Author: AIN Author

ಗದಗ: ಜಿಲ್ಲೆಯ ನರಗುಂದ ತಾಲೂಕಿನ ಹುಣಶೀಕಟ್ಟಿ ಗ್ರಾಮದಲ್ಲಿ ಶ್ರೀ ಶರಣ ಬಸವೇಶ್ವರರ 23ನೇ ವರ್ಷದ ಜಾತ್ರಾಮಹೋತ್ಸವ ಅದ್ದೂರಿಯಾಗಿ ಜರುಗಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ವಿವಿಧ ಕಲಾ ತಂಡಗಳಿಂದ ಕುಂಭ ಮೇಳ, ಡೊಳ್ಳು ಮೇಳ, ಕೋಲಾಟ ಮೇಳದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಮಕ್ಕಳ ಕೋಲಾಟ ಮೇಳ ನೋಡುಗರನ್ನ ಆಕರ್ಷಿಸುವಂತಿತ್ತು. ನರಗುಂದ, ನವಲಗುಂದ ಸೇರಿದಂತೆ ವಿವಿಧೆಡೆಯಿಂದ ಸಾವಿರಾರು ಭಕ್ತರು ಆಗಮಿಸಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ತಮ್ಮ ಇಷ್ಟಾರ್ಥ ಸಿಧ್ಧಿಗಾಗಿ ಹರಕೆ ಕಟ್ಟಿದ್ರು. ಇನ್ನು ಹರಕೆ ಈಡೇರಿದ ಭಕ್ತಾದಿಗಳು ಹರಕೆ ತೀರಿಸಿ ಕಾಯಿ ಒಡೆದು ಶ್ರೀ ಶರಣಬಸವೇಶ್ವರರ ಕೃಪೆಗೆ ಪಾತ್ರರಾದರು. ಈ ಸಂದರ್ಭದಲ್ಲಿ ಗ್ರಾಮದ ಪ್ರಮುಖರಾದ ಈಶ್ವರಯ್ಯ ಹಿರೇಮಠ, ಷಣ್ಮುಖಗೌಡ ಪಾಟೀಲ್, ಮಲ್ಲಿಕಾರ್ಜುನಗೌಡ ಫಕ್ಕೀರಗೌಡ್ರ, ಶಂಕರಗೌಡ ಪಾಟೀಲ್,, ಶಿವಾನಂದ ಗಾಣಿಗೇರ, ಈಶಪ್ಪ ಗಾಣಿಗೇರ, ಮಲ್ಲಿಕಾರ್ಜುನ ಗುಂಜಾಳ, ಈರಯ್ಯ ಹಿರೇಮಠ, ರೆಣವ್ವ ಲೋಕುರ, ಶೋಭಾ ಮುಳ್ಳೂರ ಸೇರಿದಂತೆ ಭಕ್ತಾದಿಗಳು  ಉಪಸ್ಥಿತರಿದ್ದರು.

Read More

ಕಲಬುರಗಿ: ಸರ್ಕಾರಿ ಶಾಲೆಗಳು ಉಳಿಯಬೇಕು ಶಾಲೆಗೆ ಮಕ್ಕಳ ದಾಖಲಾತಿ ಹೆಚ್ಚಾಗಬೇಕು..ಇಂತಹ ಒಳ್ಳೆಯ ಉದ್ದೇಶ ಇಟ್ಕೊಂಡು ಸ್ವಂತ ಹಣದಲ್ಲಿ ಶಾಲೆಗೆ ಸುಣ್ಣಬಣ್ಣ ಮಾಡಿಸಿ ಶಹಬ್ಬಾಷ್ ಎನ್ನಿಸಿಕೊಂಡ ಶಿಕ್ಷಕರೊಬ್ರು ಕಲಬುರಗಿಯಲ್ಲಿ ಫೇಮಸ್ಸಾಗಿದ್ದಾರೆ. ಚಿತ್ತಾಪುರ ತಾಲ್ಲೂಕಿನ ರಾವೂರು ಗ್ರಾಮದ ಸಚ್ಚಿದಾನಂದ ಪ್ರೌಢಶಾಲೆ ಶಿಕ್ಷಕ ಸಿದ್ದಲಿಂಗ ಬಾಳಿ ಈ ಮಹತ್ಕಾರ್ಯ ಮಾಡಿದ್ದಾರೆ ತಮ್ಮ ಮಕ್ಕಳ ಜನ್ಮದಿನದ ನಿಮಿತ್ತ ಸರ್ಕಾರಿ ಪ್ರಾಥಮಿಕ ಶಾಲೆಗೆ ಸ್ವಂತ ಖರ್ಚಿನಲ್ಲಿ ಸುಣ್ಣ ಬಣ್ಣ ಮಾಡಿಸಿದ್ದಾರೆ.ತಾವಾಯ್ತು ತಮ್ಮ ಸಂಸಾರ ಆಯ್ತು ಅನ್ನೋ ಜನರೇ ತುಂಬಿರುವ ಈ ಜಮಾನದಲ್ಲಿ ರಾವೂರಿನ ಶಿಕ್ಷಕ ಸಿದ್ಧಲಿಂಗ ಮಾಡಿದ ಕಾರ್ಯ ಮೆಚ್ಚಲೇಬೇಕು..

Read More

ಬೆಂಗಳೂರು: ಇಂದು  ಸಿಎಂ ಸಿದ್ದರಾಮಯ್ಯನವರು  ರಾಜ್ಯದ 2024-25ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ ಇದರ ಬಗ್ಗೆ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡಿದ್ದಾರೆ. Siddaramaiah Budget: ಬಜೆಟ್‌ʼನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು ? ಇಲ್ಲಿದೆ ಪಿನ್‌ ಟು ಪಿನ್‌ ಮಾಹಿತಿ! ಸುದ್ದಿಗಾರರ ಜೊತೆ ಮಾತನಾಡಿದ ಅವರು,   ‘ಸಿದ್ದರಾಮಯ್ಯನವರು ಕಳಪೆ ಬಜೆಟ್​ ಮಂಡಿಸಿದ್ದಾರೆ. ನನ್ನ ಜೀವಮಾನದಲ್ಲೇ ಇಂತಹ ಕಳಪೆ ಬಜೆಟ್​ ನೋಡಿಲ್ಲ.  ಹದಿನಾಲ್ಕು ಬಜೆಟ್​ಗಳನ್ನು ಮಂಡಿಸಿರುವ ಸಿದ್ದರಾಮಯ್ಯರಿಂದ ಇಂತಹ ಕಳಪೆ ಬಜೆಟ್ ನಿರೀಕ್ಷಿಸಿರಲಿಲ್ಲ ಎಂದು ಕಿಡಿಕಾರಿದ್ದಾರೆ.​ Karnataka Budget 2024: ಬಜೆಟ್‌ʼನಲ್ಲಿ ಯಾವ ಇಲಾಖೆಗೆ ಎಷ್ಟು ಅನುದಾನ ಹಂಚಿಕೆಯಾಗಿದೆ ಗೊತ್ತಾ: ಇಲ್ಲಿದೆ ವಿವರ! ಏಳನೇ ವೇತನ ಆಯೋಗದ ಅನುಷ್ಠಾನಕ್ಕೆ ಸ್ಪಷ್ಟ ಘೋಷಣೆಯಿಲ್ಲ. ಓಪಿಎಸ್ ಪುನರ್ ಜಾರಿ ಬಗ್ಗೆ ಚಕಾರ ಎತ್ತಿಲ್ಲ. ವರುಣ ಕ್ಷೇತ್ರಕ್ಕೆ ಎರಡು ಸಾವಿರ ಕೋಟಿ ಕೊಟ್ಟು, ಬೇರೆ ಕ್ಷೇತ್ರಗಳಿಗೆ ಅನುದಾನ ನೀಡಿಲ್ಲ. 27,353 ಸಾವಿರ ಕೋಟಿ ರಾಜಸ್ವ ಕೊರತೆ ಬಜೆಟ್ ಮಂಡಿಸಿರುವುದು, ರಾಜ್ಯ ಆರ್ಥಿಕ ದಿವಾಳಿಯಾಗುತ್ತಿರುವುದರ ಸ್ಪಷ್ಟ ಸೂಚನೆಯಾಗಿದೆ. ಕಾಂಗ್ರೆಸ್…

Read More

ಚಾಮರಾಜನಗರ: ಪತ್ನಿ ಮಾಡಿದ ಕರಿಮಣಿ ಮಾಲೀಕ ನೀನಲ್ಲ ವೈರಲ್ ಟಿಕ್ ಟಾಕ್ ಗೆ ನೊಂದ ಪತಿಯೊಬ್ಬ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ನಡೆದಿದೆ.ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ಬುಧವಾರ ರಾತ್ರಿ  ನಡೆದಿದದ್ದು ಗುರುವಾರ ಬೆಳ್ಳಿಗ್ಗೆ 11ಮಾಹಿತಿ ಲಭ್ಯವಾಗಿದೆ ಪಿ.ಜಿ.ಪಾಳ್ಯ ಗ್ರಾಮದ ಕುಮಾರ್ (33)  ಮೃತ ದುರ್ದೈವಿ. ಮೃತ ಕುಮಾರ್ ನ ಸೋದರ ಮಹಾದೇವಸ್ವಾಮಿ ಮೃತ ಕುಮಾರ್ ಪತ್ನಿ ರೂಪಾ, ರೂಪಾಳ ಸೋದರ ಮಾವ ಗೋವಿಂದ ವಿರುದ್ಧ ದೂರು ಕೊಟ್ಟು ಆಗ್ರಹಿಸಿದ್ದಾರೆ. ಸೋದರ ಮಾವ ಹಾಗೂ ಸಹೋದರಿ ಜೊತೆ ಸೇರಿ ಕರಿಮಣಿ ಮಾಲೀಕ ನೀನಲ್ಲ ಎಂಬ ಹಾಡಿಗೆ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಕ್ಕೆ ಅಪ್ ಲೋಡ್ ಮಾಡಿದ್ದಾರೆ. https://ainlivenews.com/do-you-know-the-benefits-of-drinking-cumin-water-mixed-with-jaggery-on-an-empty-stomach/  ಸ್ನೇಹಿತರು ಕುಮಾರ್ ನ ಗಮನಕ್ಕೆ ತಂದ ವೇಳೆ ದಂಪತಿ ನಡುವೆ ಮಾತಿನ ಚಕಮಕಿ ನಡೆದು ಕೊನೆಗೆ ಮನನೊಂದ ಪತಿ ಕುಮಾರ್  ಮನೆ ಮುಂಭಾಗದ ಮರಕ್ಕೆ ಸೀರೆಯಿಂದ ನೇಣು ಬಿಗಿದು…

Read More

ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ಐತಿಹಾಸಿಕ ಹಾಗೂ ರಚನಾತ್ಮಕ ಬಜೆಟ್ ಮಂಡಿಸಿದ್ದು, ರಾಜ್ಯದ ಅಭಿವೃದ್ಧಿಗೆ ಪೂರಕವಾಗಿದೆ. ಎಲ್ಲಾ ವರ್ಗದವರಿಗೆ ಸಲ್ಲುವ ಬಜೆಟ್ ಇದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ಮುಖ್ಯಮಂತ್ರಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ‌. 2024-25ನೇ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 86,423 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಇಲಾಖೆಯ ಬಹುತೇಕ ಬೇಡಿಕೆಗಳಿಗೆ ಮುಖ್ಯಮಂತ್ರಿಗಳು ಸ್ಪಂದಿಸಿದ್ದಾರೆ. ಮಕ್ಕಳ ಉದ್ದೇಶಿತ ಯೋಜನೆಗಳಿಗೆ ಬಜೆಟ್‌ನಲ್ಲಿ 54,617 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದರು. Siddaramaiah Budget: ಬಜೆಟ್‌ʼನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು ? ಇಲ್ಲಿದೆ ಪಿನ್‌ ಟು ಪಿನ್‌ ಮಾಹಿತಿ! ಪ್ರಸಕ್ತ ಸಾಲಿನಲ್ಲಿ ಇಲಾಖೆ ನಿರೀಕ್ಷಿಸಿದಷ್ಟು ಬಜೆಟ್‌ ದಕ್ಕಿದ್ದು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಗೃಹಲಕ್ಷ್ಮಿಗೆ ಈ ಸಾಲಿನಲ್ಲಿ 28,608 ಕೋಟಿ ರೂ. ಒದಗಿಸಲಾಗಿದೆ. ಇದರಿಂದ ಕುಟುಂಬ ನಿರ್ವಹಣೆಯ ಜೊತೆಗೆ ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಮಹಿಳೆಯರಿಗೆ ಈ ಯೋಜನೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು. Karnataka…

Read More

ಭೋಪಾಲ್:‌ ವ್ಯಕ್ತಿಯೊಬ್ಬ ಸೆಲ್ಫಿ ತೆಗೆದುಕೊಳ್ಳಲು ಸಿಂಹಗಳಿರುವ ಆವರಣಕ್ಕೆ ಹೋಗಿ ದುರಂತಕ್ಕೀಡಾದ ಘಟನೆ ಆಂಧ್ರಪ್ರದೇಶದ ತಿರುಪತಿಯಲ್ಲಿರುವ ಶ್ರೀ ವೆಂಕಟೇಶ್ವರ ಝೂಲಾಜಿಕಲ್ ಪಾರ್ಕ್ ನಲ್ಲಿ ಇಂದು ನಡೆದಿದೆ. ವ್ಯಕ್ತಿಯನ್ನು ಪ್ರಹ್ಲಾದ್ ಗುಜ್ಜರ್ (34) ಎಂದು ಗುರುತಿಸಲಾಗಿದೆ. ಈತ ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಬನ್ಸೂರ್ ಪುರಸಭೆಯ ನಿವಾಸಿ. ಈತ ಮೃಗಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಯಾವುದೇ ಸುರಕ್ಷತಾ ನಿಯಮಗಳನ್ನು ಪಾಲಿಸದೇ ಸೆಲ್ಫಿ ತೆಗೆದುಕೊಳ್ಳಲು ಸಿಂಹಗಳ ಆವರಣಕ್ಕೆ ನುಗ್ಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವ್ಯಕ್ತಿಯನ್ನು ತಿಂದಿಲ್ಲ: ನಿರ್ವಾಹಕರು ಮತ್ತು ವೈದ್ಯಕೀಯ ಸಿಬ್ಬಂದಿಗೆ ಮಾತ್ರ ಪ್ರವೇಶಿಸಬಹುದಾದ ಜಾಗದಿಂದ ಪ್ರವೇಶ ಕೊಟ್ಟಿದ್ದಾನೆ. ಝೂನಲ್ಲಿರುವ ಪ್ರಾಣಿ ಪಾಲಕರು ಗುಜ್ಜರ್‌ ನಿರ್ಬಂಧಿತ ಸ್ಥಳದಲ್ಲಿ ಪ್ರವೇಶಿಸುವುದನ್ನು ಗಮನಿಸಿ ಎಚ್ಚರಿಕೆ ನೀಡಿದರೂ ಆತ ಕ್ಯಾರೇ ಎಂದಿಲ್ಲ. 6 ಅಡಿ ಎತ್ತರದ ಬೇಲಿಯನ್ನು ದಾಟಿ ಸಿಂಹಗಳ ಆವರಣಕ್ಕೆ ಹಾರಿದ್ದಾನೆ. ಈ ವೇಳೆ ಸಿಂಹ (Lion Attack) ಆತನ ಮೇಲೆ ದಾಳಿ ಮಾಡಿದೆ. ದೇಹದ ಯಾವುದೇ ಭಾಗವನ್ನು ತಿನ್ನಲಿಲ್ಲ. ಆದರೆ ಗಂಭೀರ ಗಾಯಗೊಂಡ ಪರಿಣಾಮ ಆತ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ಮೃಗಾಲಯದ…

Read More

ಕೊಟ್ಟೂರು : ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ನಿಶ್ಚಿತ. ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುವುದು ಪಕ್ಷದ ಮುಖ್ಯ ಅಜೆಂಡಾ ಆಗಿದ್ದು, ಈ ನಿಟ್ಟಿನಲ್ಲಿ ಕಾರ್ಯಕರ್ತರ ಹಂತದಿಂದಲೇ ಪ್ರಚಾರ ಆರಂಭಿಸಲಾಗಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈಗಾಗಲೇ ಪಕ್ಷದ ಎಲ್ಲ ಮುಖಂಡರ ಜತೆ ಚುನಾವಣೆ ಕುರಿತು ಚರ್ಚೆ ನಡೆಸಿದ್ದಾರೆ.  ಜೆಡಿಎಸ್‌ನೊಂದಿಗೆ ಹೊಂದಾಣಿಕೆ ವಿರುದ್ಧವಾಗಲಿ ಅಥವಾ ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವಂತೆ ಯಾರೊಬ್ಬರೂ ಹೇಳಿಕೆ ನೀಡದಂತೆ ಸೂಚಿಸಿದ್ದಾರೆ ಎಂದರು. https://ainlivenews.com/do-you-know-the-benefits-of-drinking-cumin-water-mixed-with-jaggery-on-an-empty-stomach/ ಕೇಂದ್ರ ಸರ್ಕಾರ ಯೋಜನೆಗಳ ಕುರಿತಾಗಿ ಬೂತ್ ಮಟ್ಟದಲ್ಲಿ ನಮ್ಮ ಕಾರ್ಯಕರ್ತರು ಮಾಹಿತಿ ನೀಡಿ ಜಾಗೃತಿ ಮೂಡಿಸಲಿದ್ದಾರೆ. ದೇಶದಲ್ಲಿ ಬಿಜೆಪಿ ಪರ ಅಲೆ ಇದ್ದು, ಅದನ್ನು ಸಮರ್ಪಕವಾಗಿ ಬಳಸಿಕೊಳ್ಳುವತ್ತ ಮುಂದಾಗಿದ್ದೇವೆ ಎಂದರು. ಬಿ.ವೈ. ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷರಾದ ನಂತರ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ತಂದಿದೆ. ಪಕ್ಷದ ಗೆಲುವಿಗಾಗಿ ಅವರು ಅನೇಕ ಯೋಜನೆಗಳನ್ನು ಹಾಕಿಕೊಂಡಿದ್ದಾರೆ…

Read More

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ 15 ನೇ ಆಯವ್ಯಯ ಐತಿಹಾಸಿಕ ಬಜೆಟ್ ಆಗಿದ್ದು,‌‌ ದೂರದೃಷ್ಟಿಯುಳ್ಳ ಅಭಿವೃದ್ಧಿಗೆ ಪೂರಕವಾದ ಬಜೆಟ್ ಎಂದು ಕನ್ನಡ ಮತ್ತು ಸಂಸ್ಖೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದ್ದಾರೆ. ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವರು, ಬಜೆಟ್ ಆರ್ಥಿಕ ಶಿಸ್ತಿನಿಂದ ಕೂಡಿದ್ದು, ಆಶಾದಾಯಕ ಬಜೆಟ್ ಆಗಿದೆ. ಮುಖ್ಯ ಮಂತ್ರಿಗಳು ಪ್ರಸಕ್ತ ಸಾಲಿನಲ್ಲಿ ಐದು ಗ್ಯಾರಂಟಿಗಳಿಗೆ 52 ಸಾವಿರ ಕೋಟಿ ಮೀಸಲಿಟ್ಟಿದ್ದು, ಬಡವರ, ದೀನದಲಿತರ, ಅಲ್ಪಸಂಖ್ಯಾತರ ಅಭಿವೃದ್ಧಿ ಬಜೆಟ್ ಮಂಡಿಸಿದ್ದಾರೆ ಎಂದು ಶ್ಲಾಘಿಸಿದರು. Siddaramaiah Budget: ಬಜೆಟ್‌ʼನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು ? ಇಲ್ಲಿದೆ ಪಿನ್‌ ಟು ಪಿನ್‌ ಮಾಹಿತಿ! ದೇಶದ ಪ್ರತಿಷ್ಠಿತ ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಪ್ರಸಕ್ತ ಸಾಲಿನಲ್ಲಿ 500 ಪ್ರತಿಭಾವಂತ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ತರಬೇತಿ ಸಂಸ್ಥೆಗಳಿಂದ ಎರಡು ವರ್ಷ ಉಚಿತ ಜೆಇಇ/ಎನ್ಇಇಟಿ ತರಬೇತಿ ನೀಡುವ ಯೋಜ ಘೋಷಣೆ ಮಾಡಿರುವುದು ಸ್ವಾಗತರ್ಹ. ಅಲೆಮಾರಿ,…

Read More

ಬೆಂಗಳೂರು: ಕರ್ನಾಟಕ ರೈತ ಸಮೃದ್ಧಿ ಯೋಜನೆ ಜಾರಿ: ರೈತ ಕ್ಷೇತ್ರವನ್ನು ಸುಸ್ಥಿರ, ಲಾಭದಾಯಕ ವಾಗಿಸುವುದು ಸರ್ಕಾರದ ಆದ್ಯತೆಯಾಗಿದ್ದು, ವಿವಿಧ ರೈತ ಪರ ಯೋಜನೆಗಳನ್ನು ಒಗ್ಗೂಡಿಸಿ ಸಮಗ್ರ ಕೃಷಿ ಉತ್ತೇಜನಕ್ಕೆ ಕರ್ನಾಟಕ ರೈತ ಸಮೃದ್ಧಿ ಯೋಜನೆ ಜಾರಿ ಕೃಷಿ, ಪಶು ಸಂಗೋಪನೆ, ತೋಟಗಾರಿಕೆ, ಹೈನುಗಾರಿಕೆಗಳನ್ನೊಳಗೊಂಡ ಸಮಗೃ ಕೃಷಿ ಮೂಲಕ ಆದಾಯದಲ್ಲಿ ಸುಸ್ಥಿರಕ್ಕೆ ಕ್ರಮ ಮಣ್ಣಿನ ಸತ್ವ ಹೆಚ್ಚಳ ಕೃಷಿ ಪದ್ಧತಿ ಮತ್ತು ತಂತ್ರಜ್ಞಾನವನ್ನು ಕುರಿತು ರೈತರಿಗೆ ಅರಿವು, ಕೃಷಿ ಉತ್ಪನ್ನಗಳ ಸಂರಕ್ಷಣೆ ಮತ್ತು ಅರುವು ಹಾಗೂ ಸೂಕ್ತ ಮಾರುಕಟ್ಟೆ ಸಂರ‍್ಕ ಒದಗಿಸುವುದು ಇದರ ಉದ್ದೇಶ. Karnataka Budget 2024: ಬಜೆಟ್‌ʼನಲ್ಲಿ ಯಾವ ಇಲಾಖೆಗೆ ಎಷ್ಟು ಅನುದಾನ ಹಂಚಿಕೆಯಾಗಿದೆ ಗೊತ್ತಾ: ಇಲ್ಲಿದೆ ವಿವರ! ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕೃಷಿ ಅಭಿವೃದ್ಧಿ ಪ್ರಾಧಿಕಾರ ರಚನೆ:- ಕೃಷಿ ಮತ್ತು ಪೂರಕ ಚಟುವಟಿಕೆಗಳ ನೀತಿ ಮತ್ತು ಯೋಜನೆಗಳ ಸಂಯೋಜನೆ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕೆ ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ ಸಹಕಾರ ಪಶು ಸಂಗೋಪನೆ ಇಲಾಖೆಗಳ ನಡುವೆ ಸಮನ್ವಯ ಸಾಧಿಸಲು ಮುಖ್ಯಮಂತ್ರಿಗಳ…

Read More

ಬೆಂಗಳೂರು: ಮಾನ್ಯ ಮುಖ್ಯಮಂತ್ರಿಗಳು ಮತ್ತು ರಾಜ್ಯದ ಹಣಕಾಸು ಸಚಿವರಾದ ಸಿದ್ದರಾಮಯ್ಯನವರು ಇಂದು ಮಂಡಿಸಿದ ಬಜೆಟ್ ರೈತವಿರೋಧಿ, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಶೂನ್ಯ ಪ್ರಗತಿಯ ಬಜೆಟ್ ಇದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ರಾಜ್ಯವನ್ನು 20 ವರ್ಷಗಳಷ್ಟು ಹಿಂದಕ್ಕೆ ತೆಗೆದುಕೊಂಡು ಹೋಗುವ ಬಜೆಟ್ ಇದು ಎಂದು ಟೀಕಿಸಿದರು. ಯುವಕರಿಗೆ ಯಾವುದೇ ಒಂದು ಕಾರ್ಯಕ್ರಮಗಳನ್ನು, ಯೋಜನೆಗಳನ್ನು ಘೋಷಣೆ ಮಾಡಿಲ್ಲ. ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಮತ್ತು ತಮ್ಮ ವೈಫಲ್ಯಗಳನ್ನು ಮುಚ್ಚಿ ಹಾಕಿಕೊಳ್ಳಲು ಇವತ್ತು ಸನ್ಮಾನ್ಯ ಸಿದ್ದರಾಮಯ್ಯನವರು ತಮ್ಮ ಸಮಯ ವ್ಯರ್ಥ ಮಾಡಿದ್ದಾರೆ ಎಂದು ತಿಳಿಸಿದರು. ಈ ಬಜೆಟ್‍ನ ಪಾವಿತ್ರ್ಯತೆಯನ್ನು ಹಾಳು ಮಾಡಿದ್ದಾರೆ ಎಂದು ಆಕ್ಷೇಪಿಸಿದ ಅವರು, ಮೊನ್ನೆ ದೆಹಲಿ ಚಲೋ ಮಾಡಿದ್ದರು. ದೆಹಲಿಯಲ್ಲಿ ರಾಜ್ಯ ಸರಕಾರದ ಗೌರವವನ್ನು ಹರಾಜು ಹಾಕುವ ಕೆಲಸ ಆಗಿತ್ತು. ಇವತ್ತು ಕೂಡ ಮುಖ್ಯಮಂತ್ರಿಗಳು ತಮ್ಮ ಬಜೆಟ್‍ನಲ್ಲಿ ಕೇಂದ್ರ ಸರಕಾರವನ್ನು ದೂರುವ ಕೆಲಸ ಮಾಡಿದ್ದಾರೆ ಎಂದು ಆಕ್ರೋಶ…

Read More