Author: AIN Author

ಬೆಂಗಳೂರು: ಹೆಚ್​ಡಿ ಕುಮಾರಸ್ವಾಮಿ ಮಂಡ್ಯ ಕ್ಷೇತ್ರದಿಂದ ಮಾಜಿ ಸಿಎಂ ಕುಮಾರಸ್ವಾಮಿಯವರೇ ಕಣಕ್ಕೆ ಇಳಿಯುತ್ತಾರೆ. ಸಂಜೆ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ಇಂದು ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಿದ ಅವರು ಇಂದು ಸಂಜೆ ಮೈತ್ರಿ ಅಭ್ಯರ್ಥಿಗಳು ಹೆಸರನ್ನು3 ಕ್ಷೇತ್ರಗಳಿಗೆ ಫೈನಲ್​ ಮಾಡಲಾಗಿದೆ.   ಅಧಿಕೃತವಾಗಿ ಘೋಷಣೆ ಮಾತ್ರ ಬಾಕಿ ಇದೆ. https://ainlivenews.com/cries-of-cm-change-erupted-again-in-the-state-d-k-sivakumars-explosive-statement/ ಈ ಮೊದಲು ಮಂಡ್ಯದಲ್ಲಿ ಪುಟ್ಟರಾಜು ಅವರನ್ನು ಕಣಕ್ಕಿಳಿಸಬೇಕೆಂದು ತೀರ್ಮಾನ ಮಾಡಿದ್ವಿ. ಅಲ್ಲದೇ ನಿಖಿಲ್ ಕುಮಾರಸ್ವಾಮಿ ಸಹ ಸ್ಪರ್ಧೆ ಮಾಡಲ್ಲ ಎಂದಿದ್ದಾನೆ. ಇನ್ನು ಜಿಲ್ಲೆಯ ಕಾರ್ಯಕರ್ತರು ನನ್ನನ್ನು ನಿಲ್ಲುವಂತೆ ಒತ್ತಾಯಿಸುತ್ತಿದ್ದಾರೆ. ಹೀಗಾಗಿ ಇಂದು (ಮಾರ್ಚ್ 26) ಸಂಜೆ ಮಂಡ್ಯ ಜಿಲ್ಲೆಯ ಮುಖಂಡರ ಸಭೆ ನಡೆಸಿ ಅಂತಿಮ ತೀರ್ಮಾನ ತಿಳಿಸುತ್ತೇನೆ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

Read More

ಬೆಂಗಳೂರು: ಆಟೋ ಚಾಲಕರಿಗೆ ಒಂದಲ್ಲ..ಬಂದು ಸಮಸ್ಯೆ ಎದುರಾಗುತ್ತ ಹೋಗುತ್ತಿದೆ..ಎಲೆಕ್ಟ್ರಿಕ್ ಬೈಕ್ ಆಯ್ತು, ಇದೀಗ ರ್ಯಾಪಿಡೋ ಆಟೋಗಳ ಮುಕ್ತಿಗೆ ಆಟೋ ಸಂಘಟನೆಗಳು ಅಭಿಯಾನ ಪ್ರಾರಂಭಿಸಿವೆ.. ಈ ಅಭಿಯಾನ ಮಾಡಲು ಉದ್ದೇಶವೇನು? ಈಗ ಇವರಿಗೆ ಆಗಿರುವ ಸಮಸ್ಯೆಯಾದ್ರು ಏನು ಅಂತ ನೀವೇ ನೋಡಿ… ಕಳೆ ತಿಂಗಳ ಹಿಂದೆಯಷ್ಟೇ ಬೈಕ್​​​​​ಗಳು ರ್ಯಾಪಿಡೋಗಳು ನಮ್ಮ ಬಾಳು ಆಳು ಮಾಡುತ್ತಿವೆ ಎಂದು ಆಟೋ ಚಾಲಕರು ಆಕ್ರೋಶಗೊಂಡಿದ್ರು… ಈ ಹಿನ್ನೆಲೆ ರ್ಯಾಪಿಡೋ ಬೈಕ್ ಜೊತೆ ಆಟೋ ಜೋರು ಪ್ರತಿಭಟನೆ ಮಾಡಿದ್ರು. ಈಗ ರ್ಯಾಪಿಡೋ ಆಟೋ ವಿರುದ್ಧ ಸಮರ ಸಾರಿದ್ದಾರೆ… ರ್ಯಾಪಿಡೋ ಇಟ್ಟುಕೊಂಡಿದ್ರೆ ಅವರ ಆಟೋ ಹುಡುಕಿ ಆಪ್ ಡಿಲೀಟ್ ಮಾಡಿಸುತ್ತಿರುವ ಚಾಲಕರು.. ಈಗ ರ್ಯಾಪಿಡೋ ಆಟೋಗಳ ಮುಕ್ತಿಗೆ ಆಟೋ ಚಾಲಕರ ಅಭಿಯಾನ ಪ್ರಾರಂಭ ಮಾಡಿದ್ದಾರೆ.. ಇದರ ಮೊದಲ ಭಾಗವಾಗಿ ಆಟೋ ಚಾಲಕರ ಬಳಿ ರ್ಯಾಪಿಡೋ ಆ್ಯಪ್ ನ್ನು ಚಾಲಕರು ಡಿಲೀಟ್ ಮಾಡಿಸುತ್ತಿದ್ದಾರೆ… ಈ ಆಪ್ ನಲ್ಲಿ ವಿಶೇಷ ಸವಲತ್ತುಗಳಿದ್ದು ಅದರತ್ತ ಆಕರ್ಷಣೆಗೊಳ್ಳುತ್ತಿದ್ದಾರೆ..‌ ಈ ಆಪ್ ಆಫರ್ ಏನು? ಆಟೋ ಲೇಟ್…

Read More

ಚಿಕ್ಕಬಳ್ಳಾಪುರ: ನಾನು ಚುನಾವಣೆ ನಂತರ ಹರಕೆ ಕಟ್ಟಿಕೊಂಡಿದ್ದೆ, ಹಾಗಾಗಿ ಗಡ್ಡ (Beard) ಬಿಟ್ಟಿದ್ದೆ. ಈಗ ದೇವಾಲಯಕ್ಕೆ ಹೋಗಿ ಬಂದ ಮೇಲೆ ಗಡ್ಡ ತೆಗೆದಿದ್ದೇನೆ ಎಂದು ಚಿಕ್ಕಬಳ್ಳಾಪುರ (Chikkaballapura) ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್ (K Sudhakar) ಸ್ಪಷ್ಟನೆ ನೀಡಿದ್ದಾರೆ. ಡಾ.ಕೆ.ಸುಧಾಕರ್ ಟೆಂಪಲ್ ರನ್ ಮುಂದುವರಿಸಿದ್ದು, ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬೆಳ್ಳಂಬೆಳಗ್ಗೆ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದು ನಂತರ ದೊಡ್ಡಬಳ್ಳಾಪುರ ನಗರದ ನೆಲದಾಂಜನೇಯಸ್ವಾಮಿ ದೇವಾಲಯಕ್ಕೂ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು.  ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮುನ್ನವೂ ಕಾಂಗ್ರೆಸ್ ಬಿಟ್ಟು ಬಿಜೆಪಿ ಬಂದಾಗ ಗಡ್ಡ ಬಿಟ್ಟಿದ್ದ ಸುಧಾಕರ್ ಉಪಚುನಾವಣೆ ಗೆಲವಿನ ನಂತರ ಗಡ್ಡ ತೆಗೆದಿದ್ದರು. https://ainlivenews.com/this-work-is-mandatory-before-march-31-no-penalty-guarantee/ ಈ ಬಾರಿ ವಿಧಾನಸಭೆ ಚುನಾವಣೆ ಸೋಲಿನ ನಂತರ ಗಡ್ಡ ಬಿಟ್ಟಿದ್ದ ಸುಧಾಕರ್, ಈಗ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಕ್ಲೀನ್ ಶೇವ್ ಮಾಡಿಕೊಂಡು ಸ್ಮಾರ್ಟ್ ಆಗಿದ್ದಾರೆ. ಮಾಧ್ಯಮದವರ ಪ್ರಶ್ನೆಗೆ…

Read More

ಮೈಸೂರು: ರಾಜರ ಬಾಯಿಂದ ರಾಜರ ಕಥೆಗಳು ಹೆಸರಿನಲ್ಲಿ ಪ್ರಸಾರವಾಗುತ್ತಿರುವ ಕಾರ್ಯಕ್ರಮಕ್ಕೆ ನಿರ್ಬಂಧ ವಿಧಿಸುವಂತೆ ಕರ್ನಾಟಕ ಚುನಾವಣಾ ಆಯೋಗಕ್ಕೆ ಕೆಪಿಸಿಸಿ ವಕ್ತಾರ ಹೆಚ್​.ಎ.ವೆಂಕಟೇಶ್ ದೂರು ನೀಡಿದ್ದಾರೆ.104.8 ರೇಡಿಯೋ ಮಿರ್ಚಿಯಲ್ಲಿ ಯದುವೀರ್ ಅವರ ರಾಜರ ಬಾಯಿಂದ ರಾಜರ ಕಥೆಗಳು ಹೆಸರಿನಲ್ಲಿ ಕಾರ್ಯಕ್ರಮ ಪ್ರಸಾರವಾಗುತ್ತಿದೆ. ಯದುವೀರ್ ಮೈಸೂರು ಕೊಡಗು ಬಿಜೆಪಿ ಅಭ್ಯರ್ಥಿ ಹಿನ್ನೆಲೆ ನಿರ್ಬಂಧನೆ ವಿಧಿಸಿ. ರೇಡಿಯೋದಲ್ಲಿ ಪ್ರಸಾರವಾಗುತ್ತಿರುವ ಕಾರ್ಯಕ್ರಮದ ಬಗ್ಗೆ ಕ್ಷಣ ಕ್ಷಣಕ್ಕೂ ರೇಡಿಯೋದಲ್ಲಿ ಜಾಹೀರಾತು ಹಾಕಲಾಗುತ್ತಿದೆ. ಒಬ್ಬ ವ್ಯಕ್ತಿಯಾಗಿ ರಾಜರ ಬಗ್ಗೆ ಮಾತನಾಡುವುದರಲ್ಲಿ ತಪ್ಪಿಲ್ಲ. https://ainlivenews.com/this-work-is-mandatory-before-march-31-no-penalty-guarantee/ ಆದರೆ ಏಪ್ರಿಲ್ 26ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಯದುವೀರ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಇದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆಗುತ್ತದೆ. ಯದುವೀರ್ ಅವರ ಮಾತುಗಳು ಮತದಾರರ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಈ ಕೂಡಲೇ ರೇಡಿಯೋದಲ್ಲಿ ಕಾರ್ಯಕ್ರಮ ಪ್ರಸಾರವಾಗದಂತೆ ನಿರ್ಬಂಧನೆ ವಿಧಿಸಬೇಕು ಎಂದು ಚುನಾವಣಾ ಆಯುಕ್ತರಿಗೆ ಕೆಪಿಸಿಸಿ ವಕ್ತಾರ ಹೆಚ್​.ಎ.ವೆಂಕಟೇಶ್ ಮನವಿ ಮಾಡಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಸಿಎಂ ಸಿದ್ದರಾಮಯ್ಯಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಖಾಸಗಿ ವಾಹಿನಿಯ ಸಂದರ್ಶನದಲ್ಲಿ ಮುಖ್ಯಮಂತ್ರಿ ಹುದ್ದೆಯ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಡಿ.ಕೆ. ಶಿವಕುಮಾರ್, ನಾನು ಸಿಎಂ ಆಗುತ್ತೇನೆ ಎಂದು ಹೇಳಿದ್ದಾರೆ. https://ainlivenews.com/siddaramaiah-lashed-out-at-yeddyurappas-close-friend-who-is-antira/ ರಾಜಕಾರಣದಲ್ಲಿ ಏನು ಬೇಕಾದರೂ ನಡೆಯುತ್ತದೆ. ಯಾರಿಗೂ, ಯಾವುದೂ ಶಾಶ್ವತವಲ್ಲ ಎಂದು ತಿಳಿಸಿದ್ದಾರೆ. ಈ ಮೂಲಕ ನಾನು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ ಎಂಬುದನ್ನು ಶಿವಕುಮಾರ್ ಬಹಿರಂಗ ಪಡಿಸಿದ್ದಾರೆ. ಇನ್ನೂ ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕೆಲ ಸಚಿವರು ಹಾಗೂ ಶಾಸಕರು ಅಧಿಕಾರ ಹಂಚಿಕೆ ಕುರಿತು ಬಹಿರಂಗ ಹೇಳಿಕೆ ನೀಡುತ್ತಲೇ ಇದ್ದಾರೆ. ಒಂದೆಡೆ, ಸ್ವತಃ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಸಹ ತಮ್ಮ ತಂದೆಯೇ ಪೂರ್ಣಾವಧಿ ಸಿಎಂ ಎಂದು ಹೇಳಿದ್ದರು. ಇದೀಗ ರಾಜ್ಯದಲ್ಲಿ ಮತ್ತೊಮ್ಮೆ ಸಿಎಂ ಬದಲಾವಣೆ ಕೂಗು ಕೇಳಿ ಬಂದಿದೆ.

Read More

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಮೈಸೂರು-ಕೊಡಗು ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಅವರನ್ನು ಗೆಲ್ಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಪಣ ತೊಟ್ಟಿದ್ದಾರೆ. https://ainlivenews.com/there-are-many-aspirants-in-bjp-and-it-is-natural-to-be-upset-b-y-vijayendra/ ಮೂರು ದಿನಗಳಿಂದ ಮೈಸೂರಿನಲ್ಲೇ ಮೊಕ್ಕಾಂ ಹೂಡಿರುವ ಸಿದ್ದರಾಮಯ್ಯ ಸ್ಥಳೀಯ ನಾಯಕರ ಜೊತೆ ಮಾತುಕತೆ ನಡೆಸಿ ರಣತಂತ್ರ ರೂಪಿಸುತ್ತಿದ್ದಾರೆ. ಇದೇ ವೇಳೆ, ಮೈಸೂರಿನ ರೆಸಾರ್ಟ್​ನಲ್ಲಿ ಕುಳಿತುಕೊಂಡೇ ‘ಆಪರೇಷನ್ ಹಸ್ತ’ಕ್ಕೆ ಮುಂದಾಗಿದ್ದಾರೆ. ಮಾಜಿ ಸಿಎಂ, ಬಿಜೆಪಿಯ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಆಪ್ತರಿಗೆ ಸಿಎಂ ಸಿದ್ದರಾಮಯ್ಯ ಗಾಳ ಹಾಕಿದ್ದಾರೆ ಎನ್ನಲಾಗಿದೆ. ಯಡಿಯೂರಪ್ಪ ಆಪ್ತ ಹೆಚ್.​​ವಿ. ರಾಜೀವ್ ನಂತರ ಮತ್ತೊಬ್ಬ ಆಪ್ತನಿಗೆ ಸಿದ್ದರಾಮಯ್ಯ ಗಾಳ ಹಾಕಿದ್ದಾರೆ.

Read More

ಬೆಂಗಳೂರು: ಇಂದಿನಿಂದ ಮೂರು ದಿನಗಳ ಕಾಲ ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಹವಾಮಾನ ಬದಲಾಗುತ್ತಿದೆ. ನೋಯ್ಡಾ, ಗಾಜಿಯಾಬಾದ್, ಗುರುಗ್ರಾಮ್ ಮುಂತಾದ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಬಲವಾದ ಗಾಳಿ ಬೀಸುತ್ತಿದೆ. https://ainlivenews.com/water-crisis-in-bangalore-it-employees-demanding-work-from-home/ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ಮಿಜೋರಾಂ ಮತ್ತು ಗುಡುಗು ಸಹಿತ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕರ್ನಾಟಕ, ಪಶ್ಚಿಮ ಬಂಗಾಳ, ದೆಹಲಿ ಸೇರಿದಂತೆ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲೆಡೆಯೂ ಚಳಿಯ ವಾತಾವರಣ ಮುಗಿದಿದ್ದು ದಿನದಿಂದ ದಿನಕ್ಕೆ ಬಿಸಿಲ ಕಾವು ಹೆಚ್ಚಾಗಿದೆ. ಈಶಾನ್ಯ ಮತ್ತು ಪೂರ್ವ ಭಾರತದಲ್ಲಿ ಚಂಡಮಾರುತದೊಂದಿಗೆ ಮಳೆಯಾಗುವ ಮುನ್ಸೂಚನೆ ಇದೆ. ಈ ಹಿಂದೆ ಮಧ್ಯ ಭಾರತದ ಹಲವು ಪ್ರದೇಶಗಳಲ್ಲಿ ಮಳೆ ದಾಖಲಾಗಿತ್ತು. ವಿದರ್ಭ ಮತ್ತು ಛತ್ತೀಸ್‌ಗಢದ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಒಡಿಶಾದ ಉತ್ತರ ಭಾಗಗಳ ಜೊತೆಗೆ, ಪೂರ್ವ ಜಾರ್ಖಂಡ್, ಪಶ್ಚಿಮ ಬಂಗಾಳ,…

Read More

ಮಂಗಳೂರು: ಮಾತು ಬಿಡದ ಮಂಜುನಾಥ, ಕಾಸು ಬಿಡದ ತಿಮ್ಮಪ್ಪ ಎಂಬ ಮಾತಿದೆ. ನನ್ನ ಜೀವನದಲ್ಲಿ ಮಂಜುನಾಥ, ಈಶ್ವರ, ಗಂಗಾಧರ ಅಜ್ಜ ರಕ್ಷಣೆ ಮಾಡಿಕೊಂಡು ಬಂದಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.  ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾತು ಬಿಡದ ಮಂಜುನಾಥ, ಕಾಸು ಬಿಡದ ತಿಮ್ಮಪ್ಪ ಎಂಬ ಮಾತಿದೆ. ನನ್ನ ಜೀವನದಲ್ಲಿ ಮಂಜುನಾಥ, ಈಶ್ವರ, ಗಂಗಾಧರ ಅಜ್ಜ ರಕ್ಷಣೆ ಮಾಡಿಕೊಂಡು ಬಂದಿದ್ದಾರೆ. ಹಾಗಾಗಿ ಈ ಯುದ್ಧ ಆರಂಭಿಸುವ ಮುನ್ನ ಮಂಜುನಾಥ ಸ್ವಾಮಿ, ಅಣ್ಣಪ್ಪಸ್ವಾಮಿ ದರ್ಶನ ಮಾಡಿ ಆಶೀರ್ವಾದ ಪಡೆದು ಹೋಗುವ ಪದ್ಧತಿ, ಪರಂಪರೆ ಇಟ್ಟುಕೊಂಡಿದ್ದೇನೆ ಎಂದರು. https://ainlivenews.com/this-work-is-mandatory-before-march-31-no-penalty-guarantee/ ನಾನು ರೂಢಿ ಮಾಡಿಕೊಂಡಿರುವ ಪದ್ಧತಿಯಂತೆ ಇವತ್ತು ಇಲ್ಲಿಗೆ ಬಂದು ಮಂಜುನಾಥನ ದರ್ಶನ ಪಡೆದು ಹೊರಡುತ್ತಿದ್ದೇನೆ. ಮಂಜುನಾಥ ಸ್ವಾಮಿ ಧರ್ಮಸ್ಥಳದ ಶಕ್ತಿ. ಆತ ಮಾತು ಬಿಡದ ಮಂಜುನಾಥ. ನಾವು ಪಂಚ ಗ್ಯಾರೆಂಟಿಗಳನ್ನು ನೀಡಿ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ಇನ್ನೂ ಹೆಚ್ಚಿಗೆ ಶಕ್ತಿ ಕೊಡಿ ಎಂದು ಆ ಭಗವಂತನಲ್ಲಿ…

Read More

ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಾಲಾಗಿದೆ. ಮಂಡ್ಯ ಕ್ಷೇತ್ರದ ಪ್ರಬಲ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ಕೈತಪ್ಪಿದ್ದು ಈ ಮಧ್ಯೆ ಅವರು ಕಾರ್ಯಕರ್ತರ ಸಭೆ ಕರೆದಿದ್ದಾರೆ. ಬೆಂಬಲಿಗರ ಜೊತೆ ಚರ್ಚಿಸಿ ಅವರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ಪ್ರಕಟಿಸಲಿದ್ದಾರೆ. https://ainlivenews.com/water-crisis-in-bangalore-it-employees-demanding-work-from-home/ ಈ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಸುಮಲತಾ ಅವು ನಾಳೆ ಬೆಂಗಳೂರಲ್ಲಿ ತಮ್ಮ ಆಪ್ತರ ಜೊತೆ ಹೈ ವೋಲ್ಟೇಜ್‌ ಸಬೇ ನಡೆಸಲಿದ್ದು ಮುಂದಿನ ತೀರ್ಮಾನವನ್ನು ತೆಗೆದುಕೊಳ್ಳಲಾಗುತ್ತದೆ. ಬಿಜೆಪಿ ಹೈಕಮಾಂಡ್ ಸೂಚನೆ ಮೇರೆಗೆ ಒಪ್ಪಿದರೆ ಅವರು ಮಂಡ್ಯದಿಂದ ಜೆಡಿಎಸ್‌ ಕಣಕ್ಕಿಳಿಸುವ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಾರಾ, ಅಥವಾ ಅವರು ಈ ಹಿಂದೆ ಹೇಳುತ್ತಿದ್ದಂತೆ ಪಕ್ಷೇತರರಾಗಿ ಸ್ಪರ್ಧಿಸುತ್ತಾರಾ ಎಂಬ ಸಂದೇಹ ಮೂಡಿದೆ.

Read More

ನವದೆಹಲಿ: ಭಾರತ್ ರಾಷ್ಟ್ರ ಸಮಿತಿ ನಾಯಕಿ ಕೆ.ಕವಿತಾ (K.Kavitha) ಅವರನ್ನು ದೆಹಲಿ (New Delhi) ನ್ಯಾಯಾಲಯವು ಏಪ್ರಿಲ್ 9 ರ ವರೆಗೆ ಜೈಲಿಗೆ ಕಳುಹಿಸಿದೆ. ಮದ್ಯ ನೀತಿ ಹಗರಣದಲ್ಲಿ ಕವಿತಾ ಅವರು ಮಾ.15 ರಂದು ಜಾರಿ ನಿರ್ದೇಶನಾಲಯದ ವಶದಲ್ಲಿದ್ದರು. ಕಳೆದ ವಾರ ಕಸ್ಟಡಿ ಅವಧಿಯನ್ನು ವಿಸ್ತರಿಸಲಾಗಿತ್ತು. ಈ ವೇಳೆ ಅವರ ಮೊಬೈಲ್‌ನಲ್ಲಿದ್ದ ಡೇಟಾವನ್ನು ಪರಿಶೀಲಿಸಲಾಗಿತ್ತು. ಕವಿತಾ ಅವರಿಗೆ ದೆಹಲಿ ನ್ಯಾಯಾಲಯವು ಈಗ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಅವರನ್ನು ಲಾಕಪ್‌ನಲ್ಲಿ ಇರಿಸುವ ಬದಲು ಇ.ಡಿ ತಿಹಾರ್‌ ಜೈಲಿಗೆ ವರ್ಗಾಯಿಸುವ ಸಾಧ್ಯತೆ ಇದೆ. ಬಿಆರ್‌ಎಸ್‌ ನಾಯಕಿ ನಿಜವಾಗಿ 100 ಕೋಟಿ ರೂ. ಅಕ್ರಮ ಹಣ ವರ್ಗಾವಣೆಯಲ್ಲಿ ಭಾಗಿಯಾಗಿದ್ದಾರೆ. ಇದನ್ನು ಎಎಪಿ ನಾಯಕರಿಗೆ ಪಾವತಿಸಲಾಗಿದೆ ಎಂದು ಆರೋಪವನ್ನು ಕವಿತಾ ಹೊತ್ತಿದ್ದಾರೆ. https://ainlivenews.com/this-work-is-mandatory-before-march-31-no-penalty-guarantee/ ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಕವಿತಾ ಅವರು ದೆಹಲಿ ಸರ್ಕಾರದ ಅಡಿಯಲ್ಲಿ ಮದ್ಯದ ಪರವಾನಗಿಗಾಗಿ ಎಎಪಿಗೆ 100 ಕೋಟಿ ಲಂಚವನ್ನು ಪಾವತಿಸಿದ ‘ಸೌತ್ ಗ್ರೂಪ್’ ನ ಪ್ರಮುಖ…

Read More