Author: AIN Author

ಗದಗ: ಲೋಕ ಸಭಾ ಚುನಾವಣೆಯ ಹೊತ್ತಲ್ಲಿ ಅಕ್ರಮ ಸಾಗಾಟ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಚುನಾವಣಾ ಅಧಿಕಾರಿಗಳು ಕಣ್ಣು ತಪ್ಪಿಸಿ ಸೀರೆ, ಹಣ, ಬೆಳೆಬಾಳುವ ವಸ್ತುಗಳ ಸಾಗಾಟ ನಡೆಯುತ್ತಿದೆ. ಇದೀಗ ಅಂತಹದ್ದೇ ಪ್ರಕರಣವೊಂದು ಮುನ್ನೆಲೆಗೆ ಬಂದಿದ್ದು, ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ರಾಮಗೇರಿ ಚೆಕ್ ಪೋಸ್ಟ್ ನಲ್ಲಿ ಸಾರಿಗೆ ಸಂಸ್ಥೆ ಬಸ್ ನಲ್ಲಿ ಐದು ಲಕ್ಷ ರೂಪಾಯಿ ಹಣ ಸಾಗಿಸುವಾಗ ಸೀಜ್ ಮಾಡಲಾಗಿದೆ. ಬಸ್ ನಲ್ಲಿ ಹಣ ತಗೆದುಕೊಂಡು ಸೈಯದಬ್ದುಲ್ ರಜಾಕ್ ಹೊರಟಿದ್ದ ವ್ಯಕ್ತಿಯಾಗಿದ್ದು, ಸೂಕ್ತ ದಾಖಲೆ ಇಲ್ಲದ ಕಾರಣ ಹಣ ಸೀಜ್ ಮಾಡಲಾಗಿದೆ. ಲಕ್ಷ್ಮೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ಮಾಡಲಾಗಿದೆ.

Read More

ವಿಜಯಪುರ: ಸಚಿವ ಶಿವರಾಜ್ ತಂಗಡಗಿ ಅವಹೇಳನಕಾರಿ ಹೇಳಿಕೆ ಖಂಡಿಸಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ಕಾರ್ಯಕರ್ತರು ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು. ಪ್ರಧಾನಿ ಮೋದಿ ವಿರುದ್ಧ ಸಚಿವ ತಂಗಡಗಿ ಅವಹೇಳನಕಾರಿ ಹೇಳಿಕೆ ಖಂಡನೀಯ ವಾಗಿದ್ದು, ತಕ್ಷಣವೇ ಸಚಿವ ಶಿವರಾಜ ತಂಗಡಗಿ ಕ್ಷಮೆ ಕೇಳಬೇಕು ಎಂದು ಸಚಿವ ತಂಗಡಗಿ ವಿರುದ್ಧ ಘೋಷಣೆ ಕೂಗಿ ಕಾರ್ಯಕರ್ತರು ಒತ್ತಾಯ ಮಾಡಿದರು.  

Read More

ಬೆಂಗಳೂರು:  ನಗರದ ರಾಮೇಶ್ವರಂ ಕೆಫೆ ಸ್ಪೋಟ ಬೆನ್ನಲ್ಲೇ ಮತ್ತೊಂದು ಪ್ರತಿಷ್ಠಿತ ರೆಸ್ಟೋರೆಂಟ್​​​​ಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಮಹದೇವಪುರದ ಪಾಸ್ತಾ ಸ್ಟ್ರೀಟ್ ರೆಸ್ಟೋರೆಂಟ್​​​​ಗೆ ಬೆದರಿಕೆ ಕರೆ ಬಂದಿದ್ದು, ಶೀಘ್ರದಲ್ಲೇ ರೆಸ್ಟೋರೆಂಟ್​ನಲ್ಲಿ ಬಾಂಬ್ ಸ್ಫೋಟವಾಗುತ್ತೆ ಎಂದು ವ್ಯಕ್ತಿಯೊಬ್ಬ ಬೆದರಿಕೆ ಹಾಕಿದ್ದಾನೆ. ಸ್ಯಾಲರಿ ಕೊಟ್ಟಿಲ್ಲ ಎಂದು ಕುಡಿದು ಬಾಂಬ್ ಬೆದರಿಕೆ ಮಾಡಿದ್ದ ಆರೋಪಿಪಾಸ್ತಾ ಸ್ಟ್ರೀಟ್ ರೆಸ್ಟೋರೆಂಟ್​ಗೆ ತಡರಾತ್ರಿ ಕರೆ ಬಂದಿದ್ದು, ಶೀಘ್ರದಲ್ಲೇ ಬಾಂಬ್ ಸ್ಫೋಟವಾಗುತ್ತದೆ ಎಂದು ಬೆದರಿಕೆ ಹಾಕಿ ಕಾಲ್ ಕಟ್ ಮಾಡಲಾಗಿದೆ. ಕೂಡಲೇ ರೆಸ್ಟೋರೆಂಟ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ರಾತ್ರಿ ಇಡೀ ಪರಿಶೀಲನೆ ನಡೆಸಿದ್ದಾರೆ. https://ainlivenews.com/exiled-for-17-years-government-to-fall-by-december-hdks-future/ ಬಳಿಕ ಅನುಮಾನ ಮೂಡಿದ ಹಿನ್ನೆಲೆ ಇಂದಿರಾನಗರ ಬ್ರಾಂಚ್​ನಲ್ಲಿ ಕೆಲಸ ಮಾಡುತ್ತಿದ್ದ ವೇಲು ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪೊಲೀಸರೇ ಶಾಕ್ ಆಗಿದ್ದಾರೆ. ಸಂಬಳ ಕೊಡದ ಹಿನ್ನೆಲೆ ತಾನು ರೆಸ್ಟೋರೆಂಟ್​ಗೆ ಹುಸಿ ಬಾಂಬ್ ಬೆದರಿಕೆ ಹಾಕಿದ್ದಾಗಿ ವೇಲು ಬಾಯಿಬಿಟ್ಟಿದ್ದಾನೆ. ರೆಸ್ಟೋರೆಂಟ್ ನ ನೌಕರನಾಗಿರುವ ವೇಲು ಇಂದಿರಾನಗರ ಬ್ರಾಂಚ್ ನಲ್ಲಿ ಕೆಲಸ ಮಾಡುವ…

Read More

ಬೆಂಗಳೂರು: ನಾನು ಜೋತ್ಯಿಷ್ಯಕಾರನಲ್ಲ.. ಆದರೆ, ಈ ಲೋಕಸಭಾ ಚುನಾವಣೆ ನಂತರ ಮುಂದಿನ ಡಿಸೆಂಬರ್ ಒಳಗೆ ಕಾಂಗ್ರೆಸ್​ ಸರ್ಕಾರ ಬೀಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಆಕಸ್ಮಿಕ ಸರ್ಕಾರ. ನಾವು ಹಾಗೂ ಬಿ.ವೈ. ವಿಜಯೇಂದ್ರ ಕಷ್ಟ ಪಡಬೇಕಿಲ್ಲ. ಅವರೇ ಅವರ ಸರ್ಕಾರವನ್ನು ಬೀಳಿಸಿಕೊಳ್ತಾರೆ ಎಂದು ಕುಟುಕಿದರು. https://ainlivenews.com/sureshs-service-during-covid-is-a-history-dk-sivakumar/ ಮೈತ್ರಿ ಹೆಸರಿನಲ್ಲಿ ಬೆನ್ನಿಗೆ ಚೂರಿ ಹಾಕಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್‌ ಹೊಂದಾಣಿಕೆ ನ್ಯಾಚುರಲ್ ಅಲಯನ್ಸ್. ರಾಜ್ಯ ಅಭಿವೃದ್ಧಿಗಾಗಿ ಈ ಮೈತ್ರಿ ನಿರ್ಧಾರ. ಬಿಜೆಪಿ ಹಾಗೂ ಜೆಡಿಎಸ್‌ ಹೊಂದಾಣಿಕೆ ಹಾಲು ಜೇನು ಇದ್ದಹಾಗೆ. ಹಿಂದೆ ಬಿಜೆಪಿ ಜೊತೆ ಸರ್ಕಾರ ಮಾಡಿದ ದಿನದಿಂದ ಜೆಡಿಎಸ್‌ ಮುಗಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಛೇಡಿಸಿದರು. 20 ತಿಂಗಳ ಆಡಳಿತ ಇಂದಿಗೂ ಜನ ನೆನೆಯುತ್ತಾರೆ. ಅಧಿಕಾರ ಹಸ್ತಾಂತರ ಮಾಡಿಲ್ಲ ಎಂಬ ಆರೋಪ ನನ್ನ ಮೇಲೆ ಮಾಡ್ತಾರೆ. ನಾನು ಮಾಡದೇ ಇರುವ ತಪ್ಪನ್ನು ನನ್ನ ತಲೆ ಮೇಲೆ ಹೊತ್ತಿದ್ದೇನೆ. 17…

Read More

ಬೆಂಗಳೂರು : ನಮ್ಮ‌ ಪಕ್ಷ ಯುದ್ದಕ್ಕೆ ಸಿದ್ದವಾಗಿದೆ. ಶಸ್ತ್ರ ತ್ಯಾಗ ಮಾಡಲ್ಲ, ಯುದ್ದ ಮಾಡೇ ಮಾಡ್ತೀವಿ. ಯಾರನ್ನು ಆಯ್ಕೆ ಮಾಡಬೇಕು ಅಂತ ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದು ಮುನಿಯಪ್ಪ ಪುತ್ರಿ ಹಾಗೂ ಶಾಸಕಿ ರೂಪಕಲಾ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ಕುಟುಂಬಕ್ಕಿಂತ ನಮಗೆ ಪಕ್ಷವೇ ಮುಖ್ಯ. ಪಕ್ಷಕ್ಕಾಗಿ ಎಂಥಾ ತ್ಯಾಗಕ್ಕೂ ಸಿದ್ದ ನಾವು. ಪಕ್ಷದ ವಿರುದ್ಧ ಧ್ವನಿ ಎತ್ತಲ್ಲ ನಮ್ಮ ಕುಟುಂಬ. ನಾವು ಯಾವತ್ತು ಪಕ್ಷ ತಲೆತಗ್ಗಿಸುವ ಕೆಲಸ ಮಾಡಲ್ಲ ಎಂದು ತಿಳಿಸಿದರು. ರಾಜಕೀಯದಲ್ಲಿ ಒಂದೊಂದು ಕುಟುಂಬದ ವಿರುದ್ಧ ಭಿನ್ನಾಭಿಪ್ರಾಯ ಬರೋದು ಸಹಜ. ಇಷ್ಟು ವರ್ಷ ರಾಜಕಾರಣ ಮಾಡಿದ ಕುಟುಂಬ, ಎಲ್ಲರನ್ನು ನಮ್ಮ ಪರ ಇಟ್ಟುಕೊಳ್ಳೋಕಾಗಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ಮಾಡೋರು ಬೇಕು. ಅದು ತಪ್ಪಲ್ಲ. ಆದ್ರೆ, ಆ ವಿರೋಧ ಪಕ್ಷದ ಇತಿಮಿತಿಯಲ್ಲಿ ಇರಬೇಕು. ಪಕ್ಷದೊಳಗಿನ ವೇದಿಕೆಯಲ್ಲಿ ಮಾತನಾಡಬೇಕು. ಪಕ್ಷದ ಹಿರಿಯರು AICC ಅಧ್ಯಕ್ಷರು ಸಿಎಂ, ಡಿಸಿಎಂ ಇದ್ದಾರೆ, ಅವರಿಗೆ ಹೇಳಬೇಕು ಎಂದು ಕುಟುಕಿದರು. https://ainlivenews.com/defamatory-advertisement-allegation-against-bjp-what-did-malavika-avinash-say/ ರಾಜಕೀಯದಲ್ಲಿ ಒಂದೊಂದು ಕುಟುಂಬದ…

Read More

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ನೀಡಿದ್ದ ಪತ್ರಿಕಾ ಜಾಹೀರಾತು ಆಧಾರದಲ್ಲಿ ಸಲ್ಲಿಕೆಯಾಗಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಐಸಿಸಿ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಖುದ್ದು ಹಾಜರಾಗುವಂತೆ ಸಮನ್ಸ್ ಜಾರಿ ಮಾಡುವಂತೆ ಪೊಲೀಸರಿಗೆ ಸೂಚಿಸಿದೆ ಎಂದು ಬಿಜೆಪಿ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್ ಸ್ಪಷ್ಟಪಡಿಸಿದ್ದಾರೆ. https://ainlivenews.com/bengaluru-mysuru-highway-toll-rate-hike-from-april-1/ ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಜಾಹೀರಾತು ನೀಡಿದ್ದ ಕಾಂಗ್ರೆಸ್ ಬಿಜೆಪಿ ವಿರುದ್ಧ ಮನಸ್ಸೋ ಇಚ್ಚೆ ಮಾತನಾಡಿತ್ತು,ಇದ ಖಾಸಗಿ ದೂರಿನ ಆಧಾರದಲ್ಲಿ ಅಂದಿನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್,ಅಂದಿನ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಎಐಸಿಸಿ ನಾಯಕ ರಾಹುಲ್ ಗಾಂಧಿ ವಿರುದ್ಧ ಸಮನ್ಸ್ ಜಾರಿಯಾಗಿದೆ. ಮನಸೋ ಇಚ್ಚೆ ಜಾಹೀರಾತನ್ನು ಎಲ್ಲಾ ಪತ್ರಿಕೆಗಳಲ್ಲಿ ಕೊಡಲಾಗಿದ್ದರ ವಿರುದ್ಧ ಕೇಶವ ಪ್ರಸಾದ್ ಖಾಸಗಿ ದೂರು ಸಲ್ಲಿಸಿದ್ದರು ಈ ಪ್ರಕರಣದ ಪರಿಶೀಲನೆ ವೇಳೆ ಪೊಲೀಸರು ನ್ಯಾಯಾಲಯಕ್ಕೆ…

Read More

ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರ ಇದೀಗ ರಣಕಣವಾಗಿ ಮಾರ್ಪಟ್ಟಿದ್ದು, ಈಗಾಗಲೇ ಬಿಜೆಪಿ ಅಭ್ಯರ್ಥಿಯಾಗಿರುವ ಪ್ರಭಾವಿ ರಾಜಕಾರಣಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬಿಜೆಪಿ ಟಿಕೆಟ್ ಪಡೆದು, ಮತ್ತೊಮ್ಮೆ ಗೆಲುವಿನ ನಾಗಾಲೋಟ ಮುಂದುವರೆಸುವ ವಿಶ್ವಾಸದಲ್ಲಿದ್ದಾರೆ. ಈ ಬೆನ್ನಲ್ಲೇ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಶ್ರೀಗಳು ಪ್ರಲ್ಹಾದ್ ಜೋಶಿ ಅವರಿಂದ ಲಿಂಗಾಯತರಿಗೆ ಅನ್ಯಾಯವಾಗಿದೆ.  ಅವರನ್ನು ಧಾರವಾಡ ಲೋಕಸಭಾದಿಂದ ಬೇರೆಡೆ ವರ್ಗಾವಣೆ ಮಾಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇದೀಗ ಸ್ವತಃ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದು, ದಿಂಗಾಲೇಶ್ವರ ಶ್ರೀಗಳ ಮೇಲೆ ಅಪಾರವಾದ ಅಭಿಮಾನವಿದ್ದು, ಅವರು ನೀಡಿರುವ ಹೇಳಿಕೆಗಳು ನನಗೆ ಆರ್ಶೀವಾದ ಇದ್ದಂತೆ ಎಂದಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿಂಗಾಲೇಶ್ವರ ಶ್ರೀಗಳು ಸುಪ್ರಸಿದ್ಧ ಮಠಾಧಿಪತಿಗಳು, ಅವರ ಮೇಲೆ ಅತೀವವಾದ ಭಕ್ತಿ ಗೌರವವಿದೆ. ಅವರ ಗುರುಗಳೊಂದಿಗೆ ಕಳೆದ 30-35 ವರ್ಷಗಳ ಸಂಬಂಧ ಹೊಂದಿದ್ದೇನೆ. ದಿಂಗಾಲೇಶ್ವರ ಶ್ರೀಗಳು ನನ್ನ ಬಗ್ಗೆ ತಪ್ಪು ತಿಳುವಳಿಕೆ ಹೊಂದಿದ್ದಾರೆ. ಅವರ ಹೇಳಿಕೆಗಳು ನನಗೆ ಆರ್ಶೀವಾದ, ಮುಂದಿನ ದಿನಗಳಲ್ಲಿ ತಪ್ಪು ತಿಳಿವಳಿಕೆ ಸರಿಮಾಡುವ…

Read More

ರಾಮನಗರ: ಇಂದಿನಿಂದ ಲೋಕಸಭಾ ಚುನಾವಣಾ(Loksabha) ರಣಕಣ ರಂಗೇರಲಿದ್ದು, ಮೊದಲ ಹಂತದ ಚುನಾವಣಾ ಕ್ಷೇತ್ರಗಳಲ್ಲಿ ಇಂದಿನಿಂದ ನಾಮಪತ್ರ(Nomination) ಸಲ್ಲಿಕೆ ಮಾಡಲಾಗುವುದು. ನಾಮಪತ್ರ ಸಲ್ಲಿಕೆಗೆ ಸಾಕ್ಷಿಯಾಗಲಿರುವ ರಾಜ್ಯದ ಮತದಾರರು. ಘಟಾನುಘಟಿ ನಾಯಕರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 4 ಕಡೇ ದಿನವಾಗಿದೆ. ಏಪ್ರಿಲ್ 5ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 8 ನಾಮಪತ್ರ ವಾಪಸ್‌ಗೆ ಕಡೇ ದಿನವಾಗಿದೆ. ಇಂದಿನಿಂದ ನಾಮಪತ್ರ ಸಲ್ಲಿಕೆ ಶುರುವಾಗಿದ್ದು ಮೊದಲ ದಿನವೇ ಡಿಕೆ ಸುರೇಶ್ ನಾಮಮತ್ರ ಸಲ್ಲಿಸಿದ್ದಾರೆ. https://ainlivenews.com/to-be-under-sugar-cholesterol-weight-control-you-should-eat-pulses/ ಇನ್ನು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ – ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಹೃದಯ ತಜ್ಞ ಡಾ ಸಿಎನ್‌ ಮಂಜುನಾಥ್‌ ಅವರು ಕಣಕ್ಕಿಳಿದಿದ್ದಾರೆ. ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡರ ಅಳಿಯ ಹಾಗೂ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಬಡ ರೋಗಿಗಳ ಪಾಲಿನ ಭರವಸೆಯಾಗಿ ಬದಲಾಯಿಸಿದ ಡಾ.ಮಂಜುನಾಥ್‌ ಜನಪ್ರಿಯ ವ್ಯಕ್ತಿ.…

Read More

ಕರ್ನಾಟಕದಲ್ಲಿ ಮೊದಲ ಹಂತದಲ್ಲಿ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳ  ಚುನಾವಣೆಯ ನಾಮಪತ್ರ (Nomination File) ಸಲ್ಲಿಕೆ ಇಂದಿನಿಂದ ಆರಂಭವಾಗಿದೆ. ಈ ಹಿನ್ನೆಲೆ ಇಂದು ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ  ನಾಮಪತ್ರ ಸಲ್ಲಿಸಿದರು. https://ainlivenews.com/to-be-under-sugar-cholesterol-weight-control-you-should-eat-pulses/ ನಾಮಪತ್ರ ಸಲ್ಲಿಕೆಗೂ ಮುನ್ನ ಹೊಳೆನರಸೀಪುರದ ರಾಘವೇಂದ್ರಸ್ವಾಮಿ, ಆಂಜನೇಯಸ್ವಾಮಿ, ಮಾವಿನಕೆರೆ ರಂಗನಾಥಸ್ವಾಮಿ ಲಕ್ಷ್ಮಿನರಸಿಂಹ ಸೇರಿದಂತೆ ವಿವಿಧ ದೇಗುಲಗಳಲ್ಲಿ ಪ್ರಜ್ವಲ್ ರೇವಣ್ಣ ಅವರು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಡಿಸಿ ಕಚೇರಿಗೆ ಆಗಮಿಸಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.ನಾಮಪತ್ರ ಸಲ್ಲಿಕೆ ವೇಳೆ ಶಾಸಕ ಮಾಜಿ ಸಚಿವ ಹೆಚ್.ಡಿ ರೇವಣ್ಣ ಶಾಸಕರಾದ ಎ.ಮಂಜು ಸಿ.ಎನ್ ಬಾಲಕೃಷ್ಣ ಸ್ವರೂಪ್ ಭಾಗಿಯಾಗಿದ್ದರು.

Read More

ರಾಮನಗರ: ಇಂದಿನಿಂದ ಲೋಕಸಭಾ ಚುನಾವಣಾ(Loksabha) ರಣಕಣ ರಂಗೇರಲಿದ್ದು, ಮೊದಲ ಹಂತದ ಚುನಾವಣಾ ಕ್ಷೇತ್ರಗಳಲ್ಲಿ ಇಂದಿನಿಂದ ನಾಮಪತ್ರ(Nomination) ಸಲ್ಲಿಕೆ ಮಾಡಲಾಗುವುದು. ಈ ನಡುವೆ ನಾಮಪತ್ರ ಸಲ್ಲಿಕೆಗೂ ಮುನ್ನ ಡಿ.ಕೆ ಸುರೇಶ್ ತಮ್ಮ ಮನೆ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. https://ainlivenews.com/to-be-under-sugar-cholesterol-weight-control-you-should-eat-pulses/ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಡಿ.ಕೆ.ಸುರೇಶ್ ಇಂದು ಬೃಹತ್ ಮೆರವಣಿಗೆ ಮೂಲಕ  ನಾಮಪತ್ರ ಸಲ್ಲಿಕೆ ಮಾಡಲಿದ್ದು ಅದಕ್ಕೂ ಮುನ್ನ ತಮ್ಮ ಮನೆ ದೇವರು ಸ್ವಕ್ಷೇತ್ರ ಕನಕಪುರದ ಕೆಂಕೇರಮ್ಮ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.  ಈ ವೇಳೆ  ಡಿ.ಕೆ ಸುರೇಶ್ ಸಹೋದರ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಸಹ ಉಪಸ್ಥಿತರಿದ್ದರು.

Read More