Author: AIN Author

ಚಿಕ್ಕಮಗಳೂರು : ಎನ್​ಡಿಆರ್​ಎಫ್ ಹಣದ ವಿಚಾರವಾಗಿ ನಾನು ಮಾತನಾಡುವುದಿಲ್ಲ ಎಂದು ಮಾಜಿ ಸಿಎಂ ಬಿ. ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. https://ainlivenews.com/cancer-and-eye-problems-are-guaranteed-by-using-colors-like-this-for-holi-festival/ ಎನ್​ಡಿಆರ್​ಎಫ್ ಹಣದ ವಿಚಾರವಾಗಿ ನಾನು ಮಾತನಾಡುವುದಿಲ್ಲ. ರಾಜ್ಯದಲ್ಲಿ ಉತ್ತಮ ಮಳೆ-ಬೆಳೆಗಾಗಿ ಪೂಜೆ ಸಲ್ಲಿಸಿದ್ದೇವೆ. ದೇವಿಯ ಮುಂದೆ ರಾಜ್ಯದ ಸಮೃದ್ಧಿಗಾಗಿ ಪ್ರಾರ್ಥನೆ ಮಾಡಿದ್ದೇನೆ. ದೇವರ ದರ್ಶನ ಪಡೆದು ತುಂಬಾ ದಿನವಾಗಿತ್ತು ಎಂದು ತಿಳಿಸಿದರು.

Read More

ಐಪಿಎಲ್ 2024 ರಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವೆ ಮಾರ್ಚ್ 25 ರಂದು ಅಂದರೆ ಇಂದು ಪಂದ್ಯ ನಡೆಯುತ್ತಿದೆ. ಚಿನ್ನಸ್ವಾಮಿ ಕ್ರೀಡಾಂಗಣ ಈ ಪಂದ್ಯಕ್ಕೆ ಆತಿಥ್ಯವಹಿಸುತ್ತಿದೆ. ಒಂದೆಡೆ ಆರ್‌ಸಿಬಿ ತನ್ನ ಕೊನೆಯ ಪಂದ್ಯದಲ್ಲಿ ಸೋತಿದ್ದರೆ, ಇನ್ನೊಂದೆಡೆ ಪಂಜಾಬ್ ತಂಡ ತನ್ನ ಕೊನೆಯ ಪಂದ್ಯವನ್ನು ಗೆದ್ದು ಬರುತ್ತಿದೆ. ಇದೀಗ ಫಾಫ್ ಡು ಪ್ಲೆಸಿಸ್ ನೇತೃತ್ವದ ಆರ್‌ಸಿಬಿ ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ. ಇತ್ತ ಶಿಖರ್ ಧವನ್ ನೇತೃತ್ವದ ಪಂಜಾಬ್ ಕಿಂಗ್ಸ್ ಸತತ ಎರಡನೇ ಪಂದ್ಯವನ್ನು ಗೆಲ್ಲುವ ಮೂಲಕ ಟೂರ್ನಿಯಲ್ಲಿ ಮುನ್ನಡೆಯಲು ಬಯಸಿದೆ.ಬೆಂಗಳೂರಿನಲ್ಲಿ ಟಾಸ್ ಗೆದ್ದ ಆರ್​ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್, ಅನುಜ್ ರಾವತ್ (ವಿಕೆಟ್ ಕೀಪರ್), ಅಲ್ಜಾರಿ ಜೋಸೆಫ್, ಮಯಾಂಕ್ ದಾಗರ್, ಮೊಹಮ್ಮದ್ ಸಿರಾಜ್, ಯಶ್ ದಯಾಲ್. ಪಂಜಾಬ್…

Read More

ಮೈಸೂರು : ನಾವು ಸಮಾಜವನ್ನು ಒಗ್ಗೂಡಿಸಿ ದೇಶದ ಒಳಿತಿಗೆ ಕೆಲಸ ಮಾಡುತ್ತೇವೆ. ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಬಿಜೆಪಿ ಅಭ್ಯರ್ಥಿಯಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಸಮಾಜವನ್ನು ಒಗ್ಗೂಡಿಸಿ ದೇಶದ ಒಳಿತಿಗೆ ಕೆಲಸ ಮಾಡುತ್ತೇವೆ. ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಲ್ಲರೂ ಪ್ರೀತಿಯಿಂದ ಮಾತನಾಡಿಸುತ್ತಿದ್ದಾರೆ. ಮುಂದಿನ ಹಂತದ ಪ್ರಚಾರದಲ್ಲಿ ಜೆಡಿಎಸ್ ನವರು ಸಹ ನಮ್ಮೊಟ್ಟಿಗೆ ಬರಲಿದ್ದಾರೆ. ಚುನಾವಣಾ ಪ್ರಚಾರದ ಬಗ್ಗೆ ಎಲ್ಲಾ ತೀರ್ಮಾನವನ್ನು ಪಕ್ಷ ನಿರ್ಧರಿಸಲಿದೆ ಎಂದರು. ಗ್ರೌಂಡ್ ಲೆವೆಲ್‌ಗೆ ಇಳಿದು ಪ್ರಚಾರ ಮಾಡುತ್ತಿರುವುದರಿಂದ, ಜನಸಾಮಾನ್ಯರ ಕಷ್ಟಗಳನ್ನು ಹತ್ತಿರದಿಂದ ನೋಡಿದಂತಾಗಿದೆ. ಗ್ರೌಂಡ್ ಲೆವಲ್‌ಗೆ ಇಳಿದು ಪ್ರಚಾರ ಮಾಡುತ್ತಿರುವುದರಿಂದ, ಜನರ ಕಷ್ಟ ತಿಳಿದುಕೊಳ್ಳಬಹುದು. ಹುಣಸೂರು, ಪಿರಿಯಾಪಟ್ಟಣ, ಕೊಡಗು ಕಾಡಂಚಿನ ಪ್ರದೇಶದಲ್ಲಿ ಮಾವನ-ಪ್ರಾಣಿ ಸಂಘರ್ಷ ಹೆಚ್ಚಾಗಿದೆ ಎಂದು ತಿಳಿದುಕೊಂಡಿದ್ದೇನೆ ಎಂದು ತಿಳಿಸಿದರು. https://ainlivenews.com/cancer-and-eye-problems-are-guaranteed-by-using-colors-like-this-for-holi-festival/ ಸಾಮಾನ್ಯ ಜನರ ಎದುರು ಮಹಾರಾಜರು ಚುನಾವಣೆಗೆ ನಿಂತಿದ್ದಾರೆ ಎಂಬ ಕಾಂಗ್ರೆಸ್ ಅಭ್ಯರ್ಥಿ ಮಾತಿಗೆ ಪ್ರತಿಕ್ರಿಯೆ ನೀಡಿದ ಯದುವೀರ್, ಸಂವಿಧಾನದಲ್ಲಿ ರಾಜರು…

Read More

ಗ್ಲೋಬಲ್ ಸ್ಟಾರ್ ರಾಮ್ ಚರಣ್ ಹೋಳಿ ಹಬ್ಬದ ಸಂಭ್ರಮದಲ್ಲಿ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಗೇಮ್ ಚೇಂಜರ್ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ಮೆಗಾ ಪ್ರಿನ್ಸ್ ರಾಮ್, ಬುಚ್ಚಿ ಬಾಬು ಜೊತೆ ಕೈ ಜೋಡಿಸಿದ್ದಾರೆ. ಆರ್ ಸಿ 16 ಸಿನಿಮಾಗೆ ಬುಚ್ಚಿ ಬಾಬು ಆಕ್ಷನ್ ಕಟ್ ಹೇಳುತ್ತಿದ್ದು, ಈ ಪ್ರಾಜೆಕ್ಟ್ ಟೇಕಾಫ್ ಗೂ ಮೊದ್ಲೇ ಚೆರ್ರಿಯ ಮತ್ತೊಂದು ಸಿನಿಮಾ ಅನೌನ್ಸ್ ಆಗಿದೆ. ಮೈತ್ರಿ ಮೂವೀ ಮೇಕರ್ಸ್, ರಾಮ್ ಚರಣ್ ಹಾಗೂ ಪುಷ್ಪ ಡೈರೆಕ್ಟರ್ ಸುಕುಮಾರ್ ಮತ್ತೆ ಒಂದಾಗಿದ್ದಾರೆ. ರಂಗಸ್ಥಳಂ ಮೂಲಕ ಧಮಾಕ ಎಬ್ಬಿಸಿದ್ದ ಈ ತ್ರಿವಳಿ ಕಾಂಬೋದಲ್ಲಿ ಹೊಸ ಪ್ರಾಜೆಕ್ಟ್ ಘೋಷಣೆಯಾಗಿದೆ. ಬಣ್ಣದ ಹಬ್ಬದ ಸಂದರ್ಭದಲ್ಲಿ ಈ ಬಗ್ಗೆ ಅಧಿಕೃತ ಮಾಹಿತಿ ಸಿಕ್ಕಿದೆ. ತ್ರಿಬಲ್ ಆರ್ ಸಿನಿಮಾ ಬಳಿಕ ಶಂಕರ್ ಸಾರಥ್ಯದ ಗೇಮ್ ಚೇಂಜರ್ ಚಿತ್ರದಲ್ಲಿ ರಾಮ್ ನಟಿಸ್ತಿದ್ದಾರೆ. ಜೊತೆಗೆ ಉಪ್ಪೇನಾ ಡೈರೆಕ್ಟರ್ ಬುಚ್ಚಿ ಬಾಬುಗೂ ಕಾಲ್ ಶೀಟ್ ಕೊಟ್ಟಿರುವ ಮೆಗಾ ಪ್ರಿನ್ಸ್ ಈಗ ಸುಕುಮಾರ್ ಹೊಸ ಕಥೆಯಲ್ಲಿ ಮಿಂಚೋದಿಕ್ಕೂ ಗ್ರೀನ್…

Read More

ಮೈಸೂರು: ಕೇಂದ್ರ ಸರ್ಕಾರ ಬರ ಪರಿಹಾರ ನೀಡುತ್ತಿಲ್ಲ ಎಂದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ (Supreme Court) ಅರ್ಜಿ ಸಲ್ಲಿಸಿರುವ ವಿಚಾರಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ತಿರುಗೇಟು ನೀಡಿದ್ದಾರೆ. ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ. ನ್ಯಾಯಾಲಯಕ್ಕೆ ನಾವು ಸಹ ಅಗತ್ಯ ದಾಖಲೆಗಳನ್ನ ಒದಗಿಸುತ್ತೇವೆ. ಬರ ಪರಿಹಾರದ ಬಗ್ಗೆ ನ್ಯಾಯಾಲಯವೇ ತೀರ್ಮಾನಿಸಲಿ ಎಂದು ಹೇಳಿದ್ದಾರೆ. https://ainlivenews.com/holi-festival-is-celebrated-all-over-the-country-do-you-know-the-importance/ ಮೈಸೂರಿನಲ್ಲಿ ಮಾತನಾಡಿದ ಕೇಂದ್ರ ಸಚಿವೆ, ರಾಜ್ಯ ಸರ್ಕಾರ (Government Of Karnataka) 5,495 ಕೋಟಿ ವಿಶೇಷ ಅನುದಾನ ಕೊಡುವಂತೆ ಕೇಂದ್ರ ಸರ್ಕಾರಕ್ಕೆ ಕೇಳಿದ್ದೇವೆ ಅಂಥ ಸುಳ್ಳು ಹೇಳುತ್ತಿದೆ. ಹಣಕಾಸು ಆಯೋಗ ನಿಯಮದ ಪ್ರಕಾರ ಯಾವುದೇ ರಾಜ್ಯಗಳಿಗೆ ಈ ರೀತಿ ವಿಶೇಷ ಅನುದಾನ ಕೊಡಲು ಬರುವುದಿಲ್ಲ. ನೀವು ರಾಜ್ಯದಿಂದ ಆಯ್ಕೆಯಾದ ಸಂಸದರು ಹೀಗಾಗಿ ವಿಶೇಷ ಕೊಡಿಸಿ ಎನ್ನುತ್ತಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

Read More

ಚಿಕ್ಕಮಗಳೂರು:- ಜಿಲ್ಲೆಯ ತರೀಕೆರೆ ತಾಲೂಕಿನ ವರ್ತೆಗುಂಡಿ ಗ್ರಾಮ ವರ್ತೆಗುಂಡಿ ಬಳಿ ಕಾಡಾನೆ ದಾಳಿಗೆ ಓರ್ವ ವ್ಯಕ್ತಿ ಬಲಿಯಾದ ಘಟನೆ ಜರುಗಿದೆ. ಅಕ್ಬರ್(35) ಮೃತ ವ್ಯಕ್ತಿ. ತೋಟದಲ್ಲಿ ಆನೆ ಓಡಿಸುವಾಗ ಏಕಾಏಕಿ ನುಗ್ಗಿ ಬಂದಿದೆ. ನೆಲಕ್ಕೆ ಬಿದ್ದ ಅಕ್ಬರ್ ಮೇಲೆ ಕಾಲಿಟ್ಟು ಕಾಡಾನೆ ಕೊಂದಿದೆ. ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಫಿನಾಡಲ್ಲಿ ಕಾಡಾನೆಗಳ ಉಪಟಳ ದಿನದಿಂದ ದಿನಕ್ಕೆ ಮಿತಿಮೀರಿದೆ. ಕಾಫಿ ತೋಟದ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕನ ಮೇಲೆ ಒಂಟಿ ಸಲಗ ದಾಳಿ ಮಾಡಿ ಇತ್ತೀಚಿಗೆ ಬಲಿ ಪಡೆದಿತ್ತು

Read More

ತುಮಕೂರು:- ಇಲ್ಲಿನ ತುರುವೇಕೆರೆ ಮೈತ್ರಿ ಸಭೆಯಲ್ಲಿ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ನಡುವೆ ವಾಕ್ಸಮರ ನಡೆದಿದೆ. ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ವಾಗ್ವಾದ ಉಂಟಾಗಿದೆ. ಸಭೆಯಲ್ಲಿ ಬಿಜೆಪಿ ಮುಖಂಡ ಕೊಂಡಜ್ಜಿ ವಿಶ್ವನಾಥ್ ಅಸಮಾಧಾನ ಹೊರ ಹಾಕಿದ್ದಾರೆ. ಕಳೆದ ಬಾರಿ ನಾನು ಸೋಲೋದಕ್ಕೆ ಕೊಂಡಜ್ಜಿ ವಿಶ್ವನಾಥ್ ಕೂಡ ಕಾರಣ ಎಂದು ಸಭೆಯ ಭಾಷಣದಲ್ಲಿ ಶಾಸಕ ಎಂ ಟಿ ಕೃಷ್ಣಪ್ಪ ಹೇಳಿದ್ದ. ಕೃಷ್ಣಪ್ಪ ಭಾಷಣ ಮುಗಿಯುತ್ತಿದ್ದನಂತೆ ಅದಕ್ಕೆ ಸಮಜಾಯಿಷಿ ನೀಡಲು ಕೊಂಡಜ್ಜಿ ವಿಶ್ವನಾಥ್ ಮುಂದಾಗಿದ್ದಾರೆ. https://ainlivenews.com/bn-chandrappa-as-congress-candidate-celebration-of-activists/ ಇದಕ್ಕೆ ಬೇಡ ಎಂದು ಸೋಮಣ್ಣ ಹೇಳಿದ್ದಾರೆ. ಈ ವೇಳೆ ಶಾಸಕ ಕೃಷ್ಣಪ್ಪ ವಿರುದ್ಧ ಕೊಂಡಜ್ಜಿ ವಿಶ್ವನಾಥ್ ಅಸಮಾಧಾನ ಹೊರ ಹಾಕಿದ್ದಾರೆ. ಈ ವೇಳೆ ವೇದಿಕೆ ಮುಂಭಾಗದಲ್ಲಿ ಇದ್ದ ಜೆಡಿಎಸ್ ಕಾರ್ಯಕರ್ತರಿಂದ ಆಕ್ಷೇಪ ವ್ಯಕ್ತಪಡಿಸಲಾಗಿದೆ. ಅಣ್ಣ ಹೀಗಾದ್ರೆ ಬೇಡ ಬಾ ಅಣ್ಣ ಹೋಗೊಣ ಎಂದು ಶಾಸಕ ಕೃಷ್ಣಪ್ಪರನ್ನ ಸನ ಜೆಡಿಎಸ್ ಕಾರ್ಯಕರ್ತ ಸತೀಶ್ ಹೇಳಿದ್ದಾರೆ. ತುಮಕೂರು ಜಿಲ್ಲೆ ತುರುವೇಕೆರೆ ಪಟ್ಟಣದಲ್ಲಿ ನಡೆಯುತ್ತಿರುವ ಬಿಜೆಪಿ ಜೆಡಿಎಸ್ ಪಕ್ಷದ ಸಮನ್ವಯ ಸಭೆಯಲ್ಲಿ ಅಸಮಾಧಾನ…

Read More

ಚಿತ್ರದುರ್ಗ:- ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿ ಎನ್ ಚಂದ್ರಪ್ಪ ಘೋಷಣೆ ಮಾಡಲಾಗಿದೆ. ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿ ಎನ್ ಚಂದ್ರಪ್ಪ ಭೇಟಿ ನೀಡಿದ್ದು, ಕಚೇರಿ ಮುಂದೆ ಬೃಹತ್ ಹಾರ ಹಾಕಿ ಕಾರ್ಯಕರ್ತರು ಎತ್ತಿ ಕುಣಿದಾಡಿ ಬರ ಮಾಡಿಕೊಂಡಿದ್ದಾರೆ. ಚಂದ್ರಪ್ಪ ಅವರನ್ನು ಬರ ಮಾಡಿಕೊಳ್ಳುವಾಗ ತಳ್ಳಾಟ ನೂಕಾಟ ನಡೆದಿದೆ. ಇದೇ ಸಮಯದಲ್ಲಿ ಮಾತಾಡಿದ ಚಂದ್ರಪ್ಪ, ಐದು ವರ್ಷಗಳು ನಿಷ್ಠೆ ಪ್ರಾಮಾಣಿಕತೆಯಿಂದ ಕೆಲಸ ಮಾಡಿದ್ದು, ಪರಾಭವ ಕಾಣಬೇಕಾಯ್ತು. ಪರಾಭವದ ನಂತರವೂ ಕೂಡ ನಿರಂತರ ಕಾರ್ಯಚಟುವಟಿಕೆಗಳಲ್ಲಿ‌ಪಾಲ್ಗೊಂಡಿದ್ದೇನೆ ಮನೆ ಮಗನಾಗಿ ಕೆಲಸ ಮಾಡಿದ್ದೇನೆ. ಈ ಬಾರಿ ನಾವು ಗೆದ್ದೇ ಗೆಲ್ಲುತ್ತೇವೆ. ಜಿಲ್ಲೆಯ ಎಲ್ಲಾ ಮಾಜಿ ಹಾಲಿ ಸಚಿವರು ಮತ್ತು ಶಾಸಕರು ಹಾಗೂ ಕಾರ್ಯಕರ್ತರ ಶಿಫಾರಸ್ಸಿನ ಮೇರೆಗೆ ಎಐಸಿಸಿ ಟಿಕೆಟ್ ನೀಡಿದೆ. https://ainlivenews.com/demand-for-money-to-waste-land-surveyor-fell-into-lokayuktas-trap/#google_vignette ಎಲ್ಲವನ್ನೂ ಅಳೆದು ತೂಗಿ ಪಕ್ಷ ಟಿಕೆಟ್ ನೀಡಿದೆ. ಅಭ್ಯರ್ಥಿಯ ಪ್ರಚಾರಕರಾಗಿ ಸಿದ್ದರಾಮಯ್ಯ ಬರುತ್ತಾರೆ ಅವರೇ ಸ್ಟಾರ್ ಪ್ರಚಾರಕರು. ಬಿಜೆಪಿಯವರ ಬಗ್ಗೆ ಟೀಕೆ ಮಾಡಲು ಹೋಗಲ್ಲ ಆ ಸಮಯವನ್ನು ಪಕ್ಷದ ಸಂಘಟನೆಗೆ ಬಳಸುತ್ತೇನೆ.…

Read More

ದೊಡ್ಡಬಳ್ಳಾಪುರ: ಮೂರು ಎಕರೆ ಜಮೀನು ಪೋಡಿ ಮಾಡಿಕೊಡಲು ರೈತರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಭೂ ಮಾಪಕ ಅಧಿಕಾರಿಯೊಬ್ಬರು ಲೊಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭೂಮಾಪಕ ಅಧಿಕಾರಿ ವೀರಣ್ಣ ಜೊತೆಗಿದ್ದ ಮಧ್ಯವರ್ತಿ ಸತೀಶ್ ಎಂಬಾತ ಕೂಡ ಲೋಕಾಯುಕ್ತರ ಅತಿಥಿಯಾಗಿದ್ದಾರೆ. ದೊಡ್ಡಬೆಳವಂಗಲದ ಗುಂಡಲಹಳ್ಳಿ ನಿವಾಸಿ ನಂದೀಶ್ ಎಂಬುವರು ತಮ್ಮ ಮೂರು ಎಕರೆ ಜಮೀನು ಪೋಡಿಗೆ ಅರ್ಜಿ ಸಲ್ಲಿಸಿದ್ದರು. ಜಮೀನು ಪೋಡಿ ಮಾಡಿಕೊಡುವಂತೆ ಉಪವಿಭಾಗಾಧಿಕಾರಿ ಆದೇಶ ಹೊರಡಿಸಿದ್ದರು. ನಂದೀಶ್ ಅವರು ಪರ್ಯಾವೇಕ್ಷಕರು ಹಾಗೂ ಭೂಮಾಪಕರ ಕಚೇರಿಗೆ ಬಂದಾಗ ಸರ್ವೇಯರ್ ವೀರಣ್ಣ ಅವರು ಪೋಡಿ ಮಾಡಿಕೊಡಲು ₹3 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಕೊನೆಗೆ ಮಾತುಕತೆ ನಡೆದು ₹1 ಲಕ್ಷಕ್ಕೆ ಡೀಲ್ ಕುದುರಿಸಿದ್ದರು. ಕಳೆದ ಕೆಲ ದಿ‌ನಗಳ ಹಿಂದೆ ನಂದೀಶ್ ಅವರು ಭೂ ಮಾಪಕ ಅಧಿಕಾರಿ ವೀರಣ್ಣಗೆ ₹20 ಸಾವಿರ ನೀಡಿದ್ದರು. ಉಳಿದ ₹80 ಸಾವಿರ ಲಂಚಕ್ಕೆ ವೀರಣ್ಣ ಸತಾಯಿಸುತ್ತಿದ್ದರು. https://ainlivenews.com/priyankas-victory-in-chikkodi-is-certain-laxman-savadi/ ಲಂಚಕ್ಕೆ ಬೇಡಿಕೆ ಇಟ್ಟಿರುವ ಕುರಿತು ನಂದೀಶ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಸೋಮವಾರ ಮಧ್ಯಾಹ್ನ 3 ಗಂಟೆ…

Read More

ಬೆಳಗಾವಿ:- ಚಿಕ್ಕೋಡಿಯಲ್ಲಿ ಪ್ರಿಯಾಂಕಾ ಗೆಲುವು ಖಚಿತ ಎಂದು ಲಕ್ಷ್ಮಣ್ ಸವದಿ ಹೇಳಿದ್ದಾರೆ. ಒಂದು ಉತ್ತಮ ಯೋಜನೆಯ ಮೂಲಕ ಅವರು ಪ್ರಚಾರ ಅರಂಭಿಸಿರುವುದು ಗಮನಾರ್ಹ. ಸವದಿಯವರೇ ಹೇಳುವ ಪ್ರಕಾರ ಮೊದಲಿಗೆ ಅವರು ಚಿಕ್ಕೋಡಿ ಲೋಕಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕರ್ತರ ಸಭೆಗಳನ್ನು ನಡೆಸಲಿದ್ದಾರೆ. ಕಾರ್ಯಕರ್ತರಿಗೆ ಸಲಹೆ ಸೂಚನೆಗಳನ್ನು ನೀಡಿದ ಬಳಿಕ ಅವರು ಸಾರ್ವಜನಿಕ ಸಬೆಗಳನ್ನು ನಡೆಸುತ್ತಾರಂತೆ. ಅಥಣಿ ಶಿವಯೋಗಿಗಳ ಪುಣ್ಯಭೂಮಿಯಾಗಿರುವುದರಿಂದ ಇಲ್ಲಿಂದಲೇ ಪ್ರಚಾರ ಕಾರ್ಯ ಆರಂಭಿಸಿರುವುದಾಗಿ ಹೇಳುವ ಶಾಸಕ; ಚುನಾವಣೆ ಯಾವುದೇ ಆಗಿರಲಿ, ಕಾರ್ಯಕರ್ತರು ಬಹು ದೊಡ್ಡ ಕಾರ್ಯ ನಿರ್ವಹಿಸುತ್ತಾರೆ, ಉಮೇದುವಾರನ ಸಂಕಲ್ಪ ಸಿದ್ಧಿಯಾಗಬೇಕಾದರೆ ಅದು ಕಾರ್ಯಕರ್ತರಿಂದ ಮಾತ್ರ ಸಾಧ್ಯ ಎನ್ನುತ್ತಾರೆ. https://ainlivenews.com/acche-din-promise-not-fulfilled-minister-priyank-kharge-tweet/ ಹಾಗೆ ಮಾತಾಡುತ್ತಲೇ ಸವದಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಫಲಿತಾಂಶವನ್ನು ಹೇಳಿಬಿಡುತ್ತಾರೆ! ವಿಧಾನ ಸಭಾ ಚುನಾವಣೆಯಲ್ಲಿ ಚಿಕ್ಕೋಡಿ ಕ್ಷೇತ್ರದ ಮತದಾರ ಪ್ರದರ್ಶಿಸಿದ ದೋರಣೆ ಗಮನಿಸಿದರೆ ಪ್ರಿಯಾಂಕಾ ಕನಿಷ್ಟ ಒಂದೂವರೆ ಲಕ್ಷ ಮತಗಳ ಅಂತರದಿಂದ ಜಯಶಾಲಿಯಾಗುವ ನಿರೀಕ್ಷೆ ಇಟ್ಟುಕೊಂಡಿದ್ದೇವೆ ಎಂದು ಸವದಿ ಹೇಳುತ್ತಾರೆ.

Read More