Author: AIN Author

ಒಡಿಶಾ:- ವಿಹಾರ್ ಪೊಲೀಸ್ ಠಾಣಾ ವ್ಯಾಪ್ತಿಯ ತಾರಿಣಿ ನಗರದ ಕೊಳೆಗೇರಿಯಲ್ಲಿ ಘಟನೆ ಜರುಗಿದೆ. ಪತ್ನಿ ಮದ್ಯವ್ಯಸನಿಯಾಗಿದ್ದು, ಮಂಗಳವಾರ ಮಧ್ಯಾಹ್ನ ಕುಡಿದು ಬಂದು ಆತನನ್ನು ನಿಂದಿಸಲು ಆರಂಭಿಸಿದ್ದಾಳೆ. ಇದರಿಂದ ಸಿಟ್ಟಿಗೆದ್ದ ವ್ಯಕ್ತಿ ಆಕೆಯನ್ನು ಮರದ ಹಲಗೆಯಿಂದ ಹೊಡೆದು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಶವವನ್ನು ಕೋಣೆಯೊಂದರಲ್ಲಿ ಬಚ್ಚಿಟ್ಟು ಬೀಗ ಹಾಕಿದ್ದರು. ಗುರುವಾರ, ಅವರ ಹಿರಿಯ ಮಗ ಮನೆಗೆ ಬಂದಾಗ ಮಾಹಿತಿ ಸಿಕ್ಕಿತ್ತು. ಬಳಿಕ ಪೊಲೀಸರಿಗೆ ಈ ವಿಷಯ ತಿಳಿಸಿದ್ದ. ವ್ಯಕ್ತಿಯನ್ನು ಬಂಧಿಸಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.

Read More

ಮಂಗಳೂರು:- 2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್​ ಪಡೆದು ಸ್ಪರ್ಧೆ ಮಾಡುವ ವಿಚಾರವಾಗಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ ಪುತ್ತೂರಿನಲ್ಲಿ ಮಾತನಾಡಿದ ಅವರು, ಚುನಾವಣೆ ಸ್ಪರ್ಧೆಗೆ ಅವಕಾಶ ಸಿಕ್ಕರೆ ವಿರೋಧ ಇಲ್ಲ. ಹಾಗೆಂದು ಚುನಾವಣೆ ಟಿಕೆಟ್ ಕೇಳಿಕೊಂಡು ಹೋಗುವುದಿಲ್ಲ ಎಂದು ಹೇಳಿದ್ದಾರೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ದೊರೆಯುವ ಸಾಧ್ಯತೆಗಳ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಒಂದು ವೇಳೆ ಅಂಥ ಅವಕಾಶ ಬಂದರೆ ಸ್ಪರ್ಧಿಸಲು ವಿರೋಧ ಇಲ್ಲ. ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸುವ ವಿಚಾರ ಸದ್ಯದ ಮಟ್ಟಿಗಂತೂ ವದಂತಿಯಷ್ಟೆ ಎಂದು ಹೇಳಿದ್ದಾರೆ 2014, 2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲೂ ಇಂತಹ ವದಂತಿ ಹರಡಿತ್ತು. ಈಗ 2024ರಲ್ಲೂ ಅಂಥದ್ದೊಂದು ವದಂತಿ ಹರಡಿದೆ. ರಾಜಕೀಯ ಆಸಕ್ತಿಯ ಪ್ರಶ್ನೆ ಬೇರೆ, ಅದಕ್ಕೆ ನನ್ನ ವಿರೋಧವಿಲ್ಲ. ಆದರೆ ಸೀಟ್ ಕೇಳಿಕೊಂಡು ಹೋಗುವುದಿಲ್ಲ. ಅಂಥ ಅವಕಾಶ ಬಂದರೆ ಯಾವುದೇ ವಿರೋಧ ಇಲ್ಲ. ಹತ್ತು ವರ್ಷಗಳಿಂದ ಕಾಪಾಡಿಕೊಂಡು ಬಂದಿರೋದನ್ನು…

Read More

ನವದೆಹಲಿ:- ಇಂದಿನಿಂದ ಪೇಟಿಎಂಗೆ ನಿರ್ಬಂಧ ಇರಲಿದೆ. ನಿರ್ಬಂಧದಿಂದಾಗಿ ಪೇಟಿಎಂ ಸಂಕಷ್ಟಕ್ಕೆ ಸಿಲುಕಿದ್ದು, ಸಾವಿರಾರು ಕೋಟಿ ರೂ.ನಷ್ಟ ಅನುಭವಿಸಿದೆ. ಪೇಟಿಎಂ ಆಯಪ್‌ ಹೊಂದಿರುವವರಿಗೆ ಯಾವೆಲ್ಲ ಸೇವೆ ಲಭ್ಯವಿರುವುದಿಲ್ಲ? ಯಾವೆಲ್ಲ ಸೌಲಭ್ಯಗಳು ಸಿಗಲಿವೆ ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ. ಸೇವಿಂಗ್ಸ್‌ ಖಾತೆಯಲ್ಲಿರುವ ಹಣದ ಗತಿ ಏನು? ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ ಖಾತೆದಾರರು ತಮ್ಮ ಖಾತೆಯಲ್ಲಿ ಹಣ ಉಳಿದಿದ್ದರೆ ಮಾರ್ಚ್‌ 15ರ ನಂತರವೂ ಹಲವು ರೀತಿಯಲ್ಲಿ ಆ ಹಣವನ್ನು ಬಳಸಬಹುದಾಗಿದೆ. ಫಾಸ್ಟ್‌ಟ್ಯಾಗ್‌, ನ್ಯಾಷನಲ್‌ ಕಾಮನ್‌ ಮೊಬಿಲಿಟಿ ಕಾರ್ಡ್‌ (NCMC) ಖಾತೆಗಳ ವ್ಯಾಲೆಟ್‌ಗಳ ಮೂಲಕ ಸೇವಿಂಗ್ಸ್‌ ಖಾತೆಯಲ್ಲಿ ಉಳಿದಿರುವ ಹಣವನ್ನು ವ್ಯಯಿಸಬಹುದಾಗಿದೆ. ನಿಮ್ಮ ಎಲ್ಲ ಪ್ರಶ್ನೆಗಳಿಗೆ ಇಲ್ಲಿವೆ ಉತ್ತರಗಳು ಗ್ರಾಹಕರು ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ ಖಾತೆಗಳಿಗೆ ಹಣ ಜಮೆ ಮಾಡಲು ಆಗಲ್ಲ. ಆದರೆ, ಮಾರ್ಚ್‌ 15ರ ನಂತರವೂ ವಿತ್‌ಡ್ರಾ ಅಥವಾ ಟ್ರಾನ್ಸ್‌ಫರ್‌ ಮಾಡಬಹುದು ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ ಖಾತೆಗಳಿಗೆ ಸ್ಯಾಲರಿ ಕ್ರೆಡಿಟ್‌ ಆಗುವುದಿಲ್ಲ, ಸರ್ಕಾರದ ಯೋಜನೆಯ ಹಣ (DBT) ಜಮೆಯಾಗುವುದಿಲ್ಲ. ಆದರೆ, ಕ್ಯಾಶ್‌ಬ್ಯಾಕ್‌, ರಿಫಂಡ್‌ ಆಗಲಿದೆ. ಮಾರ್ಚ್‌…

Read More

ನವದೆಹಲಿ:- ನಾಳೆಯಿಂದ ನಾಲ್ಕು ದಿನ ದೇಶದ ಹಲವು ರಾಜ್ಯಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕೇರಳ, ಮಾಹೆ, ರಾಯಲಸೀಮಾ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಬಿಸಿ ಮತ್ತು ಆರ್ದ್ರ ವಾತಾವರಣ ಇರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರಾಖಂಡದಲ್ಲಿ, ಉತ್ತರಾಖಂಡದ ಉತ್ತರಕಾಶಿ, ಚಮೋಲಿ, ಪಿಥೋರಗಢ, ಬಾಗೇಶ್ವರ್ ಮತ್ತು ರುದ್ರಪ್ರಯಾಗ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಅತಿ ಕಡಿಮೆ ಮಳೆ, ಹಿಮ ಬೀಳುವ ಮುನ್ಸೂಚನೆ ಇದೆ. ರಾಜ್ಯದ ಉತ್ತರಕಾಶಿ, ಚಮೋಲಿ, ಪಿಥೋರಗಢ, ಬಾಗೇಶ್ವರ ಮತ್ತು ರುದ್ರಪ್ರಯಾಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಮಿಂಚು ಸಹಿತ ಗುಡುಗು ಸಹಿತ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜಾರ್ಖಂಡ್, ವಿದರ್ಭ, ಛತ್ತೀಸ್‌ಗಢ ಮತ್ತು ಪೂರ್ವ ಮಧ್ಯಪ್ರದೇಶದಲ್ಲಿ ಮಾರ್ಚ್ 16 ರಿಂದ 19 ರವರೆಗೆ ಮಳೆಯಾಗಲಿದೆ.

Read More

ಬೆಂಗಳೂರು:-ಹಾವೇರಿ ಟಿಕೆಟ್ ವಿಚಾರಕ್ಕೆ ಬಿಎಸ್‍ವೈಯನ್ನೂ ದೂರಬಾರದು ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಹಾವೇರಿ ಲೋಕಸಭಾ ಟಿಕೆಟ್ ವಿಚಾರಕ್ಕೆ ಯಡಿಯೂರಪ್ಪ ಅವರನ್ನು ದೂರಬಾರದು. ಕೇಂದ್ರದ ವರಿಷ್ಠರು ಎಲ್ಲಾ ಸರ್ವೆ ವರದಿಗಳನ್ನು ಪಡೆದು, ನೀನು ನಿಲ್ಲಲೇಬೇಕು ಎಂದು ಸೂಚನೆ ಕೊಟ್ಟಿದ್ದಾರೆ. ಈ ವೇಳೆ ಪಾರ್ಲಿಮೆಂಟರಿ ಬೋರ್ಡ್‍ನಲ್ಲೂ ನನ್ನ ಹೆಸರು ಕ್ಲೀಯರ್ ಆಗಿರಲಿಲ್ಲ. ಅಮಿತ್ ಶಾ ಹಾಗೂ ನಡ್ಡಾ ಸಭೆಯಲ್ಲಿ ತೀರ್ಮಾನ ಆಗಿತ್ತು. ಪ್ರಧಾನ ಮಂತ್ರಿ ಏನು ತೀರ್ಮಾನ ಮಾಡ್ತಾರೆ ಅದರಂತೆ ನೀನು ಒಪ್ಪಿಕೊಳ್ಳಬೇಕು ಎಂದು ಹೇಳಿದ್ದರು. ಅದರಂತೆ ನಾನು ಇವಾಗ ಚುನಾವಣೆ ಸ್ಪರ್ಧೆಗೆ ನಿರ್ಧಾರ ಮಾಡಿದ್ದೇನೆ ಎಂದಿದ್ದಾರೆ. ನನ್ನ ಆರೋಗ್ಯ ಖಂಡಿತವಾಗಿಯೂ ಅಷ್ಟೊಂದು ಚೆನ್ನಾಗಿಲ್ಲ. ಜವಬ್ದಾರಿ ಬಂದಾಗ ಅದನ್ನು ನಿಭಾಯಿಸುವ ಶಕ್ತಿ ನನಗಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Read More

ಬೆಂಗಳೂರು:-ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದ್ದು, ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿ FIR ದಾಖಲಾಗಿದೆ. ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ. ಸಂತ್ರಸ್ತೆ ನೀಡಿದ ದೂರಿನ ಅನ್ವಯ ಸದಾಶಿವನಗರ ಠಾಣಾ ಪೊಲೀಸರು ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ 354 (A) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಫೆಬ್ರವರಿ 2 ರಂದು ಸಹಾಯ ಕೇಳಲು ಹೋಗಿದ್ದಾಗ ತನಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಸಂತ್ರಸ್ತೆಯು ಎಫ್​ಐಆರ್​ನಲ್ಲಿ ಉಲ್ಲೇಖಿಸಿದ್ದಾಳೆ ಎಂದು ತಿಳಿದುಬಂದಿದೆ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಬಿಜೆಪಿಯು ಬಿರುಸಿನ ಚಟುವಟಿಕೆಗಳನ್ನು ನಡೆಸುತ್ತಿದೆ. ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಓಡಾಡ ನಡೆಸುತ್ತಿರುವ ಯಡಿಯೂರಪ್ಪ ಅವರು ಚುನಾವಣಾ ಪ್ರಚಾರಕ್ಕೆ ಅಣಿಯಾಗುತ್ತಿದ್ದಾರೆ. ಈ ನಡುವೆ ಪೋಕ್ಸೋ ಪ್ರಕರಣ ದಾಖಲಾಗಿರುವುದು ಯಡಿಯೂರಪ್ಪ ಅವರು ಸಂಕಷ್ಟಕ್ಕೆ ಸಿಲುಕಿಸಿದಂತಾಗಿದೆ.

Read More

ಕರಾವಳಿ, ಮಲೆನಾಡು, ಅರೆಮಲೆನಾಡು ಪ್ರಾಂತ್ಯಕ್ಕೆ ಸೀಮಿತಗೊಂಡಿದ್ದ ಅಡಕೆ ಕೃಷಿ ಕಳೆದೆರಡು ವರ್ಷಗಳಿಂದ ವ್ಯಾಪಕ ಪ್ರಮಾಣದಲ್ಲಿ ವಿಸ್ತರಣೆಗೊಳ್ಳುತ್ತಿದ್ದು, ಅಡಕೆ ಮಾರುಕಟ್ಟೆಯ ಭವಿಷ್ಯ ಮಂಕಾಗಿದೆ.ಅಡಕೆ ಕೃಷಿಗೆ ತಗುಲಿರುವ ಹಳದಿ ರೋಗ ಇಡೀ ಬೆಳೆಯ ಬುಡವನ್ನೇ ಅಲ್ಲಾಡಿಸಿದೆ. ರೋಗದಿಂದ ಉಂಟಾದ ತಲ್ಲಣ, ಬೆಳೆ ವಿಸ್ತರಣೆಯಿಂದ ಉಂಟಾದ ಸಂಚಲನ ಮತ್ತು ಕಳ್ಳ ನುಸುಳುವಿಕೆ ಅವಾಂತರಗಳು ನಿರಂತರವಾಗಿ ಬೆಳೆಯ ಮೇಲೆ ತೂಗುಕತ್ತಿಯಾಗಿ ನೇತಾಡುತ್ತಿದ್ದು, ಅಡಕೆ ಕ್ಷೇತ್ರದ ಹಿತರಕ್ಷಣೆಗಾಗಿ ಸರಕಾರ ಸಮಗ್ರ ನೀತಿ ರೂಪಿಸಬೇಕೆಂಬ ಒತ್ತಾಯ ಕೇಳಿ ಬರುತ್ತಿದೆ. ಅಡಕೆ ಕೃಷಿಗೆ ತಗುಲಿರುವ ಹಳದಿ ರೋಗ ಇಡೀ ಬೆಳೆಯ ಬುಡವನ್ನೇ ಅಲ್ಲಾಡಿಸಿದೆ. ರೋಗದಿಂದ ಉಂಟಾದ ತಲ್ಲಣ, ಬೆಳೆ ವಿಸ್ತರಣೆಯಿಂದ ಉಂಟಾದ ಸಂಚಲನ ಮತ್ತು ಕಳ್ಳ ನುಸುಳುವಿಕೆ ಅವಾಂತರಗಳು ನಿರಂತರವಾಗಿ ಬೆಳೆಯ ಮೇಲೆ ತೂಗುಕತ್ತಿಯಾಗಿ ನೇತಾಡುತ್ತಿದ್ದು, ಕಳೆದ ವರ್ಷ ಹಳೆ ಅಡಕೆಯ ಜತೆಯಲ್ಲೇ ಸಾಗುತ್ತಿದ್ದ ಹೊಸ ಅಡಕೆ ಧಾರಣೆ ಈಗ 360 ರೂ.ನ ಆಸುಪಾಸಿನಲ್ಲಿದೆ. ಕೆಲ ದಿನಗಳಿಂದ ಧಾರಣೆ ಸ್ಥಿರವಾಗಿದ್ದರೂ, ಏರು ಹಾದಿಯ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಬೆಳೆಗಾರರಲ್ಲಿಲ್ಲ. ಆದರೂ…

Read More

ಬೆಂಗಳೂರು:- ಪಕ್ಷ ವಿರೋಧಿ, ಗಲಭೆಕೋರರಿಗೆ ಟಿಕೆಟ್ ಸಿಗಲ್ಲ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಕೆಲವು ಪ್ರಾಯೋಜಿತ ಗುಂಪು ತಮಗೆ ಟಿಕೆಟ್ ಬೇಕೆಂಬ ಕಾರಣಕ್ಕೆ ಏನೇನೋ ಮಾಡಿತ್ತು. ಆದರೆ ಅವರು ಯಶಸ್ವಿಯಾಗಿಲ್ಲ. ಅವರಿಂದಲೂ ಟಿಕೆಟ್ ತೆಗೆದುಕೊಂಡು ಬರಲು ಆಗಲಿಲ್ಲ ಎಂದು ಹೇಳುವ ಮೂಲಕ ಸಿಟಿ ರವಿಗೆ ಟಾಂಗ್ ಕೊಟ್ಟಿದ್ದಾರೆ. ಉಡುಪಿ- ಚಿಕ್ಕಮಗಳೂರಲ್ಲಿ ಬಹಳ ದೊಡ್ಡ ಅಭಿವೃದ್ಧಿ ಕೆಲಸ ಆಗಿದೆ. ಆದರೆ ಅದನ್ನು ಪರಿಗಣಿಸದೇ ಕೆಲವರು ವಿರೋಧ ಮಾಡಿದ್ದರು. ಪಕ್ಷ ವಿರೋಧಿ, ಗಲಭೆ, ಅವಮಾನ ಮಾಡಿದವರಿಗೆ ಟಿಕೆಟ್ ಸಿಗುವುದಿಲ್ಲ ಎನ್ನುವುದು ನನ್ನಿಂದ ಸಾಬೀತಾಗಿದೆ. ಇನ್ನಾದರೂ ಇವರು ಪಾಠ ಕಲಿಯಲಿ. ಬಿಜೆಪಿ ಒಂದು ಶಿಸ್ತಿನ ಪಕ್ಷ ಎಂದು ವಿರೋಧಿಗಳಿಗೆ ತಿರುಗೇಟು ನೀಡಿದರು. ಪಕ್ಷಕ್ಕೆ ಅವಮಾನ ಮಾಡಿದವರಿಗೆ ಮಣೆ ಹಾಕುವುದಿಲ್ಲ ಎಂದು ವರಿಷ್ಠರು ತೋರಿಸಿಕೊಟಿದ್ದಾರೆ. ನಾನು ಬೆಂಗಳೂರಲ್ಲಿ ಶಾಸಕರಾಗಿ ಅಭಿವೃದ್ಧಿ ಕಾರ್ಯ ಮಾಡಿದ್ದೇನೆ. ನಾನು ಯಶವಂತಪುರ ಶಾಸಕಿಯಾಗಿ, ಸಚಿವೆಯಾಗಿ ಕೆಲಸ ಮಾಡಿದ್ದೆ. ಸೋಮಶೇಖರ್ ಅವರನ್ನು ಗೆಲ್ಲಿಸಿದ್ದೆವು. ಆದರೆ ಅವರು ಮೋಸ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು

Read More

ಹದಿನೇಳನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಮಿಂಚುವ ಮೂಲಕ ಸಿಎಸ್ ಕೆ ಆಲ್ ರೌಂಡರ್ ಶಿವಂ ದುಬೆ, ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸ್ಥಾನ ಪಡೆಯುವ ಸಾಧ್ಯತೆಗಳಿವೆ ಎಂದು ಖ್ಯಾತ ಕ್ರಿಕೆಟ್ ವಿವರಣೆಕಾರ ಆಕಾಶ್ ಚೋಪ್ರಾ ಭವಿಷ್ಯ ನುಡಿದಿದ್ದಾರೆ. ಹದಿನೇಳನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಮಿಂಚುವ ಮೂಲಕ ಸಿಎಸ್ ಕೆ ಆಲ್ ರೌಂಡರ್ ಶಿವಂ ದುಬೆ, ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸ್ಥಾನ ಪಡೆಯುವ ಸಾಧ್ಯತೆಗಳಿವೆ ಎಂದು ಖ್ಯಾತ ಕ್ರಿಕೆಟ್ ವಿವರಣೆಕಾರ ಆಕಾಶ್ ಚೋಪ್ರಾ ಭವಿಷ್ಯ ನುಡಿದಿದ್ದಾರೆ. “ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲು ಶಿವಂ ದುಬೆಗೆ ಐಪಿಎಲ್ ಟೂರ್ನಿ ಉತ್ತಮ ಅವಕಾಶವಾಗಿದೆ ಎಂಬುದು ನನ್ನ ಭಾವನೆ. ಆತ ಮೊದಲು ಟೀಮ್ ಇಂಡಿಯಾ ಪರ ಚುಟುಕು ಕ್ರಿಕೆಟ್ ನಲ್ಲಿ ರನ್ ಗಳಿಸಿದ್ದಾನೆ. ನಂತರ ರಣಜಿ ಟ್ರೋಫಿ ಟೂರ್ನಿಯಲ್ಲೂ ಗಮನ ಸೆಳೆದಿದ್ದಾರೆ. ಅಲ್ಲದೆ ವಿಕೆಟ್ ಪಡೆದು ಮಿಂಚಿದ್ದಾನೆ. ಆದ್ದರಿಂದ ಆತನಿಗೆ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸ್ಥಾನ ಪಡೆಯಲು ದೊಡ್ಡ ಅವಕಾಶವಿದೆ,” ಎಂದು ಹೇಳಿದ್ದಾರೆ. ಅಫಘಾನಿಸ್ತಾನ ಸರಣಿಯಲ್ಲಿ ಮಿಂಚಿದ ನಂತರ…

Read More

ಬೆಂಗಳೂರು:- ರಾಜಕೀಯಕ್ಕೆ ಬಂದಾಗ ಜಾಸ್ತಿ ಟೀಕೆ ಎದುರಿಸಬೇಕು ಎಂದು ಮೈಸೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಹೇಳಿದ್ದಾರೆ. ಚುನಾವಣೆಯಲ್ಲಿ ಮೈಸೂರು ಕ್ಷೇತ್ರದ ಅಭಿವೃದ್ಧಿಗಾಗಿ ಕೆಲಸ ಮಾಡುವ ಜವಾಬ್ದಾರಿ ಇದೆ. 9 ವರ್ಷ ಮೈಸೂರಿನ ಅರಮನೆ ಜವಾಬ್ದಾರಿ ಹೊತ್ತಿದ್ದೇನೆ. ಎಲ್ಲಾ ಸಾರ್ವಜನಿಕ ಜೀವನದಲ್ಲಿ ಭಾಗಿಯಾಗಿದ್ದೇನೆ. ನಾನು ಒಂದು ವರ್ಷದ ಹಿಂದೆಯೇ ತೀರ್ಮಾನ ಮಾಡಿದ್ದೆ. ವೈಯಕ್ತಿಕವಾಗಿ ಕೂಡ ಅಭಿವೃದ್ಧಿ ಮಾಡಬಹುದು. ಆದರೆ ಉತ್ತಮ ಸರ್ಕಾರ ಇದ್ದರೆ ಮತ್ತಷ್ಟು ಅಭಿವೃದ್ಧಿಗೆ ಅನುಕೂಲ ಆಗಲಿದೆ ಎಂದರು. ಮಹಾರಾಜರು ಎಸಿಯಿಂದ ರೋಡ್‌ಗೆ ಬರಲಿ ಎಂಬ ಸಂಸದ ಪ್ರತಾಪ ಸಿಂಹ ಹೇಳಿಕೆಗೆ ಪ್ರತಿಕ್ರಿಯಿಸಿ, ಎಲ್ಲವನ್ನು ಜೀವನದಲ್ಲಿ ಸ್ವೀಕರಿಸಬೇಕು. ಅರಮನೆಯಲ್ಲಿದ್ದರೆ ಮಾತು ಕೇಳೋದಿಲ್ಲ ಅಂತಲ್ಲ. ಸಾರ್ವಜನಿಕ ಜೀವನದಲ್ಲಿ ಎಲ್ಲವನ್ನೂ ಎದುರಿಸಬೇಕು. ಜನರು ಅವಕಾಶ ಕೊಟ್ಟರೆ ಮೈಸೂರು-ಕೊಡಗು ಅಭಿವೃದ್ಧಿ ಮಾಡುವೆ ಎಂದು ಹೇಳಿದರು.

Read More