Author: AIN Author

ಬಾಗಲಕೋಟೆ: ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ೪ ಬಾರಿ ಸ್ಪರ್ಧಿಸಿ ಗೆಲುವು ಸಾಧಿಸಿದ ಪಿ ಸಿ ಗದ್ದಿಗೌಡರ ಇಗಾ ಮತ್ತೆ ೨೦೨೪ ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ  ಬಿಜೆಪಿ ಟಿಕೆಟ್ ತಮ್ಮ ಮಡಿಲಿಗೆರಿಸಿಕೊಂಡಿದ್ದಾರೆ. ನಾಲ್ಕು ಬಾರಿ ಗೆದ್ದು ಬೀಗಿದ ಪಿ ಸಿ ಗದ್ದಿಗೌಡರ ಐದನೇ ಬಾರಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ ಈ ಬಾರಿ ಮತದಾರ ಯಾರ ಕೈ ಹಿಡಿಲಿದ್ದಾರೆ ಎಂಬುದು ಕಾದು ನೋಡಬೇಕಾಗಿದೆ   ಪ್ರಕಾಶ ಕುಂಬಾರ

Read More

ಬಾಗಲಕೋಟೆ: ತಲೆಸುಡುವ ಬಿಸಿಲ ನಡುವೆ ಕೃಷ್ಣಾ ನದಿ ನೀರು ಗಣನೀಯ ಪ್ರಮಾಣ ಖಾಲಿಯಾಗುತ್ತಿದೆ.  ಗ್ರಾಮೀಣ ಭಾಗದ ಕೆರೆ, ಬಾವಿ, ಕೊಳವೆಬಾವಿಗಳು ಬತ್ತುತ್ತಿವೆ. ಹೀಗಾಗಿ ಹಳ್ಳಿಗಳಲ್ಲಿ ನೀರಿಗಾಗಿ ಪರದಾಟ ಪ್ರಾರಂಭವಾಗಿದೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ತಾಲೂಕಿನ ಯಲ್ಲಟ್ಟಿ ಗ್ರಾಮದ ವಾರ್ಡ ೫ ರ ಸೀಮಿ ಲಕ್ಕವ್ವ ಗುಡಿ ಬಳಿಯಲ್ಲಿ ಕಳೆದ ಸುಮಾರು 30 ವರ್ಷಗಳಿಂದ ವಸತಿ ಜನರು ವಾಸವಾಗಿದ್ದಾರೆ, ಕೃಷ್ಣಾ ನದಿಯ ನೀರನ್ನು ನಂಬಿಕೊಂಡು ಬದುಕುತ್ತಿರುವ ಜನರ ಪರಿಸ್ಥಿತಿ ಈಗ ಸಂಪೂರ್ಣವಾಗಿದೆ  ಬೀಗಡಾಸಿದೆ. ನಮಗೆ ನೀರು ಕೊಡಿ ನಮ್ಮನ್ನು ಬದುಕಿಸಿ ಎಂದು ಜಿಲ್ಲಾಡಳಿತಕ್ಕೆ ನಾರಿ ಮುನಿಗಳು ಬೇಡಿಕೊಳ್ಳುತ್ತಿದ್ದಾರೆ. ಸುಮಾರು ವರ್ಷಗಳಿಂದ ಬೋರ್ವೆಲ್ ಮತ್ತು ಇನ್ನಿತರ ನೀರಿನ ವ್ಯವಸ್ಥೆ ಮಾಡದೆ ಇರುವ ಅಧಿಕಾರಿಗಳ ವಿರುದ್ಧ ನಾರಿ ಮುನಿಗಳು ಹರಿಹರಿದ್ದಾರೆ. https://youtu.be/YALjyJyV0RI ಚುನಾವಣೆ ಬಂದಾಗ ನಮ್ಮ ಮತ ಬೇಕು ಆದರೆ ನಮಗೆ ಕುಡಿಯಲು ನೀರು ಕೊಡುವವರು ಯಾರು ಇಲ್ಲದಂತಾಗಿದೆ. ಕೂಡಲೆ ಅಧಿಕಾರಿಗಳು ಎಚ್ಚೆತ್ತುಕೊಂಡು ನಮಗೆ ನೀರು ಪೂರೈಕೆ ಮಾಡದೇ ಇದ್ದರೆ ಖಾಲಿ ಕೂಡ…

Read More

ಬಳ್ಳಾರಿ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತ ಬಳಿಕ ನನ್ನನ್ನು ಅಜ್ಞಾತವಾಸಕ್ಕೆ ಕಳುಹಿಸಿ ದಂತಾಗಿತ್ತು. ಇದೀಗ ಲೋಕಸಭೆ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಿಂದ ಪುನಃ ನನಗೆ ಬಿಜೆಪಿ ಟಿಕೆಟ್ ನೀಡುವ ಮೂಲಕ ಅಜ್ಞಾತವಾಸದಿಂದ ಹೊರಬಂದಂತಾಗಿದೆ ಎಂದು ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಬಿ.ಶ್ರೀರಾಮುಲು ತಿಳಿಸಿದರು. ನಗರದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 35-40 ವರ್ಷಗಳಿಂದ ಜನಸೇವೆ ಮಾಡುತ್ತಾ ಬಂದಿದ್ದೇನೆ. ಅದನ್ನು ಪರಿಗಣಿಸಿ ಬಿಜೆಪಿ ವರಿಷ್ಠರು ಲೋಕಸಭೆ ಚುನಾವಣೆಯ ಟಿಕೆಟ್ ನೀಡಿದ್ದಾರೆ. ಇದು ಕಳೆದ ವಿಧಾನಸಭೆ ಚುನಾವಣೆ ಸೋಲಿನ ಅಜ್ಞಾತವಾಸದಿಂದ ಮುಕ್ತವಾದಂತಾಗಿದೆ ಎಂದು ತಿಳಿಸಿದರು. ನಾನು ಏನೂ ಇಲ್ಲದ ದಿನಗಳಲ್ಲಿ ಮಾಜಿ ಸಂಸದೆ ಬಸವರಾಜೇಶ್ವರಿ ಅವರು ನನ್ನನ್ನು ನಗರಸಭೆ ಸದಸ್ಯರನ್ನಾಗಿ ಮಾಡಿದರು. ಅಂದಿನಿಂದ ಅಜಾತಶತ್ರುವಾಗಿ ಕೆಲಸ ಮಾಡಿದ್ದೇನೆ.  ಇದು ಶ್ರೀರಕ್ಷೆಯಾಗಿ ನನ್ನನ್ನು ಕಾಪಾಡಲಿದೆ ಎಂದ ರಾಮುಲು, ಪ್ರಧಾನಿ ನರೇಂದ್ರ ಮೋದಿ ಈ ಬಾರಿ 400ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಿಸಬೇಕು ಎಂದು ಸಂಕಲ್ಪತೊಟ್ಟಿದ್ದಾರೆ. ಕಾಶ್ಮೀರದಲ್ಲಿ 370 ರದ್ದಾದ ಹಿನ್ನೆಲೆಯಲ್ಲಿ ಬಿಜೆಪಿ 370, ಎನ್ ಡಿಎ…

Read More

ಬೆಂಗಳೂರು:ಈಶ್ವರಪ್ಪ ಪುತ್ರನಿಗೆ ಹಾವೇರಿ ಲೋಕಸಭಾ ಟಿಕೆಟ್ ನೀಡದಿರೋದಕ್ಕೆ ಕೆ.ಎಸ್​.ಈಶ್ವರಪ್ಪ ಅವರು ಅಸಮಾಧಾನಗೊಂಡಿದ್ದಾರೆ. ಆದರೆ  ನಾನು ಈಶ್ವರಪ್ಪ ಅವರ ಜೊತೆ ಮಾತನಾಡುತ್ತೇನೆ. ಈಶ್ವರಪ್ಪ ಪುತ್ರನನ್ನು MLC ಮಾಡುವ ಬಗ್ಗೆ ಹೈಕಮಾಂಡ್ ಚಿಂತನೆ ಮಾಡಿದೆ. ಎಂದು ಮಾಜಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಯಡಿಯೂರಪ್ಪನವರು ರಾಜಕೀಯವಾಗಿ ಆಶೀರ್ವಾದ ಮಾಡಿ ಹರಸಿದ್ದಾರೆ: ಬಸವರಾಜ್‌ ಬೊಮ್ಮಾಯಿ! ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈಶ್ವರಪ್ಪ ಅವರ ಜೊತೆ ಮಾತಾಡ್ತೀನಿ. ಹೈಕಮಾಂಡ್ ಕೂಡ ಮಾತಾಡಲಿದೆ. ಅವರ ಮಗನನ್ನ ಎಂಎಲ್‌ಸಿ ಮಾಡಲಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿ ಹೋಗಲಿದೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಹೈಕಮಾಂಡ್, ಬಸವರಾಜ ಬೊಮ್ಮಾಯಿಗೆ ಮಣೆ ಹಾಕಿದೆ. ಇದು ಈಶ್ವರಪ್ಪ ಅವರ ಕೋಪಕ್ಕೆ ಕಾರಣವಾಗಿದೆ. ಹಾಗಾಗಿ ಕಾಂತೇಶ್‌ಗೆ ಎಂಎಲ್‌ಸಿ ಸುಳಿವು ನೀಡಿದ ಬಿಎಸ್‌ವೈ

Read More

ಬೆಂಗಳೂರು : ಯಡಿಯೂರಪ್ಪ ಅವರು ಸದಾಕಾಲ ರಾಜಕೀಯವಾಗಿ ಆಶಿರ್ವಾದ ಮಾಡಿ ಹರಸಿದ್ದಾರೆ. ಅವರ ಆಶೀರ್ವಾದ ಪಡೆದಿದ್ದೇನೆ. ಪ್ರಚಾರಕ್ಕೂ ಕೂಡ ಬರುತ್ತೇನೆ ಅಂತ ಹೇಳಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರಿನಲ್ಲಿ ಯಡಿಯೂರಪ್ಪ ಭೇಟಿ ಬಳಿಕ ಮಾತನಾಡಿದ ಅವರು, ನಿನ್ನೆ ಪಕ್ಷದ ವರಿಷ್ಠರು ನಿರ್ಣಯ ಮಾಡಿ ನನ್ನ ಹೆಸರು ಪ್ರಕಟ ಮಾಡಿದ್ದಾರೆ. ಈ ಬಾರಿ ವಿನೂತನ ರೀತಿಯಲ್ಲಿ ಅಭ್ಯರ್ಥಿಗಳ ಆಯ್ಕೆಯಾಗಿದೆ ಎಂದು ತಿಳಿಸಿದರು. ಡಾ. ಮಂಜುನಾಥ್ ಅವರು ಲಕ್ಷಾಂತರ ಜನರಿಗೆ ಆರೋಗ್ಯ ಕಾಪಾಡಿದ್ದಾರೆ. ಇದು ಲಕ್ಷಾಂತರ ಜನರಿಗೆ ಸಂದೇಶ. ಪಕ್ಷ ಪುರಸ್ಕಾರ ನೀಡುತ್ತೆ ಎನ್ನುವ ಸಂದೇಶ. ಮತ್ತೆ ಯದುವೀರ್ ಒಡೆಯರ್ ಅವರಿಗೆ ಟಿಕೆಟ್ ನೀಡಿರೋದು. ದಕ್ಷಿಣ ಭಾರತದಲ್ಲಿ ಅಭಿವೃದ್ಧಿ ಆಗಿದ್ರೆ ಅದಕ್ಕೆ ಒಡೆಯರ್ ಅವರು ಕಾರಣ. ಬ್ಯಾಕ್​ವರ್ಡ್ ಕ್ಲಾಸ್ ಅಭಿವೃದ್ಧಿ ಮಾಡಿದ್ದಾರೆ. ಆ ಮನೆತನಕ್ಕೆ ಟಿಕೆಟ್ ನೀಡಿರೋದು ದಕ್ಷಿಣ ಕರ್ನಾಟಕಕ್ಕೆ ಸಂತಸ ತಂದಿದೆ ಎಂದು ಹೇಳಿದರು.

Read More

ಕಲಬುರಗಿ: ಲೋಕಸಭಾ ಚುನಾವಣೆ ರಣಕಣ ರಂಗೇರಿದ ಹಿನ್ನಲೆ ಮಲ್ಲಿಕಾರ್ಜುನ ಖರ್ಗೆ ತವರೂರು ಕಲಬುರಗಿಯಿಂದ್ಲೇ  ಪ್ರಧಾನಿ ಮೋದಿ ರಣಕಹಳೆ ಮೊಳಗಿಸಲಿದ್ದಾರೆ ಅಂತ ಸಂಸದ ಉಮೇಶ್ ಜಾಧವ್ ಹೇಳಿದ್ದಾರೆ. ಕಲಬುರಗಿಯಲ್ಲಿಂದು ಮಾತನಾಡಿದ ಜಾಧವ್,  ಮಾರ್ಚ್ 16 ರಂದು ಮಧ್ಯಾಹ್ನ 2 ಕ್ಕೆ ನಮೋ ಆಗಮಿಸಲಿದ್ದು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡ್ತಾರೆ ಅಂತ ಹೇಳಿದ್ರು.ಈ ಪಿಎಂ ಕಾರ್ಯಕ್ರಮದಲ್ಲಿ ಅಂದಾಜು 2 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಜನ ಸೇರುವ ಸಾಧ್ಯತೆಯಿದೆ ಅಂತ ಹೇಳಿಕೆ ನೀಡಿದ್ರು.

Read More

ಬೆಂಗಳೂರು: ಚಿನ್ನದ ಮಳಿಗೆ (Gold Shop) ಮಾಲೀಕನ ಮೇಲೆ ಹಾಡಹಗಲೇ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಘಟನೆ ದೇವಿನಗರದಲ್ಲಿ (Devinagar) ನಡೆದಿದೆ. ಎರಡು ಬೈಕ್‍ಗಳಲ್ಲಿ ಬಂದ ನಾಲ್ಕು ಮಂದಿ ದುಷ್ಕರ್ಮಿಗಳಲ್ಲಿ, ಇಬ್ಬರು ಇಳಿದು ಗುಂಡಿನ ದಾಳಿ (Bengaluru Shoot Out) ಮಾಡಿದ್ದಾರೆ. ಈ ವೇಳೆ ಅಂಗಡಿ ಮಾಲೀಕ ಅಪ್ಪುರಾಮ್ ಎಂಬವರ ಹೊಟ್ಟೆಗೆ ಗುಂಡು ತಗುಲಿದೆ. ಅಲ್ಲದೇ ಅಂತರಾಮ್ ಎಂಬವರ ಕಾಲಿಗೆ ಗುಂಡು ತಗುಲಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪ್ಪುರಾಮ್ ಸ್ಥಿತಿ ಗಂಭೀರವಾಗಿದೆ. ಚಿನ್ನದಂಗಡಿಗೆ ಬಂದಿದ್ದ ದುಷ್ಕರ್ಮಿಗಳು ಗಲಾಟೆ ಮಾಡಿದ್ದಾರೆ. ಈ ವೇಳೆ ಗಲಾಟೆಗೆ ಅಂತರಾಮ್ ಅವರು ವಿರೋಧ ವ್ಯಕ್ತಪಡಿಸಿದಾಗ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಅಂಗಡಿ ಹೊರಗಿಂದ ಓರ್ವ ಹಾಗೂ ಅಂಗಡಿ ಒಳಗೆ ಓರ್ವ ಗುಂಡು ಹಾರಿಸಿದ್ದಾನೆ ಎಂದು ತಿಳಿದು ಬಂದಿದೆ.

Read More

ಬೆಂಗಳೂರು : ಸಂಸದ ಪ್ರತಾಪ್ ಸಿಂಹ ಅವರು ಎರಡು ವರ್ಷದ ಅವಧಿಯಲ್ಲಿ ಒಳ್ಳೆಯ ಅಡಿಪಾಯ ಹಾಕಿದ್ದಾರೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಾಪ್ ಸಿಂಹ ಅವರ ಸಹಕಾರ ಇದ್ರೆ ಅನುಕೂಲ ಆಗುತ್ತದೆ ಎಂದು ತಿಳಿಸಿದರು.‌ ಪ್ರತಾಪ್ ಸಿಂಹ ಅವರು ಒಳ್ಳೆಯ ಅಭಿವೃದ್ಧಿ ಕಾರ್ಯ ಮಾಡ್ತಾ ಇದ್ದಾರೆ. ಪ್ರತಾಪ್ ಸಿಂಹ ಜೊತೆ ಯಾವಾಗಲೂ ನಾನು ಸಂಪರ್ಕದಲ್ಲಿ ಇದ್ದೇನೆ. ಅವರ ಬೆಂಬಲ ಇರುತ್ತದೆ. ಒಂದು ವರ್ಷಗಳ ಹಿಂದೆಯೇ ನನಗೆ ಚುನಾವಣೆ ಯೋಚನೆ ಬಂದಿತ್ತು. ಈಗ ಸ್ಕೇಲ್ ದೊಡ್ಡದಾಗುತ್ತೆ, ಅಧಿಕಾರ ಇದ್ದರೆ ಇನ್ನೂ ಒಳ್ಳೆಯ ಕೆಲಸ ಮಾಡೋಕೆ ಆಗತ್ತೆ ಎಂದು ಹೇಳಿದರು. ಪ್ರತಾಪ್ ಸಿಂಹ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅವರು, ಸಾರ್ವಜನಿಕ ಬದುಕಿಗೆ ಬಂದ ಮೇಲೆ ಸಾರ್ವಜನಿಕವಾಗಿ ಇರಬೇಕಾಗುತ್ತದೆ. ಮೈಸೂರು ಜವಬ್ದಾರಿ ಆದ ಬಳಿಕ ಒಂಬತ್ತು ವರ್ಷಗಳಿಂದ ನಾನು ಜನರ ಜೊತೆ ಇದ್ದೆ. ಅವರು ನನ್ನ ಸಹೋದರ ತರ…

Read More

ಯಾದಗಿರಿ: ಸಂವಿಧಾನ ಬದಲಾವಣೆ ಮಾಡ್ತೀವಿ ಎಂಬ ಸಂಸದ ಅನಂತ್‌ ಕುಮಾರ್‌ ಹೆಗಡೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ (BJP) ರಾಜ್ಯ ಉಪಾಧ್ಯಕ್ಷ, ಮಾಜಿ ಸಚಿವ ರಾಜೂಗೌಡ (Raju Gowda) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾದಗಿರಿ (Yagir) ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಫಲಾನುಭವಿಗಳ ಪ್ರಮುಖರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸಂಸದ ಅನಂತ್‌ ಕುಮಾರ್‌ (Anantkumar Hegde) ವಿರುದ್ಧ ಏಕವಚನದಲ್ಲೇ ಕಿಡಿಕಾರಿದ್ದಾರೆ. ಈಗ ಒಬ್ಬ ಹೆಗಡೆ ಎನ್ನುವವನು ಎಲ್ಲೋ ಮಾತಾಡಿದ್ದಾನೆ. ಸಂವಿಧಾನ ಚೇಂಜ್‌ ಮಾಡ್ತೀವಿ ಅಂತಾ ಹೇಳಿದ್ದಾನೆ. ಹೆಗಡೆ ಅಲ್ಲ ಅವರಪ್ಪ ಹುಟ್ಟಿ ಬಂದ್ರೂ ಸಂವಿಧಾನಕ್ಕೆ ಏನು ಮಾಡಕಾಗಲ್ಲ. ಸಂವಿಧಾನ ಮುಟ್ಟುವುದಕ್ಕೂ ಆಗಲ್ಲ. ಚೇಂಜ್‌ ಮಾಡೋಕೂ ಆಗಲ್ಲ. ಅಂಬೇಡ್ಕರ್ ಬರೆದ ಸಂವಿಧಾನವನ್ನು ಮೋದಿ ಅವ್ರು ರಕ್ಷಣೆ ಮಾಡ್ತಿದ್ದಾರೆ. ಸಂವಿಧಾನವನ್ನು ತಲೆ ಮೇಲೆ ಇಟ್ಕೊಂಡು ಹೋಗುವಂತಹ ಕೆಲಸ ಮೋದಿ, ಬಿಜೆಪಿ ಮಾಡಿದೆ ಎಂದು ಹೇಳಿದರು. https://ainlivenews.com/four-including-three-indians-arrested-while-trying-to-enter-us-illegally-from-canada/ ಒಳ ಮೀಸಲಾತಿ ವಿಚಾರದಲ್ಲೂ ರಾಜ್ಯ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿದ ರಾಜೂಗೌಡ, ಮೀಸಲಾತಿ ಹೆಚ್ಚಳವನ್ನು ಬಿಜೆಪಿ ಸರ್ಕಾರ…

Read More

ಮೈಸೂರು: ಕೊಡಗು-ಮೈಸೂರಿನ (Kodagu-Mysuru) ಜನರು ಸ್ನೇಹಿತನಂತೆ ನನ್ನನ್ನು ಸ್ವಾಗತಿಸಿದ್ದೀರಿ. ಆ ಋಣವನ್ನು ತೀರಿಸಲು ಅವಕಾಶ ಕೊಡಿ ಎಂದು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveer Wadiyar) ಮನವಿ ಮಾಡಿದ್ದಾರೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ (Mysuru Lok Sabha Constituency) ಟಿಕೆಟ್‌ ಪ್ರಕಟವಾದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಯದುವೀರ್‌ ಒಡೆಯರ್‌ ಪೋಸ್ಟ್‌ ಪ್ರಕಟಿಸಿದ್ದಾರೆ. ಪೋಸ್ಟ್‌ನಲ್ಲಿ ಏನಿದೆ? ಸಮಸ್ತ ಮೈಸೂರು-ಕೊಡಗು ಪ್ರಜಾಬಾಂಧವರಿಗೆ ನನ್ನ ನಮಸ್ಕಾರ. ನಿಮ್ಮೆಲ್ಲರಿಗೂ ಈಗಾಗಲೇ ತಿಳಿದಿರುವಂತೆ, ಮುಂಬರುವ ಲೋಕಸಭಾ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸಲು ನನಗೆ ಭಾರತೀಯ ಜನತಾ ಪಕ್ಷದಿಂದ ಅವಕಾಶ ನೀಡಲಾಗಿದೆ.  ನಮ್ಮ ಪೂರ್ವಜರ ಮಹತ್ತರ ಕೊಡುಗೆಗಳಿಂದ ಕರ್ನಾಟಕ ಜನತೆಯ ಬೆಂಬಲ ಮತ್ತು ಭಾವನಾತ್ಮಕ ಸಂಪರ್ಕವು ನಿಸ್ಸಂದೇಹವಾಗಿ ನಮ್ಮೊಟ್ಟಿಗಿದೆ. ಕಳೆದ ಒಂಭತ್ತು ವರ್ಷಗಳಿಂದ ನಾನು ನಮ್ಮ ಕ್ಷೇತ್ರದ ಹಾಗು ನಮ್ಮ ರಾಜ್ಯದ ಸಾರ್ವಜನಿಕ ಜೀವನದ ಭಾಗವಾಗಿದ್ದು ಅನೇಕ ಪ್ರಜಾಬಾಂಧವರನ್ನು ಭೇಟಿಮಾಡುವ ಅವಕಾಶ ಸಿಕ್ಕಿದ್ದು, ನನ್ನನ್ನು ನೀವೆಲ್ಲರೂ ಮುಕ್ತವಾಗಿ ಒಬ್ಬ ಸ್ನೇಹಿತನಂತೆ ಸ್ವಾಗತಿಸಿ ಆತಿಥ್ಯವನ್ನು ನೀಡಿದ್ದೀರಿ, ಈಗ ಆ ಋಣವನ್ನು ತೀರಿಸಲು ಅವಕಾಶ…

Read More