Author: AIN Author

ಬೆಂಗಳೂರು: ಮೇಕೆದಾಟು ಯೋಜನೆಯನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಲು ಬಿಡುವುದಿಲ್ಲ ಎಂದು ತಮ್ಮ I.N.D.I. ಮಿತ್ರಪಕ್ಷ ಡಿಎಂಕೆ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿ ಟ್ವೀಟ್‌ ಮಾಡಿದ್ದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. https://x.com/RAshokaBJP/status/1770658618435903797?t=Nn7TUQIoElccyDPnuHJwgQ&s=08 ಡಿಸಿಎಂ ಅವರೇ, ಈಗ ‘ನಮ್ಮ ನೀರು, ನಮ್ಮ ಹಕ್ಕು’ ಎಂದು ತಮ್ಮ ಶಾಸಕರನ್ನು ಚೆನ್ನೈಗೆ ಕರೆದುಕೊಂಡು ಹೋಗಿ ಪ್ರತಿಭಟನೆ ಮಾಡುತ್ತೀರಾ ಅಥವಾರಾಹಲ್‌ ಗಾಂಧಿ  ಅವರನ್ನು ಮೆಚ್ಚಿಸಲು ಕನ್ನಡಿಗರ ಹಿತಾಸಕ್ತಿ ಬಲಿಕೊಟ್ಟು ರಾಜಿ ಮಾಡಿಕೊಳ್ಳುತ್ತೀರಾ? ಎಂದು ಬಿಜೆಪಿ ಪ್ರಶ್ನೆ ಮಾಡಿದೆ. ಬೆಂಗಳೂರಿಗೆ ನೀರು ತರುತ್ತೇವೆ ಎಂದು ಮೇಕೆದಾಟು ಪಾದಯಾತ್ರೆ ಮಾಡಿ ಕನ್ನಡಿಗರ ಮೂಗಿಗೆ ತುಪ್ಪ ಸವರಿ ಅಧಿಕಾರಕ್ಕೇರಿದ ನಾಡದ್ರೋಹಿ ಕಾಂಗ್ರೆಸ್‌  ಸರ್ಕಾರ ಈಗ ಕನ್ನಡಿಗರ ಬೆನ್ನಿಗೆ ಚೂರಿ ಹಾಕುತ್ತಿದೆ ಎಂದು ಬಿಜೆಪಿ ಭಾರೀ ತೀವರವಾಗಿ ಆಕ್ರೋಶ ವ್ಯಕ್ತಪಡಿಸಿದೆ.

Read More

ಶಿವಮೊಗ್ಗ: ಗೀತಾ ಶಿವರಾಜ್ ​ಕುಮಾರ್ ಚುನಾವಣೆಯಲ್ಲಿ ಗೆಲ್ಲುವ ಮೂಲಕ  ನಮ್ಮ ತಂದೆಯ ಸೋಲಿನ ಸೇಡು ತಿರಿಸಿಕೊಳ್ಳಬೇಕಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ‘ಗೀತಕ್ಕ ಅವರನ್ನು ನಾವು ನಿಮ್ಮ ಮಡಿಲಿಗೆ ಹಾಕಿದ್ದೇವೆ. ಶಿವಮೊಗ್ಗ ಜಿಲ್ಲೆಯ ಧ್ವನಿಯಾಗಿ ಗೀತಾ ಕೆಲಸ ಮಾಡುತ್ತಾರೆ ಎಂದು ಗೀತಾ ಶಿವರಾಜ್ ಕುಮಾರ್​ ಪರ ಮತಯಾಚನೆ ಮಾಡಿದರು. ಇನ್ನು ತಂದೆಯ ಭ್ರಷ್ಟಾಚಾರ ಹಣದಿಂದ ರಾಘವೇಂದ್ರ ಎಂಪಿ ಆಗಿದ್ದಾರೆ. ನಮ್ಮ ತಂದೆಯವರು ಯಾವುದೇ ಇಂತಹ ದುಡ್ಡು ಮಾಡಿಲ್ಲ. ಚೋಟಾ ಸಹಿ ಮೂಲಕ ನಾನು ಯಾರನ್ನೂ ಜೈಲಿಗೆ ಕಳಿಸಿಲ್ಲ. ಪರೋಕ್ಷ ವಾಗಿ ಮಕ್ಕಳೇ ಬಿಎಸ್​ವೈ ಅವರನ್ನು ಜೈಲಿಗೆ ಕಳುಹಿಸಿದ್ದು ಎಂದು ಸಚಿವ ಮಧು ಕಿಡಿಕಾರಿದರು. https://ainlivenews.com/do-you-know-jogging-and-yoga-are-enough-to-get-rid-of-depression/  ಗೀತಾ ಶಿವರಾಜ್ ಕುಮಾರ್ ಚುನಾವಣೆಯಲ್ಲಿ ಗೆಲ್ಲಬೇಕು. ಶಿವಮೊಗ್ಗ ಜಿಲ್ಲೆಯ ಧ್ವನಿ ಆಗಿ ಅವರು ಕೆಲಸ ಮಾಡುತ್ತಾರೆ. ಅವರನ್ನು ನಿಮ್ಮ ಮಡಲಿಗೆ ಹಾಕಿದ್ದೇವೆ. ಸಂಸದೆ ಆಗಿ ಗೆದ್ದು ಶಿವಮೊಗ್ಗ ಕ್ಷೇತ್ರದಲ್ಲಿ ಐದು ವರ್ಷ ಸೇವೆ ಸಲ್ಲಿಸುತ್ತಾರೆ. ಮಾಜಿ ಸಿಎಂ ಎಸ್ ಬಂಗಾರಪ್ಪ…

Read More

ಬೆಂಗಳೂರು: ಚಿಕ್ಕಬಳ್ಳಾಪುರ ಸಂಸದ ಬಿ.ಎನ್.ಬಚ್ಚೇಗೌಡ (B.N.Bache Gowda) ಬಿಜೆಪಿ (BJP) ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದು ರಾಜ್ಯಾಧ್ಯಕ್ಷ ವಿಜಯೇಂದ್ರಗೆ (Vijayendra) ರಾಜೀನಾಮೆ ಪತ್ರ ರವಾನಿಸಿದ್ದಾರೆ. ಕಳೆದ ವರ್ಷದ ಆಗಸ್ಟ್‌ನಲ್ಲಿ ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದ ಬಚ್ಚೇಗೌಡ ಈಗ ಅಧಿಕೃತವಾಗಿ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಚುನಾವಣಾ (Election) ರಾಜಕೀಯದಿಂದ ದೂರ ಇರಲು ನಿರ್ಧಾರ ಮಾಡಿದ್ದರೂ ಸಕ್ರಿಯ ರಾಜಕಾರಣದಲ್ಲಿಯೇ ಬಚ್ಚೇಗೌಡ ಇರಲಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಯಾರ ಪರವಾಗಿಯೂ ಕೆಲಸ ಮಾಡದಿರಲು ಬಚ್ಚೇಗೌಡ ನಿರ್ಧರಿಸಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಬಚ್ಚೇಗೌಡ ಕಾಂಗ್ರೆಸ್‌ನ ವೀರಪ್ಪ ಮೊಯ್ಲಿ ಅವರನ್ನು 1,82,110 ಮತಗಳ ಅಂತರದಿಂದ ಸೋಲಿಸಿದ್ದರು. ಬಚ್ಚೇಗೌಡ ಅವರಿಗೆ 7,45,912 ಮತಗಳು ಬಿದ್ದರೆ ಮೊಯ್ಲಿ ಅವರಿಗೆ 5,63,802 ಮತಗಳು ಬಿದ್ದಿದ್ದವು.

Read More

ಬೆಂಗಳೂರು:  ಲೋಕಸಭೆ ಟಿಕೆಟ್ ವಿಚಾರವಾಗಿ ದೆಹಲಿಯಲ್ಲಿ ಬಿಜೆಪಿ ವರಿಷ್ಠರ ಭೇಟಿಯಾಗಿದ್ದ ಸಂಸದೆ ಸುಮಲತಾ ಬರಿಗೈಯಲ್ಲಿ ವಾಪಸ್ಸಾಗಿದ್ದಾರೆ. https://ainlivenews.com/resentment-against-bjp-sadananda-gowda-announced-his-political-decision-today/ ಈ ಬಗ್ಗೆ ಮಾತನಾಡಿದ ಸುಮಲತಾ, ಬೆಂಗಳೂರು ಉತ್ತರ ಅಥವಾ ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸಿ ಎಂದಿದ್ದಾರೆ. ನಾನು ಏನೇ ರಾಜಕೀಯ ಮಾಡಿದ್ರು ಅದು ಮಂಡ್ಯದಿಂದ ಮಾತ್ರ. ಬಿಜೆಪಿ ನಾಯಕರಿಗೆ ಇದನ್ನು ಹೇಳಿ ಬಂದಿದ್ದೇನೆ. ಮಂಡ್ಯ ಲೋಕಸಭಾ ಕ್ಷೇತ್ರ ಬಿಟ್ಟು ಬೇರೆಲ್ಲೂ ಸ್ಪರ್ಧೆ ಮಾಡುವುದಿಲ್ಲ ಅಂತಾ ತಿಳಿಸಿದ್ದಾರೆ.

Read More

ಬೆಂಗಳೂರು: ಬಿಜೆಪಿ ವಿರುದ್ಧ ಮಾಜಿ ಸಿಎಂ ಸದಾನಂದಗೌಡರ ಅಸಮಾಧಾನ ಹಿನ್ನೆಲೆ ಸದಾನಂದಗೌಡರಿಂದ ಇಂದು ತಮ್ಮ‌ ರಾಜಕೀಯ ನಿರ್ಧಾರ ಪ್ರಕಟ https://ainlivenews.com/the-name-of-17-candidates-in-the-second-list-is-final-dks/ ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್‌ ಕೈ ತಪ್ಪಿದ್ದಕ್ಕೆ ರೆಬಲ್‌ ಆಗಿರುವ ಡಿವಿ ಸದಾನಂದಗೌಡ ತಮ್ಮ ಮುಂದಿನ ನಡೆ ಏನು ಎಂಬುದನ್ನು ಘೋಷಿಸಲಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿ ಕರೆದ ಸದಾನಂದಗೌಡ ಬಂಡಾಯ ಸ್ಫರ್ಧೆಯೋ, ಕಾಂಗ್ರೆಸ್ ಸೇರ್ಪಡೆಯೋ ಎಲ್ಲವನ್ನು ತಿಳಿಸಲಿರುವ ಸದಾನಂದಗೌಡ..?

Read More

ಚಿಕ್ಕಬಳ್ಳಾಪುರ: ಅಲೋಕ್ ವಿಶ್ವನಾಥ್​ಗೆ ಟಿಕೆಟ್​ ಕೊಡಲ್ಲ ಅಂದ್ರೆ ನನಗೆ ಟಿಕೆಟ್ ಕೊಡಲಿ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ನಾನು ಸಹ ಅಭ್ಯರ್ಥಿ‌ ಎನ್ನುವ ಮೂಲಕ ಶಾಸಕ ಎಸ್ ಆರ್ ವಿಶ್ವನಾಥ್ ಕೂಡ ಹೊಸಬಾಂಬ್ ಸಿಡಿಸಿದ್ದಾರೆ. ಸುಧಾಕರ್ ವಿರುದ್ದ ಈಗಾಗಲೆ ಜಿಲ್ಲೆಯಲ್ಲಿ ವಿರೋಧಿ ಅಲೆ ಇದೆ. ಅವರಿಗೆ ಕೊಡಬಾರದು ಎಂದು ಸಾಕಷ್ಟು ಜನ ಹೇಳ್ತಿದ್ದಾರೆ. ಅಲೋಕ್ ವಿಶ್ವನಾಥ್ ಆರು ತಿಂಗಳಿಂದಲೇ ತಯಾರಿ ಶುರು ಮಾಡಿದ್ದಾರೆ. ಸುಧಾಕರ್ ನನ್ನ ಬಳಿಯು ಮಾತನಾಡಿ ನನಗೆ ಯಾರು ಗೌರವ ಕೊಡ್ತಿಲ್ಲ. ಯಾರು ಕರೆ ಮಾಡ್ತಿಲ್ಲ, ನಾಲ್ಕು ವರ್ಷ ಸಂಸದನಾಗಿರ್ತೀನಿ ಎಂದು ಹೇಳಿದ್ದಾರೆ. https://ainlivenews.com/a-woman-who-married-her-brother-to-take-advantage-of-the-marriage-plan-what-happened-next/ ಆದರೆ ನನ್ನ ಮಗ ಇನ್ನೂ‌ 25 ವರ್ಷ ರಾಜಕೀಯ ಮಾಡಬೇಕಿದೆ. ಹೀಗಾಗಿ ಅಲೋಕ್​ಗೆ ಟಿಕೆಟ್ ಸಿಗಬೇಕು ಎಂದು ಸರ್ವೆಯಲ್ಲೂ ಮುಖಂಡರು ಹೇಳಿದ್ದಾರೆ. ಅಲೋಕ್​ಗೆ ಟಿಕೆಟ್ ಕೊಡಲ್ಲ ಅಂದ್ರೆ ನನಗೆ ಕೊಡಲಿ ನಾನು ಸ್ವರ್ಧೆ ಮಾಡ್ತೀನಿ. ನಮ್ಮ ಕ್ಷೇತ್ರವನ್ನ ಬೇರೊಬ್ಬರಿಗೆ ಬಿಟ್ಟು ಕೊಡಲು ನಾವು ತಯಾರಿಲ್ಲ. ನಮ್ಮ ಯಲಹಂಕ ಒಂದು ಕ್ಷೇತ್ರದಲ್ಲೇ ಎರಡು ಕ್ಷೇತ್ರಗಳಷ್ಟು ಮತಗಳಿವೆ.…

Read More

ಬೆಂಗಳೂರು:- ರಾಜ್ಯದ 25ಕ್ಕೂ ಜಿಲ್ಲೆಗಳಲ್ಲಿ ಇಂದಿನಿಂದ ಮಾರ್ಚ್​ 25ರವರೆಗೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ,ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ, ಎಚ್​ಎಎಲ್​ನಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕೊಪ್ಪಳದಲ್ಲಿ 39.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ಚಾಮರಾಜನಗರದಲ್ಲಿ 18.4 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ

Read More

ಬೆಂಗಳೂರು:- ಸಾಮಾನ್ಯವಾಗಿ ಯಾವುದೇ ಅಪರಾಧ ಕೃತ್ಯ ಅಥವಾ ಇತರ ಘಟನೆಗಳು ಸಂಭವಿಸಿದಾಗ ಮೊದಲು ಸ್ಥಳಕ್ಕೆ ತಲುಪುವುದು ಹೊಯ್ಸಳ ಸಿಬ್ಬಂದಿ. ಕೃತ್ಯ ನಡೆಯುವ ಸ್ಥಳದಲ್ಲಿ ಆರೋಪಿಗಳ ಕೈಯಲ್ಲಿ ಮಾರಕಸ್ತ್ರಗಳು ಅಥವಾ ಇತರ ಆಯುಧಗಳಿದ್ದರೆ ಅವರನ್ನು ಎದುರಿಸುವುದು ಅಷ್ಟು ಸುಲಭವಲ್ಲ. ಈ ಕಾರಣಕ್ಕೆ ಬಂದೂಕು ಕಡ್ಡಾಯಗೊಳಿಸಲಾಗಿದೆ. ಘಟನಾ ಸ್ಥಳದಲ್ಲಿರುವ ಆರೋಪಿಗಳ ಬಳಿ ಮಾರಕಾಸ್ತ್ರಗಳಿದ್ದಲ್ಲಿ ಅವರು ಪೊಲೀಸರ ಮೇಲೆ ಕೂಡ ದಾಳಿ ನಡೆಸುವ ಸಾಧ್ಯತೆ ಇರುತ್ತದೆ. ಇಂತಹ ಸಂದರ್ಭಗಳಲ್ಲಿ ಅವರನ್ನು ಬಂಧಿಸುವುದು ಪೊಲೀಸರಿಗೆ ಸಾಧ್ಯವಾಗದೆ ಹೋಗಬಹುದು. ಆರೋಪಿಗಳನ್ನು ವಶಕ್ಕೆ ಪಡೆಯಲು ಪೊಲೀಸರ ಬಳಿ ಆಯುಧಯ ಇರಲೇಬೇಕಾಗುತ್ತದೆ. ಈ ಕಾರಣಕ್ಕೆ ಗನ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸುವೆ. ಇತ್ತೀಚೆಗೆ ಕೋಡಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಭರಣ ಅಂಗಡಿಯೊಂದರಲ್ಲಿ ದರೋಡೆ ನಡೆದಿತ್ತು. ಆ ಸಂದರ್ಭ ಹೊಯ್ಸಳ ಪೊಲೀಸರು ಮೊದಲು ಸ್ಥಳಕ್ಕೆ ತಲುಪಿದ್ದರು. ಆರೋಪಿಗಳ ಕೈಯಲ್ಲಿ ಮಾರಕಾಸ್ತ್ರಗಳಿದ್ದವು. ಇಂಥ ಸಂದರ್ಭಗಳಲ್ಲಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಆರೋಪಿಗಳು ಅಟ್ಯಾಕ್ ಮಾಡುವ ಸಾಧ್ಯತೆಯನ್ನು ಅಲ್ಲಗಳೆಯುವ ಹಾಗಿಲ್ಲ. ಈ ಘಟನೆಯು ಪೊಲೀಸ್…

Read More

ಗದಗ:- 2024 ರ ಲೋಕಸಭಾ ಚುನಾವಣೆಗೆ ಕಾರ್ಯಪ್ರವೃತ್ತರಾದ ಚುನಾವಣಾ ಅಧಿಕಾರಿಗಳು, ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೊವನಾಳ ಚೆಕ್ ಪೋಸ್ಟ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 1.50 ಲಕ್ಷ ರೂಪಾಯಿ ವಶಕ್ಕೆ ಪಡೆಯಲಾಗಿದೆ. ಅಲ್ತಾಫ್ ಅಕ್ಕಿಹೊಳೆ ಎನ್ನುವಾತ ಅಕ್ರಮವಾಗಿ ಕಾರಿನಲ್ಲಿ ಸಾಗಿಸುವಾಗ ವಶಕ್ಕೆ ಪಡೆಯಲಾಗಿದೆ. ಲಕ್ಷ್ಮೇಶ್ವರ ಪಟ್ಟಣದಿಂದ ಹಾವೇರಿ ಜಿಲ್ಲೆಯ ಸವಣೂರು ಪಟ್ಟಣಕ್ಕೆ ಹೋಗ್ತಿದ್ದ ಕಾರಿನಲ್ಲಿ ಪತ್ತೆಯಾಗಿದೆ. ಸೂಕ್ತ ದಾಖಲೆಗಳು ಇಲ್ಲದೆ ಸಾಗಿಸುತ್ತಿದ್ದ ಹಣ ಎನ್ನಲಾಗಿದ್ದು, ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Read More

ಮಂಡ್ಯ:- ಇಂದು ಮೇಲುಕೋಟೆಯಲ್ಲಿ ಅದ್ದೂರಿ ವೈರಮುಡಿ ಬ್ರಹ್ಮೋತ್ಸವ ನಡೆಯಲಿದ್ದು, ಮೇಲುಕೋಟೆಯಲ್ಲಿ ವೈರಮುಡಿ ಬ್ರಹ್ಮೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಮಂಡ್ಯ ಜಿಲ್ಲೆಯ ಶ್ರೀ ಕ್ಷೇತ್ರ ಮೇಲುಕೋಟೆಯಲ್ಲಿ ಅದ್ದೂರಿ ವೈರಮುಡಿ ಬ್ರಹ್ಮೋತ್ಸವ ನಡೆಯಲಿದ್ದು, ಇಂದು ರಾತ್ರಿ 8 ಗಂಟೆಗೆ ಬ್ರಹ್ಮೋತ್ಸವಕ್ಕೆ ಚಾಲನೆ ದೊರೆಯಲಿದೆ. ಜಿಲ್ಲಾಡಳಿತ ವತಿಯಿಂದ ವೈರಮುಡಿ ಉತ್ಸವ‌ ನಡೆಯಲಿದೆ. ಶ್ರೀದೇವಿ, ಭೂದೇವಿಯರ ಜೊತೆಗೆ ರತ್ನ ಖಚಿತ ವೈರಮುಡಿ ಕಿರೀಟ ಧರಿಸಿ ಭಕ್ತರಿಗೆ ಗರುಢಾರೂಢನಾದ ಚಲುವನಾರಾಯಣಸ್ವಾಮಿ ದರ್ಶನ ನೀಡಲಿದೆ. ಸಾಕ್ಷಾತ್ ಭಗವಂತನೆ ಧರೆಗಿಳಿದು ವೈರಮುಡಿ ಕಿರೀಟ ಧರಿಸಿ ಭಕ್ತರಿಗೆ ದರ್ಶನ ನೀಡುತ್ತಾನೆ. ಚಲುವನಾರಾಯಣಸ್ವಾಮಿಯನ್ನ ಕಣ್ತುಂಬಿಕೊಳ್ಳಲು ಹೊರ ರಾಜ್ಯದಿಂದಲ್ಲೂ ಭಕ್ತರು‌ ಬರಲಿದ್ದಾರೆ. ಮೊದಲ ಭಾರಿ ವೈರಮುಡಿ ಬ್ರಹ್ಮೋತ್ಸವದಲ್ಲಿ‌ ಶಾಸಕ ದರ್ಶನ್ ‌ಪುಟ್ಟಣ್ಣಯ್ಯ ಭಾಗಿಯಾಗಲಿದ್ದಾರೆ. ಇನ್ನೂ ಶಾಸಕ‌ ದರ್ಶನ್ ಪುಟ್ಟಣ್ಣಯ್ಯ ಆಯೋಜಿಸಿದ ದೀಪಾಲಂಕ ಎಲ್ಲರ ಗಮನ ಸೆಳೆದಿದೆ. 50 ಲಕ್ಷ ವೆಚ್ಚದಲ್ಲಿ ಮೇಲುಕೋಟೆಯಲ್ಲಿ ವಿದ್ಯುತ್ ದೀಪಾಲಂಕರ ಆಯೋಜನೆ ಮಾಡಲಾಗಿದ್ದು, ಮೊದಲ ಬಾರಿಗೆ ಮೇಲುಕೋಟೆ ಬ್ರಹ್ಮೋತ್ಸವ ಆಚರಣೆಯ ಅವಕಾಶ ಸಿಕ್ಕಿದೆ. ಮಳೆ ಬೆಳೆ ಯಾಗಿ ನಾಡಿನ ಜನತೆಗೆ ಒಳ್ಳೆಯದಾಗಲಿ. ಹೆಚ್ಚಿನ…

Read More