Author: AIN Author

ಬೆಂಗಳೂರು: ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದಕ್ಕೆ ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣವನ್ನು ರದ್ದುಗೊಳಿಸುವಂತೆ ಸುಪ್ರೀಂಕೋರ್ಟ್‌ಗೆ (Supreme Court) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅರ್ಜಿ ಸಲ್ಲಿಸಿದ್ದಾರೆ. ಫೆ.19 ರಂದು ಈ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ. Electoral Bonds: ಚುನಾವಣಾ ಬಾಂಡ್ ಯೋಜನೆ ರದ್ದುಗೊಳಿಸಿ ಮಹತ್ವದ ತೀರ್ಪು ನೀಡಿದ ಸುಪ್ರೀಂ ಫೆಬ್ರವರಿ 2022 ರಲ್ಲಿ ಗುತ್ತಿಗೆದಾರ ಸಂತೋಷ್ ಅವರ ಆತ್ಮಹತ್ಯೆಯ ಹಿನ್ನಲೆಯಲ್ಲಿ ಅಂದಿನ ಸಚಿವ ಕೆಎಸ್ ಈಶ್ವರಪ್ಪ ಅವರ ರಾಜೀನಾಮೆ ಮತ್ತು ಬಂಧನಕ್ಕೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಪ್ರತಿಭಟನೆ ವೇಳೆ ಮುಂಜಾಗ್ರತಾ ಕ್ರಮವಾಗಿ ಅವರನ್ನು ಬಂಧಿಸಿ ಕ್ರಿಮಿನಲ್ ಪ್ರಕರಣವನ್ನು ದಾಖಲಾಗಿಸಲಾಗಿತ್ತು ಕಳೆದ ವಾರ ಈ ಪ್ರಕರಣದ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ (Karnataka High Court) ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ವಿಚಾರಣಾ ನ್ಯಾಯಾಲಯದ ವಿಚಾರಣೆಯನ್ನು ರದ್ದುಗೊಳಿಸಲು ನಿರಾಕರಿಸಿತು ಮತ್ತು ಫೆಬ್ರವರಿ 26 ರಂದು ವಿಚಾರಣಾ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆಯೂ ಸೂಚಿಸಿತ್ತು ಈ ಆದೇಶದ ವಿರುದ್ಧ…

Read More

ಇಂಗ್ಲೆಂಡ್​ ವಿರುದ್ಧದ ಮೂರನೇ ಟೆಸ್ಟ್​ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿದರು. ರಾಜ್​ಕೋಟ್​ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್​ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆದರೆ, ಆಂಗ್ಲರು ಭಾರತಕ್ಕೆ ಆರಂಭದಲ್ಲೇ ಶಾಕ್ ನೀಡಿದರು. ಗಮನಿಸಿ: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಇನ್ನೂ ಹಣ ಬಂದಿಲ್ಲವೇ: ಈ ಕೂಡಲೇ ಈ ಕೆಲಸ ಮಾಡಿ ನೋಡಿ! ಕೇವಲ 33 ರನ್​ ಕಲೆ ಹಾಕುವಷ್ಟರಲ್ಲೇ ಭಾರತ 3 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿತು. ಆರಂಭಿಕ ಬ್ಯಾಟರ್ ಜೈಸ್ವಾಲ್ 10, ಶುಭ್​ಮನ್ ಗಿಲ್ ಶೂನ್ಯ (0) ಹಾಗೂ ರಜತ್ ಪಟೀದಾರ್ 5 ರನ್​ ಗಳಿಸಿ ವಿಕೆಟ್ ಒಪ್ಪಿಸಿದರು. ಸಂಕಷ್ಟದಲ್ಲಿದ್ದ ಭಾರತಕ್ಕೆ ಹಿಟ್​ ಮ್ಯಾನ್ ರೋಹಿತ್​ ಶರ್ಮಾ ಆಸರೆಯಾದರು. ರವೀಂದ್ರ ಜಡೇಜಾ ಜೊತೆ ಸೇರಿಕೊಂಡು ಜವಾಬ್ದಾರಿಯುತವಾಗಿ ಬ್ಯಾಟ್ ಬೀಸಿದರು. 174 ಎಸೆತಗಳಲ್ಲಿ 12 ಬೌಂಡರಿ ಹಾಗೂ 2 ಭರ್ಜರಿ ಸಿಕ್ಸರ್ ನೆರವಿನೊಂದಿಗೆ ಶತಕ (111*) ಪೂರೈಸಿದರು. ಈ ಮೂಲಕ ಟೆಸ್ಟ್​ ಕ್ರಿಕೆಟ್​ನಲ್ಲಿ…

Read More

ಬೆಂಗಳೂರು: ಚಿನ್ನದ ಅಂಗಡಿಗೆ (Gold) ಕನ್ನ ಹಾಕಿದ ಕಳ್ಳರು ಲಾಕರ್‌ನಲ್ಲಿದ್ದ 250 ಗ್ರಾಂ ಚಿನ್ನ, 1.8 ಲಕ್ಷ ರೂ. ನಗದು (Cash) ದೋಚಿ ಪರಾರಿಯಾದ ಘಟನೆ ನೆಟ್ಟಕಲ್ಲಪ್ಪ ಸರ್ಕಲ್‌ ಬಳಿ ನಡೆದಿದೆ. ಬಸವನಗುಡಿ ಪೊಲೀಸ್ ಠಾಣೆಯಿಂದ ಕೂಗಳತೆ ದೂರದಲ್ಲಿರುವ ಬೆನಕ ಗೋಲ್ಡ್‌ನ (Benaka Gold) ಮೂರು ಕಬ್ಬಿಣದ ಗೇಟ್ ಬೀಗ ಮುರಿದು ಕೃತ್ಯ ಮಾಡಲಾಗಿದೆ. Electoral Bonds: ಚುನಾವಣಾ ಬಾಂಡ್ ಯೋಜನೆ ರದ್ದುಗೊಳಿಸಿ ಮಹತ್ವದ ತೀರ್ಪು ನೀಡಿದ ಸುಪ್ರೀಂ ಬುಧವಾರ ಎಂದಿನಂತೆ ವ್ಯವಹಾರ ಮಾಡಿದ್ದ ಕಂಪನಿಯ ಸಿಬ್ಬಂದಿ ಗ್ರಾಹಕರಿಂದ ಚಿನ್ನಭರಣ ಖರೀದಿ ಮಾಡಿತ್ತು. ಮಧ್ಯರಾತ್ರಿ ಅಂಗಡಿಗೆ ನುಗ್ಗಿದ ಕಳ್ಳರು ಚಿನ್ನ, ಹಣ ದೋಚಿ ಪರಾರಿಯಾಗಿದ್ದಾರೆ. ಕಳ್ಳತನ ಮಾಡಿ ಸಿಸಿ ಕ್ಯಾಮೆರಾದ ಡಿವಿಆರ್‌ ಅನ್ನು ಪುಡಿ ಮಾಡಿದ್ದಾರೆ. ಕಳೆದ ರಾತ್ರಿ ರಾಮಮೂರ್ತಿ ನಗರದಲ್ಲಿದ್ದ ಬೇನಕ ಗೋಲ್ಡ್‌ಗೆ ಕನ್ನ ಹಾಕಿದ್ದರು. ಈಗ ಬಸವನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಧಾರವಾಡ: ಕಳೆದ ವರ್ಷ ಧಾರವಾಡಕ್ಕೆ ಕೇಂದ್ರ ಸರ್ಕಾರ ಮಂಜೂರು ಮಾಡಿದ್ದ ಲಲಿತ ಕಲಾ ಅಕಾಡೆಮಿಯ ಪ್ರಾದೇಶಿಕ ಕಚೇರಿ ನಿರ್ಮಾಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಧಾರವಾಡಕ್ಕೆ ಅಕಾಡೆಮಿ ಮಂಜೂರಿ ಮಾಡಿದ ಕೂಡಲೇ ರಾಜ್ಯ ಸರ್ಕಾರ ಧಾರವಾಡದ ಕೋರ್ಟ್ ವೃತ್ತದ ಬಳಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಗೆ ಲೀಜ್‌ಗೆ ನೀಡಿರುವ ಜಾಗವನ್ನು ಅಕಾಡೆಮಿಗೆ ಮಂಜೂರಿ ಮಾಡಿತ್ತು. ಕಳೆದ ಫೆಬ್ರುವರಿ 20ರಂದು ಕೇಂದ್ರದ ಸಂಸ್ಕೃತಿ ಸಚಿವರೇ ಧಾರವಾಡಕ್ಕೆ ಆಗಮಿಸಿ ಇದೇ ಸ್ಥಳದಲ್ಲಿ ಕಚೇರಿ ನಿರ್ಮಾಣಕ್ಕೆ ಶಂಕುಸ್ಥಾಪನೆ ಸಹ ನೆರವೇರಿಸಿದ್ದರು. ಈ ಜಾಗ ಕೊಡುವುದಕ್ಕೆ ಸ್ಕೌಟ್ಸ್ ಸಂಸ್ಥೆ ಮೊದಲಿನಿಂದಲೂ ಒಪ್ಪಿರಲೇ ಇಲ್ಲ. ಸರ್ಕಾರದ ಜೊತೆ ವಾದ ಮಾಡುತ್ತ, ಈಗ ಹೈಕೋರ್ಟ್ ಮೆಟ್ಟಿಲೇರಿ ಅದಕ್ಕೆ ತಡೆಯಾಜ್ಞೆ ತಂದಿದೆ. ಹೀಗಾಗಿ ಇಲ್ಲಿ ಪುನಃ ಸ್ಕೌಟ್ಸ್ ಸಂಸ್ಥೆಯ ಚಟುವಟಿಕೆಗಳೇ ಮುಂದುವರೆದಿದ್ದು, ಅಕಾಡೆಮಿ ಕೆಲಸಗಳು ನಿಂತು ಹೋಗಿವೆ. https://ainlivenews.com/300-units-of-free-electricity-for-1-crore-houses-how-to-apply-online/ ಅಷ್ಟಕ್ಕೂ ಈ ಜಾಗಕ್ಕಾಗಿ ಸ್ಕೌಟ್ಸ್ ಸಂಸ್ಥೆ ಮತ್ತು ಕೇಂದ್ರ ಸರ್ಕಾರದ ಮಧ್ಯೆ ಒಂದು ವರ್ಷದಿಂದ ತಿಕ್ಕಾಟ ನಡೆದೇ ಇತ್ತು. ಇಲ್ಲಿನ 1 ಎಕರೆ…

Read More

ಬೆಂಗಳೂರು: ಏರಿಯಾದಲ್ಲಿ ಹವಾ ಇಟ್ಟಿರೋ ರೌಡಿಶೀಟರ್‌ಗಳ ಜೊತೆ ಸ್ನೇಹ ಬೆಳೆಸೋ ಹುಡುಗಿಯರು ಈ ಸ್ಟೋರಿ ನೋಡಲೇಬೇಕು. ನಿಮ್ಮ ನಿಸ್ವಾರ್ಥ ಸ್ನೇಹ, ಪ್ರೀತಿಯನ್ನ ರೌಡಿ ಶೀಟರ್‌ಗಳು (Rowdy Sheeter) ದುರುಪಯೋಗ ಪಡಿಸಿಕೊಳ್ಳಬಾರದು. ಏಕೆಂದರೆ ಇಲ್ಲೊಬ್ಬ ರೌಡಿ ಶೀಟರ್ ತನ್ನ ಪರಿಚಯಸ್ಥ ಮಹಿಳೆಗೆ ಜೈಲಿನಲ್ಲಿದ್ದುಕೊಂಡೇ (Bengaluru Jail) ಮಾರ್ಫ್ ಮಾಡಿದ ಬೆತ್ತಲೆ ಫೋಟೋ ಕಳುಹಿಸಿ ಲಕ್ಷ ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾನೆ. ರೌಡಿ ಮನೋಜ್ ಅಲಿಯಾಸ್‌ ಕೆಂಚ, ಬೆತ್ತಲೆ ಫೋಟೊ ಇಟ್ಕೊಂಡು ಬ್ಲ್ಯಾಕ್‌ಮೇಲ್‌ ಮಾಡಿದ್ದಾನೆ Electoral Bonds: ಚುನಾವಣಾ ಬಾಂಡ್ ಯೋಜನೆ ರದ್ದುಗೊಳಿಸಿ ಮಹತ್ವದ ತೀರ್ಪು ನೀಡಿದ ಸುಪ್ರೀಂ ಕಳೆದ ಆಗಸ್ಟ್‌ನಲ್ಲಿ ಆರೋಪಿ ಕೆಂಚ, ಮಹಿಳೆಯ (Women) ತಾಯಿಗೆ ವಾಟ್ಸಪ್‌ ಮೂಲಕ ಮಗಳ ಬೆತ್ತಲೆ ಫೋಟೋ ಕಳುಹಿಸಿ 40 ಸಾವಿರ ರೂ. ಹಣಕ್ಕೆ ಡಿಮ್ಯಾಂಡ್‌ ಮಾಡಿದ್ದ. ಅದರಂತೆ ಮಹಿಳೆ ತಾಯಿ ಚೋಟು ಎಂಬವನ ಖಾತೆಗೆ 20 ಸಾವಿರ ರೂ., ಮತ್ತೊಬ್ಬನ ಖಾತೆಗೆ 20 ಸಾವಿರ ರೂ. ಹಣ ಹಾಕಿದ್ದರು ನಂತರ ಕೆಂಚನ ಸ್ನೇಹಿತ ಎಂದು ಹೇಳಿಕೊಂಡು…

Read More

ವಿಧಾನಪರಿಷತ್:‌   ಕೇಂದ್ರದಿಂದ ರಾಜ್ಯಕ್ಕೆ ನೀಡುವ ತೆರಿಗೆ ಪಾಲಿನಲ್ಲಿ ಭಾರೀ ಅನ್ಯಾಯವಾಗುತ್ತಿದ್ದು, ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ ಮಾತು ವಿಧಾನಪರಿಷತ್‍ನಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಭಾರೀ ಗದ್ದಲ, ಕೋಲಾಹಲ, ಮಾತಿನ ಚಕಮಕಿ, ಆರೋಪ-ಪ್ರತ್ಯಾರೋಪಗಳು ನಡೆದು ಸದನವನ್ನು ಕೆಲಕಾಲ ಮುಂದೂಡಿದ ಪ್ರಸಂಗ ಜರುಗಿತು. ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‍ನ ಯು.ಬಿ.ವೆಂಕಟೇಶ್ ಅವರು ಕೇಂದ್ರದಿಂದ ರಾಜ್ಯಕ್ಕೆ ನೀಡುವ ತೆರಿಗೆ ಪಾಲಿನ ಮೊತ್ತದ ಬಗ್ಗೆ ಪ್ರಶ್ನೆ ಕೇಳಿದ್ದರು. ಇದಕ್ಕೆ ಸದನದಲ್ಲಿ ಸುದೀರ್ಘ ಉತ್ತರ ನೀಡಿದ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೇಂದ್ರದಿಂದ ನಮಗೆ ಒಟ್ಟು 11,495 ಕೋಟಿ ಹಣ ಬರಬೇಕು. ಆದರೆ ಒಂದೇ ಒಂದು ರೂಪಾಯಿಯೂ ಕೊಡದಿರುವ ಕಾರಣ ಅಭಿವೃದ್ಧಿ ಕಾರ್ಯಗಳು ಸ್ಥಗಿತವಾಗಿದೆ ಎಂದು ಆರೋಪಿಸಿದರು. ಈ ವೇಳೆ ಬಿಜೆಪಿ ಸದಸ್ಯ ರುದ್ರಗೌಡ ಅವರು ಎದ್ದುನಿಂತು ಮಾತನಾಡಲು ಮುಂದಾಗುತ್ತಿದ್ದಂತೆ ಸಿಡಿಮಿಡಿಗೊಂಡ ಸಿದ್ದರಾಮಯ್ಯಘಿ, ನಾನಿನ್ನು ಉತ್ತರವನ್ನೇ ಮುಗಿಸಿಲ್ಲ. ಏಯ್ ಕುಳಿತುಕೊಳ್ಳಿ ಎಂದು ಏರಿದ ಧ್ವನಿಯಲ್ಲಿ ಗದರಿಸಲು ಮುಂದಾದರು. ಇದರಿಂದ ಕೆರಳಿದ ಬಿಜೆಪಿ…

Read More

ವಿಧಾನಪರಿಷತ್:‌   ಮುಖ್ಯಮಂತ್ರಿ ಸಿದ್ದರಾಮಯ್ಯನವರು ʼಗೂಂಡಾʼ ಪದ  ಬಳಸಿದ್ದು ಅಪಶಬ್ದವಾಗಿದ್ದು ಈ ಪದ ಬಳಕೆಯ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು  ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಟಿ. ಎ. ಶರವಣ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಪಕ್ಷದ ಸದಸ್ಯರನ್ನು ಗೂಂಡಾಗಳಿಗೆ ಹೋಲಿಸಿ, ಥೂ, ಛಿ ಎಂದು ಬೆದರಿಸಲು ಪ್ರಯತ್ನಿಸಿದರು ಎಂದು ಹೇಳಿಕೆ ನೀಡಿದ್ದಾರೆ. ಇದು ಸದನಕ್ಕೆ ಸಿಎಂ ಅಪಮಾನಿಸಿದ್ದಾರೆ  ಸರ್ಕಾರ ಹೀಗೆ ಮುಂದುವರೆದರೆ ನಾವು ಬಾಯ್ಕಾಟ್ ಮಾಡುತ್ತೇವೆ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು. ಸಭಾಪತಿಗಳು ಕೂಡ ಸರಿಯಾದ ರೀತಿಯಲ್ಲಿ ಇದಕ್ಕೆ ಸಹಕಾರ ನೀಡಲಿಲ್ಲ. ಅಪ ಶಬ್ದ ಬಳಕೆಗೆ ಕ್ಷಮೆಯಾಚಿಸಬೇಕೆಂದು ಕೋರಿಕೊಂಡಾಗ, ಅದನ್ನು ಪರಿಗಣಿಸಿದೆ, ಅದೇ ರೀತಿ ವರ್ತನೆಯನ್ನು ಮುಂದುವರಿಸಿದರು. ಈ ಕಾರಣದಿಂದಾಗಿ ಸಭಾತ್ಯಾಗ ಮಾಡಲಾಗಿದೆ ಎಂದು ಪರಿಷತ್‌ ನಲ್ಲಿ ಶರವಣ ಅವರು ಹೇಳಿಕೆ ನೀಡಿದರು.

Read More

ವಿಧಾನ ಸಭೆ :  ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ -2024 ವನ್ನು ಇಂದು ಕರ್ನಾಟಕ ವಿಧಾನ ಸಭೆಯು ಅಂಗೀಕರಿಸಿತು. ಸದನದಲ್ಲಿ ವಿಧೇಯಕವನ್ನು ಕುರಿತು ಮಾತನಾಡಿದ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರು ವಿಧೇಯಕದ 17ನೇ ಪ್ರಕರಣದಲ್ಲಿ (06) ರಾಜ್ಯ ಸರ್ಕಾರದ ಇಲಾಖೆಗಳು, ಉದ್ಯಮಗಳು, ಸ್ವಾಯತ್ತ ಸಂಸ್ಥೆಗಳು, ಸಹಕಾರ ಮತ್ತು ಸಾರ್ವಜನಿಕ ಉದ್ಯಮಗಳು, ಬ್ಯಾಂಕುಗಳು, ಇತರ ಹಣಕಾಸು ಸಂಸ್ಥೆಗಳು, ಖಾಸಗಿ ಕೈಗಾರಿಕೆಗಳು ಮತ್ತು ವಿಶ್ವವಿದ್ಯಾಲಯಗಳ ಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯನ್ನು ಬಳಸಬೇಕು. ನಾಮಫಲಕಗಳ ಒಟ್ಟಾರೆ ವಿಸ್ತೀರ್ಣದಲ್ಲಿ ಕನ್ನಡ ಭಾಷೆಯನ್ನು ಮೇಲ್ಭಾಗದಲ್ಲಿ ಶೇ.60 ರಷ್ಟು ಪ್ರದರ್ಶಿಸುವುದು ಕಡ್ಡಾಯ ಮಾಡಲಾಗಿದೆ. ಶೇ.40 ರಷ್ಟು ಇತರ ಭಾಷೆಯನ್ನು ಕೆಳಭಾಗದಲ್ಲಿ ಬಳಸಬಹುದಾಗಿದೆ. ಈ ಹಿಂದೆ ಇದನ್ನು ಶೇ.50:50 ಎಂದು ಆದೇಶ ಹೊರಡಿಸಲಾಗಿತ್ತು ಎಂದು ವಿವರಿಸಿದರು. ಇದಲ್ಲದೆ, ವಿಧೇಯಕದ 07 (02) ರಲ್ಲಿ ಜಾರಿ ಸಮಿತಿಯಲ್ಲಿ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರನ್ನು ಸಂಚಾಲಕರೆಂದು ಯೋಜಿಸಲಾಗಿತ್ತು. ಆದರೆ,…

Read More

ಮೈಸೂರು: ಕಾನೂನು ಉಲ್ಲಂಘಿಸಿ ಲೇ ಔಟ್ ನಿರ್ಮಾಣ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮಾಜಿ ಎಂಎಲ್‌ಎ ವಿರುದ್ಧ ಎಫ್‌ಐಆರ್ ಮಾಡಿ, ತನಿಖೆ ಮಾಡುವಂತೆ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಮೈಸೂರು ತಾಲೂಕಿನ ಉದ್ಬೂರು ಗ್ರಾಮ ಸರ್ವೇ ನಂ.315 ಮತ್ತು ಸರ್ವೇ ನಂ.317 ರಲ್ಲಿ ಒಟ್ಟು 9 ಎಕರೆ 21 ಗುಂಟೆ ಜಾಗದಲ್ಲಿ ನಿರ್ಮಾಣ ಎಂ.ಕೆ. ಸೋಮಶೇಖರ್ ಅವರು ಪತ್ನಿ ಹೆಸರಿನಲ್ಲಿ ಬಡಾವಣೆ ಮಾಡುತ್ತಿದ್ದಾರೆ. ಸುಳ್ಳು ದಾಖಲೆ ಹಾಗೂ ಸರ್ಕಾರಿ ಪತ್ರ ನಕಲಿ ಮಾಡಿರುವ ಆರೋಪದ ಕಾರಣಕ್ಲೆ ಸೋಮಶೇಖರ್ ದಂಪತಿ ಹಾಗೂ ಇತರೆ ಅಧಿಕಾರಿಗಳ ವಿರುದ್ಧ ರೇರಾ ಅಧಿಕಾರಿ ಆದೀಶ್ ಸಾಗರ್ ದೂರು ನೀಡಿದ್ದರು. https://ainlivenews.com/heart-attack-that-will-happen-in-6-months-can-be-detected-by-blood-test/ ಎಂ.ಕೆ.ಸೋಮಶೇಖರ್ ಮತ್ತು ಪತ್ನಿ ಶ್ರೀಮತಿ ಎಲ್.ಕುಸುಮಾ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಕೆಲವು ಅಧಿಕಾರಿಗಳು, ಉದ್ಬೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಭೂಮಾಪಕರು ಮತ್ತು ಇನ್ನಿತರರು ಸೇರಿಕೊಂಡು  ಅಕ್ರಮವಾಗಿ ಹಣ ಸಂಪಾದಿಸಲು ಕಾನೂನು ಬಾಹಿರ ಲೇ ಔಟ್ ನಿರ್ಮಾಣ ಮಾಡಿದ್ದಾರೆ.…

Read More

ನವದೆಹಲಿ: ಉತ್ತರ ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ರೈತರೊಂದಿಗೆ ಚರ್ಚೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಕೃಷಿ ಸಚಿವ ಅರ್ಜುನ್ ಮುಂಡಾ ಹೇಳಿದ್ದಾರೆ. ಅಲ್ಲದೇ ಚರ್ಚೆಗೆ ಯೋಗ್ಯವಾದ ವಾತಾವರಣವನ್ನು ರೈತರು ನಿರ್ಮಾಣ ಮಾಡಬೇಕು ಎಂದು ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಾವು ಚರ್ಚೆಗೆ ಸಿದ್ಧರಿದ್ದೇವೆ. ನಾವು ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡು ಮಾತುಕತೆ ನಡೆಸಬೇಕಾಗಿದೆ ಎಂದು ಹೇಳಿದರು. ಚರ್ಚೆಯ ವಾತಾವರಣವನ್ನು ಕಾಪಾಡಿಕೊಳ್ಳಲು ರೈತ ಸಂಘವನ್ನು ನಾನು ವಿನಂತಿಸುತ್ತೇನೆ. ರೈತರ ಸಂಘದೊಂದಿಗೆ ಸಕಾರಾತ್ಮಕ ಚರ್ಚೆ ನಡೆಸುವ ನಮ್ಮ ಪ್ರಯತ್ನಗಳು ಮುಂದುವರಿಯುತ್ತವೆ ಎಂದು ಹೇಳಿದರು. https://ainlivenews.com/heart-attack-that-will-happen-in-6-months-can-be-detected-by-blood-test/ ರೈತರು ದೆಹಲಿಗೆ ತೆರಳಲು ಉದ್ದೇಶಿಸಿರುವ ದೆಹಲಿ ಚಲೋ ಮೆರವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಸಿಂಘು ಮತ್ತು ಟಿಕ್ರಿ ಗಡಿಯಲ್ಲಿ ಪೊಲೀಸರು ಹಲವಾರು ಪದರಗಳ ಬ್ಯಾರಿಕೇಡ್‌ಗಳನ್ನು ನಿರ್ಮಿಸಿದ್ದರಿಂದ ದೆಹಲಿಯ ಗಡಿ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಹರಿಯಾಣದ ಸಿಂಘು ಮತ್ತು ಟಿಕ್ರಿ ಗಡಿಗಳು ಸಂಚಾರಕ್ಕಾಗಿ ಸಂಪೂರ್ಣವಾಗಿ ಮುಚ್ಚಲ್ಪಟ್ಟಿದ್ದರೂ, ಗಾಜಿಪುರ ಗಡಿಯಲ್ಲಿ ವಾಹನ ಸಂಚಾರವನ್ನು…

Read More