Author: AIN Author

ಜೈಪುರ: ನಿಕೋಲಸ್‌ ಪೂರನ್‌, ಕೆ.ಎಲ್‌ ರಾಹುಲ್‌ (KL Rahul and Nicholas Pooran) ಅವರ ಅರ್ಧಶತಕಗಳ ಹೋರಾಟದ ಹೊರತಾಗಿಯೂ ರಾಜಸ್ಥಾನ್‌ ರಾಯಲ್ಸ್‌ ತಂಡ (Rajasthan Royals), ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧ 20 ರನ್‌ಗಳ ಅಮೋಘ ಜಯ ಸಾಧಿಸಿದೆ. ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್‌ ರಾಯಲ್ಸ್‌ ತಂಡ 20 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 193 ರನ್‌ ಗಳಿಸಿತ್ತು. 194 ರನ್‌ಗಳ ಗುರಿ ಬೆನ್ನತ್ತಿದ ಲಕ್ನೋ ಸೂಪರ್‌ ಜೈಂಟ್ಸ್‌ (Lucknow Super Giants) 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 173 ರನ್‌ ಗಳಿಸಿ ಸೋಲೊಪ್ಪಿಕೊಂಡಿತು. ಕೊನೇ ಓವರ್‌ನಲ್ಲಿ ಲಕ್ನೋ ತಂಡದ ಗೆಲುವಿಗೆ 27 ರನ್‌ ಅಗತ್ಯವಿತ್ತು. ಬೌಲಿಂಗ್‌ನಲ್ಲಿದ್ದ ಅವೇಶ್‌ ಖಾನ್‌ ಮೊದಲೇ 2 ವೈಟ್‌ ಬಿಟ್ಟುಕೊಟ್ಟರು. ಉಳಿದ ನಾಲ್ಕು ಎಸೆತಗಳಲ್ಲಿ ಕ್ರೀಸ್‌ನಲ್ಲಿದ್ದ ಕೃನಾಲ್‌ ಪಾಂಡ್ಯ ಹಾಗೂ ನಿಕೋಲಸ್‌ ಪೂರನ್‌ ಕೇವಲ ಒಂದೊಂದು ರನ್‌ ಗಳಿಸುವಲ್ಲಿ ಸಮರ್ಥರಾದರು. ಇದರಿಂದ ಗೆಲುವು ರಾಜಸ್ಥಾನ್‌ ಪಾಲಾಯಿತು. ಬೃಹತ್‌…

Read More

ಭಾರತದಾದ್ಯಂತ ಹೋಳಿ ಹಬ್ಬವನ್ನು ಸಂಭ್ರಮ ಸಡಗರದಿಂದ ಎಲ್ಲರೂ ಆಚರಿಸಲಾಗುತ್ತದೆ. ಯಾವುದೇ ಜಾತಿ ಮತಗಳ ಭೇದವಿಲ್ಲದೆ ಒಟ್ಟಾಗಿ ಸೇರಿ ಬಣ್ಣಗಳ ಓಕುಳಿಯಾಟದಲ್ಲಿ ಮಿಂದೇಳುತ್ತಾರೆ. ಯಾವುದೇ ಹಬ್ಬವೂ ತನ್ನದೇ ಆದ ಆಚಾರ ಸಂಪ್ರದಾಯಗಳನ್ನು ಹೊಂದಿರುತ್ತದೆ. ಅದೇ ರೀತಿ ಹೋಳಿ ಬಣ್ಣಗಳ ಹಬ್ಬವಾಗಿದ್ದು, ದೂರದ ಊರಿನವರು ತಮ್ಮ ತಾಯ್ನಾಡಿಗೆ ಬಂದು ಈ ಹಬ್ಬವನ್ನು ಆಚರಿಸುತ್ತಾರೆ. ಈ ಹಬ್ಬವನ್ನು ವಸಂತ ಮಾಸದಲ್ಲಿ ಆಚರಿಸಲಾಗುತ್ತದೆ. ಚಳಿಗಾಲದ ಕೊನೆಯನ್ನು ವಸಂತದ ಆಗಮನವನ್ನು ಸಾರುವ ಹಬ್ಬವಾಗಿದೆ. ಜನರು ಬಣ್ಣಗಳನ್ನು ಪರಸ್ಪರ ಎರಚಿಕೊಳ್ಳುವ ಮೂಲಕ ಈ ಹಬ್ಬವನ್ನು ಆಚರಿಸುತ್ತಾರೆ. ಹೋಳಿ ಹಬ್ಬವನ್ನು ದಿನದಂದು ಮಕ್ಕಳಿಂದ ದೊಡ್ಡವರ ತನಕ ಸಂಭ್ರಮ ಸಡಗರದಿಂದ ಆಚರಿಸುತ್ತಾರೆ. ಈ ಹಬ್ಬದ ಆಚರಣೆಯಲ್ಲಿ ದಿನ ಕಾಮನ ಸುಂದರ ಪ್ರತಿಮೆ ಮಾಡಿ ಶೃಂಗರಿಸಿ ಊರಿನ ಕಾಮನ ಕಟ್ಟೆಯ ಮೇಲೆ ಚಪ್ಪರ ಕಟ್ಟಿ ಇಡುತ್ತಾರೆ. ಕಾಮನ ಮುಂದೆ ಮಂಗಳ ವಾದ್ಯಗಳನ್ನು ಊದುತ್ತಾರೆ ಅದಲ್ಲದೆ ಪರಸ್ಪರ ಬೈಗುಳ, ಬಣ್ಣದ ನೀರು, ಸಗಣಿಯ ಗಂಜಲಗಳನ್ನು ಎರಚುತ್ತಾರೆ. ಹೋಳಿಯ ಇತಿಹಾಸ? ಪೂರ್ವದಲ್ಲಿ ತಾರಕಾಸುರನೆಂಬ ರಾಕ್ಷಸನಿದ್ದನು. ಆತ ದುರಹಂಕಾರಿಯೂ…

Read More

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಕ್ಯಾನ್ಸರ್ (Cancer) ರೋಗಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ನೀಡಲು ಪ್ರತಿ ಜಿಲ್ಲೆಯಲ್ಲೂ ಡೇ-ಕೇರ್ ಕಿಮೋಥೆರಪಿ (Day Care Chemotherapy) ಕೇಂದ್ರ ಸ್ಥಾಪಿಸುವುದಾಗಿ ಸಿಎಂ ಸಿದ್ದರಾಮಯ್ಯ () ಬಜೆಟ್‌ನಲ್ಲಿ ಘೋಷಿಸಿದ್ದಾರೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕಿಮೋಥೆರಪಿ ಕೇಂದ್ರಗಳು ಇಲ್ಲ. ಇದರಿಂದ ಕ್ಯಾನ್ಸರ್ ಪೀಡಿತರಿಗೆ ಕಿಮೋಥೆರಪಿ ಮಾಡುವುದು ಕಷ್ಟವಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 20 ಕೋಟಿ ರೂ. ವೆಚ್ಚದಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಒಂದು ಡೇ-ಕೇರ್ ಕಿಮೋಥೆರಪಿ ಕೇಂದ್ರ ಸ್ಥಾಪಿಸುವುದಾಗಿ ಹೇಳಿದ್ದಾರೆ.  https://ainlivenews.com/good-news-for-cancer-patients-72-lakhs-rs-cancer-medicine-will-now-be-available-for-3-lakhs/ ಮಹಿಳೆಯರಲ್ಲಿ ಹೆಚ್ಚುತ್ತಿರುವ ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠದ ಕ್ಯಾನ್ಸರ್ ಪ್ರಾಥಮಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಚಿಕಿತ್ಸೆ ನೀಡಲು ಸರ್ಕಾರ ಸಜ್ಜಾಗುತ್ತಿದೆ. ಇದಕ್ಕಾಗಿ 20 ಜಿಲ್ಲಾ ಆಸ್ಪತ್ರೆಗಳಲ್ಲಿ ಡಿಜಿಟಲ್ ಮಾಮೋಗ್ರಫಿ (Digital Mammography) ಯಂತ್ರಗಳನ್ನು ಖರೀದಿಸಲು ನಿರ್ಧರಿಸಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕೆ.ಸಿ.ಜನರಲ್ ಆಸ್ಪತ್ರೆ, ಉಡುಪಿ, ಕೋಲಾರ ಮತ್ತು ದಾವಣಗೆರೆ ಜಿಲ್ಲಾ ಆಸ್ಪತ್ರೆಗಳಿಗೆ ಕಾಲ್ಪೊಸ್ಕೊಪಿ (Colposcopy) ಉಪಕರಣಗಳ ಖರೀದಿಗೆ…

Read More

ಹೋಳಿ/ಚಂದ್ರ ಗ್ರಹಣ ಸೂರ್ಯೋದಯ: 06:19, ಸೂರ್ಯಾಸ್ತ : 06:24 ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಪಾಲ್ಗುಣ ಮಾಸ , ಶುಕ್ಲ ಪಕ್ಷ, ಉತ್ತರಾಯಣಂ, ಶಿಶಿರ ಋತು, ತಿಥಿ: ಹುಣ್ಣಿಮೆ, ನಕ್ಷತ್ರ: ಉತ್ತರ ಪಾಲ್ಗುಣಿ, ರಾಹು ಕಾಲ: 07:30 ನಿಂದ 09:00 ತನಕ ಯಮಗಂಡ: 10:30 ನಿಂದ 12:00 ತನಕ ಗುಳಿಕ ಕಾಲ: 03:00 ನಿಂದ 04:30 ತನಕ ಅಮೃತಕಾಲ:ಇಲ್ಲ ಅಭಿಜಿತ್ ಮುಹುರ್ತ: ಬೆ.11:57 ನಿಂದ ಮ.12:46 ತನಕ ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು. Mob. 93534 88403 ಮೇಷ: ಸಂಗಾತಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಹರಸಾಹಸ, ಉದ್ಯಮಿ ಹಾಗೂ ಅಧಿಕಾರಿಗಳ ಮಧ್ಯೆ ಜಟಾಪಟಿ ಸಂಭವ, ಸಾಲದ ರೂಪದಲ್ಲಿ ಆತ್ಮೀಯರಿಗೆ ನೀಡಿದ ಹಣವು ಮರಳಿ ಪಡೆಯಲು ಹರಸಾಹಸ, ಕಂಪನಿಯ ಮುಂದಾಳತ್ವ ವಹಿಸುವ ಅವಕಾಶ ಒದಗಿ ಬರಲಿದೆ, ನಿಮ್ಮ ಪತ್ನಿ ಕಡೆಯಿಂದ ಆಸ್ತಿ ಭಾಗ್ಯ,ಈ…

Read More

ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಬೆಂಬಲಿಸುತ್ತಾ ಬಂದಿದ್ದ ಕಂಗನಾ ರಣಾವತ್​ ಅವರಿಗೆ ಈಗ ಬಿಜೆಪಿ ಟಿಕೆಟ್​ ನೀಡಿದೆ. ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಅವರು ಬಿಜೆಪಿ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಅಧಿಕೃತವಾಗಿ ಕಂಗನಾ ರಣಾವತ್​ ಅವರು ರಾಜಕೀಯದ ಅಖಾಡಕ್ಕೆ ಇಳಿಯುತ್ತಿದ್ದಾರೆ. ನಾನು ರಾಜಕೀಯಕ್ಕೆ ಎಂಟ್ರಿ ನೀಡುವುದಾದರೆ ಇದು ಸೂಕ್ತ ಸಮಯ’ ಎಂದು ಕಂಗನಾ ರಣಾವತ್​ ಅವರು ಇತ್ತೀಚೆಗೆ ಹೇಳಿದ್ದರು. ಆ ಮೂಲಕ ಅವರು ಸೂಚನೆ ನೀಡಿದ್ದರು. ಜನರ ಊಹೆ ಈಗ ನಿಜವಾಗಿದೆ. ಮೂಲತಃ ಹಿಮಾಚಲ ಪ್ರದೇಶದವರಾದ ಕಂಗನಾಗೆ ಮಂಡಿ ಕ್ಷೇತ್ರದ ಟಿಕೆಟ್​ ಸಿಕ್ಕಿದೆ. ಸ್ಟಾರ್​ ನಟಿಯಾಗಿರುವ ಅವರು ದೇಶಾದ್ಯಂತ ಜನಪ್ರಿಯತೆ ಹೊಂದಿದ್ದಾರೆ.

Read More

ಬಾಗಲಕೋಟೆ:- ಜಿಲ್ಲೆಯ ಜಮಖಂಡಿ ನಗರದ ರಂಗ ಕೇಸರಿ ಸಮಿತಿ ಸದಸ್ಯರಾದ ಅಜಯ ಕಡಪಟ್ಟಿ, ಗೀತಾ ಸೂರ್ಯವಂಸಿ,ವಿಠ್ಠಲ ಜಮಖಂಡಿ ಅವರು ಮಾದ್ಯಮದ ಮೂಲಕ ಮಾತನಾಡಿ ಪ್ರತಿ ವರ್ಷದಂತೆ ಈ ವರ್ಷವು ಕೂಡ ರಂಗ ಕೇಸರಿ ಸಮಿತಿ ವತಿಯಿಂದ ನಾಡ ಮಕ್ಕಳ ಬಣ್ಣದಾಟಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಳಿಸಲಾಗಿದೆ ಎಂದರು. ಮಾ. 2೫ ರಂದು ಬೆಳಗ್ಗೆ ೮ ಗಂಟೆಗೆ ಸಮಿತಿ ವತಿಯಿಂದ ಬಣ್ಣದಾಟ ಆಚರಣೆಗಾಗಿ ಸ್ವಾಗತ ಕಮಾನುಗಳು ಹಾಗೂ ಮಹಿಳಿಯರಿಗೆ ಪ್ರತೆಕವಾಗಿ ಆವರಣ ಗಂಡು ಮಕ್ಕಳಿಗಾಗಿ ಪ್ರತ್ಯೇಕವಾಗಿ ಆವರಣವನ್ನು ಸಜ್ಜುಗೂಳಿಸಲಾಗಿದೆ ಹಾಗೂ ಕಣ್ಗಾವಲಾಗಿ ಸಿ.ಸಿ ಕ್ಯಾಮೆರಾ ಅಳವಡಿಸಲಾಗಿದೆ ಎಂದರು ಈ ಬಣದಾಟದಲ್ಲಿ ಡಾನ್ಸ್, ಸೇರಿದಂತೆ ಮುಂತಾದ ಕಾರ್ಯಕ್ರಮಗಳು ನಡೆಯಲಿವೆ ಆದರಿಂದ ತಾಲೂಕಿನ ಸರ್ವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಕಾರ್ಯಕ್ರಮವನ್ನು ಯಶಸ್ವಿ ಗೂಳಿಸಬೇಕೆಂದು ರಂಗ ಕೇಸರಿ ಸಮಿತಿಯ ಸದಸ್ಯರು ತಿಳಿಸಿದರು. ಪ್ರಕಾಶ ಕುಂಬಾರ ಬಾಗಲಕೋಟೆ

Read More

ಬೆಂಗಳೂರು:- 2024 ರ ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿಯ 5ನೇ ಪಟ್ಟಿ ಬಿಡುಗಡೆ ಆಗಿದ್ದು, ಬೆಳಗಾವಿಯಿಂದ ಜಗದೀಶ್ ಶೆಟ್ಟರ್ ಹಾಗೂ ಚಿಕ್ಕಬಳ್ಳಾಪುರದಿಂದ ಡಾ. ಕೆ ಸುಧಾಕರ್ ಕಣಕ್ಕೆ ಇಳಿದಿದ್ದಾರೆ. ಕರ್ನಾಟಕ ಸೇರಿದಂತೆ 8 ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಕರ್ನಾಟಕದಲ್ಲಿ ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆಗೆ ಟಿಕೆಟ್ ಕೈತಪ್ಪಿದ್ದು, ತೀವ್ರ ವಿರೋಧದ ನಡುವೆ ಜಗದೀಶ್ ಶೆಟ್ಟರ್​ಗೆ ಬೆಳಗಾವಿ ಟಿಕೆಟ್ ಘೋಷಣೆ ಮಾಡಲಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಟಿಕೆಟ್ ಯಾರಿಗೆ ನೀಡಬೇಕು ಎಂಬ ಗೊಂದಲದಲ್ಲಿ ಬಿಜೆಪಿ ಹೈಕಮಾಂಡ್ ಇದ್ದಂತೆ ಕಾಣುತ್ತಿದೆ. ರಘುಚಂದನ್ ಹಾಗೂ ಗೋವಿಂದ ಕಾರಜೋಳ ನಡುವೆ ಟಿಕೆಟ್​ಗಾಗಿ ಫೈಟ್ ನಡೆಯುತ್ತಿದೆ. ಆದರೆ, ಕಾರಜೋಳ ಅವರಿಗೆ ಟಿಕೆಟ್ ನೀಡದಂತೆ ಸ್ಥಳೀಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಸದ್ಯ, ರಾಜ್ಯ ನಾಯಕರೊಂದಿಗೆ ಮತ್ತೊಮ್ಮೆ ಚರ್ಚಿಸಿ ಟಿಕೆಟ್ ಘೋಷಿಸಲು ಹೈಕಮಾಂಡ್ ನಿರ್ಧರಿಸಿದೆ.

Read More

ಬೆಂಗಳೂರು:- ಕೇಂದ್ರದಿಂದ ಕರ್ನಾಟಕಕ್ಕೆ ಯಾವುದೇ ಅನ್ಯಾಯ ಆಗಿಲ್ಲ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,15ನೇ ಹಣಕಾಸು ಆಯೋಗದ ಶಿಫಾರಸಿನಂತೆ ಕೇಂದ್ರವು ತನ್ನ ‘ವಿಶೇಷ ಅನುದಾನ’ದ ಬಾಕಿ ಪಾಲನ್ನು ಬಿಡುಗಡೆ ಮಾಡುತ್ತಿಲ್ಲ ಎಂಬ ಕರ್ನಾಟಕ ಸರ್ಕಾರದ ಹೇಳಿಕೆಯನ್ನು ಇಂದು ತಳ್ಳಿಹಾಕಿದ ನಿರ್ಮಲಾ ಸೀತಾರಾಮನ್, ಹಣಕಾಸು ಆಯೋಗದ ಅಂತಹ ಯಾವುದೇ ಶಿಫಾರಸು ಇಲ್ಲ ಎಂದು ಸ್ಪಷ್ಟಪಡಿಸಿದರು. ರಾಜ್ಯಕ್ಕೆ 5,495 ಕೋಟಿ ರೂಪಾಯಿ ವಿಶೇಷ ಅನುದಾನವನ್ನು ಬಿಡುಗಡೆ ಮಾಡಿಲ್ಲ ಎಂದು ಸರ್ಕಾರ ಹೇಳುತ್ತದೆ. ಆದರೆ ಇದು ಸಂಪೂರ್ಣ ಸುಳ್ಳು. ಹಣಕಾಸು ಆಯೋಗವು ತನ್ನ ಅಂತಿಮ ವರದಿಯಲ್ಲಿ ಅಂತಹ ಯಾವುದೇ ವಿಶೇಷ ಅನುದಾನವನ್ನು ಶಿಫಾರಸು ಮಾಡಿಲ್ಲ ಎಂದರು. ಕರ್ನಾಟಕಕ್ಕೆ ಬರಬೇಕಾದ ಪ್ರತಿಯೊಂದು ಪೈಸೆಯನ್ನು ಸಕಾಲದಲ್ಲಿ ನೀಡಲಾಗಿದೆ ಮತ್ತು ನೀಡಲಾಗುತ್ತದೆ ಎಂದು ನಿಮಗೆ ವಿವರವಾಗಿ ಹೇಳಲು ನಾನು ಬಯಸುತ್ತೇನೆ ಎಂದರು. 2014 ಮತ್ತು 2024 ರ ನಡುವೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ತೆರಿಗೆ ಹಂಚಿಕೆ ಶೇಕಡಾ 258 ರಷ್ಟು…

Read More

ಕಲಬುರಗಿ:- ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೆಪೇಟ್ ಬಿಜೆಪಿ ಕಚೇರಿಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ ಅವರು ತಮ್ಮ ಹಣೆಗೆ ಕುಂಕುಮ ಹಾಕಲು ನಿರಾಕರಿಸಿದ ಘಟನೆ ಜರುಗಿದೆ. ಸಿದ್ದರಾಮಯ್ಯ ಹಿಂದೂ ವಿರೋಧಿ, ಕುಂಕುಮ ಹಾಕಲ್ಲ ಎಂದೆಲ್ಲಾ ಟೀಕಿಸುವ ಬಿಜೆಪಿ ನಾಯಕರು ಇದೀಗ ಇದಕ್ಕೆ ಏನು ಹೇಳುತ್ತಾರೆ? ಕಚೇರಿಗೆ ಆಗಮಿಸಿದ ಅಶೋಕ್ ಅವರಿಗೆ ಬಿಜೆಪಿ ಮುಖಂಡರು ಹಾರ ಹಾಕಿ ಸ್ವಾಗತಿಸಲು ಮುಂದಾದರು. ಈ ವೇಳೆ ಎರಡು ಹಾರಗಳನ್ನು ತಾವು ಹಾಕಿಕೊಳ್ಳದೆ ಬಿಜೆಪಿ ಹಿರಿಯ ಮುಖಂಡ ಡಾ ವಿಶ್ವನಾಥ್ ಪವಾರ್ ಮತ್ತು ಇನ್ನೊಬ್ಬರಿಗೆ ಹಾಕಿ ಗೌರವಿಸಿದರು. ಈ ನಡುವೆ ಡಾ ವಿಶ್ವನಾಥ್ ಪವಾರ್ ಅವರು ಅಶೋಕ ಅವರ ಹಣೆಗೆ ಕುಂಕುಮ ಇಡಲು ಮುಂದಾಗಿದ್ದಾರೆ. ಆದರೆ ಅಶೋಕ ಅವರು ಕುಂಕುಮ ಹಚ್ಚದಂತೆ ತಡೆದಿದ್ದಾರೆ. ಬಳಿಕ ವಿಶ್ವನಾಥ್ ಶಾಲು ಹಾಕಿ ಸನ್ಮಾನಿಸಿದರು.

Read More

ಬೆಳಗಾವಿ:- ಮಗನಿಗೆ ತಿಲಕ ಇಟ್ಟು ಚುನಾವಣಾ ಪ್ರಚಾರಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚಾಲನೆ ನೀಡಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆಗೆ ರಣಕಹಳೆ ಊದಿರುವ ಲಕ್ಷ್ಮಿ ಹೆಬ್ಬಾಳ್ಕರ್, ಹಿಂಡಲಗಾದ ಮಂದಿರದಲ್ಲಿ ಗಣಪತಿ ಪೂಜೆ ನೆರವೇರಿಸಿ ಪುತ್ರ, ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್‌ಗೆ ತಿಲಕವಿಟ್ಟು ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. ಬೃಹತ್ ಬೈಕ್ ರ‍್ಯಾಲಿ ಮೂಲಕ ಕ್ಷೇತ್ರ ಸಂಚಾರಕ್ಕೆ ಚಾಲನೆ ನೀಡಲಾಗಿದೆ. ಇದಕ್ಕೂ ಮೊದಲು ಮಹಾತ್ಮರ ಪುತ್ಥಳಿಗಳಿಗೆ ಗೌರವ ಮಾಲಾರ್ಪಣೆಯನ್ನು ಮಾಡಲಾಗಿದೆ. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಸಹಸ್ರಾರು ಮುಖಂಡರು ಹಾಗೂ ಕಾರ್ಯಕರ್ತರು ಜತೆಗಿದ್ದರು. ಈ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಮೃಣಾಲ್‌ ಹೆಬ್ಬಾಳ್ಕರ್, ನಮ್ಮ ಕುಟುಂಬದ ಸಂಪ್ರದಾಯದಂತೆ ಯಾವುದೇ ಕೆಲಸ ಮಾಡುವ ಮುನ್ನ ಗಣೇಶನಿಗೆ ಪೂಜೆ ಸಲ್ಲಿಸುತ್ತೇವೆ. ಅದೇ ರೀತಿ ಪೂಜೆ ಮಾಡಿ, ಎಲ್ಲ ಗುರುಹಿರಿಯರ ಆಶೀರ್ವಾದದೊಂದಿಗೆ ಇಂದು ರ‍್ಯಾಲಿಯನ್ನು ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು. ಈ ವೇಳೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ…

Read More