Author: AIN Author

ಬೆಂಗಳೂರು: ಬಿಜೆಪಿ (BJP) ನೀಡಿದ 1 ಪುಟದ ನೋಟಿಸ್‌ಗೆ ನಾವು 170 ಪುಟಗಳ ಉತ್ತರ ನೀಡಿದ್ದೇವೆ ಎಂದು ರೆಬೆಲ್‌ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್‌ (ST Somashekar) ಹೇಳಿದ್ದಾರೆ. https://youtube.com/shorts/eHWZfKF62Ho?feature=share ಸದಾಶಿವನಗರದಲ್ಲಿರುವ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ನಿವಾಸದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮಗೆ ಬಿಜೆಪಿಯವರು ನೀಡಿದ್ದ ನೋಟಿಸ್‌ಗೆ ದೀರ್ಘ ಉತ್ತರ ನೀಡಿದ್ದೇವೆ. ಯಾವ್ಯಾವ ರಾಜ್ಯದಲ್ಲಿ ಕೋರ್ಟ್ ತೀರ್ಪು ಏನು ಬಂದಿದೆ? ಯಾವ್ಯಾವ ರಾಜ್ಯದಲ್ಲಿ ಬಿಜೆಪಿ ಇಂತಹ ವಿಚಾರದಲ್ಲಿ ಯಾವ ನಿರ್ಧಾರ ಕೈಗೊಂಡಿದೆ? ಎಲ್ಲಾ ದಾಖಲೆ ಸೇರಿಸಿ 170 ಪುಟಗಳ ಉತ್ತರ ಕೊಟ್ಟಿದ್ದೇವೆ ಎಂದು ತಿಳಿಸಿದರು. ಶಿವರಾಂ ಹೆಬ್ಬಾರ್ (Shivaram Hebbar) ಪ್ರತಿಕ್ರಿಯಿಸಿ, ಸೋಮಶೇಖರ್ ಅವರದ್ದು ಅಡ್ಡ ಮತದಾನ. ನನ್ನದು ಮತದಾನಕ್ಕೆ ಗೈರು ನೋಟಿಸ್‌ಗೆ ಬೇರೆ ರೀತಿಯ ಉತ್ತರ ಕೊಟ್ಟಿದ್ದೇನೆ. ನನ್ನದು ಸೋಮಶೇಖರ್ ಉತ್ತರಕ್ಕಿಂತ 2 ಪುಟ ಕಡಿಮೆ ಇರಬಹುದು. ಆದರೆ ಎಲ್ಲಾ ದಾಖಲೆ ಸಹಿತ ಉತ್ತರ ಕೊಟ್ಟಿದ್ದೇನೆ ಎಂದು ಹೇಳಿದರು

Read More

ನವದೆಹಲಿ: ಯೋಗ ಗುರು ಹಾಗೂ ಪತಂಜಲಿ ಸಂಸ್ಥೆಯ ಮುಖ್ಯಸ್ಥರೂ ಆಗಿರುವ ಬಾಬಾ ರಾಮ್‌ದೇವ್ (Baba Ramdev) ಅವರು ಸುಪ್ರೀಂ ಕೋರ್ಟ್ (Supreme Court) ಚಾಟಿ ಬೀಸಿದ ಬಳಿಕ ಬೇಷರತ್ ಕ್ಷಮೆಯಾಚಿಸಿದ್ದಾರೆ. ತಪ್ಪು ಮಾಹಿತಿಯೊಂದಿಗೆ ಜನರ ದಾರಿ ತಪ್ಪಿಸಲಾಗುತ್ತಿದೆ ಎಂದು ಆರೋಪಿಸಿ ಪತಂಜಲಿ (Patanjali) ಸಂಸ್ಥೆ ವಿರುದ್ಧ ಭಾರತೀಯ ವೈದ್ಯಕೀಯ ಸಂಸ್ಥೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ಏಕೆ ಪ್ರಾರಂಭಿಸಬಾರದು? ಎಂದು ಸುಪ್ರೀಂ ಕೋರ್ಟ್ ಅಸಮಾಧಾನ ಹೊರಹಾಕಿದ ಬೆನ್ನಲ್ಲೇ ಸಂಸ್ಥೆಯು ಕ್ಷಮೆಯಾಚಿಸಿದೆ.  ಈ ಹಿಂದಿನ ವಿಚಾರಣೆಯಲ್ಲಿ ನ್ಯಾಯಾಲಯವು ಪತಂಜಲಿ ಆಯುರ್ವೇದ ಔಷಧಿಗಳ ಜಾಹೀರಾತುಗಳಿಗೆ ತಾತ್ಕಾಲಿಕ ನಿಷೇಧವನ್ನು ವಿಧಿಸಿತ್ತು. ಅಲ್ಲದೇ ತಪ್ಪುದಾರಿಗೆಳೆಯುವ ಜಾಹೀರಾತು ನೀಡಿದ್ದಕ್ಕಾಗಿ ಅದರ ಸಂಸ್ಥಾಪಕರಾದ ರಾಮ್‌ದೇವ್ ಮತ್ತು ಬಾಲಕೃಷ್ಣ (Acharya Balkrishna) ಅವರಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿಗೊಳಿಸಿ, https://ainlivenews.com/father-says-not-to-eat-junk-food-daughter-lost-her-life/ 2 ವಾರಗಳ ಅವಧಿಯಲ್ಲಿ ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿತ್ತು. ಕೋರ್ಟ್ ಎಚ್ಚರಿಕೆ ನೀಡಿದ 2 ದಿನಗಳಲ್ಲಿ ಸಂಸ್ಥೆ ಕ್ಷಮೆ ಕೋರಿದೆ.  ಸುಪ್ರೀಂ ಕೋರ್ಟ್ ಖಡಕ್…

Read More

ಬೆಂಗಳೂರು: ಬೆಂಗಳೂರು ಗ್ರಾಮಾಂತರದಲ್ಲಿ ಕುಕ್ಕರ್ ಹಂಚಿಕೆ ವಿಚಾರವಾಗಿ HDK  ಹೇಳಿಕೆಗೆ   ಹಬ್ಬ-ಹರಿದಿನ, ರಂಜಾನ್ ವೇಳೆ ಗಿಫ್ಟ್ ನೀಡುವುದು ನಮ್ಮ ಸಂಪ್ರದಾಯ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಬೆಂಗಳೂರು ಗ್ರಾಮಾಂತರದಲ್ಲಿ ಕುಕ್ಕರ್ ಹಂಚಿಕೆ ವಿಚಾರವಾಗಿ ದೆಹಲಿಯಲ್ಲಿ ಮಾತನಾಡಿದ ಅವರು, ಅವೆಲ್ಲವೂ ಹಳೇ ಫೋಟೋ ಮತ್ತು ವಿಡಿಯೋಗಳನ್ನು ತೋರಿಸಿದ್ದಾರೆ ಎಂದು ತಿಳಿಸಿದರು. DVS PC: ‘ಸಹಿಸಿಕೊಳ್ಳೋರಿಗೆ ತಾಳ್ಮೆಯಿದ್ರೆ, ದುಃಖ ಕೊಟ್ಟವರು ಇದ್ದೂ ಸತ್ತಂತೆ’: DV ಸದಾನಂದಗೌಡ ಹೇಳಿದ್ಯಾಕೆ? ಹಿಂದಿನಿಂದಲೂ ನಾವು ನಮ್ಮ ಕ್ಷೇತ್ರದ ಜನರಿಗೆ ಹಬ್ಬ ಹರಿದಿನದ ಸಂದರ್ಭದಲ್ಲಿ ಗಿಫ್ಟ್ ಕೊಟ್ಟಿದ್ದೇವೆ. ನನ್ನ ಮಗಳ ಮದುವೆಯ ಸಂದರ್ಭದಲ್ಲಿ ಎಲ್ಲರಿಗೂ ಸೀರೆಯನ್ನು ಕೊಟ್ಟಿದ್ದೇವೆ. ಕನಕೋತ್ಸವದ ಸಂದರ್ಭದಲ್ಲಿ ಮನೆಗಳಿಗೆ ಉಡುಗೊರೆ ನೀಡಿದ್ದೇವೆ. ಜೊತೆಗೆ, ರಂಜಾನ್ ಹಬ್ಬದ ಸಂದರ್ಭದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಉಡುಗೊರೆಯನ್ನು ನೀಡಿದ್ದೇವೆ. ಇದು ನಮ್ಮ ಸಂಪ್ರದಾಯ ಎಂದು ಹೇಳಿದರು. ಬಿಜೆಪಿ ಹಾಗೂ ಜೆಡಿಎಸ್ ನಡುವೆ ಅಸಮಾಧಾನ ಇತ್ತು. ಅದನ್ನು ಶಮನಗೊಳಿಸಿದ ನಂತರ ನನ್ನ ಮೇಲೆ ಏನಾದರೂ ಮಾತನಾಡಬೇಕಲ್ಲ. ಹಾಗಾಗಿ, ಈ ವಿಚಾರವನ್ನು…

Read More

ಮ್ಯಾಟ್ನಿ …ಸತೀಶ್ ನಿನಾಸಂ , ರಚಿತಾ ರಾಮ್ ಹಾಗೂ ಅದಿತಿ ಪ್ರಭುದೇವಾ ಅಭಿನಯದ ಸಿನಿಮಾ..ಸತೀಶ್ ಮತ್ತು ರಚಿತಾ ಎರಡನೇ ಬಾರಿ ಜೊತೆಯಾಗಿದ್ದು ಅಯೋಗ್ಯ ನಂತ್ರ ಮತ್ತೆ ಈ ಜೋಡಿ ತೆರೆ ಮೇಲೆ ಒಟ್ಟಿಗೆ ಮಿಂಚಲಿದೆ..ಈಗಾಗಲೇ ಸಾಂಗ್ ಮೂಲಕ ಸದ್ದು ಮಾಡ್ತಿರೋ ಮ್ಯಾಟ್ನಿ ತಂಡ ಈಗ ಮತ್ತೊಂದು ರೋಮ್ಯಾಟಿಕ್ ಹಾಡಿನ ಮೂಲಕ ಪ್ರೇಕ್ಷಕರ ಮುಂದೆ ಬಂದಿದೆ…. ಸದ್ಯ ಬಿಡುಗಡೆಯಾಗಿರೋ ನಿನಗಾಗಿ ಮಿಡಿಯುವುದು ಈ ಹೃದಯ ಅನ್ನೋ ಹಾಡಿನಲ್ಲಿ ಸತೀಶ್ ನಿನಾಸಂ ಹಾಗೂ ಅದಿತಿ ಪ್ರಭುದೇವಾ ಕಾಣಿಸಿಕೊಂಡಿದ್ದಾರೆ ..ಈ ಕಂಪ್ಲೀಟ್ ಹಾಡನ್ನು ಮನಾಲಿಯಲ್ಲಿ ಚಿತ್ರೀಕರಣ ಮಾಡಿದ್ದು ಹಾಡು ಸಖತ್ ಬ್ಯೂಟಿಫುಲ್ ಹಾಗೂ ರೋಮ್ಯಾಂಟಿಕ್ ಆಗಿ ಮೂಡಿ ಬಂದಿದೆ…. ಇನ್ನು ಈ ಹಾಡನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬಿಡುಗಡೆ ಮಾಡುವ ಮೂಲಕ ಮ್ಯಾಟ್ನಿ ಸಿನಿಮಾತಂಡಕ್ಕೆ ಆಲ್ ದ ಬೆಸ್ಟ್ ಹೇಳಿದ್ದಾರೆ …ನಿನಗಾಗಿ ಮಿಡಿಯುವುದು ಹಾಡಿನ ಜೊತೆಗೆ ಮೇಕಿಂಗ್ ಅನ್ನು ಬಿಡುಗಡೆ ಮಾಡಿರೋ ತಂಡ ಮೂರು ದಿನಗಳ ಕಾಲ ಮನಾಲಿ ಚಿತ್ರೀಕರಣ ಹೇಗಿತ್ತು ಅದರ…

Read More

ಬೆಂಗಳೂರು : ಹುಟ್ಟುಹಬ್ಬದ ದಿನ ತರಹೇವಾರಿ ಕೇಕ್​ಗಳನ್ನು ಕತ್ತರಿಸಿ ಸಂಭ್ರಮಿಸುವುದು ಸಾಮಾನ್ಯ. ಈ ಸಂಸ್ಕೃತಿಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ತಿಲಾಂಜಲಿ ಇಟ್ಟಿದ್ದಾರೆ. ಇತ್ತೀಚೆಗೆ ತಮ್ಮ ಹುಟ್ಟುಹಬ್ಬದ ದಿನ ಕೇಕ್ ಕತ್ತರಿಸುವ ಬದಲು ಕಲ್ಲಂಗಡಿ ಹಣ್ಣನ್ನು ಕತ್ತರಿಸುವ ಮೂಲಕ ಹೊಸ ಟ್ರೆಂಡ್ ಸೆಟ್ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಕಾಲತಾಣದಲ್ಲಿ ವೈರಲ್ ಆಗಿದೆ. https://youtube.com/shorts/9wLQD3Kr8fY?feature=share ನಾಗಾರ್ಜುನ್ ದ್ವಾರಕಾನಾಥ್ ಎಂಬುವವರು ತಮ್ಮ ಎಕ್ಸ್​ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ‘ಟ್ರೆಂಡ್ ಸೆಟ್.. ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ ಅವರು ಕಲ್ಲಂಗಡಿ ಕತ್ತರಿಸುವುದರೊಂದಿಗೆ ತಮ್ಮ ಹುಟ್ಟುಹಬ್ಬ ಆಚರಿಸಿದರು. ಆಚರಣೆಗಳು ಮತ್ತು ಆರೋಗ್ಯ ಇದರ ಪ್ರಮುಖ ಆದ್ಯತೆ’ ಎಂದು ಬರೆದುಕೊಂಡಿದ್ದಾರೆ. ಮೇ 30, 2023ರಂದು ಬೆಂಗಳೂರು ನಗರದ ನೂತನ ಪೊಲೀಸ್‌ ಆಯುಕ್ತರಾಗಿ ಬಿ. ದಯಾನಂದ ಅವರನ್ನು ಸರ್ಕಾರ ನೇಮಕ ಮಾಡಲಾಗಿತ್ತು. ಸಿ.ಎಚ್. ಪ್ರತಾಪ್ ರೆಡ್ಡಿ ಅವರನ್ನು ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಬಿ ದಯಾನಂದ್‌ ಅವರು…

Read More

ನವದೆಹಲಿ: ಪರಿಪೂರ್ಣ ಸಸ್ಯಾಹಾರಿಗಳಿಗಾಗಿ ಜೊಮಾಟೊ ಈ ಎರಡು ಸೇವೆ ಆರಂಭಿಸಿತ್ತು. ಪ್ಯೂರ್ ವೆಜ್ ಮೋಡ್​ನಲ್ಲಿ ಬುಕ್ ಮಾಡಲಾಗುವ ಆಹಾರವನ್ನು ವೆಜ್ ಹೋಟೆಲ್​ಗಳಿಂದ ಮಾತ್ರವೇ ಪಿಕಪ್ ಮಾಡಿ, ಗ್ರಾಹಕರಿಗೆ ಡೆಲಿವರಿ ಕೊಡಲಾಗುತ್ತಿತ್ತು. ಆದ್ರೆ ಸೋಷಿಯಲ್ ಮೀಡಿಯಾದಲ್ಲಿ ಇದರ ಬಗ್ಗೆ ಆಕ್ಷೇಪಗಳು ವ್ಯಕ್ತವಾಗಿತ್ತು. ಆದ್ದರಿಂದ ಈ ಸೇವೆಗಳನ್ನು ಹಿಂಪಡೆಯಲು ನಿರ್ಧರಿಸಿರುವುದಾಗಿ ಜೊಮಾಟೋ ಸಿಇಒ ದೀಪಿಂದರ್ ಗೋಯಲ್ ಹೇಳಿದ್ದಾರೆ.  https://ainlivenews.com/father-says-not-to-eat-junk-food-daughter-lost-her-life/ ಈ ಬಗ್ಗೆ ತಮ್ಮ ಎಕ್ಸ್ ಪೋಸ್ಟ್​ನಲ್ಲಿ ಪ್ಯೂರ್ ವೆಜ್ ಮೋಡ್ ಮತ್ತು ಪ್ಯೂರ್ ವೆಜ್ ಫ್ಲೀಟ್ ಸರ್ವಿಸ್ ಆರಂಭಿಸುತ್ತಿರುವುದಾಗಿ ತಿಳಿಸಿದ್ದರು. ಜೊಮಾಟೊದ ಈ ಸೇವೆಯು ಜಾತೀಯತೆಯನ್ನು ಸೃಷ್ಟಿಸುತ್ತದೆ ಎಂಬುದು ಹೆಚ್ಚಿನ ಆಕ್ಷೇಪ. ಹೀಗಾಗಿ, ಜೊಮಾಟೊ ಈ ಎರಡು ಸೇವೆಗಳನ್ನು ಸದ್ಯಕ್ಕೆ ಹಿಂತೆಗೆದುಕೊಂಡಿದೆ. ಏನಿದು ಪ್ಯೂರ್ ವೆಜ್ ಮೋಡ್ ಮತ್ತು ಫ್ಲೀಟ್? ಪರಿಪೂರ್ಣ ಸಸ್ಯಾಹಾರಿಗಳಿಗಾಗಿ ಜೊಮಾಟೊ ಈ ಎರಡು ಸೇವೆ ಆರಂಭಿಸಿತ್ತು. ಪ್ಯೂರ್ ವೆಜ್ ಮೋಡ್​ನಲ್ಲಿ ಬುಕ್ ಮಾಡಲಾಗುವ ಆಹಾರವನ್ನು ವೆಜ್ ಹೋಟೆಲ್​ಗಳಿಂದ ಮಾತ್ರವೇ ಪಿಕಪ್ ಮಾಡಿ, ಗ್ರಾಹಕರಿಗೆ ಡೆಲಿವರಿ ಕೊಡಲಾಗುತ್ತದೆ. ಪ್ಯೂರ್ ವೆಜ್ ಫ್ಲೀಟ್​ನಲ್ಲಿ, ಸಸ್ಯಾಹಾರದ…

Read More

ಬೆಂಗಳೂರು:  ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಹೃದಯ ಸಂಬಂಧಿ ಸಮಸ್ಯೆಗಾಗಿ ಚೆನ್ನೈಗೆ ತೆರಳಿದ್ದರು. ಇಂದು ಬೆಳಗ್ಗೆ ಅವರ ಶಸ್ತ್ರ ಚಿಕಿತ್ಸೆ ನಡೆದಿದ್ದು,  ಹಾರ್ಟ್ ಆಪರೇಷನ್ ಸಕ್ಸಸ್ ಆಗಿದ್ದು, ಯಶಸ್ವಿಯಾಗಿ 3 ನೇ ಬಾರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಲೋಕಸಭೆ ಟಿಕೆಟ್ ತಪ್ಪಿದ್ದರ ಹಿಂದೆ ಕಾಣದ ಕೈ ಯಾರೆಂದು ನನಗೆ ಗೊತ್ತಿದೆ: ಸದಾನಂದಗೌಡ ಕಿಡಿ! ದೇವೇಗೌಡ, ಚನ್ನಮ್ಮ ಅವರ ಆಶೀರ್ವಾದ ಹಾಗೂ ಅಭಿಮಾನಿಗಳ ಪ್ರಾರ್ಥನೆಯಿಂದ ಹೆಚ್ಡಿಕೆ ಆಪರೇಷನ್ ಯಶಸ್ವಿಯಾಗಿದೆ. ಮೂರ್ನಾಲ್ಕು ದಿನಗಳಲ್ಲಿ ಕುಮಾರಣ್ಣ ವಾಪಸ್ ಆಗಲಿದ್ದಾರೆ. ಮಾರ್ಚ್ 25 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಮಾಜಿ ಸಚಿವ ಸಿಎಸ್ ಪುಟ್ಟರಾಜು ತಿಳಿಸಿದ್ದಾರೆ. ಮಾರ್ಚ್​ 19ರಂದು ಹೆಚ್​ಡಿಕೆ ಚೆನ್ನೈ ತೆರಳುತ್ತಿದ್ದರು. ಹೃದಯ ಸಂಬಂಧಿ ಸಮಸ್ಯೆಗೆ ಶಸ್ತ್ರಚಿಕಿತ್ಸೆಗೆ ಒಳಪಡಬೇಕಾಗಿರುವ ಹಿನ್ನೆಲೆಯಲ್ಲಿ ಚೆನ್ನೈಗೆ ಹೋಗಿದ್ದರು. ತಪಾಸನೆ ಬಳಿಕ ಇಂದು ವೈದ್ಯರು ಶಸ್ತ್ರ ಚಿಕಿತ್ಸೆ ನಡೆಸುವಂತೆ ಸೂಚಿಸಿದ್ದರು. ಅದರಂತೆ ಇಂದು ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ.

Read More

ಐಪಿಎಲ್ 2024 ರಲ್ಲಿ ಮತ್ತೆ ಕ್ರಮಕ್ಕೆ ಬರುವ ಮುನ್ನ, ಕೆಎಲ್ ರಾಹುಲ್ ಬುಧವಾರ ಉಜ್ಜಯಿನಿಯ ಶ್ರೀ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಅರುಣೋದಯಕ್ಕೆ ಮುನ್ನ ನಡೆದ ಜೀವನದ ಕ್ಷಣಿಕ ಸ್ವರೂಪ ಮತ್ತು ಸೃಷ್ಟಿ ಮತ್ತು ವಿನಾಶದ ನಿರಂತರ ಚಕ್ರವನ್ನು ಸಂಕೇತಿಸುವ ಭಸ್ಮ ಆರತಿಯಲ್ಲಿ ರಾಹುಲ್ ಅವರ  ತಂದೆ ಡಾ ಕೆ ಎನ್ ಲೋಕೇಶ್ ಮತ್ತು ತಾಯಿ ರಾಜೇಶ್ವರಿ ಅವರು ಸಹ ಇದ್ದರು. IPL 2024: ಮುಂಬೈ ತಂಡದ ನಾಯಕ ಸ್ಥಾನ ಬದಲಾದ ಬಳಿಕ ರೋಹಿತ್‌ -ಹಾರ್ದಿಕ್‌ ಮುಖಾಮುಖಿ: Video Viral ಶ್ರೀ ಮಹಾಕಾಳೇಶ್ವರ ದೇವಸ್ಥಾನವು ಮಹಾಕಾಲ್ ಎಂದು ಶಿವನಿಗೆ ಸಮರ್ಪಿತವಾದ ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಒಂದಾಗಿದೆ. ಶುಕ್ರವಾರದಿಂದ ಪ್ರಾರಂಭವಾಗುವ ಐಪಿಎಲ್ 2024 ರಲ್ಲಿ ಕರ್ನಾಟಕದ ಬ್ಯಾಟರ್ ಲಕ್ನೋ ಸೂಪರ್ ಜೈಂಟ್ಸ್ ಅನ್ನು ಮುನ್ನಡೆಸಲಿದ್ದಾರೆ. ಕ್ವಾಡ್ರೈಸ್ಪ್ ಸ್ನಾಯುರಜ್ಜು ಗಾಯದಿಂದ ಅವರು ಕಳೆದ ಕೆಲವು ವಾರಗಳಿಂದ ಇಂಗ್ಲೆಂಡ್ ವಿರುದ್ಧದ ನಾಲ್ಕು ಟೆಸ್ಟ್‌ಗಳನ್ನು ಕಳೆದುಕೊಂಡಿದ್ದಾರೆ. ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಚೇತರಿಕೆ ಮತ್ತು ಪುನರ್ವಸತಿಗೆ ಒಳಗಾದ ರಾಹುಲ್ ಐಪಿಎಲ್‌ಗೆ…

Read More

ನವದೆಹಲಿ: ಬಹುಜನ ಸಮಾಜ ಪಕ್ಷದಿಂದ (BSP) ಅಮಾನತುಗೊಂಡಿದ್ದ ಸಂಸದ ಡ್ಯಾನಿಶ್ ಅಲಿ ಅವರು ಲೋಕಸಭಾ ಚುನಾವಣೆಗೆ (Lok Sabha Elections 2024) ಮುನ್ನ ಕಾಂಗ್ರೆಸ್ (Congress) ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಕಳೆದ ವಾರ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರನ್ನು ಭೇಟಿ ಮಾಡಿದ್ದರು. ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದ ಫೋಟೋವನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಮುಂಬರುವ ಚುನಾವಣೆಯಲ್ಲಿ ಅಮ್ರೋಹಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಸುಳಿವು ನೀಡಿದ್ದರು. https://ainlivenews.com/do-you-know-jogging-and-yoga-are-enough-to-get-rid-of-depression/ ಪಕ್ಷ ವಿರೋಧಿ ಚಟುವಟಿಕೆಗಳ ಕಾರಣಕ್ಕೆ ಡ್ಯಾನಿಶ್‌ ಅಲಿ (Danish Ali) ಅವರನ್ನು ಕಳೆದ ವರ್ಷ ಬಿಎಸ್‌ಪಿ ಅಮಾನತುಗೊಳಿಸಿತ್ತು. ಅಮ್ರೋಹಾ ಸಂಸದ ಪಕ್ಷದ ಆರೋಪವನ್ನು ನಿರಾಕರಿಸಿದ್ದರು. ಅವರು ಬಿಜೆಪಿ ನೇತೃತ್ವದ ಸರ್ಕಾರದ ‘ಜನವಿರೋಧಿ’ ನೀತಿಗಳ ವಿರುದ್ಧ ಮಾತ್ರ ಧ್ವನಿ ಎತ್ತಿದ್ದೆ ಎಂದು ಪ್ರತಿಪಾದಿಸಿದ್ದರು. ಮಾಯಾವತಿ ಅವರು ನನ್ನನ್ನು ಬಿಎಸ್‌ಪಿ ಸಂಸದೀಯ ಪಕ್ಷದ ನಾಯಕ ಸ್ಥಾನವನ್ನೂ ನೀಡಿದ್ದರು. ನಾನು ಯಾವಾಗಲೂ ಅವರ ಅಪಾರ ಪ್ರೀತಿ ಮತ್ತು ಬೆಂಬಲವನ್ನು ಪಡೆಯುತ್ತಿದ್ದೆ. ಆವರ ಇಂದಿನ ನಿರ್ಧಾರ ದುರದೃಷ್ಟಕರ.…

Read More

ಬೆಂಗಳೂರು: ನಾನು ಪಕ್ಷ ಬಿಡುವುದಿಲ್ಲ. ಬಿಜೆಪಿಯಲ್ಲೇ (BJP) ಇದ್ದು ಶುದ್ದೀಕರಣದ ಕಡೆಗೆ ನಾನು ಗಮನ ನೀಡುತ್ತೇನೆ ಎಂದು ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿವಿ ಸದಾನಂದ ಗೌಡ (DV Sadananda Gowda) ಹೇಳಿದ್ದಾರೆ. ಹಾಗೆ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಟಿಕೆಟ್​ ಕೈತಪ್ಪಿದ ಹಿನ್ನೆಲೆ ಅಸಮಧಾನ ಹೊರಹಾಕಿದ್ದಾರೆ. ಇಂದು ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಎನ್​ಡಿಎಗೆ ಜೆಡಿಎಸ್ ಸೇರ್ಪಡೆ ಆಗಿರುವುದನ್ನು ಸ್ವಾಗತಿಸುತ್ತೇನೆ. ಆದರೆ ಈ ಸಂದರ್ಭದಲ್ಲಿ ಪಕ್ಷಕ್ಕೆ ಜೀವ ತೇಯ್ದವರನ್ನು ಕಡೆಗಣಿಸಬಾರದು ಎಂದು ಹೇಳಿರುವ ಸದಾನಂದಗೌಡ, ನನ್ನ ಎಲ್ಲಾ ಮಾತುಗಳೂ ಕರ್ನಾಟಕ ಬಿಜೆಪಿಗೆ ಸೀಮಿತವಾಗಿದೆ. ನಾನೊಬ್ಬ ಕನ್ನಡಿಗನಾಗಿ ಮಾತಾಡುತ್ತಿದ್ದೇನೆ. ಬಿಜೆಪಿ ಶುದ್ದೀಕರಣ ಮಾಡುವವರೆಗೆ ನಾನು ವಿರಮಿಸುವುದಿಲ್ಲ ಎಂದು ಹೇಳಿದ್ದಾರೆ. ಸ್ಫರ್ಧೆ ಮಾಡಿ ಅಂತಾ ನನ್ನ ಆರತಿ ಮಾಡಿ ಕರೆದುಕೊಂಡು ಬಂದು ಮಂಗಳಾರತಿ ಮಾಡಿ ಹೊರಗೆ ಕಳುಹಿಸಿದ್ದಾರೆ. ಚುನಾವಣೆ ಬಳಿಕ ಶುದ್ದೀಕರಣಕ್ಕೆ ವೇಗ ಕೊಡುತ್ತೇನೆ. ಸಮಾನ ಮನಸ್ಕರ ಸಭೆ ಕರೆಯುತ್ತೇನೆ ಎಂದು ಸದಾನಂದಗೌಡ ಹೇಳಿದ್ದಾರೆ. ಪಕ್ಷ ಶುದ್ಧೀಕರಣ ಒಬ್ಬನಿಂದ ಆಗುವ ಕೆಲಸವಲ್ಲ. ಪಕ್ಷದ…

Read More