Author: AIN Author

ಲಕ್ನೋ: ಮದುವೆ ಮದುವೆಯಲ್ಲಿ ನೃತ್ಯ ಮಾಡುವ ವೇಳೆ ಡಿಜೆ ಹಾಡುಗಳಿಗಾಗಿ ಜಗಳವಾಡಿ ಕುಟುಂಬಸ್ಥರು ಠಾಣೆ ಮೆಟ್ಟಿಲೇರಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮದುವೆ ಅಂದರೆ ಎಲ್ಲೆಡೆ ಸಂಭ್ರಮ ಮನೆಮಾಡಿರುತ್ತದೆ. ಆದರೆ ಲಕ್ನೋದಲ್ಲಿ ನಡೆದ ಮುದುವೆಯಲ್ಲಿ ಡಿಜೆಗಾಗಿ ಕಿತ್ತಾಡಿಕೊಂಡಿರುವ ವೀಡಿಯೋ ಸಾಮಾಜಿಕ ಜಾಲಾತಣಗಳಲ್ಲಿ ಭಾರೀ ವೈರಲ್ ಆಗಿದೆ. ಎರಡೂ ಕಡೆಯವರು ಪರಸ್ಪರ ಜಗಳವಾಡಿ, ಮದುವೆ ಮನೆಯಲ್ಲಿದ್ದ ಕುರ್ಚಿಗಳನ್ನು ಎಸೆದು ಕುಟುಂಬಸ್ಥರು ಹೊಡೆದಾಡಿಕೊಂಡಿದ್ದಾರೆ.  ಮದುವೆ ಮನೆಯಲ್ಲಿ ಮೊದಲು ಎರಡು ಕಡೆಯವರಿಗೆ ಊಟದ ವಿಚಾರವಾಗಿ ಜಗಳವಾಗಿದೆ. ನಂತರ ಆರತಕ್ಷತೆಗೆ ಸಿದ್ಧತೆಗಳು ನಡೆದಿದ್ದು, ವಧು-ವರ ಎಂಟ್ರಿಗೆ ಕುಟುಂಬಸ್ಥರು ನೃತ್ಯ ಮಾಡಿದ್ದಾರೆ. ಅದೇ ಸಮಯದಲ್ಲಿ ಡಿಜೆ ಹಾಡುಗಳಿಗಾಗಿ ಜಗಳವಾಗಿದೆ. ಇದರಿಂದ ಇನಷ್ಟು ಕೋಪಗೊಂಡು ಎರಡು ಕುಟುಂಬಗಳ ನಡುವೆ ಮಾತಿನ ಚಕಮಕಿ ನಡೆದಿದೆ. https://ainlivenews.com/300-units-of-free-electricity-for-1-crore-houses-how-to-apply-online/  ಮಾತಿಗೆ ಮಾತು ಬೆಳೆದು ಮದುವೆಯಲ್ಲಿ ಜಗಳ ಶರುವಾಗಿದೆ. ಕುಟುಂಬಸ್ಥರು ಮದುವೆ ಮನೆಯಲ್ಲಿದ್ದ ಕುರ್ಚಿಗಳನ್ನು ತಳ್ಳಿ ಹಾಕಿ ಅದರಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಘಟನೆ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಎರಡು ಕಡೆಯವರನ್ನು ಸಮಾಧಾನ ಮಾಡಿ ಠಾಣೆಗೆ ಕರೆದುಕೊಂಡು…

Read More

ಮೈಸೂರು: ಮೈಸೂರಿನ ಚಿಕ್ಕನಹಳ್ಳಿ ಅರಣ್ಯ ಬಳಿ ಹುಲಿ ಬೋನಿಗೆ ಬಿದ್ದಿದೆ. ಹೌದು ಸರಗೂರು ತಾಲೂಕಿನ ಚಿಕ್ಕನಹಳ್ಳಿ ಅರಣ್ಯ ಬಳಿಯ ಜಮೀನೊಂದರಲ್ಲಿ ಇರಿಸಲಾಗಿದ್ದ ಬೋನಿಗೆ ಹುಲಿ ಬಿದ್ದಿದೆ. ಮೈಸೂರು ತಾಲೂಕಿನ ಚಿಕ್ಕಕಾನ್ಯ ಬಳಿ ಹುಲಿ ಕಾಣಿಸಿಕೊಂಡು ಆತಂಕ ಸೃಷ್ಟಿ ಮಾಡಿತ್ತು. https://ainlivenews.com/300-units-of-free-electricity-for-1-crore-houses-how-to-apply-online/ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗುತ್ತಿದ್ದ ಹಿನ್ನಲೆ ಹುಲಿ ಸೆರೆಗೆ ಹಲವು ಕಡೆ ಬೋನನ್ನು ಇರಿಸಲಾಗಿತ್ತು. ಇದೀಗ ಐದು ವರ್ಷದ ಗಂಡು ಹುಲಿಯನ್ನು ಸೆರೆ ಹಿಡಿಯಲಾಗಿದೆ. ಸದ್ಯ ಸ್ಥಳಕ್ಕೆ ಮೈಸೂರು ವೃತ್ತದ ಸಿ.ಎಫ್ ಡಾ. ಮಾಲ ತಿಪ್ರಿಯಾ, ಡಿ.ಸಿ.ಎಫ್ ಬಸವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಚಾಮರಾಜನಗರ: ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ನಾನು ಟಿಕೆಟ್ ಆಕಾಂಕ್ಷಿಯೇ ಅಲ್ಲ, ಒಂದು ವೇಳೆ ಪಕ್ಷದ ವರಿಷ್ಠರು ಹೇಳಿದರೆ ಹೈಕಮಾಂಡ್ ಸೂಚನೆಯಂತೆ ನಡೆದುಕೊಳ್ಳುತ್ತೇನೆ ಎಂದಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಮಾಧ್ಯಗಳೊಂದಿಗೆ ಮಾತನಾಡಿದ ಶೆಟ್ಟರ್, ಹಾಸನ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆ ಗೊಂದಲದ ಬಗ್ಗೆಯೂ ಮಾತನಾಡಿದ್ದು, ಪ್ರೀತಂಗೌಡ ಹೇಳಿಕೆ ವೈಯುಕ್ತಿಕವಾಗಿದೆ, ಪಕ್ಷದಲ್ಲಿ ವರಿಷ್ಠರ ತೀರ್ಮಾನವೇ ಅಂತಿಮ, ವರಿಷ್ಠರು ಏನು ಹೇಳುತ್ತಾರೆ ಅದಕ್ಕೆ ಎಲ್ಲರೂ ತಲೆ ಭಾಗಲೇಬೇಕು ಎಂದು‌ ನಿಲುವು ವ್ಯಕ್ತಪಡಿಸಿದರು. https://ainlivenews.com/300-units-of-free-electricity-for-1-crore-houses-how-to-apply-online/ ಈ ಬಗ್ಗೆ ಅಮಿತ್ ಶಾ ಅವರು ಸಭೆಯಲ್ಲಿ ಏನು ಹೇಳಿರಬಹುದು ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ, ಅವರು ಪ್ರಮುಖವಾಗಿ ಸುತ್ತೂರು ಮಠದ ಕಾರ್ಯಕ್ರಮಕ್ಕೆ ಬಂದಿದ್ದರು, ಆ ಸಮಯದಲ್ಲಿ ಪಕ್ಷ ಸಂಘಟನೆ ಬಗ್ಗೆ ಕೆಲವು ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ, ಆ ಸಂದರ್ಭದಲ್ಲಿ ನಾನು ಬೇರೆ ಬೇರೆ ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗಿದ್ದ ಕಾರಣ ಅಮಿತ್ ಶಾ ಅವರನ್ನು ಭೇಟಿ ಮಾಡಿಲ್ಲ…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಬೆಳಗ್ಗೆ 11 ಗಂಟೆಗೆ ವಿಧಾನಸಭೆಯಲ್ಲಿ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ನಾಡಿನ ಜನರ ನಿರೀಕ್ಷೆಗಳು ಹೆಚ್ಚಾಗಿವೆ ಸಿದ್ದರಾಮಯ್ಯ ಅವರು ಈಗಾಗಲೇ ರಾಜ್ಯದಲ್ಲಿ 13 ಬಜೆಟ್‌ ಮಂಡಿಸಿದ್ದಾರೆ. ಇದೀಗ ದಾಖಲೆಯ 15ನೇ ಬಜೆಟ್‌ ಮಂಡಿಸುತ್ತಿದ್ದು ಇಂತಹ ಅನುಭವಿ ನಾಯಕ ರಾಜ್ಯದ ದೂರದೃಷ್ಟಿಯ ಅಭಿವೃದ್ಧಿ ದೃಷ್ಟಿಯಿಂದ ಯಾವೆಲ್ಲ ಕ್ಷೇತ್ರಗಳಿಗೆ ಆದ್ಯತೆ ನೀಡಬಹುದು ಎಂಬ ನಿರೀಕ್ಷೆಯೂ ಇದೆ. ಇದರ ಜತೆಗೆ  ಲೋಕಸಭೆಗೆ ಚುನಾವಣೆ ನಡೆಯಲಿರುವುದರಿಂದ ಕಾಂಗ್ರೆಸ್‌ ಸರಕಾರದ ಲೆಕ್ಕಾಚಾರ ಹೇಗಿರಬಹುದು ಎಂಬ ಕೌತುಕವೂ ಇದೆ. ಇದು ಸಿಎಂ ಸಿದ್ದರಾಮಯ್ಯ ಅವರ 15ನೇ ಬಜೆಟ್ ಆಗಿದ್ದು, ಗಮನಾರ್ಹ ದಾಖಲೆಯಾಗಲಿದೆ. ಪಾಟೀಲ್ ಅವರು, “ಫೆಬ್ರವರಿ 16 ರಂದು ಬಜೆಟ್ ಮಂಡಿಸಲಾಗುವುದು ಮತ್ತು ಫೆಬ್ರವರಿ 23 ರವರೆಗೆ ಅಧಿವೇಶನವನ್ನು ವಿಸ್ತರಿಸಲಾಗುವುದು. ಬಜೆಟ್ ಅಧಿವೇಶನದ ಆರಂಭವು ಕರ್ನಾಟಕ ವಿಧಾನಮಂಡಲದ ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ಜಂಟಿ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ. ಈ ಹಿಂದೆ 1994 ಮತ್ತು 1999 ರ ನಡುವೆ…

Read More

ಬೆಂಗಳೂರಿನಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಹಾಗೆಯೇ ಸಂಚಾರ ಸಂಚರ ದಟ್ಟಣೆಯೂ ಆಗುತ್ತಿದೆ. ಈ ಹಿನ್ನೆಲೆ ನಗರದಲ್ಲಿ ಸಂಚಾರ ನಿಯಮದಲ್ಲಿ ಹೊಸ ಹೊಸ ಬದಲಾವಣೆಗಳು ಆಗುತ್ತಿವೆ. ಇನ್ನು ಇದೀಗ ಹಲಸೂರು ಬಳಿಯ ಕೆನ್ಸಿಂಗ್ಟನ್ ರಸ್ತೆ ಮತ್ತು ಮರ್ಫಿ ರಸ್ತೆಯ ಜಂಕ್ಷನ್‌​ಗಳಲ್ಲಿ ಅತ್ಯಾಧುನಿಕ ಜಪಾನೀಸ್ ತಂತ್ರಜ್ಞಾನ ಆಧರಿಸಿದ ಹೊಸ ಟ್ರಾಫಿಕ್ ಸಿಗ್ನಲಿಂಗ್ ವ್ಯವಸ್ಥೆಯನ್ನು ಅಳವಡಿಸಲಾಗಿದೆ. ಸುಗಮ ಸಂಚಾರ ನಿರ್ವಹಣೆಗಾಗಿ ಇತ್ತೀಚೆಗೆ ಬೆಂಗಳೂರಿನ ಹಲಸೂರು ಬಳಿಯ ಕೆನ್ಸಿಂಗ್ಟನ್ ರಸ್ತೆ ಮತ್ತು ಮರ್ಫಿ ರಸ್ತೆಯ ಜಂಕ್ಷನ್​​ಗಳಲ್ಲಿ ಜಪಾನೀಸ್ ತಂತ್ರಜ್ಞಾನ ಮೋಡರೇಟೊ ಆಧರಿಸಿದ ಹೊಸ ಟ್ರಾಫಿಕ್ ಸಿಗ್ನಲಿಂಗ್ ವ್ಯವಸ್ಥೆಯನ್ನು ಆರಂಭಿಸಲಾಗಿದೆ. Electoral Bonds: ಚುನಾವಣಾ ಬಾಂಡ್ ಯೋಜನೆ ರದ್ದುಗೊಳಿಸಿ ಮಹತ್ವದ ತೀರ್ಪು ನೀಡಿದ ಸುಪ್ರೀಂ ಈ ಅತ್ಯಾಧುನಿಕ ಟ್ರಾಫಿಕ್ ಸಿಗ್ನಲ್‌ಗಳ ಅಳವಡಿಕೆ ವಿವಿಧ ಕಾರಣಗಳಿಂದಾಗಿ ಸ್ವಲ್ಪ ವಿಳಂಬ ಆಗಿತ್ತು. ಇದೀಗ ಎಂಜಿ ರಸ್ತೆ, ಹೊಸೂರು ರಸ್ತೆ ಮತ್ತು ಹಳೆ ಮದ್ರಾಸ್ ರಸ್ತೆಯಲ್ಲಿರುವ 28 ಪ್ರಮುಖ ಜಂಕ್ಷನ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಈ ಹೊಸ ವ್ಯವಸ್ಥೆ ಪ್ರತಿ ಜಂಕ್ಷನ್‌ನಲ್ಲಿರುವ ವಾಹನಗಳ ದಟ್ಟಣೆಯ…

Read More

ಬೆಂಗಳೂರು: ಅತ್ತ ಸಾಮಾಜಿಕ ಜಾಲತಾಣದಲ್ಲಿ ಬೆಳ್ಳುಳ್ಳಿ ಕಬಾಬ್ ಸಾಕಷ್ಟು ಟ್ರೆಂಡ್​​ ಆಗುತ್ತಿದ್ದರೆ ಇತ್ತ ಬೆಳ್ಳುಳ್ಳಿ ಬೆಲೆ ಗಗನಕ್ಕೆ ಏರಿದೆ. ಇದರಿಂದ ಬೆಳ್ಳುಳ್ಳಿಯಿಂದ ತಯಾರಿಸುವ ಪದಾರ್ಥಗಳ ಬೆಲೆಯೂ ಕೂಡ ಏರಿಕೆಯಾಗುವ ಸಾಧ್ಯತೆ ಇದೆ. ಹೀಗಾಗಿ ಬೆಳ್ಳುಳ್ಳಿ ಕಬಾಬ್​ ತಿನ್ನಬೇಕೆಂಬ ಆಸೆ ಇಟ್ಟುಕೊಂಡವರಿಗೆ ಬೆಲೆಯ ಬಿಸಿ ತಟ್ಟಲಿದೆ. ರಾಜ್ಯಾದ್ಯಂತ ಬೆಳ್ಳುಳ್ಳಿ ಪೂರೈಕೆಯಲ್ಲಿ ಕುಸಿತ ಕಂಡಿದೆ. ಹೀಗಾಗಿ ಬೆಳ್ಳುಳ್ಳಿ ಬೆಲೆ ಏರಿಕೆಯಾಗಿದೆ. Electoral Bonds: ಚುನಾವಣಾ ಬಾಂಡ್ ಯೋಜನೆ ರದ್ದುಗೊಳಿಸಿ ಮಹತ್ವದ ತೀರ್ಪು ನೀಡಿದ ಸುಪ್ರೀಂ ಯಶವಂತಪುರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಯಾರ್ಡ್‌ನಲ್ಲಿ ಬೆಳ್ಳುಳ್ಳಿಯ ಪೂರೈಕೆ ಶೇ.50 ರಷ್ಟು ಕುಸಿದಿದೆ. ಇದರಿಂದ ಕೆಜಿ ಬೆಳ್ಳುಳ್ಳಿಗೆ 350 ರೂ. ಚಿಲ್ಲರೆ ಮಾರುಕಟ್ಟೆಯಲ್ಲಿ 400 ರೂ.ಗೆ ತಲುಪಿದೆ. ಬೆಂಗಳೂರು ಸಗಟು ಬೆಳ್ಳುಳ್ಳಿ ಮಾರಾಟಗಾರ ಮಾತನಾಡಿ, ಬೆಂಗಳೂರಿಗೆ ಸಾಮಾನ್ಯವಾಗಿ ದಿನಕ್ಕೆ 40 ಕೆಜಿ ತೂಕವಿರುವ 3,000 ಬೆಳ್ಳುಳ್ಳಿ ಚೀಲ ಬರುತ್ತಿದ್ದವು. ಆದರೆ ಕಳೆದ ಕೆಲವು ದಿನಗಳಿಂದ ಪೂರೈಕೆಯು ಶೇಕಡಾ 50 ರಷ್ಟು ಕಡಿಮೆಯಾಗಿದೆ. ಹೀಗಾಗಿ ದರ ಏರಿಕೆಯಾಗಿದೆ. ಉತ್ತರ…

Read More

ಧಾರವಾಡ: 2014ರ ನಂತರ ನಮ್ಮ ದೇಶದಲ್ಲಿ ಶೇ.75 ರಷ್ಟು ಭಯೋತ್ಪಾದನೆ ಕಡಿಮೆಯಾಗಿದೆ. ನಕ್ಸಲಿಸಂ ಕೂಡ ಶೇ.75 ರಷ್ಟು ಕಡಿಮೆಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, ಈ ಹಿಂದೆ ದೇಶದ ಬೇರೆ ಬೇರೆ ಜಾಗದಲ್ಲಿ ಬಾಂಬ್ ಸ್ಪೋಟ್ ಆಗುತ್ತಿದ್ದವು. ಈಗ ಅವ್ಯಾವ ಘಟನೆಗಳು ನಡೆದಿಲ್ಲ. ಗಡಿಯಲ್ಲಿ ಅಂಗಡಿ ವ್ಯಾಪಾರಿಯೊಬ್ಬನಿಗೆ ಹೊಡೆದದ್ದನ್ನು ಬಿಟ್ಟರೆ ಭಯೋತ್ಪಾದಕ ಘಟನೆಗಳು ಕಡಿಮೆಯಾಗಿವೆ. ಮೋದಿ ಸರ್ಕಾರದ ಸಂಕಲ್ಪವೇ ಶೂನ್ಯ ಭಯೋತ್ಪಾದನೆ. ಇದನ್ನು ಅನುಸರಿಸಿದ ಪರಿಣಾಮ ಇವತ್ತು ದೇಶ ಸುರಕ್ಷಿತವಾಗಿದೆ. ಯಾವ ದೇಶ ಸುರಕ್ಷಿತವಾಗಿರುತ್ತದೆಯೋ ಆ ದೇಶ ಸಮೃದ್ಧಿ ಹೊಂದಿ ನೆಮ್ಮದಿಯಿಂದ ಇರುತ್ತದೆ ಎಂದರು. ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರು ಬಿಜೆಪಿ ದೇಶ ಒಡೆದ ಪಕ್ಷ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಜೋಶಿ, ಮೊಯ್ಲಿ ಅವರಿಗೆ ಇತಿಹಾಸ ಗೊತ್ತಿಲ್ಲ. ಅವರು ಸೋಲಿನ ಹತಾಶೆಯಲ್ಲಿ ಈ ರೀತಿ ಮಾತನಾಡುತ್ತಿದ್ದಾರೆ. ನಾಲ್ಕು ರಾಜ್ಯದಲ್ಲಿ ಅವರು ಸೋತರು. ಎಲ್ಲ ಕಾರಣದಿಂದ ಅಪ್ರಬುದ್ಧರಾಗಿ ಮಾತನಾಡುತ್ತಿದ್ದಾರೆ. ಮೊಯ್ಲಿ ಅವರು ಪುಸ್ತಕ…

Read More

ಬೆಂಗಳೂರು: ರಾಜ್ಯ ಸರ್ಕಾರ 2024-25ನೇ ಸಾಲಿನ ಬಜೆಟ್ ನಾಳೆ ಮಂಡನೆಯಾಗಲಿದ್ದು  ಬೆಂಗಳೂರಿನ ಅಭಿವೃದ್ಧಿಗೆ ಬಜೆಟಲ್ಲಿ ಹಲವು ನಿರೀಕ್ಷೆ ಈಗಾಗಲೇ ಬಿಬಿಎಂಪಿ ಯಿಂದ ರೂಪುರೇಷೆ ಸಿದ್ದಬಿಬಿಎಂಪಿಯಿಂದ ಆಗುವ ಕಾಮಗಾರಿಗೆ ಪ್ರತ್ಯೇಕ ಬೇಡಿಕೆ Electoral Bonds: ಚುನಾವಣಾ ಬಾಂಡ್ ಯೋಜನೆ ರದ್ದುಗೊಳಿಸಿ ಮಹತ್ವದ ತೀರ್ಪು ನೀಡಿದ ಸುಪ್ರೀಂ ಸರ್ಕಾರದ ಮುಂದೆ 8050 ಕೋಟಿ ಬೃಹತ್ ಮೊತ್ತದ ಅನುದಾನಕ್ಕೆ ಪ್ರಸ್ತಾವನೆ ಬಜೆಟ್ ಮೇಲೆ ‘ಬೃಹತ್’ ನಿರೀಕ್ಷೆ ಇಟ್ಟಿರುವ ಅಧಿಕಾರಿಗಳ ತಂಡ ಪೌರಕಾರ್ಮಿಕರ ಏಳಿಗೆಗೆ ಬಜೆಟಲ್ಲಿ ನೀರಿಕ್ಷೆಸಿಲಿಕಾನ್ ಸಿಟಿ ಟ್ರಾಫಿಕ್ ನಿವಾರಣೆಗೆ ಸುರಂಗಮಾರ್ಗ ಬೆಂಗಳೂರಿನ ಪ್ರಮುಖ ಜಂಕ್ಷನ್ ಗಳಲ್ಲಿ ಸುರಂಗ ಮಾರ್ಗದ ಪ್ರಸ್ತಾವನೆ ಮೊದಲ ಹಂತದಲ್ಲಿ 3 ಕಿ.ಮೀ.ಸುರಂಗ ಮಾರ್ಗಕ್ಕೆ ಪ್ಲಾನ್ ಸುರಂಗ ಮಾರ್ಗಕ್ಕೆ 1500 ಕೋಟಿ ಪ್ರಸ್ತಾವನೆ ಇಂದಿರಾ ಕ್ಯಾಂಟೀನ್ ಗೆ 200 ಕೋಟಿ ಇಂದಿರಾ ಕ್ಯಾಂಟೀನ್ ಆಹಾರ ಪೂರೈಕೆಗೆ 60 ಕೋಟಿ ಹೊಸ ಕ್ಯಾಂಟೀನ್ ನಿರ್ಮಾಣಕ್ಕೆ 30 ಕೋಟಿ ಬಾಕಿ ಬಿಲ್ ಪಾವತಿಗೆ 110 ಕೋಟಿ ಪ್ರಸ್ತಾವನೆ ಘನತ್ಯಾಜ್ಯ ನಿರ್ವಹಣೆಗೆ 600 ಕೋಟಿಗೆ ಪ್ರಸ್ತಾವನೆ…

Read More

ಬೆಂಗಳೂರು:  ಸರ್ಕಾರಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳನ್ನುಆಚರಣೆ ಮಾಡಬಾರದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಷ್ಟ್ರೀಯ ಹಬ್ಬ, ನಾಡಹಬ್ಬ ಮತ್ತು ಜಯಂತಿಗಳನ್ನು ಆಚರಿಸಬಹುದು. ಅದು ಹೊರತುಪಡಿಸಿ ಧಾರ್ಮಿಕ ಹಬ್ಬಗಳನ್ನು ಆಚರಿಸಬಾರದು ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ  ಸುತ್ತೋಲೆ ಹೊರಡಿಸಿದೆ. Electoral Bonds: ಚುನಾವಣಾ ಬಾಂಡ್ ಯೋಜನೆ ರದ್ದುಗೊಳಿಸಿ ಮಹತ್ವದ ತೀರ್ಪು ನೀಡಿದ ಸುಪ್ರೀಂ ಯುಗಾದಿ, ರಂಜಾನ್, ಕ್ರಿಸ್ಮಸ್, ಈದ್ ಮಿಲಾದ್, ಸಂಕ್ರಾತಿ ಹಬ್ಬ ಆಚರಣೆಗೆ ನಿರ್ಬಂಧ ವಹಿಸಿದ್ದು  ಕೇವಲ 10 ರಾಷ್ಟ್ರೀಯ ಹಬ್ಬಗಳ ಆಚರಣೆ ಮಾತ್ರ ಸರ್ಕಾರದಿಂದ ಅವಕಾಶ ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ ಸೂಚನೆ ಮೇರೆಗೆ   10 ಅನುಮೋದಿತ ರಾಷ್ಟ್ರೀಯ ಹಬ್ಬಗಳನ್ನು ಮಾತ್ರ ಶಾಲೆ, ಕಾಲೇಜುಗಳಲ್ಲಿ ಆಚರಿಸಬಹುದು. ಧಾರ್ಮಿಕ ಹಬ್ಬ ಆಚರಿಸಿದರೆ ಪ್ರಾಂಶುಪಾಲರು, ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸುತ್ತೋಲೆಯಲ್ಲಿ ಎಚ್ಚರಿಕೆ ನೀಡಲಾಗಿದೆ. Electoral Bonds: ಚುನಾವಣಾ ಬಾಂಡ್ ಯೋಜನೆ ರದ್ದುಗೊಳಿಸಿ…

Read More

ಕೋಲಾರ: ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನ ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ ಕೆಜಿಎಫ್‍ನ ಸಂಜಯ್ ಗಾಂಧಿ ನಗರದಲ್ಲಿ ನಡೆದಿದೆ. ಹತ್ಯೆಯಾದ ಮಹಿಳೆಯನ್ನು ಪವಿತ್ರ (36) ಎಂದು ಗುರುತಿಸಲಾಗಿದೆ. ಮೃತಳ ಪತಿ ಲೋಕೇಶ್ ಹತ್ಯೆಗೈದ ಆರೋಪಿಯಾಗಿದ್ದಾನೆ. ಮಹಿಳೆ ಸಂಜೆ ಗಾರ್ಮೆಂಟ್ಸ್ ಕೆಲಸ ಮುಗಿಸಿಕೊಂಡು ಬರುತ್ತಿರುವ ವೇಳೆ ಆರೋಪಿ ಪತಿ ಮಹಿಳೆಯ ದೇಹದ ಹಲವೆಡೆ ಚಾಕುವಿನಿಂದ ಇರಿದಿದ್ದಾನೆ. ತೀವ್ರ ರಕ್ತಸ್ರಾವವಾಗಿ ಆಕೆ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಅಸುನೀಗಿದ್ದಾಳೆ. ಕೊಲೆಯ ಬಳಿಕ ಆತ ತಲೆಮರೆಸಿಕೊಂಡಿದ್ದು ಆತನ ಪತ್ತೆಗೆ ಪೊಲೀಸರು (Police) ಬಲೆ ಬೀಸಿದ್ದಾರೆ.  https://ainlivenews.com/300-units-of-free-electricity-for-1-crore-houses-how-to-apply-online/ ಲೊಕೇಶ್ ಹಾಗೂ ಪವಿತ್ರ ನಡುವಿನ ಸಂಬಂಧ ಇತ್ತೀಚೆಗೆ ಕೆಟ್ಟಿತ್ತು. ಈ ವಿಚಾರವಾಗಿ ಗಲಾಟೆಯಾಗಿ ಇಬ್ಬರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ವರದಕ್ಷಿಣೆ ಕಿರುಕುಳದ ಪ್ರಕರಣ ಸಹ ದಾಖಲಾಗಿತ್ತು. ಇದೇ ಗಲಾಟೆ ಇದೀಗ ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿದೆ. ಈ ಸಂಬಂಧ ಊರಿಗಾಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಕೆಜಿಎಫ್ ಎಸ್‍ಪಿ ಶಾಂತರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

Read More