Author: AIN Author

ನವದೆಹಲಿ: ದೇಶದಲ್ಲಿ ಅಲ್ಪಸಂಖ್ಯಾತರು ಅಥವಾ ಯಾವುದೇ ವ್ಯಕ್ತಿ ಭಯಪಡುವ ಅಗತ್ಯವಿಲ್ಲ. ಯಾರೊಬ್ಬರ ಪೌರತ್ವವನ್ನು ಕಸಿದುಕೊಳ್ಳಲು ಸಿಎಎಯಲ್ಲಿ ಯಾವುದೇ ಅವಕಾಶವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಈಗಾಗಲೇ ಅನುಷ್ಠಾನಕ್ಕೆ ಬಂದಿರುವ ಕಾಯ್ದೆಯನ್ನು ಯಾವುದೇ ಕಾರಣಕ್ಕೂ ವಾಪಸ್ ಪಡೆಯುವುದಿಲ್ಲ ಎಂದು ಅವರು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ. ಖಾಸಗಿ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ನಮ್ಮ ದೇಶದಲ್ಲಿ ಭಾರತೀಯ ಪೌರತ್ವವನ್ನು ಖಚಿತಪಡಿಸಿಕೊಳ್ಳುವುದು ನಮ್ಮ ಸಾರ್ವಭೌಮ ನಿರ್ಧಾರ. ನಾವು ಅದರಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ಸಿಎಎ ಅನುಷ್ಠಾನ ಮಾಡಲು ರಾಜ್ಯಗಳು ನಿರಾಕರಿಸಲು ಸಾಧ್ಯವಿಲ್ಲ. ಪೌರತ್ವ ನೀಡುವ ಅಧಿಕಾರ ಕೇಂದ್ರ ಸರ್ಕಾರ ಮಾತ್ರ ಇದೆ ಎಂದು ಅವರು ಹೇಳಿದರು. https://ainlivenews.com/allegation-of-sexual-assault-on-minor-girl/ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಹಿಂದೂಗಳು, ಬೌದ್ಧರು, ಜೈನರು, ಸಿಖ್ಖರು, ಕ್ರಿಶ್ಚಿಯನ್ನರು ಮತ್ತು ಪಾರ್ಸಿ ನಿರಾಶ್ರಿತರಿಗೆ ಹಕ್ಕುಗಳು ಮತ್ತು ಪೌರತ್ವವನ್ನು ನೀಡುವುದು ಮಾತ್ರ ಸಿಎಎ ಉದ್ದೇಶ. ಸಿಎಎ ಮೂಲಕ ಬಿಜೆಪಿ ಹೊಸ ವೋಟ್ ಬ್ಯಾಂಕ್ ಸೃಷ್ಟಿಸುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಪ್ರತಿಪಕ್ಷಗಳಿಗೆ…

Read More

ವಿಶ್ವದ ಟಾಪ್ 10 ಶ್ರೀಮಂತರ ಪಟ್ಟಿಯಲ್ಲಿ ಭಾರೀ ಬದಲಾವಣೆಗಳಾಗಿವೆ. ವಿಶ್ವದ ನಂಬರ್ 1 ಸಿರಿವಂತ ಅನ್ನೋ ಪಟ್ಟ ಗಿಟ್ಟಿಸಿಕೊಂಡಿದ್ದ ಟೆಕ್ ದೈತ್ಯ ಎಲಾನ್ ಮಸ್ಕ್‌, ಇದೀಗ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. 2024ರಲ್ಲಿ ಕೇವಲ ಮೂರು ತಿಂಗಳ ಅವಧಿಯಲ್ಲೇ ಎಲಾನ್ ಮಸ್ಕ್‌ 40 ಬಿಲಿಯನ್ ಅಮೆರಿಕನ್ ಡಾಲರ್ ಹಣ ನಷ್ಟ ಮಾಡಿಕೊಂಡಿದ್ಧಾರೆ. ಬ್ಲೂಮ್‌ಬರ್ಗ್‌ ಬಿಲಿಯನೇರ್ ಇಂಡೆಕ್ಸ್‌ ಶನಿವಾರ ಮಾರ್ಚ್ 9 ರಂದು ತನ್ನ ವರದಿ ಹಾಗೂ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ್ದು, ಈ ವರದಿಯಲ್ಲಿ ಎಲಾನ್ ಮಸ್ಕ್‌ ಅವರು ವಿಶ್ವದ ನಂಬರ್ 1 ಶ್ರೀಮಂತ ಪಟ್ಟದಿಂದ ಮೂರನೇ ಸ್ಥಾನಕ್ಕೆ ಕುಸಿದಿರೋದಾಗಿ ಹೇಳಿದೆ. ಎಲಾನ್ ಮಸ್ಕ್‌ ಅವರ ಒಟ್ಟು ಆಸ್ತಿ ಮೌಲ್ಯ 189 ಬಿಲಿಯನ್ ಅಮೆರಿಕನ್ ಡಾಲರ್‌ಗೆ ಬಂದು ನಿಂತಿದೆ. ಸದ್ಯ ವಿಶ್ವದ ನಂಬರ್ ಒನ್ ಶ್ರೀಮಂತ ಅನ್ನೋ ಹೆಗ್ಗಳಿಕೆಗೆ ಲೂಯಿ ವಿಟಾನ್ ಸಂಸ್ಥೆಯ ಮಾಲೀಕ ಬರ್ನಾರ್ಡ್ ಅರ್ನಾಲ್ಟ್ ಪಾತ್ರರಾಗಿದ್ದಾರೆ. ಇವರ ಒಟ್ಟು ಆಸ್ತಿ ಮೌಲ್ಯ 201 ಬಿಲಿಯನ್ ಅಮೆರಿಕನ್ ಡಾಲರ್‌ಗೆ ಏರಿಕೆ ಕಂಡಿದೆ.…

Read More

ನವದೆಹಲಿ: ಲೋಕಸಭಾ ಚುನಾವಣೆ ದಿನಾಂಕ ಹತ್ತಿರ ಬರುತ್ತಿದ್ದಂತೆ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಪ್ರತಿ ಲೀಟರ್‌ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯಲ್ಲಿ 2 ರೂ. ಕಡಿತಗೊಳಿಸಿದೆ. ಪರಿಷ್ಕೃತ ದರ ಮಾರ್ಚ್‌ 15 ಬೆಳಗ್ಗೆ 6 ಗಂಟೆಯಿಂದ ಜಾರಿಯಾಗಲಿದೆ. ಬೆಲೆ ಇಳಿಕೆಯಿಂದ 58 ಲಕ್ಷ ಸರಕು ವಾಹನ, 6 ಕೋಟಿ ಕಾರುಗಳು ಮತ್ತು 27 ಕೋಟಿ ದ್ವಿಚಕ್ರ ವಾಹನಗಳ ನಿರ್ವಹಣಾ ವೆಚ್ಚವನ್ನು ಕಡಿಮೆ ಮಾಡುತ್ತದೆ ಎಂದು ಪೆಟ್ರೋಲಿಯಂ ಸಚಿವಾಲಯ ತಿಳಿಸಿದೆ. ಮಹಿಳಾ ದಿನಾಚರಣೆಯಂದು ಕೇಂದ್ರ ಸರ್ಕಾರ ಗೃಹ ಬಳಕೆಯ ಎಲ್‌ಪಿಜಿ ದರವನ್ನು ಇಳಿಕೆ ಮಾಡಿತ್ತು. https://twitter.com/PetroleumMin/status/1768302596626718888?ref_src=twsrc%5Etfw%7Ctwcamp%5Etweetembed%7Ctwterm%5E1768302596626718888%7Ctwgr%5Ef2197533546e1e6d61eb844000d801ffbd7f29d6%7Ctwcon%5Es1_&ref_url=https%3A%2F%2Fpublictv.in%2Fgovt-slashes-petrol-diesel-prices-by-rs-2-per-litre-ahead-of-ls-polls%2F ಲಕ್ನೋದಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 96.57 ರೂ.ನಿಂದ 94.65ರೂ.ಗೆ ಇಳಿದಿದೆ. ಆಗ್ರಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.20ರ ರೂ.ನಿಂದ 94.35ರೂ.ಗೆ ಇಳಿದಿದೆ. ಡೀಸೆಲ್ 89.37 ರೂ.ನಿಂದ 87.41 ರೂ.ಗೆ ಇಳಿದಿದೆ. ಮೀರತ್​ನಲ್ಲಿ ಪೆಟ್ರೋಲ್ ಬೆಲೆ 96.31 ರೂ.ನಿಂದ 94.43 ರೂ.ಗೆ ಇಳಿದಿದೆ. ಕೋಲ್ಕತ್ತಾದಲ್ಲಿ ಇಂದು ಪೆಟ್ರೋಲ್ ದರ 106.03ರೂ.ನಿಂದ 103.94 ರೂ.ಗೆ ಇಳಿಕೆಯಾಗಿದ್ದು, ಡೀಸೆಲ್…

Read More

ಇಂದಿಗೂ ಹೆಣ್ಣು ಮಕ್ಕಳಿಗೆ ಸಣ್ಣ ವಯಸ್ಸಿನಲ್ಲಿಯೇ ಕಿವಿ ಚುಚ್ಚಿ ವಿವಿಧ ರೀತಿಯ ಕಿವಿ ಓಲೆಗಳನ್ನು ಹಾಕಲಾಗುತ್ತದೆ. ಕಿವಿ ಚುಚ್ಚಿಕೊಳ್ಳದಿದ್ದಲ್ಲಿ ಅಥವಾ ಹೆಣ್ಣು ಮಕ್ಕಳು ಓಲೆಗಳನ್ನು ಹಾಕಿಕೊಳ್ಳದಿದ್ದಲ್ಲಿ ಅವರ ಅಂದ ಅಪೂರ್ಣವೆನಿಸುತ್ತದೆ. ಇದನ್ನು ಹಾಕಿಕೊಳ್ಳುವುದರಿಂದ ಮಹಿಳೆಯರ ಸೌಂದರ್ಯ ಮತ್ತಷ್ಟು ಹೆಚ್ಚಾಗುತ್ತದೆ, ಆದರೆ ಕಿವಿ ಚುಚ್ಚುವ ಸಂಪ್ರದಾಯದ ಹಿಂದೆ ಅನೇಕ ಧಾರ್ಮಿಕ ಮತ್ತು ವೈಜ್ಞಾನಿಕ ಕಾರಣಗಳಿವೆ ಎಂದು ನಿಮಗೆ ತಿಳಿದಿದೆಯೇ? ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ. ಹಿಂದೂ ಧರ್ಮದಲ್ಲಿ, ಒಬ್ಬ ವ್ಯಕ್ತಿಯ ಜನನದಿಂದ ಸಾವಿನ ವರೆಗೆ 16 ಆಚರಣೆಗಳನ್ನು ನಡೆಸಲಾಗುತ್ತದೆ. ಈ 16 ಸಂಸ್ಕಾರಗಳಲ್ಲಿ ಕರ್ಣವೇದ ಸಂಸ್ಕಾರವೂ ಒಂದು. ಬಾಲಕ ಮತ್ತು ಬಾಲಕಿಯರಿಬ್ಬರಿಗೂ ಕರ್ಣವೇದ ಸಂಸ್ಕಾರವನ್ನು ನಡೆಸಲಾಗುತ್ತದೆ. ಕರ್ಣವೇದ/ ಕಿವಿ ಚುಚ್ಚುವುದು 9ನೇ ಸಂಸ್ಕಾರದಲ್ಲಿರುವ ವಿಧಿಯಾಗಿದೆ. ಇದನ್ನು ಮಗುವಿಗೆ ಅನ್ನ ಪ್ರಾಶನ ಮಾಡಿದ ನಂತರ ಮಾಡಬೇಕು. ಪ್ರಾಚೀನ ಕಾಲದಲ್ಲಿ, ಶುಭ ಸಮಯದಲ್ಲಿ ಮಕ್ಕಳ ಕಿವಿಗಳಲ್ಲಿ ಮಂತ್ರಗಳನ್ನು ಪಠಿಸುವ ಮೂಲಕ ಕರ್ಣವೇದ ಸಂಸ್ಕಾರವನ್ನು ನಡೆಸಲಾಗುತ್ತಿತ್ತು. ಬಳಿಕ ಮೊದಲು ಹುಡುಗರ ಬಲ ಕಿವಿಯನ್ನು ಮತ್ತು ನಂತರ…

Read More

ಬೆಂಗಳೂರು:- ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ FIR ವಿಚಾರವಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಕರಣದ ಬಗ್ಗೆ ಮಾಧ್ಯಮದಲ್ಲಿ ನೋಡಿದ್ದೇನೆ. ಯಡಿಯೂರಪ್ಪ ಒಬ್ಬ ಹಿರಿಯ ರಾಜಕಾರಣಿ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ಅವರು ಯಾರೋ ಮಹಿಳೆ ದೂರು ಕೊಟ್ಟಿದ್ದಾರೆ. ಕಾನೂನು ಪ್ರಕಾರ ಪೊಲೀಸರು ತನಿಖೆ ಮಾಡ್ತಿದ್ದಾರೆ. ಎಲ್ಲವೂ ಕಾನೂನು ಪ್ರಕಾರವೇ ನಡೆಯಲಿದೆ ಎಂದರು. https://ainlivenews.com/allegation-of-sexual-assault-on-minor-girl/ ನಿನ್ನೆ ರಾತ್ರಿ ಒಬ್ಬ ಮಹಿಳೆ ದೂರು ಕೊಟ್ಟಿದ್ದಾರೆ. ಅದನ್ನು ಪರಿಶೀಲಿಸಿ ಕೇಸ್ ರಿಜಿಸ್ಟರ್ ಮಾಡಿದ್ದಾರೆ. ಪೊಲೀಸರು ಅದರ ಬಗ್ಗೆ ತನಿಖೆ ಮಾಡ್ತಿದ್ದಾರೆ. ತನಿಖೆ ಆಗುವ ವರೆಗೂ ಯಾವುದೇ ವಿಷಯ ತಿಳಿಸೋಕೆ ಆಗಲ್ಲ. ಇದು ಒಬ್ಬ ಮಾಜಿ ಸಿಎಂ ವಿಷಯಕ್ಕೆ ಸಂಬಂಧಿಸಿದ್ದು, ಇದು ಬಹಳ ಸೂಕ್ಷ್ಮ ವಿಷಯ. ಮಹಿಳೆಗೆ ರಕ್ಷಣೆ ಅಗತ್ಯ ಬಿದ್ದರೆ ಕೊಡ್ತೀವಿ. ವಶಕ್ಕೆ ಸಂಬಂಧಿಸಿದಂತೆ ತನಿಖೆಯ ಮೇಲೆ ನಿರ್ಧಾರ ಮಾಡ್ತೀವಿ.…

Read More

ಚಿಕ್ಕಮಗಳೂರು:- ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ರಾಜ್ಯದಲ್ಲಿ ಹೊಂದಾಣಿಕೆ ರಾಜಕಾರಣ ಆರೋಪ ಕೇಳಿಬರುತ್ತಿದೆ. ಸಿದ್ದರಾಮಯ್ಯ ವಿರುದ್ಧ ಹೇಳಿಕೆಗಳನ್ನು ನೀಡುವ ನಾಯಕರಿಗೆ ಬಿಜೆಪಿಯಲ್ಲಿ ಟಿಕೆಟ್ ಮಿಸ್ ಆಗುತ್ತಿದೆ ಎಂಬುದು ಕಾರ್ಯಕರ್ತರ, ಮುಖಂಡರ ಆರೋಪವಾಗಿದೆ. ಇದೇ ಆರೋಪವನ್ನು ಸಿಟಿ ರವಿ ಅವರ ಬೆಂಬಲಿಗರೂ ಮಾಡಿದ್ದಾರೆ. ಟಿಕೆಟ್ ಘೋಷಣೆಗೂ ಮುನ್ನ, ಕೇಂದ್ರ ಸಚಿವೆಯೂ ಆಗಿರುವ ಚಿಕ್ಕಮಳೂರು-ಉಡುಪಿ ಕ್ಷೇತ್ರದ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಸಿಟಿ ರವಿ ಬೆಂಬಲಿಗರು ಸಿಡಿದೆದ್ದಿದ್ದರು. ಈ ಬಾರಿ ಶೋಭಾಗೆ ಟಿಕೆಟ್ ನೀಡದಂತೆ ಒತ್ತಾಯಿಸಿದ್ದರು. ಟ್ರೋಲ್​ಗಳನ್ನು ಕೂಡ ಮಾಡಿದ್ದರು. ಗೋ ಬ್ಯಾಕ್ ಅಭಿಯಾನವನ್ನೂ ನಡೆಸಿದ್ದರು. ಇದೀಗ ಸಿಟಿ ರವಿ ಅವರಿಗೆ ಟಿಕೆಟ್ ಮಿಸ್ ಆದ ಬೆನ್ನಲ್ಲೇ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ವಾಟ್ಸ್​ಆ್ಯಪ್, ಸಾಮಾಜಿಕ ಜಾಲದಲ್ಲಿ ಸಿಟಿ ರವಿ ಪರ ಅಭಿಯಾನ ನಡೆಸುತ್ತಿರುವ ಅಭಿಮಾನಿಗಳು, ಮೌನಿ ಕೋಟಗೆ ಟಿಕೆಟ್ ಕೊಟ್ಟು ಕಾರ್ಯಕರ್ತರನ್ನು ಸೈಲೆಂಟ್ ಮಾಡಿದರು. ಎಲ್ಲಿದೆ ನ್ಯಾಯ?ನಿಷ್ಠಾವಂತ ಕಾರ್ಯಕರ್ತರ ಕಗ್ಗೊಲೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಸಿದ್ದರಾಮಯ್ಯಗೆ ಯಾರೆಲ್ಲ ಬೈಯುತ್ತಾರೋ…

Read More

IPL ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಎಲ್ಲಾ ಪ್ರಾಂಚೈಸಿಗಳು ಅಭ್ಯಾಸದಲ್ಲಿ ತೊಡಗಿದೆ. ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಉದ್ಘಾಟನಾ ಪಂದ್ಯ ಆಡಲಿರುವ ಕನ್ನಡಿಗರ ನೆಚ್ಚಿನ ತಂಡವಾದ ಆರ್‌ಸಿಬಿ ಕೂಡ ಗುರುವಾರದಿಂದ ಬೆಂಗಳೂರಿನಲ್ಲಿ ತನ್ನ ಅಭ್ಯಾಸ ಶಿಬಿರವನ್ನು ಆರಂಭಿಸಿದೆ ಆದರೆ ತಂಡದ ಸ್ಟಾರ್​ ಆಟಗಾರ ವಿರಾಟ್‌ ಕೊಹ್ಲಿ(virat kohli) ಇನ್ನೂ ಕೂಡ ತಂಡ ಸೇರಿಲ್ಲ. ಅವರ ಅನುಪಸ್ಥಿತಿಯಲ್ಲೇ ತಂಡ ಅಭ್ಯಾಸ ನಡೆಸುತ್ತಿದೆ. ಬಿಸಿಸಿಐ ಮೂಲಗಳ ಮಾಹಿತಿ ಪ್ರಕಾರ ಕೊಹ್ಲಿ ತಂಡ ಸೇರಲು ಇನ್ನೂ ಕೆಲವು ದಿನಗಳಾಗುತ್ತವೆ ಎಂದು ತಿಳಿದುಬಂದಿದೆ. ತಂಡದ ನಾಯಕ ಫಾಫ್​ ಡು ಪ್ಲೆಸಿಸ್‌, ಅಲ್ಜಾರಿ ಜೋಸೆಫ್, ದಿನೇಶ್​ ಕಾರ್ತಿಕ್, ಗ್ಲೆನ್ ಮ್ಯಾಕ್ಸ್​ವೆಲ್​​ ಸೇರಿ ಉಳಿದ ಎಲ್ಲ ಆಟಗಾರರು ಅಭ್ಯಾಸ ನಿರತರಾಗಿದ್ದಾರೆ. ಆದರೆ ಕೊಹ್ಲಿ ಗೈರು ಎದ್ದು ಕಾಣುತ್ತಿತ್ತು. ಇಂಗ್ಲೆಂಡ್​ ವಿರುದ್ಧದ ತವರಿನ ಟೆಸ್ಟ್​ ಸರಣಿಯಿಂದ ವೈಯಕ್ತಿಕ ಕಾರಣ ನೀಡಿ ಸರಣಿಯಿಂದ ಹಿಂದೆ ಸರಿದಿದ್ದ ವಿರಾಟ್​ ಕೊಹ್ಲಿ, ತಮ್ಮ ಪತ್ನಿ ಅನುಷ್ಕಾ ಶರ್ಮ ಅವರ ಹೆರಿಗೆಯ ಕಾರಣದಿಂದ ಲಂಡನ್​ಗೆ ತೆರೆಳಿದ್ದರು.…

Read More

ಹಾಸನ: ಬರಗಾಲದ ನಡುವೆ ಜಿಲ್ಲೆಯ ಜನರಿಗೆ ಕುಡಿಯುವ ನೀರಿನ ಅಭಾವ ಎದುರಾಗಿದ್ದರೂ ಸರ್ಕಾರ ಹೇಮಾವತಿ ಜಲಾಶಯದಿಂದ ತುಮಕೂರಿಗೆ ೨ ಟಿಎಂಸಿ ನೀರು ಹರಿಸುವ ನಿರ್ಧಾರ ಮಾಡಿರುವುದು ರೈತರ ನಡುವೆ ಭೇದವೆಣಿಸುವ ಕ್ರಮವಾಗಿದೆ ಎಂದು ಆರೋಪಿಸಿ ಹಾಸನ ಹಾಗೂ ಚನ್ನರಾಯಪಟ್ಟಣದಲ್ಲಿ ಜೆಡಿಎಸ್ ಮತ್ತು ರೈತ ಸಂಘದ ಮುಖಂಡರು ಪ್ರತ್ಯೇಕ ಪ್ರತಿಭಟನೆ ನಡೆಸಿದರು. ಅಲ್ಲದೇ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಸರ್ಕಾರದ ವಿರುದ್ಧವೇ ಅಸಮಾಧಾನ ಹೊರ ಹಾಕಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಚನ್ನರಾಯಪಟ್ಟಣದ ಹೇಮಾವತಿ ನಾಲಾ ವಿಭಾಗದ ಮುಖ್ಯ ಇಂಜಿನಿಯರಿAಗ್ ಕಚೇರಿ ಎದುರು ರೈತ ಸಂಘದಿAದ ಕೆಲಕಾಲ ಧರಣಿ ನಡೆಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು. ತುಮಕೂರಿಗೆ ನೀರು ಹರಿಸುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿದರು. ಮತ್ತೊಂದೆಡೆ ತಮ್ಮ ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಕಾರ್ಯಕರ್ತರು ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಎ.ಗೋಪಾಲಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಬಳಿಕ ಹಾಸನ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲೆಯ ರೈತರÀ ಹಿತ ಕಾಯುವಂತೆ ಮನವಿ ಸಲ್ಲಿಸಿದರು. ಚನ್ನರಾಯಪಟ್ಟಣ ತಾಲ್ಲೂಕಿನ, ಆಲಗೊಂಡನಹಳ್ಳಿ…

Read More

ನವದೆಹಲಿ: ಮಾರಣಾಂತಿಕ ದಾಳಿ ನಡೆಸುವ ಪಿಟ್‍ಬುಲ್, ಅಮೆರಿಕನ್ ಬುಲ್‍ಡಾಗ್, ರಾಟ್‍ವೀಲರ್ ಸೇರಿದಂತೆ 23 ನಾಯಿ ತಳಿಗಳನ್ನು ಅಪಾಯಕಾರಿ  ಎಂದು ಕೇಂದ್ರ ಸರ್ಕಾರ ಗುರುತಿಸಿದೆ. ಈ ವಿದೇಶಿ ನಾಯಿ ತಳಿಗಳ ಸಂತಾನೋತ್ಪತ್ತಿ, ಸಾಕುವುದು, ಮಾರಾಟ ಮಾಡುವುದನ್ನು ನಿಷೇಧಿಸುವಂತೆ ಎಲ್ಲಾ ರಾಜ್ಯಗಳಿಗೂ ಕೇಂದ್ರ ನಿರ್ದೇಶನ ನೀಡಿದೆ. ಕೇಂದ್ರ ಪಶುಸಂಗೋಪನೆ ಇಲಾಖೆಯ ಜಂಟಿ ಕಾರ್ಯದರ್ಶಿ ಓ.ಪಿ ಚೌಧರಿ ಅವರು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈ ಬಗ್ಗೆ ಆದೇಶ ರವಾನಿಸಿದ್ದಾರೆ. ಆದೇಶದಲ್ಲಿ ಜನರ ಜೀವಕ್ಕೆ ಅಪಾಯ ತಂದೊಡ್ಡುವ ಪಿಟ್‍ಬುಲ್, ಅಮೆರಿಕನ್ ಬುಲ್‍ಡಾಗ್ ಸೇರಿ ವಿವಿಧ ತಳಿಯ ವಿದೇಶಿ ನಾಯಿಗಳನ್ನು ಸಾಕಲು ಅನುಮತಿ ನೀಡದಂತೆ ಇಲಾಖೆ ಸೂಚಿಸಿದೆ. ಜೊತೆಗೆ ಅಂತಹ ತಳಿಗಳ ನಾಯಿಗಳನ್ನು ಆಮದು ಮಾಡಿಕೊಳ್ಳುವುದಕ್ಕೂ ನಿಷೇಧ ಹೇರಲಾಗಿದೆ. ಈಗ ಗುರುತಿಸಿರುವ ನಾಯಿಗಳನ್ನು ವಿವಿಧ ಸ್ಪರ್ಧೆಗೆ ಬಳಸುವುದನ್ನೂ ನಿಷೇಧಿಸಬೇಕು ಎಂದು ಪ್ರಾಣಿ ದಯಾ ಸಂಘ (ಪೆಟಾ) ಮನವಿ ಸಲ್ಲಿಸಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರಕ್ಕೆ ಬಂದಿದೆ. https://ainlivenews.com/shooting-attack-on-the-owner-of-the-gold-shop-the-condition-of-both-is-critical/ ದೇಶದಲ್ಲಿ ಹೆಚ್ಚಿನ ಪೆಟ್‍ಶಾಪ್‍ಗಳು ಮತ್ತು ಬ್ರೀಡರ್‌ಗಳು ಕಾನೂನುಬಾಹಿರವಾಗಿ…

Read More

ಕೋಲ್ಕತಾ:- ಹಣೆಗೆ ಪೆಟ್ಟಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯ ಸರ್ಕಾರ ನಡೆಸುತ್ತಿರುವ ಎಸ್‌ಎಸ್‌ಕೆಎಂ ಆಸ್ಪತ್ರೆಯ ನಿರ್ದೇಶಕ ಡಾ.ಮಣಿಮೋಯ್ ಬಂದೋಪಾಧ್ಯಾಯ ಈ ಮಾಹಿತಿ ನೀಡಿದ್ದಾರೆ. ಮನೆಯಲ್ಲಿ ಬಿದ್ದಿದ್ದರಿಂದ ಮುಖ್ಯಮಂತ್ರಿ ಬ್ಯಾನರ್ಜಿ ಅವರ ಹಣೆಗೆ ಗಂಭೀರ ಗಾಯವಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದು, ವೈದ್ಯರು ಮೂರು ಹೊಲಿಗೆಗಳನ್ನು ಹಾಕಿ ಚಿಕಿತ್ಸೆ ನೀಡಿದ್ದಾರೆ. ಗಾಯಕ್ಕೆ ಚಿಕಿತ್ಸೆ ನೀಡಿದ ನಂತರ ಮಮತಾ ಬ್ಯಾನರ್ಜಿ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು. ವೈದ್ಯರು ಅವರ ಹಣೆಗೆ ಮೂರು ಹೊಲಿಗೆ ಹಾಕಿದ್ದು, ಮೂಗಿಗೆ ಒಂದು ಹೊಲಿಗೆ ಹಾಕಲಾಗಿದ್ದು, ಅಲ್ಲಿಂದಲೂ ಕೂಡ ರಕ್ತ ಬರುತ್ತಿತ್ತು ಎಂದು ಆಸ್ಪತ್ರೆಯ ನಿರ್ದೇಶಕರು ತಿಳಿಸಿದ್ದಾರೆ. ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಿ ಸೇರಿದಂತೆ ಹಲವು ನಾಯಕರು ಹಾರೈಸಿದ್ದಾರೆ.

Read More