Author: AIN Author

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ 15 ನೇ ಬಜೆಟ್‌ ಮಂಡನೆ ಮಾಡಿದ್ದು,  ನಗರದಲ್ಲಿರುವ 40 ಹಾಸಿಗೆ ಸಾಮರ್ಥ್ಯದ ನೆಫ್ರೋ ಯುರಾಲಜಿ  ಆಸ್ಪತ್ರೆಯನ್ನು 100 ಹಾಸಿಗೆಗೆ ಉನ್ನತೀಕರಿಸಲಾಗಿದೆ. ಕೆ.ಆರ್ ಆಸ್ಪತ್ರೆ ಆವರಣದಲ್ಲಿ 75 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಹೊರ ರೋಗಿ ವಿಭಾಗದ ಕಟ್ಟಡ ನಿರ್ಮಾಣ ಮಾಡಲಾಗುತ್ತದೆ ಎಂದು ಘೋಷಿಸಿ ಸಿಎಂ ತವರು ಜಿಲ್ಲೆಯಾದ ಮೈಸೂರಿಗೆ ಬಜೆಟ್ʼ​ನಲ್ಲಿ ಭರ್ಜರಿ ಗಿಫ್ಟ್ ನೀಡಿದ್ದಾರೆ. ಇನ್ನೂ ಜೊತೆಗೆ 56 ಕೋಟಿ ರೂಪಾಯಿ ವೆಚ್ಚದಲ್ಲಿ ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಕಟ್ಟಡ, 116 ಕೋಟಿ ರೂ ವೆಚ್ಚದಲ್ಲಿ ಮಹಾರಾಣಿ ಕಲಾ ಮತ್ತು ವಾಣಿಜ್ಯ ಕಾಲೇಜು ಹಾಸ್ಟೆಲ್ ನಿರ್ಮಾಣಕ್ಕೆ ಅನುದಾನ ಮೀಸಲಿಟ್ಟಿದ್ದಾರೆ. https://ainlivenews.com/differences-between-black-coffee-and-black-tea-which-is-healthier/ ಸರ್ಕಾರಿ ಪ್ರೌಢ ಶಾಲೆಗಳ ಅಭಿವೃದ್ಧಿಗೆ 50 ಕೋಟಿ ರೂ. ಮೀಸಲಿಡಲಾಗುವುದು. ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್​ ಹಾಗೂ ಇಂಟರ್​ನೆಟ್​ ಸೌಲಭ್ಯಕ್ಕೆ 50 ಕೋಟಿ ಪ್ಯಾಕೇಜ್ ನೀಡಲಾಗುವುದು. 2 ಸಾವಿರ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ ಶಾಲೆಗಳಾಗಿ ಪರಿವರ್ತನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ…

Read More

ಬೆಂಗಳೂರು: ಸರ್ಕಾರಿ ಪ್ರೌಢ ಶಾಲೆಗಳ ಅಭಿವೃದ್ಧಿಗೆ 50 ಕೋಟಿ ರೂ. ಮೀಸಲಿಡಲಾಗುವುದು. ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್​ ಹಾಗೂ ಇಂಟರ್​ನೆಟ್​ ಸೌಲಭ್ಯಕ್ಕೆ 50 ಕೋಟಿ ಪ್ಯಾಕೇಜ್ ನೀಡಲಾಗುವುದು. 2 ಸಾವಿರ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ ಶಾಲೆಗಳಾಗಿ ಪರಿವರ್ತನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಘೋಷಣೆ ಮಾಡಿದರು Siddu Budjet: ಮದ್ಯ ಪ್ರಿಯರಿಗೆ ಶಾಕ್​ ಕೊಟ್ಟ ರಾಜ್ಯ ಸರ್ಕಾರ! ರಾಜ್ಯದ 20 ಸಾವಿರ ಸೈನ್ಸ್​ ವಿದ್ಯಾರ್ಥಿಗಳಿಗೆ ನೀಟ್, ಜೆಇಇ, ಸಿಇಟಿ ತರಬೇತಿಗೆ 10 ಕೋಟಿ ರೂ. ಮೀಸಲು ಇಡಲಾಗುವುದು ಎಂದು ಸಿಎಂ ಘೋಷಣೆ ಮಾಡಿದ್ದಾರೆ. ವಕ್ಫ್​​ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ 100 ಕೋಟಿ ರೂ. ಒದಗಿಸಲಾಗುವುದು. ಜೈನ್​ ಅಭಿವೃದ್ಧಿಗಾಗಿ 50 ಕೋಟಿ ರೂಪಾಯಿ ಅನುದಾನ ನೀಡಲಾಗುವುದು. ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ 200 ಕೋಟಿ ರೂ. ನೀಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.

Read More

ಬೆಂಗಳೂರು: 2024ರ ಮೇನಲ್ಲಿ ಕಾವೇರಿ ಹಂತ-5 ಕಾರ್ಯಾರಂಭಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. 5550 ಕೋಟಿ ರೂ. ವೆಚ್ಚದಲ್ಲಿ ಬಿಡಬ್ಲ್ಯುಎಸ್‌ಎಸ್‌ಬಿಯಿಂದ ಯೋಜನೆ. ಪ್ರತಿ ದಿನ 12 ಲಕ್ಷ ಜನರಿಗೆ 110 ಲಕ್ಷ ಲೀಟರ್ ಕುಡಿಯುವ ನೀರು ಪೂರೈಕೆ ಮಾಡಲು ಉದ್ದೇಶಿಸಲಾಗಿದೆ. ಕಾವೇರಿ ಹಂತ-5ರಡಿ ಡಿಸೆಂಬರ್ 24ರಲ್ಲಿ ಒಳಚರಂಡಿ ಕಾಮಗಾರಿ ಪೂರ್ಣ. ಇದರಿಂದ 228 ಕಿ.ಮೀ ವ್ಯಾಪ್ತಿಯಲ್ಲಿ ಒಳಚರಂಡಿ ಕೊಳವೆ ಅಳವಡಿಕೆ ಮಾಡಲಾಗುವುದು ಎಂದು ಸಿಎಂ ಘೋಷಿಸಿದರು. Karnataka Budget 2024: ಅಂಜನಾದ್ರಿ ಬೆಟ್ಟ, ಸುತ್ತಮುತ್ತಲ ಪ್ರದೇಶ ಅಭಿವೃದ್ಧಿಗೆ 100 ಕೋಟಿ ಮಂಗಳೂರಿನಲ್ಲಿ ಅತ್ಯಾಧುನಿಕ ಕೃಷಿ ಸಂಕೀರ್ಣ ನಿರ್ಮಾಣ ಮಾಡಲಾಗುವುದು. 35 ಕೋಟಿ ರೂಪಾಯಿ ವೆಚ್ಚದಲ್ಲಿ ಅತ್ಯಾಧುನಿಕ ಕೃಷಿ ಸಂಕೀರ್ಣ ನಿರ್ಮಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಣೆ ಮಾಡಿದರು. 76 ಗೋದಾಮುಗಳ ನಿರ್ಮಾಣಕ್ಕೆ 376 ಕೋಟಿಗಳ ವಿಶೇಷ ಪ್ಯಾಕೇಜ್​ ಘೋಷಣೆ ಮಾಡಲಾಗಿದೆ. ಜತೆಗೆ APMCಗಳಲ್ಲಿ ವಿದ್ಯುತ್​ಚಾಲಿತ ವಾಹನಗಳಿಗೆ ಚಾರ್ಜಿಂಗ್ ಕೇಂದ್ರ ಸ್ಥಾಪನೆ ಮಾಡುವ ಬಗ್ಗೆಯೂ ಘೋಷಣೆ ಮಾಡಲಾಗಿದೆ. ಪೆಟ್ರೋಲ್​ ಬಂಕ್​ಗಳ  ಮಾದರಿಯಲ್ಲಿ ಇವುಗಳನ್ನು ಸ್ಥಾಪನೆ ಮಾಡಲಾಗುವುದು ಎಂದು…

Read More

ಮೀನುಗಾರಿಕೆ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ 3 ಸಾವಿರ ಕೋಟಿ ಯೋಜನೆ ಘೋಷಿಸಿದ್ದಾರೆ. ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳುವ ಮೀನುಗಾರರನ್ನು ತುರ್ತು ಸಂದರ್ಭಗಳಲ್ಲಿ ರಕ್ಷಣೆಗೆ ಮಾಡುವುದಕ್ಕಾಗಿ ಅತ್ಯಾಧುನಿಕ ಸಮುದ್ರ ಆಂಬುಲೆನ್ಸ್ ಖರೀದಿಸಲಾಗುವುದು ಎಂದು ಅವರು ಘೋಷಣೆ ಮಾಡಿದ್ದಾರೆ. Karnataka Budget 2024: ಅಂಜನಾದ್ರಿ ಬೆಟ್ಟ, ಸುತ್ತಮುತ್ತಲ ಪ್ರದೇಶ ಅಭಿವೃದ್ಧಿಗೆ 100 ಕೋಟಿ ಹೊನ್ನಾವರ ಅಥವಾ ಕಾಸರಗೋಡದಲ್ಲಿ ಮೀನುಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪನೆ ಮಾಡಲಾಗುವುದು. ಭದ್ರಾವತಿಯಲ್ಲಿ ಹೈಟೆಕ್​ ಮೀನು ಮಾರುಕಟ್ಟೆ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಘೋಷಣೆ ಮಾಡಿದರು.

Read More

ಬೆಂಗಳೂರು ಉಪ ರೈಲು ಯೋಜನೆ ಚುರುಕುಗೊಳಿಸಲು ಬಜೆಟ್​​ನಲ್ಲಿ ಘೋಷಣೆ ಮಾಡಲಾಗಿದೆ. ಬೈಯ್ಯಪ್ಪನಹಳ್ಳಿಯಿಂದ ಚಿಕ್ಕಬಾಣಾವರದವರೆಗಿನ ಕಾರಿಡಾರ್-2 ವೇಗವಾಗಿ ಅನುಷ್ಠಾನ ಮಾಡಲಾಗುವುದು ಎಂದು ಸಿಎಂ ಘೋಷಣೆ ಮಾಡಿದರು. ಬಿಎಂಟಿಸಿಗೆ ಹೊಸದಾಗಿ 1334 ಹೊಸ ಇವಿ ಬಸ್‌ ಖರೀದಿಗೆ ನಿರ್ಧಾರ, ಜೊತೆಗೆ ಬಿಎಂಟಿಸಿಗೆ 820 ಬಿಎಸ್‌6 ಡೀಸೆಲ್‌ ಬಸ್‌ ಸೇರ್ಪಡೆ, ಮಹಿಳೆಯರ ಸುರಕ್ಷತೆಗಾಗಿ ಬಿಎಂಟಿಸಿ ಬಸ್‌ಗಳಲ್ಲಿ ಆ್ಯಪ್ ಅನುಷ್ಠಾನ, ವೆಹಿಕಲ್ ಟ್ರ್ಯಾಕಿಂಗ್‌ ಹೊಂದಿರುವ ಆ್ಯಪ್ ಅನುಷ್ಠಾನ ಮಾಡುವ ಬಗ್ಗೆ ಘೋಷಣೆ ಮಾಡಲಾಗಿದೆ. Siddu Budjet: ಮದ್ಯ ಪ್ರಿಯರಿಗೆ ಶಾಕ್​ ಕೊಟ್ಟ ರಾಜ್ಯ ಸರ್ಕಾರ! ಬೆಂಗಳೂರು ಬಿಸಿನೆಸ್ ಕಾರಿಡರ್ ರೂಪಿಸಲು ಬಜೆಟ್‌ನಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. 73 ಕಿ.ಮೀ ಉದ್ದದ ರಸ್ತೆಯನ್ನು 27 ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ ಪಿಪಿಪಿ ಮಾದರಿಯಲ್ಲಿ ಆರ್‌ಎಫ್‌ಪಿ ಕರೆಯಲಾಗುವುದು. ಬೆಂಗಳೂರಿನಲ್ಲಿ 250 ಮೀಟರ್ ಎತ್ತರದ ಸ್ಕೈಡೆಕ್ ನಿರ್ಮಾಣ ಮಾಡಲಾಗುವುದು. ಬೆಂಗಳೂರಿನಲ್ಲಿ ಆಕರ್ಷಕ ಪ್ರವಾಸಿ ತಾಣ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುವುದು. ನಗರಾಭಿವೃದ್ಧಿ ಅಂಗಸಂಸ್ಥೆ ಬಿಬಿಎಂಪಿ, ಬಿಎಂಆರ್‌ಸಿಎಲ್‌, ಬಿಡಬ್ಲ್ಯುಎಸ್‌ಎಸ್‌ಬಿ, ಬಿಡಿಎನಲ್ಲಿ ಸೋಲಾರ್‌ ಪಾರ್ಕ್‌…

Read More

ಕಂಪ್ಲಿ: ಕಂಪ್ಲಿ ತಾಲೂಕಿನ ಹಂಪಿ ದೇವನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾವು ಶುಕ್ರವಾರ ಗ್ರಾಮೀಣ ಭಾಗದ ಹಂಪೆ ದೇವನಹಳ್ಳಿ  ಗ್ರಾಮಕ್ಕೆ ಆಗಮಿಸಿದಾಗ ಅದ್ದೂರಿಯಾಗಿ ಸ್ವಾಗತಿಸಲಾಯಿತು. ವಿದ್ಯಾರ್ಥಿಗಳು,ವಿವಿಧ ಇಲಾಖೆಗಳ ಅಧಿಕಾರಿಗಳು, ದಲಿತ ಸಂಘಟನೆಯ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ನೂರಾರು ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಜಾಥಾವನ್ನು ಬರಮಾಡಿಕೊಂಡರು. ವರ್ಷಗಳಾದ ಹಿನ್ನೆಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ರಾಜ್ಯಾದ್ಯಂತ ಅದ್ದೂರಿಯಾಗಿ ಸಂಚರಿಸುತ್ತಿದೆ. ಹಂಪೆ ದೇವನಹಳ್ಳಿ  ಗ್ರಾಮದಲ್ಲಿ ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಸ್ಪಾರ್ಚನೆ ಮಾಡುವ ಮೂಲಕ ಸಂಭ್ರಮದ ಕಾರ್ಯಕ್ರಮವನ್ನು ನಡೆಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ  ಕವಿತಾ ರವರು ಮಾತನಾಡಿ ಸಂವಿಧಾನದ ಮಹತ್ವ ಮತ್ತು ಅದರ ಆಶಯಗಳನ್ನು ದೇಶದ ಪ್ರತಿಯೊಬ್ಬ ಪ್ರಜೆಗೂ ಅರಿವು ಮೂಡಿಸುವ ನಿಟ್ಟಿನಲ್ಲಿ ಸಂವಿಧಾನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ. ನಾಗರಿಕರು ಸಂವಿಧಾನದ ಮಹತ್ವವನ್ನು ಅರಿತು,ಅದರ ಆಶಯದಂತೆ ನಡೆದುಕೊಂಡರೆ ದೇಶವು ಅಭಿವೃದ್ಧಿಯ ಪಥದಲ್ಲಿ ಸಾಗುತ್ತದೆ. ಜತೆಗೆ ಸಮಾಜದಲ್ಲಿ ಶಾಂತಿ,ನೆಮ್ಮದಿ ನೆಲೆಸುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು. ಉಪಾಧ್ಯಕ್ಷರು ಹಾಗೂ ಗ್ರಾಮ ಪಂಚಾಯಿತಿ…

Read More

ಮಂಡ್ಯ:  ಮಂಡ್ಯ ಜಿಲ್ಲೆಯ ಪಾಂಡವಪುರದ ಹಿರೋಡೆ ಕೆರೆ ದಡದ ಬಳಿ ತಬ್ಬಿಕೊಂಡ ಸ್ಥಿತಿಯಲ್ಲೇ ಜೋಡಿಯೊಂದರ ಮೃತದೇಹ‌ ಪತ್ತೆಯಾದ ಘಟನೆ ನಡೆದಿದೆ.ಮೃತರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಮೃತರ ವಯಸ್ಸು 40 ರಿಂದ 45 ವರ್ಷ ಎಂದು ಅಂದಾಜಿಸಲಾಗಿದೆ. ಇಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.  ಅನುಮಾನಸ್ಪದ ಸ್ಥಿತಿಯಲ್ಲಿ ಮಹಿಳೆ ಹಾಗೂ ಪುರುಷನ ಶವ ಪತ್ತೆಯಾಗಿದೆ. ಕೆರೆಯ ದಡದ ಕೆಸರಿನಲ್ಲಿ ಶವ ಪತ್ತೆಯಾದ ಹಿನ್ನೆಲೆಯಲ್ಲಿ ಹಲವು ಅನುಮಾನಗಳು ಮೂಡಿಸಿವೆ. ಮೂರು ದಿನಗಳ ಹಿಂದೆಯೆ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.  ಸ್ಥಳೀಯರು ಬೆಳಿಗ್ಗೆ ಕೆರೆ ಬಳಿ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಪಾಂಡವಪುರ ಪಟ್ಟಣ ಠಾಣಾ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಪಾಂಡವಪುರ ಟೌನ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಗೃಹಲಕ್ಷ್ಮೀ ಯೋಜನೆಗೆ 28 ಸಾವಿರದ 608 ಕೋಟಿ ರೂಪಾಯಿ ಮೀಸಲು ಇಡಲಾಗುವುದು. 1.33 ಕೋಟಿ ಮಹಿಳೆಯರಿಗೆ ಯೋಜನೆಯಿಂದ ಲಾಭವಾಗಲಿದೆ. ಜನವರಿ 31ರವರೆಗೆ 1.27 ಕೋಟಿ ಮಹಿಳೆಯರ ನೋಂದಣಿಯಾಗಿದೆ, 11726 ಕೋಟಿ ನೇರವಾಗಿ ಮಹಿಳೆಯರ ಖಾತೆಗೆ ಹಣ ವರ್ಗಾವಣೆ ಮಾಡಲಾಗಿದೆ. 2024-25ರಲ್ಲಿ 28,608 ಕೋಟಿ ಹಣ ರೂಪಾಯಿ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಎಂ ಘೋಷಣೆ ಮಾಡಿದರು. Siddu Budjet: ಮದ್ಯ ಪ್ರಿಯರಿಗೆ ಶಾಕ್​ ಕೊಟ್ಟ ರಾಜ್ಯ ಸರ್ಕಾರ! 76 ಗೋದಾಮುಗಳ ನಿರ್ಮಾಣಕ್ಕೆ 376 ಕೋಟಿಗಳ ವಿಶೇಷ ಪ್ಯಾಕೇಜ್​ ಘೋಷಣೆ ಮಾಡಲಾಗಿದೆ. ಜತೆಗೆ APMCಗಳಲ್ಲಿ ವಿದ್ಯುತ್​ಚಾಲಿತ ವಾಹನಗಳಿಗೆ ಚಾರ್ಜಿಂಗ್ ಕೇಂದ್ರ ಸ್ಥಾಪನೆ ಮಾಡುವ ಬಗ್ಗೆಯೂ ಘೋಷಣೆ ಮಾಡಲಾಗಿದೆ. ಪೆಟ್ರೋಲ್​ ಬಂಕ್​ಗಳ  ಮಾದರಿಯಲ್ಲಿ ಇವುಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ. ಮಂಗಳೂರಿನಲ್ಲಿ ಅತ್ಯಾಧುನಿಕ ಕೃಷಿ ಸಂಕೀರ್ಣ ನಿರ್ಮಾಣ ಮಾಡಲಾಗುವುದು. 35 ಕೋಟಿ ರೂಪಾಯಿ ವೆಚ್ಚದಲ್ಲಿ ಅತ್ಯಾಧುನಿಕ ಕೃಷಿ ಸಂಕೀರ್ಣ ನಿರ್ಮಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಣೆ ಮಾಡಿದರು.

Read More

ಬೆಂಗಳೂರು: ರಾಜ್ಯದಲ್ಲಿ ಪರಿಷ್ಕೃತ ಪ್ರವಾಸೋದ್ಯಮ ನೀತಿ 2024-29 ಅನ್ನು ಜಾರಿಗೆ ತರಲು ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು ತಮ್ಮ ಬಜೆಟ್ (Karnataka Budget 2024) ಮಂಡನೆಯ ವೇಳೆ ಹೇಳಿದ್ದಾರೆ. Siddu Budget: ಪ್ರಸಕ್ತ ವರ್ಷದಲ್ಲಿ GST ತೆರಿಗೆ ಶೇ.18ರಷ್ಟು ಹೆಚ್ಚಳ: ಕರ್ನಾಟಕಕ್ಕೆ 2ನೇ ಸ್ಥಾನ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಸಿ ಸೌಲಭ್ಯ ಅಭಿವೃದ್ಧಿಪಡಿಸಲು 100 ಕೋಟಿ ರೂ. ಅನುದಾನ ನೀಡಲಾಗುವುದು. ರಾಜ್ಯದ 10 ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕೇಬಲ್ ಕಾರ್/ರೂಪ್ ವೇ ಸೌಲಭ್ಯ ಒದಗಿಸಲಾಗುವುದು ಎಂದಿದ್ದಾರೆ ಲಬುರಗಿಯಲ್ಲಿ ವಚನ ಮಂಟಪ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು. ಗೋಕಾಕ್ ಜಲಪಾತ ಪ್ರೇಕ್ಷಣಿಯ ಸ್ಥಳವಾಗಿ ಅಭಿವೃದ್ಧಿಪಡಿಸಲಾಗುವುದು. ರಾಜ್ಯದ 530 ಸಂರಕ್ಷಿತ ಸ್ಮಾರಕಗಳನ್ನ 3ಡಿ ಲೇಸರ್ ಸ್ಕ್ಯಾನಿಂಗ್ ಮೂಲಕ ಡಿಜಿಟಲ್ ದಾಖಲೀಕರಣ, ಕೆಎಸ್‍ಟಿಡಿಸಿ ವತಿಯಿಂದ ಬಾಗಲಕೋಟೆ ಜಿಲ್ಲೆ ಐಹೊಳೆಯಲ್ಲಿ ಸುಸಜ್ಜಿತ ಹೋಟೆಲ್ ನಿರ್ಮಾಣ ಮಾಡುವ ಗುರಿ ಇದೆ ಎಂದು ತಿಳಿಸಿದರು.

Read More

ವಿಜಯಪುರ: ರೇಲ್ವೇ ಬ್ರಿಡ್ಜ್ ಬಳಿ ಹಾಕಲಾಗಿದ್ದ ಹೈಟ್ ರಿಸ್ಟ್ರಿಕ್ಟರ್ ತುಂಡಾಗಿ ಬಿದ್ದು ವಾಹನ ಸವಾರರಿಗೆ ತೊಂದರೆಯಾಗಿರುವ ಘಟನೆ ವಿಜಯಪುರ ಜಿಲ್ಲೆ  ಕೊಲ್ಹಾರ ತಾಲೂಕಿನ ತೆಲಗಿ ಗ್ರಾಮ ಬಳಿಯ ರೇಲ್ವೇ ಸೇತುವೆ ಬಳಿ ನಡೆದಿದೆ. ರೇಲ್ವೇ ಸೇತುವೆಗೆ ಎತ್ತರ ವಾಹನಗಳು ತಾಗಬಾರದೆಂದು ಹೈಟ್ ರಿಸ್ಟ್ರಿಕ್ಟರ್ ಅಳವಡಿಸಲಾಗಿತ್ತು. ರಾತ್ರಿ ಕಬ್ಬು ಸಾಗಾಟ ಮಾಡುವ ವಾಹನಕ್ಕೆ ತಾಗಿ ಹೈಟ್ ರಿಸ್ಟ್ರಿಕ್ಟರ್ ಮುರಿದು ಬಿದ್ದಿದೆ. ಹೈಟ್ ರಿಸ್ಟ್ರಿಕ್ಟರ್ ಬಿದ್ದಿರೋ ಕಾರಣದಿಂದ ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದ್ದು, ರಸ್ತೆ ಪಕ್ಕದ ಜಾಗದಲ್ಲಿ ವಾಹನ ಸವಾರರು ಹಾಯ್ದು ಹೋಗುತ್ತಿದ್ದಾರೆ. ಬಳಿಕ ತುಂಡಾಗಿ ಬಿದ್ದ ಹೈಟ್ ರಿಸ್ಟ್ರಿಕ್ಟರ್ ಅನ್ನು ರೇಲ್ವೇ ಆಧಿಕಾರಿಗಳು ಜೆಸಿಬಿ ಸಹಾಯದಿಂದ  ತೆರವು ಮಾಡಿ ವಾಹನ ಸಂಚಾರ ಸುಗಮ ಮಾಡಿ ಕೊಟ್ಟರು.

Read More