Author: AIN Author

ಬೆಂಗಳೂರು :- ಕರ್ನಾಟಕದಲ್ಲಿ ಕಡಿವಾಣ ಬೀಳಲಿದೆಯೇ ಎನ್ನುವ ಚರ್ಚೆ ಪ್ರಾರಂಭವಾಗಿದೆ. ಕಬಾಬ್, ಪಾನಿಪುರಿ ಅಸುರಕ್ಷತೆಯನ್ನು ಪರಿಶೀಲಿಸಿ ಈ ತಿಂಗಳ ಅಂತ್ಯದಲ್ಲಿಯೇ ವರದಿ ಪ್ರಕಟಿಸಿ ಕ್ರಮಕ್ಕೆ ಮುಂದಾಗಲಿದೆ. ಪಾನಿಪುರಿ ಹಾಗೂ ಕಬಾಬ್‌ನಲ್ಲೂ ಹಾನಿಕಾರಕ ಅಂಶಗಳು ಇದ್ದರೆ ಕೂಡಲೇ ಕಲರ್ ಬಳಕೆ ನೀಷೇಧ ಹೇರಿ ಕ್ರಮ ವಹಿಸುತ್ತಾರೆ ಎನ್ನಲಾಗಿದೆ. ಇತ್ತೀಚೆಗೆ ರಾಜ್ಯ ಸರ್ಕಾರ ಗೋಬಿ ಮಂಚೂರಿಯನ್ ಮತ್ತು ಕಾಟನ್‌ ಕ್ಯಾಂಡಿಯಲ್ಲಿ ಹಾನಿಕಾರಕ ರೋಡಮೈನ್ ಬಿ ಬಣ್ಣ ಬಳಕೆ ಮಾಡುತ್ತಿರುವುದು ಕಂಡು ಬಂದ ಬೆನ್ನಲ್ಲೇ ನಿಷೇಧಿಸಿತ್ತು. ಅಷ್ಟೇ ಅಲ್ಲದೇ, ಇದನ್ನು ಉಲ್ಲಂಘಿಸಿದರೇ 7 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 10 ಲಕ್ಷ ರೂ.ಗಳವರೆಗೆ ದಂಡ ವಿಧಿಸಲಾಗುತ್ತದೆ ಎಂದು ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದರು. ರೋಡಮೈನ್ ಬಿ ಬಳಕೆಯನ್ನು ದೇಶದ ಆಹಾರ ಸುರಕ್ಷತೆ ನಿಯಂತ್ರಣದ ಅಡಿಯಲ್ಲಿ ಅನುಮತಿಸಲಾಗಿಲ್ಲ. ಇದನ್ನು ಬಳಕೆ ಮಾಡಿದರೇ ಕ್ಯಾನ್ಸರ್‌ನಂತಹ ಭಯಾನಕ ರೋಗಗಳಿಗೆ ತುತ್ತಾಗುವ ಸಾಧ್ಯತೆಯಿದೆ. ರೋಡಮೈನ್ ಬಿ ರಾಸಾಯನಿಕ ಬಣ್ಣವಾಗಿದ್ದು, ಬಟ್ಟೆ, ಕಾಗದ, ಚರ್ಮ, ಮುದ್ರಣ ಮತ್ತು ಪ್ಲಾಸ್ಟಿಕ್‌ಗಳಿಗೆ ಬಣ್ಣ…

Read More

ಮಂಡ್ಯ:- ಸುಮಲತಾ ಅಕ್ಕ ಇದ್ದಂತೆ, ಸಂಘರ್ಷ ಮುಂದುವರಿಸಲ್ಲ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಸುಮಲತಾ ಅಂಬರೀಶ್ ಅವರು ನಮ್ಮ ಅಕ್ಕ ಇದ್ದಂತೆ. ರಾಜಕೀಯದಲ್ಲಿ ಆಗ ಏನೋ ಆಗಿತ್ತು. ಈಗ ನಾವು ಸಂಘರ್ಷ ಮುಂದುವರಿಸಲ್ಲ ಎಂದರು. ಚುನಾವಣೆ ವಿಷಯದಲ್ಲಿ ಒಂದು ಮಾತು ಹೇಳುತ್ತೇನೆ. ಅಂಬರೀಶ್, ನಾವೆಲ್ಲ ಒಟ್ಟಾಗಿ, ಪ್ರೀತಿಯಿಂದ ಬೆಳೆದವರು. ನಮ್ಮ ಪಕ್ಷದಿಂದಲೇ ಅಂಬರೀಶ್ ಪಾರ್ಲಿಮೆಂಟ್ ಪ್ರವೇಶ ಮಾಡಿದ್ದರು. ನಾನು ಸಿಎಂ ಆಗಿದ್ದಾಗಲೇ ರಾಜ್‌ಕುಮಾರ್ ಹಾಗೂ ಅಂಬರೀಶ್ ನಿಧನರಾದರು. ರಾಜ್ ಸಮಾಧಿ ಮಾಡಿದ್ದು ನಾನೇ. ಅಂಬರೀಶ್ ಸಮಾಧಿಗೂ ಜಾಗ ಗುರುತಿಸಿ ಗೌರವ ಕೊಟ್ಟೆ. ವಿಷ್ಣುವರ್ಧನ್ ಸಮಾಧಿ ಸ್ಮಾರಕ ಸಮಸ್ಯೆ ಇನ್ನೂ ಬಗೆಹರಿದಿಲ್ಲ ಎಂದರು ಅಂಬರೀಶ್ ನನ್ನ ಆತ್ಮೀಯ ಸ್ನೇಹಿತ. ಆತನಿಗೆ ನಮನ ಸಲ್ಲಿಸಬೇಕಾಗಿದ್ದು ನನ್ನ ಕರ್ತವ್ಯ. ಅಂಬರೀಶ್ ಬಡ ಕುಟುಂಬದಿಂದ ಸಿನಿಮಾರಂಗದಲ್ಲಿ ಸಾಧನೆ ಮಾಡಿದ ನಮ್ಮ ಸಮಾಜದ ವ್ಯಕ್ತಿ. ಅಂಬರೀಶ್‌ಗೆ ಗೌರವ ನೀಡುವ ಮೂಲಕ ಮಂಡ್ಯ ಜನರಿಗೂ ಗೌರವ ನೀಡಿದ್ದೇವೆ. 2019, 2023ರ ಚುನಾವಣೆಯಲ್ಲಿ ಮಂಡ್ಯ…

Read More

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮಹಿಳೆಯರ ಪ್ರೀಮಿಯರ್ ಲೀಗ್ 2024 ರ ಎಲಿಮಿನೇಟರ್ ಪಂದ್ಯವು ಇಂದು ನಡೆಯುತ್ತಿದೆ. ಈ ಎಲಿಮಿನೇಟರ್ ಪಂದ್ಯದಲ್ಲಿ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಮುಂಬೈ ಇಂಡಿಯನ್ಸ್ ಸ್ಮೃತಿ ಮಂಧಾನಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಗೆಲ್ಲುವ ತಂಡವು ಫೈನಲ್‌ಗೆ ಅರ್ಹತೆ ಪಡೆಯಲ್ಲಿದ್ದು ಅಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಹೀಗಾಗಿ ಉಭಯ ತಂಡಗಳಿಗೂ ಈ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಇನ್ನು ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಮೇಲೆ ಹೇಳಿದಂತೆ ಈ ಪಂದ್ಯ ಉಭಯ ತಂಡಗಳಿಗೂ ವಿಶೇಷ ಎನಿಸಿದೆ. ಒಂದೆಡೆ ಮುಂಬೈ ಇಂಡಿಯನ್ಸ್ ನಾಯಕಿ ಹರ್ಮನ್‌ಪ್ರೀತ್ ಕೌರ್ ಬೆಂಗಳೂರನ್ನು ಸೋಲಿಸಿ ಫೈನಲ್ ಪ್ರವೇಶಿಸುವ ಇರಾದೆಯಲ್ಲಿದ್ದಾರೆ ಅದೇ ಸಮಯದಲ್ಲಿ, ಸ್ಮೃತಿ ಮಂಧಾನ ಕೂಡ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸುವ ಮೂಲಕ ಫೈನಲ್ ಆಡುವ ನಿರೀಕ್ಷೆಯಲ್ಲಿದ್ದಾರೆ. ಅಂತಹ…

Read More

ನಾವು ಪ್ರತಿದಿನ ಸಾಕಷ್ಟು ನೀರು ಸೇವಿಸುವುದರಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಸಹಾಯಕವಾಗುತ್ತದೆ. ಹೆಚ್ಚಿನ ಜನರು ಪ್ರತಿದಿನ 6ರಿಂದ 8 ಗ್ಲಾಸ್ ನೀರನ್ನು ಕುಡಿಯಬೇಕು ಎಂದು ಹೇಳುತ್ತಾರೆ. ಆದರೆ, ಅಷ್ಟು ನೀರು ಕುಡಿಯಲು ಸಾಧ್ಯವಾಗದಿದ್ದರೆ ನೀರಿನಂಶ ಹೆಚ್ಚಿರುವ ಆಹಾರದ ಮೂಲಕ, ಹಣ್ಣುಗಳ ಮೂಲಕ, ಪಾನೀಯಗಳ ಮೂಲಕ ನಮ್ಮ ದೇಹವನ್ನು ಹೈಡ್ರೇಟ್ ಮಾಡಿಕೊಳ್ಳಬಹುದು. ನಾವು ಪ್ರತಿದಿನ ಸಾಕಷ್ಟು ನೀರು ಸೇವಿಸುವುದರಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಸಹಾಯಕವಾಗುತ್ತದೆ. ಹೆಚ್ಚಿನ ಜನರು ಪ್ರತಿದಿನ 6ರಿಂದ 8 ಗ್ಲಾಸ್ ನೀರನ್ನು ಕುಡಿಯಬೇಕು ಎಂದು ಹೇಳುತ್ತಾರೆ. ಆದರೆ, ಅಷ್ಟು ನೀರು ಕುಡಿಯಲು ಸಾಧ್ಯವಾಗದಿದ್ದರೆ ನೀರಿನಂಶ ಹೆಚ್ಚಿರುವ ಆಹಾರದ ಮೂಲಕ, ಹಣ್ಣುಗಳ ಮೂಲಕ, ಪಾನೀಯಗಳ ಮೂಲಕ ನಮ್ಮ ದೇಹವನ್ನು ಹೈಡ್ರೇಟ್ ಮಾಡಿಕೊಳ್ಳಬಹುದು. ಮೊಸರು: ಮೊಸರು ಒಂದು ರಿಫ್ರೆಶ್ ಪ್ರೋಬಯಾಟಿಕ್ ಆಗಿದ್ದು, ಇದು ಬೇಸಿಗೆಯಲ್ಲಿ ಕರುಳಿನ ಆರೋಗ್ಯವನ್ನು ಹೆಚ್ಚಿಸುತ್ತದೆ. ನಿಂಬೆ ಜ್ಯೂಸ್: ಬೇಸಿಗೆಯಲ್ಲಿ ನಿಂಬೆ ಜ್ಯೂಸ್ ಕುಡಿಯುವುದು ಕರುಳಿನ ಆರೋಗ್ಯ ಮತ್ತು ಒಟ್ಟಾರೆ ಆರೋಗ್ಯಕ್ಕೆ ಅತ್ಯಗತ್ಯ. ಕ್ವಿನೋವಾ: ಕ್ವಿನೋವಾ ಬೇಸಿಗೆಯಲ್ಲಿ ಫೈಬರ್‌ನ ಸಮೃದ್ಧ…

Read More

ಹುಬ್ಬಳ್ಳಿ:- ಬೆಳಗಾವಿಯಿಂದ ಸ್ಪರ್ಧಿಸಿ ನೂರಕ್ಕೆ ನೂರು ಗೆಲ್ಲುತ್ತೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವೆ. ಅಮಿತ್ ಶಾ, ಬಿ.ಎಸ್.ಯಡಿಯೂರಪ್ಪ ನನ್ನ ಜೊತೆ ಮಾತಾಡಿದ್ದಾರೆ ಎಂದು ಹೇಳಿದ್ದಾರೆ. ಬೆಳಗಾವಿಯಿಂದ ಸ್ಪರ್ಧಿಸುವಂತೆ ಹೇಳಿದ್ದಾರೆ, ನಾನು ಸ್ಪರ್ಧಿಸುತ್ತೇನೆ. ನಾನು ಈಗಾಗಲೇ ಬೆಳಗಾವಿ ನಾಯಕರ ಜೊತೆ ಮಾತಾಡಿದ್ದೇನೆ. ಬೆಳಗಾವಿಯ ಹಾಲಿ ಸಂಸದೆ ಮಂಗಳಾ ಅಂಗಡಿ ಜತೆ ಮಾತಾಡಿದ್ದೇನೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಜೊತೆಗೂ ಮಾತನಾಡಿದ್ದೇನೆ. ಅಧಿಕೃತವಾಗಿ ಅಭ್ಯರ್ಥಿ ಘೋಷಿಸಿದ ನಂತರ ತಯಾರಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ. ಕೆಎಸ್​​ ಈಶ್ವರಪ್ಪ ಅಸಮಾಧಾನ ವಿಚಾರವಾಗಿ ಮಾತನಾಡಿದ ಅವರು, ವರಿಷ್ಠರು ಸಮಾಧಾನ ಮಾಡುತ್ತಾರೆ. ಯಡಿಯೂರಪ್ಪ ಅವರ ಮೇಲೆ ಸುಮ್ನೆ ಸುಳ್ಳು ಕೇಸ್ ಮಾಡಿದ್ದಾರೆ. ಚುನಾವಣೆ ಹಿನ್ನಲೆ ಸುಳ್ಳು ಕೇಸ್ ದಾಖಲೆ ಮಾಡಿದ್ದಾರೆ. ಅದು ಫಾಲ್ಸ್ ಕೇಸ್. ಯಡಿಯೂರಪ್ಪ ಆ ಕೇಸ್​ನಿಂದ ಹೊರಗೆ ಬರುತ್ತಾರೆ ಎಂದು ಹೇಳಿದ್ದಾರೆ.

Read More

ದಾವಣಗೆರೆ:- ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣಕ್ಕೆ ಮುಂದಾಗಿದೆ ಎಂದು ಮಾಜಿ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬೆಂಗಳೂರು ಅರಮನೆ ಮೈದಾನದ ಒಡೆತನ ವಿಷಯಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಸರ್ವೋಚ್ಛ ನ್ಯಾಯಾಲಯವು ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ಆದೇಶಿಸಿದ್ದರೂ ಕರ್ನಾಟಕ ಸರ್ಕಾರ ಪ್ರಕರಣಕ್ಕೆ ಪುನಃ ಕೈ ಹಾಕುವ ಮೂಲಕ ದ್ವೇಷದ ರಾಜಕಾರಣಕ್ಕೆ ಮುಂದಾಗಿದೆ ಎಂದರು. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜಕಾರಣ ಮಾಡಲಿ, ಅದರೆ ದ್ವೇಷದ ರಾಜಕಾರಣ ಬೇಡ, ಯದುವೀರ್ ಕೃಷ್ಣದತ್ ಒಡೆಯರ್ ಅವರಿಗೆ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಟಿಕೆಟ್ ಸಿಕ್ಕಿರುವ ಕಾರಣ ಕಾಂಗ್ರೆಸ್ ಸರ್ಕಾರ ಇದನ್ನೆಲ್ಲ ಮಾಡುತ್ತಿದೆ, ಅಧಿಕಾರ ಶಾಶ್ವತ ಅಲ್ಲ ಅನ್ನೋದನ್ನು ಸರ್ಕಾರ ಮನಗಾಣಬೇಕು, ಅವರು ಸಹ ಮೊದಲು ವಿರೋಧ ಪಕ್ಷದಲ್ಲಿದ್ದವರು ಎಂದು ಅಶೋಕ ಹೇಳಿದರು. ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ಸಿಗಲಿದೆಯಾ ಅಂತ ಕೇಳಿದ್ದಕ್ಕೆ ಅಶೋಕ, ಅವರೊಂದಿಗೆ ಪಕ್ಷದ ವರಿಷ್ಠರು ಮಾತಾಡಿದ್ದು, ಸ್ಪರ್ಧೆ ಮಾಡಲಿದ್ದಾರೆ ಎಂದು ಖಚಿತ ಸ್ವರದಲ್ಲಿ ಹೇಳಿದ ಅಶೋಕ, ಪತ್ರಕರ್ತರು ಅದೇ ಪ್ರಶ್ನೆಯನ್ನು…

Read More

ಹಾಸನ :- ದಂಪತಿ ಧಾರುಣ ಸಾವನ್ನಪ್ಪಿದ್ದು, ಪತ್ನಿ ಕೊಂದು ಪತಿ ಆತ್ಮಹತ್ಯೆ ಶಂಕೆ ವ್ಯಕ್ತವಾಗಿರುವ ಘಟನೆ ನಗರದ ಕೆ‌ ಹೊಸಕೊಪ್ಪಲು ಬಡಾವಣೆಯಲ್ಲಿ ಜರುಗಿದೆ. ದೇವರಾಜ್(45) ಹಾಗೂ ಮಂಜುಳ(35) ಮೃತ ದುರ್ದೈವಿಗಳು. ಗಾರ್ಮೆಂಟ್ಸ್​ನಲ್ಲಿ ಕೆಲಸ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದ ಜೋಡಿ, ಮೂರು ತಿಂಗಳ ಹಿಂದೆ ವಾಪಸ್ ತವರಿಗೆ ಮರಳಿದ್ದರು. ಹಾಸನದಲ್ಲೂ ಗಾರ್ಮೆಂಟ್ಸ್​ನಲ್ಲೆ ಕೆಲಸ ಮಾಡುವ ಉದ್ದೇಶದಿಂದ ಫ್ಯಾಕ್ಟರಿ ಸಮೀಪವೇ ಮನೆ ಹುಡುಕಿ ಬಾಡಿಗೆಗೆ ಮನೆ ಪಡೆದಿದ್ದರು. ಹೀಗಿರುವಾಗ ಕಳೆದ ಸೋಮವಾರದಿಂದ ದಂಪತಿ ದಿಢೀರ್ ನಾಪತ್ತೆಯಾಗಿದ್ದಾರೆ. ಫೋನ್ ಮಾಡಿದರೂ ಕೂಡ ಸ್ವಿಚ್ ಆಫ್ ಆಗಿದೆ. ಎಲ್ಲೋ ಹೋಗಿರಬೇಕು ಎಂದುಕೊಂಡಿದ್ದವರಿಗೆ ನಿನ್ನೆ(ಮಾ.14) ಮನೆಯೊಳಗಿಂದ ದುರ್ವಾಸನೆ ಬರಲು ಶುರುವಾದಾಗ ಅನುಮಾನ ಮೂಡಿದೆ. ಕೂಡಲೇ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಬಂದ ಬಡಾವಣೆ ಠಾಣೆ ಪೊಲೀಸರು ಬಾಗಿಲು ಮುರಿದು ಒಳ ಹೋದಾಗ ಭಯಾನಕ ದೃಶ್ಯ ಬಯಲಾಗಿದೆ. ಪತಿ ದೇವರಾಜ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರೆ, ಪತ್ನಿ ಮಂಚದ ಮೇಲೆ ಹೆಣವಾಗಿದ್ದಾರೆ. ಕುಡಿತದ ಚಟಕ್ಕೆ ದಾಸನಾಗಿದ್ದ ದೇವರಾಜ್ ಪದೆ ಪದೆ…

Read More

ಮಂಡ್ಯ:- ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವುದು ಖಚಿತ ಎನ್ನಲಾಗಿದ್ದು, ಮಾರ್ಚ್ 25ರಂದು ಅಧಿಕೃತವಾಗಿ ಘೋಷಣೆಯಾಗಲಿದೆ. ಹೌದು…ನಿಖಿಲ್ ಕಣಕ್ಕಿಳಿಯುವ ಬಗ್ಗೆ ಪರೋಕ್ಷವಾಗಿ ಎಚ್​​ಡಿ ಕುಮಾರಸ್ವಾಮಿ ಖಚಿತಪಡಿಸಿದ್ದಾರೆ. ಅಭ್ಯರ್ಥಿ ಆಯ್ಕೆ ಸಂಬಂಧ ಇಂದು ಮಂಡ್ಯದಲ್ಲಿ ಕುಮಾರಸ್ವಾಮಿ, ಜೆಡಿಎಸ್ ನಾಯರು, ಮುಖಂಡರ ಜೊತೆ ಸಭೆ ಮಾಡಿದ್ದು, ಸಭೆಯಲ್ಲಿ ಎಲ್ಲಾ ನಾಯಕರು ಕುಮಾರಸ್ವಾಮಿ ಇಲ್ಲ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಈ ವೇಳೆ ಮಾತನಾಡಿರುವ ಕುಮಾರಸ್ವಾಮಿ, ​ನಿಮಗೆ ನಿಖಿಲ್​ನನ್ನು ಒಪ್ಪಿಸಲು ಮುಂದಾಗುತ್ತೇನೆ. ನಿಮ್ಮ ಆಸೆಗೆ ನಾವು ಭಂಗ ತರಲ್ಲ. ಪುತ್ರ ನಿಖಿಲ್ ಕುಮಾರಸ್ವಾಮಿಗೂ ಒಂದು ಮಾತು ಹೇಳುತ್ತೇನೆ. ನಿಮ್ಮ ಭಾವನೆಗಳಿಗೆ ಯಾವುದೇ ಕಾರಣಕ್ಕೂ ನಿರಾಸೆಯಾಗಲ್ಲ. ನಿಮ್ಮ ಆಸೆಯ ಪ್ರಕಾರ ಅದನ್ನು ನೆರವೇರಿಸಿಕೊಳ್ಳುತ್ತೇನೆ. ಮಾರ್ಚ್ 21ಕ್ಕೆ ನನಗೆ ಆಪರೇಷನ್ ಇದೆ. ಆದ್ದರಿಂದ ಮಾರ್ಚ್ 25ರಂದು ಮಂಡ್ಯಕ್ಕೆ ಬಂದು ಅಭ್ಯರ್ಥಿ ಘೋಷಿಸುತ್ತೇನೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಪರೋಕ್ಷವಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನೇ ಮಂಡ್ಯದಿಂದ ಕಣಕ್ಕಿಳಿಸುತ್ತೇನೆ ಎಂದು ಹೇಳಿದರು. ಇದರೊಂದಿಗೆ ಮಂಡ್ಯ ಜೆಡಿಎಸ್​ ಅಭ್ಯರ್ಥಿ ಯಾರು…

Read More

ಧಾರವಾಡ: “ಯಡಿಯೂರಪ್ಪ ಅವರ ಮೇಲೆ ಪೋಕ್ಸೋ ಕೇಸ್ ದಾಖಲಾತಿ ವಿಚಾರ ಗೊತ್ತಿದೆ. ಅವರ ಮೇಲೆ ನನಗೆ ಅಪಾರವಾದ ನಂಬಿಕೆ‌ಯಿದೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, “ಯಡಿಯೂರಪ್ಪ ಅವರ ಮೇಲೆ ಪೋಕ್ಸೋ ಕೇಸ್ ದಾಖಲಾತಿ ವಿಚಾರ ಗೊತ್ತಿದೆ. ಅವರ ಮೇಲೆ ನನಗೆ ಅಪಾರವಾದ ನಂಬಿಕೆ‌ಯಿದೆ. ಈ ವಿಷಯದಲ್ಲಿ ಸಂತ್ರಸ್ತೆ ತಾಯಿ ದೂರು ದಾಖಲು ಮಾಡಿದ್ದಾರೆ. ಸ್ವಲ್ಪ ಕಾದು ನೋಡೋಣ. ನಾವು ಏನೂ ಮಾತನಾಡಲು ಆಗಲ್ಲ” ಎಂದು ಹೇಳಿದರು. “ಯಾವುದೇ ಸರ್ಕಾರ ಇದ್ದರೂ ದೂರು ಕೊಟ್ಟರೆ, ದಾಖಲು ಮಾಡಿಕೊಳ್ಳಲೇಬೇಕು. ಹೀಗಾಗಿ ದೂರು ದಾಖಲಾಗಿದೆ. ತನಿಖೆ ಬಳಿಕ ಎಲ್ಲಾ ಗೊತ್ತಾಗಲಿದೆ” ಎಂದರು. ಕಾಂಗ್ರೆಸ್ ಟಿಕೆಟ್ ಘೋಷಣೆ ವಿಳಂಬ ವಿಚಾರಕ್ಕೆ ಮಾತನಾಡಿದ ಅವರು, “ಇನ್ನೆರಡು ದಿನಗಳಲ್ಲಿ ನಮ್ಮ‌ ಅಭ್ಯರ್ಥಿಗಳ ಹೆಸರು ಅನೌನ್ಸ್ ಆಗುತ್ತದೆ. ಎರಡು ಮೂರು ದಿನಗಳಲ್ಲಿ ಟಿಕೆಟ್ ಗೊಂದಲ ಮುಗಿಯುತ್ತದೆ” ಎಂದು ಹೇಳಿದರು. https://ainlivenews.com/bigg-update-rameswaram-cafe-bomb-blast-case-nia-arrests-accused-who-was-in-jail/ ಸಂಸದ ಜೋಶಿ ಅವರ ಧಾರವಾಡದಲ್ಲಿ ಮೂರು ಲಕ್ಷ ಲೀಡ್​ನಿಂದ ಗೆಲುವು ಖಚಿತ ಹೇಳಿಕೆ ವಿಚಾರದ ಕುರಿತು…

Read More

ದಾವಣಗೆರೆ : ಟಿಕೆಟ್ ನೀಡಿದ ಬಳಿಕ ಏನೇ ಗೊಂದಲ ಇದ್ದರೂ ಮೋದಿ ಅವರನ್ನ ಪ್ರಧಾನಿಯನ್ನಾಗಿ ಮಾಡುವುದೇ ನಮ್ಮ ಗುರಿಯಾಗಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದರು. ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಟಿಕೆಟ್ ನೀಡಿದ ಬಳಿಕ ಏನೇ ಗೊಂದಲ ಇದ್ದರೂ ಮೋದಿ ಅವರನ್ನ ಪ್ರಧಾನಿಯನ್ನಾಗಿ ಮಾಡುವುದೇ ನಮ್ಮ ಗುರಿಯಾಗಿದೆ. ಟಿಕೆಟ್ ಘೋಷಣೆಯಾದ ಬಳಿಕ ಪ್ರತಿಯೊಂದು ಕಡೆ ಈ ರೀತಿಯ ಕೆಲ ಗೊಂದಲಗಳು ಇರುತ್ತವೆ. ಕಾಂಗ್ರೆಸ್​ನಲ್ಲೂ ಟಿಕೆಟ್ ಘೋಷಣೆಯಾದ ಬಳಿಕ ಈ ರೀತಿಯ ಗೊಂದಲ ಎಲ್ಲ ಪಕ್ಷದಲ್ಲಿ ಸರ್ವೇ ಸಾಮಾನ್ಯ. ಕೆಲ ದಿನಗಳ ಬಳಿಕ ಎಲ್ಲವೂ ಸುಧಾರಣೆಯಾಗುತ್ತದೆ. ಇನ್ನು ನಮ್ಮ ಪಕ್ಷದಲ್ಲಿ ಯಾರೂ ಕೂಡ ರೆಬಲ್ ಆಗಿ ನಿಲ್ಲುವ ಪರಿಸ್ಥಿತಿ ಇಲ್ಲ ಎಂದು ಹೇಳಿದರು. ಕಾಂಗ್ರೆಸ್​ಗೆ ಭಿಕ್ಷೆ ಬೇಡುವ ಪರಿಸ್ಥಿತಿ ಬಂದಿದೆ. ಗತಿಗೆಟ್ಟ ಪಾರ್ಟಿಯಾಗಿ ಮಾರ್ಪಟ್ಟಿದೆ. https://ainlivenews.com/bigg-update-rameswaram-cafe-bomb-blast-case-nia-arrests-accused-who-was-in-jail/ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನ ಮಂತ್ರಿ ಮಾಡಲು ಇಚ್ಛಿಸಿ ಇಡೀ ದೇಶದಲ್ಲಿ 400ಕ್ಕೂ ಹೆಚ್ಚು ಸೀಟು ಗೆಲ್ಲುವ ಸಲುವಾಗಿ, ದಾವಣಗೆರೆಗೆ ಗಾಯಿತ್ರಿ ಸಿದ್ದೇಶ್ವರ್ ಅವರಿಗೆ…

Read More