Author: AIN Author

ಬೆಂಗಳೂರು: ಸಿಲಿಕಾನ್‌ ಸಿಟಿಯ ನಡು ರಸ್ತೆಯಲ್ಲಿ ಮದವೇರಿದ ಗೂಳಿಗಳ‌ ಕಾಳಗ ನಡೆಸುತ್ತಿದ್ದು ಗೂಳಿಗಳ ನಿಯಂತ್ರಿಸಲು ಜನರ ಹರಸಾಹಸ ಪಡುವ ದೃಶ್ಯ ಈಗ ಎಲ್ಲೆಡೆ ವೈರಲ್‌ ಆಗಿದೆ. ಬೆಂಗಳೂರಿನ ಚಲ್ಲಘಟ್ಟ ಮುಖ್ಯ ರಸ್ತೆಯಲ್ಲಿ ಎರಡು ಗೂಳಿ ನಡುವೆ ಗುದ್ದಾಟ ನೀರು ಹೊಡೆದ್ರು ನಿಲ್ಲದ ಫೈಟಿಂಗ್ ರಸ್ತೆ ಬದಿ ನಿಂತ ಬೈಕ್ ಕೆಡವಿ ಹಾಕಿದ ಗೂಳಿಗಳು ಎರಡು ಗೂಳಿಗಳ‌‌ ಕಾಳಗದ ವಿಡಿಯೋ ಸ್ಥಳೀಯರ ಮೊಬೈಲ್ ನಲ್ಲಿ ಸೆರೆ ಫೈಟ್‌ ಮಾಡುತ್ತಾ ಮಾಡುತ್ತಾ ಜನರ ಗುಂಪು ಇರೋ‌ ಕಡೆ ನುಗ್ಗಿದ ಗೂಳಿಗಳು ಟ್ವಿಟರ್(ಎಕ್ಸ್) ನಲ್ಲಿ ವಿಡಿಯೋ ಶೇರ್ ಮಾಡಿ ಗೂಳಿಗಳ ನಿಯಂತ್ರಿಸಿ ಅಂತ ಆಗ್ರಹ ಡಿಸಿಎಂ ಡಿಕೆಶಿ ಹಾಗೂ ಬಿಬಿಎಂಪಿ ಚೀಫ್ ಕಮಿಷನರ್ ಗೆ ಟ್ಯಾಗ್ ಮಾಡಿ ಒತ್ತಾಯ

Read More

ನವದೆಹಲಿ: ಸುಳ್ಳು ಆಶ್ವಾಸನೆಗಳು, ತಪ್ಪು ನಿರೂಪಣೆ ಮತ್ತು ವಿಚ್ಛೇದನದಂತಹ ಅಭ್ಯಾಸಗಳನ್ನು ತಡೆಯಲು ಎನ್‌ಆರ್‌ಐಗಳು (NRI) ಮತ್ತು ಭಾರತೀಯ ನಾಗರಿಕರ ನಡುವಿನ ಎಲ್ಲಾ ವಿವಾಹಗಳನ್ನು ಭಾರತದಲ್ಲಿ ಕಡ್ಡಾಯವಾಗಿ ನೋಂದಾಯಿಸಬೇಕು ಎಂದು ಕಾನೂನು ಆಯೋಗವು (Law Commission) ಶಿಫಾರಸು ಮಾಡಿದೆ. ಕಾನೂನು ಮತ್ತು ನ್ಯಾಯ ಸಚಿವಾಲಯಕ್ಕೆ ಸಲ್ಲಿಸಿದ ವರದಿಯಲ್ಲಿ, ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ನೇತೃತ್ವದ ಕಾನೂನು ಆಯೋಗವು, ಅನಿವಾಸಿ ಭಾರತೀಯರು ಮದುವೆಯಾಗುವ ಮೋಸದ ವಿವಾಹಗಳು ಹೆಚ್ಚುತ್ತಿರುವ ಘಟನೆಯು ಆತಂಕಕಾರಿ ಪ್ರವೃತ್ತಿಯಾಗಿದೆ. ಈ ನಡುವೆ ವಿವಾಹಗಳು ಮೋಸಗೊಳಿಸುವಂತಿವೆ, ಭಾರತೀಯ ಸಂಗಾತಿಗಳನ್ನು ವಿಶೇಷವಾಗಿ ಮಹಿಳೆಯರನ್ನು ಅನಿಶ್ಚಿತ ಪರಿಸ್ಥಿತಿಗಳಲ್ಲಿ ಇರಿಸುತ್ತಿವೆ ಎಂದಿದೆ. https://ainlivenews.com/have-you-used-the-phone-excessively-hushar-can-lead-to-dementia/ ಇಂತಹ ಪರಿಸ್ಥಿತಿಗಳನ್ನು ನಿಯಂತ್ರಿಸುವ ದೃಷ್ಟಿಯಿಂದ ಅನಿವಾಸಿ ಭಾರತೀಯರು/ಒಸಿಐಗಳು ಮತ್ತು ಭಾರತೀಯ ನಾಗರಿಕರ ನಡುವಿನ ಎಲ್ಲಾ ವಿವಾಹಗಳನ್ನು ಭಾರತದಲ್ಲಿ ಕಡ್ಡಾಯವಾಗಿ ನೋಂದಾಯಿಸಬೇಕೆಂದು ಆಯೋಗವು ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ. ಹೊಸ ಕಾನೂನು ವಿಚ್ಛೇದನ, ಸಂಗಾತಿಯ ನಿರ್ವಹಣೆ, ಮಕ್ಕಳ ಪಾಲನೆ ಮತ್ತು ಪೋಷಣೆ, ಎನ್‌ಆರ್‌ಐಗಳು ಮತ್ತು ಒಸಿಐಗಳ ಮೇಲೆ ಸಮನ್ಸ್, ವಾರಂಟ್‌ಗಳು ಅಥವಾ ನ್ಯಾಯಾಂಗ…

Read More

ಮಹಾರಾಷ್ಟ್ರದ ಪುಣೆಯಲ್ಲಿ ಫೆ. 13 ರಿಂದ 17 ರ ವರೆಗೆ ನಡೆದ ನ್ಯಾಷನಲ್​ ಮಾಸ್ಟರ್ಸ್​ ಅಥ್ಲೆಟಿಕ್ಸ್​ ಚಾಂಪಿಯನ್​ಶಿಪ್​-2024 ರಲ್ಲಿ ಭಾಗವಹಿಸಿ ಜಾವೆಲಿನ್ ಥ್ರೋ ಕ್ರೀಡೆಯಲ್ಲಿ ದೊಡ್ಡಬಳ್ಳಾಪುರದ ದೈಹಿಕ ಶಿಕ್ಷಕ ಚಿನ್ನದ ಪದಕ ಗೆಲ್ಲುವ ಮೂಲಕ ಸ್ವೀಡನ್​ನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಮಾಸ್ಟರ್ಸ್ ಅಥ್ಲೆಟಿಕ್ಸ್​ ಕ್ರೀಡಾಕೂಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿದ್ದಾರೆ. ರನ್ ಮಷಿನ್ ಕಿಂಗ್ ಕೊಹ್ಲಿ ದಾಖಲೆಯನ್ನೇ ಸರಿಗಟ್ಟಿದ ಯಶಸ್ವಿ ಜೈಸ್ವಾಲ್! ಮಲ್ಲಿಕಾರ್ಜುನ ನಗರದ ಕಾರ್ಮೆಲ್​ ಜ್ಯೋತಿ ಶಾಲೆಯ ದೈಹಿಕ ಶಿಕ್ಷಕನಾಗಿ ಕಾರ್ಯ ನಿರ್ವಹಿಸುತ್ತಿದ್ದು ಜನವರಿ 6 ಮತ್ತು 7 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿನ ಚನ್ನಭೈರೇಗೌಡ ಕ್ರೀಡಾಂಗಣದಲ್ಲಿ ನಡೆದ 44ನೇ ಸ್ಟೇಟ್​ ಮಾಸ್ಟರ್ಸ್​ ಅಥ್ಲೆಟಿಕ್ಸ್​ ಚಾಂಪಿಯನ್​ ಶಿಪ್​ -2024 ರಲ್ಲಿ 30 ವರ್ಷ ವಯೋಮಾನದ ವಿಭಾಗದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡುವ ಮೂಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದರು. ಪುಣೆಯಲ್ಲಿ ನಡೆದ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಜಾವಲಿನ್ ಥ್ರೋ ಕ್ರೀಡೆಯಲ್ಲಿ ಭಾಗವಹಿಸಿ ಬಂಗಾರದ ಪದಕ ಗಳಿಸಿದ್ದಾರೆ, 2024 ರ ಅಕ್ಟೋಬರ್ ನಲ್ಲಿ ಯುರೋಪ್…

Read More

ರಾಜ್‌ಕೋಟ್‌: ಭಾರತ ಹಾಗೂ ಇಂಗ್ಲೆಂಡ್ ನಡುವಿನ 3ನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್‌ನಲ್ಲಿ ಟೀಂ ಇಂಡಿಯಾದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಬ್ಯಾಕ್‌ ಟು ಬ್ಯಾಕ್‌ ಶತಕ ಸಿಡಿಸುವ ಜೊತೆಗೆ ಮತ್ತೊಂದು ವಿಶೇಷ ಸಾಧನೆ ಮಾಡಿದ್ದಾರೆ. ರಾಜ್‌ಕೋಟ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 3ನೇ ಪಂದ್ಯದಲ್ಲಿ 2ನೇ ಬಾರಿಗೆ ಅಂತಾರಾಷ್ಟ್ರೀಯ ಟೆಸ್ಟ್‌ ದ್ವಿಶತಕ ಸಿಡಿಸಿದ ಜೈಸ್ವಾಲ್‌ ಇನ್ನಿಂಗ್ಸ್‌ವೊಂದರಲ್ಲಿ ಅತಿಹೆಚ್ಚು ಸಿಕ್ಸರ್‌ ಸಿಡಿಸಿದ ವಿಶ್ವದ 2ನೇ ಆಟಗಾರ ಹಾಗೂ ಟೀಂ ಇಂಡಿಯಾದ ಮೊದಲ ಆಟಗಾರ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ ರನ್ ಮಷಿನ್ ಕಿಂಗ್ ಕೊಹ್ಲಿ ದಾಖಲೆಯನ್ನೇ ಸರಿಗಟ್ಟಿದ ಯಶಸ್ವಿ ಜೈಸ್ವಾಲ್! ಒಂದೇ ಇನ್ನಿಂಗ್ಸ್‌ನಲ್ಲಿ ಒಟ್ಟು 12 ಸಿಕ್ಸರ್‌ ಸಿಡಿಸುವ ಮೂಲಕ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ವಾಸಿಂ ಅಕ್ರಂ ಅವರ ದಾಖಲೆಯನ್ನೂ ಸರಿಗಟ್ಟಿದ್ದಾರೆ. 1996ರಲ್ಲಿ ಜಿಂಬಾಬ್ವೆ ವಿರುದ್ಧ ಪಾಕ್‌ ಮಾಜಿ ಕ್ರಿಕೆಟಿಗ ವಾಸಿಂ ಅಕ್ರಂ 12 ಸಿಕ್ಸರ್‌ ಸಿಡಿಸಿದ್ದು, ಈವರೆಗಿನ ದಾಖಲೆಯಾಗಿತ್ತು. ಅಲ್ಲದೇ ಈ ಹಿಂದೆ ಮಯಾಂಕ್ ಅಗರ್ವಾಲ್ ಮತ್ತು ನವಜೋತ್ ಸಿಂಗ್ ಸಿಧು ಅವರ…

Read More

ರಾಜ್‌ಕೋಟ್‌: ಟೆಸ್ಟ್ ಇತಿಹಾಸದಲ್ಲಿ ಟೀಂ ಇಂಡಿಯಾ ಹೊಸ ದಾಖಲೆ ಬರೆದಿದೆ. ಭಾರತದ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತಿ ಹೆಚ್ಚು ರನ್ ಅಂತರದ ಗೆಲುವನ್ನು ಇಂಗ್ಲೆಂಡ್ ವಿರುದ್ಧ ದಾಖಲಿಸಿದೆ. ಈ ಗೆಲುವಿನ ಮೂಲಕ ಮತ್ತೊಂದು ವಿಶೇಷ ಸಾಧನೆಗೂ ಪಾತ್ರವಾಗಿದೆ. ರನ್ ಮಷಿನ್ ಕಿಂಗ್ ಕೊಹ್ಲಿ ದಾಖಲೆಯನ್ನೇ ಸರಿಗಟ್ಟಿದ ಯಶಸ್ವಿ ಜೈಸ್ವಾಲ್! ಇಂಗ್ಲೆಂಡ್‌ ವಿರುದ್ಧ ನಡೆಯುತ್ತಿರುವ 5 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ 2-1 ಮುನ್ನಡೆ ಸಾಧಿಸುವ ಮೂಲಕ ಸರಣಿ ಗೆಲುವಿನ ವಿಶ್ವಾಸದಲ್ಲಿದೆ. 3ನೇ ಟೆಸ್ಟ್‌ ಪಂದ್ಯದಲ್ಲಿ 434 ರನ್‌ಗಳ ಗೆಲುವು ಸಾಧಿಸಿದ ಭಾರತ ಅತಿಹೆಚ್ಚು ರನ್‌ಗಳ ಅಂತರದಲ್ಲಿ ಗೆಲುವು ಸಾಧಿಸಿದ ಟಾಪ್‌-10 ರಾಷ್ಟ್ರಗಳ ಪಟ್ಟಿಯಲ್ಲಿ ಭಾರತವೂ ಸ್ಥಾನ ಗಿಟ್ಟಿಸಿಕೊಂಡಿದೆ. ರೋಹಿತ್‌ ಶರ್ಮಾ ನಾಯಕದ ಟೀಂ ಇಂಡಿಯಾ ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತಿಹೆಚ್ಚು ರನ್‌ಗಳ ಅಂತರದಿಂದ ಗೆಲುವು ಸಾಧಿಸಿದ ಟಾಪ್‌-10 ಪಟ್ಟಿಯಲ್ಲಿ 8ನೇ ಸ್ಥಾನಕ್ಕೆ ಜಿಗಿದಿದೆ. ಅಲ್ಲದೇ ಭಾರತ ತಂಡ ಇದುವರೆಗೆ ಒಟ್ಟು 577 ಟೆಸ್ಟ್ ಪಂದ್ಯಗಳನ್ನಾಡಿದ್ದು, ಇಂಗ್ಲೆಂಡ್ ವಿರುದ್ಧ ಸಾಧಿಸಿದ ಈ ಗೆಲುವು ಭಾರತದ ಪಾಲಿಗೆ ಐತಿಹಾಸಿಕ…

Read More

ನವದೆಹಲಿ: ಮಧ್ಯಪ್ರದೇಶದ ಕಾಂಗ್ರೆಸ್‌ ಮಾಜಿ ಮುಖ್ಯಮಂತ್ರಿ ಕಮಲನಾಥ್ ಮತ್ತು ಅವರ ಪುತ್ರ ನಕುಲ್‌ನಾಥ್ ಬಿಜೆಪಿ ಸೇರ್ಪಡೆಯಾಗುವ ವದಂತಿಗಳ ನಡುವೆ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಮಂತ್ರಿ ಮನೀಶ್ ತಿವಾರಿ ಕೂಡಾ ಬಿಜೆಪಿ ಸೇರ್ಪಡೆಯಾಗುವ ಗುಲ್ಲೆದ್ದಿದೆ. ಲೋಕಸಭಾ ಚುನಾವಣೆಯಲ್ಲಿ ಪಂಜಾಬ್‌ನ ಲೂಧಿಯಾನ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಬಹುದು ಎಂದು ಮೂಲಗಳು ತಿಳಿಸಿವೆ. ಈ ಸುದ್ದಿ ಹೊರ ಬಂದ ಬೆನ್ನಲ್ಲೇ ತಿವಾರಿ ಕಚೇರಿಯಿಂದ ಸ್ಪಷ್ಟನೆ ನೀಡಿದ್ದು, ಮನೀಶ್ ಅವರು ಬಿಜೆಪಿ ಸೇರ್ಪಡೆಯಾಗುವ ಸುದ್ದಿ ಸುಳ್ಳು ಎಂದು ಹೇಳಿದೆ. ಅವರು ಬಿಜೆಪಿ ಸೇರುತ್ತಾರೆ ಎಂಬ ಊಹಾಪೋಹ ಆಧಾರ ರಹಿತವಾಗಿದೆ. ಮನೀಶ್ ತಿವಾರಿ (Manish Tiwari) ಅವರು ತಮ್ಮ ಕ್ಷೇತ್ರದಲ್ಲಿದ್ದಾರೆ, ಅಲ್ಲಿ ಅವರು ಅಭಿವೃದ್ಧಿ ಕೆಲಸಗಳನ್ನು ನೋಡಿಕೊಳ್ಳುತ್ತಿದ್ದಾರೆ. ನಿನ್ನೆ ರಾತ್ರಿ ಅವರು ಕಾಂಗ್ರೆಸ್ (Congress) ಕಾರ್ಯಕರ್ತರ ಮನೆಯಲ್ಲಿ ತಂಗಿದ್ದರು ಎಂದು ತಿಳಿಸಿದೆ. https://ainlivenews.com/how-to-know-the-risk-of-heart-attack-from-the-feet/ ಇದಕ್ಕೂ ಮೊದಲು ಲೋಕಸಭಾ ಚುನಾವಣೆಗೆ (Loksabha Election) ಮುನ್ನ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್, ಅವರ ಪುತ್ರ ನಕುಲ್ ಮತ್ತು ಇತರ…

Read More

ಭಾರತೀಯ‌ ಕ್ರಿಕೆಟ್ ತಂಡದ ಖ್ಯಾತ ಕ್ರಿಕೆಟಿಗ, ಕನ್ನಡಿಗ ಕೆ.ಎಲ್. ರಾಹುಲ್‌‌ ಅವರು ತುಮಕೂರಿನ ಶ್ರೀ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದರು. ಕುಟುಂಬ ಸಮೇತ ಇಂದು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಗಳ ಗದ್ದುಗೆ ದರ್ಶನ ಪಡೆದರು. ಧ್ಯಾನ ಮಂದಿರಕ್ಕೆ ತೆರಳಿ ಕೆಲಕಾಲ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಠಾಧ್ಯಕ್ಷ ಶ್ರೀ ಸಿದ್ಧಲಿಂಗ ಸ್ವಾಮೀಜಿಗಳನ್ನು ಭೇಟಿ ಮಾಡಿ, ಆಶೀರ್ವಾದ ಪಡೆದರು. ಇದೇ ವೇಳೆ ಸಂಜೆಯ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿ, ಶ್ರೀ ಮಠದ ಮಕ್ಕಳನ್ನುದ್ದೇಶಿಸಿ ಮಾತನಾಡಿದರು ತಂದೆ ಲೋಕೇಶ್ ಹಾಗೂ ತಾಯಿ ಲೋಕೇಶ್ವರಿ ಅವರೊಂದಿಗೆ ಮಠಕ್ಕೆ ಆಗಮಿಸಿದ ಸುದ್ದಿ ತಿಳಿದ ಶ್ರೀಮಠದ ಮಕ್ಕಳು, ರಾಹುಲ್​ ಅವರನ್ನು ನೋಡಲು ಮುಗಿಬಿದ್ದರು. ಈ ವೇಳೆ ಭಕ್ತರು ಹಾಗೂ ಮಕ್ಕಳನ್ನು ನಿಯಂತ್ರಿಸಲು ಹರಸಾಹಸ ಪಡಬೇಕಾಯಿತು. ಕೆ.ಎಲ್. ರಾಹುಲ್ ಅವರು ಮಾಗಡಿ ತಾಲೂಕಿನ ಕಣ್ಣೂರಿನವರಾಗಿದ್ದು, ಸಿದ್ದಗಂಗಾ ಮಠದ ಭಕ್ತರಾಗಿದ್ದಾರೆ. ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಸ್ಥಳವೂ ರಾಮನಗರ ಜಿಲ್ಲೆಯೇ ಆಗಿದೆ. ರಾಹುಲ್ ಅವರ ಪ್ರತಿಭೆಯನ್ನು ಸಿದ್ದಲಿಂಗ ಶ್ರಿಗಳು ಪ್ರಶಂಸಿಸಿ…

Read More

ವಿಜಯನಗರ:- ಜಿಲ್ಲೆಯಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಕಗ್ಗತ್ತಲಿನ ಆತಂಕ ಶುರುವಾಗಿದೆ. ವಿಶ್ವವಿದ್ಯಾಲಯ ಬರೋಬ್ಬರಿ ​1 ಕೋಟಿ 5 ಲಕ್ಷ 74 ಸಾವಿರ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿ ಕೊಂಡಿದೆ. ಹೀಗಾಗಿ ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ನೋಟಿಸ್​ ನೀಡಿದೆ. ವಿದ್ಯುತ್​ ಬಿಲ್​ ಬಾಕಿ ಉಳಿಸಿಕೊಂಡಿದ್ದರಿಂದ, ಜೆಸ್ಕಾಂ ಅಧಿಕಾರಿಗಳು ವಿಶ್ವವಿದ್ಯಾಲಯಕ್ಕೆ ವಿದ್ಯುತ್​ ಸರಬರಾಜು ಅನ್ನು ಸ್ಥಗಿತಗೊಳಿಸಿತ್ತು. ಆದರೆ “ನುಡಿ ಹಬ್ಬ” ಇದ್ದ ಕಾರಣ ವಿದ್ಯುತ್​ ಸರಬರಾಜು ಮಾಡಿ ಎಂದು ವಿಶ್ವವಿದ್ಯಾಲಯ ಆಡಳಿತ ಮಂಡಳಿ ಜೆಸ್ಕಾಂಗೆ ಮನವಿ ಮಾಡಿಕೊಂಡಿದ್ದರು. ಹೀಗಾಗಿ ಜೆಸ್ಕಾಂ ಮತ್ತೆ ವಿದ್ಯುತ್​ ಸರಬರಾಜು ಆರಂಭಿಸಿದೆ. ಇದೀಗ ಜೆಸ್ಕಾಂ ಬಾಕಿ ಬಿಲ್ ​ಪಾವತಿಸುವಂತೆ ನೋಟಿಸ್​ ಮೇಲೆ ನೋಟಿಸ್​ ನೀಡುತ್ತಿದೆ. ಜೆಸ್ಕಾಂ ನೋಟಿಸ್ ನೀಡಿದರು ವಿಶ್ವವಿದ್ಯಾಲಯ ಆಡಳಿತ ಮಂಡಳಿ ಮತ್ತು ಉನ್ನತ ಶಿಕ್ಷಣ ಇಲಾಖೆ ಕ್ಯಾರೆ ಎನ್ನುತ್ತಿಲ್ಲ.​ ಹೀಗಾಗಿ ಜೆಸ್ಕಾಂ ಮುಂದಿನ ದಿನಗಳಲ್ಲಿ ಮತ್ತೊಮ್ಮೆ ವಿದ್ಯುತ್​ ಸರಬಾರಜು ಸ್ಥಗಿತಗೊಳಿಸುವ ಸಾಧ್ಯತೆ ಇದೆ. ಇನ್ನು ವಿಜಯನಗರ ಜಿಲ್ಲೆ ಉಸ್ತುವಾರಿ ಸಚಿವ ಜಮೀರ್ ಅಹಮ್ಮದ್…

Read More

ಗದಗ:- ಜಿಲ್ಲೆಯಲ್ಲಿ ಇಂದು ಅದ್ಧೂರಿ ಶಿವಾಜಿ ಜಯಂತೋತ್ಸವ ನಡೆಯಲಿರುವ ಹಿನ್ನೆಲೆ ಇಡೀ ಗದಗ-ಬೆಟಗೇರಿ ಅವಳಿ ನಗರ ಸಂಪೂರ್ಣ ಕೇಸರಿಮಯವಾಗಿದೆ. ಹೀಗಾಗಿ ಶ್ರೀರಾಮಸೇನೆ ನೇತೃತ್ವದಲ್ಲಿ ಬೆಳಗ್ಗೆ 11 ಗಂಟೆಗೆ ಗದಗ ನಗರದಲ್ಲಿ ಬೃಹತ್ ಮೆರವಣಿಗೆ ನಡೆಯಲಿದೆ. ಗಾಂಧಿ ಸರ್ಕಲ್, ಟಾಂಗಾ ಕೂಟ್ ಸರ್ಕಲ್, ಬಸವೇಶ್ವರ ಸರ್ಕಲ್ ಸೇರಿ ಗಲ್ಲಿ ಗಲ್ಲಿಗಳಲ್ಲೂ ಕೇಸರಿ ಬಂಟಿಗಳಿಂದ ಶೃಂಗಾರ ಮಾಡಲಾಗಿದೆ. ಬೃಹತ್ ಶಿವಾಜಿ ಮೂರ್ತಿಯ ಭವ್ಯ ಮೆರವಣಿಗೆ ನಡೆಯಲಿದ್ದು, ಹಾಗೆಯೇ ಮಹರ್ಷಿ ವಾಲ್ಮೀಕಿ‌ ಮೂರ್ತಿಗಳು ಸೇರಿ ಹಲವು ಮೂರ್ತಿಗಳ‌ ಮೆರವಣಿಗೆ ನಡೆಯಲಿದೆ. ಹತ್ತು ಸಾವಿರಕ್ಕೂ ಅಧಿಕ ಹಿಂದೂ ಕಾರ್ಯಕರ್ತರು ಭಾಗಿ ಸಾಧ್ಯತೆ ಇದೆ. ಡಿಜೆ ಅಬ್ಬರಕ್ಕೆ ಅವಳಿ ನಗರ ನಡುಗುವುದು ಅಕ್ಷರಶಃ ಸತ್ಯ. ಶಿವಾಜಿ ಜಯಂತಿ ಅಬ್ಬರ ಹಿನ್ನೆಲೆ ಅವಳಿ ನಗರದಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

Read More

ಗದಗ:- ಬಿರು ಬೇಸಿಗೆ ದಿನಗಳಲ್ಲಿ ನೀರಿಲ್ಲದೇ‌ ಜನರು ಪರದಾಟ ನಡೆಸುತ್ತಿದ್ದು, ಇತ್ತ ಪೈಪ್‌ ಒಡೆದು ಕುಡಿಯುವ ನೀರು ಪೋಲಾಗುತ್ತಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ. ಕುಡಿಯುವ ನೀರಿನ‌ ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲಾಗುತ್ತಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬರದೂರ ಗ್ರಾಮದ ಬಳಿ ಜರುಗಿದೆ. ಗದಗ ಬೆಟಗೇರಿ ಅವಳಿ ನಗರದ 24*7 ಕುಡಿಯುವ ನೀರಿನ ಸಂಪರ್ಕದ‌ ಪೈಪ್ ಲೈನ್ ಇದ್ದು, ಹಲವಾರು ದಿನಗಳಿಂದ ಅಧಿಕಾರಿಗಳ ಗಮನಕ್ಕೆ ತಂದರೂ ಡೋಂಟ್ ಕೇರ್ ಎನ್ನುತ್ತಿದ್ದಾರೆ. ಅಪಾರ ಪ್ರಮಾಣದ ನೀರು ಸುಖಾಸುಮ್ಮನೆ ಚರಂಡಿ ಪಾಲಾಗುತ್ತಿದೆ. ಗದಗ ಜಿಲ್ಲೆ ಜನರ ದಾಹ ಇಂಗಿಸುವ ಕುಡಿಯುವ ನೀರಿನ ಸಂಪರ್ಕದ ಪೈಪ್ ಲೈನ್ ಇದಾಗಿದ್ದು, ಅಧಿಕಾರಿಗಳ ನಿರ್ಲಕ್ಷತನಕ್ಕೆ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ.

Read More