Author: AIN Author

ಬೆಂಗಳೂರು:- ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. *ಉಮೇಶ್ ಕುಮಾರ್ .ಎಡಿಜಿಪಿ. ಕೆಎಸ್ ಆರ್ ಪಿ *ಸೀಮಂತ್ ಕುಮಾರ್ ಸಿಂಗ್. ಎಡಿಜಿಪಿ. ಬಿಎಂಟಿಎಫ್ *ಹರಿಸೇಖರನ್ ಎಡಿಜಿಪಿ CTC *ಎಡ ಮಾರ್ಟೀನ್ ಮಾರ್ಬನಿಂಗ ಡಿಐಜಿ ಬೆಳಗಾವಿ ಕಮಿಷನರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Read More

ಚಿಕ್ಕಬಳ್ಳಾಪುರ:- ಪೋಕ್ಸೋ ಕೇಸ್ ಗೆ ಸಂಬಧಪಟ್ಟಂತೆ ಯಡಿಯೂರಪ್ಪ ತಪ್ಪು ಮಾಡಿದ್ರೆ ಶಿಕ್ಷೆ ಆಗಲಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌದರಿ ಹೇಳಿದ್ದಾರೆ ಈ ಸಂಬಂಧ ಮಾತನಾಡಿದ ಅವರು,ಪ್ರಕರಣವನ್ನು ಈಗಾಗಲೇ ಸಿಐಡಿಗೆ ಒಪ್ಪಿಸಲಾಗಿದೆ. ತನಿಖೆಯಲ್ಲಿ ಏನು ವರದಿ ಬರುತ್ತೆ ಅದು ಆಗೇ ಆಗುತ್ತೆ. ಸರಿ ಇದ್ದರೆ ಸರಿ, ತಪ್ಪಿದ್ದರೆ ತಪ್ಪು. ಅದಕ್ಕೆ ಯಾರೂ ಹೊರತಲ್ಲ. ತಪ್ಪಾಗಿದ್ದರೆ ಪೋಕ್ಸೋ ಅಡಿಯಲ್ಲಿ ಶಿಕ್ಷೆಗೆ ಒಳಗಾಗುತ್ತಾರೆ. ತನಿಖಾ ವರದಿ ಬಂದ ಮೇಲೆ ಸತ್ಯ ಗೊತ್ತಾಗುತ್ತೆ ಎಂದು ಹೇಳಿದ್ದಾರೆ. ಬಾಲಕಿಯರ ಮೇಲೆ ಅತ್ಯಾಚಾರಕ್ಕೆ ಅವರ ಸಂಬಂಧಿ ಪುರುಷರೇ ಕಾರಣ. ಎಳೆವಯಸ್ಸಿನ ಮಕ್ಕಳನ್ನು ಗರ್ಭಿಣಿ ಮಾಡಿ ನರಕಕ್ಕೆ ದೂಡುತ್ತಿದ್ದಾರೆ. 7, 8ನೇ ತರಗತಿ ಓದುವಾಗ ಗರ್ಭಿಣಿಯಾದರೆ ಏನು ಮಾಡುವುದು. ಹೆಣ್ಣುಮಕ್ಕಳ ಮೇಲೆ ತಂದೆ, ತಾಯಿ ಹೆಚ್ಚಿನ ನಿಗಾ ವಹಿಸಬೇಕು ಎಂದು ತಿಳಿಸಿದ್ದಾರೆ.

Read More

ದೆಹಲಿ:- ದೆಹಲಿಯಲ್ಲಿ ಇಡಿ ಅಧಿಕಾರಿಗಳಿಂದ ಕೆ.ಕವಿತಾ ಅರೆಸ್ಟ್ ಮಾಡಲಾಗಿದೆ, ಮದ್ಯ ಹಗರಣ ಪ್ರಕರಣದಲ್ಲಿ ಬಿಆರ್‌ಎಸ್ ಎಂಎಲ್‌ಸಿ ಹಾಗೂ ಕೆಸಿಆರ್ ಪುತ್ರಿ ಕವಿತಾ ಅವರನ್ನು ಜಾರಿ ನಿರ್ದೇಶನಾಲಯ ಶುಕ್ರವಾರ ಬಂಧಿಸಿದೆ. ಬಂಧನಕ್ಕೆ ಮುನ್ನ ಪ್ರಸ್ತುತ ಹಗರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್‌ನಲ್ಲಿರುವ ಕವಿತಾ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ಏಜೆನ್ಸಿ ನೀಡಿದ ಹಲವಾರು ಸಮನ್ಸ್‌ಗಳಿಗೆ ಗೈರು ಹಾಜರಾದ ನಂತರ ಇಡಿ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ. ಕವಿತಾ ಅವರು ತೆಲಂಗಾಣದಲ್ಲಿ ವಿಧಾನ ಪರಿಷತ್ತಿನ ಸದಸ್ಯರಾಗಿದ್ದಾರೆ. ಈಕೆ ಭಾರತ್ ರಾಷ್ಟ್ರ ಸಮಿತಿ ಮುಖ್ಯಸ್ಥ ಮತ್ತು ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿಯಾಗಿದ್ದಾರೆ. ಈ ಪ್ರಕರಣದಲ್ಲಿ ಕವಿತಾ ಅವರನ್ನು ಈ ಹಿಂದೆ ವಿಚಾರಣೆಗೊಳಪಡಿಸಿದ್ದರೂ, ಈ ವರ್ಷ ಅವರು ಎರಡು ಸಮನ್ಸ್‌ಗಳಿಗೆ ಹಾಜರಾಗಿರಲಿಲ್ಲ. ಬಂಜಾರ ಹಿಲ್ಸ್‌ನ ಆಕೆಯ ನಿವಾಸದಲ್ಲಿ ಇಡಿ ತಂಡ ಶೋಧ ನಡೆಸಿದ್ದರಿಂದ ಯಾರನ್ನೂ ಒಳಗೆ ಬಿಡಲಾಗುತ್ತಿಲ್ಲ. ಶೋಧ ಕಾರ್ಯ ಯಾವಾಗ ಪ್ರಾರಂಭವಾಯಿತು ಎಂಬುದು ತಕ್ಷಣವೇ ಸ್ಪಷ್ಟವಾಗಿಲ್ಲ. ಆದರೆ ಮಧ್ಯಾಹ್ನ ಆಕೆಯ…

Read More

ಬೆಂಗಳೂರು:- ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ಹಾಗೂ ಸಿಬ್ಬಂದಿಗಳಿಂದ ಮಾನವ ಕಳ್ಳ ಸಾಗಣೆ ಆರೋಪ ಹಿನ್ನೆಲೆ ದಾಳಿ ನಡೆದಿದೆ. ದಾಳಿ ವೇಳೆ 20 ಬಾಲಕಿಯರು ಪತ್ತೆ ಆಗಿದ್ದಾರೆ. ಪತ್ತೆಯಾದವರನ್ನು ಗಲ್ಫ್​ ರಾಷ್ಟ್ರಗಳಿಗೆ ಸಾಗಿಸಲಾಗುತ್ತಿದೆ ಎಂದು ಆರೋಪ ಕೇಳಿಬಂದಿದೆ. ದಕ್ಷಿಣ ಭಾರತದಲ್ಲಿ ಇಂತಹ ಪ್ರಕರಣಗಳು ಈಗಾಗಲೇ ವರದಿಯಾಗಿವೆ ಎನ್ನಲಾಗುತ್ತಿದೆ. ಸದ್ಯ ಎಫ್​​ಐಆರ್​ ದಾಖಲಿಸುವಂತೆ ಸಂಪಿಗೇಹಳ್ಳಿ ಠಾಣೆಯಲ್ಲಿ ಎನ್​​ಸಿಪಿಸಿಆರ್ ಅಧ್ಯಕ್ಷ ಹಾಗೂ ಸಿಬ್ಬಂದಿ ಆಗ್ರಹಿಸಿದ್ದಾರೆ. ಸದ್ಯ ಎನ್​ಸಿಪಿಸಿಆರ್​ನಿಂದ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಮದರಸದಲ್ಲಿ ಸುಮಾರು 10-20 ಮಕ್ಕಳು ಇದ್ದರು. ಮಕ್ಕಳಿಗೆ ಸರಿಯಾಗಿ ಶಿಕ್ಷಣವನ್ನು ನೀಡುತ್ತಿಲ್ಲ. ಜೊತೆಗೆ ಧಾರ್ಮಿಕ‌ ಶಿಕ್ಷಣವನ್ನು ನೀಡುತ್ತಿದ್ದಾರೆ. ಯಾವುದೇ ಲೈಸೆನ್ಸ್ ಇಲ್ಲದೆ ಮದರಸವನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ.

Read More

ಬೆಂಗಳೂರು :- ಕರ್ನಾಟಕದಲ್ಲಿ ಕಡಿವಾಣ ಬೀಳಲಿದೆಯೇ ಎನ್ನುವ ಚರ್ಚೆ ಪ್ರಾರಂಭವಾಗಿದೆ. ಕಬಾಬ್, ಪಾನಿಪುರಿ ಅಸುರಕ್ಷತೆಯನ್ನು ಪರಿಶೀಲಿಸಿ ಈ ತಿಂಗಳ ಅಂತ್ಯದಲ್ಲಿಯೇ ವರದಿ ಪ್ರಕಟಿಸಿ ಕ್ರಮಕ್ಕೆ ಮುಂದಾಗಲಿದೆ. ಪಾನಿಪುರಿ ಹಾಗೂ ಕಬಾಬ್‌ನಲ್ಲೂ ಹಾನಿಕಾರಕ ಅಂಶಗಳು ಇದ್ದರೆ ಕೂಡಲೇ ಕಲರ್ ಬಳಕೆ ನೀಷೇಧ ಹೇರಿ ಕ್ರಮ ವಹಿಸುತ್ತಾರೆ ಎನ್ನಲಾಗಿದೆ. ಇತ್ತೀಚೆಗೆ ರಾಜ್ಯ ಸರ್ಕಾರ ಗೋಬಿ ಮಂಚೂರಿಯನ್ ಮತ್ತು ಕಾಟನ್‌ ಕ್ಯಾಂಡಿಯಲ್ಲಿ ಹಾನಿಕಾರಕ ರೋಡಮೈನ್ ಬಿ ಬಣ್ಣ ಬಳಕೆ ಮಾಡುತ್ತಿರುವುದು ಕಂಡು ಬಂದ ಬೆನ್ನಲ್ಲೇ ನಿಷೇಧಿಸಿತ್ತು. ಅಷ್ಟೇ ಅಲ್ಲದೇ, ಇದನ್ನು ಉಲ್ಲಂಘಿಸಿದರೇ 7 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 10 ಲಕ್ಷ ರೂ.ಗಳವರೆಗೆ ದಂಡ ವಿಧಿಸಲಾಗುತ್ತದೆ ಎಂದು ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದರು. ರೋಡಮೈನ್ ಬಿ ಬಳಕೆಯನ್ನು ದೇಶದ ಆಹಾರ ಸುರಕ್ಷತೆ ನಿಯಂತ್ರಣದ ಅಡಿಯಲ್ಲಿ ಅನುಮತಿಸಲಾಗಿಲ್ಲ. ಇದನ್ನು ಬಳಕೆ ಮಾಡಿದರೇ ಕ್ಯಾನ್ಸರ್‌ನಂತಹ ಭಯಾನಕ ರೋಗಗಳಿಗೆ ತುತ್ತಾಗುವ ಸಾಧ್ಯತೆಯಿದೆ. ರೋಡಮೈನ್ ಬಿ ರಾಸಾಯನಿಕ ಬಣ್ಣವಾಗಿದ್ದು, ಬಟ್ಟೆ, ಕಾಗದ, ಚರ್ಮ, ಮುದ್ರಣ ಮತ್ತು ಪ್ಲಾಸ್ಟಿಕ್‌ಗಳಿಗೆ ಬಣ್ಣ…

Read More

ಮಂಡ್ಯ:- ಸುಮಲತಾ ಅಕ್ಕ ಇದ್ದಂತೆ, ಸಂಘರ್ಷ ಮುಂದುವರಿಸಲ್ಲ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಸುಮಲತಾ ಅಂಬರೀಶ್ ಅವರು ನಮ್ಮ ಅಕ್ಕ ಇದ್ದಂತೆ. ರಾಜಕೀಯದಲ್ಲಿ ಆಗ ಏನೋ ಆಗಿತ್ತು. ಈಗ ನಾವು ಸಂಘರ್ಷ ಮುಂದುವರಿಸಲ್ಲ ಎಂದರು. ಚುನಾವಣೆ ವಿಷಯದಲ್ಲಿ ಒಂದು ಮಾತು ಹೇಳುತ್ತೇನೆ. ಅಂಬರೀಶ್, ನಾವೆಲ್ಲ ಒಟ್ಟಾಗಿ, ಪ್ರೀತಿಯಿಂದ ಬೆಳೆದವರು. ನಮ್ಮ ಪಕ್ಷದಿಂದಲೇ ಅಂಬರೀಶ್ ಪಾರ್ಲಿಮೆಂಟ್ ಪ್ರವೇಶ ಮಾಡಿದ್ದರು. ನಾನು ಸಿಎಂ ಆಗಿದ್ದಾಗಲೇ ರಾಜ್‌ಕುಮಾರ್ ಹಾಗೂ ಅಂಬರೀಶ್ ನಿಧನರಾದರು. ರಾಜ್ ಸಮಾಧಿ ಮಾಡಿದ್ದು ನಾನೇ. ಅಂಬರೀಶ್ ಸಮಾಧಿಗೂ ಜಾಗ ಗುರುತಿಸಿ ಗೌರವ ಕೊಟ್ಟೆ. ವಿಷ್ಣುವರ್ಧನ್ ಸಮಾಧಿ ಸ್ಮಾರಕ ಸಮಸ್ಯೆ ಇನ್ನೂ ಬಗೆಹರಿದಿಲ್ಲ ಎಂದರು ಅಂಬರೀಶ್ ನನ್ನ ಆತ್ಮೀಯ ಸ್ನೇಹಿತ. ಆತನಿಗೆ ನಮನ ಸಲ್ಲಿಸಬೇಕಾಗಿದ್ದು ನನ್ನ ಕರ್ತವ್ಯ. ಅಂಬರೀಶ್ ಬಡ ಕುಟುಂಬದಿಂದ ಸಿನಿಮಾರಂಗದಲ್ಲಿ ಸಾಧನೆ ಮಾಡಿದ ನಮ್ಮ ಸಮಾಜದ ವ್ಯಕ್ತಿ. ಅಂಬರೀಶ್‌ಗೆ ಗೌರವ ನೀಡುವ ಮೂಲಕ ಮಂಡ್ಯ ಜನರಿಗೂ ಗೌರವ ನೀಡಿದ್ದೇವೆ. 2019, 2023ರ ಚುನಾವಣೆಯಲ್ಲಿ ಮಂಡ್ಯ…

Read More

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮಹಿಳೆಯರ ಪ್ರೀಮಿಯರ್ ಲೀಗ್ 2024 ರ ಎಲಿಮಿನೇಟರ್ ಪಂದ್ಯವು ಇಂದು ನಡೆಯುತ್ತಿದೆ. ಈ ಎಲಿಮಿನೇಟರ್ ಪಂದ್ಯದಲ್ಲಿ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಮುಂಬೈ ಇಂಡಿಯನ್ಸ್ ಸ್ಮೃತಿ ಮಂಧಾನಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಗೆಲ್ಲುವ ತಂಡವು ಫೈನಲ್‌ಗೆ ಅರ್ಹತೆ ಪಡೆಯಲ್ಲಿದ್ದು ಅಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಹೀಗಾಗಿ ಉಭಯ ತಂಡಗಳಿಗೂ ಈ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಇನ್ನು ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಮೇಲೆ ಹೇಳಿದಂತೆ ಈ ಪಂದ್ಯ ಉಭಯ ತಂಡಗಳಿಗೂ ವಿಶೇಷ ಎನಿಸಿದೆ. ಒಂದೆಡೆ ಮುಂಬೈ ಇಂಡಿಯನ್ಸ್ ನಾಯಕಿ ಹರ್ಮನ್‌ಪ್ರೀತ್ ಕೌರ್ ಬೆಂಗಳೂರನ್ನು ಸೋಲಿಸಿ ಫೈನಲ್ ಪ್ರವೇಶಿಸುವ ಇರಾದೆಯಲ್ಲಿದ್ದಾರೆ ಅದೇ ಸಮಯದಲ್ಲಿ, ಸ್ಮೃತಿ ಮಂಧಾನ ಕೂಡ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸುವ ಮೂಲಕ ಫೈನಲ್ ಆಡುವ ನಿರೀಕ್ಷೆಯಲ್ಲಿದ್ದಾರೆ. ಅಂತಹ…

Read More

ನಾವು ಪ್ರತಿದಿನ ಸಾಕಷ್ಟು ನೀರು ಸೇವಿಸುವುದರಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಸಹಾಯಕವಾಗುತ್ತದೆ. ಹೆಚ್ಚಿನ ಜನರು ಪ್ರತಿದಿನ 6ರಿಂದ 8 ಗ್ಲಾಸ್ ನೀರನ್ನು ಕುಡಿಯಬೇಕು ಎಂದು ಹೇಳುತ್ತಾರೆ. ಆದರೆ, ಅಷ್ಟು ನೀರು ಕುಡಿಯಲು ಸಾಧ್ಯವಾಗದಿದ್ದರೆ ನೀರಿನಂಶ ಹೆಚ್ಚಿರುವ ಆಹಾರದ ಮೂಲಕ, ಹಣ್ಣುಗಳ ಮೂಲಕ, ಪಾನೀಯಗಳ ಮೂಲಕ ನಮ್ಮ ದೇಹವನ್ನು ಹೈಡ್ರೇಟ್ ಮಾಡಿಕೊಳ್ಳಬಹುದು. ನಾವು ಪ್ರತಿದಿನ ಸಾಕಷ್ಟು ನೀರು ಸೇವಿಸುವುದರಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಸಹಾಯಕವಾಗುತ್ತದೆ. ಹೆಚ್ಚಿನ ಜನರು ಪ್ರತಿದಿನ 6ರಿಂದ 8 ಗ್ಲಾಸ್ ನೀರನ್ನು ಕುಡಿಯಬೇಕು ಎಂದು ಹೇಳುತ್ತಾರೆ. ಆದರೆ, ಅಷ್ಟು ನೀರು ಕುಡಿಯಲು ಸಾಧ್ಯವಾಗದಿದ್ದರೆ ನೀರಿನಂಶ ಹೆಚ್ಚಿರುವ ಆಹಾರದ ಮೂಲಕ, ಹಣ್ಣುಗಳ ಮೂಲಕ, ಪಾನೀಯಗಳ ಮೂಲಕ ನಮ್ಮ ದೇಹವನ್ನು ಹೈಡ್ರೇಟ್ ಮಾಡಿಕೊಳ್ಳಬಹುದು. ಮೊಸರು: ಮೊಸರು ಒಂದು ರಿಫ್ರೆಶ್ ಪ್ರೋಬಯಾಟಿಕ್ ಆಗಿದ್ದು, ಇದು ಬೇಸಿಗೆಯಲ್ಲಿ ಕರುಳಿನ ಆರೋಗ್ಯವನ್ನು ಹೆಚ್ಚಿಸುತ್ತದೆ. ನಿಂಬೆ ಜ್ಯೂಸ್: ಬೇಸಿಗೆಯಲ್ಲಿ ನಿಂಬೆ ಜ್ಯೂಸ್ ಕುಡಿಯುವುದು ಕರುಳಿನ ಆರೋಗ್ಯ ಮತ್ತು ಒಟ್ಟಾರೆ ಆರೋಗ್ಯಕ್ಕೆ ಅತ್ಯಗತ್ಯ. ಕ್ವಿನೋವಾ: ಕ್ವಿನೋವಾ ಬೇಸಿಗೆಯಲ್ಲಿ ಫೈಬರ್‌ನ ಸಮೃದ್ಧ…

Read More

ಹುಬ್ಬಳ್ಳಿ:- ಬೆಳಗಾವಿಯಿಂದ ಸ್ಪರ್ಧಿಸಿ ನೂರಕ್ಕೆ ನೂರು ಗೆಲ್ಲುತ್ತೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವೆ. ಅಮಿತ್ ಶಾ, ಬಿ.ಎಸ್.ಯಡಿಯೂರಪ್ಪ ನನ್ನ ಜೊತೆ ಮಾತಾಡಿದ್ದಾರೆ ಎಂದು ಹೇಳಿದ್ದಾರೆ. ಬೆಳಗಾವಿಯಿಂದ ಸ್ಪರ್ಧಿಸುವಂತೆ ಹೇಳಿದ್ದಾರೆ, ನಾನು ಸ್ಪರ್ಧಿಸುತ್ತೇನೆ. ನಾನು ಈಗಾಗಲೇ ಬೆಳಗಾವಿ ನಾಯಕರ ಜೊತೆ ಮಾತಾಡಿದ್ದೇನೆ. ಬೆಳಗಾವಿಯ ಹಾಲಿ ಸಂಸದೆ ಮಂಗಳಾ ಅಂಗಡಿ ಜತೆ ಮಾತಾಡಿದ್ದೇನೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಜೊತೆಗೂ ಮಾತನಾಡಿದ್ದೇನೆ. ಅಧಿಕೃತವಾಗಿ ಅಭ್ಯರ್ಥಿ ಘೋಷಿಸಿದ ನಂತರ ತಯಾರಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ. ಕೆಎಸ್​​ ಈಶ್ವರಪ್ಪ ಅಸಮಾಧಾನ ವಿಚಾರವಾಗಿ ಮಾತನಾಡಿದ ಅವರು, ವರಿಷ್ಠರು ಸಮಾಧಾನ ಮಾಡುತ್ತಾರೆ. ಯಡಿಯೂರಪ್ಪ ಅವರ ಮೇಲೆ ಸುಮ್ನೆ ಸುಳ್ಳು ಕೇಸ್ ಮಾಡಿದ್ದಾರೆ. ಚುನಾವಣೆ ಹಿನ್ನಲೆ ಸುಳ್ಳು ಕೇಸ್ ದಾಖಲೆ ಮಾಡಿದ್ದಾರೆ. ಅದು ಫಾಲ್ಸ್ ಕೇಸ್. ಯಡಿಯೂರಪ್ಪ ಆ ಕೇಸ್​ನಿಂದ ಹೊರಗೆ ಬರುತ್ತಾರೆ ಎಂದು ಹೇಳಿದ್ದಾರೆ.

Read More

ದಾವಣಗೆರೆ:- ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣಕ್ಕೆ ಮುಂದಾಗಿದೆ ಎಂದು ಮಾಜಿ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬೆಂಗಳೂರು ಅರಮನೆ ಮೈದಾನದ ಒಡೆತನ ವಿಷಯಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಸರ್ವೋಚ್ಛ ನ್ಯಾಯಾಲಯವು ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ಆದೇಶಿಸಿದ್ದರೂ ಕರ್ನಾಟಕ ಸರ್ಕಾರ ಪ್ರಕರಣಕ್ಕೆ ಪುನಃ ಕೈ ಹಾಕುವ ಮೂಲಕ ದ್ವೇಷದ ರಾಜಕಾರಣಕ್ಕೆ ಮುಂದಾಗಿದೆ ಎಂದರು. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜಕಾರಣ ಮಾಡಲಿ, ಅದರೆ ದ್ವೇಷದ ರಾಜಕಾರಣ ಬೇಡ, ಯದುವೀರ್ ಕೃಷ್ಣದತ್ ಒಡೆಯರ್ ಅವರಿಗೆ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಟಿಕೆಟ್ ಸಿಕ್ಕಿರುವ ಕಾರಣ ಕಾಂಗ್ರೆಸ್ ಸರ್ಕಾರ ಇದನ್ನೆಲ್ಲ ಮಾಡುತ್ತಿದೆ, ಅಧಿಕಾರ ಶಾಶ್ವತ ಅಲ್ಲ ಅನ್ನೋದನ್ನು ಸರ್ಕಾರ ಮನಗಾಣಬೇಕು, ಅವರು ಸಹ ಮೊದಲು ವಿರೋಧ ಪಕ್ಷದಲ್ಲಿದ್ದವರು ಎಂದು ಅಶೋಕ ಹೇಳಿದರು. ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ಸಿಗಲಿದೆಯಾ ಅಂತ ಕೇಳಿದ್ದಕ್ಕೆ ಅಶೋಕ, ಅವರೊಂದಿಗೆ ಪಕ್ಷದ ವರಿಷ್ಠರು ಮಾತಾಡಿದ್ದು, ಸ್ಪರ್ಧೆ ಮಾಡಲಿದ್ದಾರೆ ಎಂದು ಖಚಿತ ಸ್ವರದಲ್ಲಿ ಹೇಳಿದ ಅಶೋಕ, ಪತ್ರಕರ್ತರು ಅದೇ ಪ್ರಶ್ನೆಯನ್ನು…

Read More