Author: AIN Author

ಬೆಂಗಳೂರು :- ಪೌರಕಾರ್ಮಿಕರಿಗೆ ರಿಲೀಫ್ ಸಿಕ್ಕಿದ್ದು, ಪಿಎಫ್ ಬಾಕಿ ಪಾವತಿಸಲು ಬಿಬಿಎಂಪಿಗೆ ಕರ್ನಾಟಕ ಹೈಕೋರ್ಟ್ ನಿರ್ದೇಶನ ನೀಡಿದೆ. ಬಿಬಿಎಂಪಿ ಪೌರಕಾರ್ಮಿಕರ ಸಂಘ ಸಲ್ಲಿಸಿದ್ದ ಅರ್ಜಿಯನ್ನು ಭಾಗಶಃ ಪುರಸ್ಕರಿಸಿ ನ್ಯಾಯಮೂರ್ತಿ ಕೆಎಸ್ ಹೇಮಲೇಖಾ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಉದ್ಯೋಗದಾತರ ಭವಿಷ್ಯ ನಿಧಿ ಮತ್ತು ವಿವಿಧ ನಿಬಂಧನೆಗಳ ಕಾಯಿದೆ, 1952 ರ ಸೆಕ್ಷನ್ 7A ಗೆ ಅನುಗುಣವಾಗಿ ಶೇ 12 ದರದಲ್ಲಿ ಸರಳ ಬಡ್ಡಿಯೊಂದಿಗೆ ಮೊತ್ತವನ್ನು ಠೇವಣಿ ಮಾಡುವಂತೆ 2017 ರ ಅಕ್ಟೋಬರ್ 26 ರಂದು ಬೆಂಗಳೂರಿನ ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರು ಆದೇಶವನ್ನು ಹೊರಡಿಸಿದ್ದರು. ಸಂಘವು ಆದೇಶದ ಅನುಷ್ಠಾನಕ್ಕೆ ನಿರ್ದೇಶನಗಳನ್ನು ಕೋರಿ ಅರ್ಜಿ ಸಲ್ಲಿಸಿತ್ತು. ಏತನ್ಮಧ್ಯೆ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರ ಆದೇಶವನ್ನು ಪ್ರಶ್ನಿಸಿ ಬಿಬಿಎಂಪಿ ನ್ಯಾಯಾಲಯದ ಮೆಟ್ಟಿಲೇರಿತ್ತು. ಇಪಿಎಫ್ ಮತ್ತು ಎಂಪಿ ಕಾಯಿದೆಯ ಸೆಕ್ಷನ್ 2(ಎಫ್) ಮತ್ತು ಎಂಪ್ಲಾಯೀಸ್ ಸ್ಟೇಟ್ ಇನ್ಶೂರೆನ್ಸ್ ಆಕ್ಟ್ 1948ರ ಸೆಕ್ಷನ್ 2(9) ಎರಡರಲ್ಲೂ ‘ನೌಕರ’ ವ್ಯಾಪ್ತಿಯೊಳಗೆ ಗುತ್ತಿಗೆ ಕಾರ್ಮಿಕರನ್ನು ಸೇರಿಸಿರುವುದನ್ನು ಗಮನಿಸಿ ಬಿಬಿಎಂಪಿ…

Read More

ಮಡಿಕೇರಿ: ಕೊಡಗಿನಲ್ಲೊಂದು ಪೈಶಾಚಿಕ ಕೃತ್ಯವೊಂದು ನಡೆದಿದ್ದು, ಇನ್ನೂ ಜಗತ್ತು ಅಂದರೆ ಏನು ಎಂದು ತಿಳಿಯದ ಪುಟಾಣಿ ಮಗುವಿನ ಮೇಲೆ ಕಾಮುಕನೊಬ್ಬ ದೌರ್ಜನ್ಯ ನಡೆಸಿದ್ದಾನೆ. ಕೇವಲ ಎರಡು ವರ್ಷದ ಮಗುವಿನ ಮೇಲೆ 45 ವರ್ಷದ ಕಾಮುಕನೊಬ್ಬ ಅತ್ಯಾಚಾರವೆಸಗಿದ್ದಾನೆ.ಜಿಲ್ಲೆಯ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿದ್ದಾಪುರದಿಂದ ಸುಮಾರು 20 ಕಿ.ಮೀ ದೂರದ ಎಸ್ಟೇಟ್‌ನಲ್ಲಿ ಕೃತ್ಯ ನಡೆದಿದೆ. ಮಣಿ ಎಂಬ ಕಾರ್ಮಿಕ ಕುಡಿದ ಮತ್ತಿನಲ್ಲಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಕಾಮುಕನ ಪೈಶಾಚಿಕ ಕೃತ್ಯದಿಂದ ಅಸ್ವಸ್ಥಗೊಂಡು ಗಂಭೀರವಾಗಿ ಗಾಯಗೊಂಡಿರುವ ಮಗುವನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದು ಜಾರ್ಖಂಡ್‌ ಮೂಲದ ಸಂಸಾರ. ಮನೆಯಲ್ಲಿ ಮಗು ಆಡುತ್ತಿತ್ತು. ಮಗುವಿನ ತಂದೆ ಬೇರೇನೋ ಕೆಲಸಕ್ಕೆ ಹೊರಗೆ ಹೋಗಿದ್ದರು. https://ainlivenews.com/300-units-of-free-electricity-for-1-crore-houses-how-to-apply-online/ ಆಗ ಅಲ್ಲಿಗೆ ಬಂದ ಕಾಮುಕ ಮಗುವಿನ ಮೇಲೆ ರಕ್ಕಸನಂತೆ ಎರಗಿದ್ದಾನೆ. ಮಗು ಒಂದೇ ಸಮನೆ ಬೊಬ್ಬೆ ಹೊಡೆದಾಗ ತಂದೆ ಓಡಿ ಬಂದಿದ್ದು, ಮಣಿ ನಡೆಸುತ್ತಿದ್ದ ದುಷ್ಕೃತ್ಯ ಬಯಲಾಗಿದೆ. ಎಷ್ಟರ ಮಟ್ಟಿಗೆ ಕ್ರೌರ್ಯ ಮೆರೆದಿದ್ದಾನೆಂದರೆ ಮಗುವಿನ ಜನನಾಂಗದಲ್ಲಿ ರಕ್ತ ಬರುತ್ತಿತ್ತು.…

Read More

ಆಂಧ್ರಪ್ರದೇಶ :- ಇಲ್ಲಿನ ತಿರುಪತಿಯಲ್ಲಿರುವ ಝೂಲಾಜಿಕಲ್ ಪಾರ್ಕ್‌ನಲ್ಲಿ ಸಿಂಹದ ಜತೆ ಸೆಲ್ಫಿ ತೆಗೆಯಲು ಹೋದ ವ್ಯಕ್ತಿಯೊಬ್ಬ ಪ್ರಾಣವನ್ನೇ ಕಳೆದುಕೊಂಡ ಘಟನೆ ಜರುಗಿದೆ ಪ್ರಹ್ಲಾದ್ ಗುಲ್ಜಾರ್ ಸಿಂಹಗಳಿಗೆ ಸೆಲ್ಫಿ ತೆಗೆದುಕೊಳ್ಳಲು ಸಿಂಹಕ್ಕೆ ಮೀಸಲಾದ ಆವರಣವನ್ನು ಪ್ರವೇಶಿಸಿದ್ದಾರೆ. ಈ ಆವರಣವು ಮೃಗಾಲಯದ ಅಧಿಕಾರಿಗಳು ಪ್ರಾಣಿಗಳಿಗೆ ಆಹಾರವನ್ನು ಒದಗಿಸುವ ಸ್ಥಳವಾಗಿತ್ತು, ಸಿಂಹದ ಬಳಿ ಹೋಗಲು ತಲುಪಲು ಗುಲ್ಜಾರ್ ಕೊನೆಯ ಗೇಟ್ ಕೂಡ ದಾಟಿದ್ದರು. ಸಿಂಹವು ಅವರ ಮೇಲೆ ದಾಳಿ ದಾಳಿ ನಡೆಸಿ ಕೊಂದು ಹಾಕಿದೆ. ಪ್ರಾಣ ಉಳಿಸಿಕೊಳ್ಳಲು ಪಕ್ಕದಲ್ಲಿದ್ದ ಮರವನ್ನು ಹತ್ತಿದ್ದರು ಆದರೆ ಭಯದಿಂದ ಮರದಿಂದ ಬಿದ್ದು ಕೆಲವೇ ನಿಮಿಷಗಳಲ್ಲಿ ಸಿಂಹ ದಾಳಿ ಮಾಡಿತು. ಸಿಂಹ ಆತನನ್ನು ಶರ್ಟ್ ಮತ್ತು ಪ್ಯಾಂಟ್ ಸಹಾಯದಿಂದ ಮೇಲಕ್ಕೆಳೆದು ಕುತ್ತಿಗೆಗೆ ದಾಳಿ ಮಾಡಿತ್ತು. ಘಟನೆಯನ್ನು ನೋಡಿದ ನಂತರ ಮೃಗಾಲಯದಲ್ಲಿದ್ದ ಅಧಿಕಾರಿಗಳು ಭಯಗೊಂಡರು. ಪೊಲೀಸರು ಕೂಡ ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

Read More

ಬೆಂಗಳೂರು:-ಸಿಎಂ ಸಿದ್ದರಾಮಯ್ಯ ಅವರು ಇಂದು ತಮ್ಮ 15 ನೇ ದಾಖಲೆ ಬಜೆಟ್ ಮಂಡಿಸಲಿದ್ದಾರೆ. ಇಂದು ಬೆಳಗ್ಗೆ 10:15 ರಿಂದ ಬಜೆಟ್‌ ಮಂಡಿಸಲಿದ್ದಾರೆ. ಬಜೆಟ್‌ ಗಾತ್ರ 3.75 ಲಕ್ಷ ಕೋಟಿ ರೂ.ನಿಂದ 3.80 ಲಕ್ಷ ಕೋಟಿ ರೂ.ಗಳ ವರೆಗೆ ಇರಲಿದೆ ಎನ್ನಲಾಗಿದೆ. ಬಜೆಟ್‌ ಮಂಡನೆಗೂ ಮುನ್ನ ಬೆಳಗ್ಗೆ 9:30ಕ್ಕೆ ಸಚಿವ ಸಂಪುಟ ಸಭೆಯನ್ನೂ ಸಿಎಂ ಕರೆದಿದ್ದಾರೆ. ಈ ಬಾರಿ ರಾಜ್ಯದಲ್ಲಿ ತೆರಿಗೆ ಬರೆ ಇಲ್ಲದೇ ಬಜೆಟ್‌ ಮಂಡನೆ ಮಾಡುತ್ತಾರಾ? ಜನಪ್ರಿಯ ಯೋಜನೆ ಘೋಷಣೆ ಮಾಡದೇ ಕೇಂದ್ರ ಸರ್ಕಾರದ ಹಾದಿ ತುಳಿಯುತ್ತಾರಾ? ಅನ್ನೋ ಪ್ರಶ್ನೆಗಳ ನಡುವೆ ಸಿದ್ದರಾಮಯ್ಯ ಬಜೆಟ್ ನಲ್ಲಿ ಈ ಬಾರಿ ರಾಮ ನಾಮ ಜಪ ಮಾಡ್ತಾರೆ ಅನ್ನೋ ಮಾತುಗಳು ಕೇಳಿಬರುತ್ತಿವೆ. ರಾಜ್ಯದ ಪುರಾತನ ರಾಮ ಮಂದಿರಗಳ ಪುನರುಜ್ಜೀವಕ್ಕೆ ಬಜೆಟ್ ನಲ್ಲಿ ಹಣ ಬಿಡುಗಡೆ ಆಗುತ್ತಾ? ಅಯೋಧ್ಯೆಯಲ್ಲಿ ರಾಜ್ಯದ ವಸತಿ ಸಮುಚ್ಚಯ ನಿರ್ಮಾಣ ಬಗ್ಗೆ ಬಜೆಟ್‌ನಲ್ಲಿ ಘೋಷಣೆಯಾಗುತ್ತಾ? ಕರ್ನಾಟಕದಲ್ಲಿ ಪುರಾತನ ರಾಮ ಮಂದಿರ ಪುನರು ಜ್ಜೀವನಕ್ಕೆ 100 ಕೋಟಿ ಮೀಸಲಿಡ್ತಾರಾ? ಅನ್ನೋದರ ಬಗ್ಗೆ…

Read More

ದೆಹಲಿ:- ಅಗ್ನಿ ಅವಘಡದಿಂದ 11 ಜನರು ಸಾವನ್ನಪ್ಪಿ, 4 ಮಂದಿ ಗಾಯಗೊಂಡ ಘಟನೆ ದೆಹಲಿಯ ಅಲಿಪುರದಲ್ಲಿರುವ ರಾಸಾಯನಿಕ ಗೋದಾಮುಗಳಲ್ಲಿ ಜರುಗಿದೆ. ಮೃತರನ್ನು ಬಾಬು ಜಗಜೀವನ್ ರಾಮ್ ಆಸ್ಪತ್ರೆಗೆ ಮತ್ತು ನಾಲ್ವರು ಗಾಯಾಳುಗಳನ್ನು ರಾಜಾ ಹರಿಶ್ಚಂದ್ರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಫೆಬ್ರವರಿ 15ರಂದು ದೆಹಲಿಯ ಅಲಿಪೋರ್‌ನಲ್ಲಿರುವ ಪೇಂಟ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭಾರೀ ಬೆಂಕಿ ಕಾಣಿಸಿಕೊಂಡಿತ್ತು. ಈ ಅಪಘಾತದಲ್ಲಿ ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ. ಮೃತರ ದೇಹಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಅವರನ್ನು ಗುರುತಿಸುವುದೂ ಕಷ್ಟವಾಗುತ್ತಿದೆ. ಭಾರೀ ಬೆಂಕಿಯ ಘಟನೆಯಲ್ಲಿ 11 ಜನರು ಸಾವನ್ನಪ್ಪಿದ ಅಲಿಪುರದ ಬಣ್ಣದ ಕಾರ್ಖಾನೆಯು ಜನನಿಬಿಡ ಪ್ರದೇಶದಲ್ಲಿದೆ. ಘಟನೆ ವೇಳೆ ಕಾರ್ಖಾನೆಯೊಳಗೆ ಕೆಲಸ ನಡೆಯುತ್ತಿದ್ದು, ನೌಕರರು ಕೆಲಸದಲ್ಲಿ ನಿರತರಾಗಿದ್ದರು. ಗುರುವಾರ ಸಂಜೆ ಬೆಂಕಿ ಕಾಣಿಸಿಕೊಂಡಿತ್ತು. ನೌಕರರು ತಪ್ಪಿಸಿಕೊಳ್ಳುವ ಅವಕಾಶವೂ ಇರಲಿಲ್ಲ. ಇದೇ ಕಾರಣಕ್ಕೆ ಕಾರ್ಖಾನೆಯಲ್ಲಿದ್ದವರು ಸುಟ್ಟು ಕರಕಲಾದ ಘಟನೆ ನಡೆದಿದೆ. ಬೆಂಕಿ ಎಷ್ಟು ಪ್ರಬಲವಾಗಿತ್ತೆಂದರೆ ಕಾರ್ಖಾನೆಯ ಪಕ್ಕದ ಮನೆಗಳ ಮೇಲೆ ಕೂಡ ಪರಿಣಾಮ ಬೀರಿವೆ. ಪೊಲೀಸರು…

Read More

ಬೆಂಗಳೂರು:- ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, ಮಲ್ಲೇಶ್ವರಂ ಸಬ್‌ ರಿಜಿಸ್ಟ್ರಾರ್‌ ಕಚೇರಿಯಲ್ಲಿ ವಿವಾಹದ ಆನ್​ಲೈನ್ ನೋಂದಣಿ ಪ್ರಕ್ರಿಯೆಗೆ ಪ್ರಾಯೋಗಿಕವಾಗಿ ಈ ಸೌಲಭ್ಯಕ್ಕೆ ಚಾಲನೆ ನೀಡಿದರು. ಅದೇ ರೀತಿ, ವಿಶೇಷ ವಿವಾಹ ಕಾಯ್ದೆ 1954 ರ ಅಡಿಯಲ್ಲಿ ವಿವಾಹಗಳನ್ನು ನೋಂದಾಯಿಸಲು ಅರ್ಜಿ ಸಲ್ಲಿಸುವ ಪ್ರಕ್ರಿಯೆನ್ನು ಕೂಡ ಆನ್‌ಲೈನ್‌ ಮಾಡಲಾಗಿದೆ. ಈ ತಿಂಗಳ ಅಂತ್ಯದೊಳಗೆ ರಾಜ್ಯದ ಎಲ್ಲಾ ಸಬ್ ರಿಜಿಸ್ಟ್ರಾರ್ ಕಚೇರಿಗಳಿಗೂ ಈ ಸೌಲಭ್ಯಗಳನ್ನು ವಿಸ್ತರಿಸಲಾಗುತ್ತದೆ. ಆಧಾರ್ ದೃಢೀಕರಣವನ್ನು ನೀಡಲು ಬಯಸುವವರು ಮನೆಯಿಂದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. ಆದರೆ ಆಧಾರ್ ದೃಢೀಕರಣವನ್ನು ಮಾಡದಿರುವವರು ಸಬ್-ರಿಜಿಸ್ಟ್ರಾರ್ ಕಚೇರಿಗೆ ಭೇಟಿ ನೀಡುವ ಮೂಲಕ ತಮ್ಮ ವಿವಾಹವನ್ನು ನೋಂದಾಯಿಸಿಕೊಳ್ಳಬಹುದು. ವಿಶೇಷ ವಿವಾಹ ಕಾಯ್ದೆಯಡಿ ವಿವಾಹಗಳನ್ನು ನೋಂದಾಯಿಸಲು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆನ್‌ಲೈನ್‌ನಲ್ಲಿ ಮಾಡಲಾಗಿದೆ. ಎಲ್ಲಾ ಅಗತ್ಯ ದಾಖಲೆಗಳನ್ನು ಆನ್‌ಲೈನ್‌ನಲ್ಲಿ ಒದಗಿಸಿದ ನಂತರ, ಸಬ್‌ರಿಜಿಸ್ಟ್ರಾರ್ ಕಚೇರಿಗೆ ನೋಂದಣಿಗೆ ಭೇಟಿ ನೀಡಬೇಕಾಗುತ್ತದೆ.

Read More

ಬೆಂಗಳೂರು:- ನಾಮಫಲಕಗಳಲ್ಲಿ ಶೇ60 ರಷ್ಟು ಕನ್ನಡ ಭಾಷೆ ಪ್ರದರ್ಶಿಸಲು ವಿಫಲವಾದರೆ ದಂಡ ವಿಧಿಸಲಾಗುವುದು ಮತ್ತು ಟ್ರೇಡ್ ಲೈಸೆನ್ಸ್ ರದ್ದುಗೊಳಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ವಿಧಾನಸಭೆಗೆ ತಿಳಿಸಿದರು. ನಿಯಮ ರೂಪಿಸಲು ಒಂದು ಸಮಿತಿ ರಚನೆ ಮಾಡಿ, ಹಲವು ಸುತ್ತಿನ ಚರ್ಚೆಗಳನ್ನು ಮಾಡಿದ್ದೇವೆ. ಒಂದು ಎನ್ಫೋರ್ಸ್ಮೆಂಟ್​ ವಿಂಗ್​ (ಜಾರಿ ಘಟಕ) ಅನ್ನು ಮಾಡಲಾಗುತ್ತದೆ. ಜಾರಿ ಅಧಿಕಾರಿಗಳ ಜೊತೆ ಪೊಲೀಸ್​ ಅಧಿಕಾರಿಗಳು ಇದರಲ್ಲಿರುತ್ತಾರೆ. ಕಾನೂನು ಮತ್ತು ನಿಯಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಎಲ್ಲ ಎಂಟು ವಲಯ ಆಯುಕ್ತರಿಗೆ ಪೂರ್ಣ ಅಧಿಕಾರ ನೀಡಲಾಗಿದೆ ಎಂದು ಎಂದು ಸಚಿವರು ಹೇಳಿದರು. ಕನ್ನಡ ಭಾಷೆಯ ಬಳಕೆ ಕುರಿತು ಯಾವುದೇ ವ್ಯಕ್ತಿ ದೂರು ನೀಡಲು ಕನ್ನಡ ಕಣ್ಗಾವಲು ಎಂಬ ಆ್ಯೊ್​ ಅನ್ನು ರೂಪಿಸಲಾಗುತ್ತಿದೆ. ಇಲ್ಲಿಗೆ ಬರುವ ದೂರುಗಳನ್ನು ಸಂಬಂಧಪಟ್ಟ ಸಮಿತಿಗಳಿಗೆ ಕಳುಹಿಸಿ, ಅವರು ಆ ದೂರುಗಳ ಬಗ್ಗೆ ಕ್ರಮವಹಿಸುವಂತೆ ವ್ಯವಸ್ಥೆ ರೂಪಿಸಲಾಗುತ್ತದೆ ಎಂದು ಸಚಿವರು ದನಕ್ಕೆ ವಿವರಿಸಿದರು.

Read More

ಚಾಮರಾಜನಗರ:- ತಾಲೂಕಿನ ಹೆಗ್ಗವಾಡಿಪುರದಲ್ಲಿ ರೈತ ನಾಯಕ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅವರ 88ನೇ ಜನ್ಮ ದಿನದ ಪ್ರಯುಕ್ತ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು. ಹನುಮ ಸಂಜೀವಿನಿ ಔಷಧಾಲಯ, ಓಂಕಾರ್‌ವರ್ಮಿ ಕಾಂಪೋಸ್ಟ್ ಹಾಗೂ ಸಿಮ್ಸ್ ಆಸ್ಪತ್ರೆಯರಕ್ತನಿಧಿಕೇಂದ್ರ ದಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪ್ರೊ.ಎಂ.ಡಿ ನಂಜುಂಡಸ್ವಾಮಿ ಭಾವಚಿತ್ರಕ್ಕೆ ಪುಷಾರ್ಚನೆ ಸಲ್ಲಿಸಿ ರೈತಗೀತೆ ಹಾಡಲಾಯಿತು. ಈ ವೇಳೆಯಲ್ಲಿ ರೈತ ಮುಖಂಡ ಹಾಗೂ ಹಸಿರು ಸೇನೆಯ ಎಚ್ ಸಿ. ಮಹೇಶ್ ಕುಮಾ‌ರ್ ಮಾತನಾಡಿ, ರೈತರಿಗೆ ಧ್ವನಿ ಕೊಟ್ಟಂತಹ ಮಹಾನ್ ನಾಯಕ ವಿಶ್ವದಲ್ಲಿ ಯಾರಾದರೂ ಇದ್ದರೆ ಅದು ಪ್ರೊ. ಎಂ.ಡಿ.ನಂಜುಂಡಸ್ವಾಮಿ ಇಂದು ಹಲವಾರು ದೇಶಗಳ ರೈತರು ಅವರ ಹೋರಾಟವನ್ನು ಸ್ಮರಿಸುತ್ತಿದ್ದಾರೆ ಎಂದರು. 40 ವರ್ಷಗಳ ಹಿಂದೆಯೇ ಸ್ವಿಸ್ ಬ್ಯಾಂಕ್‌ನಲ್ಲಿದ್ದ ಕಪ್ಪು ಹಣವನ್ನು ತರಲು ಹೋರಾಟ ನಡೆಸಿದ್ದರು. ಅವರ ತತ್ವ ಸಿದ್ಧಾಂತಗಳು ದೇಶದ ಪ್ರತಿ ಗ್ರಾಮದಲ್ಲಿಯೂ ಇಂದು ಚಿಗುರೊಡೆಯಬೇಕಿದೆ ಎಂದು ಹೇಳಿದರು. ಇದೇ ವೇಳೆ ಹಲವು ಯುವಕರು ರಕ್ತದಾನ ಮಾಡಿದರು. ಅಲ್ಲದೆ ರೈತ ನಾಯಕನ ನೆನಪಿಗಾಗಿ ಆರೋಗ್ಯ ಕಾರ್ಡ್, ಪ್ರಧಾನಮಂತ್ರಿ ವಿಶ್ವಕರ್ಮ…

Read More

ಬೆಂಗಳೂರು:- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 15 ನೇಯ ದಾಖಲೆಯ ಬಜೆಟ್ ಮಂಡಿಸಲಿದ್ದಾರೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಬಜೆಟ್​​ನಲ್ಲಿ ಮಹತ್ವದ ಘೋಷಣೆಗಳು ಹೊರಬೀಳುವ ನಿರೀಕ್ಷೆಗಳೂ ಇವೆ. ಈ ಬಾರಿ ಬಜೆಟ್ ಗಾತ್ರ ಸುಮಾರು 50 ಸಾವಿರ ಕೋಟಿ ರೂಪಾಯಿ ಹೆಚ್ಚಳವಾಗಲಿದೆ. ಗ್ಯಾರಂಟಿ ಯೋಜನೆಗಳ ಜೊತೆಗೆ ಹೊಸ ಯೋಜನೆಗಳನ್ನು ನೀಡುವ ದೊಡ್ಡ ಸವಾಲು ಸಿದ್ದರಾಮಯ್ಯ ಮುಂದೆ ಇದ್ದು, ಬಜೆಟ್ ಗಾತ್ರ ಮತ್ತು ಸಾಲದ ಹೊರೆ ಹೆಚ್ಚಾಗಲಿದೆ. ಬಜೆಟ್​ನಲ್ಲಿ ಮದ್ಯದ ಮೇಲಿನ ಸುಂಕವನ್ನು ಹೆಚ್ಚಳ ಮಾಡುವ ಸಾಧ್ಯತೆ ಇದೆ. ಆ ಮೂಲಕ ಆದಾಯ ಕ್ರೋಢೀಕರಣಕ್ಕೆ ಸಿದ್ದರಾಮಯ್ಯ ಕ್ರಮಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಕಳೆದ ಬಾರಿ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂಪಾಯಿ ಇತ್ತು. ಈ ಬಾರಿ 3.50 ಲಕ್ಷ ಕೋಟಿ ಅಥವಾ 3.80 ಲಕ್ಷ ಕೋಟಿ ತಲುಪುವ ಸಾಧ್ಯತೆ ಇದೆ. ಕಳೆದ ಬಜೆಟ್‌ನಲ್ಲಿ 85,815 ಕೋಟಿ ರೂ. ಸಾಲದ ಮೊರೆ ಹೋಗಿತ್ತು. ಈ ಬಾರಿ ಅಂದಾಜು 1 ಲಕ್ಷ ಕೋಟಿಗೆ ಸಾಲ ಹೆಚ್ಚಾಗುವ…

Read More

ಬೆಂಗಳೂರು:- ಇಂದು ರಾಜ್ಯ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ ಅವರು, ಲೋಕಸಭಾ ಚುನಾವಣೆ ದೃಷ್ಟಿಯಲ್ಲಿ ಮಹತ್ವದ ಘೋಷಣೆಗಳನ್ನು ಮಾಡುವ ಸಾಧ್ಯತೆ ಇದೆ. ಆದರೆ, ಗ್ಯಾರಂಟಿ ಯೋಜನೆಗಳ ಜೊತೆಗೆ ಹೊಸ ಯೋಜನೆ ನೀಡುವ ದೊಡ್ಡ ಸವಾಲು ಸಿದ್ದರಾಮಯ್ಯ ಮುಂದೆ ಇದ್ದು, ಬಜೆಟ್ ಗಾತ್ರ ಮತ್ತು ಸಾಲದ ಹೊರೆ ಹೆಚ್ಚಾಗಲಿದೆ. ಸಿದ್ದರಾಮಯ್ಯ ಬಜೆಟ್ ನೀರಿಕ್ಷೆಗಳು 7ನೇ ವೇತನ ಆಯೋಗದ ವರದಿಯಲ್ಲಿನ ಕೆಲ ಅಂಶಗಳ ಘೋಷಣೆ ಸಾಧ್ಯತೆ ಮದ್ಯದ ಮೇಲಿನ ಸುಂಕ ಏರಿಕೆ ಸಾಧ್ಯತೆ ಅಲ್ಪಸಂಖ್ಯಾತರ ಅಭಿವೃದ್ದಿಗಾಗಿ ವಿಶೇಷ ಹಣ ಮೀಸಲು ಬೆಂಗಳೂರಿನಲ್ಲಿ ಟನಲ್ ನಿರ್ಮಾಣಕ್ಕೆ ಅನುದಾನ ನಮ್ಮ ಮೆಟ್ರೋ ಮಾರ್ಗ ವಿಸ್ತರಣೆ ಹೆಚ್ಚಿನ ಅನುದಾನ ಬಿಡುಗಡೆ ಸಾಧ್ಯತೆ ಮೇಕೆದಾಟು ಯೋಜನೆಗೆ ಹಣ ಘೋಷಣೆ ಸಾಧ್ಯತೆ 100 ಕೋಟಿ ರೂಪಾಯಿ ವೆಚ್ಚದಲ್ಲಿ ದೇವಸ್ಥಾನಗಳ ಅಭಿವೃದ್ಧಿ ಕಾರ್ಯ ಸುವರ್ಣ ಮಹೋತ್ಸವ ಹೆಸರಿನಲ್ಲಿ ಹಲವು ಅಭಿವೃದ್ಧಿ ಪೂರಕ ಯೋಜನಗಳು ತರುವ ಸಾಧ್ಯತೆ ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ಸಿದ್ದರಾಮಯ್ಯ ಬಜೆಟ್ ಮಂಡನೆ ಸಾಕಷ್ಟು ಕೂತಹಲ ಮೂಡಿಸಿದೆ. ಐದು ಗ್ಯಾರಂಟಿ ಹಾಗೂ…

Read More