Author: AIN Author

ಬೆಂಗಳೂರು:- ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್​ಗೆ ಅಪ್ಲೈ ಮಾಡುವ ಮುನ್ನ ಇರಲಿ ಎಚ್ಚರ. ಆನ್‌ಲೈನ್​ನಲ್ಲಿ ನಕಲಿ ಕ್ಯೂ ಆರ್ ಕೋಡ್ ಲಿಂಕ್​ಗಳ ಹಾವಳಿ ಹೆಚ್ಚಾಗಿದೆ. ಅಪ್ಪಿ ತಪ್ಪಿ ನಕಲಿ ಕ್ಯೂ ಆರ್ ಕೋಡ್ ಕ್ಲಿಕ್ ಮಾಡಿದ್ರೆ ನಿಮ್ಮ ಖಾತೆಯಲ್ಲಿನ ಅಷ್ಟೋ ಹಣ ಮಾಯವಾಗುತ್ತೆ. ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ನೋಂದಣಿ ಹೆಸರಲ್ಲಿ ಸೈಬರ್ ಕ್ರೈಂ ನಡೆಯುತ್ತಿದೆ. ನಕಲಿ ಲಿಂಕ್ ಹರಿಬಿಟ್ಟು ಕೆಲ ಖದೀಮರು ದುಡ್ಡು ಮಾಡಲು ಹೊರಟಿದ್ದಾರೆ. ನೋಂದಣಿ ಬಳಿಕ ಸಿಗುವ ಕ್ಯೂ ಆರ್ ಕೋಡ್​ಗಳನ್ನು ನಕಲಿ ಮಾಡುತ್ತಿದ್ದಾರೆ. ಕ್ಯೂ ಆರ್ ಕೋಡ್ ಟಚ್ ಮಾಡುತ್ತಿದ್ದಂತೆ ಅಪರಿಚಿತರ ಖಾತೆಗೆ ಲಿಂಕ್ ಹೋಗುತ್ತಿದ್ದು ಸ್ವಲ್ಪ ಎಮಾರಿದ್ರು ನಿಮ್ಮ ಖಾತೆಯಲ್ಲಿದ್ದ ಹಣ ಖದೀಮರ ಪಾಲಾಗುತ್ತೆ. ಈ ಬಗ್ಗೆ ಓರ್ವ ವ್ಯಕ್ತಿ ಎಕ್ಸ್ ಆ್ಯಪ್ ಮೂಲಕ ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಕ್ಯೂ ಆರ್ ಕೋಡ್ ಸಮೇತ ಪೊಲೀಸರಿಗೆ ದೂರು ನೀಡಿದ್ದು ಸೈಬರ್ ವಂಚಕರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಪೊಲೀಸರು ಸೂಚನೆ ನೀಡಿದ್ದಾರೆ.

Read More

ಬೆಂಗಳೂರು:- ದೇಶದ್ರೋಹಿಗಳನ್ನು ಗುಂಡಿಕ್ಕಿ ಕೊಲ್ಲಬೇಕು ಎಂದ ಬಿಜೆಪಿ ಮುಖಂಡ ಕೆ ಎಸ್ ಈಶ್ವರಪ್ಪ ವಿರುದ್ಧದ FIRಗೆ ತಡೆ ಹಿಡಿಯಲಾಗಿದೆ. ಪ್ರಕರಣ ತನಿಖೆಗೆ ಹೈಕೋರ್ಟ್‌ ತಡೆ ನೀಡಿದೆ. ನ್ಯಾ. ಕೃಷ್ಣದೀಕ್ಷಿತ್‌ ಪೀಠವು ಈ ಆದೇಶ ಹೊರಡಿಸಿದೆ. ಆದರೂ, ಈಶ್ವರಪ್ಪ ಹೇಳಿಕೆಗೆ ಹೈಕೋರ್ಟ್‌ ಅಸಮಾಧಾನ ಹೊರಹಾಕಿದೆ. ನಮ್ಮದು ಬಹು ಭಾಷಾ, ಧರ್ಮ ಇರುವ ದೇಶ. ಎಷ್ಟೋ ಕಡೆ ಸ್ವಲ್ಪ ಹೆಚ್ಚು ಕಡಿಮೆ ಮಾತನಾಡಿದ್ರೆ ಗಲಭೆ ಆಗುವ ಸನ್ನಿವೇಶ ಇದೆ. ಹೀಗುರುವಾಗ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಕೋರ್ಟ್‌ ಸಲಹೆ ನೀಡಿದೆ. ನಮ್ಮ ರಾಜಕೀಯ ನಾಯಕರು ಭಾಷೆಯ ಮೇಲೆ ದೌರ್ಜನ್ಯ ಮಾಡ್ತಾ ಇದ್ದಾರೆ. ನಾಯಕರ ಮಾತುಗಳನ್ನು ಮಕ್ಕಳು ನೋಡುತ್ತಾ ಇರ್ತಾರೆ. ಇದರಿಂದ ಮಕ್ಕಳು ಏನನ್ನು ಕಲಿಯುತ್ತಾರೆ? ಸಂಸ್ಕೃತಿ ಬಿಂಬಿಸುವಂತೆ ಮಾತನಾಡಲು ಹೇಳಿ. ನಿಮ್ಮ ಕಕ್ಷಿದಾರರಿಗೆ ನೀವೆ ಸಲಹೆ ನೀಡಿ ಎಂದು ಕೋರ್ಟ್‌ ಕಿವಿಮಾತು ಹೇಳಿದೆ.

Read More

ಬೆಂಗಳೂರು:- ಅಕ್ರಮ ಹಣ ಸಂದಾಯ ಪ್ರಕರಣಕ್ಕಂ ಸಂಬಂಧಿಸಿದಂತೆ ಕೇರಳ ಮುಖ್ಯಮಂತ್ರಿ ಪುತ್ರಿ ವೀಣಾಗೆ ಹಿನ್ನಡೆ ಆಗಿದ್ದು ಕರ್ನಾಟಕ ಹೈಕೋರ್ಟ್ ಅರ್ಜಿ ವಜಾಗೊಳಿಸಿದೆ. ವೀಣಾ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಶುಕ್ರವಾರ ವಜಾಗೊಳಿಸಿದೆ. ಅದರಂತೆ ಎಸ್​​ಎಫ್​​ಐಎ ತನಿಖೆ ಮುಂದುವರಿಸಲಿದೆ. ಯಾವುದೇ ಸೇವೆ ನೀಡದಿದ್ದರೂ ಕೊಚ್ಚಿನ್ ಮಿನರಲ್ಸ್‌ನಿಂದ ಕೇರಳದ ರಾಜಕೀಯ ವ್ಯಕ್ತಿಗಳಿಗೆ 135 ಕೋಟಿ ರೂಪಾಯಿ ನೀಡಲಾಗಿದೆ ಎಂಬ ಅಂಶ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿದ ದಾಳಿ ವೇಳೆ ತಿಳಿದುಬಂದಿತ್ತು. ಅಲ್ಲದೆ, ಈ ಹಣದ ಪೈಕಿ 1.72 ಕೋಟಿ ರೂಪಾಯಿಗಳನ್ನು ಟಿ.ವೀಣಾ ನಿರ್ದೇಶಕಿಯಾಗಿರುವ ಕರ್ನಾಟಕದಲ್ಲಿರುವ ಎಕ್ಸಲಾಜಿಕ್ ಸಲ್ಯೂಷನ್ಸ್ ಪ್ರೈ.ಲಿ.ಗೆ ವರ್ಗಾವಣೆಯಾಗಿರುವುದು ಕಂಡುಬಂದಿತ್ತು. ಯಾವುದೇ ಸೇವೆ ನೀಡದಿದ್ದರೂ ಹಣ ಸಂದಾಯ ಮಾಡಿದ ಪ್ರಕರಣ ಸಂಬಂಧ ಐಟಿ ಅಧಿಕಾರಿಗಳು ಎಸ್ಎಫ್ಐಒ ಗಮನಕ್ಕೆ ತಂದಿತ್ತು. ಅದರಂತೆ ಪ್ರಕರಣ ದಾಖಲಿಸಿಕೊಂಡ ಎಸ್ಎಫ್ಐಒ ತನಿಖೆ ನಡೆಸುತ್ತಿದೆ. ಇದರ ವಿರುದ್ಧ ವೀಣಾ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಕೇರಳ ಕರಾವಳಿಯುದ್ದಕ್ಕೂ ಕೊಚ್ಚಿನ್ ಮಿನರಲ್ಸ್ ಕಡಲತೀರದ ಮರಳು ಗಣಿಗಾರಿಕೆಯಲ್ಲಿ ಮರಳಿನ…

Read More

ಗರ್ಭಾವಸ್ಥೆಯು ಪ್ರತಿಯೊಬ್ಬ ಮಹಿಳೆಗೆ ತುಂಬಾ ಸಂತೋಷದ ಸಮಯ. ಗರ್ಭಾವಸ್ಥೆಯಲ್ಲಿ ಮಹಿಳೆಯರು ತಮಗೆ ಹುಟ್ಟಲಿರುವ ಮಗುವಿನ ಬಗ್ಗೆ ಸಾಕಷ್ಟು ಕನಸು ಕಾಣುತ್ತಾರೆ. ಈ ಸಮಯದಲ್ಲಿ ಮಹಿಳೆಯರು ಒತ್ತಡ ಮತ್ತು ಅನೇಕ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಾರೆ. ಈ ಸಮಯದಲ್ಲಿ ಮಹಿಳೆಯರ ದೇಹವು ತುಂಬಾ ಸೂಕ್ಷ್ಮವಾಗಿರುತ್ತದೆ. ಅದಕ್ಕಾಗಿಯೇ ಅವರಿಗೆ ಹೆಚ್ಚಿನ ಕಾಳಜಿ ಬೇಕು. ಈ ಸಮಯದಲ್ಲಿ ಯಾವುದೇ ಅಜಾಗರೂಕತೆಯು ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು. ಗರ್ಭಾವಸ್ಥೆಯ ಮೊದಲ ಮೂರು ತಿಂಗಳುಗಳು ಅತ್ಯಂತ ಸೂಕ್ಷ್ಮವಾಗಿರುತ್ತವೆ. ಅದಕ್ಕಾಗಿಯೇ ಗರ್ಭಿಣಿಯರು ಈ ಸಮಯದಲ್ಲಿ ಕೆಲವು ತಪ್ಪುಗಳನ್ನು ಮಾಡಬಾರದು. ಗರ್ಭಿಣಿಯರು ತಮ್ಮ ಮಾನಸಿಕ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಈ ಸಮಯದಲ್ಲಿ, ದೇಹದಲ್ಲಿ ಹಾರ್ಮೋನುಗಳು ಮತ್ತು ಅನೇಕ ಬದಲಾವಣೆಗಳು ನಡೆಯುತ್ತವೆ. ಇಂತಹ ಪರಿಸ್ಥಿತಿಯಲ್ಲಿ ಮಾನಸಿಕ ಒತ್ತಡವೂ ಹೆಚ್ಚಿನ ಪ್ರಮಾಣದಲ್ಲಿ ಹೆಚ್ಚಾಗುತ್ತದೆ. ಗರ್ಭಾವಸ್ಥೆಯಲ್ಲಿ ಇದು ಒಳ್ಳೆಯದಲ್ಲ. ಅದಕ್ಕಾಗಿ ಒತ್ತಡ ಮತ್ತು ಆತಂಕವಿಲ್ಲದೆ ಶಾಂತವಾಗಿರುವುದು ಉತ್ತಮ. ಗರ್ಭಾವಸ್ಥೆಯಲ್ಲಿ ನೀವು ಸರಿಯಾಗಿ ಮಲಗಬೇಕು. ನಿದ್ರೆಯ ಕೊರತೆ, ನಿದ್ರಾಹೀನತೆ ನಿಮ್ಮ ಆರೋಗ್ಯವನ್ನು ಹಾಳುಮಾಡುತ್ತದೆ. ಇದಲ್ಲದೆ, ಗರ್ಭಾವಸ್ಥೆಯಲ್ಲಿ ನೀವು…

Read More

ಬೆಂಗಳೂರು:- ನಗರದ ಡೈರಿ ಸರ್ಕಲ್ ಫ್ಲೈ ಓವರ್ ಕೆಳಗೆ ಪಾಲಿಕೆ ನಿರ್ಮಿಸಿರೋ ಕಸ ಸಂಗ್ರಹ ಘಟಕಕ್ಕೆ ಸ್ಥಳೀಯರಿಂದ ವಿರೋಧ ವ್ಯಕ್ತವಾಗ್ತಿದೆ. ಸುತ್ತಮುತ್ತಲಿನ ನಿವಾಸಿಗಳಿಗೆ ಇದರಿಂದ ಸಮಸ್ಯೆಯಾಗ್ತಿದೆ. ಕಸ ಸಂಗ್ರಹವನ್ನ ಬೇರೆಡೆಗೆ ಸ್ಥಳಾಂತರಿಸುವಂತೆ ಸ್ಥಳೀಯರು ಪಟ್ಟು ಹಿಡಿದಿದ್ದಾರೆ. ಡೈರಿ ಸರ್ಕಲ್ ಜಂಕ್ಷನ್ ಬಳಿ ಇರೋ ಫ್ಲೈ ಓವರ್ ಕೆಳಗೆ ವಾರ್ಡ್ ಗಳ ಕಸ ಸಂಗ್ರಹಕ್ಕೆ ಅಂತಾ ಬಿಬಿಎಂಪಿಯಿಂದ ಈ ಜಾಗದಲ್ಲಿ 2022 ರಲ್ಲಿ ಕೆಲಸ ಶುರುಮಾಡಿದ್ರು, ಆರಂಭದಲ್ಲಿ ಬರೀ ಬಿಬಿಎಂಪಿ ಕಸದ ಗಾಡಿಗಳನ್ನ ನಿಲ್ಲಿಸ್ತಿದ್ದ ಈ ಜಾಗದಲ್ಲಿ ಈಗ ಸೀಟ್ ಹಾಕಿ ಕಸ ಸಂಗ್ರಹ ಘಟಕ ಮಾಡಿರೋದು ಸ್ಥಳೀಯರ ನಿದ್ದೆಗೆಡಿಸಿದೆ. ಕಸದ ವಾಸನೆ, ಗಾಡಿಗಳ ಸಂಚಾರದಿಂದ ಬೇಸತ್ತ ಜನರು ಪಾಲಿಕೆ ವಿರುದ್ಧ ಕಿಡಿಕಾರುತ್ತಿದ್ದಾರೆ. ಇನ್ನು ಈ ಜಾಗದಲ್ಲಿ ಕೋರಮಂಗಲ, ಜಯದೇವ ಆಸ್ಪತ್ರೆ ಕಡೆಗೆ ಪ್ರತಿನಿತ್ಯ ನೂರಾರು ಜನರು ಸಂಚರಿಸ್ತಾರೆ, ಆದ್ರೆ ಇದೀಗ ಕಸ ಸಂಗ್ರಹ ಮಾಡ್ತಿರೋದರಿಂದ ಗಬ್ಬುವಾಸನೆ ಬರ್ತಿದ್ದು, ಸುತ್ತಮುತ್ತ ಇರೋ ನಿವಾಸಿಗಳಿಗೆ ಸಮಸ್ಯೆಯಾಗ್ತಿದೆ. ಈ ಬಗ್ಗೆ ಪಾಲಿಕೆಗೆ ಹಲವು ಬಾರಿ ಮನವಿ…

Read More

ಬೆಂಗಳೂರು:- ಪ್ಲಾಸ್ಟಿಕ್ ಬ್ಯಾನ್ ಮಾಡಿದರೂ ಇನ್ನೂ ಬಳಕೆಯಲ್ಲಿದ್ದು, ನಿರ್ಮೂಲನೆಗೆ ಆಸಕ್ತಿ ಕಳೆದುಕೊಂಡ ಬಿಬಿಎಂಪಿ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ. ಕೇಂದ್ರ ಸರ್ಕಾರ ಏಕ ಬಳಕೆ‌ ಪ್ಲಾಸ್ಟಿಕ್ ಬ್ಯಾನ್ ಮಾಡಿ ಆದೇಶ ಹೊರಡಿಸಿದೆ. ಪ್ಲಾಸ್ಟಿಕ್ ಬಳಕೆ ತುಂಬಾ ಸುಲಭವಾದ್ದರಿಂದ ಈ ಉತ್ಪನ್ನಗಳಿಗೆ ಆಧ್ಯತೆ ನೀಡಲಾಗುತ್ತಿದೆ. ನಾವು ನಗರದ ಪ್ರಮುಖವಾದ ಕೆ.ಆರ್. ಮಾರ್ಕೆಟ್ ನಲ್ಲಿ ನೋಡೊದಾದರೆ ಪ್ರತಿಯೊಬ್ಬ ವ್ಯಾಪಾರಿಗಳು ಏಕ ಬಳಕೆ ಪ್ಲಾಸ್ಟಿಕ್ ನಲ್ಲೆ ತರಕಾರಿ ಸೇರಿದಂತೆ ಹೂವುಗಳನ್ನ ಗ್ರಾಹಕರಿಗೆ ನೀಡುತ್ತಾರೆ. ಇದು ನೋಡಲು ನಮಗೆ ಸರ್ವೆ ಸಾಮಾನ್ಯವಾಗಿ ಕಂಡು ಬರುತ್ತದೆ. ಕೇವಲ ಬಿಬಿಎಂಪಿ ಅಧಿಕಾರಿಗಳು ಇಂತಹ ವ್ಯಾಪಾರಿಗಳ ಮೇಲೆ ದಾಳಿ ನಡೆಸಿ ದಂಡ ಹಾಕುತ್ತಾರೆ ಹೊರತು ಮೂಲತಃ ಯಾವ ಫ್ಯಾಕ್ಟರಿಗಳಲ್ಲಿ ಉತ್ಪಾದನೆ ಆಗುತ್ತದೆ ಅಲ್ಲಿ ದಾಳಿ ನಡೆಸಿ ಪ್ಲಾಸ್ಟಿಕ್ ಉತ್ಪಾದನೆ ಆಗುವಂತೆ ನೋಡಿಕೊಳ್ಳಬೇಕು. ನಗರದಲ್ಲಿ ಎಲ್ಲೆಲ್ಲಿ ಪ್ಲಾಸ್ಟಿಕ್ ಹೇಗೆ ಉತ್ಪಾದನೆ ಆಗುತ್ತದೆ ಎಂಬುದು ಅಧಿಕಾರಿಗಳಿಗೆ ಗೊತ್ತು. ಆದರೆ ಈ ಬಗ್ಗೆ ಗೊತ್ತಿದ್ದರೂ ಅವರು ಇದಕ್ಕೆ ಕಡಿವಾಣ ಹಾಕದೆ ಕಮೀಷನ್ ಪಡೆದು ಸುಮ್ಮನಾಗುತ್ತಿದ್ದಾರೆ…

Read More

ಚೆನ್ನೈ:- 2024-25 ನೇ ಸಾಲಿನ ಬಜೆಟ್ ಘೋಷಿಸಿದ ವೇಳೆ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಶೀಘ್ರ ಚಾಲನೆ ಎಂದು ಸಿದ್ದರಾಮಯ್ಯ ಘೋಷಣೆ ಮಾಡಿದರು. ಇನ್ನೂ ಸಿದ್ದರಾಮಯ್ಯ ಘೋಷಣೆಗೆ ತಮಿಳುನಾಡು ಕೆರಳಿದೆ. ಸೂಕ್ತ ಅನುಮತಿ ಪಡೆದು ಶೀಘ್ರವೇ ಅಣೆಕಟ್ಟು ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು, ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ರಚಿಸಲಾಗಿರುವ ವಿಶೇಷ ಸಮಿತಿಗಳ ಅಡಿಯಲ್ಲಿ ಎರಡು ಉಪ ಸಮಿತಿಗಳು ಕಾರ್ಯನಿರ್ವಹಿಸಲಿವೆ ಎಂದು ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ವೇಳೆ ಹೇಳಿದ್ದಾರೆ. ಕರ್ನಾಟಕ ಮುಖ್ಯಮಂತ್ರಿಯವರ ಈ ಘೋಷಣೆಯು ಕಾವೇರಿ ನ್ಯಾಯಾಧಿಕರಣದ ಅಂತಿಮ ತೀರ್ಪು ಮತ್ತು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿಗೆ ವಿರುದ್ಧವಾಗಿದೆ. 9000 ಕೋಟಿ ರೂಪಾಯಿ ವೆಚ್ಚದಲ್ಲಿ 67.14 ಟಿಎಂಸಿ ನೀರನ್ನು ನಿಲ್ಲಿಸಲು ನಿರ್ಮಾಣ ಮಾಡಲಾಗುತ್ತಿದೆ. ಕರ್ನಾಟಕವು ಹೆಚ್ಚಿನ ನೀರಿನ ಸಾಮರ್ಥ್ಯದೊಂದಿಗೆ ಮೇಕೆದಾಟು ಅಣೆಕಟ್ಟು ಮತ್ತು 400 MW ಜಲವಿದ್ಯುತ್ ಸ್ಥಾವರವನ್ನು ನಿರ್ಮಿಸಲು ಯೋಜಿಸುತ್ತಿದೆ. ಇದನ್ನು ಅನುಮತಿಸಿದರೆ ತಮಿಳುನಾಡಿನ ಕಾವೇರಿ ಜಲಾನಯನ ಜಿಲ್ಲೆಗಳು ಮರುಭೂಮಿಯಾಗುತ್ತವೆ ಎಂದು ಎಂಡಿಎಂಕೆ ನಾಯಕ ಮತ್ತು ಸಂಸದ ವೈಕೊ ಹೇಳಿದ್ದಾರೆ ಕಳೆದ 48…

Read More

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್‌ ಕ್ರಿಕೆಟ್‌ ಸರಣಿಯಿಂದ ತಪ್ಪಿಸಿಕೊಳ್ಳಲು ಸುಳ್ಳು ಹೇಳಿ ಸಿಕ್ಕಿ ಬಿದ್ದ ಸ್ಟಾರ್‌ ವೇಗದ ಬೌಲರ್‌ ಹ್ಯಾರಿಸ್‌ ರೌಫ್‌ ವಿರುದ್ಧ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (ಪಿಸಿಬಿ) ಬ್ಯಾನ್‌ ಶಿಕ್ಷೆ ವಿಧಿಸಿದೆ. ಹ್ಯಾರಿಸ್‌ ರೌಫ್‌ ಖಾತ್ರಿ ಪಡಿಸಿಯೂ, ಅಂತಿಮ ಗಳಿಗೆಯಲ್ಲಿ ಫಿಟ್ನೆಸ್‌ ಕಾರಣ ನೀಡಿ ಸರಣಿಯಿಂದ ಹಿಂದೆ ಸರಿದರು ಎಂದು ಆ ಸಂದರ್ಭದಲ್ಲಿ ಪಾಕಿಸ್ತಾನ ಕ್ರಿಕೆಟ್‌ ಮಂಡಳಿಯ ಚೀಫ್‌ ಸೆಲೆಕ್ಟರ್‌ ಹ್ಯಾರಿಸ್‌ ರೌಫ್‌ ಹೇಳಿದ್ದರು. ಆದರೆ, ಬಳಿಕ ನಡೆಸಲಾದ ವೈದ್ಯಕೀಯ ತಪಾಸಣೆಯಲ್ಲಿ ಯಾವುದೇ ಫಿಟ್ನೆಸ್‌ ಸಮಸ್ಯೆ ಬೆಳಕಿಗೆ ಬಂದಿಲ್ಲ. ಈ ಮೂಲಕ ಸುಳ್ಳು ಹೇಳಿ ಆಸ್ಟ್ರೇಲಿಯಾ ಪ್ರವಾಸ ತಪ್ಪಿಸಿಕೊಂಡಿದ್ದಾರೆ ಎಂಬ ಕಾರಣಕ್ಕೆ ಪಿಸಿಬಿ ಕಠಿಣ ಕ್ರಮ ಕೈಗೊಂಡಿದೆ. ಸ್ಟಾರ್‌ ಆಟಗಾರನ ಕೇಂದ್ರ ಒಪ್ಪಂದವನ್ನು ಪಿಸಿಬಿ ರದ್ದು ಪಡಿಸಿದೆ. ಪಿಸಿಬಿ ವೈದ್ಯಾಧಿಕಾರಿಗಳ ತಂಡ ಹ್ಯಾರಿಸ್‌ ರೌಫ್‌ ಅವರ ಫಿಟ್ನೆಸ್‌ ವಿಚಾರದಲ್ಲಿನ ಸತ್ಯಾಸತ್ಯತೆಗಳನ್ನು ಚೀಫ್‌ ಸೆಲೆಕ್ಟರ್ ವಹಾಬ್ ರಿಯಾಝ್‌ ಅವರ ಗಮನಕ್ಕೆ ತಂದಿದೆ. ಬಳಿಕ ನಡೆಸಲಾದ ವಿಚಾರಣೆಯಲ್ಲಿ ರೌಫ್‌ ಸರಿಯಾದ ಕಾರಣಗಳನ್ನು ನೀಡದೇ ಇದ್ದ…

Read More

ನವದೆಹಲಿ:- ಇಂದಿನಿಂದ ದೆಹಲಿಯಲ್ಲಿ ಬಿಜೆಪಿ ಬೃಹತ್ ರಾಷ್ಟ್ರೀಯ ಸಮಾವೇಶ ನಡೆಯಲಿದ್ದು, ಲೋಕಸಭೆ ಚುನಾವಣೆಗೆ ಭರ್ಜರಿ ತಾಲೀಮು ನಡೆಸಲಾಗುತ್ತಿದೆ. ಮಧ್ಯಾಹ್ನ 3 ಗಂಟೆಗೆ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಧ್ವಜಾರೋಹಣ ಮಾಡುವ ಮೂಲಕ ರಾಷ್ಟ್ರೀಯ ಸಮಾವೇಶಕ್ಕೆ ಚಾಲನೆ ನೀಡಲಿದ್ದಾರೆ. ಎರಡು ದಿನಗಳ ಸಮಾವೇಶದ ಎರಡೂ ದಿನ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ. ‘ಅಭಿವೃದ್ಧಿ ಹೊಂದಿದ ಭಾರತ’ ನಿರ್ಣಯವನ್ನು ಸಮಾವೇಶದ ಸ್ಥಳದಲ್ಲಿ ಪ್ರದರ್ಶನದ ಮೂಲಕ ಪ್ರಸ್ತುತಪಡಿಸಲಾಗುತ್ತದೆ. ಬಿಜೆಪಿ ಆಡಳಿತವಿರುವ ರಾಜ್ಯಗಳ ಸಚಿವರು, ಅಧಿಕಾರಿಗಳು, ರಾಷ್ಟ್ರೀಯ ಪರಿಷತ್ತಿನ ಸದಸ್ಯರು, ಲೋಕಸಭೆ ಮತ್ತು ರಾಜ್ಯಸಭೆಯ ಹಾಲಿ ಮತ್ತು ಮಾಜಿ ಸದಸ್ಯರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ರಾಜ್ಯಾಧ್ಯಕ್ಷರು, ಲೋಕಸಭಾ ಕ್ಲಸ್ಟರ್‌ನ ಉಸ್ತುವಾರಿಗಳು ಮತ್ತು ಸಂಯೋಜಕರು, ಮೇಯರ್, ಪುರಸಭೆ ಮತ್ತು ನಗರ ಪಂಚಾಯತ್ ಅಧ್ಯಕ್ಷರು, ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಜಿಲ್ಲಾಧ್ಯಕ್ಷರು, ಜಿಲ್ಲಾ ಉಸ್ತುವಾರಿಗಳು, ಮೋರ್ಚಾಗಳ ರಾಜ್ಯ ಅಧ್ಯಕ್ಷರು, ಮಾಧ್ಯಮ, ಸಾಮಾಜಿಕ ಮಾಧ್ಯಮ ಮತ್ತು ಐಟಿ ರಾಜ್ಯ ಸಂಚಾಲಕರು, ಆಯೋಗದ ಮಂಡಳಿ ನಿಗಮದ ಅಧ್ಯಕ್ಷರು,…

Read More

ಸಿಎಂ ಸಿದ್ದರಾಮಯ್ಯ ಅವರ ಬಜೆಟ್‌ನಲ್ಲಿ ಎಲ್ಲರ ಚಿತ್ತವನ್ನು ಕದ್ದ ಕ್ಷೇತ್ರ ನೀರಾವರಿ. ಈ ಕ್ಷೇತ್ರಕ್ಕೆ ಪ್ರಸಕ್ತ ಸರ್ಕಾರ ಬರೋಬ್ಬರಿ 19,179 ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿದೆ. ಕಾವೇರಿ ಕಣಿವೆಯ ಮಹತ್ವಾಕಾಂಕ್ಷಿ ಯೋಜನೆಯಾದ ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಯ ಅನುಷ್ಠಾನಕ್ಕಾಗಿ ಒಂದು ಪ್ರತ್ಯೇಕ ಯೋಜನಾ ವಿಭಾಗವನ್ನು ಹಾಗೂ 2 ಉಪ ವಿಭಾಗಗಳನ್ನು ಈಗಾಗಲೇ ಸ್ಥಾಪಿಸಲಾಗಿದೆ. ಕಾವೇರಿ ನೀರಾವರಿ ನಿಗಮದಡಿ ವಿಶ್ವೇಶ್ವರಯ್ಯ ನಾಲಾ ಜಾಲದ ಹೆಬ್ಬಕವಾಡಿ, ನಿಡಘಟ್ಟ, ತುರುಗನೂರು, ಮಳವಳ್ಳಿ ತಾಲ್ಲೂಕಿನ ಮಾದವಮಂತ್ರಿ ನಾಲೆಗಳ ಹಾಗೂ ಮದ್ದೂರು ತಾಲ್ಲೂಕು ಕೆಮ್ಮಣ್ಣುನಾಲಾ ಆಧುನೀಕರಣ, ಹುಣಸೂರು ತಾಲ್ಲೂಕಿನ ಮರದೂರು, ಕನಕಪುರದ ಹೆಗ್ಗನೂರು ಕೆರೆ ತುಂಬಿಸುವ ಯೋಜನೆಗಳು, ಶ್ರೀರಂಗ ಕುಡಿಯುವ ನೀರು ಯೋಜನೆಗೆ ಪೈಪ್ಲೈನ್ ಮೂಲಕ ನೀರು ಒದಗಿಸುವ ಯೋಜನೆ, ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ನಾಲೆಗಳ ಅಭಿವೃದ್ಧಿ, ಗುಬ್ಬಿಯ ಮಠದಹಳ್ಳಿ ಕುಡಿಯುವ ನೀರು ಯೋಜನೆ, ರಾಮನಗರದ ಬಳಿ ಅರ್ಕಾವತಿ River Front Development ಯೋಜನೆಗಳನ್ನು ಅಂದಾಜು 2,000 ಕೋಟಿ ರೂ. ಮೊತ್ತದಲ್ಲಿ ಪ್ರಸಕ್ತ ಸಾಲಿನಲ್ಲಿ…

Read More