾಗಿತ್ತು. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗುವುದು ಎಂದು ಇಡಿ ಮೂಲಗಳು ತಿಳಿಸಿವೆ.

Read More

ದೆಹಲಿ: ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಮಾಜಿ ಎಂಎಲ್‌ಸಿ ತೇಜಸ್ವಿನಿ ಗೌಡ ಅವರು  ಇಂದು ಕಾಂಗ್ರೆಸ್ ಪಕ್ಷ ಸೇರಿಕೊಂಡಿದ್ದಾರೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ತೇಜಸ್ವಿನಿ ಗೌಡ ಅವರು  ಜೈರಾಮ್ ರಮೇಶ್, ಪವನ್ ಖೇರಾ ಸಮ್ಮುಖದಲ್ಲಿ ಸೇರ್ಪಡೆಯಾದರು. ಬಿಜೆಪಿ ಕೊಟ್ಟ ಕೆಲಸವನ್ನು ನಿಷ್ಠೆಯಿಂದ ಮಾಡಿದ್ದೇನೆ. ಬಿಜೆಪಿಗೆ ರಾಜಕೀಯ ಬರಗಾಲ ಇತ್ತು ಆಗ ನಾನು ಬಿಜೆಪಿ ಸೇರಿದ್ದೆ. ನರೇಂದ್ರ ಮೋದಿಯವರು ಗುಜರಾತ್ ಸಿಎಂ ಆಗಿದ್ದರು, ಪ್ರಧಾನಿ ಆಗಿರಲಿಲ್ಲ.ಈಗ ಬಿಜೆಪಿ ಸಮೃದ್ಧವಾಗಿದೆ, ಬಿಜೆಪಿ ಬಿಟ್ಟು ಬಂದಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ನಿಜವಾಗಲು ಬರಗಾಲ ಇದೆ, ಕಷ್ಟದ ಪರಿಸ್ಥಿತಿ ಇದೆ.

Read More

ಮಂಡ್ಯ: ಮಾಜಿ ಸಿಎಂ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಹೆಚ್‌.ಡಿ.ಕುಮಾರಸ್ವಾಮಿ (H.D.Kumaraswamy) ಅವರ ಹೃದಯ ಶಸ್ತ್ರಚಿಕಿತ್ಸೆ ಬಗ್ಗೆ ಕಾಂಗ್ರೆಸ್‌ ಶಾಸಕ ರಮೇಶ್‌ ಬಂಡೀಸಿದ್ದೇಗೌಡ (Ramesh Bandisiddegowda) ಅನುಮಾನ ವ್ಯಕ್ತಪಡಿಸಿದ್ದಾರೆ. https://ainlivenews.com/kolar-candidate-k-v-gautham-dcm-gave-a-clear-warning-to-both-factions/ ಮಳವಳ್ಳಿಯ ಕಾಂಗ್ರೆಸ್‌ ಸಭೆಯಲ್ಲಿ ಹೆಚ್‌ಡಿಕೆ ಹೃದಯ ಶಸ್ತ್ರಚಿಕಿತ್ಸೆ ಕುರಿತು ಮಾತನಾಡಿದ ಅವರು, ಚುನಾವಣೆ ಬಂತು ಎಂದರೇ ಸಾಕು ಆಸ್ಪತ್ರೆ ಸೇರ್ತಾರೆ. ಮೂರೇ ದಿನದಲ್ಲಿ ಹಾರ್ಟ್ ಆಪರೇಷನ್ ಆಗುತ್ತೆ. ನಾಲ್ಕನೇ ದಿನಕ್ಕೆ ಇಡೀ ರಾಜ್ಯ ಸುತ್ತುತ್ತಾರೆ. ಅದು ಹೇಗೆ ಸಾಧ್ಯ ಅನ್ನೋದು ನನಗೆ ಅರ್ಥವಾಗುತ್ತಿಲ್ಲ ಎಂದು ಪ್ರಶ್ನೆ ಮಾಡಿದರು ಚಲುವರಾಯಸ್ವಾಮಿಗೆ ಇರುವ ಸೇಮ್ ಕಾಯಿಲೆ ಅವರ ಸ್ನೇಹಿತ ಕುಮಾರಸ್ವಾಮಿಯವರಿಗೆ ಇದೆ. ಚಲುವರಾಯಸ್ವಾಮಿ ಆಸ್ಪತ್ರೆ ಸೇರಿದ್ರೆ ಒಂದು ತಿಂಗಳು ಈಚೆಗೆ ಬರಲ್ಲ. ಅದು ಹೇಗೆ ಹಾರ್ಟ್ ಆಪರೇಷನ್ ಮಾಡಿಸಿ 2 ದಿನಕ್ಕೆ ಆಚೆ ಬರ್ತಾರೆ ಎಂದು ಕೇಳಿದರು. ಈ ಚುನಾವಣೆ ಅಭಿವೃದ್ದಿ ವರ್ಸಸ್ ಕಣ್ಣೀರಿಡುವ ಜನರ ನಡುವಿನ ಚುನಾವಣೆ. ನನಗೆ ಆ ತೊಂದರೆ ಇದೆ, ಈ ತೊಂದರೆ ಇದೆ ಎಂದರೆ ಕೇಳಬೇಡಿ.…

Read More

ಬೆಂಗಳೂರು:  ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಏಪ್ರಿಲ್ 2ರಂದು ರಾಜ್ಯಕ್ಕೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ ನೀಡುತ್ತಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಸಮಾವೇಶ ನಡೆಯಲಿದು  ಬೆಳಗ್ಗೆ  11 ಗಂಟೆಗೆ 5 ಕ್ಷೇತ್ರದ ಕಾರ್ಯಕರ್ತರ ಜೊತೆ ಸಮಾವೇಶ ನಡೆಸಲಿದ್ದಾರೆ. https://ainlivenews.com/if-you-dont-do-this-by-tomorrow-your-account-will-be-closed/ ಹಾಗೆ ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರದಲ್ಲಿ ಕಾರ್ಯಕರ್ತರ ಜೊತೆ ಅಮಿತ್‌ ಶಾ  ಸಮಾವೇಶ ನಡೆಸಲಿದ್ದಾರೆ. 5 ಕ್ಷೇತ್ರಗಳ ಕಾರ್ಯಕರ್ತರ ಸಮಾವೇಶದ ಬಳಿಕ ಅಮಿತ್ ಶಾ ಸಭೆ ದಾವಣಗೆರೆ, ತುಮಕೂರು, ಚಿತ್ರದುರ್ಗ, ಚಿಕ್ಕ ಬಳ್ಳಾಪುರ ಪ್ರಮುಖರ ಸಭೆ ಬೆಂಗಳೂರಿನಲ್ಲಿ ಸಭೆ ನಡೆಸಲಿರುವ ಕೇಂದ್ರ ಸಚಿವ ಅಮಿತ್ ಶಾ

Read More

ಬೆಂಗಳೂರು: ಕೋಲಾರ ಟಿಕೆಟ್‌ ಫೈಟ್‌ ಗೆ ತೆರೆ ಎಳೆದ ಕಂಗ್ರೆಸ್‌ ಹೈ ಕಮಾಂಡ್   ಕೋಲಾರ ಅಭ್ಯರ್ಥಿಯಾಗಿ ಕೆ.ವಿ ಗೌತಮ್‌ ಅವರನ್ನ  ಘೋಷಣೆ ಮಾಡಿದೆ. ಆ ನಂತರ  ಉಭಯ ಬಣಗಳಿಗೂ ಸ್ಪಷ್ಟ ಎಚ್ಚರಿಕೆ ನೀಡಿದ ಡಿಸಿಎಂ ಡಿ.ಕೆ ಶಿವಕುಮಾರ್ ನಗರದಲ್ಲಿ ಮಾತನಾಡಿದ ಅವರು,   ಮುನಿಯಪ್ಪ, ರಮೇಶ್ ಕುಮಾರ್ ಜೊತೆ ಮಾತನ್ನಾಡಿದ್ದೇನೆ ಅವರವರ ಅಭಿಪ್ರಾಯಯನ್ನ ಹೇಳಿದ್ದಾರೆ ಎರಡೂ  ಬಣಗಳಿಗೂ ಟಿಕೆಟ್ ಕೊಟ್ಟಿಲ್ಲ ಗುಂಪು ರಾಜಕಾರಣ ನಮ್ಮಲ್ಲಿ ಇಲ್ಲ ಯಾರೇ ಆದರೂ ಲಕ್ಷ್ಮಣ ರೇಖೆ ದಾಟಲು ಸಾಧ್ಯವಿಲ್ಲ ಸೀಟು ಗೆಲ್ಲೋದು ಬಿಡೋದು ನಂತರದ್ದು ಪಕ್ಷದಲ್ಲಿ ಶಿಸ್ತು ಬಹಳ ಮುಖ್ಯಅಂತಿಮವಾಗಿ ಯಾರೇ ಶಿಸ್ತು ಉಲ್ಲಂಘಿಸಿದರೂ ಕ್ರಮ ಕೈಗೊಳ್ತೇವೆ https://ainlivenews.com/if-you-dont-do-this-by-tomorrow-your-account-will-be-closed/ ಶಿಸ್ತು ಉಲ್ಲಂಘನೆ ಮಾಡಿದವರೆಲ್ಲೆ ಈಗಾಗಲೇ ಕ್ಷಮೆ ಕೇಳಿದ್ದಾರೆ ಶಾಸಕರು, ಸಚಿವರು ಯಾರೇ ಆದರೂ ಎಲ್ಲರೂ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿರಬೇಕು ಎಲ್ಲರೂ ಅಭ್ಯರ್ಥಿಯನ್ನ ಗೆಲ್ಲಿಸಿಕೊಂಡು ಬರುವುದಾಗಿ ಹೇಳಿದ್ದಾರೆ ಗೌತಮ್ ಪಕ್ಷದ ಸಾಮಾನ್ಯ ಕಾರ್ಯಕರ್ತ,ಮಾಜಿ ಮೇಯರ್ ಪುತ್ರ ಹೊಸ ಮುಖ ಗೌತಮ್ ಗೆ ಅವಕಾಶ ನೀಡಿದ್ದೇವೆ ಯಾವ ಒಳ ಏಟು…

Read More

ಬಾಗಲಕೋಟೆ: ವೀಣಾ ಕಾಶಪ್ಪನವರ್ ಮತ್ತು ಬೆಂಬಲಿಗರಿಗೆ ಸಿಎಂ ಸ್ಪಷ್ಟ ಸಂದೇಶ.. ತಮ್ಮನ್ನು ಭೇಟಿಯಾದ ವೀಣಾ ಕಾಶಪ್ಪನವರ್ ಬೆಂಬಲಿಗರಿಗೆ ಖಡಕ್ ಆಗಿ ಹೇಳಿದ ಸಿಎಂ..! ನಿಮಗೆ ಟಿಕೆಟ್ ಕೊಡುವಂತೆ ಯಾವುದೇ ಜಿಲ್ಲಾ ನಾಯಕರು ಹೇಳಿಲ್ಲ.. ಜಿಲ್ಲೆಯಲ್ಲಿನ ಸಮಸ್ಯೆ ಪರಿಹಾರ ಮಾಡಿಕೊಳ್ಳುವಂತೆ ಮೊದಲೇ ಹೇಳಿದ್ದೆ.. ಶಾಸಕ ವಿಜಯಾನಂದ ಕಾಶಪ್ಪನವರ್ ಅವರಿಗೆ ಹೇಳಿದ ಸಿಎಂ ಸಿದ್ಧರಾಮಯ್ಯ.. ಲೋಕಸಭಾ ಕ್ಷೇತ್ರ ಉಸ್ತುವಾರಿ ಪ್ರಿಯಾಂಕಾ ಖರ್ಗೆಯಿಂದಲೂ ವೀಣಾ ಹೆಸರು ಪ್ರಸ್ತಾಪವಾಗಿಲ್ಲ.. ಸಂಯುಕ್ತಾ ಪಾಟೀಲ್ ಪಕ್ಷದ ಕೆಲಸ ಮಾಡಿದ್ದಾರೆ.. ಜಿಲ್ಲೆಯ ಐದು ನಾಯಕರು ವೀಣಾ ಹೆಸರು ಹೇಳಲೇ ಇಲ್ಲ.. ಈಗ ಯಾವುದೇ ಕಾರಣಕ್ಕೂ ಅಭ್ಯರ್ಥಿ ಬದಲಾವಣೆ ಮಾಡೋದಿಲ್ಲ.. ಬೇರೆ ಎನಾದರೂ ಇದ್ದರೆ ಹೇಳಿ ಎಂದು ಖಡಕ್ ಆಗಿಯೇ ಹೇಳಿದ ಸಿಎಂ ಸಿದ್ಧರಾಮಯ್ಯ.. ಹೊರಗಿನವರಿಗೆ ಯಾಕೆ ಟಿಕೆಟ್ ಕೊಟ್ರಿ ಅಂತ ಪ್ರಶ್ನಿಸಿದ ಬೆಂಬಲಿಗರಿಗೆ ಸಿಎಂ ತಿರುಗೇಟು.. ನಾನು ಮೈಸೂರಿನಿಂದ ಬಂದು ಬಾದಾಮಿಯಲ್ಲಿ ಸ್ಪರ್ಧೆ ಮಾಡಿರಲಿಲ್ಲವೇ..? ನನ್ನನ್ನು ನೀವು ಆಯ್ಕೆ ಮಾಡಿಲ್ವಾ..? ಬಾದಾಮಿಯವರು ಆಯ್ಕೆ ಮಾಡಿರಲಿಲ್ಲವಾ..? ಹೊರಗಿನವರು ಅನ್ನೋದನ್ನು ಬಿಟ್ಟು ಬೇರೆ ಏನಾದರೂ…

Read More

ಬೆಂಗಳೂರು: ನೀವು ನೌಕರಿ Job ಹುಡುಕತಾ ಇದ್ದಿರಾ. SSLC / PUC ಯಾವುದೇ ಪದವಿ ಆಗಿದ್ರೆ ಕೂಡಲೆ ಇಲ್ಲಿ ಭೇಟಿ ಕೊಡಿ. ಇಲ್ಲಿ ವಾಕ್ ಇನ್ ಸಂದರ್ಶನವಿದ್ದು, ಪುರುಷರು ಮತ್ತು ಮಹಿಳೆಯರಿಗೆ ನೇಮಕಾತಿ ಆರಂಭವಾಗಿದೆ. ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ನಲ್ಲಿ ಮ್ಯಾನೇಜರ್, ಸಹಾಯಕ ಮ್ಯಾನೇಜರ್, ಎಚ್.ಆರ್ ಮ್ಯಾನೇಜರ್, ಮೇಲ್ವಿಚಾರಕ, ಕ್ಯಾಷಿಯರ್, ಸೇಲ್ಸ್ ಎಕ್ಚಿಕ್ಯೂಟಿವ್, ಬಿಲ್ಲಿಂಗ್ ಎಕ್ಸಿಕ್ಯೂಟಿವ್, ಸೆಕ್ಯೂರಿಟಿ.ಸೇರಿದಂತೆ ಅನೇಕ ಹುದ್ದೇಗಳಿಗೆ ಇಲ್ಲಿ ಅವಕಾಶವಿದೆ. SSLC /PUC ಯಾವುದೇ ಪದವಿ ಮಾಡಿದ್ರು ಇಲ್ಲಿ ಕೆಲಸವಿದ್ದು. ಜೊತೆಗೆ ವಸತಿ + ಸ್ಥಿರ ಮತ್ತು ಆಕರ್ಷಕ ಸಂಬಳ + PF + ಪ್ರೋತ್ಸಾಹ ಧನ ಕೊಡಲಾಗುತ್ತದೆ. Job alert ದಿನಾಂಕ- 30-03-2024 ರಂದು ಮಧ್ಯಾಹ್ನ 12 ಗಂಟೆಯಿಂದ 2 ಗಂಟೆವರೆಗೆ ಸಂದರ್ಶನವಿದ್ದು, ನೌಕರಿ ಹುಡುಕುತ್ತಿರುವವರು ಸಂದರ್ಶನಕ್ಕೆ ಹಾಜರಾಗಬಹುದು. ಸಂದರ್ಶನ ನಡೆಯುವ ಸ್ಥಳ: #41 ಡಿ.ವಿ.ಜಿ ರಸ್ತೆ ಬಸವನಗುಡಿ, ಬೆಂಗಳೂರು- 04 ಹೆಚ್ಚಿನಮಾಹಿತಿಗಾಗಿಇಲ್ಲಿರುವನಂಬರಿಗೆಸಂಪರ್ಕಿಸಬಹುದಾಗಿದೆ. 9740626853 ಜೊತೆಗೆನಿಮ್ಮರೆಸ್ಯೂಮ್ನ್ನುಮೇಲ್ಮಾಡಬಹುದು.. ಇಮೇಲ್- [email protected]

Read More

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಹಿಳೆಯರು ಮತ್ತು ಮಕ್ಕಳಿಗಾಗಿ ಅನೇಕ ಯೋಜನೆಗಳನ್ನು ನಡೆಸುತ್ತಿವೆ. ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಈ ಯೋಜನೆಗಳನ್ನು ಪ್ರಾರಂಭಿಸಲಾಗಿದೆ. ಈ ಯೋಜನೆಗಳಲ್ಲಿ ಸುಕನ್ಯಾ ಸಮೃದ್ಧಿ ಯೋಜನೆಯೂ ಒಂದು. ಈ ಯೋಜನೆಯಲ್ಲಿ, ಹೆಣ್ಣುಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಹೂಡಿಕೆ ಮಾಡಲಾಗುತ್ತದೆ. ಈ ಯೋಜನೆಯಲ್ಲಿ, ಸುಕನ್ಯಾ ಸಮೃದ್ಧಿ ಖಾತೆಯನ್ನು ಸಕ್ರಿಯವಾಗಿಡಲು ಕನಿಷ್ಠ ಬ್ಯಾಲೆನ್ಸ್ ಇಡುವುದು ಅವಶ್ಯಕ. ಹೂಡಿಕೆದಾರರು ಕನಿಷ್ಠ ಬ್ಯಾಲೆನ್ಸ್ ನಿರ್ವಹಿಸದಿದ್ದರೆ, ಅವರ ಖಾತೆಯನ್ನು ಸ್ಥಗಿತಗೊಳಿಸಲಾಗುತ್ತದೆ. ಖಾತೆಯನ್ನು ಮತ್ತೆ ಸಕ್ರಿಯಗೊಳಿಸಿದ್ದಕ್ಕಾಗಿ ದಂಡವನ್ನು ಪಾವತಿಸಬೇಕಾಗುತ್ತದೆ. Post Office Schemes: ನೀವು ಪ್ರತಿ ತಿಂಗಳು 10 ಸಾವಿರ ಡೆಪಾಸಿಟ್‌ ಮಾಡಿ ನೋಡಿ: ಆಮೇಲೆ ಸಿಗುತ್ತೆ 7 ಲಕ್ಷ ರೂ.! ಕನಿಷ್ಠ ಬ್ಯಾಲೆನ್ಸ್ ಅನ್ನು ಎಷ್ಟು ಸಮಯದವರೆಗೆ ನಿರ್ವಹಿಸಬೇಕು ಮಾರ್ಚ್ 31, 2024 ರೊಳಗೆ, ಖಾತೆದಾರರು ಕನಿಷ್ಠ ಬ್ಯಾಲೆನ್ಸ್ ಅನ್ನು ನಿರ್ವಹಿಸಬೇಕು. ಅವರು ಇದನ್ನು ಮಾಡದಿದ್ದರೆ ಅವರ ಖಾತೆ ನಿಷ್ಕ್ರಿಯವಾಗಿರುತ್ತದೆ. ಖಾತೆಯನ್ನು ಮರುಪ್ರಾರಂಭಿಸಲು ಖಾತೆದಾರರು ದಂಡವನ್ನು ಪಾವತಿಸಬೇಕಾಗುತ್ತದೆ. ಕನಿಷ್ಠ ಬ್ಯಾಲೆನ್ಸ್ ಗಾಗಿ ಎಷ್ಟು ಮೊತ್ತವನ್ನು ಠೇವಣಿ…

Read More