Author: AIN Author

ಬೆಂಗಳೂರು:- ಡಾ.ರಾಜ್‌ ಕುಮಾರ್‌ ಪುತ್ಥಳಿ ಕೆಡವಿದ ಬಿಬಿಎಂಪಿ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಪುನೀತ್ ರಾಜ್‌ಕುಮಾರ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ವರನಟನ ಪುತ್ಥಳಿಯನ್ನು ಸ್ಥಾಪಿಸಲಾಗಿತ್ತು. ರಾಜ್‌ ಕುಮಾರ್ ಪ್ರತಿಮೆಯನ್ನು ಚಿಕ್ಕಪೇಟೆಯಲ್ಲಿ ಅಭಿಮಾನಿಗಳು ಸ್ಥಾಪಿಸಿದ್ದರು. ಪುತ್ಥಳಿ ಸ್ಥಾಪಿಸಿದ ಒಂದೇ ದಿನದಲ್ಲಿ ಅದನ್ನು ಬಿಬಿಎಂಪಿ ಜೆಸಿಬಿ ತರಿಸಿ ತೆರವು ಮಾಡಿದೆ. ಪುತ್ಥಳಿ ನಿಲ್ಲಿಸಲು ಮಾಡಿಸಲಾಗಿದ್ದ ಸಿಮೆಂಟಿನ ಕಟ್ಟೆಯನ್ನು ಒಡೆದುಹಾಕಲಾಗಿದೆ. ಪ್ರತಿಮೆ ತೆರವು ವಿರೋಧಿಸಿ ಕನ್ನಡಪರ ಹೋರಾಟಗಾರರಿಂದ ಇಂದು ಚಿಕ್ಕಪೇಟೆಯಲ್ಲಿ ಪ್ರತಿಭಟನೆ ನಡೆಯಲಿದೆ. “ಪುನೀತ್ ರಾಜ್ ಕುಮಾರ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಪುತ್ಥಳಿ ಸ್ಥಾಪಿಸಲಾಗಿತ್ತು. ಇದನ್ನು ತೆರವು ಮಾಡಿರುವುದು ಅನ್ಯಾಯ. ಇದು ಕನ್ನಡಿಗರನ್ನು ಕೆರಳಿಸುವ ಘಟನೆ. ಇದನ್ನು ವಿರೋಧಿಸಿ ಇಂದು ಪ್ರತಿಭಟನೆ ಮಾಡಲಿದ್ದೇವೆ” ಎಂದು ನಮ್ಮ ಕರ್ನಾಟಕ ಸೇನೆಯ ಯುವಘಟಕದ ಅಧ್ಯಕ್ಷರು ತಿಳಿಸಿದ್ದಾರೆ. ಬಿಬಿಎಂಪಿ ವ್ಯಾಪ್ತಿಯ ಸಾರ್ವಜನಿಕ ಸ್ಥಳದಲ್ಲಿ ಪುತ್ಥಳಿ ಸ್ಥಾಪನೆಗೆ ಅವರು ಅನುಮತಿ ಪಡೆದಿರಲಿಲ್ಲ. ಅನುಮತಿ ಇಲ್ಲದೆ ಇಂಥ ಪುತ್ಥಳಿ, ಪ್ರತಿಮೆ ಸ್ಥಾಪನೆ ಅನುಮತಿಸಲಾಗುವುದಿಲ್ಲ” ಎಂದು ಸ್ಥಳೀಯ ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

Read More

ಬೆಂಗಳೂರು:- ಪಕ್ಕದ ಮನೆಯ ದಂಪತಿ ಸರಸ ಸಲ್ಲಾಪದಿಂದ ಕಿರಿಕಿರಿಯಾಗುತ್ತಿದೆ ಎಂದು ಮಹಿಳೆಯೊಬ್ಬರು ದೂರು ನೀಡಿರುವ ವಿಚಿತ್ರ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಜರುಗಿದೆ. ಮಹಿಳೆ ದೂರಿನ ಅನ್ವಯ ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆವಲಹಳ್ಳಿ, ಬಿಡಿಎ ಲೇಔಟ್​ ನಲ್ಲಿ ಮಹಿಳೆ ವಾಸವಾಗಿದ್ದಾರೆ. ಮಹಿಳೆಯ ಮನೆಯ ಬಾಗಿಲಿಗೆ ಪಕ್ಕದ ಮನೆಯ ಬೆಡ್​ ರೂಮ್​ ಇದೆ. ಪಕ್ಕದ ಮನೆಯಲ್ಲಿ ವಾಸವಾಗಿರುವ ದಂಪತಿ ಬೆಡ್ ರೂಮ್ ಕಿಟಕಿ ತೆರೆದು ಸರಸ ಸಲ್ಲಾಪದಲ್ಲಿ ತೊಡಗುವ ಮೂಲಕ ಬಹಳ ವಿಕೃತ ಮತ್ತು ಅಸಹ್ಯ ಮನಸ್ಥಿತಿಯಿಂದ ನಡೆದುಕೊಂಡಿದ್ದಾರೆ. ಈ ಬಗ್ಗೆ, ಬಹಳ ಮುಜುಗರಕ್ಕೆ ಒಳಗಾಗಿ ಮಹಿಳೆ, ದಯವಿಟ್ಟು ಬೆಡ್ ರೂಮ್ ಕಿಟಕಿ ಹಾಕಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಪಕ್ಕದ ಮನೆಯ ವ್ಯಕ್ತಿ ಅವಾಚ್ಯ ಶಬ್ದಗಳಿಂದ ಮಹಿಳೆ ಹಾಗೂ ಅವರ ಕುಟುಂಬದ ಸದಸ್ಯರಿಗೆ ನಿಂದಿಸಿದ್ದಾನೆ. ಅಲ್ಲದೆ ಮಹಿಳೆ ಮೇಲೆ ಅತ್ಯಾಚಾರ ಎಸಗುವುದಾಗಿ ಮತ್ತು ಕೊಲೆ, ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೆ ಪಕ್ಕದ ಮನೆಯ ಮನೆ ಮಾಲೀಕ ಚಿಕ್ಕಣ್ಣ ಮತ್ತು ಅವರ ಮಗ…

Read More

ನವದೆಹಲಿ: ಬಿಜೆಪಿ ನಾಯಕಿ ನೂಪುರ್ ಶರ್ಮಾ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ (Lok Sabha Election) ಕಣಕ್ಕೆ ಇಳಿಯುವ ಸಾಧ್ಯತೆಯಿದೆ. ಪ್ರವಾದಿ ಮೊಹಮ್ಮದರ ಬಗ್ಗೆ ವಿವಾದಿತ ಹೇಳಿಕೆ ನೀಡಿ ಪಕ್ಷದಿಂದ ಅಮಾನತಾಗಿರುವ ನೂಪುರ್ ಅವರನ್ನು ಉತ್ತರ ಪ್ರದೇಶದ ರಾಯ್‌ಬರೇಲಿಯಿಂದ (Raibareli) ಸ್ಪರ್ಧಿಸಲು ಬಿಜೆಪಿ ಮುಂದಾಗಿದೆ ಎಂದು ವರದಿಯಾಗಿದೆ. ಉತ್ತರ ಪ್ರದೇಶ ರಾಯ್‌ಬರೇಲಿ ಕಾಂಗ್ರೆಸ್‌ (Congress) ಭದ್ರಕೋಟೆಯಾಗಿದ್ದು ಸೋನಿಯಾ ಗಾಂಧಿ (Sonia Gandhi) ಈ ಬಾರಿ ಸ್ಪರ್ಧಿಸುತ್ತಿಲ್ಲ. ಹೀಗಾಗಿ ಈ ಕ್ಷೇತ್ರದಿಂದ ಪ್ರಿಯಾಂಕಾ ವಾದ್ರಾ (Priyanka Vadra) ಕಣಕ್ಕೆ ಇಳಿಯಲಿದ್ದಾರೆ ಎನ್ನಲಾಗುತ್ತಿದೆ. https://ainlivenews.com/is-coconut-sugar-better-for-health-than-white-sugar-here-is-the-answer/ ನೂಪುರ್‌ಶರ್ಮಾ ಈ ಹಿಂದೆ 2015r ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ, ಆಪ್ ಮುಖ್ಯಸ್ಥ ಅರವಿಂದ್ ಕೇಜ್ರವಾಲ್ ವಿರುದ್ದ ಸೋತಿದ್ದರು. ವಾಹಿನಿಯೊಂದರ ಚರ್ಚಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನೂಪುರ್‌ಶರ್ಮಾ ಪ್ರವಾದಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕೆ ಬಿಜೆಪಿಯಿಂದ ಅಮಾನತಾಗಿದ್ದರು. ರಾಯ್‌ಬರೇಲಿ ಕೈ ಕೋಟೆ: ರಾಯ್‌ಬರೇಲಿಯಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಮೂರು ಬಾರಿ ಸ್ಪರ್ಧಿಸಿ ಗೆದ್ದಿದ್ದರು. 1999 ರಿಂದ ಸೋನಿಯಾ…

Read More

ಬೆಂಗಳೂರು:- ನಗರದ ಜಾಲಹಳ್ಳಿ ಮೆಟ್ರೋ ಪ್ಲ್ಯಾಟ್​ಫಾರ್ಮ್​ನಲ್ಲಿ ಮಹಿಳೆ ಮುಂದೆ ತನ್ನ ಖಾಸಗಿ ಅಂಗ ಸ್ಪರ್ಶಿಸಿಕೊಂಡು ನಮ್ಮ ಮೆಟ್ರೋ ಸಿಬ್ಬಂದಿಯಿಂದಲೇ ಅಸಭ್ಯ ವರ್ತನೆ ತೋರಿರುವಂತಹ ಘಟನೆ ಜರುಗಿದೆ. ಈ ಹಿನ್ನೆಲೆ ಮಹಿಳೆ ಮೇಲಧಿಕಾರಿಗಳಿಗೆ ದೂರು ನೀಡಿದ್ದು, ಆದರೆ ಮೆಟ್ರೋ ಅಧಿಕಾರಿಗಳಿಗೆ ದೂರು ನೀಡಿದರೂ ಕ್ರಮ ಕೈಗೊಳ್ಳದ ಹಿನ್ನೆಲೆ ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿ ಜಾಲಹಳ್ಳಿ ಮೆಟ್ರೋ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ. ಮೆಟ್ರೋ ಸಿಬ್ಬಂದಿ ಓರ್ವ ಪ್ಲಾಟ್‌ಫಾರಂನ ಎದುರು ಭಾಗದಲ್ಲಿ ತನ್ನ ಖಾಸಗಿ ಅಂಗವನ್ನು ಸ್ಪರ್ಶಿಸಿಕೊಂಡು ದುರ್ವರ್ತನೆ ತೋರಿದ್ದಾನೆ. ಕೆಲವು ಸನ್ನೆಗಳನ್ನು ಮಾಡುತ್ತ ನಿರಂತರವಾಗಿ ನನ್ನನ್ನು ದಿಟ್ಟಿಸಿ ನೋಡುತ್ತಿರುವಂತಹ ಅನುಭವ ನನಗೆ ಇಂದು ಮಧ್ಯಾಹ್ನ 2:30 ರ ಸುಮಾರಿಗೆ ಉಂಟಾಗಿದೆ. ಹಗಲು ಹೊತ್ತಿನಲ್ಲಿಯೇ ಇಂತಹ ಘಟನೆ ತುಂಬಾ ಕೆಟ್ಟದಾಗಿತ್ತು. ನಾನು ಆತನನ್ನು ಪ್ರಶ್ನೆ ಮಾಡಿದೆ. ಆದರೆ ಆತ ಕೆಲವು ಸನ್ನೆಗಳನ್ನು ಮಾಡುವ ಮೂಲಕ ನನ್ನನ್ನು ದಿಟ್ಟಿಸಿ ನೋಡುತ್ತಲೇ ಇದ್ದ. ಹಾಗಾಗಿ ನಾನು ವಿಡಿಯೋ ಮಾಡಲು ಆರಂಭಿಸಿದ ಬಳಿಕ ಅವನು ಅಲ್ಲಿಂದ…

Read More

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್​ಸಿಬಿ ತಂಡದ ಅನ್​ಬಾಕ್ಸ್ ಕಾರ್ಯಕ್ರಮದಲ್ಲಿ ಕಿಂಗ್ ಕೊಹ್ಲಿ ಮಿಂಚಿದ್ದರು. ಆರ್​ಸಿಬಿ ತಂಡದ ಜೆರ್ಸಿ ಬಿಡುಗಡೆ, ಮಹಿಳಾ ತಂಡಕ್ಕೆ ಸನ್ಮಾನ ಸೇರಿದಂತೆ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ವಿರಾಟ್ ಕೊಹ್ಲಿ ವಿಶೇಷ ಮನವಿಯೊಂದನ್ನು ಸಲ್ಲಿಸಿದ್ದರು. ಆ ಮನವಿಯೇ… ಇನ್ಮುಂದೆ ನನ್ನನ್ನು ಕಿಂಗ್ ಕೊಹ್ಲಿ ಎಂದು ಕರೆಯಬೇಡಿ ಎಂಬುದು. ಆರ್​ಸಿಬಿ ಅನ್​ಬಾಕ್ಸ್ ಕಾರ್ಯಕ್ರಮದಲ್ಲಿ ನಿರೂಪಕರಾಗಿ ಕಾಣಿಸಿಕೊಂಡ ದ್ಯಾನಿಶ್ ಸೇಠ್ ವಿರಾಟ್ ಕೊಹ್ಲಿಯನ್ನು ಕಿಂಗ್ ಎಂದು ಸಂಬೋಧಿಸಿದರು. ಈ ವೇಳೆ ಆ ರೀತಿಯಾಗಿ ಕರೆಯಬೇಡಿ ಎಂದ ಕೊಹ್ಲಿ, ಆ ಥರ ಕರೆಯುವುದರಿಂದ ನನಗೆ ಮುಜುಗರವಾಗುತ್ತದೆ ಎಂದು ತಿಳಿಸಿದರು. ಅಲ್ಲದೆ ಯಾರು ಸಹ ಕಿಂಗ್ ಎಂದು ಕರೆಯಬೇಡಿ ಎಂದು ವಿರಾಟ್ ಕೊಹ್ಲಿ ಮನವಿ ಮಾಡಿದರು. ಆದರೆ ವಿರಾಟ್ ಕೊಹ್ಲಿಯ ಈ ಮನವಿಗೆ ಅಭಿಮಾನಿಗಳು ಕಿಂಗ್ ಕೊಹ್ಲಿಯ ಘೋಷಣೆಯೊಂದಿಗೆ ಅಲ್ಲೇ ಡ್ರಾ ಅಲ್ಲೇ ಬಹುಮಾನ ಎನ್ನುವಂತೆ ಉತ್ತರ ನೀಡಿದ್ದರು. ಏಕೆಂದರೆ ವಿರಾಟ್ ಕೊಹ್ಲಿಯನ್ನು ಈಗಾಗಲೇ ಅಭಿಮಾನಿಗಳು ಕ್ರಿಕೆಟ್​ನ ಕಿಂಗ್ ಎಂದು ಪರಿಗಣಿಸಿದ್ದಾರೆ. ಇದಕ್ಕೆ ಸಾಕ್ಷಿಯೇ…

Read More

ಬೆಂಗಳೂರು:- ಸಿಎಸ್​ಆರ್​ ನಿಧಿ ಮೊರೆ ಹೋದ ಜಲಮಂಡಳಿಯು ಮಳೆ ನೀರು ಕೋಯ್ಲು ಅಳವಡಿಕೆಗೆ ಒತ್ತು ನೀಡಿದೆ. ಭವಿಷ್ಯದ ದೃಷ್ಟಿಯಿಂದ ಕಂಡುಕೊಂಡಿರುವ ಹಲವು ಪರ್ಯಾಯ ಮೂಲಗಳ ಪೈಕಿ ಮಳೆ ನೀರು ಕೊಯ್ಲು ಅವಳವಡಿಕೆಯೂ ಒಂದಾಗಿದೆ. ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸಿಕೊಳ್ಳುವುದನ್ನು ಕಡ್ಡಾಯಗೊಳಿಸವ ಮೂಲಕ ಸಾರ್ವತ್ರೀಕರಣಗೊಳಿಸಲು ಜಲಮಂಡಳಿ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಮಳೆ ನೀರು ಕೊಯ್ಲು ಅಳವಡಿಸಲು ಹಾಗೂ ಕೆರೆಗಳಿಗೆ ಕೊಳಚೆ ನೀರು ಸೇರುವುದನ್ನು ತಡೆಗಟ್ಟಲು ಮತ್ತು ಇನ್ನಿತರ ಯೋಜನೆಗಳಿಗೆ ಖರ್ಚು ಮಾಡಲು ಜಲಮಂಡಳಿ ಸಿಎಸ್​ಆರ್​ ನಿಧಿ (CSR) ಮೊರೆ ಹೋಗಿದೆ. ಬಿಡಬ್ಲೂಎಸ್​ಎಸ್​​ಬಿ ಸಂಪೂರ್ಣವಾಗಿ ಜನರಿಂದ ಸಂಗ್ರಹಿಸಿದ ತೆರಿಗೆ ಮೇಲೆ ಕಾರ್ಯ ನಿರ್ವಹಿಸುತ್ತದೆ. ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ತೆರಿಗೆ ಹಣ ಸಾಕಾಗುವುದಿಲ್ಲ. ಮತ್ತು ಮಂಡಳಿಯಲ್ಲಿ ಅಷ್ಟೊಂದು ಹಣವಿಲ್ಲ. ಬೆಂಗಳೂರು ನಗರ ಒಳಿತಿಗಾಗಿ ಹಲವು ಕಂಪಿನಗಳು ಸಿಎಸ್​ಆರ್​ ನಿಧಿ ಮೂಲಕ ಹಣ ನೀಡಲು ಮುಂದೆ ಬಂದಿವೆ. ಹೀಗಾಗಿ ನಾವು ಆ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಳ್ಳುತ್ತೇವೆ ಎಂದು ಜಲಮಂಡಳಿಯ ಹಿರಿಯ…

Read More

ಮಣಿಪುರ:-ಕಾಂಗ್ರೆಸ್​ ಸಮಾವೇಶದಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಘಟನೆ ಮಣಿಪುರದಲ್ಲಿ ಜರುಗಿದೆ. ಈ ಬಗ್ಗೆ ಮಾತನಾಡಿದ ಎಂಪಿಸಿಸಿ ಅಧ್ಯಕ್ಷ ಕೆ.ಮೇಘಚಂದ್ರ, ಚಿಂಗೈ ವಿಧಾನಸಭಾ ಕ್ಷೇತ್ರದ ಟೀನೆಮ್ ಗ್ರಾಮದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಉಖ್ರುಲ್ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿ ಆಲ್ಫ್ರೆಡ್ ಕಂಗಮ್ ಆರ್ಥರ್ ಮೇಲೆ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಉಖ್ರುಲ್‌ನ ಪಯೋರಿ ಶಿರುಯಿ ಗ್ರಾಮದ ಟಿಕೆ ವುಡ್‌ಲ್ಯಾಂಡ್ ರೆಸಾರ್ಟ್‌ನಲ್ಲಿ ಮಾಜಿ ಶಾಸಕ ಆಲ್ಫ್ರೆಡ್ ಮೇಲೆ ಶಸ್ತ್ರಸಜ್ಜಿತ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಅಭ್ಯರ್ಥಿಯಾಗಿ ಆಲ್ಫ್ರೆಡ್ ಕಂಗಮ್ ಆರ್ಥರ್ ಕಳೆದ ಮೂರು ದಿನಗಳಿಂದ ಚುನಾವಣಾ ಪ್ರಚಾರದ ಭಾಗವಾಗಿ ಜನರನ್ನು ಭೇಟಿಯಾಗುತ್ತಿದ್ದಾರೆ ಎಂದು ಮೇಘಚಂದ್ರ ಹೇಳಿದರು. ಈ ಪರಿಸ್ಥಿತಿಯಲ್ಲಿ ಮಾರ್ಚ್ 18 ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಟಿಕೆ ವುಡ್‌ಲ್ಯಾಂಡ್ ರೆಸಾರ್ಟ್‌ನಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಮಂಗಳವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಟೀನೆಮ್ ಗ್ರಾಮದಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಆಲ್ಫ್ರೆಡ್ ಮೇಲೆ ಮತ್ತೆ ದಾಳಿ ನಡೆಸಿದ್ದಾರೆ ಎಂದು ಎಂಪಿಸಿಸಿ…

Read More

IPL 2024 ರಲ್ಲಿ ಆರ್​ಸಿಬಿ ಹೊಸ ವಿನ್ಯಾಸದ ಲೋಗೋದೊಂದಿಗೆ ಕಣಕ್ಕಿಳಿಯಲಿದ್ದು, ಇದಕ್ಕೂ ಮುನ್ನ ಆರ್​ಸಿಬಿ ಐಪಿಎಲ್​ನಲ್ಲಿ 4 ಬಾರಿ ಲೋಗೋವನ್ನು ಬದಲಿಸಿಕೊಂಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯು ಮುಂಬರುವ ಐಪಿಎಲ್​ಗಾಗಿ ತನ್ನ ಲೋಗೋ ವಿನ್ಯಾಸವನ್ನು ಬದಲಿಸಿದೆ. ಈ ಬದಲಾವಣೆಯೊಂದಿಗೆ ರಾಯಲ್ ಚಾಲೆಂಜರ್ಸ್ ಬ್ಯಾಂಗಲೋರ್ ಹೆಸರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಂದು ಬದಲಿಸಿಕೊಂಡಿದೆ. ವಿಶೇಷ ಎಂದರೆ ಆರ್​ಸಿಬಿ ಫ್ರಾಂಚೈಸಿಯು ತನ್ನ ಲೋಗೋವನ್ನು ಬದಲಿಸುತ್ತಿರುವುದು ಇದೇ ಮೊದಲೇನಲ್ಲ. ಇದಕ್ಕೂ ಮುನ್ನ ನಾಲ್ಕು ಬಾರಿ ಹೊಸ ಲೋಗೋದೊಂದಿಗೆ ಕಣಕ್ಕಿಳಿದಿದೆ. ಇದೀಗ ಐದನೇ ಬಾರಿಗೆ ಲೋಗೋ ಬದಲಿಸಿ ಕಣಕ್ಕಿಳಿಯಲು ಸಜ್ಜಾಗಿ ನಿಂತಿದೆ.

Read More

ನವದೆಹಲಿ: ಲಕ್ಷದ್ವೀಪವು ಭಾರತದ ಅವಿಭಾಜ್ಯ ಅಂಗವಾಗಿದೆ. ಈಗ ಪ್ರಚಲಿತದಲ್ಲಿರುವ ‘ಲಕ್ಷದ್ವೀಪ,’ ಒಂದು ಕಾಲದಲ್ಲಿ ‘ಲಖದೀವ್’,’ಮಿನಿಕೋಯ್’ ಮತ್ತು ‘ಅಮಿನ್ ದಿವಿ’ ದ್ವೀಪಗಳು ಎಂದು ಕರೆಯಲಾಗುತ್ತಿದ್ದ, ಅರಬ್ಬೀ ಸಮುದ್ರದ ನಡುವೆ ಇರುವ ಒಂದು ದ್ವೀಪ ಸಮೂಹವಾಗಿತ್ತು. ಬೆಂಗಳೂರಿನಿಂದ ಲಕ್ಷದ್ವೀಪಕ್ಕೆ ಮಾರ್ಚ್ 31 ರಿಂದ ನೇರ ವಿಮಾನ ಹಾರಾಟ ಆರಂಭಗೊಳ್ಳಲಿದೆ ಎಂದು ಇಂಡಿಗೋ ವಿಮಾನಯಾನ ಸಂಸ್ಥೆ ತಿಳಿಸಿದೆ. ಈ ಬಗ್ಗೆ ಸೋಮವಾರ ಪ್ರಕಟಣೆ ಹೊರಡಿಸಿರುವ ಇಂಡಿಗೋ ಬೆಂಗಳೂರಿನಿಂದ ಲಕ್ಷದ್ವೀಪಕ್ಕೆ ಮಾ.31 ರಿಂದ ವಿಮಾನ ಸೇವೆಗಳು ಆರಂಭಗೊಳ್ಳಲಿವೆ ಎಂದು ತಿಳಿಸಿದೆ. ಅಗತ್ತಿ ಇಂಡಿಗೋ ನೆಟ್‌ವರ್ಕ್‌ನ 88ನೇ ದೇಶಿಯ ಮತ್ತು 121ನೇ ಒಟ್ಟಾರೆ ತಾಣವಾಗಿದೆ. ಇಂಡಿಗೋ ಸಂಸ್ಥೆಯು 78 ಆಸನಗಳನ್ನು ಹೊಂದಿರುವ ATR ವಿಮಾನವನ್ನು ಈ ಮಾರ್ಗಕ್ಕೆ ಬಳಸಲಿದೆ. https://ainlivenews.com/is-coconut-sugar-better-for-health-than-white-sugar-here-is-the-answer/ ಬೆಂಗಳೂರಿನಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ನೇರ ವಿಮಾನಗಳ ಬುಕಿಂಗ್ ಇಂಡಿಗೋ ಏರ್‌ಲೈನ್ಸ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ಇದಕ್ಕಾಗಿ, ಪ್ರವಾಸಿಗರು ಇಲ್ಲಿರುವ ಲಿಂಕ್​ ಮೇಲೆ www.goindigo.in ಕ್ಲಿಕ್​ ಮಾಡಿ ನಿಮ್ಮ ಟಿಕೆಟ್​ ಅನ್ನು ಮುಂಗಡ ಬುಕ್​ ಮಾಡಿಕೊಳ್ಳಬಹುದಾಗಿದೆ. ಬೆಂಗಳೂರಿನಿಂದ ವಿಮಾನದ ಮೂಲಕ ಅಗತ್ತಿ…

Read More

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಬೇಗೆ ಹೆಚ್ಚಳವಾಗಿರುವುದರಿಂದ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ಎಸಿ, ಫ್ಯಾನ್, ಕೂಲರ್, ಮನೆಗೆ, ಕೈತೋಟ ಪಂಪ್ ಗಳ ಬಳಕೆ ಅಧಿಕವಾಗಿದೆ. ವಿದ್ಯುತ್ ಬಳಕೆ ಹೆಚ್ಚಾಗಿರುವುದರಿಂದ ಗೃಹಜೋತಿ ಗ್ರಾಹಕರು ಕೂಡ ಸಾಮಾನ್ಯ ಗ್ರಾಹಕರಂತೆ ಎಲ್ಲಾ ಯೂನಿಟ್ ಗೂ ನಿಗದಿತ ದರದಂತೆ ಬಿಲ್ ಪಾವತಿಸಬೇಕಿದೆ. ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ತೀವ್ರ ಹೆಚ್ಚಾಗಿದೆ. ಗೃಹಜ್ಯೋತಿ ಬಳಕೆದಾರರಿಗೆ 2022 -23ನೇ ಸಾಲಿನ ವಾರ್ಷಿಕ ಸರಾಸರಿ ಲೆಕ್ಕಾಚಾರದ ಆಧಾರದ ಮೇಲೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗಿದೆ. ನಿಗದಿತ ಸರಾಸರಿಗಿಂತ 150 ಉಚಿತ ಯೂನಿಟ್ ಗಿಂತ 50 ಯೂನಿಟ್ ಹೆಚ್ಚು ಬಳಕೆ ಮಾಡಿದ್ದಲ್ಲಿ ಪ್ರತಿ ಯೂನಿಟ್ ಗೆ 7 ರೂ. ಪಾವತಿಸಬೇಕಿದೆ. ಈಗ ಬಿಸಿಲ ಕಾರಣಕ್ಕೆ ವಿದ್ಯುತ್ ಬಳಕೆ ಶೇಕಡ 20ರಷ್ಟು ಹೆಚ್ಚಾಗಿದೆ. ಹೆಚ್ಚಿನ ಪ್ರಮಾಣದ ವಿದ್ಯುತ್ ಬಳಕೆ ಮಾಡುತ್ತಿರುವುದರಿಂದ ಗೃಹಜ್ಯೋತಿ ಬಳಕೆದಾರರು ಕೂಡ ಸಾಮಾನ್ಯ ಗ್ರಾಹಕರಂತೆ ಎಲ್ಲಾ ಯೂನಿಟ್ ಗೂ ನಿಗದಿತ ದರದಂತೆ ಬಿಲ್ ಪಾವತಿಸಬೇಕಿದೆ. ಹೀಗಾಗಿ ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿದ್ದ…

Read More