Author: AIN Author

ಬೆಂಗಳೂರು: ಎಲ್ಲವೂ ಅಂದುಕೊಂಡಂತೆಯೇ ಆದರೆ ದಕ್ಷಿಣ ಕನ್ನಡದಲ್ಲಿ (Dakshina Kannadad) ರಾಜ್ಯದ ಮೊದಲ ವಾಟರ್‌ ಮೆಟ್ರೋ (Water Metro) ಬರಲಿದೆ. ಈ ಮೂಲಕ ಮಂಗಳೂರಿಗೂ (Mangaluru) ವಾಟರ್‌ ಮೆಟ್ರೋ ಪ್ರಯಾಣ ಸಾಧ್ಯವಾಗುವ ಲಕ್ಷಣಗಳು ಶುರುವಾಗಿದೆ. ವಿಧಾನಸಭೆಯಲ್ಲಿ ಇಂದು ದಾಖಲೆಯ 15ನೇ ಬಾರಿಗೆ ಬಜೆಟ್‌ (Budget) ಮಂಡಿಸಿದ ಸಿಎಂ ಸಿದ್ದರಾಮಯ್ಯ ( CM Siddaramaiah) ಅವರು ಜಲ ಮೆಟ್ರೋ ಸೇವೆಯನ್ನು ಘೋಷಿಸಿದರು. Siddu Budjet: ಮದ್ಯ ಪ್ರಿಯರಿಗೆ ಶಾಕ್​ ಕೊಟ್ಟ ರಾಜ್ಯ ಸರ್ಕಾರ! ಮಂಗಳೂರಿನ ಗುರುಪುರ ಹಾಗೂ ನೇತ್ರಾವತಿ ನದಿಗಳಲ್ಲಿ ಜಲ ಮೆಟ್ರೋ ಸೇವೆಗಳನ್ನು ಪರಿಚಯಿಸಲು ಕಾರ್ಯಸಾಧ್ಯತಾ ವರದಿ ತಯಾರಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದೇಶದ ಮೊದಲ ಜಲ ಮೆಟ್ರೋ ಸೇವೆ ಕೇರಳದಲ್ಲಿ ಕಳೆದ ವರ್ಷ ಶುರುವಾಗಿತ್ತು. ಪ್ರಧಾನಿ ಮೋದಿ ವಾಟರ್‌ ಮೆಟ್ರೋ ಯೋಜನೆಯನ್ನು ಏಪ್ರಿಲ್‌ 25ರಂದು ಉದ್ಘಾಟಿಸಿದ್ದರು. ಕೊಚ್ಚಿಯ ಪೋರ್ಟ್ ಸಿಟಿಯ ಸುತ್ತಲಿನ 10 ದ್ವೀಪಗಳಲ್ಲಿ ಈ ಮೆಟ್ರೋ ಸಂಚಾರ ಮಾಡುತ್ತಿದ್ದು, 8 ಎಲೆಕ್ಟ್ರಿಕ್ ಬೋಟ್‌ಗಳು, 38 ಟರ್ಮಿನಲ್‌ಗಳ ಮೂಲಕ ವಾಟರ್‌…

Read More

ಬಳ್ಳಾರಿ: ಹಾಸ್ಟೆಲ್ ನಲ್ಲಿ ಅಡುಗೆ ಸರಿಯಾಗಿಲ್ಲ ಅಂತಾ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ನಗರದ ನಂ 2 ಎಸ್ಸಿ ಹಾಸ್ಟೆಲ್‌ʼನಲ್ಲಿ ನಡೆದಿದೆ. ಬಿಎ ವಿದ್ಯಾರ್ಥಿ ರವಿ ಮೇಲೆ ಹಲ್ಲೆ ಮಾಡಿರುವ ವಿಡಿಯೋ ವೈರಲ್ ಆಗಿದ್ದು, ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲೆ ಮಾಡಿದ ವಾರ್ಡನ್​​ ದಾವೂದ್​ನನ್ನು ವಜಾಗೊಳಿಸುವಂತೆ ಆಗ್ರಹಿಸುತ್ತಿದ್ದಾರೆ.  ಹಾಸ್ಟೆಲ್ ಮ್ಯಾನೇಜ್ಮೆಂಟ್ ಸಿಬ್ಬಂದಿ ಬಾಲರಾಮ್ ಮತ್ತು ವಾರ್ಡನ್ ದಾವೂದ್ ಎಂಬವರು ವಿದ್ಯಾರ್ಥಿ ರವಿಯನ್ನು ಎಳೆದಾಡಿ ಶರ್ಟ್ ಹರಿದುಹಾಕಿ ಹಲ್ಲೆ ಮಾಡಿ ರೌಡಿಗಳಂತೆ ವರ್ತಿಸಿದ್ದಾರೆ. ಹಲ್ಲೆ ಮಾಡಿದ್ದ ಬಗ್ಗೆ ಮಾಹಿತಿ ನೀಡಿದಕ್ಕೆ ವಿದ್ಯಾರ್ಥಿ ಮೇಲೆ ಮತ್ತೆ ದೌರ್ಜನ್ಯ ಎಸಗಿರುವ ಆರೋಪವೂ ಕೇಳಿಬಂದಿದೆ.

Read More

ಬೆಂಗಳೂರು: ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್​ಗಳಲ್ಲ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ. ಗ್ಯಾರಂಟಿ ಜಾರಿಗಾಗಿ ಇಡೀ ಜಗತ್ತು ನಮ್ಮತ್ತ ತಿರುಗಿ ನೋಡುತ್ತಿವೆ. ಹಲವು ದೇಶಗಳು, ಅಂತಾರಾಷ್ಟ್ರೀಯ ಸಂಸ್ಥೆಗಳು ನಮ್ಮ ಯೋಜನೆಗಳ ಬಗ್ಗೆ ಅಧ್ಯಯನ ನಡೆಸಿವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. Siddu Budget: ಪ್ರಸಕ್ತ ವರ್ಷದಲ್ಲಿ GST ತೆರಿಗೆ ಶೇ.18ರಷ್ಟು ಹೆಚ್ಚಳ: ಕರ್ನಾಟಕಕ್ಕೆ 2ನೇ ಸ್ಥಾನ ಗ್ಯಾರಂಟಿ ಯೋಜನೆಗಳ (Guarantee Scheme) ಜಾರಿಗಾಗಿ ಇಡೀ ಜಗತ್ತು ನಮ್ಮತ್ತ ಮೆಚ್ಚುಗೆಯ ನೋಟ ಬೀರಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ತಮ್ಮ ಬಜೆಟ್‌ ಭಾಷಣದಲ್ಲಿ ಹೇಳಿದ್ದಾರೆ. ತಮ್ಮ ಬಜೆಟ್‌ ಭಾಷಣದಲ್ಲಿ (Budget Speech) ಸಿಎಂ, ಅನ್ನಭಾಗ್ಯ ಯೋಜನೆಗಳ ಮೂಲಕ ಕೋಟ್ಯಂತರ ಜನರ ಕೈಗೆ ಹಂಚಿಕೆ ಮಾಡಲಾಗುತ್ತಿದೆ. ಈ ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 50,000 ದಿಂದ 55,000 ರೂ. ಗಳನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದರು. Siddu Budjet: ಮದ್ಯ ಪ್ರಿಯರಿಗೆ ಶಾಕ್​…

Read More

ವಿಜಯಪುರ: ತೋಟಗಾರಿಕೆ ಬೆಳೆಗಳಿಗೆ ವಿಜಯಪುರ ಜಿಲ್ಲೆಯು ಹೆಸರುವಾಸಿಯಾಗಿದೆ. ಈ ಭಾಗದಲ್ಲಿ ತೋಟಗಾರಿಕೆ ಬೆಳೆಗಳಿಗೆ ಇನ್ನಷ್ಟು ಉತ್ತೇಜನ ನೀಡಲು ವಿಜಯಪುರ ಜಿಲ್ಲೆಯ ಆಲಮೇಲದಲ್ಲಿ ತೋಟಗಾರಿಕೆ ಕಾಲೇಜನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಘೋಷಣೆ ಮಾಡಿದರು. ಏಷ್ಯಾದಲ್ಲಿಯೇ ಅತಿ ಹೆಚ್ಚು ರೇಷ್ಮೆಗೂಡು ಮಾರಾಟ ವಹಿವಾಟು ನಡೆಸುವ ರಾಮನಗರ ಮತ್ತು, https://ainlivenews.com/differences-between-black-coffee-and-black-tea-which-is-healthier/ ಶಿಡ್ಲಘಟ್ಟದಲ್ಲಿರುವ ರೇಷ್ಮೆ ಮಾರುಕಟ್ಟೆಗಳನ್ನು ಮೊದಲನೇ ಹಂತದಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ಹೈ-ಟೆಕ್ ಮಾರುಕಟ್ಟೆಗಳನ್ನಾಗಿ ಅಭಿವೃದ್ಧಿಪಡಿಸಲು ಈಗಾಗಲೇ ಕ್ರಮವಹಿಸಲಾಗಿದೆ. ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ 250 ಕೋಟಿ ರೂ. ವೆಚ್ಚದಲ್ಲಿ ಎರಡನೇ ಹಂತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

Read More

ಸದನದಲ್ಲಿ ಸಿಎಂ ಸಿದ್ದರಾಮಯ್ಯ 15ನೇ ಆಯವ್ಯಯ ಮಂಡನೆ. ಶರಣಚಿಂತನೆಯನ್ನ ಓದಿ ಹೇಳಿದ ಸಿಎಂ, ‘ಆಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ’ ಎಂಬ ಡಾ.ರಾಜ್ ಕುಮಾರ್ ಹಾಡಿನ ಸಾಲು ಉಲ್ಲೇಖಿಸಿದರು. Siddu Budget: ಪ್ರಸಕ್ತ ವರ್ಷದಲ್ಲಿ GST ತೆರಿಗೆ ಶೇ.18ರಷ್ಟು ಹೆಚ್ಚಳ: ಕರ್ನಾಟಕಕ್ಕೆ 2ನೇ ಸ್ಥಾನ ಬಜೆಟ್ ಮಂಡನೆಯ ಆರಂಭದಲ್ಲಿ ಆಗದು ಎಂದು ಕೈಲಾಗದು ಎಂದು ಕೈಕಟ್ಟಿ ಕುಳಿತರೇ ಸಾಗದು ಕೆಲಸವು ಮುಂದೆ ಎನ್ನುವ ವರನಟ ಡಾ.ರಾಜ್‌ಕುಮಾರ್ ಅವರ ಬಂಗಾರದ ಮನುಷ್ಯ ಸಿನಿಮಾದ ಹಾಡನ್ನು ನೆನಪಿಸಿಕೊಂಡರು. ಆರ್‌. ಎನ್‌ ಜಯಗೋಪಾಲ್ ಅವರ ಸಾಹಿತ್ಯದಂತೆ ಕಾಂಗ್ರೆಸ್ ಸರ್ಕಾರ ತಮ್ಮ 5 ಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ ಜಾರಿಗೆ ತಂದಿದ್ದೇವೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಮೇಲೆ ವಿರೋಧ ಪಕ್ಷಗಳಿಗೆ ನಂಬಿಕೆ ಇರಲಿಲ್ಲ. ಇದರಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದು ಅಸಾಧ್ಯ ಎಂದು ಹೇಳಿದ್ದವು. ಆದರೆ ನಾವು ಆಗದು ಎಂದು ಕೈ ಕಟ್ಟಿ ಕುಳಿತಿಲ್ಲ. ಗ್ಯಾರಂಟಿ ಯೋಜನೆಗಳನ್ನು ಬಜೆಟ್‌ನಲ್ಲಿ ಜಾರಿಗೊಳಿಸಿದ್ದೇವೆ. ಗ್ಯಾರಂಟಿ ಯೋಜನೆಗಳ ಮೇಲೆ…

Read More

ಬೆಂಗಳೂರು: ರಾಜ್ಯದ ಆರ್ಥಿಕತೆಯು (Karnataka Economy) 2023-24ನೇ ಸಾಲಿನಲ್ಲಿ ಶೇ.6.6ರಷ್ಟು (ಸ್ಥಿರ ಬೆಲೆಗಳಲ್ಲಿ) ಬೆಳವಣಿಗೆಯಾಗಲಿದೆ ಎಂದು ಅಂದಾಜಿಸಲಾಗಿದೆ. ರಾಜ್ಯದ ಈ ಶ್ಲಾಘನೀಯ ಬೆಳವಣಿಗೆಯು, ದೇಶದ ಆರ್ಥಿಕತೆಯನ್ನು ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ. 2022-23ಕ್ಕೆ ಹೋಲಿಸಿದರೆ ಪ್ರಸಕ್ತ ವರ್ಷದಲ್ಲಿ GST ತೆರಿಗೆ ಸಂಗ್ರಹಣೆಯು ಶೇ.18ರಷ್ಟು ಹೆಚ್ಚಳ ಕಂಡಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. Siddu Budjet: ಮದ್ಯ ಪ್ರಿಯರಿಗೆ ಶಾಕ್​ ಕೊಟ್ಟ ರಾಜ್ಯ ಸರ್ಕಾರ! 2023-24ರಲ್ಲಿ ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದರೆ ಒಟ್ಟು ಜಿ.ಎಸ್.ಟಿ ತೆರಿಗೆ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯವು 2ನೇ ಸ್ಥಾನದಲ್ಲಿದೆ. ಜನವರಿ ತಿಂಗಳ ಅಂತ್ಯದವರೆಗು 58,180 ಕೋಟಿ ರೂ.ಗಳ SGST ತೆರಿಗೆ ಸ್ವೀಕೃತವಾಗಿದ್ದು, ಕಳೆದ ಸಾಲಿಗೆ ಹೋಲಿಸಿದರೆ ಶೇ.14 ರಷ್ಟು ಬೆಳವಣಿಗೆಯಾಗಿರುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದರು.

Read More

ನವದೆಹಲಿ: ಶಾಸಕ ವೇದವ್ಯಾಸ ಕಾಮತ್ ಹಾಗೂ ಭರತ್ ಶೆಟ್ಟಿ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಸಿ.ಟಿ.ರವಿ (CT Ravi) ಪ್ರತಿಕ್ರಿಯಿಸಿದ್ದಾರೆ. ಯಾರು ಯಾರ ಮೇಲೆ ದೂರು ನೀಡಿದರೂ ಎಫ್‌ಐಆರ್ ಹಾಕುವುದು ನಿಯಮ. ತನಿಖೆ ನಡೆದ ಮೇಲೆ ಯಾರ ತಪ್ಪು ಗೊತ್ತಾಗಲಿದೆ. ದೂರು ಕೊಟ್ಟು ಶಿಕ್ಷಕಿ ತಮ್ಮ ತಪ್ಪು ಮುಚ್ಚಿ ಹಾಕಲು ಸಾಧ್ಯವಿಲ್ಲ ಎಂದು ಸಿ.ಟಿ.ರವಿ ತಿಳಿಸಿದ್ದಾರೆ. https://ainlivenews.com/differences-between-black-coffee-and-black-tea-which-is-healthier/ ಈ ಕುರಿತು ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೂರು ದಾಖಲಿಸಲು ಶಿಕ್ಷಕಿ ಸ್ವತಂತ್ರರು. ಆದರೆ ಶಿಕ್ಷಕಿ ಹಿಂದೂ ಧರ್ಮದ ವಿರುದ್ಧ ತಪ್ಪು ಅಭಿಪ್ರಾಯ ಮೂಡುವಂತೆ ಮಾಡುತ್ತಿದ್ದಾರೆ. ನಿರಂತರವಾಗಿ ಇದು ನಡೆಯುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಇಂತಹ ಆರೋಪಗಳು ಬಂದಾಗ ಜನಪ್ರತಿನಿಧಿಗಳು ಅಲ್ಲಿಗೆ ಹೋಗಬೇಕಾಗುತ್ತದೆ. ಶಿಕ್ಷಕಿ ದೂರು ನೀಡಿದ ತಕ್ಷಣ ತಾನು ಮಾಡಿದ ತಪ್ಪು ಮುಚ್ಚಿಹಾಕಲು ಸಾಧ್ಯವಿಲ್ಲ. ಈ ಬಗ್ಗೆ ತನಿಖೆ ನಡೆಯಲಿ, ಸತ್ಯಾಸತ್ಯತೆ ಹೊರಬರಲಿ ಎಂದರು.

Read More

ಬೆಂಗಳೂರು ಬಿಸಿನೆಸ್ ಕಾರಿಡರ್ ರೂಪಿಸಲು ಬಜೆಟ್‌ನಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. 73 ಕಿ.ಮೀ ಉದ್ದದ ರಸ್ತೆಯನ್ನು 27 ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು. ತೆರಿಗೆ ಹಂಚಿಕೆಯಲ್ಲಿ ರಾಜ್ಯ ಸರ್ಕಾರಕ್ಕೆ ಅನ್ಯಾಯವಾಗಿದೆ: ಸಿಎಂ ವಿರುದ್ಧ ಬಿಜೆಪಿ ಶಾಸಕರ ಅಸಮಾಧಾನ! ಇದಕ್ಕಾಗಿ ಪಿಪಿಪಿ ಮಾದರಿಯಲ್ಲಿ ಆರ್‌ಎಫ್‌ಪಿ ಕರೆಯಲಾಗುವುದು. ಬೆಂಗಳೂರಿನಲ್ಲಿ 250 ಮೀಟರ್ ಎತ್ತರದ ಸ್ಕೈಡೆಕ್ ನಿರ್ಮಾಣ ಮಾಡಲಾಗುವುದು. ಬೆಂಗಳೂರಿನಲ್ಲಿ ಆಕರ್ಷಕ ಪ್ರವಾಸಿ ತಾಣ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುವುದು. ನಗರಾಭಿವೃದ್ಧಿ ಅಂಗಸಂಸ್ಥೆ ಬಿಬಿಎಂಪಿ, ಬಿಎಂಆರ್‌ಸಿಎಲ್‌, ಬಿಡಬ್ಲ್ಯುಎಸ್‌ಎಸ್‌ಬಿ, ಬಿಡಿಎನಲ್ಲಿ ಸೋಲಾರ್‌ ಪಾರ್ಕ್‌ ನಿರ್ಮಾಣ ಮಾಡಲಾಗುವುದು. 2025ರೊಳಗೆ 44 ಕಿ.ಮೀ ಮೆಟ್ರೋ ಮಾರ್ಗ ಸೇರ್ಪಡೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ಘೋಷಣೆ ಮಾಡಿದರು.

Read More

ಬೆಂಗಳೂರು: ತೆರಿಗೆ ಹಂಚಿಕೆಯಲ್ಲಿ ರಾಜ್ಯ ಸರ್ಕಾರಕ್ಕೆ ಅನ್ಯಾಯವಾಗಿದೆ ಎಂದು ತಮ್ಮ ಬಜೆಟ್ ಭಾಷಣದ ವೇಳೆ ಸಿಎಂ ಸಿದ್ದರಾಮಯ್ಯ ಪುನರುಚ್ಚರಿಸಿದರು. ಈ ವೇಳೆ ವಿಪಕ್ಷ ಬಿಜೆಪಿಯ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಸುಳ್ಳು ಹೇಳಬೇಡಿ ಎಂದು ವಿಪಕ್ಷಗಳ ನಾಯಕರು ಸದನದಲ್ಲಿ ಪ್ರತಿಭಟನೆ ನಡೆಸಿದರು. ಸಿಎಂ ಬಜೆಟ್ ಮಂಡನೆ ನಡೆಯುತ್ತಿರುವಂತೆಯೇ ಬಿಜೆಪಿ ಶಾಸಕರು ಸದನದಲ್ಲಿ ಸಿಎಂ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಅಸಮಾಧಾನ ಹೊರಹಾಕಿದರು. ಸಿದ್ದರಾಮಯ್ಯ ಪ್ರಸಕ್ತ 15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಸಾಕಷ್ಟು ಅನ್ಯಾಯವಾಗಿದೆ. 14ನೇ ಹಣಕಾಸು ಆಯೋಗದ ಶಿಫಾರಸುಗಳು ಜಾರಿಯಲ್ಲಿದ್ದಿದ್ದರೆ ರಾಜ್ಯಕ್ಕೆ ಹೆಚ್ಚು ಪಾಲು ಸಿಗುತ್ತಿತ್ತು ಎಂದು ಅಂಕಿ ಅಂಶಗಳ ಸಮೇತ ವಿವರಣೆ ನೀಡಿದರು. ತಮ್ಮ ಗ್ಯಾರಂಟಿ ಯೋಜನೆಗಳನ್ನು ಪ್ರಸ್ತಾಪಿಸಿದ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ತಮ್ಮ ಗ್ಯಾರಂಟಿಯನ್ನು ಕದ್ದಿದೆ ಎಂದೂ ಲೇವಡಿ ಮಾಡಿದರು. ನಾವು ಐದು ಗ್ಯಾರಂಟಿಗಳನ್ನು ಬಹಳ ಕಡಿಮೆ ಅವಧಿಯಲ್ಲಿ ಜಾರಿ ಮಾಡಿದ್ದೇವೆ. ಈ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್ ಆಗಿರಲಿಲ್ಲ. ವಿಪಕ್ಷಗಳು ಈ ಗ್ಯಾರಂಟಿ ಯೋಜನೆಗಳನ್ನು ಬಿಟ್ಟಿ ಭಾಗ್ಯ…

Read More

ಉಡುಪಿ: ಮೀನುಗಾರಿಕೆ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ 3 ಸಾವಿರ ಕೋಟಿ ಯೋಜನೆ ಘೋಷಿಸಿದ್ದಾರೆ. ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳುವ ಮೀನುಗಾರರನ್ನು ತುರ್ತು ಸಂದರ್ಭಗಳಲ್ಲಿ ರಕ್ಷಣೆಗೆ ಮಾಡುವುದಕ್ಕಾಗಿ ಅತ್ಯಾಧುನಿಕ ಸಮುದ್ರ ಆಂಬುಲೆನ್ಸ್ ಖರೀದಿಸಲಾಗುವುದು ಎಂದು ಅವರು ಘೋಷಣೆ ಮಾಡಿದ್ದಾರೆ. https://ainlivenews.com/differences-between-black-coffee-and-black-tea-which-is-healthier/ ಹೊನ್ನಾವರ ಅಥವಾ ಕಾಸರಗೋಡದಲ್ಲಿ ಮೀನುಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪನೆ ಮಾಡಲಾಗುವುದು. ಭದ್ರಾವತಿಯಲ್ಲಿ ಹೈಟೆಕ್​ ಮೀನು ಮಾರುಕಟ್ಟೆ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಘೋಷಣೆ ಮಾಡಿದರು.

Read More