Author: AIN Author

ಬೆಂಗಳೂರು: ತೆಲುಗಿನ ಖ್ಯಾತ ನಟ ಚಿರಂಜೀವಿ (Chiranjeevi) ಬೆಂಗಳೂರಿನಲ್ಲಿ (Bangalore) ಅತ್ಯಂತ ಸುಸಜ್ಜಿತ ಮನೆ ಹೊಂದಿದ್ದಾರೆ ಎನ್ನುವ ವಿಚಾರ ತುಂಬಾ ಜನರಿಗೆ ಗೊತ್ತಿಲ್ಲ. ಹೌದು, ಬೆಂಗಳೂರಿನಲ್ಲಿ ಚಿರಂಜೀವಿ ಫಾರ್ಮ್ ಹೌಸ್ (Farm House) ಹೊಂದಿದ್ದಾರೆ. ಅಲ್ಲಿ ನಿತ್ಯವೂ ನೀರು (Water) ಜಿನುಗುವಂತೆ ಮಾಡಿದ್ದಾರೆ. ಬೆಂಗಳೂರು ಸದ್ಯ ನೀರಿನ ಹಾಹಾಕಾರವನ್ನು ಅನುಭವಿಸುತ್ತಿದ್ದರೆ, ಚಿರಂಜೀವಿ ಮನೆಯಲ್ಲಿ ಯಾವುದೇ ನೀರಿನ ಕೊರತೆ ಇಲ್ಲವಂತೆ. ಅದು ಹೇಗೆ ಎಂದು ಹುಬ್ಬೇರಿಸಬಹುದು. ನೀರು ಸದಾ ಜಿನುಗುವಂತೆ ಮಾಡಲು ಅವರು ಮನೆಯಲ್ಲಿ ಅದಕ್ಕೊಂದು ವ್ಯವಸ್ಥೆ ಮಾಡಿದ್ದಾರೆ. ಅದನ್ನು ಕನ್ನಡದಲ್ಲೇ ಚಿರಂಜೀವಿ ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಸುದೀರ್ಘವಾಗಿ ಹಂಚಿಕೊಂಡಿದ್ದಾರೆ. ಜೊತೆಗೆ ನೀರಿನ ಮಹತ್ವವನ್ನು ತಿಳಿಸಿದ್ದಾರೆ. ಈ ಪೋಸ್ಟ್ ಸ್ವಲ್ಪ ಉದ್ದವಾಗಿದ್ದರೂ, ಪಾಯಿಂಟ್ ಚಿಕ್ಕದಾದರೂ… ಬಹಳ ಮುಖ್ಯ. ನಮಗೆಲ್ಲರಿಗೂ ತಿಳಿದಿರುವಂತೆ, ನೀರು ಅತ್ಯಂತ ಅಮೂಲ್ಯವಾದ ವಸ್ತು, ನೀರಿನ ಕೊರತೆಯು ದೈನಂದಿನ ಜೀವನವನ್ನು ಕಷ್ಟಕರವಾಗಿಸುತ್ತದೆ. ಇಂದು ಬೆಂಗಳೂರಿನಲ್ಲಿ ನೀರಿನ ಕೊರತೆ ಎದುರಾಗಬಹುದು. ನಾಳೆ ಎಲ್ಲಿ ಬೇಕಾದರೂ ಸಂಭವಿಸಬಹುದು.ಆದ್ದರಿಂದ ನೀರನ್ನು ಸಂರಕ್ಷಿಸಲು ಸಹಾಯ ಮಾಡುವ…

Read More

ಬೆಂಗಳೂರು : ರಾಜ್ಯದಲ್ಲಿ ಲೋಕಸಭಾ ಮತ ಸಮರಕ್ಕೆ ನಾಳೆಯಿಂದ ಅಧಿಕೃತ ಚಾಲನೆ ಸಿಗಲಿದೆ. ಒಟ್ಟು ಎರಡು ಹಂತಗಳಲ್ಲಿ ನಡೆಯುವ ಚುನಾವಣೆಗೆ ನಾಳೆಯಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಏಪ್ರಿಲ್ 4 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಏಪ್ರಿಲ್ 5 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 8 ರಂದು ನಾಮಪತ್ರ (ಉಮೇದುವಾರಿಕೆ) ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಏಪ್ರಿಲ್ 26 ರಂದು ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆಯಲಿದ್ದು, ಎರಡನೇ ಹಂತದ ಮತದಾದನ ಮೇ 7 ರಂದು ನಡೆಯಲಿದೆ. ಜೂನ್​ 4 ರಂದು ಮತ ಎಣಿಕೆ (ಫಲಿತಾಂಶ) ಪ್ರಕಟವಾಗಲಿದೆ. https://ainlivenews.com/grandmother-and-granddaughter-who-boarded-the-bus-as-free-tickets-rs-444-for-4-lovebirds-en-guru-ksrtc-mahima/ ಏ.26ರಂದು ಈ ಜಿಲ್ಲೆಗಳಲ್ಲಿ ಮತದಾನ ರಾಜ್ಯದಲ್ಲಿ ಏಪ್ರಿಲ್​ 26 ರಂದು ಮೊದಲ ಹಂತದಲ್ಲಿ 14 ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ. ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರದಲ್ಲಿ ಚುನಾವಣೆ ನಡೆಯಲಿದೆ. ಲೋಕಸಭಾ ಚುನಾವಣಾ ವೇಳಾಪಟ್ಟಿ ಮೊದಲ ಹಂತ ಚುನಾವಣೆ ಘೋಷಣೆ…

Read More

ಚೆನ್ನೈ: ತವರಿನಲ್ಲಿ ಚೆನ್ನೈ ಸಿಡಿಸಿದ ರನ್‌ ಮಳೆಗೆ ಗುಜರಾತ್‌ ಟೈಟಾನ್ಸ್‌ (Gujarat Titans) ಕೊಚ್ಚಿ ಹೋಗಿದೆ. ಬ್ಯಾಟಿಂಗ್‌, ಬೌಲಿಂಗ್‌, ಫೀಲ್ಡಿಂಗ್‌ನಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ ಚೆನ್ನೈ ಸೂಪರ್‌ ಕಿಂಗ್ಸ್‌ (CSK) 63 ರನ್‌ಗಳ ಭರ್ಜರಿ ಜಯದೊಂದಿಗೆ ಐಪಿಎಲ್‌ (IPL) ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಜಿಗಿದಿದೆ. ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಚೆನ್ನೈ 6 ವಿಕೆಟ್‌ ನಷ್ಟಕ್ಕೆ 206 ರನ್‌ ಗಳಿಸಿತು. ಕಠಿಣ ಸವಾಲನ್ನು ಬೆನ್ನಟ್ಟಿದ ಗುಜರಾತ್‌ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 143 ರನ್‌ ಗಳಿಸಿ ಸೋಲೊಪ್ಪಿಕೊಂಡಿತು. https://ainlivenews.com/opportunity-to-apply-for-new-ration-card-from-april-1/ ತಂಡದ ಮೊತ್ತ 28 ರನ್‌ಗಳಿಸಿದಾಗ ಶುಭಮನ್‌ ಗಿಲ್‌ (Shubaman Gill) 8 ರನ್‌ ಗಳಿಸಿ ಎಲ್‌ಬಿಗೆ ಔಟಾದರು. 55 ರನ್‌ಗಳಿಸುವಷ್ಟರಲ್ಲಿ ಗುಜರಾತ್‌ ಪ್ರಮುಖ ಮೂರು ವಿಕೆಟ್‌ ಕಳೆದುಕೊಂಡಿತ್ತು. 12 ರನ್‌ಗಳಿಸಿದ್ದ ವಿಜಯ್‌ ಶಂಕರ್‌ ಅವರ ಕ್ಯಾಚನ್ನು ಧೋನಿ (Dhoni) ಹಾರಿ ಪಡೆದು ತಂಡಕ್ಕೆ ಮುನ್ನಡೆ ತಂದುಕೊಟ್ಟರು. 21 ರನ್‌ ಗಳಿಸಿ ಸಿಕ್ಸ್‌ ಸಿಡಿಸಲು ಹೋಗಿ ರಹಾನೆ ಹಿಡಿದ ಉತ್ತಮ…

Read More

ಚೆನ್ನೈ: ಗುಜರಾತ್‌ ಟೈಟಾನ್ಸ್‌ (Gujarat Titans) ವಿರುದ್ಧದ ಪಂದ್ಯದಲ್ಲಿ ಲೆಜೆಂಡ್‌ ಎಂ.ಎಸ್‌ ಧೋನಿ (MS Dhoni) ಹಿಡಿದ ಸ್ಟನ್ನಿಂಗ್‌ ಕ್ಯಾಚ್‌ವೊಂದು ಸೋಶಿಯಲ್‌ ಮೀಡಿಯಾದಲ್ಲಿ ಧೂಳೆಬ್ಬಿಸಿದೆ. ಹೌದು. ಸಿಎಸ್‌ಕೆ (CSK) ತಂಡದ ಉಸಿರು ಯಾರು ಎಂದು ಕೇಳಿದರೆ ಪ್ರತಿಯೊಬ್ಬ ಕ್ರಿಕೆಟ್ ಅಭಿಮಾನಿಯೂ (Cricket Fans) ನಿಸ್ಸಂಶಯವಾಗಿ ಧೋನಿ ಹೆಸರನ್ನೇ ಹೇಳುತ್ತಾರೆ. 42 ವರ್ಷದ ಮಹಿ, 2008ರಲ್ಲಿ ಐಪಿಎಲ್‌ ಆರಂಭವಾದಾಗಿನಿಂದ ಚೆನ್ನೈ ತಂಡದ ನಾಯಕನಾಗಿದ್ದಾರೆ. 2013ರಿಂದ 2 ವರ್ಷಗಳ ಕಾಲ ತಂಡವನ್ನು ಅಮಾನತುಗೊಳಿಸಿದ್ದು, ಹೊರತುಪಡಿಸಿ ಉಳಿದ ಎಲ್ಲ ಆವೃತ್ತಿಗಳಲ್ಲೂ ಚೆನ್ನೈ ತಂಡದಿಂದ ಹೊರಬಂದಿಲ್ಲ. https://twitter.com/i/status/1772668226721230906 ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ಗೂ ನಿವೃತ್ತಿ ಘೋಷಣೆ ಮಾಡಿರುವ ಎಂ.ಎಸ್‌ ಧೋನಿ ಐಪಿಎಲ್‌ನಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿದ್ದಾರೆ. ನಿವೃತ್ತಿಯ ಅಂಚಿನಲ್ಲಿದ್ದರು ಚಿರಯುವಕನಿಗೆ ಸರಿಸಮನಾಗಿ ನಿಂತು ಮೈದಾನದಲ್ಲಿ ಉತ್ಸಾಹದಿಂದ ಪಂದ್ಯವನ್ನಾಡುತ್ತಿದ್ದಾರೆ. ಗುಜರಾತ್‌ ವಿರುದ್ಧ ಮಹಿ ಹಿಡಿದ ಸ್ಟನ್ನಿಂಗ್‌ ಕ್ಯಾಚ್‌ (Stunning Catch) ಇದಕ್ಕೆ ತಾಜಾ ಉದಾಹರಣೆಯಾಗಿದೆ. 206 ರನ್‌ಗಳ ಬೃಹತ್‌ ಮೊತ್ತದ ಚೇಸಿಂಗ್‌ ಆರಂಭಿಸಿದ ಟೈಟಾನ್ಸ್‌ ಪಡೆ ಆರಂಭದಲ್ಲೇ ಅಗ್ರ ಕ್ರಮಾಂಕದ…

Read More

ಚಿಕ್ಕಮಗಳೂರು: ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರು ತಮ್ಮ ಪುತ್ರ ಪ್ರಜ್ವಲ್‌ ರೇವಣ್ಣ ಅವರ ‘ಬಿ’ ಫಾರಂಗೆ ಶೃಂಗೇರಿಯ ದೇಗುಲಗಳಲ್ಲಿ ಪೂಜೆ ಮಾಡಿಸಿದರು. ಹಾಸನ ಲೋಕಸಭಾ ಕ್ಷೇತ್ರಕ್ಕೆ ಪ್ರಜ್ವಲ್‌ ರೇವಣ್ಣ ಅವರಿಗೆ ಟಿಕೆಟ್‌ ಫೈನಲ್‌ ಆಗುತ್ತಿದ್ದಂತೆ ಎಚ್‌.ಡಿ.ರೇವಣ್ಣ ಅವರು, https://ainlivenews.com/what-are-the-benefits-of-eating-cucumber-in-summer-here-are-the-full-details/ ‘ಬಿ’ ಫಾರಂ ಸಹಿತ ಶ್ರೀ ಕ್ಷೇತ್ರ ಶೃಂಗೇರಿಗೆ ಒಬ್ಬರೇ ಆಗಮಿಸಿದರು. ಶಾರದಾಂಬೆ ಹಾಗೂ ತೋರಣ ಗಣಪತಿಯ ಸನ್ನಿಧಿಯಲ್ಲಿ ‘ಬಿ’ ಫಾರಂ ಇರಿಸಿ, ಪೂಜೆ ಮಾಡಿಸಿಕೊಂಡು ವಾಪಸ್‌ ತೆರಳಿದರು. ಪ್ರಜ್ವಲ್‌ ರೇವಣ್ಣ ಅವರು ಎರಡನೇ ಬಾರಿಗೆ ಹಾಸನ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದಾರೆ.

Read More

ಮೈಸೂರು: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಅಖಾಡ ರಂಗೇರಿದ್ದು, ಸಿದ್ದರಾಮಯ್ಯ ತವರಿಗೆ ಬಿ.ವೈ.ವಿಜಯೇಂದ್ರ ಎಂಟ್ರಿ ಕೊಟ್ಟಿದ್ದಾರೆ. ಇಂದು ಚಾಮುಂಡಿಬೆಟ್ಟಕ್ಕೆ ಆಗಮಿಸಿ ನಾಡ ದೇವತೆ ತಾಯಿ ಚಾಮುಂಡೇಶ್ವರಿ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. https://ainlivenews.com/what-are-the-benefits-of-eating-cucumber-in-summer-here-are-the-full-details/ ಬಳಿಕ ಗೋಪೂಜೆ ಮಾಡುವ ಮೂಲಕ ಪ್ರಚಾರಕ್ಕೆ ಬಿ.ವೈ ವಿಜಯೇಂದ್ರ ಚಾಲನೆ ನೀಡಿದರು. ಇನ್ನು ಇದೇ ವೇಳೆ ವಿಜಯೇಂದ್ರರಿಗೆ ಬಿಜೆಪಿ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತ ಕೋರಿದರು. ಈ ವೇಳೆ ನಗರಾಧ್ಯಕ್ಷ ಎಲ್.ನಾಗೇಂದ್ರ, ಚಾಮರಾಜನಗರ ಅಭ್ಯರ್ಥಿ ಎಸ್.ಬಾಲರಾಜು, ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ ಸೇರಿದಂತೆ ಇತರರು ಭಾಗಿಯಾಗಿದ್ದರು.

Read More

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi), ಅವರು ಇಂದು ಬಂಗಾಳದ ಸಂದೇಶ್‌ ಖಾಲಿಯಿಂದ (Sandeshkhali Victim) ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆ, ಹಾಲಿ ಬಸಿರ್‌ಹತ್ ಲೋಕಸಭಾ ಕ್ಷೇತ್ರದ (Basirhat Lok Sabha Election) ಬಿಜೆಪಿ ಅಭ್ಯರ್ಥಿ ರೇಖಾ ಪಾತ್ರಾ (Rekha Patra) ಅವರಿಗೆ ಕರೆ ಮಾಡಿ ಚುನಾವಣಾ ಸಿದ್ಧತೆಗಳ ಬಗ್ಗೆ ಕೇಳಿದ್ದಾರೆ. ರೇಖಾ ಪಾತ್ರಾ ಅವರನ್ನು ಶಕ್ತಿ ಸ್ವರೂಪ ಎಂದು ಬಣ್ಣಿಸಿದ ಮೋದಿ ಸಂದೇಶಖಾಲಿಯ ಮಹಿಳೆಯರಿಗೆ ನೀವು ದೇವರಿದ್ದಂತೆ. ನಿಮ್ಮನ್ನು ಅಭ್ಯರ್ಥಿಯನ್ನಾಗಿ ಮಾಡುವ ಮೂಲಕ ಬಿಜೆಪಿ ಉತ್ತಮ ಕೆಲಸ ಮಾಡಿದೆ ಎಂದರು. ಟಿಎಂಸಿ (TMC) ಕಿರುಕುಳದ ಬಗ್ಗೆ ಮೋದಿ ಅವರಲ್ಲಿ ದೂರು ನೀಡಿದ ರೇಖಾ ಪಾತ್ರಾ, 2011 ರಿಂದ ನಾವು ಇಲ್ಲಿ ಮತದಾನ ಮಾಡಲು ಸಾಧ್ಯವಾಗಲಿಲ್ಲ. ತೃಣಮೂಲ ಕಾಂಗ್ರೆಸ್ ನಾಯಕರು ಕಿರುಕುಳ ನೀಡುತ್ತಿದ್ದಾರೆ. ನಮಗೆ ನಮ್ಮ ಮತಗಳನ್ನು ಚಲಾಯಿಸಲು ಸೂಕ್ತ ಭದ್ರತೆಯನ್ನು (Security) ನೀಡುವಂತೆ ನಾವು ಮನವಿ ಮಾಡುತ್ತೇವೆ ಎಂದು ಕೇಳಿಕೊಂಡರು. https://ainlivenews.com/what-are-the-benefits-of-eating-cucumber-in-summer-here-are-the-full-details/ ನಾನು ಹಿಂದುಳಿದ ಕುಟುಂಬದಿಂದ ಬಂದಿದ್ದು ನನ್ನ…

Read More

ಬೆಂಗಳೂರು: ಫ್ರೀ ಟಿಕೆಟ್‌ ಎಂದು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಸರ್ಕಾರದ ಫ್ರೀ ಬಸ್​ ಯೋಜನೆ ಅಜ್ಜಿ ಮೊಮ್ಮಗಳಿಗೆ ಫ್ರೀ ಟಿಕೆಟ್‌.. ನಾಲ್ಕು ಲವ್ ಬರ್ಡ್ಸ್​ಗಳಿಗೆ ಬರೋಬ್ಬರಿ 444 ರೂಪಾಯಿ ಟಿಕೆಟ್.. ಅಬ್ಬಬ್ಬಾ.. ಏನ್‌ ಗುರು ಇದು, ಕೆಎಸ್‌ಆರ್‌ಟಿಸಿ ಮಹಿಮೆ.. ಅಜ್ಜಿ ಮೊಮ್ಮಗಳಿಗೆ ಫ್ರೀ ಟಿಕೆಟ್‌ ಕೊಡ್ತಾರಂತೆ.. ಅವರು ತೆಗೆದುಕೊಂಡು ಹೋದ ಪಕ್ಷಿಗಳಿಗೆ ಮಾತ್ರ ದುಡ್ಟು ಕೊಟ್ಟು ಟಿಕೆಟ್‌ ತೆಗೆದುಕೊಳ್ಳಲೇಬೇಕಂತೆ.. ಅದು ಹತ್ತು – ಇಪ್ಪತ್ತು ರೂಪಾಯಿಯಲ್ಲ.. ಹತ್ರತ್ರ ಸುಮಾರು 500 ರೂಪಾಯಿ. ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಶಕ್ತಿ ಯೋಜನೆಯ ಫ್ರೀ ಟಿಕೆಟ್‌ ಕೊಟ್ಟಿದ್ದು, ಅವರು ತೆಗೆದುಕೊಂಡು ಹೋಗುತ್ತಿದ್ದ ನಾಲ್ಕು ಪಕ್ಷಿಗಳಿಗೆ 444 ರೂ. ಮೌಲ್ಯದ ಟಿಕೆಟ್‌ ಅನ್ನು ಕಂಡಕ್ಟರ್‌ ಕೊಟ್ಟಿದ್ದಾರೆ. ಮಹಿಳೆ ಯಾಕೆ ಎಂದು ಕೇಳಿದರು ಕೂಡ ಟಿಕೆಟ್‌ ಕೊಟ್ಟಿದ್ದರಿಂದ ಅನಿವಾರ್ಯವಾಗಿ ದುಡ್ಡು ಕೊಟ್ಟು ಅಜ್ಜಿ – ಮೊಮ್ಮಗಳು ಬಸ್‌ನಲ್ಲಿ ಪ್ರಯಾಣ ಮುಂದುವರಿಸಿದ್ದಾರೆ. ಬೆಂಗಳೂರು ಟು…

Read More

ದಾಸವಾಳ ಹೂವುಗಳು ಎಂದರೆ ಸಾಮಾನ್ಯವಾಗಿ ಎಲ್ಲರೂ ದೇವರಿಗೆ ಪ್ರಿಯವಾದ ಹೂವು ಎಂದು ಕೊಳ್ಳುತ್ತಾರೆ. ಇಲ್ಲವೇ ಅಲಂಕಾರಕ್ಕೆ ಹೇಳಿ ಮಾಡಿಸಿದ್ದು ಎಂದು ತಿಳಿಯುತ್ತಾರೆ. ಆದರೆ ಹೂವು ಹೇಗೆ ವಿವಿಧ ಬಣ್ಣಗಳಿಂದ ಸುಂದರವಾಗಿ ಇದೆಯೋ ಹಾಗೆಯೇ ಅದರ ಉಪಯೋಗಗಳು ಕೂಡ ಬಹಳಷ್ಟಿವೆ ಎಂದು ತಿಳಿದುಕೊಂಡವರು ಬಹುಶಃ ಅಲ್ಪಸ್ವಲ್ಪ ಮಂದಿಯಷ್ಟೇ. ಹಾಗಿದ್ದರೆ ಮನೆಯ ಅಂಗಳದಲ್ಲಿ ಅರಳುವ ದಾಸವಾಳ ಎಷ್ಟು ಅನುಕೂಲಕಾರಿ ಎನ್ನುವುದರ ಬಗ್ಗೆ ತಿಳಿದುಕೊಳ್ಳೋಣ. ಶೀತ- ವೈರಸ್‌ ಬಾಧೆ ದೂರ ಶೀತ, ಕೆಮ್ಮು, ತಲೆನೋವು ಕಾಣಿಸಿದಾಗ ದಾಸವಾಳ ಹೂವನ್ನು ತಿಂದರೆ ಅಥವಾ ಅದರಿಂದ ಟೀ ಮಾಡಿ ಕುಡಿದರೆ ಈ ಸಣ್ಣ-ಪುಟ್ಟ ಸಮಸ್ಯೆಗಳಿಂದ ಪಾರಾಗಬಹುದು. ದಾಸವಾಳದಲ್ಲಿ anti oxidants ಅಧಿಕವಿರುವುದರಿಂದ ಇದು ದೇಹದಲ್ಲಿರುವ ಬೇಡದ ಕಲ್ಮಶಗಳನ್ನು ಹೊರಹಾಕಿ, ಶಕ್ತಿ ವರ್ಧಕವಾಗಿ ಕೆಲಸ ಮಾಡುತ್ತದೆ. ಈ ಹೂವಿನಲ್ಲಿ anti oxidants ಮತ್ತು ವಿಟಮಿನ್ ಸಿ ಅಧಿಕವಿರುವುದರಿಂದ ರೋಗ ನಿರೋಧಕ ಸಾಮರ್ಥ್ಯ ಹೆಚ್ಚಿಸುತ್ತದೆ. ಮೆನೋಪಾಸ್‌ ಸಮಸ್ಯೆಗೆ ಮಹಿಳೆಯರಿಗೆ ಮೆನೋಪಾಸ್ ಸಮಯದಲ್ಲಿ ಹಾಟ್ ಪ್ಲಾಷ್ ಸಮಸ್ಯೆ ಕಂಡು ಬರುತ್ತದೆ. ತುಂಬಾ ಸೆಕೆಯಾದಂತೆ…

Read More

ಬೆಂಗಳೂರು: ಉಡುಪಿ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಅವರು ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿಗಳಾದ  HD ಕುಮಾರಸ್ವಾಮಿ ಅವರನ್ನು ಜೆ ಪಿ ನಗರದ ನಿವಾಸದಲ್ಲಿ ಸೌಹಾರ್ಧ ಭೇಟಿ ಮಾಡಿ ಮಾತುಕತೆ ನಡೆಸಿದರು. ಇಲ್ಲಿನ ಜೆಪಿ ನಗರ ನಿವಾಸದ ಬಳಿ ಮಾತನಾಡಿದ ಅವರು, ಕೋರ್ ಕಮಿಟಿ ಸಭೆಯಲ್ಲಿ ಮಂಡ್ಯ, ಕೋಲಾರ ಕ್ಷೇತ್ರಗಳ ಬಗ್ಗೆ ಚರ್ಚೆ ಆಗಿದೆ. ಮಂಡ್ಯಕ್ಕೆ ಕುಮಾರಸ್ವಾಮಿ ಅವರ ಹೆಸರೇ ಅಧಿಕೃತ ಆಗಿದೆ ಎಂದು ಹೇಳಿದ್ದಾರೆ. ಕೋಲಾರ ಅಭ್ಯರ್ಥಿ ವಿಚಾರವಾಗಿ, ಈಗಾಗಲೇ ದೇವೇಗೌಡರು ಅಭ್ಯರ್ಥಿ ಘೋಷಣೆ ಮಾಡಿದ್ದಾರೆ. ದೇವೇಗೌಡರ ನಿರ್ಧಾರವೇ ಅಂತಿಮ. ದೇವೇಗೌಡರು ಎಲ್ಲಾ ನಾಯಕರ ಭಾವನೆ ತಿಳಿದುಕೊಂಡು ನಿರ್ಧಾರ ಘೋಷಣೆ ಮಾಡಿರುತ್ತಾರೆ. ಮಲ್ಲೇಶ್ ಬಾಬು ಅವರ ಹೆಸರು ಘೋಷಣೆ ಮಾಡಿದ್ದಾರೆ. ಮಲ್ಲೇಶ್ ಬಾಬು ಮೃದು ಸ್ವಾಭಾವದ ವ್ಯಕ್ತಿ. ಪಕ್ಷಕ್ಕೆ ನಿಷ್ಠೆ ಇರುವ ವ್ಯಕ್ತಿ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಸೋತಿದ್ದರು. ಮಲ್ಲೇಶ್ ಬಾಬು ಜೊತೆಗೆ ನಿಸರ್ಗ ನಾರಾಯಣಸ್ವಾಮಿ, ಸಂಮೃದ್ಧಿ ಮಂಜುನಾಥ್ ಕೂಡಾ…

Read More