Author: AIN Author

ದೊಡ್ಡಬಳ್ಳಾಪುರ: ತಾಲ್ಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಜಿಲ್ಲಾಧಿಕಾರಿ ಡಾ.ಶಿವಶಂಕ‌ರ್ ಎನ್ ನೇ ತೃತ್ವದಲ್ಲಿ ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಅದ್ದೂರಿ ಸ್ವಾಗತ ಕೋರಲಾಯಿತು. ಎತ್ತಿನ ಗಾಡಿ, ಸೈಕಲ್ ಜಾಥಾ ಹಾಗೂ ಮೆರವಣಿಗೆ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಸಂವಿಧಾನದ ಪ್ರಸ್ತಾವನೆ ಬೋಧಿಸಿ ಅರಿವು ಮೂಡಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಶಾಲಾ ಮಕ್ಕಳು ಹಾಗು ಮಹಿಳೆಯರಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಜಿ. ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಅನುರಾಧ, ಕಾರ್ಯನಿರ್ವಾಹಕ ಅಧಿಕಾರಿಗಳಾದ ಎನ್ ಮುನಿರಾಜು, ತಾಲ್ಲೂಕ ಯೋಜನಾಧಿಕಾರಿ ರಾಮಾಂಜನೇಯ, ಸಹಾಯಕ ನಿರ್ದೇಶಕರು ರವಿಕುಮಾ‌ರ್, ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೌಮ್ಯ,ಗ್ರಾ. ಪಂ.ಜನಪ್ರತಿನಿಧಿಗಳು, ಗ್ರಾ. ಪಂ.ಸಿಬ್ಬಂದಿ, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು..

Read More

ಕಾರವಾರ: ಎಲ್ಲಿಯವರೆಗೆ ಇಸ್ಲಾಂ ಇರುತ್ತದೆಯೋ, ಅಲ್ಲಿಯವರೆಗೆ ಜಗತ್ತಿಗೆ ನೆಮ್ಮದಿಯಿಲ್ಲ ಎಂದು ಸಂಸದ ಅನಂತಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬನವಾಸಿಯಲ್ಲಿ ನಡೆದ ಬಿಜೆಪಿ (ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಈ ಕಾಲಘಟ್ಟದಲ್ಲಿ ಹಿಂದೂ ಧರ್ಮ, ದೇಶ ಉಳಿಯಲು ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿ ಆಗಬೇಕಾಗಿದೆ. ಬಿಜೆಪಿ ಮತ್ತು ಸಂಘ ಪರಿವಾರ ಇದ್ದಲ್ಲಿ ಜಗತ್ತಿಗೆ ನೆಮ್ಮದಿ ಸಿಗಲಿದೆ. ನಾವು ಇಲ್ಲದಿದ್ದರೆ ಜಗತ್ತಿನಲ್ಲಿ ನೆಮ್ಮದಿ ಇಲ್ಲ. ಹಿಂದುತ್ವವು ನಮ್ಮ ದೇಶದ ಉಸಿರಾಗಿದೆ. ಕಾಂಗ್ರೆಸ್‍ನವರು ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿಯ ಉತ್ಸಾಹ ನೋಡಿ ಶಸ್ತ್ರ ತ್ಯಜಿಸಿದ್ದಾರೆ. ವೈಚಾರಿಕವಾಗಿ ನಾವು ಚುನಾವಣೆ ಗೆದ್ದು ತೋರಿಸಬೇಕಿದೆ ಎಂದು ಕರೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯನವರು ನಮ್ಮವರಿಗೆ ಏಕವಚನದಲ್ಲಿ ಮಾತನಾಡಿದ್ದು ನೋಡಿ ಸುಮ್ಮನಿರಲು ಸಾಧ್ಯವಿಲ್ಲ. https://ainlivenews.com/do-you-know-the-benefits-of-drinking-cumin-water-mixed-with-jaggery-on-an-empty-stomach/ ಅವರಿಗೆ ಮಗನೇ ಎನ್ನದೇ ಬೇರೆನು ಹೇಳಲು ಸಾಧ್ಯ? ಅಪ್ಪ ಅಂತಲೋ, ಅಜ್ಜ ಅಂತಲೋ, ಮಾಮಾ ಅಂತಲೋ ಕರೆಯಲು ಸಾಧ್ಯವೇ? ಯುದ್ಧ ಕಾಲದಲ್ಲಿ ಯಾವ ಭಾಷೆಯಲ್ಲಿ ಮಾತನಾಡಬೇಕೋ ಅದನ್ನೇ ಬಳಸಬೇಕು. ಅಲ್ಲಿ ಶಾಸ್ತ್ರೀಯ ಸಂಗೀತ ಬಳಸಲು ಸಾಧ್ಯವಿಲ್ಲ.…

Read More

ಮಂಗಳೂರು: ಹೃದಯಾಘಾತದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮಲಗಿದಲ್ಲೇ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಳಿ ನಡೆದಿದೆ. ಹಫೀಜಾ (17) ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿನಿ. ಈಕೆ ಉಪ್ಪಿನಂಗಡಿಯ ನೆಕ್ಕಿಲಾಡಿ ಕುರ್ವೇಲು ನಿವಾಸಿಯಾದ ಉದ್ಯಮಿ ದಾವೂದ್ ಎಂಬವರ ಪುತ್ರಿ. ಪುತ್ತೂರಿನ ಫಿಲೋಮಿನಾ ಕಾಲೇಜಿನಲ್ಲಿ ಹಫೀಜಾ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು.  https://ainlivenews.com/do-you-know-the-benefits-of-drinking-cumin-water-mixed-with-jaggery-on-an-empty-stomach/ ಹಫೀಜಾ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಕಾರಣ ತಡ ರಾತ್ರಿವರೆಗೂ ಅಭ್ಯಾಸ ಮಾಡುತ್ತಿದ್ದಳು. ಎಂದಿನಂತೆ ಗುರುವಾರ ಕೂಡ ತಡ ರಾತ್ರಿವರೆಗೂ ಓದಿಕೊಕೊಂಡು ಮಲಗಿದ್ದಾಳೆ. ಆದರೆ ಮುಂಜಾನೆ ಮಲಗಿದ್ದಲ್ಲಿಂದ ಎದ್ದೇಳಲೇ ಇಲ್ಲ, ಇದನ್ನ ಮನೆಯವರು ಗಮನಿಸಿದ್ದಾರೆ. ಬಳಿಕ ಮಲಗಿದಲ್ಲಿಯೇ ಹಫೀಜಾ ಮೃತಪಟ್ಟಿರುವುದು ತಿಳಿದುಬಂದಿದೆ.

Read More

ರಾಮನಗರ: ಐದು ಗ್ಯಾರಂಟಿ  ಯೋಜನೆಯನ್ನು ಪೂರೈಸಲು ಸರ್ಕಾರದ ಖಜಾನೆಯಲ್ಲಿ ಹಣ ಇಲ್ಲ ಎಂದು ಜಿಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ಟೀಕಿಸಿದ್ದಾರೆ. ಸಿದ್ದರಾಮಯ್ಯ ಬಜೆಟ್‌ನಲ್ಲಿ ರಾಮನಗರ ಜಿಲ್ಲೆ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡದ ವಿಚಾರದ ಬಗ್ಗೆ ಮಾತನಾಡಿ, ಐದು ಗ್ಯಾರಂಟಿ ಯೋಜನೆ ಪೂರೈಸಲು ಸರ್ಕಾರ ಖಜಾನೆಯಲ್ಲಿ ಹಣ ಇಲ್ಲ. ಇಂತಹ ಪರಿಸ್ಥಿತಿಗೆ ಕಾಂಗ್ರೆಸ್ ಪಕ್ಷ ಸಿಲುಕಿದೆ. ಹಾಗಾಗಿ ಬಜೆಟ್ ಬಗ್ಗೆ ಆಶ್ಚರ್ಯ ಪಡುವಂತದ್ದು ಏನು ಇಲ್ಲ. ರಾಮನಗರದಲ್ಲಿ ಹಿಂದಿನ ಶಾಸಕರು ನೀಡಿದ ಅನುದಾನವನ್ನೆ ಇಟ್ಟುಕೊಂಡು ಈಗಿನ ಶಾಸಕರು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಹೋರಾಟ ಮಾಡಿ ಯಾವುದೇ ಅನುದಾನ ತಂದಿಲ್ಲ. ರಾಮನಗರ ಜಿಲ್ಲೆ ಹಾಗೂ ತಾಲೂಕು ಅಭಿವೃದ್ಧಿಗೆ ಸ್ಥಳೀಯ ಶಾಸಕರು ಮತ್ತು ಕಾಂಗ್ರೆಸ್ ಪಕ್ಷ ಗಮನಹರಿಸಿಲ್ಲ ಎಂದು ಕಿಡಿಕಾರಿದ್ದಾರೆ.  ಲೋಕಸಭಾ ಚುನಾವಣೆ ಸಿದ್ಧತೆ ಬಗ್ಗೆ ಮಾತನಾಡಿ, https://ainlivenews.com/do-you-know-the-benefits-of-drinking-cumin-water-mixed-with-jaggery-on-an-empty-stomach/  ರಾಜ್ಯದ 28 ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಶೀಘ್ರದಲ್ಲೇ ಬಿಡುಗಡೆ ಆಗಲಿದೆ. ಪಟ್ಟಿ ಬಿಡುಗಡೆ ಸಂಬಂಧ ಬಿಜೆಪಿ ವರಿಷ್ಠರು ದೆಹಲಿಗೆ ಕರೆದಿದ್ದಾರೆ. ನಾನೂ ಕೂಡಾ ದೆಹಲಿಗೆ ಹೋಗುತ್ತಿದ್ದೀನಿ. ಬಿಜೆಪಿ ವರಿಷ್ಠರ…

Read More

ಬಳ್ಳಾರಿ: ಜಿಲ್ಲೆಯ ವಿಮಾನ ನಿಲ್ದಾಣ ನಿರ್ಮಾಣ ಮತ್ತು ಅಪಾರಲ್ ಪಾರ್ಕ್ (ಜೀನ್ಸ್ ಪಾರ್ಕ್) ಕುರಿತು ಬಜೆಟ್‌ನಲ್ಲಿ ವಿಶೇಷ ಅನುದಾನ ಸಿಗುವ ಸಾಕಷ್ಟು ನಿರೀಕ್ಷೆಗಳು ಹುಸಿಯಾಗಿವೆ. ಪ್ರತಿ ಬಜೆಟ್‌ನಲ್ಲಿ ಘೋಷಣೆಯಾಗುವ ಯೋಜನೆಗಳ ಅನುಷ್ಠಾನದ ಕುರಿತು ಸರ್ಕಾರ ಎಲ್ಲಿಯೂ ವಿಷಯ ಪ್ರಸ್ತಾಪ ಮಾಡಿಲ್ಲ. ಬಳ್ಳಾರಿಯಲ್ಲಿ ಆಧುನಿಕ ಒಣ ಮೆಣಸಿನಕಾಯಿ ಮಾರುಕಟ್ಟೆ ನಿರ್ಮಾಣಕ್ಕೆ ನಾಲ್ಕು ವರ್ಷಗಳ ಹಿಂದೆಯೇ ಘೋಷಣೆಯಾಗಿದ್ದ, ಯೋಜನೆ ಪೇಪರ್‌ಗಳಲ್ಲಿಯೇ ಉಳಿದಿದೆ. ಈಗ, ಸಿದ್ದರಾಮಯ್ಯ ಅವರು ಮತ್ತೆರೆಡುಕಡೆಗಳಲ್ಲಿ ಆಧುನಿಕ ಒಣ ಮೆಣಸಿನಕಾಯಿ ಮಾರುಕಟ್ಟೆ ಘೋಷಣೆ ಮಾಡಿರುವುದು ಏತಕ್ಕಾಗಿ? ಉತ್ತರ ಕರ್ನಾಟಕದಲ್ಲಿಯೇ ಅತಿ ಹೆಚ್ಚಿನ ಪ್ರಮಾಣದ ಜಿಎಸ್‌ಟಿಯನ್ನು ಪಾವತಿಸುತ್ತಿರುವ ಬಳ್ಳಾರಿ ಜಿಲ್ಲೆಯ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿವೆ. https://ainlivenews.com/do-you-know-the-benefits-of-drinking-cumin-water-mixed-with-jaggery-on-an-empty-stomach/ ರೈಲ್ವೆ, ರಸ್ತೆ, ವಿಮಾನಯಾನ ಸೇರಿ ಬಳ್ಳಾರಿ ಜಿಲ್ಲೆ ಯಾರ ಲೆಕ್ಕಕ್ಕೂ ಬಾರದ `ಅನಾಥಕೂಸಾ’ಗಿದೆ. ಕರ್ನಾಟಕ ಸರ್ಕಾರ ಅಖಂಡ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿದ ನಂತರ, ಜಿಲ್ಲೆಯ ಅಭಿವೃದ್ಧಿಯನ್ನು ಸಂಪೂರ್ಣ ಕಡೆಗಣಿಸಿದೆ. ಬಳ್ಳಾರಿ ಬೈಪಾಸ್ ರಸ್ತೆ, ಔಟರ್‌ರಿಂಗ್ ರೋಡ್ ನಿರ್ಮಾಣದ ಕುರಿತು…

Read More

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಬಜೆಟ್‌ನ್ನು ಬಿಜೆಪಿ (BJP) ಶಾಸಕ ಎಸ್.ಟಿ ಸೋಮಶೇಖರ್ (S.T Somashekar) ಹಾಡಿ ಹೊಗಳಿದ್ದಾರೆ. ಈ ಬಜೆಟ್ 7 ಕೋಟಿ ಜನರ ಬಜೆಟ್ ಆಗಿದೆ. ನಾನು ಸಿಎಂ ಮತ್ತು ಡಿಸಿಎಂ ಅವರಿಗೆ ಅಭಿನಂದನೆ ತಿಳಿಸುತ್ತೇನೆ ಎಂದಿದ್ದಾರೆ. Karnataka Budget 2024: ಬಜೆಟ್‌ʼನಲ್ಲಿ ಯಾವ ಇಲಾಖೆಗೆ ಎಷ್ಟು ಅನುದಾನ ಹಂಚಿಕೆಯಾಗಿದೆ ಗೊತ್ತಾ: ಇಲ್ಲಿದೆ ವಿವರ! ನಮ್ಮ ಕ್ಷೇತ್ರದಲ್ಲಿ ವೈಟ್ ಟಾಪಿಂಗ್ ಮಾಡಲು ಕೇಳಿದ್ದೆವು ಅದಕ್ಕೆ 1700 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದಾರೆ. ಬರೀ ಯಶವಂತಪುರ ಕ್ಷೇತ್ರದಲ್ಲಷ್ಟೇ ಅಲ್ಲ. ಬೆಂಗಳೂರಿನ 28 ಕ್ಷೇತ್ರಕ್ಕೂ ಇದರಿಂದ ಅನುಕೂಲವಾಗಲಿದೆ. ಇದೊಂದು ಒಳ್ಳೆಯ ಬಜೆಟ್ ಎಂದು ಶಾಸಕ ಎಸ್ .ಟಿ ಸೋಮಶೇಖರ್ ಹೇಳಿದ್ದಾರೆ. 110 ಹಳ್ಳಿಗಳಿಗೆ ಕಾವೇರಿ ನೀರಿನ ಸೌಲಭ್ಯ ಮಾಡುವ ಭರವಸೆ ನೀಡಿದ್ದಾರೆ. ಸಂಚಾರ ಸಮಸ್ಯೆ ನಿವಾರಣೆ ಬಗ್ಗೆ ಹೇಳಿದ್ದಾರೆ. ವೈಟ್ ಟ್ಯಾಪಿಂಗ್ ಕ್ಲಿಯರ್ ಮಾಡುವ ಬಗ್ಗೆ ಬಜೆಟ್‌ನಲ್ಲಿ ತಿಳಿಸಿದ್ದಾರೆ. ಇನ್ನೂ ಬೆಂಗಳೂರು ಬಿಟ್ಟು ಹೊರಗೆ ಏನಿದೆ ಎಂದು ನೋಡಿಲ್ಲ ಎಂದಿದ್ದಾರೆ.

Read More

ನವದೆಹಲಿ: ಪಂಜಾಬ್-ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತರನ್ನು (Farmers) ಚದುರಿಸಲು ಪೊಲೀಸರು ಮತ್ತೆ ಅಶ್ರುವಾಯು ಪ್ರಯೋಗಿಸಿದ್ದಾರೆ. ಅಶ್ರುವಾಯು ಶೆಲ್‌ಗಳಿಂದ ಪಾರಾಗಲು ರೈತರು ಚೆಲ್ಲಾಪಿಲ್ಲಿಯಾಗಿದ್ದಾರೆ. ಇದೇ ವೇಳೆ ಶಂಭು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ 63 ವರ್ಷದ ರೈತರೊಬ್ಬರು ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ್ದಾರೆ. ʻದೆಹಲಿ ಚಲೋʼ (Delhi Chalo) ರೈತರ ಪ್ರತಿಭಟನೆ ಶುಕ್ರವಾರ 4ನೇ ದಿನಕ್ಕೆ ಕಾಲಿಟ್ಟಿದ್ದು, ಬೆಳಗ್ಗೆ 6ರಿಂದ ಸಂಜೆ 4ರವರೆಗೆ ಭಾರತ್ ಬಂದ್‌ಗೆ ಹಲವು ಸಂಘಟನೆಗಳು ಕರೆ ನೀಡಿದ್ದವು. ಸ್ಥಳದಲ್ಲಿ ಸೆಕ್ಷನ್ 144 ವಿಧಿಸಿರುವುದರಿಂದ ಪೊಲೀಸ್ ಮತ್ತು ರೈತರು ಮುಖಾಮುಖಿಗೊಂಡಿದ್ದು ಗಡಿ ದಾಟಲು ಪ್ರಯತ್ನಿಸಿದ ರೈತರ ಮೇಲೆ ಅಶ್ರುವಾಯು ಪ್ರಯೋಗಿಸಲಾಯಿತು‌. ನೋಯ್ಡಾ ಮೂಲದ ಭಾರತೀಯ ಕಿಸಾನ್ ಪರಿಷತ್ (Bharatiya Kisan Union) ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಬೆಂಬಲ ನೀಡುವುದರೊಂದಿಗೆ ರೈತರು ಸ್ತಬ್ಧತೆಯನ್ನು ತೀವ್ರಗೊಳಿಸಲು ಪ್ರತಿಜ್ಞೆ ಮಾಡಿದ್ದಾರೆ. https://ainlivenews.com/do-you-know-the-benefits-of-drinking-cumin-water-mixed-with-jaggery-on-an-empty-stomach/ ರೈತರ ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದರಿಂದ ರಾಷ್ಟ್ರ ರಾಜಧಾನಿಯ ಗಾಜಿಪುರ ಗಡಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿತು. ಇದಕ್ಕೂ ಮುನ್ನ ಗುರುವಾರ, ಪ್ರತಿಭಟನಾನಿರತ ರೈತ…

Read More

ಬೆಂಗಳೂರು: ಸಮಾಜದಲ್ಲಿ ಸುಳ್ಳು ಸುದ್ದಿಗಳನ್ನು ಹರಡಿಸಿ ಸಾರ್ವಜನಿಕರಲ್ಲಿ ಅಭದ್ರತೆ ಮತ್ತು ಭಯವನ್ನು ಉಂಟು ಮಾಡುವವರ ವಿರುದ್ಧ ದಿಟ್ಟ ಕ್ರಮ ಕೈಗೊಳ್ಳಲು ITBT ಇಲಾಖೆಯ ಸಹಯೋಗದಲ್ಲಿ ʼಸತ್ಯ ತಪಾಸಣಾ ತಂಡ’ಗಳನ್ನು ರಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಕರ್ನಾಟಕ ರಾಜ್ಯ ಬಜೆಟ್‌ನಲ್ಲಿ ತಿಳಿಸಿದ್ದಾರೆ. ಸತ್ಯ ತಪಾಸಣಾ ತಂಡಗಳನ್ನು ರಚಿಸುವುದರೊಂದಿಗೆ ಒಳಾಡಳಿತ ಇಲಾಖೆಯಲ್ಲಿ ಒಂದು ವಿಶೇಷ ಕೋಶವನ್ನು ರಚಿಸಿ ಅದಕ್ಕೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲು ಅಧಿಕಾರ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ. ರಾಜ್ಯ ಒಳಾಡಳಿತ ಕುರಿತು ಬಜೆಟ್‌ನಲ್ಲಿ ಅವರು ನೀಡಿದ ಇತರ ಭರವಸೆಗಳು ಈ ಕೆಳಗಿನಂತಿವೆ: 1) ರಾಷ್ಟ್ರಕವಿ ಕುವೆಂಪು ಅವರು ಬಣ್ಣಿಸಿದಂತೆ ಕರ್ನಾಟಕವು ಸರ್ವಜನಾಂಗದ ಶಾಂತಿಯ ತೋಟವಾಗಿದೆ. ನೂರಾರು ವರ್ಷಗಳಿಂದ ನಮ್ಮ ಕನ್ನಡ ನೆಲದಲ್ಲಿ ವಿವಿಧ ಧರ್ಮ, ಭಾಷೆ, ಸಂಸ್ಕೃತಿ, ಸಮುದಾಯಗಳ ಜನರು ಸೌಹಾರ್ದತೆಯಿಂದ ಬಾಳುತ್ತಿದ್ದಾರೆ. ಆದ್ದರಿಂದ ಜಾತಿ, ಧರ್ಮ, ಭಾಷೆಯ ಹೆಸರಿನಲ್ಲಿ ಗಲಭೆಯನ್ನುಂಟು ಮಾಡುವವರ ವಿರುದ್ಧ ಸರ್ಕಾರವು ಕಠಿಣ ಕ್ರಮ ಕೈಗೊಳ್ಳಲಿದೆ. Siddaramaiah Budget: ಬಜೆಟ್‌ʼನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು ? ಇಲ್ಲಿದೆ…

Read More

ಹುಬ್ಬಳ್ಳಿ: ಕನ್ನಡ ನಾಡು ನುಡಿ ಸಂಸ್ಕೃತಿಗೆ ಹುಬ್ಬಳ್ಳಿ ಬಹುದೊಡ್ಡ ಕೊಡುಗೆ ನೀಡಿದೆ. ಆದರೆ ಇಲ್ಲಿಯೇ ಕನ್ನಡಕ್ಕೆ ಅಪಮಾನ ಆಗುತ್ತಿದೆ. ಹೀಗಿದ್ದರೂ ಯಾರೊಬ್ಬರೂ ಕೂಡ ಕಾಳಜಿ ವಹಿಸದೇ ಇರುವುದು ವಿಪರ್ಯಾಸಕರ ಸಂಗತಿಯಾಗಿದೆ. ಕನ್ನಡದ ಧ್ವಜ ಹರಿದಿದ್ದು, ಧ್ವಜಸ್ತಂಭ ಅನಾಥಪ್ರಜ್ಞೆಗೆ ಸಿಲುಕಿದೆ. ಕನ್ನಡಪರ ಸಂಘಟನೆಗಳಾಗಲಿ, ಸ್ಥಳೀಯ ಆಡಳಿತವಾಗಲಿ ಒಂದಿಷ್ಟು ಗಮನ ಹರಿಸುತ್ತಿಲ್ಲ. ಯಾವುದೋ ದೇಶದಲ್ಲಿ ಇನ್ನಾವುದೋ ರಾಜ್ಯದಲ್ಲಿ ಏನಾದರೂ ಆದರೆ ಪ್ರತಿಭಟಿಸುವ, ಕನ್ನಡ ನಾಮಫಲಕಕ್ಕಾಗಿ ಬೀದಿಗಿಳಿಯುವವರಿಗೂ ಬಣ್ಣ ಕಳೆದುಕೊಂಡು ಹರಿದು ಹಾರಾಡುತ್ತಿರುವ ಕನ್ನಡ ಬಾವುಟ ಮಾತ್ರ ಕಾಣಿಸದಿರುವುದು ನಿಜಕ್ಕೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಏನೆಲ್ಲಾ ಆಗಿದೆ ನೋಡಿ.. ಉತ್ತರ ಕರ್ನಾಟಕ ಕನ್ನಡ ಗಂಡು ಮೆಟ್ಟಿನ ನಾಡು ಕನ್ನಡ ನಾಡು ನುಡಿ ಭಾಷೆ, ಪ್ರಾದೇಶಿಕತೆಗೆ ಕನ್ನಡಿಗರಿಗೆ ಅನ್ಯಾಯ ಆದಾಗ ಮೊದಲು ಪ್ರಶ್ನೆ ಮಾಡುವವರು ಹುಬ್ಬಳ್ಳಿ ಧಾರವಾಡದವರು. ಗೋಕಾಕ ಚಳುವಳಿ, ಕರ್ನಾಟಕ ಏಕೀಕರಣ ಮೂಲಕ ಕನ್ನಡ ಭಾಷೆಗೆ ನಾಡಿಗೆ ಅಧ್ಯಮ್ಯ ಚೇತನ ತುಂಬಿದ ನಾಡಿನಲ್ಲೀಗ ಕನ್ನಡ ಧ್ವಜ ಹರಿದಿದೆ. ಹುಬ್ಬಳ್ಳಿಯ ಹೊರವಲಯದಲ್ಲಿರುವ ಗಬ್ಬೂರು ವೃತ್ತದ ಕಥೆ. ಗಬ್ಬೂರು…

Read More

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಮ್ಮ 15ನೇ ಬಜೆಟ್ (Budget) ಮಂಡಿಸಿದ್ದು, ಶಾಲಾ-ಕಾಲೇಜುಗಳ ಕೊಠಡಿ ನಿರ್ಮಾಣ, ದುರಸ್ತಿ, ಶೌಚಾಲಯ ನಿರ್ಮಾಣದಂತಹ ಕಾಮಗಾರಿಗಳಿಗೆ 850 ಕೋಟಿ ರೂ. ಅನುದಾನ ನೀಡಿರುವುದಕ್ಕೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪ (S Madhu Bangarappa) ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. Karnataka Budget 2024: ಬಜೆಟ್‌ʼನಲ್ಲಿ ಯಾವ ಇಲಾಖೆಗೆ ಎಷ್ಟು ಅನುದಾನ ಹಂಚಿಕೆಯಾಗಿದೆ ಗೊತ್ತಾ: ಇಲ್ಲಿದೆ ವಿವರ! ಅಲ್ಲದೆ, ದ್ವಿಭಾಷಾ ಮಾಧ್ಯಮ ಶಾಲೆಗಳಾಗಿ 2,000 ಸರ್ಕಾರಿ ಪ್ರಾಥಮಿಕ ಶಾಲೆಗಳ ಪರಿವರ್ತನೆ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಹೊಸ ಸರ್ಕಾರಿ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ಪ್ರಾರಂಭ, ವಾಣಿಜ್ಯ ಮತ್ತು ವಿಜ್ಞಾನ ವಿಷಯಗಳಲ್ಲಿ ಪದವಿ ಪೂರ್ವ ಕಾಲೇಜುಗಳನ್ನಾಗಿ ರಾಜ್ಯದ 74 ಆದರ್ಶ ವಿದ್ಯಾಲಯಗಳ ಉನ್ನತೀಕರಣ ಮಾಡಿರುವುದು ಶಿಕ್ಷಣ ಇಲಾಖೆಗೆ ಹೆಚ್ಚಿನ ಬಲ ನೀಡಲಿದೆ. ಈ ಬಾರಿಯ ಬಜೆಟ್ ಉತ್ತಮವಾಗಿದೆ ಎಂದು ಮಧು ಬಂಗಾರಪ್ಪ ಅಭಿನಂದನೆ…

Read More