Author: AIN Author

ಬೆಂಗಳೂರು: ಮಗುವನ್ನು ಅಕ್ರಮವಾಗಿ ಮನೆಯಲ್ಲಿ ಇಟ್ಟುಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಪೊಲೀಸ್ ಕಸ್ಟಡಿಯಲ್ಲಿರುವ ಸೋನು ಶ್ರೀನಿವಾಸ್ ಗೌಡ ಅವರ ವಿಚಾರಣೆಯನ್ನು (Interrogation) ಪೊಲೀಸರು ಮುಂದುವರೆಸಿದ್ದಾರೆ. ಸ್ಥಳ ಮಹಜರಗಾಗಿ ಅವರನ್ನು ಇಂದು ರಾಯಚೂರಿಗೆ ಕರೆದುಕೊಂಡು ಹೋಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಬೆಂಗಳೂರಿನಲ್ಲಿರುವ ಸೋನು ಮನೆ ಮತ್ತು ರಾಯಚೂರಿನ ಹಳ್ಳಿಯೊಂದರಲ್ಲಿರುವ ಆ ಬಾಲಕಿ ಮನೆಗೆ ಸೋನುವನ್ನು ಕರೆದುಕೊಂಡು ಹೋಗಲು ಪೊಲೀಸರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. BIGG News: 5, 8, 9ನೇ ತರಗತಿಗೆ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟ: ಗೊಂದಲಕ್ಕೆ ತೆರೆ ಎಳೆದ ಶಿಕ್ಷಣ ಇಲಾಖೆ! ನಿನ್ನೆಯಷ್ಟೇ ಸೋನು ಶ್ರೀನಿವಾಸ್ ಗೌಡರನ್ನು (Sonu Srinivas Gowda) 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದೆ ಬೆಂಗಳೂರಿನ ಸಿಜೆಎಂ ಕೋರ್ಟ್. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನು ಗೌಡ ಫಸ್ಟ್‌ ರಿಯಾಕ್ಷನ್ ಕೂಡ ಕೊಟ್ಟಿದ್ದಾರೆ. ಪೊಲೀಸ್ ವಾಹನದಲ್ಲಿ ತೆರಳುವುದಕ್ಕೂ ಮುನ್ನ ಮಾಧ್ಯಮಗಳ ಎದುರು ಸೋನು ಶ್ರೀನಿವಾಸ್ ಗೌಡ ಹೇಳಿಕೆ ನೀಡಿದ್ದಾರೆ. ಲೀಗಲ್ ಆಗಿ ತನಿಖೆ ನಡೆಯುತ್ತಿದೆ.…

Read More

ತುಮಕೂರು: ಬೈಕ್‌ನಲ್ಲಿ ತೆರಳುತ್ತಿರುವ ವೇಳೆ ಕೇಬಲ್ ವೈರ್‌ ಮೈಮೇಲೆ ಬಿದ್ದು ವಿದ್ಯುತ್ ಸ್ಪರ್ಶದಿಂದ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಇಪ್ಪಾಡಿ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮೀ ಬಾಯಿ ಜಾದವ್ (36), ಮೃತ ದುರ್ದೈವಿ. ಬೈಕ್ ಸವಾರ ಲಕ್ಷ್ಮಣ್ ಗೆ ಗಂಭೀರ ಗಾಯಗೊಂಡಿದ್ದು, ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಚಿಂಚಲಕಟ್ಟೆ ಮೂಲದವರಾಗಿರುವ ಲಕ್ಷ್ಮೀಬಾಯಿ. ಕುಣಿಗಲ್ ತಾಲ್ಲೂಕಿನ ಇಪ್ಪಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ರು. ಇಂದು ಕೆಲಸ ಮುಗಿಸಿ ಇಪ್ಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಲಕ್ಣ್ಮಣ್ ಜೊತೆ ಇಪ್ಪಾಡಿಯಿಂದ ಕುಣಿಗಲ್ ಗೆ ಬೈಕ್ ನಲ್ಲಿ ಬರುತ್ತಿದ್ದಾಗ ದಾರಿಯಲ್ಲಿ ಹಾದುಹೋಗಿದ್ದ ಕೇಬಲ್ ವೈರ್ ಗೆ ವಿದ್ಯುತ್ ತಂತಿ ತಗುಲಿ ಲಕ್ಷ್ಮೀಬಾಯಿ ಮೇಲೆ‌ ಬಿದ್ದಿದೆ. https://ainlivenews.com/good-news-for-women-you-will-get-3-lakh-rupees-to-start-your-own-business-apply-today/ ಕೇಬಲ್ ವೈರ್ ಮೇಲೆ ಬಿದ್ದ ಪರಿಣಾಮ ಲಕ್ಷ್ಮೀಬಾಯಿ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಈ ವೇಳೆ ಬೈಕ್ ಸವಾರ…

Read More

ಬೆಂಗಳೂರು: ರಾಜ್ಯದಲ್ಲಿ ರಾಮಮಂದಿರ ಹವಾ, ಮೋದಿ ಹವಾ ಇಲ್ಲ. ನಾವು ನಡೆಸಿದ ಆಂತರಿಕ ಸಮೀಕ್ಷೆಯಲ್ಲಿ ಇದು ಸಾಬೀತಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಕೆಪಿಸಿಸಿ ಕಚೇರಿ ಇಂದಿರಾ ಭವನದಲ್ಲಿ ನಡೆದ ಗ್ಯಾರಂಟಿ ಸಮಿತಿಗಳ ಅಧ್ಯಕ್ಷ, ‌ಉಪಾಧ್ಯಕ್ಷ ಹಾಗೂ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ನನ್ನ ಹೆಸರಿನಲ್ಲಿ ಶಿವ ಇದ್ದಾನೆ, ಸಿದ್ದರಾಮಯ್ಯ ಹೆಸರಿನಲ್ಲಿ ರಾಮ ಇದ್ದಾನೆ. ನಾವುಗಳು ಕೂಡಾ ಹಿಂದೂಗಳು ಎಂದರು.‌ BIGG News: 5, 8, 9ನೇ ತರಗತಿಗೆ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟ: ಗೊಂದಲಕ್ಕೆ ತೆರೆ ಎಳೆದ ಶಿಕ್ಷಣ ಇಲಾಖೆ! ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನ ಗೆಲ್ಲಬೇಕು. ಈ ನಿಟ್ಟಿನಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ಸೂಚಿಸಿದರು. ಗ್ಯಾರಂಟಿಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ, ಮನೆ ಮನೆಗೆ ಹೋಗಬೇಕು. ತಂಡ‌ ಮಾಡಿ ಹೋಗಬೇಕು. ಓಟರ್ ಲಿಸ್ಟ್ ತಗೊಂಡು ಮನೆ ಮನೆಗೆ ತೆರಳಬೇಕು. ಕಮಲ ಕೆರೆಯಲ್ಲಿ ಚೆಂದ, ತೆನೆ ಹೊಲದಲ್ಲಿ ಇದ್ದರೆ ಈ ದಾನ ಧರ್ಮ‌ ಮಾಡುವ…

Read More

ಚನ್ನಪಟ್ಟಣ: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರಿಗೆ ಮಾ. 21ರಂದು ಚೆನ್ನೈನ ಆಸ್ಪತ್ರೆಯೊಂದರಲ್ಲಿ ನಡೆಸಲಾಗಿದ್ದ ಹೃದಯ ಶಸ್ತ್ರಚಿಕಿತ್ಸೆಯ ನಂತರ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದ್ದು, ಸೋಮವಾರದಂದು ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನ್ನ ತಂದೆಗೆ ನಡೆಸಲಾಗಿದ್ದ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಇದು ನಿಜಕ್ಕೂ ನಮ್ಮ ಕುಟುಂಬಕ್ಕೆ ಹಾಗೂ ಅವರ ಅಭಿಮಾನಿಗಳಿಗೆ ಖುಷಿಯ ವಿಚಾರ. ಡಾ. ಮಂಜುನಾಥ್ ಹಾಗೂ ಡಾ. ಸತೀಶ್ ಸಾಯಿ ಅವರ ನೇತೃತ್ವದಲ್ಲಿ ಆಪರೇಷನ್ ನಡೆದಿತ್ತು. ಅವರೀಗ ಗುಣಮುಖರಾಗುತ್ತಿದ್ದಾರೆ. ಸೋಮವಾರದಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಅವರು ಹೇಳಿದ್ದಾರೆ. https://ainlivenews.com/good-news-for-women-you-will-get-3-lakh-rupees-to-start-your-own-business-apply-today/ ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದ ಕುಮಾರಸ್ವಾಮಿ ಇತ್ತೀಚೆಗೆ ಚಿಕಿತ್ಸೆಗಾಗಿ ಚೆನ್ನೈಗೆ ತೆರಳಿದ್ದರು. ಪದ್ಮನಾಭ ನಗರದ ದೇವೇಗೌಡರ ನಿವಾಸದಲ್ಲಿ ತಂದೆ ಹೆಚ್​ಡಿ ದೇವೇಗೌಡ ಹಾಗೂ ತಾಯಿ ಚೆನ್ನಮ್ಮ ಅವರಿಂದ ಆಶೀರ್ವಾದ ಪಡೆದ ಕುಮಾರಸ್ವಾಮಿ ನಂತರ ವಿಮಾನ ನಿಲ್ದಾಣಕ್ಕೆ ತೆರಳಿದ್ದರು. ಬಳಿಕ ಚೆನ್ನೈನ ಅಪೋಲೊ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದ ಈ…

Read More

ಬೆಂಗಳೂರು: ಮಂಡ್ಯ, ಹಾಸನ, ಕೋಲಾರ  ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ತೀರ್ಮಾನ ಆಗಿದೆ. ಆದ್ರೆ ಸುಮಲತಾ ಅವರ ಟಿಕೆಟ್ ಬಗ್ಗೆ ತೀರ್ಮಾನ ಆಗಿಲ್ಲ ಎಂದು ಲೋಕಸಭಾ ಚುನಾವಣಾ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ತಿಳಿಸಿದ್ದಾರೆ. BIGG News: 5, 8, 9ನೇ ತರಗತಿಗೆ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟ: ಗೊಂದಲಕ್ಕೆ ತೆರೆ ಎಳೆದ ಶಿಕ್ಷಣ ಇಲಾಖೆ! ಬೆಂಗಳೂರಿನ ಅರಮನೆ ಮೈದಾನದ (Bengaluru Palace Grounds) ವೃಕ್ಷ ಸಭಾಂಗಣದಲ್ಲಿ ನಡೆಯುತ್ತಿರುವ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಮಂಡ್ಯ, ಹಾಸನ, ಕೋಲಾರ ಮೂರು ಕ್ಷೇತ್ರ ಜೆಡಿಎಸ್‌ಗೆ (JDS) ಬಿಟ್ಟುಕೊಡುವ ತೀರ್ಮಾನ ಆಗಿದೆ. ಸುಮಲತಾ ಅವರ ಟಿಕೆಟ್ ತೀರ್ಮಾನ ಆಗಿಲ್ಲ ಎಂದು ಹೇಳಿದ್ದು ಆಗ ಸತ್ಯ ಆಗಿತ್ತು. ಈಗ ಜೆಡಿಎಸ್‌ಗೆ ಬಿಟ್ಟು ಕೊಡುವ ಬಗ್ಗೆ ತೀರ್ಮಾನ ಆಗಿದೆ. ಸುಮಲತಾ ಅವರ ಪಾತ್ರ ಬಹಳ ದೊಡ್ಡದಿದೆ. ಅವರ ರಾಜಕೀಯ ಭವಿಷ್ಯವು ಸಹ ಬಹಳ ಉತ್ತಮ ಆಗಿರಲಿದೆ ಎಂದು ಹೇಳಿದ್ದಾರೆ. https://ainlivenews.com/bjp-high-command-surrendered-to-dalpatis-kolar-hassan-mandya-are-part-of-jds/ ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ವಿಚಾರಕ್ಕೆ ಪ್ರತಿಕ್ರಿಯಿಸಿ,…

Read More

ಭುವನೇಶ್ವರ: ಒಡಿಶಾದ ಕಟಕ್‌ನಿಂದ 6 ಬಾರಿ ಸಂಸದರಾಗಿ ಆಯ್ಕೆಯಾಗಿರುವ ಬಿಜು ಜನತಾ ದಳದ (BJD) ಭರ್ತೃಹರಿ ಮಹತಾಬ್ (Bhartruhari Mahtab) ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಮಹತಾಬ್ ಅವರು 1998, 1999, 2004, 2009, 2014 ಮತ್ತು 2019 ರಲ್ಲಿ ಒಡಿಶಾದ ಕಟಕ್ ಸಂಸದೀಯ ಕ್ಷೇತ್ರದಿಂದ ಸತತ ಆರು ಲೋಕಸಭಾ ಚುನಾವಣೆ ಗೆದ್ದಿದ್ದರು. 1998 ರ ಲೋಕಸಭಾ ಚುನಾವಣೆಯಲ್ಲಿ ಮಹತಾಬ್ ಅವರು ಕಾಂಗ್ರೆಸ್ ಪಕ್ಷದ ಸೈಯದ್ ಮುಸ್ತಾಫಿಜ್ ಅಹ್ಮದ್ ಅವರನ್ನು 1,12,694 ಮತಗಳ ಅಂತರದಿಂದ ಸೋಲಿಸುವ ಮೂಲಕ ಕಟಕ್ ಸ್ಥಾನವನ್ನು ಮೊದಲ ಬಾರಿಗೆ ಗೆದ್ದರು. ಬಳಿಕ 1999 ಮತ್ತು 2004 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ಕನ್ಹು ಚರಣ್ ಲೆಂಕಾ ಮತ್ತು ಜಯಂತಿ ಪಟ್ನಾಯಕ್ ಅವರನ್ನು ಸೋಲಿಸುವ ಮೂಲಕವು ಗೆಲುವಿನ ನಗೆ ಬೀರಿದ್ದರು. https://ainlivenews.com/good-news-for-women-you-will-get-3-lakh-rupees-to-start-your-own-business-apply-today/ 2009 ರ ಲೋಕಸಭಾ ಚುನಾವಣೆಯಲ್ಲಿ 2,36,292 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಬಿಭೂತಿ ಭೂಷಣ್ ಮಿಶ್ರಾ ಅವರನ್ನು ಸೋಲಿಸುವ ಮೂಲಕ ನಾಲ್ಕನೇ ಬಾರಿಗೆ ಕಟಕ್ ಸ್ಥಾನವನ್ನು ಉಳಿಸಿಕೊಂಡರು.…

Read More

ಚೆನ್ನೈ: 17ನೇ ಆವೃತ್ತಿ ಐಪಿಎಲ್‌ನ (IPL) ಉದ್ಘಾಟನಾ ಪಂದ್ಯದಲ್ಲೇ ಆರ್‌ಸಿಬಿ ಸ್ಟಾರ್‌ ಪ್ಲೇಯರ್‌ ವಿರಾಟ್‌ ಕೊಹ್ಲಿ (Virat Kohli) 21 ರನ್‌ ಬಾರಿಸುವ ಮೂಲಕ ಎರಡೆರಡು ದಾಖಲೆಗಳನ್ನ ಉಡೀಸ್‌ ಮಾಡಿದ್ದಾರೆ. ಉದ್ಘಾಟನಾ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ದುಕೊಂಡ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ ಫೀಲ್ಡಿಂಗ್‌ ಮಾಡುವ ಅವಕಾಶವನ್ನು ಸಿಎಸ್‌ಕೆಗೆ (CSK) ಬಿಟ್ಟುಕೊಟ್ಟಿತು. ಆರ್‌ಸಿಬಿ ಪರ ನಿಧಾನಗತಿಯ ಬ್ಯಾಟಿಂಗ್‌ ಮಾಡಿ 1 ಸಿಕ್ಸರ್‌ ಜೊತೆಗೆ 21 ರನ್‌ ಗಳಿಸಿದ ಕೊಹ್ಲಿ, ಟಿ20 ಕ್ರಿಕೆಟ್‌ನಲ್ಲಿ ಎರಡು ತಂಡಗಳ (ಡೆಲ್ಲಿ ಕ್ಯಾಪಿಟಲ್ಸ್‌ & ಸಿಎಸ್‌ಕೆ) ವಿರುದ್ಧ 1,000 ಸಾವಿರ ರನ್‌ ಪೂರೈಸಿದ ಮೊದಲ ಭಾರತೀಯ ಬ್ಯಾಟರ್‌ ಎಂಬ ಖ್ಯಾತಿಗೆ ಪಾತ್ರರಾದರು. ಅಲ್ಲದೇ ಟಿ20 ಕ್ರಿಕೆಟ್‌ನಲ್ಲಿ ವೇಗವಾಗಿ 12,000 ರನ್‌ ಪೂರೈಸಿದ ಮೊದಲ ಭಾರತೀಯ ಹಾಗೂ ವಿಶ್ವದ 2ನೇ ಆಟಗಾರ ಸಹ ಎನಿಸಿಕಕೊಂಡರು. ವೆಸ್ಟ್‌ ಇಂಡೀಸ್‌ ತಂಡದ ಮಾಜಿ ಆಟಗಾರ ಕ್ರಿಸ್‌ ಗೇಲ್‌ (Chris Gayle) 343 ಇನ್ನೀಂಗ್ಸ್‌ಗಳಲ್ಲಿ 12,000 ರನ್‌ ಪೂರೈಸಿದ್ದರೆ, ವಿರಾಟ್‌…

Read More

ಉತ್ತರ ಕನ್ನಡ: ಬಹು ನಿರೀಕ್ಷಿತ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಯಾರು ಎನ್ನುವ ಕುತೂಹಲಕ್ಕೆ ತೆರೆಬಿದ್ದಿದೆ. ಕೊನೆಗೂ ಬೆಳಗಾವಿ ಜಿಲ್ಲೆಯ ಖಾನಾಪುರದ ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್‌ ಅವರಿಗೆ ಟಿಕೆಟ್‌ ಘೋಷಣೆಯಾಗಿದೆ. ಈ ಮೂಲಕ ಅವರ ಗೆಲುವಿಗೆ ಪಕ್ಷದ ಹೈಕಮಾಂಡ್‌ ನಾನಾ ಲೆಕ್ಕಾಚಾರಗಳನ್ನು ಹಾಕಿಕೊಂಡಿದೆ.  ಬಿಜೆಪಿಯ ಭದ್ರಕೋಟೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರವನ್ನು ಈ ಬಾರಿಯಾದರೂ ತನ್ನ ತೆಕ್ಕೆಗೆ ತೆಗೆದುಕೊಳ್ಳಬೇಕೆಂದು ಕಾಂಗ್ರೆಸ್​ ಮಾಸ್ಟರ್ ಪ್ಲಾನ್ ರೂಪಿಸಿದೆ. ಯೋಜನೆಯಂತೆ ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್​ಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ. ಮರಾಠರೇ ಅಧಿಕ ಸಂಖ್ಯೆಯಲ್ಲಿರುವ ಕಿತ್ತೂರು, ಖಾನಾಪುರ ಭಾಗದಲ್ಲೇ ಕಾಂಗ್ರೆಸ್​​ಗೆ ಪ್ರತಿ ಬಾರಿ ಹಿನ್ನಡೆ ಆಗುತ್ತಿತ್ತು. ಈ ಸಲ ಎಲ್ಲವನ್ನು ಗಣನೆಗೆ ತೆಗೆದುಕೊಂಡು ಕಾಂಗ್ರೆಸ್​ ಮರಾಠ ಸಮುದಾಯದ ಅಭ್ಯರ್ಥಿಯಾದ ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್​ಗೆ ಟಿಕೆಟ್ ಘೋಷಣೆ ಮಾಡಿ ದಾಳ ಉರುಳಿಸಿದೆ.  https://ainlivenews.com/good-news-for-women-you-will-get-3-lakh-rupees-to-start-your-own-business-apply-today/ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಮತದಾರರ ಬಹು ದೊಡ್ಡ ಸಮುದಾಯಗಳಲ್ಲಿ ಕ್ಷತ್ರಿಯ ಮರಾಠಾ ಸಮುದಾಯ ಕೂಡ…

Read More

ನವದೆಹಲಿ: ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯವು (DGCA) ಏರ್ ಇಂಡಿಯಾಗೆ (Air India) 80 ಲಕ್ಷ ರೂ. ದಂಡ ವಿಧಿಸಿದೆ. ವಿಮಾನದ ಕರ್ತವ್ಯದ ಸಮಯದ ಮಿತಿಗಳು ಮತ್ತು ವಿಮಾನ ಸಿಬ್ಬಂದಿಯ ಆಯಾಸ ನಿರ್ವಹಣೆ ವ್ಯವಸ್ಥೆಗೆ ಸಂಬಂಧಿಸಿದ ನಿಯಮಾವಳಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ದಂಡ ಹಾಕಿದೆ. ವಿಮಾನದ ಕರ್ತವ್ಯ ಸಮಯದ ಮಿತಿಗಳು (ಎಫ್‌ಡಿಟಿಎಲ್) ಮತ್ತು ವಿಮಾನ ಸಿಬ್ಬಂದಿಯ ಆಯಾಸ ನಿರ್ವಹಣಾ ವ್ಯವಸ್ಥೆ (ಎಫ್‌ಎಂಎಸ್)ಗೆ ಸಂಬಂಧಿಸಿದ ನಿಯಮಗಳ ಉಲ್ಲಂಘನೆಗಾಗಿ ದಂಡ ವಿಧಿಸಲಾಗಿದೆ ಎಂದು ವಿಮಾನಯಾನ ನಿಯಂತ್ರಕ ಹೇಳಿಕೆಯಲ್ಲಿ ತಿಳಿಸಿದೆ. https://ainlivenews.com/good-news-for-women-you-will-get-3-lakh-rupees-to-start-your-own-business-apply-today/ ಡಿಜಿಸಿಎ ಈ ವರ್ಷದ ಜನವರಿ ತಿಂಗಳಲ್ಲಿ ಏರ್ ಇಂಡಿಯಾ ಲಿಮಿಟೆಡ್‌ನ ಸ್ಪಾಟ್ ಆಡಿಟ್ ಅನ್ನು ನಡೆಸಿತ್ತು. ಡಿಜಿಸಿಎ ಆಡಿಟ್ ಸಮಯದಲ್ಲಿ ಸಾಕ್ಷ್ಯವನ್ನು ಸಂಗ್ರಹಿಸಿತ್ತು. ವಾಯುಯಾನದಲ್ಲಿ ಉನ್ನತ ಮಟ್ಟದ ಸುರಕ್ಷತೆಯನ್ನು ಖಾತ್ರಿಪಡಿಸುವ ಪೂರ್ವಭಾವಿ ಹೆಜ್ಜೆಯಾಗಿ, ಎಫ್‌ಡಿಟಿಎಲ್ ಮತ್ತು ಎಫ್‌ಎಂಎಸ್ ನಿಯಮಗಳಿಗೆ ಸಂಬಂಧಿಸಿದಂತೆ ಆಪರೇಟರ್‌ನ ನಿಯಂತ್ರಕ ಅನುಸರಣೆಯನ್ನು ಪರಿಶೀಲಿಸಿತ್ತು. ನಿಯಮ ಉಲ್ಲಂಘಿಸಿರುವುದು ಸ್ಪಾಟ್‌ ಆಡಿಟ್‌ನಿಂದ ತಿಳಿದುಬಂದಿದೆ. ವರದಿಗಳ ವಿಶ್ಲೇಷಣೆಯು, M/s ಏರ್ ಇಂಡಿಯಾ ಲಿಮಿಟೆಡ್ 60 ವರ್ಷಕ್ಕಿಂತ ಮೇಲ್ಪಟ್ಟ ಎರಡೂ ವಿಮಾನ…

Read More

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಗೆ ಕೆಲ ತಿಂಗಳಿಂದ ಬ್ರೇಕ್‌ ಬಿದ್ದಿದೆ. ಆದರೂ, ಹಲವು ನಗರಗಳಲ್ಲಿ ಬೆಲೆಯಲ್ಲಿ ಏರಿಕೆ, ಇಳಿಕೆ ಕಂಡು ಬರುತ್ತಿದೆ. ಇನ್ನು, ಕಚ್ಚಾ ತೈಲ ದರ ಏರುತ್ತಿರುವುದನ್ನು ಗಮನಿಸಿದರೆ ಮತ್ತೆ ದೇಶದ ಎಲ್ಲ ಕಡೆ ಇಂಧನ ದರ ಮತ್ತಷ್ಟು ದುಬಾರಿಯಾಗುತ್ತದಾ ಎಂಬ ಆತಂಕವೂ ಮೂಡುತ್ತದೆ. ರಾಜ್ಯದಲ್ಲೂ ಸಹ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆಡೆ ಪ್ರತಿದಿನ ಪೆಟ್ರೋಲ್‌ (Petrol rate), ಡೀಸೆಲ್‌ ಬೆಲೆಯಲ್ಲಿ (diesel rate)ವ್ಯತ್ಯಾಸವಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ ನೋಡಿ. ರಾಜಧಾನಿ ದೆಹಲಿಯಲ್ಲಿ, ಒಂದು ಲೀಟರ್ ಪೆಟ್ರೋಲ್ ಬೆಲೆ 94.72 ರೂ. ಮತ್ತು ಡೀಸೆಲ್ ಲೀಟರ್‌ಗೆ 87.62 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 103.94 ರೂ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 90.76 ರೂ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.75 ರೂ. ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.44 ರೂ.…

Read More