Author: AIN Author

ಬೆಂಗಳೂರು:- ದೀಪಾವಳಿ ಹಬ್ಬದ ದಿನದಂದೆ ಫರ್ನೀಚರ್ ಶೋ ರೂಂಗೆ ಬೆಂಕಿ ಬಿದ್ದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಜರುಗಿದೆ. ಬೆಂಗಳೂರು ಹೊರಮಾವು ಔಟರ್ ರಿಂಗ್ ರೋಡ್ ನಲ್ಲಿನ ಸ್ಟಾನ್ಲಿ ಫರ್ನೀಚರ್ ಶೋರೂಂ ನಲ್ಲಿ ಅವಘಡ ಸಂಭವಿಸಿದೆ. ಐದು ಅಂತಸ್ತಿನ‌ ಬಿಲ್ಡಿಂಗ್ ನಲ್ಲಿ ಮೂರು ಕಂಪನಿಗಳಿದ್ದವು. ಈ ಪೈಕಿ ಫರ್ನೀಚರ್ ಶೋರೂಂ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ನೆಲಮಹಡಿ ಹಾಗೂ ಮೊದಲನೇ ಮಹಡಿಯಲ್ಲಿ ಫರ್ನೀಚರ್ ಶೋರೂಂ ಇದ್ದು, ರಾತ್ರಿ 12 ಗಂಟೆ ಸುಮಾರಿಗೆ ಘಟನೆ ಜರುಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮೂವರು ಸೆಕ್ಯೂರಿಟಿ ಗಾರ್ಡ್ ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಟ್ಟಡದಲ್ಲಿ ಸಿಲುಕಿದ್ದ ಸೆಕ್ಯೂರಿಟಿ ಗಾರ್ಡ್ ಗಳನ್ನ ಅಗ್ನಿಶಾಮಕದಳ ಸಿಬ್ಬಂಧಿ ರಕ್ಷಣೆ ಮಾಡಿದ್ದಾರೆ. ಘಟನೆಯಲ್ಲಿ ಫರ್ನಿಚರ್ ಶೋರೂಂ ಸಂಪೂರ್ಣ ಭಸ್ಮವಾಗಿದೆ. ಉಳಿದಂತೆ ಕೋಚಿಂಗ್ ಸೆಂಟರ್ ಹಾಗೂ ಐಟಿ ಕಂಪನಿ ಸಣ್ಣಪುಟ್ಟ ವಸ್ತುಗಳು ಬೆಂಕಿಗೆ ಆಹುತಿ ಆಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಢ ನಡೆದಿರುವ ಶಂಕೆ ವ್ಯಕ್ತವಾಗಿದೆ. ಎರಡನೇ ಮಹಡಿಯಲ್ಲಿ ಕಾಮೆಡ್ ಕೋಂಚಿಂಗ್ ಸೆಂಟರ್…

Read More

ಬೆಂಗಳೂರು:- ಹೆಚ್ ಡಿಕೆಗೂ, ಗ್ಯಾರಂಟಿ ಯೋಜನೆಗಳಿಗೂ ಏನು ಸಂಬಂಧ ಎಂದು DCM ಡಿಕೆ ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ. ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುತ್ತಿಲ್ಲ ಎಂಬ ಕುಮಾರಸ್ವಾಮಿ ಆರೋಪ ಕುರಿತು ಪ್ರತಿಕ್ರಿಯಿಸಿ, “ಕುಮಾರಸ್ವಾಮಿ ಅವರಿಗೂ ಗ್ಯಾರಂಟಿ ಯೋಜನೆಗಳಿಗೂ ಏನು ಸಂಬಂಧ?. ಅವರಿಗೆ ಗ್ಯಾರಂಟಿ ಯೋಜನೆಗಳ ಬಗ್ಗೆ ಏನು ಗೊತ್ತಿದೆ” ಎಂದು ಪ್ರಶ್ನಿಸಿದ್ದಾರೆ. ಕುಮಾರಸ್ವಾಮಿ ಅವರಿಗೆ ಬಡ ಜನತೆಯ ನೋವು ಗೊತ್ತಿದ್ದರೆ ಹೀಗೆ ಮಾತನಾಡುತ್ತಿರಲಿಲ್ಲ. ಅವರೂ ಒಬ್ಬ ನಾಯಕರು, ಆರೋಪ ಮಾಡಲಿ ತೊಂದರೆಯಿಲ್ಲ. ಗ್ಯಾರಂಟಿ ಯೋಜನೆಗಳಿಂದ ಯಾರಿಗೆ ಒಳ್ಳೆಯದಾಗಬೇಕಿತ್ತೊ ಅವರಿಗೆ ಅದು ತಲುಪಿ, ಸಂತೋಷವಾಗಿದ್ದಾರೆ. ಕುಮಾರಸ್ವಾಮಿ ಅವರೇನು ಫಲಾನುಭವಿಗಳೂ ಅಲ್ಲ, ಅದರ ಬಗ್ಗೆ ಅವರಿಗೆ ಚಿಂತನೆಯೇ ಇಲ್ಲ. ಪಾಪ ಅವರಿಗೆ ಅವರ ಪಂಚರತ್ನ ಯೋಜನೆಗಳನ್ನು ಜಾರಿ ಮಾಡಲು ಅವಕಾಶ ಆಗಲೇ ಇಲ್ಲ. ನಮ್ಮ ಗ್ಯಾರಂಟಿ ಯೋಜನೆಗಳು ತಲುಪಿದೆಯೋ, ಇಲ್ಲವೊ ಎನ್ನುವುದನ್ನು ಅವರು ಮತದಾರರ ಬಳಿ ಕೇಳಿ ತಿಳಿದುಕೊಳ್ಳಬೇಕು” ಎಂದು ತಿರುಗೇಟು ನೀಡಿದ್ದಾರೆ.

Read More

ಬೆಂಗಳೂರು:-;ವಯಸ್ಸಾದ ತಂದೆ-ತಾಯಿ ನೋಡಿಕೊಳ್ಳುವುದು ಮಕ್ಕಳ ಜವಬ್ದಾರಿ ಎಂದು ಹೈಕೋರ್ಟ್ ಹೇಳಿದೆ. ಜೀವನದ ಸಂಧ್ಯಾಕಾಲದಲ್ಲಿರುವ ಪೋಷಕರನ್ನು ಆರೈಕೆ ಮಾಡುವ ಜವಾಬ್ದಾರಿಯನ್ನು ಕಾನೂನು, ಧರ್ಮ ಮತ್ತು ನೈತಿಕತೆಯು ಮಕ್ಕಳ ಮೇಲೆ ಹೇರುತ್ತದೆ. ಪೋಷಕರ ಆಸ್ತಿಯನ್ನು ಮಕ್ಕಳು ಉಡುಗೊರೆಯಾಗಿ ಪಡೆದಾಗ ಈ ಜವಾಬ್ದಾರಿ ಹೆಚ್ಚಿರುತ್ತದೆ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ. ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ವಿಭಾಗೀಯ ಪೀಠ, ಈ ಅಭಿಪ್ರಾಯ ವ್ಯಕ್ತಪಡಿಸಿದೆ. ತಂದೆಯಿಂದ ಆಸ್ತಿಯನ್ನು ಗಿಫ್ಟ್‌ ಡೀಡ್‌ ಆಗಿ ಪಡೆದಿರುವುದನ್ನು ಅಮಾನ್ಯಗೊಳಿಸಿದ್ದ ತುಮಕೂರು ವಲಯದ ‘ಪೋಷಕರ ಕಲ್ಯಾಣ ಮತ್ತು ಹಿರಿಯ ನಾಗರಿಕರ ನಿರ್ವಹಣೆ ಕಾಯ್ದೆಯಡಿಯ ನ್ಯಾಯಾಧಿಕರಣ’ದ ಉಪ ವಿಭಾಗಾಧಿಕಾರಿಯ ಆದೇಶ ಮತ್ತು ಅದನ್ನು ಎತ್ತಿಹಿಡಿದಿದ್ದ ಹೈಕೋರ್ಟ್‌ ಏಕ ಸದಸ್ಯ ಪೀಠದ ತೀರ್ಪನ್ನು ವಿಭಾಗೀಯ ಪೀಠ ಪುರಸ್ಕರಿಸಿದೆ. ವಯಸ್ಸಾದ ತಂದೆ ಮತ್ತು ತಾಯಿಯನ್ನು ನೋಡಿಕೊಳ್ಳುವುದು ಮಕ್ಕಳ ಹೊಣೆಗಾರಿಕೆಯಾಗಿದೆಯೇ ಹೊರತು ದಯೆ-ದಾನದ ವಿಚಾರವಲ್ಲ. ವೃದ್ಧಾಪ್ಯ ತಂದೆ-ತಾಯಿಯನ್ನು ಆರೈಕೆ ಮಾಡುವುದು ಮಕ್ಕಳ ಶಾಸನಬದ್ಧ ಜವಾಬ್ದಾರಿ. ‘ರಕ್ಷಂತಿ ಸ್ಥಾವಿರೇ ಪುತ್ರ’ ಎಂದು ಸಹಸ್ರಾರು ವರ್ಷಗಳಿಂದ…

Read More

ಕೊಪ್ಪಳ:- ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ನಾನೂ ಪ್ರಯತ್ನ ಮಾಡಿದ್ದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ.ವೈ.ವಿಜಯೇಂದ್ರ ಅವರನ್ನು ಆಯ್ಕೆ ಮಾಡಿರುವುದು ಕಾರ್ಯಕರ್ತರಲ್ಲಿ ಸಂತಸ ತಂದಿದೆ. ನಮ್ಮ ನಾಯಕರು ತೆಗೆದುಕೊಳ್ಳುವ ನಿರ್ಣಯಕ್ಕೆ ನಾವು ಬದ್ಧ ಎಂದರು. ನಾನು ಕೂಡ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪ್ರಯತ್ನಿಸಿದ್ದೆ. ಪಕ್ಷಕ್ಕೆ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪನವರ ಕೊಡುಗೆ ಅನನ್ಯ. ನನಗೆ ರಾಜ್ಯಾಧ್ಯಕ್ಷ ಸ್ಥಾನ ಸಿಕ್ಕಿಲ್ಲ ಎನ್ನುವ ಅಸಮಾಧಾನವಿಲ್ಲ ಎಂದೂ ಇದೇ ವೇಳೆ ಸ್ಪಷ್ಟಪಡಿಸಿದರು. ಬಿ.ವೈ.ವಿಜಯೇಂದ್ರನನ್ನು ರಾಜ್ಯಾಧ್ಯಕ್ಷನನ್ನಾಗಿ ನೇಮಕ ಮಾಡಿರುವ ಕುರಿತು ನಮ್ಮಲ್ಲಿ ಯಾರಿಗೂ ಅಸಮಾಧಾನವಿಲ್ಲ. ಅದೇನೇ ಇದ್ದರೂ ಪಕ್ಷದ ಪಡಸಾಲೆಯಲ್ಲಿ ಚರ್ಚೆ ಮಾಡುತ್ತೇವೆ ಎಂದರಲ್ಲದೆ, ಇನ್ನು ವಿರೋಧ ಪಕ್ಷದ ನಾಯಕರ ಆಯ್ಕೆ ಪ್ರಕ್ರಿಯೆಯೂ ಶೀಘ್ರ ನಡೆಯುತ್ತದೆ ಎಂದರು. ಇನ್ನೂ ಅಧಿಕಾರಕ್ಕೆ ಬಂದ ಕೇವಲ ನಾಲ್ಕು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದರು. ಕೋರ್ಟ್ ಆದೇಶಕ್ಕೆ ಮೊದಲೇ ಕಾವೇರಿ ನೀರು ಬಿಟ್ಟು…

Read More

ರಿಯಾಧ್‌: ” ಗಾಜಾ ನಗರದಲ್ಲಿ ಇಸ್ರೇಲ್‌ ಸೇನೆಯು ಆತ್ಮರಕ್ಷಣೆ ನೆಪದಲ್ಲಿ ನಡೆಸುತ್ತಿರುವ ಪ್ಯಾಲೆಸ್ತೀನಿ ನಾಗರಿಕರ ಹತ್ಯಾಕಾಂಡವನ್ನು ಮುಸ್ಲಿಂ ಬಹುಸಂಖ್ಯಾತ ರಾಷ್ಟ್ರಗಳು ತೀವ್ರವಾಗಿ ಖಂಡಿಸಬೇಕು. ಈ ಕೂಡಲೇ ಇಸ್ರೇಲ್‌ ಸೇನೆಗೆ ಉಗ್ರ ಸಂಘಟನೆಯ ಪಟ್ಟ ಕಟ್ಟಬೇಕು ,” ಎಂದು ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಕರೆ ನೀಡಿದ್ದಾರೆ. ಸೌದಿ ಅರೇಬಿಯಾದಲ್ಲಿ ನಡೆದ ಅರಬ್‌ ಮತ್ತು ಮುಸ್ಲಿಂ ರಾಷ್ಟ್ರಗಳ ನಾಯಕರ ಶೃಂಗದಲ್ಲಿ ಅವರು ಈ ನಿರ್ಣಯವನ್ನು ಮಂಡಿಸಿದ್ದಾರೆ. ಈ ಶೃಂಗವನ್ನು ತುರ್ತಾಗಿ ಇಸ್ಲಾಮಿಕ್‌ ಸಹಕಾರ ಸಂಘಟನೆ (ಒಐಸಿ) ಮತ್ತು ಅರಬ್‌ ಲೀಗ್‌ ಆಯೋಜಿಸಿದ್ದವು. ” ಅಮೆರಿಕದ ಕುಮ್ಮಕ್ಕಿನಿಂದ ಇಸ್ರೇಲ್‌ ಸಮರವನ್ನು ಮುಂದುವರಿಸಿದೆ. ಪ್ಯಾಲೆಸ್ತೀನಿಯರ ವಿರುದ್ಧದ ನಿಜವಾದ ಅಪರಾಧಿ ಅಮೆರಿಕ,” ಎಂದು ರೈಸಿ ಗುಡುಗಿದ್ದಾರೆ. ರೈಸಿ ಕರೆಗೆ ಬೆಂಬಲ ವ್ಯಕ್ತಪಡಿಸಿರುವ ಸೌದಿ ಅರೇಬಿಯಾ ಯುವರಾಜ ಮೊಹಮ್ಮದ್‌ ಬಿನ್‌ ಸಲ್ಮಾನ್‌, ” ಪ್ಯಾಲೆಸ್ತೀನಿ ಜನರ ವಿರುದ್ಧದ ಅಪರಾಧಗಳಿಗೆ ನೇರವಾಗಿ ಇಸ್ರೇಲಿ ಅಧಿಕಾರಿಗಳೇ ಹೊಣೆ. ಅವರನ್ನೇ ಹೊಣೆಯಾಗಿಸಿ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಕ್ರಮ ಜರುಗಿಸಬೇಕು. ಕದನವಿರಾಮದಿಂದ ಮಾತ್ರವೇ ಮಧ್ಯಪ್ರಾಚ್ಯದಲ್ಲಿ ಶಾಂತಿ…

Read More

ಬೆಂಗಳೂರು:- ಕಾಡಂಚಿನ ಗ್ರಾಮಗಳಿಗೆ ಹಗಲು ಹೊತ್ತಿನಲ್ಲಿ ಮಾತ್ರ ತ್ರೀ ಫೇಸ್ ವಿದ್ಯುತ್ ಒದಗಿಸಲು ಕ್ರಮ ಕೈಗೊಳ್ಳಬೇಕೆಂದು ಸಚಿವ ಈಶ್ವರ್ ಖಂಡ್ರೆ ಅವರು ಸೂಚನೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರಾಜ್ಯಾದ್ಯಂತ ಕಾಡಿನಂಚಿನಲ್ಲಿರುವ ಪ್ರದೇಶಗಳಿಗೆ ಆನೆ, ಹುಲಿ, ಚಿರತೆ ಸೇರಿದಂತೆ ಹಲವು ಕಾಡು ಪ್ರಾಣಿಗಳು ಬರುತ್ತಿರುವ ಹಿನ್ನೆಲೆ ಹೆಚ್ಚು ಪ್ರಾಣ ಹಾನಿ ಸಂಭವಿಸುತ್ತಿವೆ. ರಾತ್ರಿಯ ವೇಳೆ ತ್ರೀ ಫೇಸ್ ವಿದ್ಯುತ್ ಪೂರೈಕೆ ಮಾಡಿದರೆ ರೈತರು ಪಂಪ್ ಸೆಟ್ ಆನ್ ಮತ್ತು ಆಫ್ ಮಾಡಲು ಜಮೀನುಗಳಿಗೆ ಸಂಚರಿಸುವ ಕಾರಣ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಇದರಿಂದಾಗಿ ಬೆಳಗಿನ ಹೊತ್ತು ತ್ರೀ ಫೇಸ್ ವಿದ್ಯುತ್ ಪೂರೈಸುವುದು ಸೂಕ್ತ ಎಂಬುದು ತಜ್ಞರ ಅಭಿಪ್ರಾಯವಾಗಿದೆ. ಈ ನಿಟ್ಟಿನಲ್ಲಿ ಕಾಡಂಚಿನ ಗ್ರಾಮಗಳಿಗೆ ರಾತ್ರಿಯ ಹೊತ್ತು ತ್ರೀ ಫೇಸ್ ವಿದ್ಯುತ್ ಪೂರೈಸದಂತೆ ಇಂಧನ ಇಲಾಖೆಗೆ ನಿರ್ದೇಶನ ನೀಡುವಂತೆ ಇಂಧನ ಸಚಿವರಲ್ಲಿ ಕೋರಿದ್ದಾರೆ.

Read More

ಬೆಂಗಳೂರು:- ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ಆಯ್ಕೆಯಿಂದ ಕಾಂಗ್ರೆಸ್​ಗೆ ನಡುಕ ಶುರುವಾಗಿದೆ ಎಂದು ಸಿ ಸಿ ಪಾಟೀಲ್ ಹೇಳಿದ್ದಾರೆ ಈ ಸಂಬಂಧ ಮಾತನಾಡಿದ ಅವರು, ಸೂಕ್ತ ಸಂದರ್ಭದಲ್ಲಿ ಯೋಗ್ಯ ವ್ಯಕ್ತಿಯನ್ನು ರಾಜ್ಯಾಧ್ಯಕ್ಷರನ್ನಾಗಿ ಹೈಕಮಾಂಡ್ ಆಯ್ಕೆ ಮಾಡಿದೆ. ಬಿ ವೈ ವಿಜಯೇಂದ್ರ ಅಧಿಕಾರ ಸ್ವೀಕಾರ ಮಾಡುವ ಮುನ್ನವೇ ಕಾಂಗ್ರೆಸ್​ಗೆ ನಡುಕ ಶುರುವಾಗಿದೆ ಎಂದು ಕುಟುಂಬ ರಾಜಕಾರಣದ ಬಗ್ಗೆ ಆರೋಪ ಮಾಡಿದ್ದ ಕಾಂಗ್ರೆಸ್ ನಾಯಕರಿಗೆ ಮಾಜಿ ಸಚಿವ ಸಿ ಸಿ ಪಾಟೀಲ್ ತಿರುಗೇಟು ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆಯನ್ನೂ ಕಾಂಗ್ರೆಸ್ ಟೀಕೆ ಮಾಡಿದೆ. ಆದರೆ ನಮ್ಮ ಹೈಕಮಾಂಡ್ ಸೂಕ್ತ ವ್ಯಕ್ತಿಯನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿದೆ. ಕಾಂಗ್ರೆಸ್​ಗೆ ವಿಜಯೇಂದ್ರ ಹೆಸರು ಘೋಷಣೆಯಿಂದ ನಡುಕ ಶುರುವಾಗಿದೆ. ಇನ್ನೂ ವಿಜಯೇಂದ್ರ ಅಧಿಕಾರ ಸ್ವೀಕರಿಸಿಲ್ಲ, ಆಗಲೇ ಕಾಂಗ್ರೆಸ್​​ಗೆ ನಡುಕ ಉಂಟಾಗಿದೆ. ಹೀಗಾಗಿ ಕುಟುಂಬ ರಾಜಕಾರಣ ಅಂತ ಕಾಂಗ್ರೆಸ್ ಆರೋಪಿಸುತ್ತಿದೆ ಎಂದು ಟಾಂಗ್ ನೀಡಿದ್ದಾರೆ. ನಮ್ಮ ಪಕ್ಷದ ರಾಜ್ಯಾಧ್ಯಕ್ಷರ ಆಯ್ಕೆ ಆಂತರಿಕ ವಿಚಾರವಾಗಿದೆ, ವಿಜಯೇಂದ್ರ ಕಳೆದ ಹಲವು ವರ್ಷಗಳಿಂದ ರಾಜಕೀಯದಲ್ಲಿದ್ದಾರೆ. ಪಕ್ಷದ…

Read More

ನಾಗಮಂಗಲ:-ಬಿಎಸ್‌ವೈ ಇದ್ದಾಗ ಬಿಜೆಪಿಗಿದ್ದ ಶಕ್ತಿ ಈಗಂತೂ ಇಲ್ಲ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬಿಜೆಪಿ ಪಕ್ಷದ ಮಡಿಕೆ ಒಡೆದುಹೋಗಿದೆ. ಒಡೆದ ಮಡಿಕೆಗೆ ಎಷ್ಟು ನೀರು ತುಂಬಿದರೂ ಅದು ನಿಲ್ಲುವುದಿಲ್ಲ ಎಂದರು. ಯಡಿಯೂರಪ್ಪನವರನ್ನು ಅಧಿಕಾರದಿಂದ ಕೆಳಗಿಳಿಸಿದ ದಿನವೇ ಬಿಜೆಪಿ ಮಡಿಕೆ ಒಡೆದುಹೋಗಿದೆ. ವಿಜಯೇಂದ್ರ ಅವರನ್ನು ಮಂತ್ರಿ ಮಾಡುವಂತೆ ಕೇಳಿದಾಗಲೂ ಮಾಡಲಿಲ್ಲ. ಈಗ ಪರಿಸ್ಥಿತಿಯ ಅರಿವಾಗಿ ಅದಕ್ಕೆ ತೇಪೆ ಹಾಕೋಕೆ ಹೋಗಿದ್ದಾರೆ. ಏನೇ ಮಾಡಿದರೂ ಹಿಂದೆ ಯಡಿಯೂರಪ್ಪ ಇದ್ದಾಗ ಬಿಜೆಪಿಗೆ ಇದ್ದ ಶಕ್ತಿ ಯಾವುದೇ ಕಾರಣಕ್ಕೂ ಈಗ ಬರುವುದಿಲ್ಲ ಎಂದು ಖಡಕ್ಕಾಗಿ ನುಡಿದರು. ಯಡಿಯೂರಪ್ಪ ಇದ್ದ ಸಮಯದಲ್ಲೇ ಬಿಜೆಪಿ115 ಸ್ಥಾನ ದಾಟಲಿಲ್ಲ. ಇವಾಗ ಆ ಶಕ್ತಿ ಬರೋದೆ ಇಲ್ಲ. ವಿಜಯೇಂದ್ರ ಒಳ್ಳೆಯವನು. ಅವನ ಬಗ್ಗೆ ನನಗೆ ಗೌರವವಿದೆ. ವಿಜಯೇಂದ್ರ ನನ್ನ ಸ್ನೇಹಿತ‌. ಯಡಿಯೂರಪ್ಪನವರ‌ ಬಗ್ಗೆಯೂ ಗೌರವವಿದೆ ಎಂದರು. ಬಿಜೆಪಿಯಿಂದ ವಂಶ ರಾಜಕಾರಣ ವಿಚಾರವಾಗಿ ಪ್ರತಿಕ್ರಿಯಿಸಿ, ಎಲ್ಲ ಪಕ್ಷದಲ್ಲಿಯೂ ಕುಟುಂಬ ರಾಜಕಾರಣ ಇದ್ದೇ ಇದೆ. ಕುಮಾರಸ್ವಾಮಿ ವಂಶ ರಾಜಕಾರಣ ಮಾಡುತ್ತಿಲ್ಲವೇ. ಬಿಜೆಪಿ…

Read More

ಬೆಂಗಳೂರು:- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಮೇಶ್ವರ ಗ್ರಾಮದಲ್ಲಿ ಫೋಟೋಶೂಟ್ ಮಾಡುತ್ತಿದ್ದ ಯುವಕನನ್ನು ನಾಲ್ವರು ಯುವಕರು ಹತ್ಯೆ ಮಾಡಿದ ಘಟನೆ ಜರುಗಿದೆ. ಸೂರ್ಯ ಕೊಲೆಯಾದ ದುರ್ದೈವಿ. ದೀಪಾವಳಿ ಹಬ್ಬದ ಪ್ರಯುಕ್ತ ರಾಮೇಶ್ವರ ಗ್ರಾಮದ ಡಾಬಾದ ಸೀನರಿ ಹಾಕಲಾಗಿತ್ತು. ಇದರ ಮುಂದೆ ನಿಂತು ಸೂರ್ಯ ತನ್ನ ಸ್ನೇಹಿತರಿಂದ ಫೋಟೋ ತೆಗೆಸಿಕೊಳ್ಳುತ್ತಿದ್ದನು. ಈ ವೇಳೆ ನಾಲ್ವರು ಅಪರಿಚಿತ ಯುವಕರು ಬಂದು ಸೂರ್ಯನ ಜೊತೆ ಕಿರಿಕ್ ಮಾಡಿದ್ದಾರೆ. ಸೂರ್ಯನ ಬಳಿ ಇದ್ದ ಕ್ಯಾಮರಾ ಕಿತ್ತುಕೊಳ್ಳಲು ಯತ್ನಿಸಿದಾಗ ವಿರೋಧ ವ್ಯಕ್ತಪಡಿಸಿದ್ದಾನೆ. ಹೀಗಾಗಿ ಸೂರ್ಯನನ್ನು ದುಷ್ಕರ್ಮಿಗಳು ಹತ್ಯೆಗೈದು ಸ್ಥಳದಿಂದ ಪರಾರಿಯಾಗಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ದೊಡ್ಡಬೆಳವಂಗಲ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್‌ ಮೆಂಟಲ್ ಹೆಲ್ತ್‌ ಅಂಡ್ ನ್ಯೂರೋ ಸೈನ್ಸಸ್), ಬೆಂಗಳೂರು, ಇಲ್ಲಿ ಖಾಲಿ ಇರುವ ನರ್ಸಿಂಗ್ ಆಫೀಸರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ 7th ಸಿಪಿಸಿ, ಪೇ ಮೆಟ್ರಿಕ್ಸ್‌ 2 ಪ್ರಕಾರ ರೂ.9300-34800 ವರೆಗೆ ವೇತನ ಶ್ರೇಣಿ ನೀಡಲಾಗುತ್ತದೆ. ಈ ಹುದ್ದೆಗಳು ಗ್ರೂಪ್‌ ಬಿ ಪೋಸ್ಟ್‌ಗಳಾಗಿವೆ. ಆಸಕ್ತರು ಇನ್ನಷ್ಟು ಮಾಹಿತಿಗಳನ್ನು ಕೆಳಗಿನಂತೆ ತಿಳಿದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ. ನೇಮಕಾತಿ ಪ್ರಾಧಿಕಾರ : ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ಹುದ್ದೆಯ ಹೆಸರು : ನರ್ಸಿಂಗ್ ಆಫೀಸರ್ ಹುದ್ದೆಗಳ ಸಂಖ್ಯೆ : 161 ವಿದ್ಯಾರ್ಹತೆ : ಬಿಎಸ್ಸಿ ಹಾನರ್ಸ್‌ ನರ್ಸಿಂಗ್ / ಬಿಎಸ್ಸಿ ನರ್ಸಿಂಗ್ ಅಥವಾ ಬಿಎಸ್ಸಿ / ಪೋಸ್ಟ್‌ ಬೇಸಿಕ್ ಬಿಎಸ್ಸಿ ನರ್ಸಿಂಗ್ ಪಾಸ್‌. ಜತೆಗೆ ರಾಜ್ಯ ಅಥವಾ ಕೇಂದ್ರ ಸರ್ಕಾರದ ನರ್ಸಿಂಗ್ ಕೌನ್ಸಿಲ್ ನಲ್ಲಿ ರಿಜಿಸ್ಟ್ರೇಷನ್‌ ಪಡೆದಿರಬೇಕು. ಇತರೆ ಅರ್ಹತೆ : ಕನಿಷ್ಠ 50…

Read More