Author: AIN Author

ವಿರಾಟ್ ಕೊಹ್ಲಿ ಅವರ ಪತ್ನಿ ಅನುಷ್ಕಾ ಶರ್ಮಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಅನುಷ್ಕಾ ಶರ್ಮಾ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಅಭಿಮಾನಿಗಳ ಜೊತೆ ಸಿಹಿಸುದ್ದಿ ಹಂಚಿಕೊಂಡಿದ್ದಾರೆ. ಫೆ.15 ರಂದು ವಿರುಷ್ಕಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸುದ್ದಿಯನ್ನು ಮಂಗಳವಾರ (ಫೆ.20) ಹಂಚಿಕೊಂಡಿದ್ದಾರೆ. ಟೀಂ ಇಂಡಿಯಾ ಕ್ರಿಕೆಟ್ ಆಟಗಾರ ವಿರಾಟ್ ಕೊಹ್ಲಿ ಅವರ ಮನೆಗೆ ಮತ್ತೊಬ್ಬ ಅತಿಥಿಯ ಆಗಮನವಾಗಿದೆ. ಬಾಲಿವುಡ್ ನಟಿ, ವಿರಾಟ್ ಕೊಹ್ಲಿ ಅವರ ಪತ್ನಿ ಅನುಷ್ಕಾ ಶರ್ಮಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿಗೆ ಈಗಾಗಲೇ ‘ಅಕಾಯ್‌’ ಎಂದು ಹೆಸರಿಟ್ಟಿದ್ದಾರೆ. ಕೊಹ್ಲಿ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ.

Read More

ಬೆಂಗಳೂರು:- ರಾಜ್ಯ ಸರ್ಕಾರವು ಐಪಿಎಸ್ ಪ್ರತಾಪ್ ರೆಡ್ಡಿ ರಾಜೀನಾಮೆ ಅಂಗೀಕರಿಸಿದೆ. 1991ರ ಬ್ಯಾಚ್​​ನ ಐಪಿಎಸ್​ ಅಧಿಕಾರಿ ಪ್ರತಾಪ್​ ರೆಡ್ಡಿ ಅವರ ಸೇವಾವಧಿ ಇನ್ನೂ ನಾಲ್ಕುವರೆ ತಿಂಗಳು ಬಾಕಿ ಇರುವಾಗಲೇ ಸ್ವಯಂ ನಿವೃತ್ತಿ ಕೋರಿ ಜನವರಿ 22ರಂದು ಸರ್ಕಾರಕ್ಕೆ ಪತ್ರ ಬರೆದಿದ್ದರು. ಇದೀಗ ಸರ್ಕಾರ ಪ್ರತಾಪ್ ರೆಡ್ಡಿಯವರ ಸ್ವಯಂ ನಿವೃತ್ತಿ ಪತ್ರವನ್ನು ಅಂಗೀಕರಿಸಿದ್ದು, ಏಪ್ರಿಲ್ 30 ಕ್ಕೆ ಇಲಾಖೆಯಿಂದ ಬಿಡುಗಡೆಗೊಳಿಸುಂವತೆ ಆದೇಶಿಸಿದೆ. ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ (DGP) ಕಾರ್ಯ ನಿರ್ವಹಣೆ ಮಾಡುತ್ತಿದ್ದ ಪ್ರತಾಪ್ ರೆಡ್ಡಿ ವೈಯುಕ್ತಿಕ ಕಾರಣ ನೀಡಿ ರಾಜೀನಾಮೆ ನೀಡಿದ್ದರು. ಬರುವ ಏಪ್ರಿಲ್ 30ಕ್ಕೆ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಪ್ರತಾಪ್ ರೆಡ್ಡಿ ಅವರು 1991ನೇ ಬ್ಯಾಚ್​​ನ ಐಪಿಎಸ್​​ ಅಧಿಕಾರಿಯಾಗಿದ್ದು ಮೂಲತಃ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯವರು. ಜು. 01 1964ರಲ್ಲಿ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಜನಸಿರುವ. ಪ್ರತಾಪ್​ ರೆಡ್ಡಿ ಬಿ.ಟೆಕ್​ ಪದವೀಧರರು. ಇವರು 1991ರಲ್ಲಿ…

Read More

ಹುಬ್ಬಳ್ಳಿ:- ರಾಮ ಮಂದಿರ ನಿರ್ಮಾಣದಿಂದ ಬಡತನ ನಿರ್ಮೂಲನೆ ಆಗಲ್ಲ ಎಂಬ ಸಚಿವ ಸಂತೋಷ್​​ ಲಾಡ್​​ ಹೇಳಿಕೆಗೆ ಜಗದೀಶ್​ ಶೆಟ್ಟರ್​ ಪ್ರತಿಕ್ರಿಯೆ ನೀಡಿದ್ದಾರೆ. ರಾಮ ಮಂದಿರ ನಿರ್ಮಾಣ ಮಾಡುಗುವವುದಕ್ಕೆ ಕಾಂಗ್ರೆಸ್​ಗೆ ಸಾಧ್ಯ ಆಗಲಿಲ್ಲ. ಪ್ರಣಾಳಿಕೆಯಲ್ಲಿ ರಾಮ ಮಂದಿರ ಕಟ್ಟತೀವಿ ಎನ್ನುವುದು ಇತ್ತು. ಇದೀಗ ರಾಮ ಮಂದಿರ ಆಗಿದೆ ಎಂದರು. ಇದೇ ವೇಳೆ ರಾಮ ಮಂದಿರ ಕಟ್ಟಡ ನಿರ್ಮಾಣ ಆಗುವ ಜಾಗದಲ್ಲಿ ಆಗಿಲ್ಲ ಎಂಬ ಹೇಳಿಕೆ, ‘ಜಾಗ ಸರಿ ಇಲ್ಲ ಅಂದ್ರೆ ನೀವು ಕೋರ್ಟ್​ಗೆ ಹೋಗಬೇಕಿತ್ತು. ಕಟ್ಟಡ ನಿರ್ಮಾಣವಾ ಸಮಯದಲ್ಲಿ ಏನ್​ ಮಾಡ್ತಿದ್ರು. ಸಂತೋಷ್ ಲಾಡ್​ಗೆ ಇದೆಲ್ಲ ಅರ್ಥ ಆಗಬೇಕು ಎಂದು ಹೇಳಿದರು. ರಾಮ ಮಂದಿರ ಬಗ್ಗೆ ಮಾತಾಡಿದ್ರೆ ನಿಮಗೆ ಕಳೆದ ಬಾರಿ ಬಂದಿರುವ ಸೀಟು ಬರಲ್ಲ ಎಂದ ಶೆಟ್ಟರ್, ಚೀನಾ ಅಕ್ರಮಣ ಮಾಡಿದ್ರು, ನಮಗೆ ಹೇಳೋರ ಕೇಳೋರ ಯಾರೂ ಇರಲ್ಲ. ಇವತ್ತು ಜಮ್ಮು ಕಾಶ್ಮೀರದಲ್ಲಿ ಶಾಂತಿ ನೆಲಸಿದೆ. ಮೋದಿ ಅವರು ದೇಶದ ಭದ್ರತೆಗೆ ಮಹತ್ವ ಕೊಟ್ಟಿದ್ದಾರೆ. ಇದನ್ನೆಲ್ಲ ಸಂತೋಷ್ ಲಾಡ್ ಯಾಕೆ ಚರ್ಚೆ…

Read More

ಕೊಟ್ಟ ಮಾತಿನಂತೆ ಬಿಗ್​ಬಾಸ್​ನಲ್ಲಿ ಗೆದ್ದ ಬೈಕ್ ಅನ್ನು ಡ್ರೋನ್ ಪ್ರತಾಪ್ ದಾನ ಮಾಡಿದ್ದಾರೆ. ಬಿಗ್​ಬಾಸ್​ ವೇದಿಕೆ ಮೇಲೆ ಮಾತನಾಡಿದ್ದ ಪ್ರತಾಪ್ ತಾನು ಬಿಗ್​ಬಾಸ್​ ಗೆದ್ದರೆ ಬರುವ ಹಣ ಇನ್ನಿತರೆಗಳನ್ನು ದಾನ ಮಾಡುವುದಾಗಿ ಹೇಳಿದ್ದರು. ಅಂತೆಯೇ ಬಿಗ್​ಬಾಸ್​ ರನ್ನರ್ ಅಪ್ ಆಗಿದ್ದ ಪ್ರತಾಪ್​ಗೆ 10 ಲಕ್ಷ ಬಹುಮಾನದ ಮೊತ್ತ ಹಾಗೂ ಒಂದು ಎಲೆಕ್ಟ್ರಿಕ್ ಬೈಕ್ ಉಡುಗೊರೆಯಾಗಿ ನೀಡಲಾಗಿತ್ತು. ಇದೀಗ ಎಲೆಕ್ಟ್ರಿಕ್ ಬೈಕ್ ಅನ್ನು ಪ್ರತಾಪ್ ಅಗತ್ಯವಿರುವ ಯುವಕನೊಬ್ಬನಿಗೆ ದಾನ ಮಾಡಿದ್ದಾರೆ. ಈ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಯುವಕನೊಬ್ಬನಿಗೆ ಬೈಕ್ ಅನ್ನು ನೀಡುತ್ತಿರುವ ಚಿತ್ರ ಹಂಚಿಕೊಂಡಿರುವ ಡ್ರೋನ್ ಪ್ರತಾಪ್, ‘ಬಿಗ್‌ಬಾಸ್ ನಲ್ಲಿ ಬಹುಮಾನವಾಗಿ ಬಂದ ಬೈಕ್ ಅನ್ನು ಹೇಳಿದ ಹಾಗೆ ಯಾರಿಗೆ ನೀಡಿದೆ ಅನ್ನುವುದಕ್ಕೆ ಉತ್ತರ ಇಲ್ಲಿದೆ. ಇವರು ರಾಜು ಅಂತ ಮಧ್ಯಾಹ್ನದಿಂದ ಸಂಜೆ ವರೆಗೂ ಹೋಟಲ್ ನಲ್ಲಿ ಕೆಲಸ ಮಾಡಿ‌ ಹಾಗೂ ಸಂಜೆಯ ಮೇಲೆ ಫುಡ್ ಡೆಲಿವರಿ ಕೆಲಸ ಮಾಡುತ್ತಾರೆ ಮತ್ತು ಇವರು ತಮ್ಮ ಸ್ನೇಹಿತರ ಹೆಸರಲ್ಲಿ ಗಾಡಿಯನ್ನು ತೆಗೆದುಕೊಂಡು ಅದಕ್ಕೆ…

Read More

ಬೆಂಗಳೂರು:- ಇಡಿ ವಿರುದ್ಧ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ವೀರಪ್ಪ ಮೊಯ್ಲಿ, ನಲಪಾಡ್​ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ. 42ನೇ ಎಸಿಎಂಎಂ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಜಾರಿ ನಿರ್ದೇಶನಾಲಯದ ವಿರುದ್ಧ 2022 ರ ಆಗಸ್ಟ್ ತಿಂಗಳಿನಲ್ಲಿ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಹಿನ್ನೆಲೆ ವೀರಪ್ಪ ಮೊಯ್ಲಿ, ಮೊಹಮ್ಮದ್ ಹ್ಯಾರಿಸ್ ನಲಪಾಡ್ ವಿರುದ್ಧ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Read More

ಬೆಂಗಳೂರು:- ಪರಿಷತ್ ಉಪ ಚುನಾವಣೆ ಹಿನ್ನೆಲೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಸೋಲು ಕಂಡಿದೆ. ಶಿಕ್ಷಕರ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್​​ನ ಪುಟ್ಟಣ್ಣ ಮತ್ತೊಮ್ಮೆ ಗೆಲುವು ಸಾಧಿಸಿದ್ದಾರೆ. ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡು ಬಂದ ಪುಟ್ಟಣ್ಣ, ಅಂತಿಮವಾಗಿ ಜೆಡಿಎಸ್​​ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿ ರಂಗನಾಥ್​ ಅವರನ್ನು 1,507 ಮತಗಳ ಅಂತರದಿಂದ ಸೋಲಿಸಿ ಗೆಲುವಿನ ಕೇಕೆ ಹಾಕಿದರು. ಈ ಮೂಲಕ ಮೈತ್ರಿಯೊಂದಿಗೆ ಎದುರಿಸಿದ ಮೊದಲ ಚುನಾವಣೆಯಲ್ಲೇ ಬಿಜೆಪಿ ಹಾಗೂ ಜೆಡಿಎಸ್​ಗೆ ಮುಖಭಂಗವಾಗಿದೆ. ಇಂದು (ಫೆಬ್ರವರಿ 20) ಬೆಂಗಳೂರಿನ ನೃಪತುಂಗ ರಸ್ತೆಯ ಸರ್ಕಾರಿ ಕಲಾ ಕಾಲೇಜಿನಲ್ಲಿ ಮತಎಣಿಕೆ ನಡೆದಿದ್ದು, ಕಾಂಗ್ರೆಸ್​ನ ಪುಟ್ಟಣ್ಣ ಒಟ್ಟು 8,260 ಮತಗಳನ್ನು ಪಡೆದುಕೊಂಡಿದ್ದರೆ, ಜೆಡಿಎಸ್​-ಬಿಜೆಪಿ ಮೈತ್ರಿ ಅಭ್ಯರ್ಥಿ ಎಪಿ ರಂಗನಾಥ್ ಅವರಿಗೆ ಒಟ್ಟು 6753 ಮತಗಳು ಬಿದ್ದಿವೆ. ಇನ್ನು 1239 ಮತಗಳು ತಿರಸ್ಕೃತಗೊಂಡಿವೆ. ಇದರೊಂದಿಗೆ ಪುಟ್ಟಣ್ಣ, 1507 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಪುಟ್ಟಣ್ಣ ಅವರ ಅಧಿಕಾರವಧಿ 2026, ನವೆಂಬರ್ 11ರ ವರೆಗೆ ಇರಲಿದೆ. ಇದೇ ಪುಟ್ಟಣ್ಣ ಅವರ…

Read More

ಬೆಂಗಳೂರು:- ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದ ಬಿಎಂಟಿಸಿ ಚಾಲಕ ಹಿರಿಯ ಅಧಿಕಾರಿಗಳ ಕಿರುಕುಳಕ್ಕೆ‌ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಮದ್ಯಾಹ್ನ ನಡೆದಿದೆ.ಹೊಸಕೋಟೆ ಟೋಲ್ ಬಳಿ‌ ಘಟನೆ ನಡೆದಿದ್ದು, ಅಧಿಕಾರಿಗಳು ವಿಷ ಸೇವಿಸಲು ಯತ್ನಿಸಿದ ನಂಜುಂಡಯ್ಯನನ್ನು ಸಮಾಧಾನ ಪಡಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಹೊಸಕೋಟೆ ಪೋಲಿಸರು ಚಾಲಕನಿಗೆ ಪ್ರಥಮ ಚಿಕಿತ್ಸೆ ಕೊಟ್ಟು, ಆರೋಗ್ಯದ ಬಗ್ಗೆ ಪರಿಶೀಲನೆ ನಡೆಸಿದರು. ಬಿಎಂಟಿಸಿ ಹಿರಿಯ ಅಧಿಕಾರಿಗಳೊಂದಿಗೆ ಪೊಲೀಸರು ಸಮಾಲೋಚನೆ ನಡೆಸಿದರು.. ಮುಂದೆ ಈ ರೀತಿಯ ಕಿರುಕುಳ ಘಟನೆ ಮರುಕಳಿಸದಿರಲಿ ಎಂಬ ಎಚ್ಚರಿಕೆಯನ್ನು ಹಿರಿಯ ಅಧಿಕಾರಿಗಳಿಗೆ ಮತ್ತು ಚಾಲಕನಿಗೆ ಕೊಟ್ಟಿದ್ದಾರೆ. ಚಾಲಕ ಚೆರಿಸಿಕೊಂಡ ನಂತರ ಪೊಲೀಸರು ಸ್ಟೇಟ್ಮೆಂಟ್ ಪಡೆದುಕೊಂಡು ಮನೆಗೆ ಕಳುಹಿಸಿಕೊಟ್ಟಿದ್ದಾರೆ. ಹೊಸಕೋಟೆಯ ‌ಬಿಎಂಟಿಸಿ ಹಿರಿಯ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದು, ಇನ್ಮುಂದೆ ಕಿರುಕುಳ ನೀಡದಿರಲಿ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ..

Read More

ಬೆಂಗಳೂರು:- ರಾಜ್ಯ ಸರ್ಕಾರವು ಸುಗಂಧದ್ರವ್ಯ ಫ್ಯಾಕ್ಟರಿಯಲ್ಲಿ ಸ್ಪೋಟ ಕೇಸ್ ಗೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಲಾಗಿದೆ. ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ 1 ಲಕ್ಷ ರೂಪಾಯಿ ಪರಿಹಾರ ನೀಡುತ್ತೇವೆ ಎಂದು ವಿಧಾನಸಭೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಘೋಷಿಸಿದ್ದಾರೆ. ಭಾನುವಾರ ಯಶವಂತಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ದುರಂತ ಸಂಭವಿಸಿತ್ತು. ಸುಗಂಧ ದ್ರವ್ಯ ತಯಾರಿಕೆಯಲ್ಲಿ ಬಳಸಲಾಗುತ್ತಿದ್ದ ರಾಸಾಯನಿಕಗಳನ್ನು ಡಬ್ಬಗಳಲ್ಲಿ ತುಂಬಿಡಲಾಗಿತ್ತು. ಇದೇ ಡಬ್ಬ ಸೋರಿಕೆಯಾಗಿ ಘಟನೆ ಸಂಭವಿಸಿತ್ತು ಎನ್ನಲಾಗಿದೆ.

Read More

ಬೆಂಗಳೂರು:- HDK ಕೇಸರಿ ಶಾಲು ಕಿತ್ತೊಗೆಯುವ ಕಾಲ ದೂರವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಪರಿಷತ್​ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್​​ನ ಪುಟ್ಟಣ್ಣ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಬಿಜೆಪಿ ಮತ್ತು ಬಿಜೆಪಿ ಮೈತ್ರಿಗೆ ಸೋಲಾಗಿದೆ. ಇನ್ನು ಈ ಫಲಿತಾಂಶದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಧ್ಯಮ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿದ್ದು, ಬಿಜೆಪಿ, ಜೆಡಿಎಸ್ ನಾಯಕರ ನಡುವೆ ಮೈತ್ರಿಯಾಗಿದೆಯೇ ವಿನಃ ಮತದಾರರ ಒಪ್ಪಿಗೆ ಇಲ್ಲ ಎಂಬುದನ್ನು ಈ ಫಲಿತಾಂಶ ಸ್ಪಷ್ಟಪಡಿಸಿದೆ. ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಜೆಡಿಎಸ್‌ ಮುಖವಾಡ ಕಳಚಿದೆ ಎಂದು ಟಾಂಗ್ ಕೊಟ್ಟಿದ್ದಾರೆ. JDS ಕೋಮುವಾದಿ ಅವತಾರಕ್ಕೆ ಮತದಾರ ಕಪಾಳಮೋಕ್ಷ ಮಾಡಿದ್ದಾನೆ. ಉಪ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣಗೆ ಅಭಿನಂದನೆ. ಇದು ನಮ್ಮ ಸರ್ಕಾರದ 9 ತಿಂಗಳ ಜನಪರವಾದ ಆಡಳಿತ ಮತ್ತು ಸರ್ಕಾರದ ಬಗ್ಗೆ ಪ್ರಜ್ಞಾವಂತ ಮತದಾರರು ಇಟ್ಟಿರುವ ವಿಶ್ವಾಸದ ಗೆಲುವು. ಬಿಜೆಪಿ, ಜೆಡಿಎಸ್ ಒಟ್ಟಾಗಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ರೂ ಸೋಲು ಇದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, H.D.ಕುಮಾರಸ್ವಾಮಿ,…

Read More

ಗೋಕಾಕ- ಘಟಪ್ರಭಾ ಸಹಕಾರಿ ಕಾರ್ಖಾನೆ ಅಧ್ಯಕ್ಷ ಅಶೋಕ ಪಾಟೀಲ ಅವರು ನವದೆಹಲಿಯ ರಾಷ್ಟ್ರೀಯ ಸಹಕಾರಿ ಸಕ್ಕರೆ ಕಾರ್ಖಾನೆಗಳ ಮಹಾಮಂಡಳಿಯ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ ಷಾ ಅವರನ್ನು ಭೇಟಿ ಮಾಡಿ ಅಶೋಕ ಪಾಟೀಲ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸಹಕಾರಿ ಸಕ್ಕರೆ ಕಾರ್ಖಾನೆಗಳ ಮಹಾ ಮಂಡಳಿಯ ನೂತನ ಅಧ್ಯಕ್ಷ- ಉಪಾಧ್ಯಕ್ಷರು ಮತ್ತು ನಿರ್ದೇಶಕ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು. ಅಶೋಕ ಪಾಟೀಲ ಅವರನ್ನು ಕಾರ್ಖಾನೆಯ ಆಡಳಿತ ಮಂಡಳಿ ಸದಸ್ಯರುಗಳು ಅಭಿನಂದಿಸಿದ್ದಾರೆ.

Read More