Author: AIN Author

ಯಾದಗಿರಿ:- ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಬಳಿ ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ದುರ್ಮರಣ ಹೊಂದಿದ ಘಟನೆ ಜರುಗಿದೆ. ಶಿವನಗೌಡ ಹೊಸಮನಿ(25), ಲಕ್ಷ್ಮಣ(24) ಸಾವನ್ನಪ್ಪಿರುವವರು ಎನ್ನಲಾಗಿದೆ. ಮೃತರು ಶಹಾಪುರ ತಾಲೂಕಿನ ಬೊಮ್ಮನಹಳ್ಳಿಯ ನಿವಾಸಿಗಳು. ಕೆಂಭಾವಿಯಿಂದ ಬೊಮ್ಮನಹಳ್ಳಿ ಗ್ರಾಮಕ್ಕೆ ಬೈಕ್ ಮೇಲೆ ತೆರಳುವಾಗ ಘಟನೆ ಸಂಭವಿಸಿದೆ. ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಆಗಿದೆ. ಸುಮಾರು 35 ವರ್ಷದ ಪುರುಷನ ಶವ ಪತ್ತೆಯಾಗಿದೆ. ಸ್ಥಳಕ್ಕೆ ಮಲೆ ಮಹದೇಶ್ವರ ಬೆಟ್ಟ ಠಾಣೆಯ ಪೊಲೀಸರ ಭೇಟಿ ಪರಿಶೀಲನೆ ಮಾಡಿದ್ದು, ಗುರುತು, ಪತ್ತೆಗಾಗಿ ಶವದ ಫೋಟೊವನ್ನು ಜಿಲ್ಲೆಯ ಪೊಲೀಸ್ ಠಾಣೆಗಳಿಗೆ ರವಾನೆ ಮಾಡಿದ್ದಾರೆ. ಕೊಲೆನಾ ಇಲ್ಲಾ ಆತ್ಮಹತ್ಯೆನಾ ಎಂದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನ ಹನೂರು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ

Read More

ನವದೆಹಲಿ:- 2047ರ ಹೊತ್ತಿಗೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ ಇದೇ ಮೋದಿ ಗ್ಯಾರಂಟಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮುಂದಿನ 100 ದಿನಗಳಲ್ಲಿ ನಾವು ಒಟ್ಟಾಗಿ ಕೆಲಸ ಮಾಡಬೇಕು. ಎಲ್ಲ ಮತದಾರರನ್ನು ತಲುಪಬೇಕು. ಪ್ರತಿಯೊಂದು ವರ್ಗವನ್ನು ತಲುಪಬೇಕು. ಎಲ್ಲರ ವಿಶ್ವಾಸ ಗಳಿಸಬೇಕು. ಮತ್ತು ಇದು ಎಲ್ಲರ ಪ್ರಯತ್ನವಾಗಿದ್ದರೆ, ದೇಶಕ್ಕೆ ಸೇವೆ ಸಲ್ಲಿಸಲು ಬಿಜೆಪಿ ಗರಿಷ್ಠ ಸಂಖ್ಯೆಯ ಸ್ಥಾನಗಳನ್ನು ಪಡೆಯುತ್ತದೆ ಎಂದರು. ಈ ಬಾರಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಲೋಕಸಭೆ ಚುನಾವಣೆ ಗೆಲುವಿಗೆ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ. ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಕಾರ್ಯಕರ್ತರು ಮತ್ತು ಅಧಿಕಾರಿಗಳಲ್ಲಿ ಉತ್ಸಾಹ ತುಂಬಿದ ಪ್ರಧಾನಿ ಮೋದಿ ಬಿಜೆಪಿ ಕಾರ್ಯಕರ್ತರು ವರ್ಷದ 24 ಗಂಟೆಗಳ ಕಾಲ ದೇಶ ಸೇವೆ ಮಾಡುತ್ತಿರುತ್ತಾರೆ. ಆದರೆ ಈಗ ಮುಂದಿನ 100 ದಿನಗಳು ಹೊಸ ಶಕ್ತಿ, ಹೊಸ ಉತ್ಸಾಹ, ಹೊಸ ಆತ್ಮವಿಶ್ವಾಸದಿಂದ ಕೆಲಸ ಮಾಡಬೇಕಿದೆ. ಪ್ರತಿಯೊಬ್ಬ ಹೊಸ ಮತದಾರ, ಪ್ರತಿಯೊಬ್ಬ ಫಲಾನುಭವಿ, ಪ್ರತಿವರ್ಗ, ಸಮಾಜ, ಪಂಥ, ಸಂಪ್ರದಾಯವನ್ನು ತಲುಪಬೇಕು. ಎಲ್ಲರ ವಿಶ್ವಾಸ ಗಳಿಸಬೇಕು…

Read More

ತುಮಕೂರು:- ಟೀಮ್ ಇಂಡಿಯಾ ಸ್ಟಾರ್ ಬ್ಯಾಟ್ಮ್ಯಾನ್ ಹಾಗೂ ಕನ್ನಡಿಗ ರಾಹುಲ್ ಅವರು ಕ್ಯಾತ್ಸಂದ್ರದಲ್ಲಿರುವ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದಾರೆ. ಶ್ರೀಗಳ ಗದ್ದುಗೆ ದರ್ಶನ ಪಡೆದು ಪೂಜೆಯಲ್ಲಿ ಕೆ.ಎಲ್‌.ರಾಹುಲ್‌ ಭಾಗಿಯಾಗಿದ್ದರು. ಬಳಿಕ ಕೆ.ಎಲ್.ರಾಹುಲ್ ಅವರು ಸಿದ್ದಲಿಂಗಸ್ವಾಮೀಜಿಗಳ ಆಶಿರ್ವಾದ ಪಡೆದಿದ್ದಾರೆ. ಕೆ.ಎಲ್.ರಾಹುಲ್ ಜೊತೆ ಸೆಲ್ಫಿ ಪಡೆಯಲು ಈ ವೇಳೆ ಫ್ಯಾನ್ಸ್ ಮುಗಿಬಿದ್ದಿದ್ದಾರೆ.

Read More

ಎರಡನೇ ಇನ್ನಿಂಗ್ಸ್​ನಲ್ಲಿ ದ್ವಿಶತಕ ಸಿಡಿಸಿದ ಯುವ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ತಂಡದ ಗೆಲುವಿನ ರೂವಾರಿಗಳೆನಿಸಿಕೊಂಡರು. ಇದೀಗ ಬಿಗ್ ಇನ್ನಿಂಗ್ಸ್ ಹಿಂದಿರುವ ಸೀಕ್ರೆಟ್ ರಿವೀಲ್ ಮಾಡಿದ್ದಾರೆ. ರಾಜ್‌ಕೋಟ್‌ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು 434 ರನ್‌ಗಳ ಅಂತರದಿಂದ ಮಣಿಸಿರುವ ಟೀಂ ಇಂಡಿಯಾ (India vs England) ಸರಣಿಯಲ್ಲಿ 2-1 ಅಂತರದ ಮುನ್ನಡೆ ಕಾಯ್ದುಕೊಂಡಿದೆ. ಭಾರತದ ನೀಡಿದ 557 ರನ್​ಗಳ ಟಾರ್ಗೆಟ್ ಬೆನ್ನಟ್ಟಿದ ಆಂಗ್ಲರು ಕೇವಲ 122 ರನ್​ಗಳಿಗೆ ಆಲೌಟ್ ಆಗಿ ಭಾರತಕ್ಕೆ ಸುಲಭ ತುತ್ತಾದರು. ಭಾರತದ ಪರ ಮೊದಲ ಇನ್ನಿಂಗ್ಸ್​ನಲ್ಲಿ ಶತಕ ಸಿಡಿಸಿದ ರೋಹಿತ್ ಶರ್ಮಾ, ರವೀಂದ್ರ ಜಡೇಜಾ ಹಾಗೂ ಎರಡನೇ ಇನ್ನಿಂಗ್ಸ್​ನಲ್ಲಿ ದ್ವಿಶತಕ ಸಿಡಿಸಿದ ಯುವ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ (Yashasvi Jaiswal) ತಂಡದ ಗೆಲುವಿನ ರೂವಾರಿಗಳೆನಿಸಿಕೊಂಡರು. ಪಂದ್ಯ ಮುಗಿದ ಬಳಿಕ ಮಾತನಾಡಿದ ಯಶಸ್ವಿ ಜೈಸ್ವಾಲ್ ಎರಡನೇ ಇನ್ನಿಂಗ್ಸ್​ನಲ್ಲಿ ದ್ವಿಶತಕದ ಇನ್ನಿಂಗ್ಸ್ ಆಡಿದ ಹಿಂದಿರುವ ರಹಸ್ಯ ಏನು ಎಂಬುದನ್ನು ತೆರೆದಿಟ್ಟಿದ್ದಾರೆ. ದ್ವಿಶತಕದ ಇನ್ನಿಂಗ್ಸ್ ಬಗ್ಗೆ ಮಾತನಾಡಿದ…

Read More

ಹಾಸನ:- ಸಕಲೇಶಪುರದ ಶಿಡಗಳಲೆಯಲ್ಲಿ ಆಹಾರ ಅರಸಿ ಗ್ರಾಮಕ್ಕೆ ಬಂದಿದ್ದ ಆನೆಯೊಂದು ಪುಂಡಾಟ ನಡೆಸಿ ವಿದ್ಯುತ್ ಕಂಬವನ್ನು ಮನೆಯ ಮೇಲೆ ಉರುಳಿಸಿದ ಘಟನೆ ಜರುಗಿದೆ. ಆನೆ ಮುಂಜಾನೆ ವೇಳೆ ಗ್ರಾಮಕ್ಕೆ ಬಂದಿದ್ದು, ಮಲ್ಲಿಕಾರ್ಜುನ್ ಎಂಬವರ ಮನೆಯ ಮುಂಭಾಗ ಇದ್ದ ವಿದ್ಯುತ್ ಕಂಬದ ಮೇಲೆ ದಾಳಿ ಮಾಡಿದೆ. ಇದರಿಂದ 440 ಕಿಲೋ ವ್ಯಾಟ್ ಸಾಮರ್ಥ್ಯದ ವಿದ್ಯುತ್ ತಂತಿ ಹಾಗೂ ಕಂಬ ಮನೆಯ ಮೇಲೆ ಬಿದ್ದಿದೆ. ಕಂಬ ಬೀಳುತ್ತಿದ್ದಂತೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ ಕಂಬ ಬಿದ್ದ ಶಬ್ದಕ್ಕೆ ಮಲ್ಲಿಕಾರ್ಜನ್ ಕುಟುಂಬಸ್ಥರು ಗಾಬರಿಗೊಂಡು ಮನೆಯ ಕಿಟಕಿಯಿಂದ ನೋಡಿದ್ದಾರೆ. ಈ ವೇಳೆ ಕಾಡಾನೆ ಮನೆಯ ಮುಂಭಾಗವೇ ನಿಂತಿದ್ದು ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕಳೆದ ಹದಿನೈದು ದಿನಗಳಿಂದ ಹೆಬ್ಬನಹಳ್ಳಿ, ಹೊಸಕೊಪ್ಪಲು, ಮಾಸುವಳ್ಳಿ ಭಾಗದಲ್ಲಿ ಇಪ್ಪತ್ತಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು, ಅಪಾರ ಪ್ರಮಾಣದ ಬೆಳೆ ನಾಶ ಮಾಡುವ ಜೊತೆಗೆ ವಾಸದ ಮನೆಗಳ ಮೇಲೂ ದಾಳಿ ಮಾಡುತ್ತಿವೆ ಎಂದು ಗ್ರಾಮಸ್ಥರು ದೂರಿದ್ದಾರೆ. ಅಲ್ಲದೇ…

Read More

ಹಾಸನ:- ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಆಗಿಲ್ಲ, ವಿಲೀನವಾಗಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನಾವು ಬಿಜೆಪಿ ಜೊತೆ ವಿಲೀನ ಆಗುತ್ತೇವೆ ಎಂದು ಹೇಳುವ ಸಿದ್ದರಾಮಯ್ಯ ಅವರು ಏನು ಮಾಡುತ್ತಿದ್ದಾರೆ? ಕಾಂಗ್ರೆಸ್​ನಲ್ಲಿರುವ ಮಾಜಿ ಮುಖ್ಯಮಂತ್ರಿ ಸೇರಿ ಎಲ್ಲರನ್ನು ಬಿಜೆಪಿಗೆ ಕಳುಹಿಸುತ್ತಿದ್ದಾರೆ ಎಂದರು. ನಾವು ವಿಲೀನ ಆಗುತ್ತೇವೆ ಅಂತಾ ಹೇಳುತ್ತಿದ್ದೀರಲ್ಲ, ನೀವು ಏನ್ ಮಾಡುತ್ತಿದ್ದೀರಿ? ಕಾಂಗ್ರೆಸ್‌ನಲ್ಲಿದ್ದವರನ್ನು ಟೆಂಟ್‌, ಗಳಗಳ ಸಮೇತ ಕಿತ್ತು ಕಳಿಸುತ್ತಿದ್ದೀರಿ. ಕಾಂಗ್ರೆಸ್‌ನಲ್ಲಿದ್ದ ಮಾಜಿ ಸಿಎಂ ಸೇರಿ ಎಲ್ಲರನ್ನೂ ಬಿಜೆಪಿಗೆ ಕಳಿಸುತ್ತಿದ್ದೀರಿ ಎಂದರು. ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲು ದೇವೇಗೌಡರೇ ಹೇಳಿ ಕಳುಹಿಸಿದ್ದಾರೆ ಅಂತ ನೀವು ಹೇಳುತ್ತಿದ್ದೀರಿ. ಏತಕ್ಕೆ ಹೋಗಲು ದೇವೇಗೌಡರು ಹೇಳಿದರು? ಅವರ 60 ವರ್ಷ ರಾಜಕೀಯ ಜೀವನದಲ್ಲಿ ಕಾಂಗ್ರೆಸ್ ನಂಬಿ, ಕಾಂಗ್ರೆಸ್ ಸಂಕಷ್ಟದಲ್ಲಿದ್ದಾಗ ಧ್ವನಿಗೂಡಿಸಿ ಕೆಲಸ ಮಾಡಿದ್ದರು. 2018 ರಲ್ಲಿ ನಿಮ್ಮ ಜೊತೆ ಸಂಬಂಧ ಬೆಳೆಸಿದ್ದೆವಲ್ಲ? ನೀವು ಕೊಟ್ಟ ಕೊಡುಗೆ ಏನು? ಎಂದು ಪ್ರಶ್ನಿಸಿದರು. ಪ್ರಧಾಮಂತ್ರಿ ರಾಜೀನಾಮೆ ಕೊಟ್ಟು ಬಾ…

Read More

ಬೆಂಗಳೂರು:- ನನ್ನ ಮಣ್ಣಿನ ಭೂಮಿಯನ್ನು ಬಿಟ್ಟು ಕೊಡುವ ಪ್ರಶ್ನೆ ಇಲ್ಲ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಬಳಿಕ ಮಂಡ್ಯ ಜಿಲ್ಲೆಯಲ್ಲಿ ಸುಮಲತಾ ಅವರ ಸ್ಪರ್ಧೆ ಬಗ್ಗೆ ನಾನಾ ಚರ್ಚೆಗಳು ನಡೆಯುತ್ತಿವೆ. ಬಿಜೆಪಿ ಪಕ್ಷದಿಂದಲೇ ಸುಮಲತಾ ಅವರು ಅಭ್ಯರ್ಥಿಯಾಗುವ ಸಾಧ್ಯತೆಯಿದೆ ಎನ್ನುವ ಮಾತುಗಳು ಒಂದು ಕಡೆ ಕೇಳಿ ಬರುತ್ತಿದ್ದು, ಕಾಂಗ್ರೆಸ್ ಕೂಡ ಸುಮಲತಾ ಅವರನ್ನು ತಮ್ಮನ್ನ ಸೆಳೆದುಕೊಳ್ಳಲು ನಾನಾ ಸರ್ಕಸ್ ಮಾಡುತ್ತಿದೆ ಎಂಬ ಮಾತು ಕೂಡ ಮತ್ತೊಂದೆಡೆ ಕೇಳಿ ಬಂದಿತ್ತು. ಇದೆಲ್ಲದರ ನಡುವೆ ಮಂಡ್ಯ ಮಣ್ಣು ಬಿಡಲ್ಲ ಎನ್ನುತ್ತಲೇ ಎದುರಾಳಿಗಳಿಗೆ ಸಂದೇಶ ರವಾನಿಸಿದ್ದಾರೆ. ಬಿಜೆಪಿಯಿಂದ ಟಿಕೆಟ್ ಸಿಗದಿದ್ದರೂ ಕಣ್ಣಕ್ಕಿಳಿಯುವ ಸೂಚನೆ ನೀಡಿದ್ದಾರೆ. 2019ರ ಚುನಾವಣೆ ನೆನೆದು ಸುಮಲತಾ ಅವರು ಭಾವುಕರಾದರು. ಕಾರ್ಯಕ್ರಮದಲ್ಲಿ ಮಾತನಾಡುತ್ತ, ಆ ಸಂದರ್ಭದಲ್ಲಿ ದರ್ಶನ್, ಯಶ್ ನನಗೆ ಧೈರ್ಯ ತುಂಬಿದ್ರು. ಕಳೆದ 5 ವರ್ಷ ಮಂಡ್ಯ ಜನರ ಪ್ರೀತಿಗಳಿಸಿದ್ದೇನೆ. ಮಂಡ್ಯದ ಮಣ್ಣಿನ ತಿಲಕವಿಟ್ಟು ಅಂಬರೀಶ್​ಗೆ ಬೀಳ್ಕೊಟ್ಟೆವು. ಯಾವುದೇ ಕಾರಣಕ್ಕೂ ನಾನು…

Read More

ಅನೇಕರು ನಿದ್ರಾಹೀನತೆಯಿಂದ ಬಳಲಿ ಸುಸ್ತಾಗುತ್ತಾರೆ. ರಾತ್ರಿ ವೇಳೆ ಸರಿಯಾಗಿ ನಿದ್ರೆ ಬರದೆ ಪದೇ ಪದೇ ಎಚ್ಚರವಾಗುವುದು ಸಾಮಾನ್ಯ ದಿನಚರಿಯಾಗಿರುತ್ತದೆ. ಸಮಯಕ್ಕೆ ಸರಿಯಾಗಿ ಏಳುವವರು ನಿದ್ರೆ ಮಾಡಿದರೂ ಸಹ ಏಳಲು ಆಲಸ್ಯ ತೋರುತ್ತಾರೆ. ಇದರ ಹಿಂದೆ ಅನೇಕ ಕಾರಣಗಳಿವೆ. ನೀವು ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಳ್ಳದೆ ನಿರ್ಲಕ್ಷ್ಯವಹಿಸಿದರೆ ಸಮಸ್ಯೆಗಳು ಮತ್ತಷ್ಟು ಹೆಚ್ಚುತ್ತವೆ. ನಿದ್ರೆ ನಮಗೆ ಪ್ರಕೃತಿದತ್ತವಾಗಿ ಬಂದಿರುವ ವರ. ಸ್ವಲ್ಪ ಗದ್ದಲ, ಶಬ್ಧವಾದರೂ ಸಹ ನೀವು ಎಚ್ಚರವಾಗಿಬಿಡುತ್ತಿರಿ. ಬಳಿಕ ಮತ್ತೆ ನಿದ್ರೆ ಮಾಡಲು ಹೋದರೆ ನಿಮಗೆ ನಿದ್ರೆಯೇ ಬರುವುದಿಲ್ಲ. ಇದು ನಿಮಗೆ ಕಿರಿಕಿಯನ್ನುಂಟು ಮಾಡಬಹುದು. ಕೆಲಸ ಮತ್ತು ಒತ್ತಡ, ಹಣಕಾಸು ಮತ್ತು ಭವಿಷ್ಯದ ಬಗೆಗಿನ ಚಿಂತೆ ಅಥವಾ ಮರೆಯಲಾಗದ ಅಹಿತಕರ ಅನುಭವವನ್ನು ಮೆಲುಕು ಹಾಕುವುದರ ಬಗ್ಗೆಯೇ ನಿಮ್ಮ ಮನಸ್ಸು ತುಂಬಿಹೋಗಿರುತ್ತದೆ. ಇದು ಕೂಡ ನಿಮ್ಮ ನಿದ್ರಾಭಂಗಕ್ಕೆ ಕಾರಣವಾಗಬಹುದು. ಮೆದುಳಿನಲ್ಲಿ ಉಂಟಾಗುವ ಈ ಸಮಸ್ಯೆಯನ್ನು ಹೇಗೆ ಬಗೆಹರಿಸುವುದು. ನಿಮ್ಮ ದೇಹವನ್ನು ಅಗತ್ಯವಿರುವ ನಿದ್ರೆಗೆ ಮತ್ತೆ ಮರಳಿಸುವುದು ಹೇಗೆ? ಎಚ್ಚರದ ಬಳಿಕವೂ ಮತ್ತೆ ಸರಿಯಾಗಿ ನಿದ್ರೆ…

Read More

ಪೋಷಕಾಂಶಗಳಿಂದ ಕೂಡಿರುವ ಡ್ರೈ ಫ್ರೂಟ್ಸ್‌ಗಳಿಂದ ನಮ್ಮ ಆರೋಗ್ಯಕ್ಕೆ ಬಹಳಷ್ಟು ಪ್ರಯೋಜನವಿದೆ. ಡ್ರೈ ಪ್ರೂಟ್ಸ್‌ಗಳಲ್ಲಿ ಗೋಡಂಬಿ ಎಂದರೆ ಬಹಳಷ್ಟು ಜನರು ಇಷ್ಟ ಪಟ್ಟು ತಿನ್ನುತ್ತಾರೆ. ಕ್ಯಾಶ್ಯೂ, ಕಾಜು ಎಂದೆಲ್ಲಾ ಕರೆಯುವ ಗೋಡಂಬಿಯನ್ನು ಬೆಳಗ್ಗಿನ ತಿಂಡಿಯಲ್ಲಿ, ಸಂಜೆಯ ಸ್ನಾಕ್ಸ್‌ನಲ್ಲಿ ತಿನ್ನುವವರಿದ್ದಾರೆ. ಫುಲಾವ್‌, ಘೀ ರೈಸ್‌ಗಳಲ್ಲಿ ಸೇರಿಸುತ್ತಾರೆ. ನೀವು ಗೋಡಂಬಿಯನ್ನು ಖರೀದಿಸಲು ಅಂಗಡಿಗೆ ಹೋದರೆ ಅಲ್ಲಿ ಹಲವಾರು ಬಗೆಯ ಉತ್ಪನ್ನಗಳನ್ನು ಕಾಣಬಹುದು. ಕಲಬೆರಕೆಯ ಯುಗದಲ್ಲಿ ಗೋಡಂಬಿಗೂ ಅದರ ಪ್ರಭಾವ ಬೀರಿದೆ. ನೀವು ಖರೀದಿಸುವ ಗೋಡಂಬಿ ಅಸಲಿಯೋ ಅಥವಾ ನಕಲಿಯೋ ಎಂದು ತಿಳಿಯುವುದಾದರೂ ಹೇಗೆ? ಈ ಗೊಂದಲ ನಿಮ್ಮಲ್ಲಿದ್ದರೆ ಅದಕ್ಕೆ ಸುಲಭದ ಮಾರ್ಗಗಳಿವೆ. ಉತ್ತಮ ಗೋಡಂಬಿ ತಿನ್ನುವುದರಿಂದ ಆರೋಗ್ಯಕ್ಕೆ ಎಷ್ಟು ಪ್ರಯೋಜನವಿದೆಯೋ ಅದೇ ರೀತಿ ನಕಲಿ ಗೋಡಂಬಿ ತಿನ್ನುವುದರಿಂದ ಆರೋಗ್ಯದ ಮೇಲೆ ಅಷ್ಟೇ ಕೆಟ್ಟ ಪರಿಣಾಮವಾಗುತ್ತದೆ. ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಗೋಡಂಬಿ ಸಿಗುತ್ತದೆ ಎಂದು ಖರೀದಿಸಿ ತಂದರೆ ಅದರಿಂದ ತೊಂದರೆ ತಪ್ಪಿದ್ದಲ್ಲ. ಗೋಡಂಬಿಯ ಶುದ್ಧತೆಯನ್ನು ಗುರುತಿಸುವುದು ಹೇಗೆ? ಇಲ್ಲಿ ಕೆಲವು ಸಲಹೆಗಳನ್ನು ನೀಡಲಾಗಿದೆ. ಅದರ ಮುಖಾಂತರ ನೀವು…

Read More

ದೀರ್ಘಕಾಲ ಕುಳಿತುಕೊಳ್ಳುವುದು, ವಿಶೇಷವಾಗಿ ಒಂದೇ ಸ್ಥಳದಲ್ಲಿ ಕುಳಿತು ಕೆಲಸ ಮಾಡುವುದು, ದೈಹಿಕ ನಿಷ್ಕ್ರಿಯತೆ ಇವೆಲ್ಲವೂ ಬೆನ್ನು ನೋವಿಗೆ ಕಾರಣವಾಗಬಹುದು. ಯಾರಾದರೂ ಈ ಸಮಸ್ಯೆಯಿಂದ ಬಳಲುತ್ತಿದ್ದರೆ, ಎದ್ದೇಳುವುದು ಮತ್ತು ಕುಳಿತುಕೊಳ್ಳುವುದು ಸೇರಿದಂತೆ ದೈನಂದಿನ ಜೀವನದ ಸಾಮಾನ್ಯ ಚಟುವಟಿಕೆಗಳನ್ನು ಮಾಡಲು ಸಹ ಕಷ್ಟವಾಗುತ್ತದೆ. ಒಂದು ವೇಳೆ ಈ ಸಮಸ್ಯೆಯಿಂದ ಪರಿಹಾರ ಪಡೆಯಬೇಕು ಎಂದು ಅಂದುಕೊಂಡಿದ್ದರೆ, ನಾವಿಂದು ಕೆಲ ಮನೆಮದ್ದುಗಳನ್ನು ನಿಮಗೆ ತಿಳಿಸಿಕೊಡಲಿದ್ದೇವೆ. ಹೀಟಿಂಗ್ ಪ್ಯಾಡ್: ಹೀಟಿಂಗ್ ಪ್ಯಾಡ್ ಅನ್ನು ಬಳಸುವುದು ಬೆನ್ನು ನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹೀಟಿಂಗ್ ಪ್ಯಾಡ್ ಅನ್ನು ಸೊಂಟದ ಮೇಲೆ ಇರಿಸಿ. ಇದರಿಂದ ರಕ್ತ ಪರಿಚಲನೆ ಹೆಚ್ಚಾಗುತ್ತದೆ ಮತ್ತು ಸ್ನಾಯುಗಳು ರಿಲೀಫ್ ಪಡೆಯುತ್ತವೆ. ಇದು ಚಳಿಗಾಲದಲ್ಲಿ ಅಥವಾ ಸ್ನಾಯುಗಳಲ್ಲಿನ ಸಂಧಿವಾತಕ್ಕೆ ವಿಶೇಷವಾಗಿ ಪ್ರಯೋಜನಕಾರಿಯಾಗಿದೆ. ಹರ್ಬಲ್ ಟೀ ಹರ್ಬಲ್ ಟೀ ಬೆನ್ನು ನೋವನ್ನು ಶಮನಗೊಳಿಸಲು ಸಹಾಯ ಮಾಡುತ್ತದೆ. ಶುಂಠಿ, ನಿಂಬೆ ಮತ್ತು ಜೇನುತುಪ್ಪವನ್ನು ಬಿಸಿ ನೀರಿನಲ್ಲಿ ಬೆರೆಸಿ ಕುಡಿದರೆ ತುಂಬಾ ಒಳ್ಳೆಯದು. ಆಯುರ್ವೇದ ಚಿಕಿತ್ಸೆ ಬೆನ್ನು ನೋವನ್ನು ಕಡಿಮೆ ಮಾಡಲು…

Read More