Author: AIN Author

ಬೆಂಗಳೂರು: ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಆರ್ ಸಿಬಿ ಅನ್ ಬಾಕ್ಸ್ ಈವೆಂಟ್ ನಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಕೂಡಾ ಭಾಗಿಯಾಗಿದ್ದರು. ಈ ವೇಳೆ ಅವರ ಜೊತೆ ವಿರಾಟ್ ಕೊಹ್ಲಿ ನಡೆದುಕೊಂಡ ರೀತಿ ಎಲ್ಲರಿಗೂ ಮೆಚ್ಚುಗೆಯಾಗಿದೆ.‌ https://youtube.com/shorts/A-KQTi3qbwg?feature=share ಅಶ್ವಿನಿ ಪುನೀತ್ ರಾಜ್ ಕುಮಾರ್ ಕೂಡಾ ಆರ್ ಸಿಬಿ ಗೌನ್ ನಲ್ಲಿಯೇ ಮೈದಾನಕ್ಕೆ ಬಂದಿದ್ದರು. ಈ ವೇಳೆ ಅವರನ್ನು ವಿರಾಟ್ ಕೊಹ್ಲಿ ಪರಿಚಯ ಮಾಡಿಕೊಡಲಾಯಿತು. ವಿರಾಟ್ ಕೂಡಾ ತುಂಬಾ ವಿನಯವಂತಿಕೆಯಿಂದ ಅವರ ಬಗ್ಗೆ ಕೇಳಿ ತಿಳಿದುಕೊಂಡಿದ್ದಾರೆ. ಇಬ್ಬರೂ ಉಭಯ ಕುಶಲೋಪರಿ ಮಾಡಿಕೊಂಡಿದ್ದಾರೆ. https://youtube.com/shorts/UFNz5KinU_c?feature=shareಇದು ಇಷ್ಟಕ್ಕೇ ನಿಲ್ಲಲಿಲ್ಲ. ವೇದಿಕೆ ಕಾರ್ಯಕ್ರಮದಲ್ಲಿ ಆರ್ ಸಿಬಿ ಹೊಸ ಜೆರ್ಸಿ ಅನಾವರಣ ಮಾಡಲಾಯಿತು. ಈ ವೇಳೆ ಅಶ್ವಿನಿಯವರನ್ನು ವೇದಿಕೆಗೆ ಕರೆದು ಹೊಸ ಜೆರ್ಸಿ ನೀಡಿ ಗೌರವಿಸಲಾಯಿತು. ಆರ್ ಸಿಬಿ ಮಹಿಳಾ ತಂಡದ ನಾಯಕಿ ಸ್ಮೃತಿ ಮಂಧಾನ ಅಶ್ವಿನಿಗೆ ಜೆರ್ಸಿ ನೀಡಿದರು.ಈ ವೇಳೆ ವೇದಿಕೆಯಲ್ಲಿ ವಿರಾಟ್ ಕೊಹ್ಲಿ ಕೂಡಾ ಇದ್ದರು. ವಿರಾಟ್ ಚಪ್ಪಾಳೆ ತಟ್ಟುವ ಮೂಲಕ ವಿಶೇಷವಾಗಿ ಅಶ್ವಿನಿ…

Read More

ಧಾರವಾಡ: ಗೃಹ ಬಳಕೆ ಸಿಲಿಂಡರ್ ಸ್ಪೋಟಗೊಂಡು ಮಹಿಳೆಯೋರ್ವಳು ಸಾವನಪ್ಪಿ ನಾಲ್ವರಿಗೆ ಗಂಭಿರವಾಗಿ ಗಾಯಗೊಂಡ ಘಟನೆ ಧಾರವಾಡ ತಾಲೂಕಿನ ಕಲ್ಲೆ ಗ್ರಾಮದಲ್ಲಿ ನಡೆದಿದ್ದು, ಬಾರಿ‌ದೊಡ್ಡ ದುರಂತವೊನಂದು ತಪ್ಪಿದಂತಾಗಿದೆ.‌ ಧಾರವಾಡ ತಾಲೂಕಿನ ಕಲ್ಲೆ ಗ್ರಾಮದಲ್ಲಿ‌ ದುರ್ಘಟನೆ ನಡೆದಿದ್ದು, ಮಹಾದೇವಿ ವಗೆಣ್ಣವರ (30) ಎಂಬ ಮಹಿಳೆಯೇ ಈ ಘಟನೆಯಲ್ಲಿ ಸಾವನ್ನಪ್ಪಿದ ದುರ್ದೈವಿಯಾಗಿದ್ದಾರೆ. ಉಳಿದಂತೆ ಸುರೇಶ ವಗೆಣ್ಣವರ, ಶ್ರೀಧರ ವಗೆಣ್ಣವರ, ಚಿನ್ನಪ್ಪ ವಗೆಣ್ಣವರ ಹಾಗೂ ಗಂಗವ್ವ ವಗೆಣ್ಣವರ ಎಂಬುವರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಿಗ್ಗೆ ಗ್ಯಾಸ್ ಲಿಕೇಜ್ ಆಗಿತ್ತು. ಏಕಾಏಕಿ ಸ್ಪಾರ್ಕ್ ಆಗಿ ಸಿಲಿಂಡ‌ರ್ ಸ್ಫೋಟಗೊಂಡಿದೆ. ಇದರಿಂದ ಮನೆ ತುಂಬ ಬೆಂಕಿ ಆವರಿಸಿ ಅನಾಹುತ ಸಂಭವಿಸಿದೆ. ಅಡುಗೆ ಮನೆಯಲ್ಲೇ ಇದ್ದ ಮಹಾದೇವಿ ಹೊರಗಡೆ ಬರಲಾಗದೇ ಅಲ್ಲೇ ಸಿಲುಕಿ ಸಾವನ್ನಪ್ಪಿದ್ದಾಳೆ. ಇದರಿಂದ ಮಹಾದೇವಿ ದೇಹ ಸಂಪೂರ್ಣ ಬೆಂದು ಹೋಗಿದೆ. ಬಾಕಿ ಉಳಿದವರು, ಹಾಗೋ ಹೀಗೋ ಮಾಡಿ ಹೊರ ಬಂದಿದ್ದಾರೆ. ಅವರಿಗೂ ಗಾಯಗಳಾಗಿವೆ. ಅಕ್ಕಪಕ್ಕವೇ ಎರಡೂರು ಸಿಲಿಂಡರ್ ಇದ್ದವು. ಆದರೆ ಅವುಗಳಿಂದ ಬೆಂಕಿ ಸ್ಫೋಟಗೊಂಡಿಲ್ಲ. ಇದರಿಂದ…

Read More

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರು ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಗಾಗಿ  ಚೆನ್ನೈಗೆ ತೆರಳಿದ್ದು ಅವರ ಉತ್ತಮ ಆರೋಗ್ಯಕ್ಕಾಗಿ ವಿಶೇಷಪೂಜೆ ನೆರವೇರಿಸಿದ ಕರ್ನಾಟಕ ವಿಧಾನ ಪರಿಷತ್ ಶಾಸಕ ಟಿ. ಎ. ಶರವಣ. ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಹೆಚ್ ಡಿ ಕುಮಾರಸ್ವಾಮಿ ಯವರಿಗೆ ಮಾರ್ಚ್ 21ರಂದು 3 ನೇ ಬಾರಿಗೆ ಶಸ್ತ್ರಚಿಕಿತ್ಸೆ ನಡೆಯುತ್ತಿರುವ ಹಿನ್ನೆಲೆಯಲ್ಲಿ , ಇಂದು ಬಸವನಗುಡಿಯ ದೊಡ್ಡ ಗಣೇಶ ದೇವಾಲಯದಲ್ಲಿ ಬೆಣ್ಣೆ ಅಲಂಕಾರ, ವಿಶೇಷ ಪೂಜೆಯನ್ನು ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಟಿಎ ಶರವಣ ಅವರು ಏರ್ಪಡಿಸಿದರು. ಈ ವೇಳೆ 108 ತೆಂಗಿನಕಾಯಿಯನ್ನು ಒಡೆದು. ಭಕ್ತಾದಿಗಳಿಗೆ ಪ್ರಸಾದವನ್ನು ವಿನಿಮಯ ಮಾಡಲಾಯಿತು. ಈ ಪೂಜಾ ಕಾರ್ಯಕ್ರಮದಲ್ಲಿ ಅನೇಕ ಸಂಖ್ಯೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಭಾಗಿಯಾಗಿ ಕುಮಾರಸ್ವಾಮಿಯವರ ಶೀಘ್ರ ಚೇತರಿಕೆ ಹಾಗೂ ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು

Read More

ನವದೆಹಲಿ: ಮೂರನೇ ಪಟ್ಟಿ ಬಿಡುಗಡೆ ಬಳಿಕ ರಾಜ್ಯದ್ಯಾಂತ ಪ್ರವಾಸ ಆರಂಭಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಅಂತಿಮವಾಗಿ ಚರ್ಚಿಸಿ ಮಾರ್ಚ್​ 22 ರಂದು ಪಟ್ಟಿ ಘೋಷಣೆಯಾಗುತ್ತದೆ. ಅಮಿತ್ ಶಾ, ಜೆ.ಪಿ ನಡ್ಡಾ ಅವರ ಜೊತೆ ಐದು ಕ್ಷೇತ್ರಗಳ ಬಗ್ಗೆ ಚರ್ಚಿಸಿದ್ದೇವೆ. ಈ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. https://ainlivenews.com/good-news-for-tourists-direct-flight-from-bangalore-to-lakshadweep/ ಮೂರನೇ ಪಟ್ಟಿ ಬಿಡುಗಡೆ ಬಳಿಕ ರಾಜ್ಯದ್ಯಾಂತ ಪ್ರವಾಸ ಆರಂಭಿಸುತ್ತೇವೆ ಎಂದರು.  ಇನ್ನೂ ಜೆ.ಸಿ. ಮಾಧುಸ್ವಾಮಿ ಸಹಕಾರದಿಂದ ನಾವು ಚುನಾವಣೆ ಗೆಲ್ಲಬೇಕಿದೆ. ಕರಡಿ ಸಂಗಣ್ಣ ಜೊತೆಗೆ ಮಾತನಾ ಡಿದ್ದೇನೆ. ಅವರು ನಿಷ್ಠಾವಂತ ಮುಖಂಡರು. ಅವರು ಬೇರೆ ಯಾವ ನಿರ್ಧಾರ ತೆಗೆದುಕೊಳ್ಳ ಬಾರದು. ಮುಂದೆ ಅವರಿಗೆ ಸೂಕ್ತ ಸ್ಥಾನ ಮಾನ ನೀಡಲಾಗವುದು. ಅಸಮಾಧಾನ ಗೊಂಡವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇವೆ. ಪ್ರಧಾನಿ ಮೋದಿ, ಅಮಿತ್ ಶಾ ನೇತೃತ್ವದಲ್ಲಿ ಕ್ರಾಂತಿಕಾರಿ ಬದಲಾವಣೆ ಆಗಬೇಕು ಎಂದರು.

Read More

ಆಧುನಿಕ ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿ ಜೊತೆಗೆ ನನ್ನನ್ನು ಹೋಲಿಸುವುದು ಸರಿಯಾದ ಕ್ರಮವಲ್ಲ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡದ ನಾಯಕಿ ಸ್ಮೃತಿ ಮಂಧಾನಾ ಹೇಳಿದ್ದಾರೆ. ʼಇದು ಆರ್‌ಸಿಬಿಯ ಹೊಸ ಅಧ್ಯಾಯʼ: ಕನ್ನಡದಲ್ಲಿಯೇ ಮಾತನಾಡಿದ ವಿರಾಟ್‌ ಕೊಹ್ಲಿ! Video Viral ಭಾನುವಾರ  ದಿಲ್ಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮ್ಯಾಗ್ ಲ್ಯಾನಿಂಗ್ ಸಾರಥ್ಯದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಬ್ಯಾಟ್ ಹಾಗೂ ಬೌಲಿಂಗ್ ವಿಭಾಗದಲ್ಲಿ ಸಂಘಟಿತ ಹೋರಾಟ ನಡೆಸಿದ್ದ ಸ್ಮೃತಿ ಮಂಧಾನಾ ಸಾರಥ್ಯದ ಆರ್‌ಸಿಬಿ 8 ವಿಕೆಟ್ ಗೆಲುವು ಸಾಧಿಸಿದೆ. ಇದರ ನಡುವೆ ಹದಿನೇಳನೇ ಆವೃತ್ತಿಯಲ್ಲಿ ವಿರಾಟ್ ಕೊಹ್ಲಿ ಆರ್‌ಸಿಬಿಗೆ ಐಪಿಎಲ್ ಟ್ರೋಫಿ ಗೆದ್ದುಕೊಡುತ್ತಾರೆ ಎಂದು ಅಭಿಮಾನಿಗಳು ಭರವಸೆ ವ್ಯಕ್ತಪಡಿಸಿದ್ದಾರೆ. ಕ್ರಿಕೆಟ್ ವತ್ತಿ ಜೀವನದಲ್ಲಿ ಎತ್ತರಕ್ಕೆ ತಲುಪಲು ವಿರಾಟ್ ಕೊಹ್ಲಿ ಅವರೇ ಸ್ಫೂರ್ತಿ. ಅಲ್ಲದೆ 16 ವರ್ಷಗಳ ವೃತ್ತಿ ಜೀವನದಲ್ಲಿ ವಿರಾಟ್ ಕೊಹ್ಲಿ ತಮ್ಮ ಪ್ರದರ್ಶನದಿಂದ ಬಲು ಎತ್ತರಕ್ಕೆ ತಲುಪಿದ್ದಾರೆ ಎಂದು ಆರ್‌ಸಿಬಿ ನಾಯಕಿ ಹೇಳಿದ್ದಾರೆ.

Read More

ಬೆಂಗಳೂರು: ಕೌಟುಂಬಿಕ ಕಲಹಕ್ಕೆ ಬೇಸತ್ತು ಎರಡು ವರ್ಷದ ಮಗುವನ್ನು ಕೊಂದು, ತಾಯಿ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೆಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸಿಗೇಹಳ್ಳಿಯಲ್ಲಿ ನಡೆದಿದೆ. ಶೃತಿಕಾಳ ಮೃತ ಮಗು. ಚಿನ್ನಾ ಆತ್ಮಹತ್ಯೆಗೆ ಯತ್ನಿಸಿದ ತಾಯಿ. ಆಂಧ್ರಪ್ರದೇಶದ ಚಿತ್ತೂರು ಮೂಲದ ಚಿನ್ನಾ ಮತ್ತು ಲಕ್ಷ್ಮೀ ನಾರಾಯಣ ದಂಪತಿ, ಮೂರು ತಿಂಗಳ ಹಿಂದೆ ಸೀಗೆಹಳ್ಳಿಗೆ ಬಂದು ವಾಸವಿದ್ದರು. Sucide Case: ಬೆಂಗಳೂರಲ್ಲಿ ಒಂದೇ ಕುಟುಂಬದ ಮೂವರ ಸಾವಿಗೆ ಬಿಗ್‌ ಟ್ವಿಸ್ಟ್:‌ ಕೇಳಿದ್ರೆ ಶಾಕ್‌ ಆಗ್ತೀರಾ? ಪತಿ ಲಕ್ಷ್ಮೀನಾರಾಯಣ ಪತ್ನಿ ಚಿನ್ನಾಗೆ  ಪ್ರತಿದಿನ ಹಿಂಸೆ ನೀಡುತ್ತಿದ್ದನು. ಪತಿ ಲಕ್ಷ್ಮೀನಾರಾಯಣನ ಕಾಟಕ್ಕೆ ಚಿನ್ನಾ ಬೇಸತ್ತಿದ್ದಳು. ಮಾರ್ಚ್ 16 ರ ರಾತ್ರಿ ಲಕ್ಷ್ಮೀನಾರಾಯಣ ಪತ್ನಿ ಜೊತೆ ಜಗಳವಾಡಿದ್ದಾನೆ. ಇದರಿಂದ ಮನನೊಂದು ಚಿನ್ನಾ ಮರುದಿನ ಮಾರ್ಚ್ 17 ರ ಬೆಳಿಗ್ಗೆ ಮಗು ಶೃತಿಕಾಳ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ಬಳಿಕ ತಾನೂ ಚೂರಿಯಿಂದ ಕತ್ತು ಸೀಳಿಕೊಂಡು ಆತ್ಮಹತ್ಯಗೆ ಯತ್ನಿಸಿದ್ದಾರೆ. ಇನ್ನು ಈ ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯರು ಮನೆಯೊಳಗೆ ನುಗ್ಗಿ,…

Read More

ನೆಲಮಂಗಲ: ಪ್ರೀತಿ ವಿಚಾರವಾಗಿ ಮನನೊಂದ ನರ್ಸಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಅರಿಶಿನಕುಂಟೆಯಲ್ಲಿ ನಡೆದಿದೆ. Sucide Case: ಬೆಂಗಳೂರಲ್ಲಿ ಒಂದೇ ಕುಟುಂಬದ ಮೂವರ ಸಾವಿಗೆ ಬಿಗ್‌ ಟ್ವಿಸ್ಟ್:‌ ಕೇಳಿದ್ರೆ ಶಾಕ್‌ ಆಗ್ತೀರಾ? ಬಿಹಾರ ಮೂಲದ ಸೋನುಕುಮಾರ್ (19) ಮೃತ ದುರ್ದೈವಿ. ಮನೆಯ ಕೋಣೆಯಲ್ಲಿನ ಪ್ಯಾನ್​ಗೆ ನೇಣುಬಿಗಿದುಕೊಂಡು ಸೋನುಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸನ್ ಪ್ಲವರ್ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಸೋನುಕುಮಾರ್ ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸಾರ್ವಜನಿಕ ಅಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ. ನೆಲಮಂಗಲ ಟೌನ್ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮೈಸೂರು: ಎಲೆಕ್ಟ್ರಿಕ್ ಸ್ಕೂಟರ್ ನಿಂದ ಹೊತ್ತಿಕೊಂಡ ಬೆಂಕಿಯಿಂದ ಇಡೀ ಮನೆ ಹಾಗೂ ಕಾರು ಸುಟ್ಟು  ಭಸ್ಮವಾಗಿರುವ ಘಟನೆ ಕುಂಬಾರಕೊಪ್ಪಲಿನ ಸ್ಮಶಾನ ರಸ್ತೆಯ ಬಳಿ ನಡೆದಿದೆ. ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿರುವ ಗುಂಡಪ್ಪಗೌಡರ ಮನೆಯಲ್ಲಿ ಈ ಘಟನೆ ನಡೆದಿದ್ದು, ನಿನ್ನೆ ರಾತ್ರಿ ಇಲೆಕ್ಟ್ರಿಕ್ ಬೈಕ್ ಚಾರ್ಜ್ ಗೆ ಇಟ್ಟು ಮಲಗಿದ್ದಾರೆ. ಚಾರ್ಜರ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡಿದೆ. https://ainlivenews.com/good-news-for-tourists-direct-flight-from-bangalore-to-lakshadweep/ ಪಕ್ಕದಲ್ಲೇ ನಿಲ್ಲಿಸಿದ್ದ ಬೈಕ್ ಗೆ ಬೆಂಕಿ ತಗುಲಿ,ಬಳಿಕ ಎಸ್.ಯು.ವಿ ಕಾರಿಗೂ ವ್ಯಾಪಿಸಿದೆ. ನಂತರ ತಳ ಅಂತಸ್ತಿನ ಮನೆಗೆ ಬೆಂಕಿ ವ್ಯಾಪಿಸಿ ಪೀಠೋಪಕರಣಗಳೆಲ್ಲವೂ ಸುಟ್ಟು ಭಸ್ಮವಾಗಿದೆ. ಬೆಂಕಿ ಕಾಣಿಸಿಕೊಳ್ಳು ತ್ತಿದ್ದಂತೆ ಮನೆಯಲ್ಲಿದ್ದ ಎಲ್ಲರೂ ಹೊರಬಂದಿದ್ದರಿಂದ ಪ್ರಾಣಾಪಾಯದಿಂದ ಬಚಾವಾಗಿದ್ದಾರೆ. ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Read More

ದೊಡ್ಡಬಳ್ಳಾಪುರ: ಚಿರತೆ ದಾಳಿಗೆ ಎರಡು ಹಸುಗಳು ಬಲಿಯಾಗಿರುವ ಘಟನೆ ತಾಲೂಕಿನ ಮೆಳೇಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚನ್ನಾಪುರ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಮುನಿಕೃಷ್ಣ ಎಂಬುವರಿಗೆ ಸೇರಿದ್ದಾಗಿದ್ದು ಎಂದಿನಂತೆ ಶೆಡ್ ನಲ್ಲಿ ಹಸುಗಳನ್ನು ಕಟ್ಟಿ ಹಾಕಲಾಗಿತ್ತು. ತಡರಾತ್ರಿ ಚಿರತೆ ದಾಳಿಯಿಂದ ಹಸುಗಳು ಸಾವನ್ನಪ್ಪಿವೆ. ಬೆಲೆ ಬಾಳುವ ಹಸುಗಳನ್ನ ಕಳೆದುಕೊಂಡ ರೈತ ಕಂಗಾಲಾಗಿದ್ದು, ಕೂಡಲೇ ಚಿರತೆಯನ್ನ ಸೆರೆಹಿಡಿಯುವಂತೆ ಸ್ಥಳೀಯರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.

Read More

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರೇ ಕರ್ನಾಟಕ ಕಂಡ ಅತ್ಯಂತ ದುರ್ಬಲ, ಅಸಹಾಯಕ ಮುಖ್ಯಮಂತ್ರಿ ತಾವು.ಹಾಗೆ ಹರಿಪ್ರಸಾದ್‌  ಅವರು ತಮ್ಮ ಮೇಲೆ ಪದೇ ಪದೇ ವಾಗ್ದಾಳಿ ನಡೆಸಿದರೂ ಅವರ ಮೇಲೆ ಯಾವುದೇ ಕ್ರಮ ಕೈಗೊಳ್ಳಲಾಗದಷ್ಟು, ಕನಿಷ್ಠ ಪಕ್ಷ ಪ್ರತ್ಯುತ್ತರ ಕೂಡ ನೀಡಲಾಗದಷ್ಟು ಅಸಹಾಯಕರ ತಾವು ಎಂದು ಸಿಎಂ ವಿರುದ್ಧ ಆರ್.‌ ಅಶೋಕ್‌ ಹರಿಹಾಯ್ದಿದ್ದಾರೆ. https://x.com/RAshokaBJP/status/1770310466751041756?s=20 ಡಿಸಿಎಂ ಅವರ ಬಣ ಅವಕಾಶ ಸಿಕ್ಕಾಗಲೆಲ್ಲಾ ಬಂಡಾಯದ ಬಾವುಟ ಹಾರಿಸಿ ತಮ್ಮ ಕುರ್ಚಿಯ expiry date ಮುಗಿಯುತ್ತದೆ ಎಂದು ಕಾಲೆಳೆಯುತ್ತಿದ್ದರೂ ಏನೂ ಮಾಡಲಾಗದ ಅಸಹಾಯಕ ಸ್ಥಿತಿ ನಿಮ್ಮದು ಎಂದು ಟೀಕೆ ಮಾಡಿದ್ದಾರೆ. ಪ್ರಧಾನಿ ಮೋದಿ ಅವರೇ ಮತ್ತೊಮ್ಮೆ ಮುಂದಿನ ಐದು ವರ್ಷ ಈ ದೇಶದ ಸ್ಟ್ರಾಂಗ್ ಪ್ರಧಾನಿ ಆಗಿ ಮುಂದುವರೆಯುತ್ತಾರೆ ಎಂದು ವಿಶ್ವಾಸದಿಂದ ಹೇಳುವ ಧೈರ್ಯ ನನಗಿದೆ. ನಿಮಗೆ ತಾಕತ್ತಿದ್ದರೆ, ನೀವು ಹೇಳಿಕೊಳ್ಳುವಂತೆ ತಾವು ಸ್ಟ್ರಾಂಗ್ ಮುಖ್ಯಮಂತ್ರಿಯೇ ಆಗಿದ್ದರೆ, “ನಾನೇ ಐದು ವರ್ಷ ಮುಖ್ಯಮಂತ್ರಿ” ಎಂದು ಒಮ್ಮೆ ಹೇಳಿ ನೋಡೋಣ. ನಿಮಗೆ ಖಂಡಿತ ಹೇಳಲು ಆಗಲ್ಲ. ಅದಕ್ಕೆ ತಮ್ಮನ್ನು…

Read More