Author: AIN Author

ದಾವಣಗೆರೆ:- ಎಂಪಿ ಟಿಕೆಟ್ ಸಿಗದೆ ಮುನಿಸಿಕೊಂಡಿರುವ ಶಿಷ್ಯ ರೇಣುಕಾಚಾರ್ಯ ಮುನಿಸು ಶಮನಗೊಳಿಸುವಲ್ಲಿ ಬಿಎಸ್ ವೈ ವಿಫಲವಾಗಿದ್ದಾರೆ. https://ainlivenews.com/another-wicket-falls-for-bjp-in-mysore/#google_vignette ಕುಟುಂಬಕ್ಕೆ ಟಿಕೆಟ್ ನೀಡಬಾರದು ಎಂಬ ಸ್ಥಳೀಯ ಬಿಜೆಪಿ ನಾಯಕರ ವಿರೋಧದ ನಡುವೆಯೂ ಸಿದ್ದೇಶ್ವರ ಪತ್ನಿ ಗಾಯತ್ರಿ ಅವರಿಗೆ ಟಿಕೆಟ್ ನೀಡಲಾಗಿದೆ. ಇದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಸೇರಿದಂತೆ ಸ್ಥಳೀಯ ನಾಯಕರ ಕಣ್ಣು ಕೆಂಪಗಾಗಿಸಿದೆ. ಈ ವಿಚಾರವಾಗಿ ಇಂದು ಬಿಎಸ್ ಯಡಿಯೂರಪ್ಪ ಅವರು ತನ್ನ ಶಿಷ್ಯನ ಮುನಿಸು ಶಮನಕ್ಕೆ ಸಭೆ ನಡೆಸಿ ಮಾತುಕತೆ ನಡೆಸಿದರೂ ರೇಣುಕಾಚಾರ್ಯ ಅವರು ತೃಪ್ತರಾಗದೆ ಕೋಪದಿಂದಲೇ ಹೊರನಡೆದರು. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ದಾವಣಗೆರೆ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಹೀಗಾಗಿ ದಾವಣಗೆರೆ ನಗರದ ಹೊರ ವಲಯದ ಅಪೂರ್ವ ರೆಸಾರ್ಟನಲ್ಲಿ ಅಸಮಾಧಾನಿತ ನಾಯಕರ ಜೆತೆ ಯಡಿಯೂರಪ್ಪ ಅವರು ಸಭೆ ನಡೆಸಿದ್ದು, ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾಮೋಹನ್ ದಾಸ್​ ಉಪಸ್ಥಿತರಿದ್ದರು. ಈ ಸಭೆಗೆ ಎಂ.ಪಿ.ರೇಣುಕಾಚಾರ್ಯ ನೇತೃತ್ವದ ರೆಬಲ್ ತಂಡ ಕೂಡ ಭಾಗಿಯಾಗಿದೆ. ರೆಬಲ್ ಬಿಜೆಪಿ ಸಭೆಗೆ ಹಾಲಿ ಸಂಸದ ಜಿಎಂ ಸಿದ್ದೇಶ್ವರ, ಮಾಜಿ…

Read More

ಮೈಸೂರು:- 2024 ರ ಲೋಕಸಭಾ ಚುನಾವಣೆ ಹಿನ್ನೆಲೆ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಆಪ್ತರಿಗೆ ಕಾಂಗ್ರೆಸ್ ಗಾಳ ಹಾಕಿದೆ. ಇದರ ಭಾಗವಾಗಿ ಮೈಸೂರು ಜಿಲ್ಲೆಯಲ್ಲಿ ಬಿಜೆಪಿಯ ಮತ್ತೊಂದು ವಿಕೆಟ್ ಪತನವಾಗಿದೆ. ಹೌದು..ಮಾಜಿ ಸಚಿವ ಕೋಟೆ ಶಿವಣ್ಣ ಬಿಜೆಪಿ ತೊರೆದು ಕಾಂಗ್ರೆಸ್​ನತ್ತ ಮುಖ ಮಾಡಿದ್ದಾರೆ. https://ainlivenews.com/a-case-of-assault-on-a-woman-in-a-bus-what-did-the-conductor-say/ ಕೋಟೆ ಶಿವಣ್ಣ ಅವರು ನಾಳೆ(ಮಾರ್ಚ್ 27) ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಈ ಬಗ್ಗೆ ಮೈಸೂರು ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಡಾ. ಬಿ.ಜೆ ವಿಜಯಕುಮಾರ್ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಅಲ್ಲದೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಚ್​ವಿ ರಾಜೀವ್ ಅವರು ಸಹ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. 1976ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದ ಶಿವಣ್ಣ, 1978ರಲ್ಲಿ ತಾಲ್ಲೂಕು ಬೋರ್ಡ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. 1985ರಲ್ಲಿ ಹೆಚ್ ಡಿ ಕೋಟೆ ಕ್ಷೇತ್ರದಿಂದ ಶಾಸಕರಾಗಿದ್ದರು. 1999 – 2004 ಎಸ್ ಎಂ ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯ ಹಣಕಾಸು ಕನ್ನಡ ಸಂಸ್ಕೃತಿ ಇಲಾಖೆ…

Read More

ಬೆಂಗಳೂರು:- ಬಸ್ ನಲ್ಲಿ ಮಹಿಳೆ ಮೇಲೆ ಹಲ್ಲೆ ಕೇಸ್ ಗೆ ಸಂಬಧಪಟ್ಟಂತೆ ಕಂಡಕ್ಟರ್ ಪ್ರತಿಕ್ರಿಯೆ ನೀಡಿದ್ದಾರೆ. ಕಂಡಕ್ಟರ್ ಮತ್ತು ಮಹಿಳೆ ನಡುವಿನ ಗಲಾಟೆಗೆ ಕಾರಣವೇನು ಎಂಬುದರ ಕುರಿತು ಕಂಡಕ್ಟರ್​ ಹೊನ್ನಪ್ಪ‌ ಹೇಳಿಕೆ ದಾಖಲಿಸಿರುವ ಪೊಲೀಸರು, ಇದಕ್ಕೆಲ್ಲ ಉಚಿತ ಬಸ್ ಪ್ರಯಾಣವೇ ಕಾರಣವಾಗಿದೆ. ಹೌದು, ಬಿಳೆಕಳ್ಳಿ ಬಳಿ ಬಸ್ ಹತ್ತಿದ್ದ ಮಹಿಳೆಗೆ ಟಿಕೆಟ್ ನೀಡಲು ಆಧಾರ್ ಕಾರ್ಡ್ ತೋರಿಸುವಂತೆ ಕಂಡಕ್ಟರ್ ಹೇಳಿದ್ದಾರೆ. ಆದರೆ, ಎರಡು ಸ್ಟಾಪ್ ಬಂದರೂ ಯುವತಿ ತನ್ನ ಆಧಾರ್ ಕಾರ್ಡ್ ತೋರಿಸಿಲ್ಲ. https://ainlivenews.com/father-arrested-for-repeatedly-calling-teachers-and-causing-trouble/ ಬಳಿಕ ನಿಮ್ಮ ಸ್ಟೇಜ್ ಮುಕ್ತಾಯವಾಗುತ್ತೆ ಬೇಗ ಆಧಾರ್ ಕಾರ್ಡ್ ತೋರಿಸಿ, ಇಲ್ಲದಿದ್ದರೆ ಹಣ ಕೊಟ್ಟು ಟಿಕೆಟ್ ತೆಗೆದುಕೊಳ್ಳುವಂತೆ ಎಂದು ಕಂಡಕ್ಟರ್​ ಸೂಚಿಸಿದ್ದಾರೆ. ಇದರಿಂದ ಕೆಂಡಾಮಂಡಲಳಾದ ಮಹಿಳೆ, ಮಾತಿಗೆ ಮಾತು ಬೆಳೆದು ಕಂಡಕ್ಟರ್​ಗೆ ಕಪಾಳ ಮೋಕ್ಷ ಮಾಡಿದ್ದಾರೆ. ಇದರಿಂದ ರೊಚ್ಚಿಗೆದ್ದ ಕಂಡಕ್ಟರ್​ ಕೂಡ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾರೆ. ಇನ್ನು ಘಟನೆ ಬೆನ್ನಲ್ಲೇ ಕಂಡಕ್ಟರ್​ನನ್ನು ಅಮಾನತುಗೊಳಿಸಲಾಗಿದೆ. ಈ ಕುರಿತು ಬಿಎಂಟಿಸಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ‘ಘಟಕ -34…

Read More

ಅಮೇರಿಕಾ:- ಅಮೇರಿಕಾದ ಓಹಿಯೋದಲ್ಲಿ ವಿಚಿತ್ರ ಘಟನೆ ನಡೆದಿದ್ದು, ಇಲ್ಲೊಬ್ಬರು ವ್ಯಕ್ತಿ ಮಗನಿಗೆ ನೀಡಿದ ರಾಶಿ ರಾಶಿ ಹೋಮ್ವರ್ಕ್ ನೋಡಿ ಚಿಂತೆಗೀಡಾಗಿ, ಯಾಕೆ ಇಷ್ಟೆಲ್ಲಾ ಹೋಮ್ವರ್ಕ್ ನೀಡೋದು ಅಂತ ಶಾಲಾ ಶಿಕ್ಷಕರಿಗೆ ನಿರಂತರವಾಗಿ ಕರೆ ಮಾಡಿ ಕಿರಿಕಿರಿ ಮಾಡಿದ್ದಾರೆ. ಇದರಿಂದ ಬೇಸತ್ತಾ ಶಾಲಾ ಆಡಳಿತ ಮಂಡಳಿ ಆ ವ್ಯಕ್ತಿಯ ವಿರುದ್ಧ ಠಾಣೆಯನ್ನು ದೂರನ್ನು ನೀಡಿದ್ದು, ಇದೀಗ ಆ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. https://ainlivenews.com/a-case-of-assault-on-a-woman-in-a-bus-what-did-the-conductor-say/ ಇಲ್ಲಿನ ನಿವಾಸಿಯಾಗಿರುವಂತಹ ಆಡಂ ಸೈಜ್ಮೋರ್ ಎಂಬವರೇ ಬಂಧಿತ ವ್ಯಕ್ತಿ. ಆಡಂ ಅವರ ಮಗ ಕ್ರೇಮರ್ ಎಲಿಮೆಂಟರಿ ಶಾಲೆಯಲ್ಲಿ ಓದುತ್ತಿದ್ದು, ಶಾಲೆಯಲ್ಲಿ ಮಗನಿಗೆ ಸಿಕ್ಕಾಪಟ್ಟೆ ಹೋಮ್ವರ್ಕ್ ನೀಡುತ್ತಿದ್ದರು. ಇದರಿಂದ ಸಿಟ್ಟಿಗೆದ್ದ ಆಡಂ ಶಾಲಾ ಶಿಕ್ಷಕರಿಗೆ ಪದೇ ಪದೇ ಕರೆ ಮಾಡಿ ಕಿರಿಕಿರಿ ಮಾಡಿದ್ದಾರೆ. ಅಷ್ಟೇ ಅಲ್ಲದೆ ಶಾಲೆಯ ಪ್ರಾಂಶುಪಾಲರಾದ ಜೇಸನ್ ಮೆರ್ಜ್ ಅವರಿಗೆ ಕರೆ ಮಾಡಿ ಈ ಬಗ್ಗೆ ಸರಿಯಾದ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಈ ನಂತರವೂ ಆಡಂ ಶಾಲಾ ಶಿಕ್ಷಕರಿಗೆ ಪದೇ ಪದೇ ಕರೆ ಮಾಡಿದ್ದಾರೆ. ಶಿಕ್ಷಕರಿಂದ ಯಾವುದೇ…

Read More

ಬೆಂಗಳೂರು:+ ನಗರದ ಯಲಹಂಕ ಹಾಗೂ ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿ ನಾಗರೀಕರಿಗೆ ನೀರಿನ ಸಮಸ್ಯೆ ಆಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್* ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಯಲಹಂಕ ಹಾಗೂ ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆ ಅಧಿಕಾರಿಗಳು ಜಲಮಂಡಳಿ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಿ ನೀರಿನ ಸಮಸ್ಯೆಯಿರುವ ಕಡೆ ಕೂಡಲೆ ನೀರಿನ ವ್ಯವಸ್ಥೆ ಕಲ್ಪಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುದ್ಧ ಕುಡಿಯುವ ನೀರಿನ ಘಟಕ ಸಕ್ರಿಯವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು. ನೀರಿನ ಕೊರತೆಯಿರುವ ಘಟಕಗಳಿಗೆ ತಾತ್ಕಾಲಿಕ ನೀರಿನ ವ್ಯವಸ್ಥೆ ಮಾಡಿಕೊಂಡು ನೀರಿನ ಪೂರೈಕೆ ಮಾಡಲು ಸೂಚಿಸಿದರು. ಜೊತೆಗೆ ನೀರಿನ ಅಭಾವ ಹೆಚ್ಚಿರುವ ಕಡೆ ಸಿಂಟೆಕ್ಸ್ ಟ್ಯಾಂಕ್‌ಗಳನ್ನು ಅಳವಡಿಸಿ ನೀರಿನ ಪೂರೈಕೆ ಮಾಡಬೇಕೆಂದು ಸೂಚಿಸಿದರು. ಎರಡೂ ವಲಯಗಳಿಗೆ ಕೊಳವೆ ಬಾವಿಗಳ ನಿರ್ವಹಣೆ, ಹೊಸ ಕೊಳವೆ ಬಾವಿಗಳನ್ನು ಕೊರೆಯಲು ಈಗಾಗಲೇ ಅನುದಾನವನ್ನು ನೀಡಲಾಗಿದ್ದು, ಬತ್ತಿ…

Read More

ಮಂಡ್ಯ :- ನಮ್ಮ ಜಿಲ್ಲೆಯ ಇತಿಹಾಸದಲ್ಲಿ ಹೊರ ಜಿಲ್ಲೆಯವರಿಗೆ ಭಾವನಾತ್ಮಕವಾಗಿ ಬೆರೆಯುವ ಅವಕಾಶ ನೀಡಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಪರೋಕ್ಷವಾಗಿ ಎನ್.ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದರು. ಮದ್ದೂರು ತಾಲೂಕಿನ ಸೋಮನಹಳ್ಳಿ ತಿಮ್ಮದಾಸ್ ಹೋಟೆಲ್ ಬಳಿ ಮಂಗಳವಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಕುಮಾರಸ್ವಾಮಿ ಹೋದ ಕಡೆಯಲ್ಲ ಅದು ನನ್ನ ಕರ್ಮಭೂಮಿ ಅಂತಾರೆ. ಅವರಿಗೆ ಜಿಲ್ಲೆ ಬಗ್ಗೆ ಯಾವುದೇ ಭಾವನಾತ್ಮಕ ನಂಟಿಲ್ಲವೆಂದೆರು. https://ainlivenews.com/csk-vs-gt-ipl-2024-gujarat-bowling-pick-wins-the-toss/ ಕುಮಾರಸ್ವಾಮಿ ರಾಜ್ಯ ನಾಯಕರು. ದೇವೇಗೌಡರ ಮಗ ಅವರ ಬಗ್ಗೆ ಗೌರವವಿದೆ. ನಮ್ಮ ಜಿಲ್ಲೆಗಾಗಿ ರಾಮನಗರವನ್ನ ಪೂರ್ತಿ ತಿರಸ್ಕಾರ ಮಾಡುತ್ತಾರೋ ಅಥವಾ ಅಲ್ಲಿಯೇ ಅರ್ಧ ಬಿಟ್ಟು ಇಲ್ಲಿಗೆ ಬರುತ್ತಾರೋ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದರು. ನಾಮಪತ್ರ ಸಲ್ಲಿಕೆ ದಿನವೇ ಫಲಿತಾಂಶದ ಚಿತ್ರಣ ಸಿಗಬೇಕು. ಕಾಂಗ್ರೆಸ್ ಅಲೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂಬುದನ್ನು ಜಿಲ್ಲೆಯ ಜನತೆ ಸಾಬೀತು ಮಾಡಬೇಕು. ನಾವು ಜನರ ಮುಂದೆ ನಮ್ಮ ಕೆಲಸ ಇಟ್ಟುಕೊಂಡು ಹೋಗಬೇಕು. ಕಳೆದ ಒಂದು ತಿಂಗಳಿನಿಂದ ನಾವು ಪ್ರಚಾರ ಮಾಡುತ್ತಿದ್ದೇವೆ.…

Read More

ಇಂಡಿಯನ್ ಪ್ರೀಮಿಯರ್ ಲೀಗ್​ನ 7ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ (IPL 2024) 7ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಗುಜರಾತ್ ಟೈಟಾನ್ಸ್ (GT) ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಚೆನ್ನೈ ಸೂಪರ್ ಕಿಂಗ್ಸ್​ ಮೊದಲು ಬ್ಯಾಟ್ ಮಾಡಲಿದೆ. https://ainlivenews.com/after-the-announcement-of-the-ticket-dr-got-a-clean-shave-and-became-smart-k-sudhakar/ ಕಳೆದ ಬಾರಿಯ ಫೈನಲ್ ಪಂದ್ಯದ ಬಳಿಕ ಉಭಯ ತಂಡಗಳು ಇದೇ ಮೊದಲ ಬಾರಿ ಮುಖಾಮುಖಿಯಾಗುತ್ತಿದ್ದು, ಹೀಗಾಗಿ ಈ ಪಂದ್ಯದಲ್ಲೂ ರೋಚಕ ಪೈಪೋಟಿ ನಿರೀಕ್ಷಿಸಬಹುದು. ಆದರೆ ಈ ಬಾರಿ ಎರಡೂ ತಂಡಗಳು ಕೂಡ ಹೊಸ ನಾಯರುಗಳೊಂದಿಗೆ ಕಣಕ್ಕಿಳಿಯುತ್ತಿರುವುದು ವಿಶೇಷ. ಅಂದರೆ ಕಳೆದ ಬಾರಿ ಫೈನಲ್ ಆಡುವಾಗ ಗುಜರಾತ್ ಟೈಟಾನ್ಸ್ ತಂಡದ ನಾಯಕರಾಗಿ ಹಾರ್ದಿಕ್ ಪಾಂಡ್ಯ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕ್ಯಾಪ್ಟನ್ ಆಗಿ ಮಹೇಂದ್ರ ಸಿಂಗ್…

Read More

ಚಿಕ್ಕಬಳ್ಳಾಪುರ:- ಟಿಕೆಟ್ ಘೋಷಣೆ ಬೆನ್ನಲ್ಲೇ ಕ್ಲೀನ್ ಶೇವ್ ಮಾಡಿ ಕೆ ಸುಧಾಕರ್ ಸ್ಮಾರ್ಟ್ ಆಗಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬೆಳ್ಳಂಬೆಳಗ್ಗೆ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದು ನಂತರ ದೊಡ್ಡಬಳ್ಳಾಪುರ ನಗರದ ನೆಲದಾಂಜನೇಯಸ್ವಾಮಿ ದೇವಾಲಯಕ್ಕೂ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು. https://ainlivenews.com/shivram-hebbar-exploded-against-bjp-leaders/ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮುನ್ನವೂ ಕಾಂಗ್ರೆಸ್ ಬಿಟ್ಟು ಬಿಜೆಪಿ ಬಂದಾಗ ಗಡ್ಡ ಬಿಟ್ಟಿದ್ದ ಸುಧಾಕರ್ ಉಪಚುನಾವಣೆ ಗೆಲವಿನ ನಂತರ ಗಡ್ಡ ತೆಗೆದಿದ್ದರು. ಈ ಬಾರಿ ವಿಧಾನಸಭೆ ಚುನಾವಣೆ ಸೋಲಿನ ನಂತರ ಗಡ್ಡ ಬಿಟ್ಟಿದ್ದ ಸುಧಾಕರ್, ಈಗ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಕ್ಲೀನ್ ಶೇವ್ ಮಾಡಿಕೊಂಡು ಸ್ಮಾರ್ಟ್ ಆಗಿದ್ದಾರೆ. ಮಾಧ್ಯಮದವರ ಪ್ರಶ್ನೆಗೆ ನಗುತ್ತಲೇ ಉತ್ತರಿಸಿದ ಸುಧಾಕರ್, ಸೋಲಿನ ನಂತರ ಹರಕೆ ಹೊತ್ತುಕೊಂಡಿದ್ದೆ, ಈಗ ದೇವರ ದರ್ಶನ ಪಡೆದು ಗಡ್ಡ ತೆಗೆದಿದ್ದೇನೆ ಎಂದು ತಿಳಿಸಿದ್ದಾರೆ.

Read More

ಕಾರವಾರ:- ಬಿಜೆಪಿ ನಾಯಕರ ವಿರುದ್ಧ ಶಿವರಾಮ್ ಹೆಬ್ಬಾರ್ ಸಿಡಿಮಿಡಿಗೊಂಡಿದ್ದಾರೆ. ಶಿರಸಿಯಲ್ಲಿ ಮಾತನಾಡಿದ ಅವರು, ನನಗೆ ಸಮಾಧಾನವಾಗಿಲ್ಲ ಅಂದರೆ ಅವರು ಅಭ್ಯರ್ಥಿ ಬದಲಿಸ್ತಾರಾ ಎಂದು ಪ್ರಶ್ನಿಸಿದ್ದಾರೆ. ಯಾರ ಪರ ಕೆಲಸ ಮಾಡಬೇಕೆಂದು ನಿರ್ಣಯಮಾಡಿ ಹೇಳುತ್ತೇನೆ. ಯಾರ ಸಮಾಧಾನ ಅಥವಾ ಅಸಮಾಧಾನವನ್ನು ಬಿಜೆಪಿ ಹೈಕಮಾಂಡ್ ಕೇಳುವುದಿಲ್ಲ. ಅವರ ಸಮಾಧಾನ ಹೇಗಿದೆಯೋ ಹಾಗೆ ನಿರ್ಣಯ ಮಾಡುತ್ತಾರೆ ಎಂದು ಹೇಳುವ ಮೂಲಕ ಬಿಜೆಪಿ ನಾಯಕರ ವಿರುದ್ಧ ಹೆಬ್ಬಾರ್ ಅಸಮಾಧಾನ ಹೊರಹಾಕಿದ್ದಾರೆ. ಇನ್ನೂ ರಾಜ್ಯಸಭೆ ಚುನಾವಣೆಗೆ ಗೈರಾಗುವ ಮೂಲಕ ಕಾಂಗ್ರೆಸ್ ಅಭ್ಯರ್ಥಿಗೆ ಲಾಭವಾಗುವಂತೆ ಮಾಡಿದ್ದ ಶಿವರಾಮ್ ಹೆಬ್ಬಾರ್ ಅವರು ಕಾಂಗ್ರೆಸ್ ಸೇರಲು ತುದಿಗಾಲಿನಲ್ಲಿ ನಿಂತಿದ್ದಾರೆ. ಹೆಬ್ಬಾರ್ ಅವರನ್ನು ಮತ್ತೆ ಪಕ್ಷಕ್ಕೆ ಕರೆತರಲು ಕಾಂಗ್ರೆಸ್ ನಾಯಕರು ಒಪ್ಪಿಗೆ ಸೂಚಿಸಿದ್ದರೂ ಶಿರಸಿ ಕೈ ಮುಖಂಡರು ಮತ್ತು ಕಾರ್ಯಕರ್ತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಸಭೆ ನಡೆಯುತ್ತಿದ್ದ ವೇಳೆ ಕೆಲವರು ಹೆಬ್ಬಾರ್​ಗೆ ಸ್ವಾಗತ ಎಂದರೆ, ಹೆಚ್ಚಿನವರು ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಹೆಬ್ಬಾರ್ ಬೆಂಬಲಿಗರು ಮತ್ತು ಕೈ ಕಾರ್ಯಕರ್ತರ ನಡುವೆ ಗಲಾಟೆಯೇ…

Read More

ಮಂಡ್ಯ:- 2024 ರ ಲೋಕಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಮಂಡ್ಯದಲ್ಲಿ ಎಚ್​ಡಿಕೆ ಸ್ಪರ್ಧೆ ಬಗ್ಗೆ ಸಚಿವ ವ್ಯಂಗ್ಯವಾಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಸಿಎಸ್ ಪುಟ್ಟರಾಜು ಅಭ್ಯರ್ಥಿ ಎಂದು ಹೇಳಿ ತಾವೇ ಅಭ್ಯರ್ಥಿ ಆಗುತ್ತಿದ್ದಾರೆ. ಮಗನಿಗೆ ಮದುವೆ ಮಾಡಲು ಹೋಗಿ ಅಪ್ಪನೇ ಮದುವೆ ಆದಂತಾಗಿದೆ. ಒಳ್ಳೆ ಹುಡುಗಿ ಇದ್ದಾಳೆ ಈ ಬಾರಿ ನಾನೇ ಮದುವೆ ಆಗುತ್ತೇನೆ. ಪುಟ್ಟರಾಜು ನಿನಗೆ ಮುಂದೆ ಒಳ್ಳೆ ಹುಡುಗಿ ಹುಡುಕೋಣ ಎಂದಿದ್ದಾರೆ ಎಂದು ಚಲುವರಾಯಸ್ವಾಮಿ ವ್ಯಂಗ್ಯವಾಡಿದರು. ಅಲ್ಲದೆ, ಒಂದು ತಿಂಗಳಿಂದ ಅಳೆದು ತೂಗಿ ಹೆಸರು ಘೋಷಣೆ ಮಾಡುತ್ತಿದ್ದಾರೆ ಎಂದರು. ಬುಟ್ಟಿಯೊಳಗೆ ನಾಗರಹಾವು ಇದೆ, ಬಿಡುತ್ತೇವೆ ಅಂತ ಹೇಳುತ್ತಿರುವ ಕುಮಾರಸ್ವಾಮಿ ಇನ್ನೂ ಅಭ್ಯರ್ಥಿ ಘೋಷಣೆ ಮಾಡಿಲ್ಲ. ಹೋದ ಕಡೆಯೆಲ್ಲಾ ನನ್ನ ಕರ್ಮ ಭೂಮಿ ಅಂತಾರೆ. ಮಂಡ್ಯ, ಹಾಸನ, ಕೋಲಾರ ಮೂರು ಆದರೆ ಪರವಾಗಿಲ್ಲ. ಚಿಕ್ಕಬಳ್ಳಾಪುರಕ್ಕೂ, ತುಮಕೂರಿಗೂ ಹೋಗಿ ಬಂದಿದ್ದಾರೆ. ಪಾಪ ಆ ಪುಟ್ಟರಾಜು ಕೈಯಲ್ಲಿ ಸಭೆ ಮಾಡಿಸಿದರು. ಆತ ಎಲ್ಲಾ ದೇವಸ್ಥಾನಗಳನ್ನು ಸುತ್ತಿ ಬಂದ. ಆದರೆ ಈಗ ಕುಮಾರಸ್ವಾಮಿ ಅವರು…

Read More