Author: AIN Author

ಬೆಂಗಳೂರು:- ಆರ್ ಅಶೋಕ ಅವರನ್ನು ವಿಪಕ್ಷ ನಾಯಕನಾಗಿ ಬಿಜೆಪಿ ಆಯ್ಕೆ ಮಾಡಿದೆ. ಅಶೋಕ ಅವರು ಪಕ್ಷದ ಪ್ರಮುಖ ಒಕ್ಕಲಿಗ ಮುಖವಾಗಿದ್ದು, ಇದು ಕರ್ನಾಟಕದ ಪ್ರಬಲ ಸಮುದಾಯಗಳಲ್ಲಿ ಒಂದಾಗಿದೆ. ವಿಶೇಷವಾಗಿ ಕರ್ನಾಟಕದ ದಕ್ಷಿಣ ಭಾಗಗಳಾದ ಬೆಂಗಳೂರು, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಕೋಲಾರ, ತುಮಕೂರು ಮತ್ತು ಚಿಕ್ಕಮಗಳೂರುಗಳಲ್ಲಿ ಈ ಸಮುದಾಯದವರು ಹೆಚ್ಚಿಗಿದ್ದಾರೆ. ವಿಧಾನಸಭೆಯ ವಿಪಕ್ಷ ನಾಯಕನಾಗಿ ಆಯ್ಕೆಯಾದ ನಂತರ ಮಾತನಾಡಿದ ಅವರು, ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್ನ ದುರಾಡಳಿತ ಮತ್ತು ಭ್ರಷ್ಟಾಚಾರವನ್ನು ಸಾರ್ವಜನಿಕರ ಮುಂದೆ ಬಹಿರಂಗಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ರೈತರಿಗೆ ಪರಿಹಾರ ನೀಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು. ಬಿಜೆಪಿ ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದಾಗ ಬರ ಪರಿಹಾರ ಮೊತ್ತವನ್ನು ದ್ವಿಗುಣಗೊಳಿಸಿತ್ತು. ಆದರೆ ಪ್ರಸ್ತುತ ಸರ್ಕಾರ ರಾಜ್ಯದ ಖಜಾನೆಯನ್ನು ಖಾಲಿ ಮಾಡಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು. ಆರ್ ಅಶೋಕ ನಡೆದು ಬಂದ ದಾರಿ ಏಳು ಬಾರಿ…

Read More

ಮಂಗಳೂರು: ನಾನು ಎಲ್ಲರ ಸ್ಪೀಕರ್. ಸ್ಪೀಕರ್ ಸ್ಥಾನವನ್ನು ರಾಜಕೀಯ, ಜಾತಿ ಧರ್ಮದಿಂದ ನೋಡುವಂತಿಲ್ಲ ಎಂದು ಹೇಳುವ ಮೂಲಕ ಸಚಿವ ಜಮೀರ್ ಅಹ್ಮದ್ ಹೇಳಿಕೆಗೆ ಸ್ಪೀಕರ್ ಯು.ಟಿ ಖಾದರ್ (U.T Khader) ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸ್ಪೀಕರ್ ಸ್ಥಾನದ ಬಗ್ಗೆ ಜಮೀರ್ (Zameer Ahmed Khan) ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಎಲ್ಲವನ್ನು ಕೂಡ ಮೆಟ್ಟಿ ನಿಂತು ನೋಡಬೇಕಾದ ಸಂವಿಧಾನ ಬದ್ಧವಾದ ಸ್ಥಾನ ಇದಾಗಿದೆ. ನನಗೆ ಗೌರವ ಕೊಡುವುದು ಯು.ಟಿ ಖಾದರ್ ಗೆ ಗೌರವ ಕೊಡೋದು ಅಲ್ಲ. ಸಂವಿಧಾನ ಪೀಠಕ್ಕೆ ಮತ್ತು ಸಭಾಧ್ಯಕ್ಷ ಸ್ಥಾನಕ್ಕೆ ಹಾಗೂ ಅಲ್ಲಿ ಕೂರುವ ನಾವು ಗೌರವ ಉಳಿಸುವ ಕೆಲಸ ಮಾಡಬೇಕು ಎಂದರು. https://ainlivenews.com/how-to-make-hotel-style-palak-paneer-antira-here-it-is/ ನಾನು ಯಾರ ಹೇಳಿಕೆಗೂ ಕಮೆಂಟ್ ಮಾಡೋದಿಲ್ಲ. ನನ್ನನ್ನು ಜಾತಿ, ಧರ್ಮದ ಆಧಾರದಲ್ಲಿ ಯಾರು ಸಹ ಆ ಪೀಠದಲ್ಲಿ ಕೂರಿಸಿಲ್ಲ. ಅರ್ಹತೆಗೆ ಅನುಗುಣವಾಗಿ ಸಂವಿಧಾನ ಬದ್ಧವಾಗಿ ಕೆಲಸ ನಿರ್ವಹಿಸುವ ವಿಶ್ವಾಸದಿಂದ ಕೂರಿಸಿದ್ದಾರೆ. ಸಂವಿಧಾನಕ್ಕೆ ಅನುಗುಣವಾಗಿ ಕೆಲಸ ಮಾಡುತ್ತೇನೆ. ನಾನು ಎಲ್ಲರಿಗೂ ಗೌರವ ಕೊಟ್ಟು ಗೌರವ…

Read More

ಅನಾವರಣ ಸಿನಿಮಾದ ಹಾಡುಗಳು ಈಗಾಗಲೇ ಭಾರೀ ಸದ್ದು ಮಾಡುತ್ತಿದ್ದು, ಇದೀಗ ಮೊದಲ ನೋಟ ಬಿಡುಗಡೆಯಾಗಿದೆ. ಪ್ರೀತಿ, ಕೊಲೆ ಕುಟುಂಬ, ಎಮೋಷನ್ ಜೊತೆಗೆ ಸಸ್ಪೆನ್ಸ್ ಅಂಶಗಳಿಂದ ಕೂಡಿರುವ ಚಿತ್ರದ ಟ್ರೇಲರ್ ನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡಿ ಶುಭಾಶಯ ಕೋರಿದ್ದಾರೆ. ಕಿಚ್ಚ ಸುದೀಪ್ ಮಾತನಾಡಿ, ರಾಮಚಂದ್ರ, ಅದ್ವೈತ್ ಪ್ರಭಾಕರ್ ನಿರ್ಮಾಣ ಮಾಡಿರುವ, ಮೊದಲ ಬಾರಿಗೆ ಮಂಜು ಹರಿ ನಿರ್ದೇಶನ ಮಾಡಿರುವ, ಅರ್ಜುನ್ ಯೋಗಿ ನಟನೆಯ ಅನಾವರಣ ಸಿನಿಮಾದ ಟ್ರೇಲರ್ ನೋಡಿದೆ. ಅವರ ತಂಡಕ್ಕೆ ಅವರ ಪರಿಶ್ರಮಕ್ಕೆ ಒಳ್ಳೆದಾಗಲಿ. ಡಿಸೆಂಬರ್ 1ಕ್ಕೆ ಸಿನಿಮಾ ಬಿಡುಗಡೆಯಾಗ್ತಿದೆ. ಟ್ರೇಲರ್ ನೋಡ್ತಾ ಇರಬೇಕಾದ್ರೆ ಬಹಳ ಪರಿಚಯಸ್ಥರು ತುಂಬ ಜನ ಸಿನಿಮಾದಲ್ಲಿದ್ದಾರೆ. ಎಲ್ಲರಿಗೂ ಒಳ್ಳೆದಾಗಲಿ ಎಂದರು. ಫ್ಯಾಮಿಲಿ ಡ್ರಾಮಾ ಜೊತೆಗೆ ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಅನಾವರಣ ಸಿನಿಮಾ ಡಿಸೆಂಬರ್ 1ಕ್ಕೆ ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಹರೀಶ್ ಕುಮಾರ್ ಹಾಗೂ ಮಂಜುನಾಥ್ ಪಿಳ್ಳಪ್ಪ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ರಂಗ ಕಲಾವಿದರು ನಿರ್ದೇಶಕರು ಆಗಿರುವ ಹರೀಶ್ ಕುಮಾರ್ ಹಾಗೂ ಮಂಜುನಾಥ್ ಪಿಳ್ಳಪ್ಪ…

Read More

ಮಂಗಳೂರು:- ಸಚಿವ ಜಮೀರ್ ಅಹ್ಮದ್ ರಾಜೀನಾಮೆಗೆ ನಳಿನ್‌ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ವಿವಾದಿತ ಹೇಳಿಕೆ ನೀಡಿಡುವ ಸಚಿವ ಜಮೀರ್ ಅಹ್ಮದ್ ಖಾನ್ ರಾಜೀನಾಮೆ ನೀಡಬೇಕು. ಜಮೀರ್ ಅವರು ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ್ದಾರೆ. ಸ್ಪೀಕರ್ ಸ್ಥಾನ ಜಾತಿ, ಧರ್ಮದ ಹೊರತಾಗಿ ಇರುವ ಹುದ್ದೆಯಾಗಿದೆ. ಆ ಸ್ಥಾನವನ್ನು ಅವರು ಮತೀಯ ದೃಷ್ಟಿಯಿಂದ ನೋಡಿದ್ದಾರೆ. ಸ್ಥಾನದ ಗೌರವ ಕಡಿಮೆಯಾಗುವಂತೆ ಮಾತನಾಡಿದ್ದಾರೆ ಎಂದರು. ಈ ಹೇಳಿಕೆಯು ಅವರ ಮಾನಸಿಕತೆಯನ್ನು ತೋರಿಸುತ್ತದೆ. ಮತಿಭ್ರಾಂತಿಯಿಂದ ಜಮೀರ್ ಮಾತನಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಮೀರ್ ಅಹ್ಮದ್ ಖಾನ್ ಅವರಿಂದ ರಾಜೀನಾಮೆ ಪಡೆಯಲಿ’ ಎಂದರು.

Read More

ಚಿತ್ರದುರ್ಗ :- ಜನರ ಹಿತ ಕಾಯುವುದೇ ನಮ್ಮ ಸರ್ಕಾರದ ಜವಾಬ್ಧಾರಿ ಎಂದು ಜಿ ಪರಮೇಶ್ವರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಅಧಿಕಾರಕ್ಕೆ ಬಂದ ತಿಂಗಳ ಅವಧಿಯಲ್ಲೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜನಪರ ಆಡಳಿತ ನೀಡುತ್ತಿದ್ದೇವೆ. ಜನರ ಹಿತ ಕಾಯುವುದೇ ಸರ್ಕಾರ ಜವಾಬ್ಧಾರಿ. ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧ ಪಕ್ಷದಿಂದ ಟೀಕೆ, ಟಿಪ್ಪಣೆಗಳು ಬಂದರೆ ಪಕ್ಷದ ಕಾರ್ಯಕರ್ತರು ಸರಿಯಾದ ಉತ್ತರ ಕೊಡಬೇಕು ಎಂದರು. ಈ ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟ ಆಡಳಿತ ನೀತಿಯಿಂದ ಜನ ಬೇಸತ್ತಿದ್ದರು. ಚುನಾವಣೆ ಸಂದರ್ಭದಲ್ಲಿ ಪಕ್ಷದ ಪ್ರಣಾಳಿಕೆಯನ್ನು ಜನರಿಗೆ ತಲುಪಿಸುವ ಕಾರ್ಯವನ್ನು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅಚ್ಚುಕಟ್ಟಾಗಿ ನಿಭಾಯಿಸಿದರು. ಎಲ್ಲರಿಗೂ ಶ್ಲಾಘನೆ ಸಲ್ಲಬೇಕು ಎಂದರು. ಬರದಿಂದಾಗಿ ರಾಜ್ಯದಲ್ಲಿ 36 ಸಾವಿರ ಕೋಟಿ ರು. ನಷ್ಟವಾಗಿದೆ. ಇದರಲ್ಲಿ 17 ಸಾವಿರ ಕೋಟಿ ರು.ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ವರದಿ ನೀಡಿದ್ದೇವೆ. ರೈತರ ಸಂಕಷ್ಟಕ್ಕೆ ಕಿವಿಗೊಡುತ್ತಿಲ್ಲ ಎಂದು ಬೇಸರಿಸಿದರು. ಮಾಜಿ‌ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು…

Read More

ಭಾರತ ವಿಶ್ವಕಪ್ ಫೈನಲ್ ತಲುಪಲು ರಾಹುಲ್ ಮತ್ತು ಸಹಾಯಕ ಸಿಬ್ಬಂದಿಗಳ ಪಾತ್ರ ಮರೆಯುವಂತಿಲ್ಲ. ಭಾರತ ತಂಡದ ವಿಶ್ವಕಪ್ ಅಭಿಯಾನ ಅಂತಿಮ ಹಂತ ತಲುಪಿದ್ದು, 15 ಸದಸ್ಯರ ತಂಡವು ತಂಡದ ಕೆಲಸ ಮತ್ತು ಕೌಶಲಕ್ಕಾಗಿ ಪ್ರಶಂಸೆಗೆ ಪಾತ್ರವಾಗಿದೆ. ಅಂದಹಾಗೆ ಪಂದ್ಯದ ತೆರೆಮರೆಯಲ್ಲಿ ಶ್ರಮಿಸಿದ 20 ಜನರೂ ಇದರಲ್ಲಿದ್ದಾರೆ. ಇವರೆಲ್ಲಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ನೇತೃತ್ವದಲ್ಲಿ ತಂಡವು ದೈಹಿಕವಾಗಿ ಮತ್ತು ಮಾನಸಿಕವಾಗಿ ಅತ್ಯುತ್ತಮವಾಗಿದೆ. ಟೀಮ್ ಇಂಡಿಯಾದ ಸಹಾಯಕ ಸಿಬ್ಬಂದಿಯೂ ಫೈನಲ್‌ಗೆ ತಲುಪಲು ಪ್ರಮುಖ ಕಾರಣ. ದ್ರಾವಿಡ್ ಮುಖ್ಯ ಕೋಚ್ ಆಗಿ ನೇಮಕಗೊಂಡಾಗ ಫಲಿತಾಂಶಗಳಿಗಿಂತ ಪ್ರದರ್ಶನಕ್ಕೆ ಹೆಚ್ಚು ಒತ್ತು ನೀಡಿದರು. ಅವರು ಹೇಗೆ ಕಾರ್ಯನಿರ್ವಹಿಸುತ್ತಿದ್ದಾರೆಂದು ತಿಳಿದಿರುವ, ಅವರ ಆಲೋಚನಾ ಪ್ರಕ್ರಿಯೆಯೊಂದಿಗೆ ಹೊಂದಿಕೆಯಾಗುವ ಮತ್ತು ಆಟಗಾರರನ್ನು ಅರ್ಥಮಾಡಿಕೊಳ್ಳುವ ಸಹಾಯಕ ಸಿಬ್ಬಂದಿ ಅವರಿಗೆ ಬೇಕಾಗಿತ್ತು. ಈ ನಿಯತಾಂಕಗಳೊಂದಿಗೆ, ಅವರು 2019 ರಿಂದ 2021 ರ ನಡುವೆ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ನಿರ್ದೇಶಕರಾಗಿದ್ದ ಸಮಯದಲ್ಲಿ ಅವರು ಕೆಲಸ ಮಾಡಿದ ತರಬೇತುದಾರರನ್ನು ಒಟ್ಟುಗೂಡಿಸಿದರು. ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್, ಬೌಲಿಂಗ್…

Read More

ಆರನೇ ವಾರದ ವಾರಾಂತ್ಯಕ್ಕೆ ಬಿಗ್ ಬಾಸ್ ಸ್ಪರ್ಧಿಗಳು ಲಗ್ಗೆಯಿಟ್ಟಿದ್ದು, ನಟ ಸುದೀಪ್​ ಅವರ ಆಗಮನಕ್ಕಾಗಿ ವೀಕ್ಷಕರು ಕಾತರದಿಂದ ಕಾಯುತ್ತಿದ್ದಾರೆ. ಅರ್ಥವಾಗದ, ಅರ್ಥೈಸಲಾಗದ ಒಂದಷ್ಟು ವಿಚಾರಗಳನ್ನು ಸುದೀಪ್​ ಹೇಗೆ ಆಯಾ ಸ್ಪರ್ಧಿಗಳಿಗೆ ತಲುಪಿಸುವುದರ ಜತೆಗೆ ಮನೆಯಿಂದ ಹೊರಹೋಗುವವರ ಹೆಸರನ್ನು ತೆಗೆದುಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಈ ವಾರ ದೀಪಾವಳಿ ಹಬ್ಬವಾದ ಹಿನ್ನಲೆ ಟಾಸ್ಕ್​ಗಳು ಅಷ್ಟು ಕಠಿಣವಾಗಿರಲಿಲ್ಲ ಹಾಗೂ ಮನೆಯವರಿಂದ ಬಂದ ವಿಶೇಷ ಪತ್ರಗಳನ್ನು ಪಡೆಯುವಲ್ಲಿ ಸ್ಪರ್ಧಿಗಳು ಹೆಚ್ಚು ಸಕ್ರಿಯರಾಗಿ ಪಾಲ್ಗೊಂಡರು. ಕೆಲವರಿಗೆ ತಮ್ಮ ಪ್ರೀತಿ ಪಾತ್ರರಿಂದ ಪತ್ರ ದೊರಕಿತು. ಆದ್ರೆ, ಇನ್ನೂ ಕೆಲವರಿಗೆ ಪತ್ರ ಸಿಗದೆ ಬೇಸರದಿಂದಲೇ ದಿನ ಕಳೆಯುವಂತಾಯಿತು. ಇದರೊಟ್ಟಿಗೆ ವಾರದ ಕ್ಯಾಪ್ಟನ್​ ಆಗಿ ಕಾರ್ತಿಕ್​ ಆಯ್ಕೆಯಾದರೆ, ಉತ್ತಮ ಪಟ್ಟವನ್ನು ತುಕಾಲಿ ಸಂತೋಷ್​ ಪಡೆದುಕೊಂಡರು. ಕಳಪೆ ಪಟ್ಟವನ್ನು ತನಿಷಾ ತೆಗೆದುಕೊಂಡರು. ಮನೆಯವರೆಲ್ಲಾ ತನಗೆ ಕಳಪೆ ಕೊಟ್ಟು ಜೈಲಿಗೆ ಕಳುಹಿಸಿದ ಹಿನ್ನಲೆ ತನಿಷಾ ಕೆಲ ಸಮಯ ಕಣ್ಣೀರಾಕಿದರು. ಆರನೇ ವಾರಂತ್ಯಕ್ಕೆ ಬಂದಿರುವ ಸ್ಪರ್ಧಿಗಳ ಪೈಕಿ ವಿನಯ್​, ತನಿಷಾ, ಕಾರ್ತಿಕ್​, ಭಾಗ್ಯಶ್ರೀ, ಇಶಾನಿ, ತುಕಾಲಿ…

Read More

ದಾವಣಗೆರೆ: ನಾಳೆ ನಡೆಯುವ ವಿಶ್ವ ಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಮಧ್ಯೆ ನಡೆಯುವ ಫೈನಲ್ ಹೋರಾಟದಲ್ಲಿ ಭಾರತ ಜಯಶಾಲಿಯಾಗಲಿ ಎಂದು ದಾವಣಗೆರೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ದಾವಣಗೆರೆ ಜಿಲ್ಲಾ ಕ್ರೀಡಾಪಟುಗಳ ಸಂಘದಿಂದ ಶುಭಾಶಯಗಳನ್ನ ಕೋರಲಾಯಿತು. ಕ್ರೀಡಾಪಟುಗಳ ಸಂಘದ ಅಧ್ಯಕ್ಷರಾದ ದಿನೇಶ್ ಕೆ ಶೆಟ್ಟಿ ಹಾಗೂ ಕ್ರೀಡಾಪಟುಗಳು ಜೀತೇ ಗಾ ಜೀತೇ ಗಾ ಇಂಡಿಯಾ ಜೀತೇಗಾ ಎಂಬ ಘೋಷಣೆ ಕೂಗಿ ಭಾರತ ತಂಡಕ್ಕೆ ಶುಭ ಕೋರಿದರು. ಮಹಾನಗರ ಪಾಲಿಕೆ ಸದಸ್ಯರಾದ ಎ ನಾಗರಾಜ್ ಜಯಪ್ರಕಾಶ್ ಗೌಡ ರೂಪಿತ್ ನಾಗರಾಜ್ ಯುವರಾಜ್ ಮತ್ತು ಕ್ರಿಕೆಟ್ ಆಟಗಾರರು ಭಾಗವಹಿಸಿದ್ದರು.

Read More

ಮೈಸೂರು: ಲಿಸ್ಟ್ ಬಗ್ಗೆ ಯತೀಂದ್ರ ಮಾತನಾಡಿರುವ ವಿಡಿಯೋ ವೈರಲ್​ ವಿಚಾರ ಸಂಬಂಧ ಯತೀಂದ್ರ ಅವರು ಸ್ಪಷ್ಟನೆ ನೀಡಿದ್ದಾರೆ. ವಿವೇಕಾನಂದ ಯಾರು? ಅದು ನನಗೆ ಈಗಲೂ ಗೊತ್ತಿಲ್ಲ. ವಿವೇಕಾನಂದರ ವರ್ಗಾವಣೆ ಎಲ್ಲಿಗೆ ಆಗಿದೆ? ಆ ಕ್ಷೇತ್ರದ ವ್ಯಾಪ್ತಿ ಯಾವುದು? ಅದರ ಬಗ್ಗೆ ಕ್ಷೇತ್ರದ ಶಾಸಕರನ್ನ ಕೇಳಿಕೊಳ್ಳಿ. ಅದಕ್ಕೂ ನನಗೂ ಏನೂ ಸಂಬಂಧ ಎಂದು ಸಿಎಂ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಪ್ರಶ್ನಿಸಿದ್ದಾರೆ. ಮೈಸೂರಿನಲ್ಲಿ (Mysuru) ಮೊದಲ ಬಾರಿಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರೋಪಗಳನ್ನು ಮಾಡುವಾಗ ದಾಖಲೆ ಇಟ್ಟು ಆರೋಪ ಮಾಡಲಿ. ದಾಖಲೆ ಇಲ್ಲದೇ ಸುಖಾಸುಮ್ಮನೆ ಆರೋಪ ಮಾಡಬೇಡಿ. ನಾನು ನನ್ನ ಪಾಡಿಗೆ ಕ್ಷೇತ್ರದ ಕೆಲಸ ಮಾಡುತ್ತಿದ್ದೇನೆ. ಅನಗತ್ಯವಾಗಿ ಎಲ್ಲಾ ವಿಚಾರದಲ್ಲಿ ನನ್ನ ಹೆಸರನ್ನ ಡ್ರ‍್ಯಾಗ್ ಮಾಡಬೇಡಿ ಎಂದರು. https://ainlivenews.com/how-to-make-hotel-style-palak-paneer-antira-here-it-is/ ನಾನು ಆ ವಿಡಿಯೋ ಬಗ್ಗೆ ಸ್ಪಷ್ಟನೆ ಕೊಡುವ ಅಗತ್ಯವೇ ಇಲ್ಲ. ನಾನು ಹತ್ತಾರು ವಿಚಾರಗಳ ಬಗ್ಗೆ ಸಿಎಂ ಜೊತೆ ಮಾತನಾಡುತ್ತೇನೆ. ಈಗ ನಾನು ದುಡ್ಡಿನ ಮಾತನಾಡಿದ್ದರೆ ಸ್ಪಷ್ಟನೆ ಕೊಡಬಹುದಿತ್ತು. ಆದರೂ ಈಗ ಅದರ…

Read More

ಬೆಂಗಳೂರು : ರಾಜ್ಯ ವಿಧಾನಸಭೆಯ ಪ್ರತಿಪಕ್ಷ ನಾಯಕನಾಗಿ ನೇಮಕಗೊಂಡ ಆರ್.ಅಶೋಕ್ ಅವರಿಗೆ ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ಅಭಿನಂದನೆ ಸಲ್ಲಿಸಿದ್ದಾರೆ.  ಪಕ್ಷದ ವರಿಷ್ಠರು ರಾಜ್ಯ ವಿಧಾನಸಭೆಯ ವಿರೋಧಪಕ್ಷ ನಾಯಕನ ಸ್ಥಾನಕ್ಕೆ ಸಮರ್ಥ ವ್ಯಕ್ತಿಯನ್ನು ನೇಮಕ ಮಾಡಿದ್ದಾರೆ. ರಾಜ್ಯದ ಉಪ ಮುಖ್ಯಮಂತ್ರಿಯಾಗಿ, ವಿವಿಧ ಇಲಾಖೆಗಳ ಸಚಿವರಾಗಿ ಸಾಕಷ್ಟು ಮಹತ್ವದ ಯೋಜನೆ ಜಾರಿಗೆ ತಂದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದ ಆರ್.ಅಶೋಕ ಅವರನ್ನು ವಿರೋಧ ಪಕ್ಷದ ನಾಯಕನ ಜವಾಬ್ದಾರಿ‌‌‌ ವಹಿಸಿರುವುದಕ್ಕೆ ಪಕ್ಷಕ್ಕೆ ಹೊಸ‌‌ ಶಕ್ತಿ ಸಿಕ್ಕಂತಾಗಿದೆ ಎಂದಿದ್ದಾರೆ.  ಜವಾಬ್ದಾರಿಯನ್ನು ಸಮರ್ಥವಾಗಿ ಎದುರಿಸುವ ಜಾಣ್ಮೆ, ಸಂಘಟನಾ ಚತುರತೆ ಮತ್ತು ಸಾಕಷ್ಟು ಅನುಭವ  ಹೊಂದಿರುವ ಆರ್.ಅಶೋಕ್ ಅವರು ಹೊಸ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಲಿದ್ದಾರೆ.  ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಅಧಿಕಾರ‌ಕ್ಕೆ‌ ಬಂದಾಗಿನಿಂದಲೂ ಒಂದಿಲ್ಲೊಂದು ವಿವಾದಗಳಿಗೆ ಸಿಲುಕುತ್ತಿದೆ. ಚುನಾವಣೆ ಭರವಸೆಗಳನ್ನು ಈಡೇರಿಸಲು ಒದ್ದಾಡುತ್ತಾ, ಜನ ವಿರೋಧಿ ನಿಲುವುಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಸರ್ಕಾರ ಮಾಡುತ್ತಿರುವ ಭ್ರಷ್ಟಾಚಾರ, ದುರಾಡಳಿತದ ವಿರುದ್ಧ ಎಲ್ಲರೂ ಒಟ್ಟಾಗಿ ಹೋರಾಡೋಣ. ಜನಸಾಮಾನ್ಯರ ಧ್ವನಿಯನ್ನು ವಿಧಾನಸಭೆಯಲ್ಲಿ ಪ್ರತಿದ್ವನಿಸುವ ಕೆಲಸವನ್ನು…

Read More