Author: AIN Author

ಶಿವಮೊಗ್ಗ:- ಯಡಿಯೂರಪ್ಪ ಯುವಕರನ್ನು ತುಳಿಯುತ್ತಿದ್ದಾರೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ವಿಜಯೇಂದ್ರ ಕ್ಷೇತ್ರ ಶಿಕಾರಿಪುರದಲ್ಲಿ ನಿಂತು ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ ಈಶ್ವರಪ್ಪ, ಅವರು ದುಡ್ಡಿನ ಮೂಲಕ ರಾಜಕಾರಣ ಮಾಡುತ್ತಿದ್ದಾರೆ, ಯುವಕರನ್ನು ತುಳಿಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಯಡಿಯೂರಪ್ಪ ಅವರೇ ನನಗೆ ಏಕೆ ಅನ್ಯಾಯ ಮಾಡಿದಿರಿ ಎಂದು ಪ್ರಶ್ನಿಸಿದ ಈಶ್ವರಪ್ಪ, ಯಡಿಯೂರಪ್ಪ ದುಡ್ಡಿನ ಮೂಲಕ ರಾಜಕಾರಣ ಮಾಡುತ್ತಿದ್ದಾರೆ. ಶಿಕಾರಿಪುರ ಕ್ಷೇತ್ರದ ಜನರನ್ನು ಕುರಿಗಳ ರೀತಿ ಅಂದುಕೊಂಡಿದ್ದಾರೆ. ಅಪ್ಪ-ಮಕ್ಕಳು ಬೇಡವೆಂದು ಶಿಕಾರಿಪುರದ ಜ‌ನ ತೀರ್ಮಾನಿಸಿದ್ದಾರೆ. ರಾಘವೇಂದ್ರ ಸೋಲಿಸುವ ಮೂಲಕ ಅವರಿಗೆ ಬುದ್ಧಿ ಕಲಿಸಬೇಕು. ಸೋಲಿನ ರುಚಿ‌ ಏನು ಅಂತಾ ಯಡಿಯೂರಪ್ಪಗೆ ತೋರಿಸಬೇಕು ಎಂದರು. ಶಿವಮೊಗ್ಗ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಬಿವೈ ರಾಘವೇಂದ್ರ ವಿರುದ್ಧ ನಟ ಶಿವರಾಜ್​ಕುಮಾರ್ ಪತ್ನಿ ಗೀತಾ ಶಿವರಾಜ್​ಕುಮಾರ್ ಅವರನ್ನು ಅಭ್ಯರ್ಥಿಯನ್ನಾಗಿ ಕಾಂಗ್ರೆಸ್ ಘೋಷಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ರಾಘವೇಂದ್ರ ಗೆಲ್ಲಬೇಕು ಅಂತಾ ಶಿವಮೊಗ್ಗದಲ್ಲಿ ಡಮ್ಮಿ ಕ್ಯಾಂಡಿಡೇಟು ಹಾಕಿಕೊಂಡಿದ್ದಾರೆ ಅಂತಾ ಜ‌ನ ಮಾತನಾಡುತ್ತಿದ್ದಾರೆ ಎಂದರು.…

Read More

ಸೋಲಿನೊಂದಿಗೆ ಲೀಗ್​ ಆರಂಭಿಸಿರುವ ಆರ್​ಸಿಬಿ ತನ್ನ ತವರಿನಲ್ಲಿ ಅಂದರೆ ಬೆಂಗಳೂರಿನಲ್ಲಿ ತನ್ನ ಮೊದಲ ಪಂದ್ಯವನ್ನು ಆಡಲು ಸಜ್ಜಾಗಿದೆ. ಈ ಪಂದ್ಯದಲ್ಲಿ ಆರ್​ಸಿಬಿಯ ಎದುರಾಳಿಯಾಗಿ ಪಂಜಾಬ್ ಕಿಂಗ್ಸ್ (RCB vs PBKS) ಕಣಕ್ಕಿಳಿಯುತ್ತಿದೆ. ಒಂದೆಡೆ ಆರ್​ಸಿಬಿ ತನ್ನ ಮೊದಲ ಗೆಲುವಿಗಾಗಿ ಕಾಯುತ್ತಿದ್ದರೆ, ಇನ್ನೊಂದೆಡೆ ಆಡಿದ ಮೊದಲ ಪಂದ್ಯದಲ್ಲೇ ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿರುವ ಪಂಜಾಬ್ ತಂಡ ತನ್ನ ಗೆಲುವಿನ ಸರಣಿಯನ್ನು ಮುಂದುವರೆಸಲು ಎದುರು ನೋಡುತ್ತಿದೆ. ಆಡಿದ ಮೊದಲ ಪಂದ್ಯದಲ್ಲೇ ಆರ್​ಸಿಬಿಯ ನ್ಯೂನತೆಗಳು ಜಗಜ್ಜಾಹೀರಾಗಿವೆ. ತಂಡ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲೂ ಬಲಹೀನವಾಗಿ ಕಾಣುತ್ತಿದೆ. ಅದರಲ್ಲೂ ಬೌಲಿಂಗ್ ವಿಭಾಗದಲ್ಲಿ ಬದಲಾವಣೆಯ ಅಗತ್ಯವಿದೆ. ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ತಂಡದ ಬೌಲರ್​ಗಳು ಪರಿಣಾಮಕಾರಿಯಾಗಿರಲಿಲ್ಲ. ಹೀಗಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲ್ಲಿರುವ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಾದರೂ ಬೌಲರ್‌ಗಳಿಂದ ಉತ್ತಮ ಪ್ರದರ್ಶನದ ಅಗತ್ಯವಿದೆ. ಗಳು ಫಾರ್ಮ್​ ಕಂಡುಕೊಳ್ಳಬೇಕಾಗಿದೆ. ಆರಂಭಿಕರಾಗಿ ಫಾಫ್ ಡುಪ್ಲೆಸಿಸ್ ಅಬ್ಬರಿಸಿದ್ದನ್ನು ಬಿಟ್ಟರೆ ಉಳಿದಂತೆ ತಂಡದ ಅಗ್ರ ಕ್ರಮಾಂಕ ಸಪ್ಪೆ ಪ್ರದರ್ಶನ ನೀಡಿತ್ತು. ವಿರಾಟ್ ಕೊಹ್ಲಿ…

Read More

ಚಾಮರಾಜನಗರ:- ಜಿಲ್ಲೆಯ ಚಾಮರಾಜನಗರ ತಾಲೂಕಿನ ಸಂತೇಮರಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿಗಳು ರೋಗಿಗಳಿಂದ ಹಣಪಡೆದುಕೊಳ್ಳುವ ಮೂಲಕ ಸುಲಿಗೆಗೆ ಇಳಿದಿದ್ದಾರೆ. ಸಂತೇಮರಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ನಾರ್ಮಲ್ ಡೆಲವರಿಗೆ 3 ಸಾವಿರ ರೂ. ಸಿಜೇರಿಯನ್​​ಗೆ 20 ಸಾವಿರ ರೂ. ಗರ್ಭಕೋಶ ಶಸ್ತ್ರ ಚಿಕಿತ್ಸೆಗೆ 30 ಸಾವಿರ ರೂ. ಅಂತ ಒಂದೊಂದು ಆಪರೇಷನ್​​ಗೆ ಒಂದೊಂದ ಹಣ ನಿಗದಿ ಮಾಡಲಾಗಿದೆ. ಆಶಾ ಕಾರ್ಯಕರ್ತೆಯರು ಆ ಹಣವನ್ನ ಸಂಗ್ರಹಿಸಿ ನರ್ಸ್​​ಗಳಿಗೆ ಕೊಡ್ಬೇಕಂತೆ. ಬಳಿಕ ವೈದ್ಯಾಧಿಕಾರಿ ರೇಣುಕಾದೇವಿ ಈ ಹಣವನ್ನ ಸಂಗ್ರಹಿಸುತ್ತಾರೆಂಬ ಗಂಭೀರ ಆರೋಪ ಕೇಳಿ ಬಂದಿದೆ ಇದೇ ರೀತಿ ರಾಣಿ ಎಂಬ ಆಶಾ ಕಾರ್ಯಕರ್ತೆಗೆ 10 ಸಾವಿರ ರೂ. ಹಣವನ್ನ ಡೆಲವರಿ ರೋಗಿಗಳ ಬಳಿ ವಸೂಲಿ ಮಾಡೋಕೆ ಹೇಳಿದ್ರಂತೆ. ಇದಕ್ಕೊಪ್ಪದೆ ಇದ್ದಿದ್ದಕ್ಕೆ ವೈದ್ಯಾಧಿಕಾರಿ ರೇಣುಕಾದೇವಿ ಇಲ್ಲ ಸಲ್ಲದ ಆರೋಪ ಮಾಡಿ ಭ್ರಷ್ಟಾಚಾರ ವಿರುದ್ದ ಧ್ವನಿ ಎತ್ತಿದ್ದ ಆಶಾ ಕಾರ್ಯಕರ್ತೆ ರಾಣಿ ವಿರುದ್ದ ಮೆಮೋ ನೀಡಿದ್ದಾರೆ. ಅಸಲಿ ಆಶಾ ಕಾರ್ಯಕರ್ತೆಯರು ಸರ್ಕಾರಿ ನೌಕರರಲ್ಲ. ಅವರಿಗೆ ನೋಟಿಸ್ ನೀಡಲು ಕಾನೂನಲ್ಲಿ ಅವಕಾಶವಿಲ್ಲ ಆದರೂ…

Read More

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ರಾಜ್ಯಾದ್ಯಂತ ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಕ್ತಾಯಗೊಂಡ ಬೆನ್ನಲ್ಲೇ ನಾಳೆಯಿಂದ ರಾಜ್ಯಾದ್ಯಂತ ವಾರ್ಷಿ ಪರೀಕ್ಷೆ-1 ಆರಂಭವಾಗಲಿದ್ದು, ಒಟ್ಟು 2750 ಕೇಂದ್ರಗಳಲ್ಲಿ ಏಪ್ರಿಲ್ 6ರವರೆಗೆ ಪರೀಕ್ಷೆಗಳು ನಡೆಯಲಿವೆ. ರಾಜ್ಯದಲ್ಲಿ ಈ ಬಾರಿ ಪರೀಕ್ಷೆಗೆ ಒಟ್ಟು 8,69,968 ವಿದ್ಯಾರ್ಥಿಗಳು ನೋಂದಾಯಿಸಿದ್ದಾರೆ. ಈ ಪೈಕಿ 4,41,910 ಬಾಲಕರು, 4,28,058 ಬಾಲಕಿಯರಿದ್ದಾರೆ. ಒಟ್ಟು ವಿದ್ಯಾರ್ಥಿಗಳ ಪೈಕಿ 8.10 ಲಕ್ಷಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು (ರೆಗ್ಯಲರ್), 18,225 ಖಾಸಗಿ ವಿದ್ಯಾರ್ಥಿಗಳು ಹಾಗೂ 41,375 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ. 54,254 ವಿಶೇಷ ಚೇತನ ವಿದ್ಯಾರ್ಥಿಗಳಿದ್ದಾರೆ. ರಾಜ್ಯದಲ್ಲಿ ಸುಸೂತ್ರವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಧಿಕಾರಿ/ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್ ಫೋನ್ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ 200ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಮಂಡಳಿ ಅಧ್ಯಕ್ಷೆ ಮಂಜುಶ್ರೀ ತಿಳಿಸಿದ್ದಾರೆ.ನಿಷೇಧಾಜ್ಞೆ:ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ ಸುತ್ತ…

Read More

ನೆಲಮಂಗಲ: ಬೆಂಗಳೂರು ನಗರದಲ್ಲಿ ಬಿರು ಬೇಸಿಗೆ ಆರಂಭವಾದ ಬಳಿಕ ದಿನೇದಿನೇ ಹನಿ ಹನಿ ನೀರಿಗೂ ಹಾಹಾಕಾರ ಶುರುವಾಗಿ ಕುಡಯಲು ಹಾಗೂ ದಿನ ನಿತ್ಯದ ಬಳಕೆಗೆ ಜನರು ಪರಿತಪ್ಪಿಸುವಂತಾಗಿದೆ. ಜೀವ ಜಲ ಕುಡಿಯುವ ನೀರಿಗಾಗಿ ಜನರು ಸರ್ಕಾರ ಹಾಗೂ ಅಧಿಕಾರಿಗಳ ಗಮನ ಸೆಳೆಯಲು ಖಾಲಿ ಬಿಂದಿಗೆ ಹಿಡಿದು ವಿನೂತನ ಪ್ರತಿಭಟನೆ ಮಾಡಿ ಆಗ್ರಹಿಸಿದ್ದಾರೆ. ಎಲ್ಲಿ ಏಕೆ ಈ ವಿನೂತನ ಪ್ರತಿಭಟನೆ ಅಂತೀರ ಹಾಗಾದರೆ ಈ ಸ್ಟೋರಿ ನೋಡಿ. ಹೌದು ಈ ಬಿರು ಬೇಸಿಗೆಯಲ್ಲಿ ಜನರು ಕುಡಿಯುವ ನೀರು ಹಾಗೂ ದಿನನಿತ್ಯದ ಬಳಕೆಗೆ ಜೀವ ಜಲಕ್ಕೆ ಪರಿತಪ್ಪಿಸುವಂತಾಗಿದ್ದು, ಸರ್ಕಾರದ ವಿರುದ್ದ ದಿಕ್ಕಾರ ಕೂಗಿ ಜನರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಟಿ.ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮಲ್ಲಸಂದ್ರ ವಾಡ್೯ ನ ಗುಟ್ಟೆ ಬಡಾವಣೆಯ ನಿವಾಸಿಗಳಿಗೆ ಕಳೆದ ಮೂರು ತಿಂಗಳಿನಿಂದ ಕಾವೇರಿ ನೀರು ಹಾಗೂ ಸ್ಥಳೀಯ ಸಿಎಂಸಿ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಇಲ್ಲಿನ ಮಹಿಳೆಯರು ಖಾಲಿ ಕೊಡ ಹಿಡಿದು ನೀರು ಕೊಡಿ ಎಂದು ದಿಕ್ಕಾರ ಹಾಕಿದ ಜನಸಾಮಾನ್ಯರು ತಮ್ಮ…

Read More

ಅಹಮದಾಬಾದ್: ಐಪಿಎಲ್‌ನ ಅತ್ಯಂತ ಯಶಸ್ವಿ ತಂಡ ಎನಿಸಿಕೊಂಡಿರುವ ಮುಂಬೈ ಇಂಡಿಯನ್ಸ್ 17ನೇ ಆವೃತ್ತಿ ಐಪಿಎಲ್‌ನಲ್ಲಿ ಶುಭಾರಂಭದ ನಿರೀಕ್ಷೆಯಲ್ಲಿದ್ದು, ಭಾನುವಾರ ಗುಜರಾತ್ ಟೈಟಾನ್ಸ್ ವಿರುದ್ಧ ಸೆಣಸಾಡಲಿದೆ. ಈ ಪಂದ್ಯ ನಾಯಕತ್ವದ ವಿಚಾರದಲ್ಲಿ ಅತ್ಯಂತ ಮಹತ್ವದ್ದು ಎನಿಸಿದೆ. 5 ಬಾರಿ ಮುಂಬೈಯನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದ ರೋಹಿತ್ ಶರ್ಮಾ ಈ ಬಾರಿ ನಾಯಕನಲ್ಲ. ಮುಂಬೈ ತೊರೆದು 2022ರಲ್ಲಿ ಗುಜರಾತ್‌ ಟೈಟಾನ್ಸ್‌ಗೆ ತಮ್ಮದೇ ನಾಯಕತ್ವದಲ್ಲಿ ಪ್ರಶಸ್ತಿ ತಂದುಕೊಟ್ಟಿದ್ದ, ಹಾರ್ದಿಕ್ ಪಾಂಡ್ಯ ಈಗ ಮತ್ತೆ ಮುಂಬೈಗೆ ಮರಳಿ ತಂಡದ ಸಾರಥ್ಯ ವಹಿಸುತ್ತಿದ್ದಾರೆ. ರೋಹಿತ್ ಶರ್ಮಾ ಸೇರಿದಂತೆ ಹಲವು ಹಿರಿಯರಿರುವ ಮುಂಬೈನಲ್ಲಿ ಹಾರ್ದಿಕ್ ಯಶಸ್ವಿಯಾಗುತ್ತಾರೊ ಎಂಬ ಕುತೂಹಲವಿದೆ. ಕಮ್‌ಬ್ಯಾಕ್ ಪಂದ್ಯ ಕೂಡಾ ಆಗಿರುವುದರಿಂದ ಹಾರ್ದಿಕ್‌ಗೆ ಟಿ20 ವಿಶ್ವಕಪ್‌ಗೂ ಮುನ್ನ ತಮ್ಮ ಸಾಮರ್ಥ್ಯ ಪ್ರದರ್ಶಿಸಬೇಕಾದ ಅನಿರ್ವಾಯತೆ ಇದೆ. https://ainlivenews.com/good-news-for-cancer-patients-72-lakhs-rs-cancer-medicine-will-now-be-available-for-3-lakhs/ ಅತ್ತ ಗುಜರಾತ್‌ಗೆ ಈ ಬಾರಿ ಶುಭ್‌ಮನ್ ಗಿಲ್ ನಾಯಕ. ಕಳೆದೆರಡು ಬಾರಿಯೂ ಫೈನಲ್‌ಗೇರಿರುವ ತಂಡವನ್ನು ಈ ಬಾರಿಯೂ ಪ್ರಶಸ್ತಿ ಸುತ್ತಿಗೇರಿಸುವ ಹೊಣೆಗಾರಿಕೆ ಶುಭ್‌ಮನ್ ಗಿಲ್ ಅವರ ಹೆಗಲ ಮೇಲೆ ಇದೆ. ಗುಜರಾತ್…

Read More

ನವದೆಹಲಿ: ಹೋಳಿ ಹಬ್ಬದ ಪ್ರಯುಕ್ತ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಲಡಾಖ್‌ನ (Ladakh) ಲೇಹ್‌ಗೆ (Leh) ತೆರಳಿ ಭಾನುವಾರ ಸೈನಿಕರೊಂದಿಗೆ (Soldiers) ಬಣ್ಣದ ಹಬ್ಬ ಹೋಳಿಯನ್ನು ಆಚರಿಸಿದರು. ಹೋಳಿ ಹಬ್ಬ ಆಚರಣೆ ವೇಳೆ ರಾಜನಾಥ್ ಸಿಂಗ್ ಜೊತೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಮತ್ತು ಲೆಫ್ಟಿನೆಂಟ್ ಜನರಲ್ ರಶೀಮ್ ಬಾಲಿ ಉಪಸ್ಥಿತರಿದ್ದರು. ಇದಕ್ಕೂ ಮೊದಲು ರಕ್ಷಣಾ ಸಚಿವರು ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್ (Siachen) ಪ್ರದೇಶಕ್ಕೆ ಭೇಟಿ ನೀಡಲು ನಿರ್ಧರಿಸಿದ್ದರು. ಆದರೆ ಪ್ರತಿಕೂಲ ಹವಾಮಾನದಿಂದ ಅದು ಸಾಧ್ಯವಾಗಲಿಲ್ಲ. ಭೇಟಿ ಅಸಾಧ್ಯವಾದ ಹಿನ್ನೆಲೆ ಅಲ್ಲಿನ ಕಮಾಂಡಿಂಗ್ ಅಧಿಕಾರಿಯೊಂದಿಗೆ ದೂರವಾಣಿ ಮೂಲಕ ಮಾತನಾಡಿದ ರಾಜನಾಥ್ ಸಿಂಗ್, ಆದಷ್ಟು ಬೇಗ ಸಿಯಾಚಿನ್ ಪ್ರದೇಶಕ್ಕೆ ಭೇಟಿ ನೀಡಿ ಅವರನ್ನು ಭೇಟಿ ಮಾಡುವುದಾಗಿ ತಿಳಿಸಿದರು. https://ainlivenews.com/good-news-for-cancer-patients-72-lakhs-rs-cancer-medicine-will-now-be-available-for-3-lakhs/ ಈ ಸಂದರ್ಭದಲ್ಲಿ ಯೋಧರನ್ನುದ್ದೇಶಿಸಿ ಮಾತನಾಡಿದ ಅವರು, ದೆಹಲಿ ನಮ್ಮ ರಾಜಧಾನಿಯಾದರೇ, ಲಡಾಖ್ ಶೌರ್ಯವನ್ನು ತೋರಿಸುವ ಮತ್ತೊಂದು ರಾಜಧಾನಿಯಾಗಿದೆ. ನಿಮ್ಮೆಲ್ಲರನ್ನು ಭೇಟಿ ಮಾಡಿ ಹೋಳಿ ಆಚರಿಸಿರುವುದು ನನಗೆ ಅತ್ಯಂತ…

Read More

ಬೆಂಗಳೂರು: ನಾಳೆ ಬೆಳಗ್ಗೆ 10ಕ್ಕೆ ವಿಜಯೇಂದ್ರ ಮತ್ತು ಉಸ್ತುವಾರಿ ರಾಧಾಮೋಹನ್ ಸಮ್ಮುಖದಲ್ಲಿ ನಾಳೆ ಬಿಜೆಪಿ ಸೇರುತ್ತೇನೆ ಎಂದು ಜನಾರ್ದನ ರೆಡ್ಡಿ ಅಧಿಕೃತವಾಗಿ ಘೋಷಿಸಿದರು. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರೆಡ್ಡಿ, ಬಿಜೆಪಿ ನಾಯಕರ ಆಹ್ವಾನದ ಮೇರೆಗೆ ನಾಳೆ ಪಕ್ಷ ಸೇರ್ಪಡೆಯಾಗುತ್ತಿದ್ದೇನೆ. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲಿ ನಾಳೆ ಬೆಳಗ್ಗೆ 10ಕ್ಕೆ ಬಿಜೆಪಿ ಸೇರ್ಪಡೆಯಾಗುತ್ತಿದ್ದು, ಬಿಜೆಪಿ ಸೇರ್ಪಡೆ ಬಗ್ಗೆ ಎಲ್ಲಾ ಬೆಂಬಲಿಗರ ಅಭಿಪ್ರಾಯ ಪಡೆದಿದ್ದೇನೆ. ಇದಕ್ಕೆ ಎಲ್ಲಾ ಬೆಂಬಲಿಗರು ಒಪ್ಪಿಗೆ ನೀಡಿದ್ದಾರೆ ಎಂದು ಸ್ಪಷ್ಟಪಡಿಸಿದರು. ಮೋದಿ, ಅಮಿತ್ ಶಾ ನೇತೃತ್ವದಲ್ಲಿ ಕಳೆದ 10 ವರ್ಷದಿಂದ ಅಭಿವೃದ್ಧಿಯಾಗಿದೆ. ಮೋದಿಯನ್ನು ಮತ್ತೆ ಪ್ರಧಾನಿ ಮಾಡಲು ಈ ನಿರ್ಧಾರ ಮಾಡಿದ್ದೇನೆ. KRPP ಸ್ಥಾಪನೆ ವೇಳೆ ಬಿಎಸ್​​ವೈರನ್ನು ತಂದೆ ರೀತಿ ನೋಡುತ್ತೇನೆ ಎಂದಿದ್ದೆ. ಮಾಜಿ ಸಚಿವ ಶ್ರೀರಾಮುಲು ಜೊತೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಎಲ್ಲರೂ ಒಟ್ಟಾಗಿ ಮೋದಿರನ್ನು ಮತ್ತೆ ಪ್ರಧಾನಿ ಮಾಡಲು ಶ್ರಮಿಸುತ್ತೇವೆ ಎಂದು ಹೇಳಿದರು. https://ainlivenews.com/good-news-for-cancer-patients-72-lakhs-rs-cancer-medicine-will-now-be-available-for-3-lakhs/ ಬಿಜೆಪಿಗೆ ಅತೀ‌ಚಿಕ್ಕ ವಯಸ್ಸಿನಿಂದಲೂ ಕೆಲಸ ಮಾಡಿದ್ದೇನೆ. ಮಧ್ಯೆದಲ್ಲಿ ಏನೆನ್ನೆಲ್ಲಾ ಆಯ್ತು. ಅದು ನಿಮಗೂ…

Read More

ಬೆಂಗಳೂರು: ಬೆಂಗಳೂರು ನಗರದಲ್ಲಿ ಬಿರು ಬೇಸಿಗೆ ಆರಂಭವಾದ ಬಳಿಕ ದಿನೇದಿನೇ ಹನಿ ಹನಿ ನೀರಿಗೂ ಹಾಹಾಕಾರ ಶುರುವಾಗಿ ಕುಡಯಲು ಹಾಗೂ ದಿನ ನಿತ್ಯದ ಬಳಕೆಗೆ ಜನರು ಪರಿತಪ್ಪಿಸುವಂತಾಗಿದೆ. ಜೀವ ಜಲ ಕುಡಿಯುವ ನೀರಿಗಾಗಿ ಜನರು ಸರ್ಕಾರ ಹಾಗೂ ಅಧಿಕಾರಿಗಳ ಗಮನ ಸೆಳೆಯಲು ಖಾಲಿ ಬಿಂದಿಗೆ ಹಿಡಿದು ವಿನೂತನ ಪ್ರತಿಭಟನೆ ಮಾಡಿ ಆಗ್ರಹಿಸಿದ್ದಾರೆ. ಎಲ್ಲಿ ಏಕೆ ಈ ವಿನೂತನ ಪ್ರತಿಭಟನೆ ಅಂತೀರ ಹಾಗಾದರೆ ಈ ಸ್ಟೋರಿ ನೋಡಿ.. ಹೌದು ಈ ಬಿರು ಬೇಸಿಗೆಯಲ್ಲಿ ಜನರು ಕುಡಿಯುವ ನೀರು ಹಾಗೂ ದಿನನಿತ್ಯದ ಬಳಕೆಗೆ ಜೀವ ಜಲಕ್ಕೆ ಪರಿತಪ್ಪಿಸುವಂತಾಗಿದ್ದು, ಸರ್ಕಾರದ ವಿರುದ್ದ ದಿಕ್ಕಾರ ಕೂಗಿ ಜನರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಟಿ.ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮಲ್ಲಸಂದ್ರ ವಾಡ್೯ ನ ಗುಟ್ಟೆ ಬಡಾವಣೆಯ ನಿವಾಸಿಗಳಿಗೆ ಕಳೆದ ಮೂರು ತಿಂಗಳಿನಿಂದ ಕಾವೇರಿ ನೀರು ಹಾಗೂ ಸ್ಥಳೀಯ ಸಿಎಂಸಿ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಇಲ್ಲಿನ ಮಹಿಳೆಯರು ಖಾಲಿ ಕೊಡ ಹಿಡಿದು ನೀರು ಕೊಡಿ ಎಂದು ದಿಕ್ಕಾರ ಹಾಕಿದ ಜನಸಾಮಾನ್ಯರು ತಮ್ಮ…

Read More

ಮೈಸೂರು: ಮೈಸೂರು ಕೊಡಗು ಲೋಕಸಭಾ ಅಖಾಡಕ್ಕೆ ಸಿಎಂ ಸಿದ್ದರಾಮಯ್ಯ ಇಂದು ಎಂಟ್ರಿ‌ ಕೊಟ್ಟಿದ್ದಾರೆ. ಶತಾಯ ಗತಾಯ ಮೈಸೂರು- ಕೊಡಗು ಕ್ಷೇತ್ರ ಗೆಲ್ಲಲು ರಣ ತಂತ್ರ ರೂಪಿಸಲಿದ್ದಾರೆ. ಖಾಸಗಿ ಹೋಟೆಲ್ ನಲ್ಲಿ ಸಿಎಂ ಮೈಸೂರು ಕೊಡಗು ಕೈ ಶಾಸಕರು, ಮಾಜಿ ಶಾಸಕರು ಹಾಗೂ ಮುಖಂಡರ ಜೊತೆ ಹೈವೊಲ್ಟೇಜ್ ಮೀಟಿಂಗ್ ನಡೆಸಿದ್ದಾರೆ. ಮೈಸೂರಿನ ಖಾಸಗಿ ಹೋಟೆಲ್​ನಲ್ಲಿ ನಡೆದ ಸಭೆಯಲ್ಲಿ ಸಿದ್ದರಾಮಯ್ಯ ಅವರು ಮುಖಂಡರು, ಶಾಸಕರು, ಸಚಿವರಿಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ. https://ainlivenews.com/good-news-for-cancer-patients-72-lakhs-rs-cancer-medicine-will-now-be-available-for-3-lakhs/ ಯದುವೀರ್ ಟಾರ್ಗೆಟ್ ಬೇಡ. ಬಿಜೆಪಿ ಅಷ್ಟೆ ನಮ್ಮ ಟಾರ್ಗೆಟ್. ಯದುವೀರ್ ಮಹರಾಜ ಅನ್ನುವುದಕ್ಕಿಂತ ಬಿಜೆಪಿ ಅಭ್ಯರ್ಥಿ ಅನ್ನುವುದಷ್ಟೆ ಇರಲಿ‌. ಭಾಷಣ ಮಾಡವಾಗ ಎಚ್ಚರ ಇರಲಿ. ಯದುವೀರ್ ವಿರುದ್ಧ ಸಿಕ್ಕ ಸಿಕ್ಕಾಗೆ ಹೇಳಿಕೆ ಕೊಡಬೇಡಿ. ಎಮೋಷನಲ್ ವಿಚಾರವನ್ನ ತಿರುಗಿಸುವಲ್ಲಿ ಬಿಜೆಪಿಯವರು ನಿಸ್ಸೀಮರು. ಹೀಗಾಗಿ ಬಿಜೆಪಿಯವರಿಗೆ ನಿಮ್ಮ ಹೇಳಿಕೆ ಆಹಾರವಾಗಬಾರದು. ಈ ಕಾರಣದಿಂದ ಯದುವೀರ್ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಇರಲಿ ಎಂದು ಸಭೆಯಲ್ಲಿ ಮುಖಂಡರು ಹಾಗೂ ಶಾಸಕರುಗಳಿಗೆ ಸಿಎಂ ಸಿದ್ದರಾಮಯ್ಯ ಹೇಳಿದರು.

Read More