Author: AIN Author

ನಿರ್ದೇಶಕ ಹಾಗೂ ನಿರ್ಮಾಪಕ ಗುರು ದೇಶಪಾಂಡೆ ತಮ್ಮ ಜಿ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣ ಮಾಡುತ್ತಿರುವ “ಪ್ರೊಡಕ್ಷನ್ ನಂ 4” ಚಿತ್ರದv ಹಾಡುಗಳ ಧ್ವನಿಮುದ್ರಣ (ಸಾಂಗ್ ರೆಕಾರ್ಡಿಂಗ್) ಪೂಜೆ ನಾಗರಭಾವಿಯ ಲೂಪ್ ಸ್ಟುಡಿಯೋಸ್ ನಲ್ಲಿ ನೆರವೇರಿತು. “ಜಟ್ಟ”, “ಮೈತ್ರಿ” ಚಿತ್ರಗಳ ಖ್ಯಾತಿಯ ಬಿ.ಎಂ ಗಿರಿರಾಜ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.‌ ಕನ್ನಡದ ಹೆಸರಾಂತ ನಿರ್ದೇಶಕ ಬಿ.ಜೆ.ಭರತ್ ಸಂಗೀತ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಹಿಂದೆ ಸಾಂಗ್ ರೆಕಾರ್ಡಿಂಗ್ ಪೂಜೆ ಎಂದರೆ ಒಂದು ಸಡಗರ ಎಂದು ಮಾತು ಆರಂಭಿಸಿದ ನಿರ್ದೇಶಕ ಗಿರಿರಾಜ್, ಈಗ ಕೆಲವು ವರ್ಷಗಳಿಂದ ಆ ಸಂಸ್ಕೃತಿ ಮರೆತು ಹೋಗಿದೆ. ಗುರು ದೇಶಪಾಂಡೆ ಮತ್ತೆ ಸಾಂಗ್ ರೆಕಾರ್ಡಿಂಗ್ ಪೂಜೆ ಮೂಲಕ ತಮ್ಮ ನೂತನ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಇಂದು ಒಳ್ಳೆಯ ದಿವಸ ಎಂದು ಪೂಜೆ ಆರಂಭಿಸಿದ್ದೇವೆ. ಈ ಸಿನಿಮಾ ಈ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿರುತ್ತದೆ. ಮರೆಯಾಗುತ್ತಿರುವ ಸಂಸ್ಕೃತಿಯ ಮತ್ತೆ ತರುವ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡುತ್ತಿದ್ದೇವೆ. ಭರತ್ ಅವರ ಸಂಗೀತ ನಿರ್ದೇಶನದಲ್ಲಿ ಇಂದಿನಿಂದ ಸಾಂಗ್…

Read More

ಬೆಂಗಳೂರು:- ಮಂಗನ ಕಾಯಿಲೆ ನಿಯಂತ್ರಣಕ್ಕಾಗಿ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆಸಿದ್ದು, ಕೆಎಫ್​ಡಿ ಟೆಸ್ಟಿಂಗ್​ ವಿಳಂಬವಾಗದಂತೆ ಸೂಚನೆ ನೀಡಿದ್ದಾರೆ. ಮಂಗನ ಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಕೈಗೊಂಡ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚೆ ಮಾಡಿದ್ದು ಕಾಯಿಲೆ ನಿಯಂತ್ರಣಕ್ಕೆ ಹೆಚ್ಚಿನ ಕ್ರಮಗಳ ಕುರಿತು ಶಾಸಕರ ಅಭಿಪ್ರಾಯ ಆಲೀಸಿದರು. ಮಂಗನ ಕಾಯಿಲೆ ರೋಗಲಕ್ಷಣಗಳು ಕಂಡುಬಂದ ತಕ್ಷಣ ಟೆಸ್ಟಿಂಗ್ ಶೀಘ್ರಗತಿಯಲ್ಲಿ ನಡೆಸುವಂತೆ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಲ್ಲದೇ ಕೆಎಫ್.ಡಿ ಪಾಸಿಟಿವ್ ಬಂದವರನ್ನ ಕಡ್ಡಾಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ. ಶಿರಸಿಯಲ್ಲಿ ಕೆಎಫ್.ಡಿ ಟೆಸ್ಟಿಂಗ್​ಗೆ ಪ್ರಯೋಗಾಲಯ ಸ್ಥಾಪನೆ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಸಭೆಯಲ್ಲಿ ಸಚಿವರಾದ ಮಧು ಬಂಗಾರಪ್ಪ, ಸಚಿವರಾದ ಮಂಕಾಳ ಎಸ್‌. ವೈದ್ಯ, ಶಾಸಕರಾದ ಆರಗ ಜ್ಞಾನೇಂದ್ರ, ಹೆಚ್‌.ಡಿ.ತಮ್ಮಯ್ಯ, ಬೇಳೂರು ಗೋಪಾಲಕೃಷ್ಣ, ನಯನ ಮೋಟಮ್ಮ ಸೇರಿದಂತೆ ಜನಪ್ರತಿನಿಧಿಗಳು, ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.

Read More

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯಗಳಲ್ಲಿ ಬ್ಯಾಕ್ ಟು ಬ್ಯಾಕ್ ದ್ವಿಶತಕ ಸಿಡಿಸಿ ಮಿಂಚುತ್ತಿರುವ ಜೈಸ್ವಾಲ್‌ ಸದ್ಯದಲ್ಲೇ ವಿರಾಟ್‌ ಕೊಹ್ಲಿ (Virat Kohli) ಅವರ ಅಪರೂಪದ ದಾಖಲೆಯೊಂದನ್ನು ಮುರಿಯುವ ಸನಿಹದಲ್ಲಿದ್ದಾರೆ ಟೆಸ್ಟ್‌ ಸರಣಿಯೊಂದರಲ್ಲಿ ಅತಿಹೆಚ್ಚು ರನ್‌ಗಳಿಸಿದ ಟೀಂ ಇಂಡಿಯಾ (Team India) 3ನೇ ಬ್ಯಾಟರ್‌ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಸನಿಹದಲ್ಲಿ ಜೈಸ್ವಾಲ್‌. ಟೆಸ್ಟ್‌ ಕ್ರಿಕೆಟ್‌ನ ಸರಣಿಯೊಂದರಲ್ಲಿ ವೈಯಕ್ತಿಕವಾಗಿ ಗರಿಷ್ಠ ರನ್‌ ಗಳಿಸಿದ ಬ್ಯಾಟರ್‌ಗಳ ಪೈಕಿ 774 ರನ್‌ ಗಳಿಸಿರುವ ಸುನೀಲ್‌ ಗವಾಸ್ಕರ್‌ ಮೊದಲ ಸ್ಥಾನದಲ್ಲಿದ್ದರೆ, ವಿರಾಟ್‌ ಕೊಹ್ಲಿ 2ನೇ ಸ್ಥಾನದಲ್ಲಿದ್ದಾರೆ. ಈಗಾಗಲೇ 3 ಪಂದ್ಯಗಳಲ್ಲಿ 545 ರನ್‌ ಗಳಿಸಿರುವ ಯುವ ಆಟಗಾರ ಯಶಸ್ವಿ ಜೈಸ್ವಾಲ್‌ಗೆ ಕೊಹ್ಲಿ ದಾಖಲೆ ಮುರಿಯಲು ಇನ್ನೂ 147 ರನ್‌ಗಳ ಅಗತ್ಯವಿದೆ ಸದ್ಯ ಯಶಸ್ವಿ ಜೈಸ್ವಾಲ್‌ ಇಂಗ್ಲೆಂಡ್‌ ವಿರುದ್ಧ ಆಡಿರುವ 3 ಪಂದ್ಯಗಳಲ್ಲಿ (6 ಇನ್ನಿಂಗ್ಸ್‌) 109 ಸರಾಸರಿಯಲ್ಲಿ ಒಟ್ಟು 545 ರನ್‌ ಗಳಿಸಿದ್ದಾರೆ. ಇದರಲ್ಲಿ ಎರಡು ದ್ವಿಶತಕ, 1 ಅರ್ಧಶತಕ, 50 ಬೌಂಡರಿ, 22 ಸಿಕ್ಸರ್‌ಗಳೂ…

Read More

ಬೆಂಗಳೂರು:- ವಸತಿ ಶಾಲೆಯಲ್ಲಿ ಘೋಷವಾಕ್ಯ ಬದಲು ಹಿನ್ನೆಲೆ ಅಧಿಕಾರಿಯ ವಿರುದ್ಧ ಕ್ರಮ ವಹಿಸುವಂತೆ ಅಶೋಕ್ ಒತ್ತಾಯ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲಾ ಅಧಿಕಾರ ಅಧಿಕಾರಿಗಳ ಕೈಯಲ್ಲೇ ಇದ್ದು, ಸಚಿವರು ಮನೆಯಲ್ಲಿ ಮಜಾ ಮಾಡುತ್ತಿದ್ದಾರೆ. ವಸತಿ ಶಾಲೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರ ವಾಣಿಯನ್ನು ಬದಲಿಸಿದ ಅಧಿಕಾರಿಯ ವಿರುದ್ಧ ಕೂಡಲೇ ಕ್ರಮ ವಹಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದರು. ಸರ್ಕಾರಿ ಅಧಿಕಾರಿಗಳು ಹುಚ್ಚುಚ್ಚಾಗಿ ಮನಸ್ಸಿಗೆ ಬಂದಂತೆ ಕೆಲಸ ಮಾಡುತ್ತಿದ್ದಾರೆ. ವಿಧಾನಸೌಧದ ಮುಂಭಾಗ ‘ಸರ್ಕಾರದ ಕೆಲಸ ದೇವರ ಕೆಲಸ’ ಎಂಬ ಘೋಷವಾಕ್ಯವಿದೆ. ಯಾರೋ ಕಾರ್ಯದರ್ಶಿಗಳು ಬಂದು ಅದನ್ನು ತೆಗೆದುಹಾಕಿ ಎಂದರೆ ಹೇಗಿರುತ್ತದೆ? ಶಾಲೆಯಲ್ಲಿ ಕೈ ಮುಗಿದು ಒಳಗೆ ಬನ್ನಿ ಎಂದರೆ ತಪ್ಪೇನು? ಬೇರೆ ದೇಶದ ಅಧ್ಯಕ್ಷರು ನಮ್ಮ ದೇಶಕ್ಕೆ ಬಂದರೆ ಕೈ ಮುಗಿಯುತ್ತಾರೆ. ಇದೇ ನಮ್ಮ ಸಂಸ್ಕೃತಿ ಎಂದರು ಈ ಕಾಂಗ್ರೆಸ್ ಸರ್ಕಾರಕ್ಕೆ ಕೇಡುಗಾಲ ಬಂದಿದೆ. ಯಾವುದೇ ಆದೇಶವೇ ಇಲ್ಲದೆ ಈ ಘೋಷವಾಕ್ಯವನ್ನು ಬದಲಿಸಿದ್ದಾರೆ. ಇಲ್ಲಿ ಸರ್ಕಾರ ಸತ್ತಿದೆಯೇ ಬದುಕಿದೆಯೇ ಎಂದು ಗೊತ್ತಿಲ್ಲ.…

Read More

ಬಳ್ಳಾರಿ,ಫೆ.19:- ಸಂಡೂರು ತಾಲ್ಲೂಕಿನ ಬನ್ನಿಹಟ್ಟಿ, ಯು.ರಾಜಾಪುರ, ಅಂತಾಪುರ, ವಿಠ್ಠಲಾಪುರ ಹಾಗೂ ಮೆಟ್ರಿಕಿ ಗ್ರಾಮ ಪಂಚಾಯಿತಿಗಳ ಮಾರ್ಗದಲ್ಲ್ಲಿ ಭಾನುವಾರ ಸಂವಿಧಾನ ಜಾಗೃತಿ ಜಾಥಾವು ಸಂಚರಿಸಿತು. ಜಾಥಾದಲ್ಲಿ ಸಂವಿಧಾನದ ಆಶಯ ಮತ್ತು ಮೌಲ್ಯಗಳನ್ನು ಕುರಿತು ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸಿ, ಸಂವಿಧಾನ ರಚನಾ ಸಭೆ ಹಾಗೂ ಸಂವಿಧಾನದ ಕುರಿತ ವಿಡಿಯೋ ತುಣುಕುಗಳನ್ನು ಸಾರ್ವಜನಿಕರಿಗೆ ಪ್ರದರ್ಶಿಸಲಾಯಿತು. ಸಂವಿಧಾನ ಪ್ರಸ್ತಾವನೆಯ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿ ಜಾಥಾದ ಉದ್ದಕ್ಕೂ ಸಂವಿಧಾನ ಪ್ರಸ್ತಾವನೆಯ ಪ್ರತಿಗಳನ್ನು ಹಂಚಿಕೆ ಮಾಡಲಾಯಿತು. ಜಾಥಾವನ್ನು ವಿವಿಧ ಗ್ರಾಮಗಳಲ್ಲಿ ಕಳಶ ಹಿಡಿದ ಮತ್ತು ಪೂರ್ಣ ಕುಂಭ ಹೊತ್ತ ಮಹಿಳೆಯರು, ನೇತಾರರ ವೇಷ ಭೂಷಣಗಳನ್ನು ಧರಿಸಿದ ವಿದ್ಯಾರ್ಥಿಗಳು, ಹಲಗೆ, ಮತ್ತು ಡೊಳ್ಳು ಕಲಾವಿದರು, ಕಂಸಾಳೆ ಹಾಗೂ ನಂದಿ ಕೋಲು ಕುಣಿತದ ಕಲಾವಿದರು, ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು, ಜನಪ್ರತಿನಿಧಿಗಳು, ಊರಿನ ಮುಖಂಡರು ಹಾಗೂ ಸಾರ್ವಜನಿಕರು ಅದ್ದೂರಿಯಾಗಿ ಸ್ವಾಗತಿಸಿದರು. ಜಾಥಾವನ್ನು ಮೊದಲಿಗೆ ಬನ್ನಿಹಟ್ಟಿ ಗ್ರಾಮದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಗ್ರಾಮದ ಬೀದಿಗಳಲ್ಲಿ ಪಥ ಸಂಚಲನದೊಂದಿಗೆ ಮೆರವಣಿಗೆ ಮಾಡಿ, ಗ್ರಾಮದ ಮೊರಾರ್ಜಿ ದೇಸಾಯಿ ವಸತಿ…

Read More

ಬೆಂಗಳೂರು:- ಕುವೆಂಪು ಘೋಷವಾಕ್ಯ ತೆಗೆದುಹಾಕಲು ಸರ್ಕಾರ ಆದೇಶಿಸಿಲ್ಲ ಎಂದು ಸಚಿವ ಮಹದೇವಪ್ಪ ಹೇಳಿದ್ದಾರೆ. ಜ್ಞಾನದೇಗುಲವಿದು ಕೈಮುಗಿದು ಒಳಗೆ ಬನ್ನಿ’ ಘೋಷವಾಕ್ಯವನ್ನು ತೆಗೆದುಹಾಕುವ ಯಾವುದೇ ಆದೇಶವನ್ನು ಸರ್ಕಾರ ಹೊರಡಿಸಿಲ್ಲ. ಆದ್ರೆ ಮಕ್ಕಳಲ್ಲಿ ಪ್ರಶ್ನಿಸುವ ಸಾಮರ್ಥ ಬೆಳೆಸುವ ನಿಟ್ಟಿನಲ್ಲಿ ಇಂತಹ ಆಲೋಚನೆಗಳನ್ನು ಮುಕ್ತ ಮನಸ್ಸಿನಿಂದ ಸ್ವಾಗತಿಸಬೇಕು. ನನ್ನ ಪ್ರಕಾರ ಇದೊಂದು ವಿವಾದದ ಅಂಶವೇ ಅಲ್ಲ ಎಂದರು. ಜ್ಞಾನದೇಗುಲವಿದು ಕೈಮುಗಿದು ಒಳಗೆ ಬನ್ನಿ’ ವಸತಿ ಶಾಲೆಗಳ ದ್ವಾರದಲ್ಲಿದ್ದ ಬರಹ ಬದಲಾವಣೆಗೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆ ಸಚಿವರು ಪ್ರಕಟಣೆ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಇನ್ನೂ ಈ ಬಗ್ಗೆ ಅಧಿಕೃತ ಪ್ರಕಟಣೆಯನ್ನೂ ಹೊರಡಿಸಿರುವ ಸಚಿವರು, ಸರ್ಕಾರದ ವತಿಯಿಂದ ಈಗ ಪ್ರಸ್ತುತ ಇರುವ ಘೋಷವಾಕ್ಯವನ್ನು ತೆಗೆದುಹಾಕುವ ಯಾವುದೇ ಆದೇಶವನ್ನು ಹೊರಡಿಸಲಾಗಿಲ್ಲ. ಆದರೆ ಸೃಜನಾತ್ಮಕ ಕಲಿಕೆಯ ದೃಷ್ಟಿಯಿಂದ, ಮಕ್ಕಳಲ್ಲಿ ವೈಜ್ಞಾನಿಕತೆ ಹಾಗೂ ವೈಚಾರಿಕತೆಯನ್ನು ಮೂಡಿಸಿ ಅವರಲ್ಲಿ ಯೋಚನಾ ಶಕ್ತಿಯನ್ನು ಹರಡುವ ದೃಷ್ಟಿಯಿಂದ ಸಾಮಾಜಿಕ ಜಾಲತಾಣದ ಗುಂಪಿನಲ್ಲಿ ಚರ್ಚೆಯನ್ನು ನಡೆಸಿದ್ದು, `ಜ್ಞಾನ ದೇಗುಲವಿದು – ಧೈರ್ಯವಾಗಿ ಪ್ರಶ್ನಿಸಿ’ ಎಂದು ಶಾಲೆಗಳಲ್ಲಿ ಹಾಕಿದರೆ…

Read More

ನವದೆಹಲಿ:- ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಇಡಿ ಅಧಿಕಾರಿಗಳು ಸಲ್ಲಿಸಿದ್ದ 6 ನೇ ಬಾರಿ ಸಮನ್ಸ್ ಗೈರಾಗಿದ್ದಾರೆ. ಹೊಸ ಅಬಕಾರಿ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ನೀಡಿದ ಆರನೇ ಸಮನ್ಸ್‌ಗೂ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿಚಾರಣೆಗೆ ಹಾಜರಾಗಿಲ್ಲ. ಪ್ರಕರಣ ಕೋರ್ಟ್‌ನಲ್ಲಿರುವಾಗ ಸಮನ್ಸ್ ನೀಡುವುದು ಕಾನೂನು ಬಾಹಿರ ಎಂದು ಆಪ್ ಸಮರ್ಥಿಸಿಕೊಂಡಿದೆ. ಜಾರಿ ನಿರ್ದೇಶನಾಲಯವೇ ನ್ಯಾಯಾಲಯದ ಮೊರೆ ಹೋಗಿದ್ದು, ಮತ್ತೆ ಮತ್ತೆ ಸಮನ್ಸ್ ಕಳುಹಿಸುವ ಬದಲು ಇಡಿ ನ್ಯಾಯಾಲಯದ ತೀರ್ಪಿಗಾಗಿ ಕಾಯಬೇಕು ಎಂದು ಪಕ್ಷ ಹೇಳಿದೆ. ಫೆಬ್ರವರಿ 14 ರಂದು, ತನಿಖಾ ಸಂಸ್ಥೆಯು ಕೇಜ್ರಿವಾಲ್‌ಗೆ ತನ್ನ ಆರನೇ ಸಮನ್ಸ್ ಜಾರಿ ಮಾಡಿತು. ಫೆಬ್ರವರಿ 19 ರಂದು ತನ್ನ ಮುಂದೆ ಹಾಜರಾಗುವಂತೆ ಕೇಳಿಕೊಂಡಿತು ಕೇಜ್ರಿವಾಲ್ ಅವರಿಗೆ ನೀಡಲಾದ ಮೊದಲ ಮೂರು ಸಮನ್ಸ್‌ಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ್ದಕ್ಕಾಗಿ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 174 ರ ಅಡಿಯಲ್ಲಿ ತನಿಖಾ ಸಂಸ್ಥೆ ದೂರು ದಾಖಲಿಸಿದೆ. ಕೇಜ್ರಿವಾಲ್ ಸಮನ್ಸ್‌ಗಳನ್ನು ತಪ್ಪಿಸಿರುವುದನ್ನು ನ್ಯಾಯಾಲಯವು ಗಮನಿಸಿದೆ.…

Read More

ಹುಬ್ಬಳ್ಳಿ:- ಶಿವಾಜಿ ಮಹರಾಜರು ಮುಸ್ಲಿಂ ವಿರೋಧಿ ಅಲ್ಲ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ನಗರದ ಮರಾಠಾ ಗಲ್ಲಿಯಲ್ಲಿ ನಡೆದ ಶಿವಾಜಿ ಮಹರಾಜರ 397 ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿವಾಜಿ ಮಹರಾಜರು ಮುಸ್ಲಿಂ ವಿರೋಧಿ ಅಲ್ಲ. ಇತಿಹಾಸವನ್ನು ಇವತ್ತು ಯಾರ ಹೇಗೆಬೇಕಾದರೂ ಹೇಳಬಹುದು. 60 ಸಾವಿರ ಮುಸ್ಲಿಂರು ಶಿವಾಜಿ ಸೈನ್ಯದಲ್ಲಿ ಇದ್ದರು. ಭಗವಾ ಕಲರ್ ಶಿವಾಜಿ ಮಹರಾಜರದು. ವೇದಿಕೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಇರುವಾಗಲೇ ಭಗವಾ ಕಲರ್ ಯಾರದೂ ಅಲ್ಲ ಎಂದು ಪರೋಕ್ಷವಾಗಿ ಬಿಜೆಪಿಗೆ ತಿರುಗೇಟು ನೀಡಿದ್ದಾರೆ. ನಾನೊಬ್ಬ ಮರಾಠಾ ಎಂದು ಹೇಳಿಕೊಳ್ಳಲು ಹೆಮ್ಮೆ ಇದೆ ಎಂದು ಹೇಳಿದ್ದಾರೆ. ನನಗೆ ಬಸವಣ್ಣ ಬೇಕು, ರಾಮ ಬೇಕು, ರಹೀಮ್ ಬೇಕು. ಮರಾಠರು ಶೈಕ್ಷಣಿಕವಾಗಿ ಮುಂದೆ ಬರಬೇಕು. ಝಿರೋದಿಂದ ಇಂತಹ ಎಂಫೈರ್ ಕಟ್ಟಿದ್ದು ಶಿವಾಜಿ‌ ಮಹರಾಜರು. ನಾವು ಛತ್ರಪತಿ ವಂಶದವರು. ಯಾರಿಗೆ ತೊಂದರೆ ಆದರೂ ನಾವ ಅವರ ಜೊತೆ ನಿಲ್ಲಬೇಕು ಎಂದಿದ್ದಾರೆ. ರಾಮ ಮಂದಿರ ನಿರ್ಮಾಣಕ್ಕೆ ನಮ್ಮ ವಿರೋಧ ಇಲ್ಲ ಆದರೆ…

Read More

ವಿಧಾನಸಭೆ:- ದೇಗುಲಗಳ ಆದಾಯವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಅಧಿವೇಶನದಲ್ಲಿ ಮಾತನಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ದೇವಸ್ಥಾನಕ್ಕೆ ಅಂತಾ ನಾವು ಹಣ ಕೊಡುತ್ತೇವೆ. ದೇಗುಲಗಳ ಆದಾಯವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡುತ್ತಿದ್ದಾರೆ. ಅಲ್ಲದೆ, ನೀವು ವಕ್ಫ್ ಕಾಂಪೌಂಡ್ ಕಟ್ಟಲು, ಇನ್ಯಾರೊಗೋ ಕೊಡುತ್ತೀರಿ ಎಂದು ಆರೋಪಿಸಿದರು. ದೇವಸ್ಥಾನಗಳ ಆದಾಯವನ್ನು ದೇಗುಲಗಳ ಅಭಿವೃದ್ಧಿಗೆ ಬಳಸಬೇಕು. ದೇವಸ್ಥಾನಗಳ ಆದಾಯವನ್ನು ಸರ್ಕಾರ ತೆಗೆದುಕೊಳ್ಳುತ್ತಿದೆ. ದೇಗುಲಗಳ ಆದಾಯವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡುತ್ತಿದ್ದಾರೆ. ನಮ್ಮ ತೆರಿಗೆ ನಮ್ಮ ಹಕ್ಕು ಅಂತಾ ದೆಹಲಿ ಚಲೋ‌ ಮಾಡಿದ್ದರು. ಇಲ್ಲಿ ನಮ್ಮ ದೇವರು ನಮ್ಮ ಹಣ, ನಮ್ಮ ಹಕ್ಕು ಎಂದರು. ದೇವಸ್ಥಾನಕ್ಕೆ ಅಂತಾ ನಾವು ಹಣ ಕೊಡುತ್ತೇವೆ. ನೀವು ವಕ್ಫ್ ಕಾಂಪೌಂಡ್ ಕಟ್ಟಲು, ಯಾಱರಿಗೆ ಬೇಕೋ ಕೊಡುತ್ತೀರಿ. ಇದು ಯಾರಪ್ಪನ ಆಸ್ತಿ? ದೇಗುಲಗಳ ಮೇಲೆ ಮಾತ್ರ ಕಾನೂನೇಕೆ? ಮಸೀದಿ, ಚರ್ಚ್​ಗಳ ಮೇಲೆ ಏಕೆ ನಿಮ್ಮ ಕಾನೂನು ಅನ್ವಯ ಆಗಲ್ಲ? ದೇಗುಲಗಳಲ್ಲಿ…

Read More

ಕೋಲಾರ:- ಯುಗಾದಿ ನಂತರ‌ ಧಾರ್ಮಿಕ ಮುಖಂಡನ ಸಾವಾಗಲಿದೆ ಎಂದು ಕೋಡಿಶ್ರೀ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಯುಗಾದಿ ಕಳೆದ ನಂತರ‌ ರಾಜ್ಯದಲ್ಲಿ ಒಳ್ಳೆ ಬೆಳೆ ಮತ್ತು ಮಳೆಯಾಗುವ ಲಕ್ಷಣಗಳಿವೆ ಎಂದು ಭವಿಷ್ಯ ನುಡಿದರು. ಇನ್ನು ಇದೇ ವೇಳೆ ರಾಜ್ಯ ರಾಜಕೀಯ ಬಗ್ಗೆ ಯುಗಾದಿ ಕಳೆದ ನಂತರ ಹೇಳುವೆ, ಇನ್ನ ಸಾಕಷ್ಟು ಸಮಯವಿದೆ ಎಂದರು. ಗ್ಯಾರೆಂಟ್ ಗಳಿಂದ‌ ಸರ್ಕಾರ ನಡೆಯುತ್ತಿದ್ದೀಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಶ್ರೀಗಳು, ನನ್ನಗಿಂತ ನಿಮಗೆ ಚೆನ್ನಾಗಿ ಗೊತ್ತು. ರಾಷ್ಟ್ರ ರಾಜಕಾರಣ ಸಹ ಯುಗಾದಿ ಮೇಲೆ ಗೊತ್ತಾಗುತ್ತದೆ. ಯುಗಾದಿ ನಂತರ‌ ಭವಿಷ್ಯ ಬರುವುದು. ಒಂದು ತಿಂಗಳು ಕಳೆದ ಮೇಲೆ ಮಳೆ, ಬೇಳೆ, ರಾಜಕೀಯ, ದುಡಿಮೆ, ವ್ಯಾಪಾರ ಎಲ್ಲಾ ಗೊತ್ತಾಗಲಿದೆ ಎಂದು ಹೇಳಿದರು. ಜಾಗತಿಕ ಮಟ್ಟದಲ್ಲಿ ತೊಂದರೆ ಇದೆ. ಬೆಂಕಿ ಹಾವಳಿ,ನೀರಿನ ಹಾವಳಿ, ಯುದ್ದ‌ ಆಗುತ್ತೆ. ಅನೇಕ‌ ಸಾವು ನೋವುಗಳು ಆಗುತ್ತೆ. ಮತಾದಂತೆ‌ ಹೆಚ್ಚಾಗುತ್ತದೆ. ಬಾಂಬ್ ಸ್ಫೋಟ, ಭೂಕಂಪ ಆಗುತ್ತೆ. ಧಾರ್ಮಿಕ ಮುಖಂಡನ ಸಾವು ಸಹ ಆಗಲಿದೆ ಎಂದು ಸ್ಫೋಟಕ ಭವಿಷ್ಯ ನುಡಿದರು.

Read More