Author: AIN Author

ಗೆದ್ದ ಗಿಲ್.. ಮುಗ್ಗರಿಸಿದ ಪಾಂಡ್ಯ.. ಗುಜರಾತ್ ನಾಯಕತ್ವ ವಹಿಸಿಕೊಂಡ ಶುಭ್​ಮನ್ ಗಿಲ್ ಗೆಲುವಿನೊಂದಿಗೆ ಐಪಿಎಲ್​ನಲ್ಲಿ ಶುಭಾರಂಭ ಮಾಡಿದರು. ಇತ್ತ, ಗುಜರಾತ್ ಬಿಟ್ಟು ಮುಂಬೈ ನಾಯಕತ್ವ ವಹಿಸಿಕೊಂಡ ಹಾರ್ದಿಕ್ ಪಾಂಡ್ಯ ಸೋಲಿನ ಖಾತೆ ತೆರೆದರು. ಮುಂಬೈ ಇಂಡಿಯನ್ಸ್​ ವಿರುದ್ಧ ಅಹಮದಾಬಾದ್​ನಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ 6 ರನ್​ಗಳ ರೋಚಕ ಗೆಲುವು ಸಾಧಿಸಿತು. ಈ ಮೂಲಕ ಗುಜರಾತ್ ನಾಯಕತ್ವ ತ್ಯಜಿಸಿ ಮುಂಬೈ ನಾಯಕತ್ವ ವಹಿಸಿಕೊಂಡ ಪಾಂಡ್ಯಗೆ ಸೋಲಿನ ಸ್ವಾಗತ ಲಭಿಸಿತು. IPL 2024: ತವರಿನಲ್ಲಿ ಇಂದು RCB Vs ಪಂಜಾಬ್ ಕಿಂಗ್ಸ್: ಯಾರ ಮುಡಿಗೆ ಗೆಲುವು? ಟಾಸ್ ಸೋತ ಗುಜರಾತ್ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 168 ರನ್​ ಕಲೆಹಾಕಿತು. 169 ರನ್​ಗಳ ಗುರಿಯೊಂದಿಗೆ ಕಣಕ್ಕೆ ಇಳಿದ ಮುಂಬೈ 20 ಓವರ್​ಗಳಲ್ಲಿ 162 ರನ್​ ಗಳಿಸಲಷ್ಟೇ ಶಕ್ತವಾಯಿತು. ಶಿಸ್ತುಬದ್ಧ ಬೌಲಿಂಗ್ ದಾಳಿ ನಡೆಸಿದ ಗುಜರಾತ್ ಗೆಲುವಿನ ನಗೆ ಬೀರಿತು. ಬ್ಯಾಟಿಂಗ್​ನಲ್ಲೂ ಹಾರ್ದಿಕ್ ವೈಫಲ್ಯ ಮುಂಬೈ ಇಂಡಿಯನ್ಸ್ ಪರ ಇಶಾನ್…

Read More

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ರಾಯಲ್ ಚಾಲೆಂಜರ್ಸ್​ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್​ ತಂಡಗಳು ಮುಖಾಮುಖಿಯಾಗಲಿವೆ. ಆರ್‌ಸಿಬಿ ತನ್ನ ಆರಂಭಿಕ ಪಂದ್ಯದಲ್ಲಿ ಚೆನ್ನೈ ವಿರುದ್ಧ 6 ವಿಕೆಟ್‌ಗಳಿಂದ ಸೋತರೆ, ಪಂಜಾಬ್ ಕಿಂಗ್ಸ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 4 ವಿಕೆಟ್‌ಗಳಿಂದ ಜಯ ಸಾಧಿಸಿತು. ಇಂದು ಐಪಿಎಲ್ 2024ರಲ್ಲಿ ಈ ಎರಡು ತಂಡಗಳು ಗೆಲುವಿಗಾಗಿ ಕಾದಾಡಲಿವೆ. ಐಪಿಎಲ್ ಇತಿಹಾಸದಲ್ಲಿ ಉಭಯ ತಂಡಗಳು ಈವರೆಗೆ 31 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಪಂಜಾಬ್ 17 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಆರ್​ಸಿಬಿ 14 ಪಂದ್ಯಗಳಲ್ಲಿ ಜಯಗಳಿಸಿದೆ. ಇಂದಿನ ಪಂದ್ಯವನ್ನು ಗೆಲ್ಲುವ ಗುರಿಯನ್ನು ಪಂಜಾಬ್ ಹೊಂದಿದೆ. ಆರ್​ಸಿಬಿ ಸಂಭಾವ್ಯ ತಂಡ ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್, ಅನುಜ್ ರಾವತ್ (ವಿಕೆಟ್ ಕೀಪರ್), ಕರಣ್ ಶರ್ಮಾ, ಲಾಕಿ ಫರ್ಗುಸನ್, ಮಯಾಂಕ್ ದಾಗರ್, ಮೊಹಮ್ಮದ್ ಸಿರಾಜ್. ಇಂಪ್ಯಾಕ್ಟ್ ಪ್ಲೇಯರ್ : ವಿಲ್ ಜಾಕ್ವೆಸ್, ಮಹಿಪಾಲ್ ಲೊಮ್ರೋರ್, ಮನೋಜ್ ಭಾಂಡಗೆ, ಸುಯ್ಯಶ್ ಪ್ರಭುದೇಸಾಯಿ,…

Read More

ಕಾರವಾರ:- ಲೋಕಸಭಾ ಲೋಕಸಭಾ ಚುನಾವಣೆ 2024 ರ ಟಿಕೆಟ್ ಸಿಕ್ಕ ಬೆನ್ನಲ್ಲೇ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಪ್ರಧಾನಿ ಮೋದಿಯವರ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿರುವುದು ನನ್ನ ಸೌಭಾಗ್ಯ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. ಸುದೀರ್ಘ ರಾಜಕೀಯ ಅನುಭವದ ಹಿನ್ನೆಲೆಯಲ್ಲಿ ತನಗೆ ಟಿಕೆಟ್ ಸಿಕ್ಕಿದೆ, ದೇಶಕ್ಕಾಗಿ ಅದ್ಭುತವಾವ ಸಾಧನೆಗಳನ್ನು ಮಾಡಿರುವ ಪ್ರಧಾನಿ ಮೋದಿಯರವ ಜೊತೆ ಕೆಲಸ ಮಾಡುವ ಸೌಭಾಗ್ಯ ತನಗೆ ಸಿಕ್ಕಿದೆ, ಅವರ ಸಾಧನೆಗಳು ಜನಸಾಮಾನ್ಯರಿಗೂ ತಲುಪಿವೆ ಹಾಗಾಗಿ ದಾಖಲೆ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸವಿದೆ ಮತ್ತು ಈ ಭಾಗದಲ್ಲಿ ಅಭಿವೃದ್ಧಿ ಕಾರ್ಯಗಳು ಅದೇ ವೇಗದಲ್ಲಿ ಮುಂದುವರಿಯಲಿವೆ ಎಂದು ಕಾಗೇರಿ ಹೇಳಿದರು. ಅನಂತ ಕುಮಾರ್ ಹೆಗಡೆ ಮತ್ತು ತಾನು ಜೊತೆಯಾಗಿ ಕೆಲಸ ಮಾಡುತ್ತಾ ಪಕ್ಷದ ತತ್ವ ಸಿದ್ಧಾಂತಗಳನ್ನು ಎಲ್ಲರಿಗೂ ತಲುಪಿಸಿದ್ದೇವೆ, ಆರು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಅವರಿಗೆ ಅಪಾರವಾದ ಅನುಭವ ಇದೆ, ಅವರ ಸಲಹೆ ಸೂಚನೆ ಕೇಳುವುದಾಗಿ ಕಾಗೇರಿ ಹೇಳಿದರು.

Read More

ಬೆಂಗಳೂರು : ರಾಜ್ಯದ ಹಾಸನ, ಕೊಡಗು ಸೇರಿದಂತೆ ಮಲೆನಾಡು ಜಿಲ್ಲೆಗಳಲ್ಲಿ ಇಂದು ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆ ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ಭಾರಿ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಬಸವಳಿದಿರುವ ಜನರು ಕಂಚ ನಿರಾಳರಾಗಿದ್ದಾರೆ. BIGG NEWS: ಬಿಜೆಪಿಗೆ ಮರು ಸೇರ್ಪಡೆಗೊಂಡ ಗಣಿ ಧಣಿ ಜನಾರ್ದನ ರೆಡ್ಡಿ ಮುಂದಿನ ಎರಡು ದಿನಗಳ ಕಾಲ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಶಿವಮೊಗ್ಗ ಮತ್ತು ಮೈಸೂರಿನ ಹಲವು ಪ್ರದೇಶಗಳಲ್ಲಿ ಹಗುರ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಬೀದರ್, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ.

Read More

ಪೀಣ್ಯ ದಾಸರಹಳ್ಳಿ :ನಮ್ಮ ಸಮುದಾಯದ ಮಹಿಳೆಯರು ಶಿಕ್ಷಣದಿಂದ ವಂಚಿತರಾಗಬಾರದು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಜನಾಂಗವನ್ನು ಸಂಘಟಿಸಿ ಬಲಪಡಿಸುವ ಮುಖಾಂತರ ನಮ್ಮ ಸಲ್ಲಬೇಕಾದ ಹಕ್ಕುಗಳನ್ನು ಪಡೆಯಲು ಸಂಘ ರಚಿಸಿಕೊಂಡಿದ್ದವೆ ಎಂದು ರಾಷ್ಟ್ರೀಯ ಕಾರ್ಯಧ್ಯಕ್ಷ ಎಂ.ಮನಿಮಾರಪ್ಪ ತಿಳಿಸಿದರು. ಓಡ್( ಭೋವಿ) ಕಮ್ಯೂನಿಟಿ ಕೌನ್ಸಿಲ್ ಆಪ್ ಇಂಡಿಯಾ ಇಂಟರ್ನ್ಯಾಷನಲ್ ಟಿವಿಎಸ್ ಕ್ರಾಸ್ ಬಳಿ ಆಯೋಜಿಸಿದ್ದ ಮಹಿಳಾ ದಿನಾಚರಣೆಯಲ್ಲಿ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಇದೇ ವೇಳೆ ಭೋವಿ ಸಮುದಾಯದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ಅಭಿನಂದಿಸಲಾಯಿತು. ನಮ್ಮ ಸಂಘಟನೆ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಅಧ್ಯಕ್ಷರಾದ ರವಿ ಮಾಕಳಿ ನೇತೃತ್ವದಲ್ಲಿ ಮಂದಿನ ದಿನಗಳಲ್ಲಿ ನಮ್ಮ ಹಕ್ಕುಗಳಿಗಾಗಿ ಹೋರಾಟದ ಮೂಲಕ ಪಡೆದುಕೊಳ್ಳಲು ತೀರ್ಮಾನಿಸಲಾಗಿದೆ.ಶಿಕ್ಷಣ, ಸಂಘಟನೆ, ಹೋರಾಟ ನಮ್ಮ ದ್ಯೇಯವಾಗಿದ್ದು ಎಲ್ಲಾ ರಂಗಗಳಲ್ಲಿ ಮಹಿಳೆಯರು ತೊಡಗಿಸಿಕೊಳ್ಳಬೇಕು’ಎಂದು ಮಹಿಳೆಯರಿಗೆ ಕರೆ ಎಂ.ಮನಿಮಾರಪ್ಪ ನೀಡಿದರು. ಬೋವಿ ಜನಾಂಗದ ಮಹಿಳೆಯರು ಎಲ್ಲಾ ರಂಗಗಳಲ್ಲೂ ಕೂಡ ತೊಡಗಿಸಿಕೊಂಡು ಎಲ್ಲವನ್ನೂ ಮೀರಿ ಮುಂದೆ ಬರಬೇಕು.ನಾವು ಯಾವುದರಲ್ಲೂ ಕಮ್ಮಿ ಇಲ್ಲ ಎಂದು ಸಾಧಿಸಿ ತೋರಿಸಬೇಕು’ ಎಂದು…

Read More

ಬೆಂಗಳೂರು: ಕೆಆರ್‌ಪಿಪಿ ಪಕ್ಷದ ಸ್ಥಾಪಕ ಶಾಸಕ ಜನಾರ್ದನ ರೆಡ್ಡಿ ಅವರಿಂದು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಕೆಆರ್‌ಪಿಪಿ ಪಕ್ಷ ವಿಲೀನ ಕಾರ್ಯಕ್ರಮದಲ್ಲಿ ಜನಾರ್ದನ ರೆಡ್ಡಿ, ಪತ್ನಿ ಅರುಣಾ ಲಕ್ಷ್ಮಿ ಸೇರಿ ಕೆಆರ್‌ಪಿಪಿ ಪಕ್ಷದ ಎಲ್ಲ ಪದಾಧಿಕಾರಿಗಳು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಮಾಜಿ ಸಚಿವರಾದ ಶ್ರೀರಾಮುಲು, ಆನಂದ್ ಸಿಂಗ್, ಸಿಟಿ ರವಿ, ಅಶ್ವಥ್‌ನಾರಾಯಣ ಅವರ ಉಪಸ್ಥಿತಿಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪಕ್ಷದ ಶಾಲು ಹೊದಿಸಿ, ಭಾವುಟ ನೀಡಿ ಸ್ವಾಗತಿಸಿದರು. ಅಲ್ಲದೇ ಪಕ್ಷ ನಿಮ್ಮನ್ನು ಗೌರವಯುತವಾಗಿ ನಡೆಸಿಕೊಳ್ಳಲಿದೆ ಎಂದೂ ಭರವಸೆ ನೀಡಿದರು. ಈ ವೇಳೆ ಜನಾರ್ದನ ರೆಡ್ಡಿ ಯಡಿಯೂರಪ್ಪ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು

Read More

ಯುವ ಸಿನಿಮೋತ್ಸಾಹಿಗಳ ತಂಡವೊಂದು ಸೇರಿ ‘ಕರ್ನಾಟಕ Love’s ಕೇರಳ’ ಎಂಬ ವೆಬ್ ಸಿರೀಸ್ ರೂಪಿಸುತ್ತಿದೆ.‌ ಅದರ ಮೊದಲ ಭಾಗವಾಗಿ ಇತ್ತೀಚೆಷ್ಟೇ ಬೆಂಗಳೂರಿನ ವೆಂಕಟೇಶ್ವರ ದೇಗುಲದಲ್ಲಿ ಚಿತ್ರ ಸೆಟ್ಟೇರಿದೆ. ‘ಕರ್ನಾಟಕ Love’s ಕೇರಳ’ (Karnataka Loves Kerala) ಸಿರೀಸ್ ಗೆ ಗರುಡ ರಾಮ್ ಕ್ಲಾಪ್ ಮಾಡಿದ್ದು, ವೀರಕಪುತ್ರ ಶ್ರೀನಿವಾಸ್ ಕ್ಯಾಮೆರಾ ಚಾಲನೆ ನೀಡಿದ್ದಾರೆ ಕರ್ನಾಟಕ Love’s ಕೇರಳ’ ವೆಬ್ ಸರಣಿಗೆ ಯುವ ಪ್ರತಿಭೆ ಲೋಕೇಶ್ (Lokesh) ಆಕ್ಷನ್ ಕಟ್ ಹೇಳುತ್ತಿದ್ದಾರೆ. ನಿರ್ದೇಶನದ ಜೊತೆಗೆ ನಾಯಕನಾಗಿಯೂ ಅದೃಷ್ಟ ಪರೀಕ್ಷೆಗಿಳಿದ್ದಾರೆ. ಬಸ್ ಮೆಕಾನಿಕಲ್ ಆಗಿರುವ ಲೋಕೇಶ್‌‌ ಒಂದಷ್ಟು ಕಿರುಚಿತ್ರಗಳಿಗೆ ನಿರ್ದೇಶಿಸಿದ್ದಾರೆ. ಹಲವು ಚಿತ್ರಗಳಲ್ಲಿ ಸಣ್ಣ ಪುಟ್ಟ ಪಾತ್ರಗಳಲ್ಲಿ ಅಭಿಯಿಸಿದ್ದು , ಪೂರ್ಣ ಪ್ರಮಾಣದ ನಾಯಕನಾಗಿ ಬಣ್ಣ ಹಚ್ಚುತ್ತಿದ್ದಾರೆ. ಇವರಿಗೆ ಜೋಡಿಯಾಗಿ ಜ್ಯೋತಿ, ಸಹನ ಸಾಥ್ ಕೊಟ್ಟಿದ್ದಾರೆ. ಎಂಎಂಕೆ ಬಾಲು ನಿರ್ಮಾಣ‌ ಮಾಡುತ್ತಿರುವ ಕರ್ನಾಟಕದ love’s ಕೇರಳ ಸಿರೀಸ್ ಗೆ ಲೋಕೇಶ್ ಅವರದ್ದೇ ಕಥೆ ಚಿತ್ರಕಥೆ. ಟೈಟಲ್ ಹೇಳುವಂತೆ ಇದೊಂದು ಪ್ರೇಮಕಥೆ‌‌ ಒಳಗೊಂಡಿದೆ. ಆನಂದ್ ಇಳಯರಾಜ ಛಾಯಾಗ್ರಹಣ,…

Read More

ವಿಜಯ್ ಕಿರಗಂದೂರ್ ಅವರು ನಿರ್ಮಿಸಿರುವ ‘ಯುವ’ ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚಿಗೆ ಹೊಸಪೇಟೆಯಲ್ಲಿ ಅದ್ದೂರಿಯಾಗಿ ನೆರವೇರಿತು. ಯುವ ರಾಜಕುಮಾರ್ ಈ ಚಿತ್ರದ ಮೂಲಕ ನಾಯಕರಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಸಂತೋಷ್ ಆನಂದರಾಮ್ ನಿರ್ದೇಶಿಸಿದ್ದಾರೆ. ರಾಘವೇಂದ್ರ ರಾಜಕುಮಾರ್, ಮಂಗಳ ರಾಘವೇಂದ್ರ ರಾಜಕುಮಾರ್, ಅಶ್ವಿನಿ ಪುನೀತ್ ರಾಜಕುಮಾರ್, ವಿನಯ್ ರಾಜಕುಮಾರ್, ನಿರ್ಮಾಪಕ ವಿಜಯ್ ಕಿರಗಂದೂರ್, ನಿರ್ದೇಶಕ ಸಂತೋಷ್ ಆನಂದರಾಮ್, ನಾಯಕ ಯುವ ರಾಜಕುಮಾರ್, ಚಿತ್ರದಲ್ಲಿ ನಟಿಸಿರುವ ಅಚ್ಯುತಕುಮಾರ್, ಸುಧಾರಾಣಿ, ಹಿತ, ಗಿರಿರಾಜ್, ರಾಘು ಶಿವಮೊಗ್ಗ ಮುಂತಾದವರು ಭಾಗವಹಿಸಿದ್ದರು. ಚಿತ್ರದ ಅನೇಕ ತಂತ್ರಜ್ಞರು ಸಹ ಉಪಸ್ಥಿತರಿದ್ದರು. ಯುವ ಚಿತ್ರ ಆಗಲು ಅಶ್ವಿನಿ ಪುನೀತ್ ರಾಜಕುಮಾರ್ ಅವರೆ ಕಾರಣ.‌ ಅವರು ವಿಜಯ್ ಕಿರಗಂದೂರ್ ಅವರಿಗೆ ಫೋನ್ ಮಾಡಿ ನಮ್ಮ ಗುರು(ಯುವ ರಾಜಕುಮಾರ್) ವನ್ನು ನಿಮ್ಮ ಸಂಸ್ಥೆಯ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿಸಿ ಎಂದರು. ವಿಜಯ್ ಕಿರಗಂದೂರ್ ಅವರು ಒಪ್ಪಿ ಈ ಚಿತ್ರ ನಿರ್ಮಾಣ ಮಾಡಿದರು. ಯುವ ರಾಜಕುಮಾರ್ ಕೂಡ ಈ ಚಿತ್ರಕ್ಕಾಗಿ ಸಾಕಷ್ಟು ಶ್ರಮ ಪಟ್ಟಿದ್ದಾರೆ. ಯುವ…

Read More

ವೈದ್ಯರ ಸಲಹೆಯಿಲ್ಲದೆ ಬಿಪಿ ಔಷಧಿಗಳನ್ನು ತೆಗೆದುಕೊಳ್ಳುವುದು ಚರ್ಮದ ಕ್ಯಾನ್ಸರ್​​ಗೆ ಕಾರಣವಾಗಬಹುದು ಎಂದು ಸಂಶೋಧನೆಯೊಂದರಿಂದ ತಿಳಿದುಬಂದಿದೆ. ಇತ್ತೀಚಿನ ಸಂಶೋಧನೆಯು ನಿಮ್ಮ ರಕ್ತದೊತ್ತಡದ ಔಷಧಿಗಳು ಚರ್ಮದ ಕ್ಯಾನ್ಸರ್​ನೊಂದಿಗೆ ಸಂಬಂಧಿಸಿದೆ ಎಂದು ಸಂಶೋಧನೆ ಹೇಳುತ್ತದೆ. ಏಕೆಂದರೆ ಹೈಡ್ರೋಕ್ಲೋರೋಥಿಯಾಜೈಡ್ ಹೊಂದಿರುವ ರಕ್ತದೊತ್ತಡದ ಔಷಧಿಗಳನ್ನು ತೆಗೆದುಕೊಳ್ಳುವುದರಿಂದ ಚರ್ಮದ ಕ್ಯಾನ್ಸರ್ ಅಪಾಯ ಹೆಚ್ಚು. ಹೈಡ್ರೋಕ್ಲೋರೋಥಿಯಾಜೈಡ್ ಚರ್ಮವನ್ನು ಸೂರ್ಯನ ಕಿರಣಗಳಿಗೆ ಹೆಚ್ಚು ಸೂಕ್ಷ್ಮವಾಗಿಸುವುದರಿಂದ ಇದು ಸಂಭವಿಸುತ್ತದೆ ಎಂದು ಸಂಶೋಧಕರು ಹೇಳುತ್ತಾರೆ, ಇದು ಸಾಮಾನ್ಯ ವ್ಯಕ್ತಿಗೆ ಹೋಲಿಸಿದರೆ ಮಾತ್ರೆ ತೆಗೆದುಕೊಳ್ಳುವವರಿಗೆ ಅಪಾಯ ಹೆಚ್ಚು ಎಂದು ತಿಳಿದುಬಂದಿದೆ. ರಕ್ತದೊತ್ತಡದ ಔಷಧಗಳನ್ನು ಸೇವಿಸುತ್ತಿದ್ದರೆ ವೈದ್ಯರ ಸಲಹೆ ಮೇರೆಗೆ ಔಷಧವನ್ನು ಯಾವಾಗ ಮತ್ತು ಹೇಗೆ ತೆಗೆದುಕೊಳ್ಳಬೇಕು ಎಂಬುದರ ಕುರಿತು ವೈದ್ಯರೊಂದಿಗೆ ಮಾತನಾಡಿದ ನಂತರವೇ ಸೇವಿಸಿ ಎನ್ನುತ್ತಾರೆ ಹಿರಿಯ ವೈದ್ಯ ಜುಗಲ್ ಕಿಶೋರ್ . ಅಲ್ಲದೆ, ವೈದ್ಯರ ಸಲಹೆಯಿಲ್ಲದೆ ಸ್ವಂತವಾಗಿ ಯಾವುದೇ ಔಷಧಿಯನ್ನು ತೆಗೆದುಕೊಳ್ಳುವುದನ್ನು ಪ್ರಾರಂಭಿಸಬೇಡಿ ಮತ್ತು ತಕ್ಷಣವೇ ಯಾವುದೇ ಔಷಧಿಯನ್ನು ತೆಗೆದುಕೊಳ್ಳುವುದನ್ನು ನಿಲ್ಲಿಸಬೇಡಿ ಏಕೆಂದರೆ ಹಾಗೆ ಮಾಡುವುದರಿಂದ ನಿಮ್ಮ ರಕ್ತದೊತ್ತಡವನ್ನು ತ್ವರಿತವಾಗಿ ಹೆಚ್ಚಿಸಬಹುದು, ಇದು ಹೃದಯಾಘಾತ ಮತ್ತು…

Read More

ಜೇನುತುಪ್ಪವನ್ನು ಅನೇಕ ಸೌಂದರ್ಯವರ್ಧಕ ಉತ್ಪನ್ನಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಇದು ಆಂಟಿ-ಆಕ್ಸಿಡೆಂಟ್‌ಗಳಲ್ಲಿ ಸಮೃದ್ಧವಾಗಿದೆ, ಇದು ಸ್ವತಂತ್ರ ರಾಡಿಕಲ್‌ಗಳಿಂದ ಚರ್ಮವನ್ನು ರಕ್ಷಿಸಲು ಸಹಾಯ ಮಾಡುತ್ತದೆ. ವಾಸ್ತವವಾಗಿ, ಜೇನುತುಪ್ಪದಲ್ಲಿ ಬ್ಯಾಕ್ಟೀರಿಯಾ ವಿರೋಧಿ ಮತ್ತು ಆಂಟಿಫಂಗಲ್ ಗುಣಲಕ್ಷಣಗಳು ಕಂಡುಬರುತ್ತವೆ, ಇದರಿಂದಾಗಿ ಇದು ಮುಖದ ಮೇಲಿನ ಸೂಕ್ಷ್ಮ ರೇಖೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಜೇನುತುಪ್ಪವನ್ನು ಬಳಸಿ ಜೆಲ್, ಮಾಯಿಶ್ಚರೈಸರ್, ಲಿಪ್ ಬಾಮ್ ಮತ್ತು ಕ್ಲೆನ್ಸಿಂಗ್ ಹಾಲು ಮುಂತಾದ ಉತ್ಪನ್ನಗಳನ್ನು ತಯಾರಿಸಲಾಗುತ್ತದೆ. ಇದನ್ನು ನಿಮ್ಮ ತ್ವಚೆಯ ಆರೈಕೆಯಲ್ಲಿ ಸೇರಿಸುವ ಮೂಲಕ, ನೀವು ಆರೋಗ್ಯಕರ ಮತ್ತು ಹೊಳೆಯುವ ಚರ್ಮವನ್ನು ಪಡೆಯಬಹುದು, ನಿಮ್ಮ ತ್ವಚೆಯ ಆರೈಕೆಯಲ್ಲಿ ಜೇನುತುಪ್ಪವನ್ನು ಹೇಗೆ ಬಳಸಬೇಕೆಂದು ಇಲ್ಲಿ ತಿಳಿದುಕೊಳ್ಳಿ. ಒಣ ತ್ವಚೆಯಿಂದ ನಿಮಗೆ ತೊಂದರೆಯಾಗಿದ್ದರೆ ಚರ್ಮದ ಆರೈಕೆಯಲ್ಲಿ ನೀವು ಜೇನುತುಪ್ಪವನ್ನು ಬಳಸಬೇಕು. ವಾಸ್ತವವಾಗಿ, ಜೇನುತುಪ್ಪದಲ್ಲಿ ಅನೇಕ ಗುಣಲಕ್ಷಣಗಳಿವೆ, ಇದು ದೀರ್ಘಕಾಲದವರೆಗೆ ಚರ್ಮವನ್ನು ನೈಸರ್ಗಿಕವಾಗಿ ತೇವಗೊಳಿಸುವಂತೆ ಮಾಡುತ್ತದೆ. ಜೇನುತುಪ್ಪವನ್ನು ಬಳಸುವುದರಿಂದ ಚರ್ಮವು ಆರೋಗ್ಯಕರ, ಮೃದು ಮತ್ತು ಹೊಳೆಯುತ್ತದೆ. ಇದನ್ನು ಮಾಡಲು, ಒಂದು ಬಟ್ಟಲಿನಲ್ಲಿ ಹಾಲು, ಅರಿಶಿನ, ಜೇನುತುಪ್ಪ ಮತ್ತು…

Read More