Author: AIN Author

ಮಂಡ್ಯ :- ವಿಶ್ವವಿಖ್ಯಾತ, ಐತಿಹಾಸಿಕ ಮೇಲುಕೋಟೆ ಕ್ಷೇತ್ರದ ಚೆಲುವನಾರಾಯಣಸ್ವಾಮಿಯ ವೈರಮುಡಿ ಉತ್ಸವ ಗುರುವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ವಜ್ರಖಚಿತ ವೈರಮುಡಿ ಧರಿಸಿದ್ದ ಚೆಲುವನಾರಾಯಣಸ್ವಾಮಿಯನ್ನು ಕಣ್ತುಂಬಿಕೊಂಡ ಭಕ್ತರು ಗೋವಿಂದ, ಗೋವಿಂದ ಎಂಬ ಜಯಘೋಷಗಳನ್ನು ಮೊಳಗಿಸಿದರು. ಗಂಡ-ಭೇರುಂಡ ಸ್ವರೂಪಿ ಚಂದ್ರಪ್ರಭೆ ಪ್ರಭಾವಳಿಯ ಮಧ್ಯದಲ್ಲಿ ಅಲಂಕಾರ ಸ್ವರೂಪಿಯಾಗಿದ್ದ ಸ್ವಾಮಿಯ ಉತ್ಸವ ದೇವಾಲಯದಿಂದ ಹೊರ ಬರುತ್ತಿದ್ದಂತೆ ಭಕ್ತರು ದರ್ಶನ ಪಡೆದು ಸಂಭ್ರಮಿಸಿದರು. ರಾಮಾನುಜಾಚಾರ್ಯರ ಸನ್ನಿಧಿಯಲ್ಲಿ ಪ್ರಥಮ ಪೂಜೆ ಸಲ್ಲಿಸಿದ ನಂತರ ರಾತ್ರಿ 8 ಗಂಟೆಗೆ ವೈರಮುಡಿ ಉತ್ಸವಕ್ಕೆ ಚಾಲನೆ ನೀಡಲಾಯಿತು. ಉತ್ಸವ ಸಾಗುವ ರಾಜಬೀದಿಯನ್ನು ತಳಿರು-ತೋರಣ, ವಿಶೇಷ ವಿದ್ಯುತ್ ದೀಪಾಲಂಕಾರದಿಂದ ಶೃಂಗರಿಸಲಾಗಿತ್ತು. ಬೀದಿಯ ಎರಡೂ ಬದಿಯಲ್ಲಿ ಭಕ್ತರು ಸಾಲುಗಟ್ಟಿ ನಿಂತಿದ್ದರು. ರಾಜ್ಯ ಮಾತ್ರವಲ್ಲದೇ ಪಕ್ಕದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕೇರಳದಿಂದಲೂ ಸಹಸ್ರಾರು ಭಕ್ತಾದಿಗಳು ಆಗಮಿಸಿದ್ದರು. ಮೇಲುಕೋಟೆಯ ವಸತಿ ಗೃಹಗಳು, ಛತ್ರಗಳು ಭಕ್ತರಿಂದ ಕಿಕ್ಕಿರಿದು ತುಂಬಿದ್ದವು. ಇದಕ್ಕೂ ಮುನ್ನ, ಜಿಲ್ಲಾ ಖಜಾನೆ ಕಚೇರಿಯಲ್ಲಿದ್ದ ವೈರಮುಡಿ ಹಾಗೂ ರಾಜಮುಡಿ ತಿರುವಾಭರಣ ಪೆಟ್ಟಿಗೆಗೆ ಬೆಳಿಗ್ಗೆ ಜಿಲ್ಲಾಧಿಕಾರಿ ಡಾ.…

Read More

ಬೆಂಗಳೂರು:- ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಂಗೇರಿದ್ದು, ಕಾಂಗ್ರೆಸ್‌ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೊಂಡಿದೆ. ಇದರಲ್ಲಿ 17 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಬೆಳಗಾವಿ ಕ್ಷೇತ್ರದಿಂದ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಪುತ್ರ ಮೃಣಾಲ್‌ ಹೆಬ್ಬಾಳ್ಕರ್,‌ ಚಿಕ್ಕೋಡಿಯಿಂದ ಸತೀಶ್‌ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಮತ್ತು ಬೀದರ್‌ನಿಂದ ಈಶ್ವರ್‌ ಖಂಡ್ರೆ ಅವರ ಪುತ್ರ ಸಾಗರ್‌ ಖಂಡ್ರೆ ಅವರಿಗೆ ಟಿಕೆಟ್‌ ನೀಡಲಾಗಿದೆ. ಇದಲ್ಲದೆ ರಾಮಲಿಂಗಾ ರೆಡ್ಡಿ ಅವರ ಪುತ್ರಿ ಸೌಮ್ಯ ರೆಡ್ಡಿ, ಶಿವಾನಂದ ಪಾಟೀಲ್‌ ಪುತ್ರಿ ಸಂಯುಕ್ತಾ ಪಾಟೀಲ್‌, ಎಸ್‌.ಎಸ್‌. ಮಲ್ಲಿಕಾರ್ಜುನ್‌ ಪತ್ನಿ ಪ್ರಭಾ ಮಲ್ಲಿಕಾರ್ಜುನ್‌, ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ಅವರಿಗೆ ಟಿಕೆಟ್‌ ನೀಡಲಾಗಿದೆ. ಮಾರ್ಚ್‌ 8ರಂದು ಬಿಡುಗಡೆಯಾದ ಮೊದಲ ಪಟ್ಟಿಯಲ್ಲಿ ಏಳು ಅಭ್ಯರ್ಥಿಗಳ ಹೆಸರು ಪ್ರಕಟಿಸಿದ್ದ ಕಾಂಗ್ರೆಸ್‌ ಎರಡನೇ ಪಟ್ಟಿಯಲ್ಲಿ 17 ‌ ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದೆ. ಇನ್ನು ನಾಲ್ಕು ಕ್ಷೇತ್ರಗಳ ಟಿಕೆಟ್‌ ಪೆಂಡಿಂಗ್‌ ಇಡಲಾಗಿದೆ. ರಾಜ್ಯದಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಕೇವಲ ಒಂದು ಸ್ಥಾನವನ್ನು ಗಳಿಸಿದ್ದ ಕಾಂಗ್ರೆಸ್‌ ಈ…

Read More

ಬೆಂಗಳೂರು:- ಹೈಕೋರ್ಟ್ ಏಕಸದಸ್ಯ ಪೀಠ ಮಹತ್ವದ ತೀರ್ಪು ನೀಡಿದ್ದು, ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ‌ ಪರಪ್ಪನ ಅಗ್ರಹಾರ ಜೈಲಿಗೆ ವರ್ಗಾಯಿಸಲು 11 ಆರೋಪಿಗಳ ಅರ್ಜಿಯನ್ನು ವಜಾ ಮಾಡಿದೆ. ತಮ್ಮ ಮೇಲೆ‌ ದಾಳಿ ನಡೆಯುವ ಭೀತಿಯಿಂದ‌ ರಿಟ್ ಅರ್ಜಿ ಸಲ್ಲಿಸುವ ಮೂಲಕ ಎಲ್ಲಾ ಆರೋಪಿಗಳನ್ನೂ ಪರಪ್ಪನ‌ ಅಗ್ರಹಾರ ಜೈಲಿಗೆ ವರ್ಗಾಯಿಸಲು ಅಬ್ದುಲ್ ಬಷೀರ್ ಮತ್ತಿತರರು ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಕುಟುಂಬದ ಸದಸ್ಯರು, ವಕೀಲರೊಂದಿಗೆ ಭೇಟಿಗೆ ಸಮಸ್ಯೆಯ ಕಾರಣ ನೀಡಿ ರಿಟ್ ಸಲ್ಲಿಸಲಾಗಿತ್ತು. ಎನ್ಐಎ ಸೂಚನೆ ಮೇರೆಗೆ ಕೊಲೆ‌ ಆರೋಪಿಗಳನ್ನು ವರ್ಗಾಯಿಸಲಾಗಿತ್ತು. ಮೊಹಮ್ಮದ್ ಜಬೀರ್ ತಪ್ಪೊಪ್ಪಿಗೆ ಸಾಕ್ಷಿಯಾಗಲು ಸಿದ್ಧನಿದ್ದ ಹಿನ್ನೆಲೆ ಸುರಕ್ಷತೆ ದೃಷ್ಟಿಯಿಂದ 15 ಆರೋಪಿಗಳನ್ನು ವಿವಿಧ ಜೈಲುಗಳಿಗೆ ಖೈದಿಗಳನ್ನು ವರ್ಗಾಯಿಸಲು ಎನ್ಐಎ ಪತ್ರ ಬರೆದಿತ್ತು. ಆರೋಪಿಗಳನ್ನು ಬೆಂಗಳೂರು ಜೈಲಿಗೆ ವರ್ಗಾಯಿಸಲು ಹೈಕೋರ್ಟ್ ನಕಾರವೆತ್ತಿದೆ. ಜೈಲುಗಳಲ್ಲಿ ಖೈದಿಗಳಿಗೆ ವಿಡಿಯೋ ಕಾನ್ಫರೆನ್ಸ್​ ಸೌಲಭ್ಯ ಒದಗಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ನಿರ್ದೇಶನ ನೀಡಿದೆ. ಕುಟುಂಬದ ಸದಸ್ಯರು, ವಕೀಲರೊಂದಿಗೆ ಕಾನೂನಿಗೆ…

Read More

ಬೆಂಗಳೂರು:- ನಗರದ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ನಮ್ಮ ಮೆಟ್ರೋ ಟ್ರ್ಯಾಕ್ ಮೇಲೆ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ. ನ್ಯಾಷನಲ್ ಲಾ ಕಾಲೇಜ್ ಅಫ್ ಇಂಡಿಯಾ ಯುನಿವರ್ಸಿಟಿ ಹಾಸ್ಟೆಲ್ ಉಸ್ತುವಾರಿ ಚಂದ್ರಾಲೇಔಟ್ ಠಾಣೆಗೆ ದೂರು ನೀಡಿದ್ದು, ಯುಡಿಆರ್ ಪ್ರಕರಣ ದಾಖಲು ಮಾಡಲಾಗಿದೆ. ಕ್ಲಾಸ್ ಮೇಟ್​​ಗೆ ಹೇಳಿ ಹಾಸ್ಟೆಲ್​ನಿಂದ ಹೊರಗೆ ಬಂದಿದ್ದ ಧ್ರುವ್, ಮಾನಸಿಕ ಖಿನ್ನತೆಯಿಂದ ಬಳಲುತ್ತಿರುವ ಶಂಕೆ‌‌ ವ್ಯಕ್ತವಾಗಿದೆ. ಜೊತೆಗೆ ಅದಕ್ಕಾಗಿಯೇ 3 ತಿಂಗಳಿಂದ ಮಾತ್ರೆ ತೆಗೆದುಕೊಳ್ಳುತ್ತಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ. ನಾಳೆ(ಮಾ.22) ಪೋಷಕರಿಂದ ಮಾಹಿತಿ ಪಡೆಯಲು ಪೊಲೀಸರು ಮುಂದಾಗಿದ್ದಾರೆ. ಜೊತೆಗೆ ಘಟನೆ ಕುರಿತು ವಿದ್ಯಾರ್ಥಿಗಳು, ಆತನ ಸ್ನೇಹಿತರ ಬಳಿಯೂ ಮಾಹಿತಿ ಪಡೆಯುತ್ತಿದ್ದಾರೆ.

Read More

ಹಾವೇರಿ:- ಲೋಕಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಹಾವೇರಿ ಗದಗ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಮತದಾನ ನಡೆಯಲಿದೆ. ಹೀಗಾಗಿ ಹಾವೇರಿ ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರು ಭರ್ಜರಿ ಮತಬೇಟೆ ನಡೆಸಿದ್ದಾರೆ. ಕ್ಷೇತ್ರದ ಹಾನಗಲ್ ತಾಲೂಕಿನ ನರೆಗಲ್ ಗ್ರಾಮದಲ್ಲಿ ಮತ ಶಿಕಾರಿ ನಡೆಸಿದ್ದಾರೆ. ಕಳೆದ ಮೂರು ಚುನಾವಣೆಯಲ್ಲಿ ಹಾವೇರಿ ಕ್ಷೇತ್ರದ ಜನತೆ ಬಿಜೆಪಿಗೆ ಮತ ಹಾಕಿದ್ದಾರೆ. ಮತ ಹಾಕಿಸಿಕೊಂಡ ಗೆದ್ದು ಸಂಸದರಾಗಿ ಕ್ಷೇತ್ರದಲ್ಲಿ ಏನೂ ಅಭಿವೃದ್ಧಿ ಮಾಡಿಲ್ಲ. ಇವತ್ತು ಅಭಿವೃದ್ಧಿ ವಿಷಯಗಳ ಮೇಲೆ ನಾನು ಮತ ಕೇಳ್ತೆನಿ. ಹೊಸ ಮುಖಕ್ಕೆ ಅವಕಾಶ ಮಾಡಿಕೊಡಿಕೊಡಬೇಕೆಂದು ಕ್ಷೇತ್ರದ ಜನ ತೀರ್ಮಾನ ಮಾಡಿದ್ದಾರೆ. 2 ಲಕ್ಷ ಮತಗಳ ಅಂತರದಿಂದ ಗೆದ್ದು, ಕ್ಷೇತ್ರದ ಜನರ ಕೆಲಸ ಮಾಡ್ತೇನಿ ಎಂದು ಈ ವೇಳೆ ಆನಂದಸ್ವಾಮಿ ಗಡ್ಡದೇವರಮಠ ಹೇಳಿದ್ದಾರೆ.

Read More

ಹುಬ್ಬಳ್ಳಿ : ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವೆಬ್ ಕಾಸ್ಟಿಂಗ್ ಸಿ.ಸಿ. ಕ್ಯಾಮೆರಾ ಪದ್ಧತಿ ಅಳವಡಿಸುವ ಆತುರದ ನಿರ್ಧಾರ ಕೈಗೊಂಡಿರುವ ಸರ್ಕಾರದ ನೀತಿ ಸರಿಯಲ್ಲ ಎಂದು ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ ರಾಜ್ಯ ಅಧ್ಯಕ್ಷರಾದ ಸಂದೀಪ ಬೂದಿಹಾಳ ವಿರೋಧ ವ್ಯಕ್ತಪಡಿಸಿದ್ದಾರೆ. ಹೊಸದನ್ನು ಅಳವಡಿಸುವುದೆಂದರೆ ಅದು ಶೈಕ್ಷಣಿಕ ವರ್ಷದಲ್ಲಿ ನಿರ್ಣಯ ಕೈಗೊಳ್ಳಬೇಕು,ಇಲ್ಲದಿದ್ದರೆ ವಿದ್ಯಾರ್ಥಿಗಳು ಮತ್ತು ಪಾಲಕರಲ್ಲಿ ಆತಂಕ ಹೆಚ್ಚಿಸುತ್ತದೆ. ಅಲ್ಲದೇ ಶಿಕ್ಷಕರಿಗೂ ವೆಬ್ ಕಾಸ್ಟಿಂಗ್ ಪರಿಕಲ್ಪನೆ ಇಲ್ಲ, ಹೀಗಾಗಿ ತಕ್ಷಣವೇ ಈ ಅಳವಡಿಕೆಯನ್ನು ಕೈ ಬಿಡುವಂತೆ ಮಾಧ್ಯಮಿಕ ಶಿಕ್ಷಕ ಸಂಘ ಆಗ್ರಹಿಸುತ್ತದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ 3 ಮುಖ್ಯ ಪರೀಕ್ಷೆಗಳನ್ನು ಮಾಡುವ ನಿರ್ಧಾರ ಮಕ್ಕಳ ಹಿತ ಕಾಪಾಡುವಂತಾಗಿದ್ದರೆ ಶಿಕ್ಷಕರ ಹಿತ ಕಾಪಾಡುವವರು ಯಾರು? 5, 8, 9 ನೇ ತರಗತಿ ಮಕ್ಕಳ ಪಬ್ಲಿಕ್ ಪರೀಕ್ಷೆಗಳು ಕೋರ್ಟ ಮೆಟ್ಟಿಲೇರಿರುವುದರಿಂದ ಇನ್ನೂ ಸೂಕ್ತವಾದ ಯಾವುದೇ ಆದೇಶ ಬಂದಿಲ್ಲ, ಇದರಿಂದ ಮಕ್ಕಳು ಆತಂಕದ ಸ್ಥಿತಿಯಲ್ಲಿ ಇದ್ದಾರೆ. ಕ್ಷಣಕ್ಕೊಂದು ನಿರ್ಧಾರದಿಂದ ಗೊಂದಲ…

Read More

ಮಂಡ್ಯ :- ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ಪಾನಮತ್ತರಾಗಿ ಅಡ್ಡಾದಿಡ್ಡಿಯಾಗಿ ಚಾಲನೆ ಮಾಡಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ವರದಪುರ ಮೂಲದ ಧನಂಜಯ ಹಾಗೂ ಸಂಗಡಿಗರಿಗೆ ಮದ್ದೂರು ಪಟ್ಟಣದ ಜೆಎಂಎಫ್‌ಸಿ ಪ್ರಧಾನ ಸಿವಿಲ್ ನ್ಯಾಯಾಲಯ ಬರೋಬ್ಬರಿ 69 ಸಾವಿರ ರೂಪಾಯಿ ದಂಡ ವಿಧಿಸಿದೆ. ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದ ಬಳಿ ಭಾನುವಾರ ಸಂಜೆ ಸಂಚಾರಿ ಪೊಲೀಸರು ಹೆದ್ದಾರಿಯಲ್ಲಿ ವಾಹನಗಳ ತಪಾಸಣೆ ಕಾರ್ಯ ನಡೆಸುತ್ತಿದ್ದ ವೇಳೆ ಮೈಸೂರಿನಿಂದ ಬೆಂಗಳೂರು ಕಡೆಗೆ KA-53-MH-2566 ವಾಹನ ಸಂಖ್ಯೆಯ ಎರ್ಟಿಗಾ ಕಾರು ಚಾಲಕ ಪಾನಮತ್ತನಾಗಿ ಅತೀ ವೇಗವಾಗಿ ಮತ್ತು ಅಡ್ಡಾದಿಡ್ಡಿಯಾಗಿ ಚಾಲನೆ ಮಾಡುತ್ತ ಇತರೆ ವಾಹನ ಚಾಲಕರಿಗೆ ಆತಂಕ ಸೃಷ್ಟಿಸುತ್ತಿರುವುದನ್ನು ಗಮನಿಸಿದ ಸಂಚಾರಿ ಪೊಲೀಸರು ವಾಹನ ತಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಚಾಲಕ ಧನಂಜಯ ಹಾಗೂ ಕಾರಿನಲ್ಲಿದ್ದ ಇತರೆ ಐದು ಮಂದಿಯೂ ಸಹ ಪಾನಮತ್ತರಾಗಿ ತಪಾಸಣೆಗೂ ಸಹಕರಿಸದೆ ಸಂಚಾರಿ ಪೊಲೀಸರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ದೂರಿನ ಮೇರೆಗೆ ಮದ್ದೂರು…

Read More

ಗದಗ: ಗದಗ-ಬೆಟಗೇರಿ ಅವಳಿ ನಗರದಲ್ಲಿ ಸಂಚಾರಿ ನಿಯಮಗಳ ಪಾಲನೆಗಾಗಿ ಗದಗ ಜಿಲ್ಲಾ ಪೊಲೀಸ್ ವತಿಯಿಂದ ಥರ್ಡ ಐ ಕೆಮರಾಗಳನ್ನು ಅಳವಡಿಸಿದ್ದಾರೆ. ಆ ಮೂಲಕ ಹೆಲ್ಮೆಟ್ ಧರಿಸದ‌, ಸೀಟ್ ಬೆಲ್ಟ್ ಧರಿಸದ ಜೊತೆಗೆ ಸಂಚಾರಿ ನಿಯಮ ಪಾಲನೆ ಮಾಡದ ವಾಹನ ಸವಾರರ ಮೇಲೆ ನಿಗಾ ವಹಿಸಿ ಅವರಿಗೆ ದಂಡ ಹಾಕೋ ಕಾರ್ಯ ಮಾಡಲಾಗ್ತಿದೆ. ಆದ್ರೆ ಕೆಲ ವಾಹನ ಸವಾರರು ಪೊಲೀಸ್ ಥರ್ಡ ಐ ಕೆಮರಾಗಳಿಗೇನೆ ಚಳ್ಳೇ ಹಣ್ಣು ತಿನಿಸೋಕೆ ಹೊರಟಿದ್ರು. ತಮ್ಮ ವಾಹನಗಳ ನಂಬರ್ ಪ್ಲೇಟ್ ಗಳಿಗೆ ಸ್ಟಿಕರ್ ಹಚ್ಚಿ, ಮಧ್ಯದ ನಂಬರನ್ನ ಕಾಣದಂತೆ ಮಾಡಿ ಜೊತೆಗೆ ಅರ್ಧ ನಂಬರ್ ಪ್ಲೇಟ್ ಮುರಿದುಕೊಂಡು ಕೆಮರಾಗಳಿಗೆ ಕಾಣದಂತೆ ಓಡಾಡಿಕೊಂಡಿದ್ರು. ಇದನ್ನೆಲ್ಲಾ ಗಮನಿಸಿ ಅಂತಹ ವಾಹನ ಸವಾರರಿಗೆ ಬಿಸಿ ಮುಟ್ಟಿಸಲು ಇಂದು ಗದಗ ಜಿಲ್ಲಾ ಪೊಲೀಸ್ರು ಸಜ್ಜಾಗಿದ್ರು ಆಮೂಲಕ ಪ್ರತಿ ಸರ್ಕಲ್ ಗಳಲ್ಲಿ ಸ್ಪೆಶಲ್ ಡ್ರೈವ್ ಮಾಡೋ ಮೂಲಕ ಅಂತಹ ನೂರಾರು ವಾಹನಗಳನ್ನು ಸೀಜ್ ಮಾಡಿದ್ದಾರೆ. ಜೊತೆಗೆ ಅಂತಹ ವಾಹನಗಳನ್ನು ಗದಗ ಪೊಲೀಸ್ ಭವನದ ಆವರಣದಲ್ಲಿ…

Read More

ಹುಬ್ಬಳ್ಳಿ: ನನ್ನ ಸಭಾಪತಿ ಅಧಿಕಾರದ ಅವಧಿಯಲ್ಲಿಯೇ 11 ಜನ ವಿಧಾನ ಪರಿಷತ್ ಸದಸ್ಯರು ತಮ್ಮ ಸ್ಥಾನಕ್ಕೆ ರಾಕಿ ನೀಡಿದ್ದು, ಈಗ ಕರ್ನಾಟಕ ಇತಿಹಾಸದಲ್ಲಿಯೇ ಮತ್ತೊಂದು ದಾಖಲೆಯಾಗಿದೆ. ಅಲ್ಲದೇ ಎರಡು ಮೂರು ದಿನದಲ್ಲಿ ಮತ್ತೊಬ್ಬ ಸದಸ್ಯ ರಾಜೀನಾಮೆ ನೀಡಲಿದ್ದಾರೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ನಗರದಲ್ಲಿಂದು ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅವರು, ಈಗಾಗಲೇ ಎಂಟು ಬಾರಿ ಗೆಲುವು ಸಾಧಿಸಿ ದಾಖಲೆ ಮಾಡಿದ್ದೇ. ಆದರೆ ಈಗ ನಾನು ಸಭಾಪತಿ ಆಗಿರುವಾಗಲೇ ಹನ್ನೊಂದು ಜನ ವಿಧಾನ ಪರಿಷತ್ ಸದಸ್ಯರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದರು. 2018ರಲ್ಲಿ ವಿ.ಎಸ್.ಉಗ್ರಪ್ಪ, 2021ರಲ್ಲಿ ಶ್ರೀನಿವಾಸ ಮಾನೆ, ಸಿ.ಆರ್.ಮನೋಹರ, 2022ರಲ್ಲಿ ಸಿ.ಎಂ.ಇಬ್ರಾಹಿಂ, 2023ರಲ್ಲಿ ಪುಟ್ಟಣ್ಣ, ಬಾಬುರಾವ್ ಚಿಂಚನಸೂರ್, ಆರ್.ಶಂಕರ್, ಸವದಿ ಲಕ್ಷ್ಮಣ, ಆಯನೂರು ಮಂಜುನಾಥ್, 2024ರಲ್ಲಿ ಜಗದೀಶ್ ಶೆಟ್ಟರ್, ಮರಿತಿಬ್ಬೇಗೌಡ ಸೇರಿದಂತೆ ಒಟ್ಟು ಹನ್ನೊಂದು ಜನರು ರಾಜೀನಾಮೆ ನೀಡಿದ್ದಾರೆ. ಇನ್ನೂ ಎರಡು ದಿನಗಳಲ್ಲಿ ಇನ್ನೊಬ್ಬ ಸದಸ್ಯ ರಾಜೀನಾಮೆ ನೀಡಲಿದ್ದಾರೆ. ಎರಡು ವಿಧವಾಗಿ ರಾಜೀನಾಮೆ ನೀಡಬಹುದಾಗಿದೆ. ಅದು ಹೇಗೆ ಇರಲಿ…

Read More

ಹುಬ್ಬಳ್ಳಿ: ನಾನು ಸ್ವಇಚ್ಛೆಯಿಂದ ವೈಯಕ್ತಿಕ ಕಾರಣಕ್ಕೆ ರಾಜಿನಾಮೆ ನೀಡಿದ್ದೆನೆ. ಪಕ್ಷದಲ್ಲಿ ನಿಷ್ಠಾವಂತ ಶಾಸಕನಾಗಿ ಕೆಲಸ ಮಾಡಿದ್ದೆನೆ. ಶಿಕ್ಷಕ ಸಮುದಾಯ ಹಿತವನ್ನು ನಾಲ್ಕು ಬಾರಿ ಆರಿಸಿ ಬಂದು ಕಾಪಾಡಿದ್ದೆನೆ. ಕುಮಾರಸ್ವಾಮಿಯವರು ನಮ್ಮಲ್ಲಿ ಭಿನ್ನಾಭಿಪ್ರಾಯ ತಂದು ನಮ್ಮನ್ನು ಕಡೆಗಣೆ ಮಾಡಿದರು ಎಂದು ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಮರಿತಿಬ್ಬೇಗೌಡ ಹೇಳಿದರು. ರಾಜೀನಾಮೆ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಾನು ಭಿನ್ನಾಭಿಪ್ರಾಯಗಳ ಬಗ್ಗೆ ಪಕ್ಷದ ವರಿಷ್ಠರ ಗಮನಕ್ಕೆ ತಂದೆ ಆದರೆ ಅದು ಅವರಿಗೆ ಇಷ್ಟವಾಗಲಿಲ್ಲ. ಕಳೆದ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಅವರನ್ನು ಅಭ್ಯರ್ಥಿ ಬೇಡ ಮಂಡ್ಯ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡುವಂತೆ ಹೇಳಿದ್ದೆ. ಇದು ನಮ್ಮ ನಾಯಕರಿಗೆ ಇಷ್ಟವಾಗಿಲ್ಲ. ನನ್ನ ಮೇಲೆ ಸಂಶಯಾಸ್ಪದ ದೃಷ್ಟಿಯಿಂದ ಪಕ್ಷದ ವರಿಷ್ಠರು ನೋಡುತ್ತಿದ್ದರು.ಪಕ್ಷದ ಸಂಘಟನೆಗೂ ನನ್ನನ್ನು ಪರಿಣಿಗಿಸಿಲ್ಲ. ನನ್ನ ಕ್ಷೇತ್ರದ ಶಿಕ್ಷಕ ಮತದಾರ ಅಭಿಪ್ರಾಯದಂತೆ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆನೆ ಎಂದರು. ಇನ್ನೂ ಕೆಲವೇ ದಿನಗಳಲ್ಲಿ ನನ್ನ ನಿರ್ಧಾರ ತಿಳಿಸುವೆ. ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಈಗಾಗಲೇ…

Read More