Author: AIN Author

ನೆಲಮಂಗಲ: ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಆ ನಗರದ ಬಹುನೀರಿಕ್ಷಿತ ಹೈಟೆಕ್ ಬಸ್ ನಿಲ್ದಾಣ ನಿರ್ಮಿಸಲಾಗ್ತಿದೆ. ಕಳೆದೆ 4 ವರ್ಷದ ಹಿಂದೆ ಕಾಮಗಾರಿ ಪ್ರಾರಂಭಿಸಿದ್ರು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷದಿಂದಾಗಿ ಆರಂಭಿಕ ಹಂತದಲ್ಲೇ ಕಾಮಗಾರಿ ನೆನೆಗುದಿಗೆ ಬಿದ್ದು, ಆಮೆಗತಿಯ ಕಾಮಗಾರಿಗೆ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಅಷ್ಟಕ್ಕೂ ಆ ಬಸ್ ನಿಲ್ದಾಣಯಾವುದು ಅಂತೀರಾ ಹಾಗಾದರೆ ಈ ಸ್ಟೋರಿ ನೋಡಿ…. 20 ತಿಂಗಳಲ್ಲಿ ಮುಗಿಯಬೇಕಿದ್ದ ಕಾಮಗಾರಿ 4 ವರ್ಷ ವಾದ್ರು ಕೆಲಸ ಪೂರ್ಣವಾಗಿಲ್ಲ.. ಈ ಘಟನೆ ನಡೆದಿರೋದು ಸಿಲಿಕಾನ್ ಸಿಟಿ ಬೆಂಗಳೂರು ನಗರದ ಹೆಬ್ಬಾಗಿಲು ನೆಲಮಂಗಲ ನಗರದ ಸರ್ಕಾರಿ ಬಸ್ ನಿಲ್ದಾಣದ ಕಥೆಯಾಗಿದೆ, ನಾಲ್ಕು ವರ್ಷದ ಹಿಂದೆ ಸುಮಾರು 46 ಕೋಟಿ ರೂ ವೆಚ್ಚದ ಹೈಟೆಕ್ ಬಸ್ ನಿಲ್ದಾಣ ಕಾಮಗಾರಿ ಆರಂಭಿಕ ಹಂತದಲ್ಲೇ ಸ್ಥಗಿತವಾಗಿತ್ತು, ನಂತರದಲ್ಲಿ ‌ಆಮೆಗತಿಯಲ್ಲಿ ಆರಂಭವಾದ ಕೆಲಸ ಬಸ್ ನಿಲ್ದಾಣದಲ್ಲಿ ಕುಳಿತ್ಕೊಳ್ಳಲು ಜಾಗವಿಲ್ಲದೆ ಬಸ್ಸಿಗಾಗಿ ಕಾಯುತ್ತಿರೋ ಪ್ರಯಾಣಿಕರು ಪರದಾಡುವಂತಾಗಿದೆ, ಇತ್ತ ಶೌಚಾಲಯದಲ್ಲಿ ನೀರಿನ ಸಮಸ್ಯೆ ಅರ್ಧಬಂರ್ಧ ಕೆಲಸದಿಂದ ನೆಲಮಂಗಲ ನಗರದಲ್ಲಿ ಪ್ರತಿನಿತ್ಯ ಟ್ರಾಫಿಕ್…

Read More

ಬೆಂಗಳೂರು:- ಬಿಟಿಎಂ ಲೇಔಟ್‌ನ ಗೋದಾಮುವೊಂದರಲ್ಲಿ ಸಂಗ್ರಹಿಸಿದ್ದ 1.84 ಕೋಟಿ ರೂ. ಮೌಲ್ಯದ 1681 ಎಲ್ಇಡಿ ಟಿವಿಗಳನ್ನು ಸೀಜ್ ಮಾಡಿದ್ದಾರೆ. ಜೊತೆಗೆ ಈ ಕುರಿತು ವಿಚಾರಣೆ ನಡೆಸಿರುವ ಪೊಲೀಸರು, ಈ ಟಿವಿಗಳು ಯಾರಿಗೆ ಸೇರಿದ್ದು, ಎನ್ನುವುದರ ಕುರಿತು ತನಿಖೆ ಆರಂಭಿಸಿದ್ದಾರೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಯಾವುದೇ ಅಕ್ರಮ ನಡೆಯದಂತೆ ಅಲರ್ಟ್​ ಆಗಿರುವ ಚುನಾವಣಾ ಸಿಬ್ಬಂದಿ ಹಾಗೂ ಪೊಲೀಸರು ಹೆಚ್ಚಿನ ಕಾರ್ಯಚರಣೆ ಕೈಗೊಂಡಿದ್ದಾರೆ.

Read More

ಬೆಂಗಳೂರು:- ಮಗನಿಗೆ ಟಿಕೆಟ್ ಫೈನಲ್!? ವಿಚಾರವಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಖುಷಿಯಿಂದ ಬೀಗುತ್ತಲೇ ಅವರು ಇನ್ನೂ ಅಧಿಕೃತ ಘೋಷಣೆ ಆಗಿಲ್ಲ, ತಾವೆಲ್ಲ ಕ್ಷೇತ್ರದಲ್ಲಿ ಕೆಲಸ ಮಾಡುವಾಗ ಮೀಟಿಂಗ್ ಗೆ ಬನ್ನಿ ಅಂತ ಕರೆಬಂದ ಕಾರಣ, ಹಿರಿಯರ ಆಶೀರ್ವಾದ ಪಡೆಯೋಣ ಅಂತ ಮಗನನ್ನು ಕರೆದುಕೊಂಡು ನಗರಕ್ಕೆ ಬಂದಿರುವುದಾಗಿ ಹೇಳಿದರು. ಬೆಳಗಾವಿ ಮತ್ತು ಚಿಕ್ಕೋಡಿ ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ವಾತಾವರಣವಿದೆ, ತಮ್ಮ ಸರ್ಕಾರದ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳಿಂದ ಮತ್ತು ತಾನು ಮಾಡುತ್ತಿರುವ ಅಭಿವೃದ್ಧಿ ಕೆಲಸಗಳಿಂದ ಜನ ಬಹಳ ಸಂತೋಷದಲ್ಲಿದ್ದಾರೆ ಎಂದು ಲಕ್ಷ್ಮಿ ಹೇಳಿದರು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಮ್ಮ ಮಗನಿಗೆ ಟಿಕೆಟ್ ಪಡೆಯುವಲ್ಲಿ ಸಫಲರಾಗಿದ್ದರೆ, ಸತೀಶ್ ಜಾರಕಿಹೊಳಿ ತಮ್ಮ ಮಗಳು ಪ್ರಿಯಾಂಕಾಗಾಗಿ ಚಿಕ್ಕೋಡಿ ಕ್ಷೇತ್ರದ ಲಾಬಿ ಮಾಡಿ ಯಶಕಂಡಿದ್ದಾರೆ. ನಿನ್ನೆ ಬಾಗಲಕೋಟೆಯ ವೀಣಾ ಕಾಶಪ್ಪನವರ್ ಟಿಕೆಟ್ ತಪ್ಪಿದ್ದಕ್ಕೆ ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತರು. ಕ್ಷೇತ್ರದ ಟಿಕೆಟ್ ಸಚಿವ ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತ…

Read More

ಶಿವಮೊಗ್ಗ:- ಯಡಿಯೂರಪ್ಪರ ಕುಟುಂಬ ವಾದದ ವಿರುದ್ಧ ಸೆಡ್ಡು ಹೊಡೆದಿದ್ದೇನೆ ಎಂದು ಈಶ್ವರಪ್ಪ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಮಗನಿಗೆ ಟಿಕೆಟ್ ಸಿಕ್ಕಿಲ್ಲ ಅಂತ ಮಾತ್ರ ತಾನು ಅಸಮಾಧಾನಗೊಂಡಿಲ್ಲ, ಯಡಿಯೂರಪ್ಪ ಅವರ ಕುಟುಂಬ ರಾಜಕಾರಣದ ವಿರುದ್ಧ ಮತ್ತು ಹಿಂದೂತ್ವ ಉಳಿಸಲು ಹೋರಾಟ ಮಾಡುತ್ತಿರುವುದಾಗಿ ಹೇಳಿದರು. ರಾಷ್ಟ್ರಮಟ್ಟದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಪರಿವಾರವಾದವನ್ನು ವಿರೋಧಿಸುವ ಹಾಯೆಯೇ ತಾನು ಕರ್ನಾಟಕದಲ್ಲಿ ಯಡಿಯೂರಪ್ಪರ ಕುಟುಂಬ ವಾದದ ವಿರುದ್ಧ ಸೆಡ್ಡು ಹೊಡೆದಿರುವೆ ಎಂದು ಈಶ್ವರಪ್ಪ ಹೇಳಿದರು. ಅವರ ಒಬ್ಬ ಮಗ ಸಂಸದನಾಗಿದ್ದಾರೆ ಮತ್ತೊಬ್ಬ ಶಾಸಕನಾಗಿದ್ದಾರೆ ಮತ್ತು ಅವರು ಕೇಂದ್ರ ಚುನಾವಣಾ ಮಂಡಳಿಯ ಸದಸ್ಯರಾಗಿದ್ದಾರೆ. ಅಷ್ಟಾಗಿಯೂ ಅವರು ವಿಧಾನಸಭಾ ಚುನಾವಣೆಯ ಆರು ತಿಂಗಳ ಬಳಿಕ ದೆಹಲಿಗೆ ಹೋಗಿ ತಮ್ಮ ಮಗನಿಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಕೊಡಿಸಿದರು ಎಂದು ಈಶ್ವರಪ್ಪ ಹೇಳಿದರು. ಹಿಂದೂತ್ವವಾದಿಗಳಾಗಿರುವ ಸಿಟಿ ರವಿ, ಪ್ರತಾಪ್ ಸಿಂಹ, ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಸದಾನಂದಗೌಡರನ್ನು ಯಡಿಯೂರಪ್ಪ ಮೂಲೆಗುಂಪು ಮಾಡಿದರು ಎಂದು ಈಶ್ವರಪ್ಪ ಹೇಳಿದರು. ಸದಾನಂದಗೌಡರು ಹೇಳಿರುವ ಹಾಗೆ ರಾಜ್ಯ…

Read More

ಬೆಂಗಳೂರು:- ಪ್ರತಿಭಟನೆಗೆ ಪ್ರಚೋದನೆ ನೀಡಿದ ಆರೋಪಕ್ಕೆ ಸಂಬಧಪಟ್ಟಂತೆ ಸಚಿವೆ ಶೋಭಾ, ತೇಜಸ್ವಿ ಸೂರ್ಯ ಸೇರಿ 44 ಜನರ ವಿರುದ್ಧ FIR ದಾಖಲಾಗಿದೆ. ನಗರ್ತ​ಪೇಟೆಯಲ್ಲಿ ಪ್ರತಿಭಟನೆಗೆ ಪ್ರಚೋದನೆ ನೀಡಿದ ಆರೋಪ ಹಿನ್ನಲೆ ಸಂಸದರಾದ ಪಿ.ಸಿ.ಮೋಹನ್, ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ ಮತ್ತು ಶಾಸಕ ರಾಮಮೂರ್ತಿ ಸೇರಿ 44 ಜನರ ವಿರುದ್ಧ ಬೆಂಗಳೂರಿನ ಹಲಸೂರು ಗೇಟ್​ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲು ಮಾಡಲಾಗಿದೆ. ಹೈಕೋರ್ಟ್ ಆದೇಶದಂತೆ ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡುವಂತಿಲ್ಲ. ಆದರೂ ಸಹ ಮುಖೇಶ್ ಹಲ್ಲೆ ಸಂಬಂಧ ಪ್ರತಿಭಟನೆ ಮಾಡಲಾಗಿತ್ತು ಎಂದು ಹೇಳಲಾಗಿದೆ.

Read More

ಮಧ್ಯಪ್ರದೇಶ:- ಇಲ್ಲಿನ ಬಂಚದ ಸಮುದಾಯದಲ್ಲಿ ಹೆಣ್ಣು ಮಗು ಹುಟ್ಟಿದರೆ ಸಂಭ್ರಮಾಚರಣೆ ಮಾಡಲಾಗುತ್ತದೆ. ಆದರೆ, ಸಂಭ್ರಮವು ಆದಷ್ಟು ಬೇಗ ಅವರನ್ನು ನರಕಕ್ಕೆ ದೂಡುತ್ತದೆ ಎಂಬುದು ತಡವಾಗಿ ಮನವರಿಕೆಯಾಗುತ್ತದೆ. ಏಕೆಂದರೆ, ಈ ಸಮುದಾಯದಲ್ಲಿ ಬಹುತೇಕ ಮಂದಿ ಲೈಂಗಿಕ ಕಾರ್ಯಕರ್ತೆಯರು. ವೇಶ್ಯಾವಾಟಿಕೆಯೇ ಜೀವನದ ಆಧಾರವಾಗಿರುವ ಬಂಚದ ಸಮುದಾಯದಲ್ಲಿ ಹೆಣ್ಣು ಮಗುವಿನ ಜನನವನ್ನು ಆಚರಿಸಲಾಗುತ್ತದೆ. ಮಧ್ಯಪ್ರದೇಶದ ರಾಟ್ಲಮ್​, ಮಂದಸೂರ್​ ಮತ್ತು ನೀಮುಚ್​ ಜಿಲ್ಲೆಗಳಲ್ಲಿ ಈ ಬಂಚದ ಸಮುದಾಯ ಕಂಡುಬರುತ್ತದೆ. ತಲೆಮಾರುಗಳಿಂದ ವೇಶ್ಯಾವಾಟಿಕೆ ಈ ಸಮುದಾಯದ ಮುಖ್ಯ ಜೀವನೋಪಾಯವಾಗಿದೆ. ಈ ಸ್ಥಳವು ಅಫೀಮು ಕೃಷಿಗೆ ಕುಖ್ಯಾತವಾಗಿದ್ದು, ಇಲ್ಲಿಯ ಗಂಡಸರ ತಮ್ಮ ಜೀವನಕ್ಕಾಗಿ ಹೆಣ್ಣಿನ ಆದಾಯವನ್ನೇ ಅವಲಂಬಿಸಿದ್ದಾರೆ. ವೇಶ್ಯಾವಾಟಿಕೆ ಅಪರಾಧವಾಗಿದ್ದರೂ, ಈ ವೃತ್ತಿಯನ್ನು ಇಲ್ಲಿನ ಸಮುದಾಯವು ಸಂಪೂರ್ಣವಾಗಿ ಬೆಂಬಲಿಸುತ್ತದೆ. ಇಲ್ಲಿ ಲೈಂಗಿಕತೆಗಾಗಿ ಮಾನವ ಕಳ್ಳಸಾಗಣೆ ಕೂಡ ಸಕ್ರಿಯವಾಗಿದೆ. ಸಮುದಾಯದ ಹೆಣ್ಣುಮಕ್ಕಳು ಚಿಕ್ಕ ವಯಸ್ಸಿನಲ್ಲೇ ಮಾರಾಟವಾಗುತ್ತಿರುವ ಬಗ್ಗೆ ವರದಿಗಳಿವೆ. ಮೂರು ಜಿಲ್ಲೆಗಳಲ್ಲಿ 75 ಹಳ್ಳಿಗಳಲ್ಲಿ ಹರಡಿರುವ ಬಂಚದ ಸಮುದಾಯವು ಒಟ್ಟು 23,000 ಜನಸಂಖ್ಯೆಯನ್ನು ಹೊಂದಿದೆ. ಇದರಲ್ಲಿ ಕನಿಷ್ಠ 65 ಪ್ರತಿಶತ ಮಹಿಳೆಯರಿದ್ದಾರೆ.…

Read More

ಬೆಂಗಳೂರು:- ಗೃಹಲಕ್ಷ್ಮೀ, ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಹೊಸ ಆದೇಶ ಹೊರಡಿಸಿದೆ. ಈ ಆದೇಶದ ಪ್ರಕಾರ ಕೆಲವೊಂದು ಕಾರ್ಯವನ್ನು ಈ ಎರಡು ಯೋಜನೆಗಳ ಫಲಾನುಭವಿಗಳು ತಪ್ಪದೇ ಮಾಡಬೇಕಾಗಿದೆ. ಒಂದೊಮ್ಮೆ ಈ ಕೆಲಸ ಮಾಡದೇ ಇದ್ರೆ ನಿಮ್ಮ ಬ್ಯಾಂಕ್‌ ಖಾತೆಗೆ ಹಣ ಜಮೆ ಆಗೋದಿಲ್ಲ. ಕರ್ನಾಟಕ ಸರಕಾರದ ಹೊಸ ಆದೇಶದ ಪ್ರಕಾರ, ನಿಮ್ಮ ಬ್ಯಾಂಕ್‌ ಖಾತೆಗೆ ಎನ್‌ಪಿಸಿಐ ಮ್ಯಾಪಿಂಗ್‌, ಆಧಾರ್‌ ಕಾರ್ಡ್‌ ಲಿಂಕ್‌, ಕೆವೈಸಿ ಮಾಡಿಸುವುದು ಕಡ್ಡಾಯವಾಗಿರುತ್ತದೆ. ಆದರೆ ಈ ಕಾರ್ಯವನ್ನು ನೀವು ಮಾಡಿಸದೇ ಇದ್ರೆ ನಿಮ್ಮ ಬ್ಯಾಂಕ್‌ ಖಾತೆಗೆ ಹಣ ವರ್ಗಾವಣೆ ಆಗೋದಿಲ್ಲ. ಹೀಗಾಗಿ ನೀವು ಖಾತೆ ಹೊಂದಿರುವ ಬ್ಯಾಂಕ್‌ಗೆ ತೆರಳಿ ಒಮ್ಮೆ ಪರಿಶೀಲಿಸಿಕೊಳ್ಳಿ. ಪ್ರತೀ ಭಾರತೀಯರು ಆಧಾರ್‌ ಕಾರ್ಡ್‌ ಹೊಂದುವುದು ಕಡ್ಡಾಯವಾಗಿದೆ. ನೀವು ಆಧಾರ್‌ ಪಡೆದುಕೊಂಡು ಹತ್ತು ವರ್ಷ ಕಳೆದಿದ್ರೆ ಯಾವುದಕ್ಕೂ ಒಮ್ಮೆ ನಿಮ್ಮ ಕಾರ್ಡ್‌ ಅನ್ನು ಅಪ್ಡೇಟ್ಸ್‌ ಮಾಡಿಸಿಕೊಳ್ಳುವುದು ಉತ್ತಮ. ಒಂದೊಮ್ಮೆ ನಿಮ್ಮ ಕಾರ್ಡ್‌ ಅತ್ಯಂತ ಹಳೆಯದಾಗಿದ್ರೆ ನಿಮ್ಮ ಬ್ಯಾಂಕ್‌ ಖಾತೆಗೆ ಗ್ಯಾರಂಟಿ ಯೋಜನೆಯ ಹಣ ನೇರವಾಗಿ…

Read More

ಹುಬ್ಬಳ್ಳಿ: ನಾನು ಸ್ವಇಚ್ಛೆಯಿಂದ ವೈಯಕ್ತಿಕ ಕಾರಣಕ್ಕೆ ರಾಜಿನಾಮೆ ನೀಡಿದ್ದೆನೆ. ಪಕ್ಷದಲ್ಲಿ ನಿಷ್ಠಾವಂತ ಶಾಸಕನಾಗಿ ಕೆಲಸ ಮಾಡಿದ್ದೆನೆ. ಶಿಕ್ಷಕ ಸಮುದಾಯ ಹಿತವನ್ನು ನಾಲ್ಕು ಬಾರಿ ಆರಿಸಿ ಬಂದು ಕಾಪಾಡಿದ್ದೆನೆ. ಕುಮಾರಸ್ವಾಮಿಯವರು ನಮ್ಮಲ್ಲಿ ಭಿನ್ನಾಭಿಪ್ರಾಯ ತಂದು ನಮ್ಮನ್ನು ಕಡೆಗಣೆ ಮಾಡಿದರು ಎಂದು ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಮರಿತಿಬ್ಬೇಗೌಡ ಹೇಳಿದರು. ರಾಜೀನಾಮೆ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಾನು ಭಿನ್ನಾಭಿಪ್ರಾಯಗಳ ಬಗ್ಗೆ ಪಕ್ಷದ ವರಿಷ್ಠರ ಗಮನಕ್ಕೆ ತಂದೆ ಆದರೆ ಅದು ಅವರಿಗೆ ಇಷ್ಟವಾಗಲಿಲ್ಲ. ಕಳೆದ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಅವರನ್ನು ಅಭ್ಯರ್ಥಿ ಬೇಡ ಮಂಡ್ಯ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡುವಂತೆ ಹೇಳಿದ್ದೆ. ಇದು ನಮ್ಮ ನಾಯಕರಿಗೆ ಇಷ್ಟವಾಗಿಲ್ಲ. ನನ್ನ ಮೇಲೆ ಸಂಶಯಾಸ್ಪದ ದೃಷ್ಟಿಯಿಂದ ಪಕ್ಷದ ವರಿಷ್ಠರು ನೋಡುತ್ತಿದ್ದರು.ಪಕ್ಷದ ಸಂಘಟನೆಗೂ ನನ್ನನ್ನು ಪರಿಣಿಗಿಸಿಲ್ಲ. ನನ್ನ ಕ್ಷೇತ್ರದ ಶಿಕ್ಷಕ ಮತದಾರ ಅಭಿಪ್ರಾಯದಂತೆ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆನೆ ಎಂದರು. https://ainlivenews.com/those-with-these-health-problems-should-not-eat-eggplant/ ಇನ್ನೂ ಕೆಲವೇ ದಿನಗಳಲ್ಲಿ ನನ್ನ ನಿರ್ಧಾರ ತಿಳಿಸುವೆ. ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ…

Read More

ಹುಬ್ಬಳ್ಳಿ: ನನ್ನ ಸಭಾಪತಿ ಅಧಿಕಾರದ ಅವಧಿಯಲ್ಲಿಯೇ 11 ಜನ ವಿಧಾನ ಪರಿಷತ್ ಸದಸ್ಯರು ತಮ್ಮ ಸ್ಥಾನಕ್ಕೆ ರಾಕಿ ನೀಡಿದ್ದು, ಈಗ ಕರ್ನಾಟಕ ಇತಿಹಾಸದಲ್ಲಿಯೇ ಮತ್ತೊಂದು ದಾಖಲೆಯಾಗಿದೆ. ಅಲ್ಲದೇ ಎರಡು ಮೂರು ದಿನದಲ್ಲಿ ಮತ್ತೊಬ್ಬ ಸದಸ್ಯ ರಾಜೀನಾಮೆ ನೀಡಲಿದ್ದಾರೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ನಗರದಲ್ಲಿಂದು ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅವರು, ಈಗಾಗಲೇ ಎಂಟು ಬಾರಿ ಗೆಲುವು ಸಾಧಿಸಿ ದಾಖಲೆ ಮಾಡಿದ್ದೇ. ಆದರೆ ಈಗ ನಾನು ಸಭಾಪತಿ ಆಗಿರುವಾಗಲೇ ಹನ್ನೊಂದು ಜನ ವಿಧಾನ ಪರಿಷತ್ ಸದಸ್ಯರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದರು. https://ainlivenews.com/those-with-these-health-problems-should-not-eat-eggplant/ 2018ರಲ್ಲಿ ವಿ.ಎಸ್.ಉಗ್ರಪ್ಪ, 2021ರಲ್ಲಿ ಶ್ರೀನಿವಾಸ ಮಾನೆ, ಸಿ.ಆರ್.ಮನೋಹರ, 2022ರಲ್ಲಿ ಸಿ.ಎಂ.ಇಬ್ರಾಹಿಂ, 2023ರಲ್ಲಿ ಪುಟ್ಟಣ್ಣ, ಬಾಬುರಾವ್ ಚಿಂಚನಸೂರ್, ಆರ್.ಶಂಕರ್, ಸವದಿ ಲಕ್ಷ್ಮಣ, ಆಯನೂರು ಮಂಜುನಾಥ್, 2024ರಲ್ಲಿ ಜಗದೀಶ್ ಶೆಟ್ಟರ್, ಮರಿತಿಬ್ಬೇಗೌಡ ಸೇರಿದಂತೆ ಒಟ್ಟು ಹನ್ನೊಂದು ಜನರು ರಾಜೀನಾಮೆ ನೀಡಿದ್ದಾರೆ. ಇನ್ನೂ ಎರಡು ದಿನಗಳಲ್ಲಿ ಇನ್ನೊಬ್ಬ ಸದಸ್ಯ ರಾಜೀನಾಮೆ ನೀಡಲಿದ್ದಾರೆ. ಎರಡು ವಿಧವಾಗಿ ರಾಜೀನಾಮೆ ನೀಡಬಹುದಾಗಿದೆ. ಅದು ಹೇಗೆ…

Read More

ಚಿಕ್ಕಬಳ್ಳಾಪುರ:  ಚುನಾವಣಾ ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೇ ನಗರದಲ್ಲಿ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಜಿಲ್ಲೆಯ ಬಾಗೇಪಲ್ಲಿ ಚೆಕ್ ಪೋಸ್ಟ್​​ನಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಚಿತ್ರವುಳ್ಳ 96 ಕೈಗಡಿಯಾರ (ವಾಚ್) ಗಳನ್ನು ಚುನಾವಣಾ ಅಧಿಕಾರಿಗಳು ಸೀಜ್ ಮಾಡಿರುವ ಘಟನೆ ನಡೆದಿದೆ. ಸುಮಾರು 1 ಲಕ್ಷ ರೂಪಾಯಿ ಮೌಲ್ಯದ ಕೈಗಡಿಯಾರಗಳು ಇವಾಗಿರಬಹುದೆಂದು ಅಂದಾಜು ಮಾಡಲಾಗಿದೆ. ಆಂಧ್ರ ಗಡಿಯ ಚೆಕ್ ಪೋಸ್ಟ್​​ನಲ್ಲಿ ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ತಪಾಸಣೆ ಮಾಡುತ್ತಿದ್ದಾಗ ಇವುಗಳು ಪತ್ತೆಯಾಗಿದ್ದು, https://ainlivenews.com/those-with-these-health-problems-should-not-eat-eggplant/ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ವಾಚ್​​ಗಳನ್ನು ಅನಂತಪುರದಿಂದ ಬೆಂಗಳೂರಿಗೆ ಕಾರಿನಲ್ಲಿ ಸಾಗಿಸುತ್ತಿದ್ದರು ಎಂಬ ಮಾಹಿತಿ ತಿಳಿದು ಬಂದಿದೆ. ಈ ಸಂಬಂಧ ಅನಂತಪುರದ ವೈಎಸ್​ಆರ್​ ಕಾಂಗ್ರೆಸ್ ಪಕ್ಷದ ಮುಖಂಡ ಬಂಡಿ ನಾಗೇಂದ್ರ ವಿರುದ್ಧ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಪಿ 31 ಹೆಚ್​ಇ 1111 ಸಂಖ್ಯೆಯ ಫಾರ್ಚುನರ್ ಕಾರನ್ನು ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Read More