Author: AIN Author

ಹುಬ್ಬಳ್ಳಿ:- ಬೆಳಗಾವಿಯಲ್ಲಿ ಗೆಲುವು ಸಾಧಿಸುವುದು ಕಷ್ಟವೇನಿಲ್ಲ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬೆಳಗಾವಿಯಲ್ಲಿ ಗೆಲುವು ಸಾಧಿಸುವುದು ಕಷ್ಟವಾಗಲಾರದು ಯಾಕೆಂದರೆ ಸುರೇಶ್ ಅಂಗಡಿಯವರು ಜಿಲ್ಲಾಧ್ಯಕ್ಷ ಮತ್ತು ತಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ಬೆಳಗಾವಿಯಲ್ಲಿ ಸಾಕಷ್ಟು ಸಂಘಟನಾ ಕೆಲಸ ಮಾಡಿದ್ದಲ್ಲದೆ ಎರಡು ಬಾರಿ ಜಿಲ್ಲಾ ಉಸ್ತುವಾರಿ ಕೆಲಸ ಮಾಡಿದ ಅಂಶವೂ ನೆರವಾಗಲಿದೆ ಎಂದು ಹೇಳಿದರು. ಹಾಲಿ ಸಂಸದೆ ಮಂಗಳಾ ಅಂಗಡಿಯವರು ಸಹ ತನ್ನ ಪರವಾಗಿ ಪ್ರಚಾರ ಮಾಡುವ ಭರವಸೆ ನೀಡಿರುವರೆಂದು ಹೇಳಿದ ಶೆಟ್ಟರ್ ಚುನಾವಣೆಗಳಲ್ಲಿ ಜಾತಿ ಲೆಕ್ಕಾಚಾರ ಕೆಲಸ ಮಾಡಲ್ಲ, ತಾನು ಹುಬ್ಬಳ್ಳಿಯವನಾದರೂ ಇಡೀ ರಾಜ್ಯದ ನಾಯಕನಾಗಿ ಬೆಳೆದಿರುವೆ, ಮತ್ತು ಪ್ರತಿ ಚುನಾವಣೆಯನ್ನು ಗಂಬೀರವಾಗಿ ಎದುರಿಸುವ ಜಾಯಮಾನ ತನ್ನದು ಎಂದರು. ಹುಬ್ಬಳ್ಳಿ ತನ್ನ ಜನ್ಮಭೂಮಿಯಾದರೆ ಬೆಳಗಾವಿ ಕರ್ಮಭೂಮಿಯಾಗಲಿದೆ ಎಂದು ಅವರು ಹೇಳಿದರು

Read More

ಚಾಮರಾಜನಗರ:- ಗೃಹಲಕ್ಷ್ಮಿ ಹಣದಿಂದ ಹಳ್ಳಿ ಹಳ್ಳಿಯಲ್ಲೂ ಹೆಂಗಸರು ನಲಿತಾವ್ರೆ ಎಂದು ಮಾಜಿ ಸಚಿವ ಎನ್.ಮಹೇಶ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ 2000 ರೂಪಾಯಿಗೆ ಹೆಂಗಸರು ಹಳ್ಳಿಹಳ್ಳೀಲಿ ನಲಿತಾವ್ರೆ. ಅದೇ ಯಡಿಯೂರಪ್ಪ 1 ಲಕ್ಷದ ಭಾಗ್ಯಲಕ್ಚ್ಮೀ ಬಾಂಡ್ ನೀಡಿದ್ದಾರೆ ಅರ್ಥ ಮಾಡಿಕೊಳ್ಳಲಿ. 2 ಸಾವಿರ ದೊಡ್ಡದೋ 1 ಲಕ್ಷ. ದೊಡ್ಡದೋ ಜನರೇ ತಿಳ್ಕೋಬೇಕು. ಗುಂಡ್ಲುಪೇಟೆಯಲ್ಲಿ ಮಾಜಿ ಸಚಿವ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್.ಮಹೇಶ್ ಹೇಳಿಕೆ.ಹೆಣ್ಣು ಹುಟ್ಟಿದ್ರೆ ಅನಿಷ್ಟ ಅನ್ನೋವ ಕಾಲದಲ್ಲಿ 2004 ರಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಹೆಣ್ಣು ಮಕ್ಕಳು ಹುಟ್ಟಿದ್ರೆ 1 ಲಕ್ಷ ಬಾಂಡ್ ನೀಡೋದಾಗಿ ಘೋಷಿಸಿದ್ರು. ಅದರಂತೆ 40 ಲಕ್ಷ ಜನರಿಗೆ 1 ಲಕ್ಷ ಬಾಂಡ್ ವಿತರಿಸಲಾಗಿದೆ. ಹುಟ್ಟಿದ ಹೆಣ್ಣು ಮಕ್ಕಳು 18 ವರ್ಷ ತುಂಬಿದ ಕೂಡಲೇ 1 ಲಕ್ಷ ಪಡೆಯುತ್ತಾಳೆ . ಪ್ರೇಮರಿ ಓದಿದ ಹೆಣ್ಣು ಮಕ್ಕಳು ಹೈಸ್ಕೂಲ್ ಗೆ ಓದೋಕೆ ಹೋಗಲು ಸೈಕಲ್ ನೀಡಿದ ಕೀರ್ತಿ ಮಾಜಿ‌‌ ಸಿ.ಎಂ. ಬಿ.ಎಸ್.ಯಡಿಯೂರಪ್ಪಗೆ ಸಲ್ಲುತ್ತದೆ. ರಾಜ್ಯದ…

Read More

ಬೆಂಗಳೂರು:  ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಣದಲ್ಲಿ ರೀಲ್ಸ್ ಸ್ಟಾರ್ ಸೋನು ಶ್ರೀನಿವಾಸ್ ಗೌಡ ಅವರಿಗೆ   14 ದಿನ ನ್ಯಾಯಾಂಗ ಬಂಧನ ನೀಡಲಾಗಿದೆ. ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಣ ಬೆಂಗಳೂರಿನ ಸಿಜೆಎಂ ನ್ಯಾಯಾಲಯದಿಂದ ಅದೇಶ ಪ್ರಕಟ ಮಸ್ಕಿಯಲ್ಲಿ ಮಗು ವಾಸವಿದ್ದ ಸ್ಥಳ ಪರಿಶೀಲಿಸಿದ್ದ ಪೊಲೀಸರು ವಿಚಾರಣೆ ನಡೆಸಿ ಕೋರ್ಟಿಗೆ ಹಾಜರು ಪಡಿಸಿದ್ದ ಪೊಲೀಸರು ಬ್ಯಾಡರಹಳ್ಳಿ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ದಾಖಲಾಗಿದೆ. Ration Card News Update: ಏಪ್ರಿಲ್ 1 ರಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಯಾವೆಲ್ಲ ನಿಯಮ ಉಲ್ಲಂಘನೆ? ನಿಯಮಗಳ ಪ್ರಕಾರ ಮಗುವನ್ನು (Child) ದತ್ತು ಪಡೆಯುವಾಗ ಅರ್ಜಿ ಸಲ್ಲಿಸಬೇಕು. ಆದರೆ ಸೋನುಗೌಡ ಅರ್ಜಿ ಸಲ್ಲಿಸಿರಲಿಲ್ಲ. ಮಗುವನ್ನು ಹೊರಗಡೆ ತೋರಿಸುವಂತಿಲ್ಲ ಮತ್ತು ಕುಟುಂಬದವರ ಮಾಹಿತಿಯನ್ನು ಬಹಿರಂಗಪಡಿಸುವಂತಿಲ್ಲ. ಆದರೆ ಲೈವ್‌ ಮಾಡುವ ಮೂಲಕ ಈ ವಿಚಾರವನ್ನು ಬಹಿರಂಗಪಡಿಸಲಾಗಿದೆ. ಮಗುವನ್ನು ಸಾಕಿ ಸಲಹುವಷ್ಟು ಪೋಷಕರಲ್ಲಿ ಆರ್ಥಿಕ ಸಾಮರ್ಥ್ಯ ಇದ್ಯಾ ಎಂಬುದನ್ನು ಪರಿಗಣಿಸಲಾಗುತ್ತದೆ. ಮುಖ್ಯವಾಗಿ ಸೋನು ಶ್ರೀನಿವಾಸ್…

Read More

ಚಾಮರಾಜನಗರ:- ಇಂದು ಚಾಮರಾಜನಗರ ಮೀಸಲು ಲೋಕಸಭಾ ಕ್ಚೇತ್ರದ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ಜರುಗಿದೆ. ಗುಂಡ್ಲುಪೇಟೆಯ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸಭೆಯನ್ನು ಆಯೋಜನೆ ಮಾಡಲಾಗಿದ್ದು, ಜ್ಯೋತಿ ಬೆಳಗಿಸುವ ಮೂಲಕ‌ ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜ್ ಅವರು ಕಾರ್ಯಕರ್ತರ ಸಭೆ ಉದ್ಗಾಟಿಸಿದರು. ಬಿಜೆಪಿ ಅಭ್ಯರ್ಥಿಗೆ ಮಾಜಿ ಸಚಿವ ಹಾಗೂ ಭಾರತೀಯ ಜನತಾ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ , ಮಾಜಿ ಶಾಸಕ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಚ ಸಿ.ಎಸ್.ನಿರಂಜನಕುಮಾರ್ ಸಾಥ್ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ಬರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ಚುನಾವಣಾ ಪ್ರಭಾರಿ ಫಣೀಶ್ , ಚಾಮುಲ್ ಅಧ್ಯಕ್ಷ ನಾಗೇಂದ್ರ, ಹಾಪ್ ಕಾಮ್ಸ್ ಅಧ್ಯಕ್ಚ ಕುರುಬರಹುಂಡಿ‌ಲೋಕೇಶ್ ಸೇರಿದಂತೆ ಹಲವು ಮುಖಂಡರು ಕಾರ್ಯಕರ್ತರು ಭಾಗಿಯಾಗಿದ್ದರು. ಇದೆ ವೇಳೆ ಮಾಜಿ ಸಚಿವ ಹಾಗೂ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಮಾತನಾಡಿ, ಬಿಜೆಪಿ ಕಪ್ ನಾವು ಉಳಿಸಿಕೊಳ್ಳಬೇಕಿದೆ.ಕಳೆದ 2019 ರ ಲೋಕಸಭೆ ಚುನಾವಣೆಯಲ್ಲಿನ ಸಂಸದ ವಿ.ಶ್ರೀನಿವಾಸಪ್ರಸಾದ್ ಸ್ಥಾನವನ್ನು ಉಳಿಸಿಕೊಳ್ಳಬೇಕಿದೆ. ಈ ಬಾರಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು…

Read More

ಬೆಂಗಳೂರು: ಸಕ್ಕರೆ ನಾಡು ಮಂಡ್ಯ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಅಧಿಕೃತವಾಗಿ ಜೆಡಿಎಸ್‌ಗೆ ಬಿಟ್ಟು ಕೊಟ್ಟಿದೆ. ಇದೀಗ ಜೆಡಿಎಸ್‌ನಿಂದ ಮೈತ್ರಿ ಅಭ್ಯರ್ಥಿಯಾಗಿ ಹೆಚ್.ಡಿ ಕುಮಾರಸ್ವಾಮಿ ಅಥವಾ ನಿಖಿಲ್ ಕುಮಾರಸ್ವಾಮಿ ಇಬ್ಬರಲ್ಲಿ ಯಾರು ಸ್ಪರ್ಧೆ ಮಾಡ್ತಾರೆ ಅನ್ನೋ ಕುತೂಹಲಕ್ಕೆ ಇಂದೇ ತೆರೆ ಬೀಳುವ ಸಾಧ್ಯತೆ ಇದೆ. ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಮುಖಂಡರ ಸಭೆ ಆರಂಭವಾಗಿದ್ದು ಮಾಜಿ ಮುಖ್ಯಮಂತ್ರಿಗಳಾದ ಶ್ರೀ HD ಕುಮಾರಸ್ವಾಮಿ ಹಾಗೂ ಯುವ ಜನತಾದಳ ರಾಜ್ಯಾಧ್ಯಕ್ಷರಾದ  ನಿಖಿಲ್ ಕುಮಾರಸ್ವಾಮಿ ಅವರು ಭಾಗಿಯಾಗಿದ್ದು ಹಾಗೆ  ಚನ್ನಪಟ್ಟಣ ಕ್ಷೇತ್ರದ ಅನೇಕ ಪ್ರಮುಖ ಮುಖಂಡರು ಉಪಸ್ಥಿತಿ ಇಷ್ಟು ದಿನಗಳ ಕಾಲ ಜೆಡಿಎಸ್ ನಾಯಕರು ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ ನಮಗೆ ಬೇಕು ಎಂದು ಒತ್ತಾಯಿಸುತ್ತಿದ್ದರು. ಮತ್ತೊಂದು ಕಡೆ ಹಾಲಿ ಸಂಸದೆ ಸುಮಲತಾ ಅಂಬರೀಶ್ ನನಗೆ ಸಿಗುತ್ತೆ ಎಂಬ ವಿಶ್ವಾಸದಲ್ಲಿದ್ದರು. ಇದೀಗ ಅಂತಿಮವಾಗಿ ಬಿಜೆಪಿ ಜೆಡಿಎಸ್‌ಗೆ ಮಂಡ್ಯವನ್ನು ಬಿಟ್ಟು ಕೊಟ್ಟಿರೋದಾಗಿ ಅಧಿಕೃತ ಆದೇಶ ಮಾಡಿದೆ. ಇದೀಗ ಜೆಡಿಎಸ್‌ನಿಂದ ಮೈತ್ರಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗಳು ಎದ್ದಿವೆ.

Read More

ಕಲಬುರ್ಗಿ:- ರಂಗಿನಾಟಕ್ಕೆ ಇವತ್ತು ಕಲಬುರಗಿಯ ಪತ್ರಿಕಾ ಭವನ ಸಾಕ್ಷಿಯಾಯಿತು. ವಿಶೇಷ ಅಂದ್ರೆ ಮೀಡಿಯಾದವರ ಜೊತೆ ಹಬ್ಬ ಆಚರಿಸಿದ ಸಂಸದ ಉಮೇಶ್ ಜಾಧವ್ ಕೊರಳಲ್ಲಿ ಸಕ್ಕರೆ ಸರ ಹಾಕಿಕೊಂಡು ಎಲ್ಲರ ಜೊತೆ ಡ್ಯಾನ್ಸ್ ಮಾಡಿದ್ರು.. ಈ ವೇಳೆ ಪ್ರೆಸ್ ಕ್ಲಬ್ ಅಧ್ಯಕ್ಷ ಬಾಬುರಾವ್ ಯಡ್ರಾಮಿ ಪತ್ರಕರ್ತರಾದ ಓಂ ಪ್ರಕಾಶ್ ಭಜರಂಗಿ ಪ್ರವೀಣ ರೆಡ್ಡಿ ಅರುಣ್ ಕದಮ್ ರಾಜಶೇಖರ್ ಪುರುಷೋತ್ತಮ್ ಛಾಯಾಗ್ರಾಹಕರಾದ ವಿಜಯ್ ವಾರದ್ ವಿಜಯ್ ಗಾಜ್ರೆ ರಾಜು ಉದನೂರ್ ಮತ್ತು ಮಹೇಶ್ ಪುಂಡಲೀಕ್ ಸೇರಿ ಎಲ್ಲರೂ ಭಾಗಿಯಾಗಿದ್ದರು..

Read More

ಬೆಂಗಳೂರು: ನನ್ನ ಕ್ಷೇತ್ರವನ್ನು ವಿಶ್ವದಲ್ಲೇ ಮಾದರಿ ಕ್ಷೇತ್ರ ಮಾಡುವ ಪ್ರಯತ್ನ ಮಾಡುತ್ತೇನೆ ಎಂದು ಮಾಜಿ ಸಚಿವ ಹಾಗೂ ಚಿಕ್ಕಬಳ್ಳಾಪುರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ.ಕೆ ಸುಧಾಕರ್  ಹೇಳಿದ್ದಾರೆ. Ration Card News Update: ಏಪ್ರಿಲ್ 1 ರಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಅವರು, ಮಾಜಿ ಸಿಎಂ ಕುಮಾರಸ್ವಾಮಿಯವರನ್ನು (H.D Kumaraswamy) ಭೇಟಿಯಾಗಿ ಬೆಂಬಲ ಕೋರಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ಕ್ಷೇತ್ರದಲ್ಲಿ 20 ಲಕ್ಷ ಮತದಾರರಿದ್ದಾರೆ. ಅವರಿಗೆ ಮನವಿ ಮಾಡ್ತೀನಿ. ನನ್ನ ಅವಧಿಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಅಭಿವೃದ್ಧಿ ನೋಡಿ. ಈ ಅಭಿವೃದ್ಧಿಯನ್ನ ಇಡೀ ಲೋಕಸಭಾ ಕ್ಷೇತ್ರಕ್ಕೆ ವಿಸ್ತರಣೆ ಮಾಡುವ ಪ್ರಯತ್ನ ಮಾಡುತ್ತೇನೆ. ಬಿಜೆಪಿ-ಜೆಡಿಎಸ್ ಸ್ವಾಭಾವಿಕ ಮೈತ್ರಿಯಾಗಿದ್ದು, ಎರಡೂ ಪಕ್ಷಗಳ ನಡುವೆ ಯಾವತ್ತೂ ವೈರತ್ವ ಇರುವ ಪಕ್ಷಗಳಲ್ಲ. ಸ್ಥಳೀಯ ಕಾರ್ಯಕರ್ತರು, ನಾಯಕರಿಗೆ ಒಟ್ಟಾಗಿ ಕೆಲಸ ಮಾಡ್ತಾರೆ. ಇದು ಸ್ವಾಭಾವಿಕ ಮೈತ್ರಿ. ಇಡೀ ರಾಜ್ಯದಲ್ಲಿ ಹಾಲು ಜೇನಿನಂತೆ ಬೆರತು ಬಿಜೆಪಿ-ಜೆಡಿಎಸ್ ನಾಯಕರು, ಕಾರ್ಯಕರ್ತರು ಕೆಲಸ…

Read More

ದೆಹಲಿ:- ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ವಯಸ್ಸಾದವರಿಗೆ ಹಾಗೂ ಅಂಗವಿಕಲರಿಗೆ ಹಾಗೂ ಮತಗಟ್ಟೆಗೆ ಹೋಗಿ ಮತದಾನ ಮಾಡಲು ಸಾಧ್ಯವಿಲ್ಲದವರಿಗೆ EC ಮನೆಯಲ್ಲಿಯೇ ಕುಳಿತು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಅವಕಾಶ ಮಾಡಿಕೊಟ್ಟಿದೆ. ಆದರೆ, ಈ ಪ್ರಕ್ರಿಯೆಗೆ ಉಳಿದಿರುವುದು ಇಂದು ಮಾತ್ರ. ಇಂದೇ ನೋಂದಣಿ ಮಾಡಿಕೊಂಡರೆ ಮಾತ್ರ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಿಮಗೆ ಮತ ಹಾಕಲು ಸಾಧ್ಯ. ಮತದಾರರ ಸಹಾಯವಾಣಿ ಆಪ್ ಡೌನ್‌ಲೋಡ್ ಮಾಡಿ. ಫಾರ್ಮ್ 6ನಲ್ಲಿ 2ನೇ ಆಯ್ಕೆ ಆರಿಸಿ. ಅಗತ್ಯ ಮಾಹಿತಿ ತುಂಬಿಸಿ ನೋಂದಣಿ ಮಾಡಿ. ಲೋಕಸಭಾ ಮತದಾನಕ್ಕೆ ಕೆಲವೇ ದಿನಗಳು ಉಳಿದಿವೆ. ಮತದಾನದಿಂದ ವಂಚಿತವಾಗಬಾರದು ಎಂಬ ಉದ್ದೇಶದಿಂದ EC ಮನೆಯಲ್ಲಿಯೇ ಕುಳಿತು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಅವಕಾಶ ಮಾಡಿಕೊಟ್ಟಿದೆ.

Read More

ಬೆಂಗಳೂರು: ಆಟೋ ಪಾರ್ಕಿಂಗ್ (Auto Parking) ಮಾಡುವ ವಿಚಾರಕ್ಕೆ ಅಕ್ಕಪಕ್ಕದ ಮನೆಯವರ ನಡುವೆ ಶುರುವಾದ ಗಲಾಟೆಯೊಂದು ದೊಡ್ಡಮಟ್ಟದಲ್ಲಿ ಸದ್ದು ಮಾಡುತ್ತಿದೆ. ಬೆಂಗಳೂರಿನ ಪ್ರಗತಿಪುರ ಕುಮಾರಸ್ವಾಮಿ ಬಡಾವಣೆಯಲ್ಲಿ ಆಟೋ ಪಾರ್ಕಿಂಗ್ ಮಾಡುವ ವಿಚಾರಕ್ಕೆ ಕುಮಾರ್ ಮತ್ತು ಸಯ್ಯದ್ ಎಂಬವರ ನಡುವೆ ಗಲಾಟೆ ನಡೆದಿದೆ. ಈ ಸಂಬಂಧ ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ (Kumaraswamy Layout Police) ಪ್ರಕರಣ ದಾಖಲಾಗಿದ್ದು, ಮೂವರನ್ನು ಪೊಲೀಸರು ಬಂಧಿಸಿದ್ದಾರೆ. Ration Card News Update: ಏಪ್ರಿಲ್ 1 ರಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಅನ್ಯಕೋಮಿನ ಆಟೋ ಚಾಲಕ ವೇಗವಾಗಿ ಬಂದು ತನ್ನ ಮನೆ ಮುಂದೆ ಆಟೋ ಪಾರ್ಕಿಂಗ್ ಮಾಡಿದ್ದೇನೆ. ಈ ವೇಳೆ ನೆರೆ ಮನೆಯವರು ಪ್ರಶ್ನೆ ಮಾಡಿದಾಗ ಇಬ್ಬರು ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡಿದ್ದಾರೆ. ಇದರೊಂದ ಕೋಪಗೊಂಡ ಆಟೋ ಚಾಲಕ, ಪಕ್ಕದಲ್ಲೇ ಇದ್ದ ಮಸೀದಿಗೆ ತೆರಳಿ ನಮಾಜ್ ಮುಗಿಸಿ ಹೊರ ಬರುತ್ತಿದ್ದವರಿಗೆ ವಿಚಾರ ಮುಟ್ಟಿಸಿದ್ದಾನೆ. ವಿಚಾರ ತಿಳಿಯುತ್ತಿದ್ದಂತೆ…

Read More

ಚೆನ್ನೈ:- ಟುಟಿಕೋರಿನ್ ಪೊಲೀಸರು ಕಾರ್ಯಚರಣೆ ನಡೆಸಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಚಿವ ಅನಿತ ಆರ್ ರಾಧಾಕೃಷ್ಣನ್ ವಿರುದ್ಧ FIR ದಾಖಲಿಸಿದ್ದಾರೆ. ನರೇಂದ್ರ ಮೋದಿ ತಮ್ಮ ಭಾಷಣದಲ್ಲಿ ಕೆ.ಕಾಮರಾಜ್ ಅವರ ಹೆಸರು ಉಲ್ಲೇಖಿಸಿದ್ದರು. ಹಿಂದಿನ ಮದ್ರಾಸ್ ರಾಜ್ಯದ ಮಾಜಿ ಮುಖ್ಯಮಂತ್ರಿ ಕೆ ಕಾಮರಾಜ್, ತಮಿಳುನಾಡಿನ ಕಾಂಗ್ರೆಸ್ ಐಕಾನ್ ಆಗಿದ್ದರು. ಮೋದಿ ವಿರುದ್ಧ ಗುಡುಗಿದ ಸಚಿವರು,”ಕಾಮರಾಜ್ ಅವರು ಮಲಗಿದ್ದಾಗ ಅವರನ್ನು ಕೊಲ್ಲಲು ಬಯಸಿದವರು ನೀವು ಅಲ್ಲವೇ” ಎಂದು ಹೇಳಿರುವುದು ವಿಡಿಯೊದಲ್ಲಿದೆ. ಬಿಜೆಪಿ ಪದಾಧಿಕಾರಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ನಾವು 294B (ಸಾರ್ವಜನಿಕವಾಗಿ ಅಶ್ಲೀಲ ಪದಗಳನ್ನು ಬಳಸುವುದು) ಅಡಿಯಲ್ಲಿ ಸಚಿವರ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ ಎಂದು ಮೇಘನಪುರಂ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

Read More