Author: AIN Author

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ಚಳುವಳಿ ಇಂದು ಮೂರನೇ ದಿನಕ್ಕೆ ಕಾಲಿಟ್ಟಿದೆ. ಕಳೆದ ಎರಡು ದಿನಗಳಿಂದ ರೈತರ ಪ್ರತಿಭಟನೆ ಹಿನ್ನೆಲೆ ದೆಹಲಿ ಸೇರಿದಂತೆ ಪಂಜಾಬ್, ಹರ್ಯಾಣ ಸಾಕಷ್ಟು ಕಡೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇಂದು ರೈತರು ಪಂಜಾಬ್​ನಲ್ಲಿ ರೈಲುಗಳನ್ನು ತಡೆದು ಪ್ರತಿಭಟನೆ ನಡೆಸಲಿದ್ದಾರೆ. ಮಂಗಳವಾರ ರೈತರ ಚಳವಳಿಯಿಂದಾಗಿ ಪೊಲೀಸರು ಹಾಗೂ ರೈತರ ನಡುವೆ ಘರ್ಷಣೆ ಏರ್ಪಟ್ಟಿತ್ತು. ರೈತರನ್ನು ದೆಹಲಿಗೆ ಪ್ರವೇಶಿಸದಂತೆ ತಡೆಯಲು ಪೊಲೀಸರು ಡ್ರೋನ್ ಮೂಲಕ ಅಶ್ರುವಾಯು ಶೆಲ್​ಗಳನ್ನು ಸಿಡಿಸಿದ್ದರು. ರೈತರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು, ಇಂದು ಪಂಜಾಬ್ ರೈತ ಸಂಘಟನೆಗಳು ರೈಲು ತಡೆಯಲು ನಿರ್ಧರಿಸಿವೆ. ರೈತರು ದೆಹಲಿಗೆ ಬರುವುದನ್ನು ತಡೆಯಲು ಗಡಿಯಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಟಿಕ್ರಿ, ಸಿಂಗು ಮತ್ತು ಝರೋಡಾ ಗಡಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ. ರೈತರು ಟ್ರ್ಯಾಕ್ಟರ್​ ಮತ್ತು ಟ್ರಾಲಿಗಳೊಂದಿಗೆ ರಾಜಧಾನಿ ಪ್ರವೇಶಿಸಲು ಸಾಧ್ಯವಾಗುತ್ತಿಲ್ಲ. ಉತ್ತರ ಪ್ರದೇಶ ಜೊತೆಗಿನ ಚಿಲ್ಲಾ-ಗಾಜಿಪುರ ಗಡಿಯನ್ನೂ ಮುಚ್ಚಲಾಗಿದೆ. ದೆಹಲಿ ಪೊಲೀಸರು ಪ್ರವೇಶ, ನಿರ್ಗಮನ ಸ್ಥಳಗಳಲ್ಲಿ ಬ್ಯಾರಿಕೇಡ್​ಗಳು,…

Read More

ಚಿತ್ರದುರ್ಗ : ಅಯೋಧ್ಯಾ, ಕಾಶಿ, ಮಥುರಾ ಈ ದೇಶದ ಬಹುಸಂಖ್ಯಾತರ ಅಸ್ಮಿತೆಯಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಚಿವ ಎ.ನಾರಾಯಣಸ್ವಾಮಿ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿಯವರ ಅಪೇಕ್ಷೆಯಂತೆ ಅಯೋಧ್ಯೆ ರಾಮ ಮಂದಿರದಲ್ಲಿ ರಾಮನ ದರ್ಶನ ಭಾಗ್ಯವನ್ನು ಕರುಣಿಸಲಾಗಿದೆ.  ಕರ್ನಾಟಕದಿಂದ 35 ಸಾವಿರ ಮಂದಿಯನ್ನು ರಾಮನ ದರ್ಶನಕ್ಕೆ ಕಳುಹಿಸಲಾಗುತ್ತಿದೆ. ದೇಶದ ಅನೇಕ ಕ್ಯಾಬಿನೆಟ್ ಸಚಿವರುಗಳಿಗೆ ರಾಮನ ದರ್ಶನ ಸಿಕ್ಕಿಲ್ಲ. ಆದರೆ ಅತನ ಭಕ್ತರಾದ ನಿಮಗೆ ರಾಮನ ದರ್ಶನ ಮಾಡುವ ಭಾಗ್ಯ ಬಂದಿದೆ ಎಂದರು.ಚಿತ್ರದುರ್ಗದಿಂದ ಹೋಗುತ್ತಿರುವ 415 ರಾಮ ಭಕ್ತಾಧಿಗಳಿಗೆ ರಾಮನ ದರ್ಶನವಾಗುತ್ತದೆ. ರಾಮಮಂದಿರ ನಿರ್ಮಾಣಕ್ಕಾಗಿ ಅನೇಕರು ಹೋರಾಟ ಮಾಡಿದ್ದಾರೆ. ಹಲವಾರು ಜನತೆ ತಮ್ಮ ಪ್ರಾಣ ನೀಡಿದ್ದಾರೆ. https://ainlivenews.com/2000-rs-didnt-come-this-could-also-be-the-reason-fix-it-now/ ರಾಮರಾಜ್ಯದ ಕನಸು ಸಾಕಾರಗೊಳ್ಳಬೇಕಾದರೆ ರಾಮಮಂದಿರ ನಿರ್ಮಾಣವಾಗಬೇಕಿತ್ತೆಂಬುದು ಮೋದಿಯವರ ಕನಸಾಗಿತ್ತು. ಅದೀಗ ಈಡೇರಿದೆ. ದೇಶದಲ್ಲಿ ಸಂವಿಧಾನ ಎಷ್ಟು ಮುಖ್ಯವೂ ಅಷ್ಟೇ ಪ್ರಮಾಣದಲ್ಲಿ ರಾಮಾಯಣ ಮತ್ತು ಮಹಾಭಾರತ ಬಹು ಸಂಖ್ಯಾತ ಹಿಂದೂಗಳಿಗೆ ಅವಶ್ಯ ಜೀವನ ಪದ್ಧತಿಯಾಗಿದೆ. ರಾಮಮಂದಿರ ನಿರ್ಮಾಣದ 500 ವರ್ಷಗಳ ಹೋರಾಟಕ್ಕೆ…

Read More

ರಾಜ್​ಕೋಟ್​ನ ನಿರಂಜನ್ ಶಾ ಸ್ಟೇಡಿಯಂನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯ ಶುರುವಾಗಿದೆ. ಟಾಸ್ ಗೆದ್ದಿರುವ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಪರ ಸರ್ಫರಾಝ್ ಖಾನ್ ಹಾಗೂ ಧ್ರುವ್ ಜುರೇಲ್ ಪಾದಾರ್ಪಣೆ ಮಾಡಿದ್ದಾರೆ. ಮೂರನೇ ಟೆಸ್ಟ್​ ಪಂದ್ಯಕ್ಕೆ ಅಲಭ್ಯರಾಗಿರುವ ಕೆಎಲ್ ರಾಹುಲ್ ಸ್ಥಾನದಲ್ಲಿ ಸರ್ಫರಾಝ್ ಸ್ಥಾನ ಪಡೆದರೆ, ಕೆಎಸ್ ​ಭರತ್ ಸ್ಥಾನದಲ್ಲಿ ವಿಕೆಟ್ ಕೀಪರ್ ಬ್ಯಾಟರ್​ ಆಗಿ ಧ್ರುವ್ ಜುರೇಲ್ ಕಣಕ್ಕಿಳಿದಿದ್ದಾರೆ. ಹಾಗೆಯೇ ಅಕ್ಷರ್ ಪಟೇಲ್ ತಂಡದಿಂದ ಹೊರಗುಳಿದಿದ್ದಾರೆ. ಐದು ಪಂದ್ಯಗಳ ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಉಭಯ ತಂಡಗಳು ಸಮಬಲ ಸಾಧಿಸಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು 28 ರನ್​ಗಳಿಂದ ಜಯ ಸಾಧಿಸಿತ್ತು. ಇನ್ನು ವಿಶಾಖಪಟ್ಟಣಂನಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದ ಮೂಲಕ ಕಂಬ್ಯಾಕ್ ಮಾಡಿದ ಟೀಮ್ ಇಂಡಿಯಾ 106 ರನ್​ಗಳ ಅಮೋಘ ಗೆಲುವು…

Read More

ಮಂಗಳೂರು:- ಇಲ್ಲಿನ ಪಾಂಡೇಶ್ವರ ಠಾಣೆಯಲ್ಲಿ ಶಾಸಕ ಭರತ್ ಶೆಟ್ಟಿ, ಶಾಸಕ ವೇದವ್ಯಾಸ ಕಾಮತ್ ವಿರುದ್ಧ FIR ದಾಖಲಾಗಿದೆ. ಜೆರೋಸಾ ಶಾಲೆಯಲ್ಲಿ ಹಿಂದೂ ಅವಹೇಳನ ಪ್ರಕರಣ ಸಂಬಂಧ ಬಿಜೆಪಿಯ ಇಬ್ಬರು ಶಾಸಕರ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ FIR ದಾಖಲಾಗಿದೆ. ಶಿಕ್ಷಕಿ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಮತ್ತು ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಭರತ್ ಶೆಟ್ಟಿ ವಿರುದ್ಧ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಅಲ್ಲದೆ ಅನಿಲ್ ಜೆರಾಲ್ಡ್ ಲೋಬೋ ಎಂಬುವವರ ದೂರಿನ ಮೇರೆಗೆ VHP ಮುಖಂಡ ಶರಣ್ ಪಂಪ್​ವೆಲ್, ಪಾಲಿಕೆ ಸದಸ್ಯ ಸಂದೀಪ್ ಗರೋಡಿ, ಭರತ್ ಕುಮಾರ್ ಸೇರಿದಂತೆ ಹಲವರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 143, 153A, 295A, 505(2), 506, 149ರಡಿ ಕೇಸ್ ದಾಖಲಾಗಿದೆ. ಈ ಪ್ರಕರಣದಲ್ಲಿ A1 ಬಿಜೆಪಿ ಶಾಸಕ ವೇದವ್ಯಾಸ ಕಾಮತ್, A2 ಬಿಜೆಪಿ ಶಾಸಕ ಭರತ್ ಶೆಟ್ಟಿ, A3 ಶರಣ್…

Read More

ತುಮಕೂರು:- ಜಿಲ್ಲೆ ಶಿರಾ ತಾಲೂಕಿನ ಮರಳಪ್ಪನಹಳ್ಳಿ ಬ್ರಿಡ್ಜ್ ಬಳಿ ನಿಂತಿದ್ದ ಮಿನಿ ಟೆಂಪೊಗೆ ಬೈಕ್ ಡಿಕ್ಕಿಯಾಗಿದ್ದು ಇಬ್ಬರು ಮೃತಪಟ್ಟ ಘಟನೆ ಜರುಗಿದೆ. 28 ವರ್ಷದ ಪ್ರಭುಗೌಡ, 30 ವರ್ಷದ ಆನಂದ್ ಮೃತ ದುರ್ದೈವಿಗಳು ಎನ್ನಲಾಗಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತರು ಉತ್ತರ ಕರ್ನಾಟಕ ಮೂಲದವರು ಎನ್ನಲಾಗಿದೆ. ಪ್ರಭುಗೌಡ ಸ್ಥಳದಲ್ಲೇ ಮೃತಪಟ್ಟಿದ್ದು ಆನಂದ್ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಪಂಚರ್ ಆಗಿ ನಿಂತಿದ್ದ ಮಿನಿ ಟೆಂಪೋ ಲಾರಿಗೆ ಬೈಕ್ ಡಿಕ್ಕಿಯಾಗಿ ಅವಘಡ ಸಂಭವಿಸಿದೆ.

Read More

ಬೆಂಗಳೂರು:- ಪ್ರೇಮಿಗಳ ದಿನ ಅಂಗವಾಗಿ ಬೆಂಗಳೂರಿನಿಂದ 2.9 ಕೋಟಿ ಗುಲಾಬಿ ರಫ್ತಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ 12,22,860 ಕೆಜಿ ತೂಕದ ಸುಮಾರು 2.9 ಕೋಟಿ ಗುಲಾಬಿ ಹೂಗಳು ಹೊರ ರಾಜ್ಯ ಮತ್ತು ವಿದೇಶಕ್ಕೆ ರಫ್ತಾಗಿವೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್​ (BIAL) ವರದಿ ಪ್ರಕಾರ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಶೇ108 ರಷ್ಟು ರಫ್ತು ಹೆಚ್ಚಾಗಿದೆ. ಇನ್ನು ಹೊರ ರಾಜ್ಯಗಳಿಗೆ 2 ಕೋಟಿ ಗುಲಾಬಿ ಹೂಗಳನ್ನು ರಫ್ತು ಮಾಡಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಇದು ಶೇ 148 ರಷ್ಟು ಹೆಚ್ಚಳವಾಗಿದೆ. ಗುಲಾಬಿ ಹೂಗಳು ಬೆಂಗಳೂರಿನಿಂದ, ಕೌಲಾಲಂಪುರ್ (ಮಲೇಷ್ಯಾ), ಸಿಂಗಾಪುರ್, ಕುವೈತ್, ಮನಿಲಾ (ಫಿಲಿಪೈನ್ಸ್), ಮತ್ತು ಶಾರ್ಜಾ (ಯುಎಇ) ದೇಶಗಳಿಗೆ ರಪ್ತಾಗುತ್ತವೆ. ಇನ್ನು ದೆಹಲಿ, ಕೋಲ್ಕತ್ತಾ, ಮುಂಬೈ, ಗುವಾಹಟಿ ಮತ್ತು ಜೈಪುರ ರಾಜ್ಯಗಳಿಗೆ ರಫ್ತಾಗುತ್ತವೆ. ಬೆಂಗಳೂರಿನ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರಕ್ಕೆ ಮುಖ್ಯವಾಗಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಿಂದ ಗುಣಮಟ್ಟದ ಗುಲಾಬಿಗಳನ್ನು ಕಳುಹಿಸಲಾಗುತ್ತದೆ. ಗುಲಾಬಿ…

Read More

ಬೆಂಗಳೂರು:- ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಒಣಹವೆ ಮುಂದುವರೆದಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದ್ದು, ಸೂರ್ಯನ ಶಾಖವೂ ಹೆಚ್ಚಿರಲಿದೆ. 31 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶವಿದೆ. ಎಚ್​ಎಎಲ್​ನಲ್ಲಿ 30.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ,16.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.2…

Read More

ರಾಯಚೂರು:- ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಪಾರ್ಟ್ ಟೈಂ ಜಾಬ್ ಆಫರ್ ನಂಬಿ ಸರ್ಕಾರಿ ಶಾಲೆ ಶಿಕ್ಷಕಿಯೊಬ್ಬರು ಬರೋಬ್ಬರಿ 2.77 ಕೋಟಿ ರೂಪಾಯಿಗಳನ್ನು ಕಳೆದುಕೊಂಡ ಘಟನೆ ಜರುಗಿದೆ. ಶಿಕ್ಷಕಿ 2023ರ ಸೆಪ್ಟೆಂಬರ್ 3ರಿಂದ ಈ ವರ್ಷದ ಜನವರಿ 12ರ ನಡುವಣ ಅವಧಿಯಲ್ಲಿ ಸೈಬರ್ ವಂಚನೆಗೆ ಒಳಗಾಗಿ ಹಣ ಕಳೆದುಕೊಂಡಿದ್ದರು. ಮಹಿಳೆ ಪೊಲೀಸರನ್ನು ಸಂಪರ್ಕಿಸಿ ಈ ವರ್ಷದ ಜನವರಿ 14 ರಂದು ದೂರು ನೀಡಿದ್ದರೂ, ಘಟನೆ ಇತ್ತೀಚೆಗೆ ಬೆಳಕಿಗೆ ಬಂದಿದೆ. ಪಾರ್ಟ್ ಟೈಮ್ ಕೆಲಸ ಹುಡುಕುತ್ತಿದ್ದ ಶಿಕ್ಷಕಿಗೆ ವಾಟ್ಸಾಪ್‌ನಲ್ಲಿ ಸಂದೇಶ ಬಂದಿತ್ತು. ಪ್ರತಿನಿತ್ಯ ಇತರರಿಗೆ ವಿಮಾನ ಟಿಕೆಟ್ ಕಾಯ್ದಿರಿಸಲು ಪಾರ್ಟ್‌ಟೈಮ್ ಕೆಲಸ ಮಾಡುವವರನ್ನು ಹುಡುಕುತ್ತಿದ್ದೇವೆ ಎಂಬ ಸಂದೇಶ ಬಂದಿತ್ತು. ಈ ಕೆಲಸದ ಮೂಲಕ ದಿನಕ್ಕೆ 1,000 ರಿಂದ 3,600 ರೂ. ವರೆಗೆ ಸಂಪಾದಿಸಬಹುದು ಎಂದು ಆಫರ್ ನೀಡಿದವರು ಆಮಿಷವೊಡ್ಡಿದ್ದರು. ಜತೆಗೆ ಆ ಕುರಿತು ಸಂದೇಶದಲ್ಲಿ ಲಿಂಕ್ ಅನ್ನು ಸಹ ಒದಗಿಸಿದ್ದರು ಶಿಕ್ಷಕಿಯು ಆ ಕೆಲಸದ ಆಫರ್​ ಅನ್ನು ಒಪ್ಪಿ ಸೆಪ್ಟೆಂಬರ್‌ನಿಂದ ಕೆಲಸ ಮಾಡಲು ಪ್ರಾರಂಭಿಸಿದ್ದರು.…

Read More

ಚಿತ್ರದುರ್ಗ:- ಜನರ ಅನಿವಾರ್ಯತೆಯನ್ನೇ ಬಂಡವಾಳ ಮಾಡಿಕೊಂಡ ವಂಚಕರು ಹಣವನ್ನು ಡಬಲ್ ಮಾಡಿಕೊಡುತ್ತೇವೆ ಎಂದು ಆಸೆ ಹುಟ್ಟಿಸಿ ಬಳಿಕ ಅವರ ಹಣ ಪಡೆದು ವಂಚನೆ ಮಾಡುತ್ತಿರುವ ಜಾಲ ದೊಡ್ಡದಿದೆ. ಚಿತ್ರದುರ್ಗದಲ್ಲಿಯೂ ಅದೇ ರೀತಿ ಹಣ ಡಬಲ್​ ಮಾಡಿಕೊಡುತ್ತೇನೆ ಎಂದವನ ನಂಬಿದ ಜನರಿಗೆ ಪಂಗನಾಮ ಸಿಕ್ಕಿದೆ. ಆಂಧ್ರ ಮೂಲದ ಕೋಡೆ ರಮಣಯ್ಯ ಎಂಬ ವ್ಯಕ್ತಿ ಕ್ರೌಡ್ ಕ್ಲಬ್ ಇಂಟರ್​​ನ್ಯಾಷನಲ್ ಕಂಪನಿ ಹೆಸರಲ್ಲಿ 60 ದಿನದಲ್ಲಿ ಹಣ ಡಬಲ್​ ಮಾಡಿಕೊಡುವುದಾಗಿ ನಂಬಿಸಿ ವಂಚನೆ ಮಾಡಿದ್ದಾನೆ. ಈ ಘಟನೆ ಸಂಬಂಧ ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿ.15ರಂದು ದಾಖಲಾದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರಿನ ರೈಲ್ವೆ ನೌಕರ ರಮೇಶಪ್ಪ ಎಂಬುವವರು ಠಾಣೆಗೆ ದೂರು ನೀಡಿದ್ದಾರೆ. ಆರೋಪಿಗಳು ರಮೇಶಪ್ಪ, ಸಂಬಂಧಿಕರು ಸೇರಿ 106 ಜನರಿಗೆ ವಂಚನೆ ಮಾಡಿರುವುದು ಪತ್ತೆಯಾಗಿದೆ. ಆರೋಪಿಗಳು ರಮೇಶಪ್ಪ ಅವರ ಬಳಿ 1 ಲಕ್ಷ 4 ಸಾವಿರ ಹಣ ಪಡೆದು ವಂಚನೆ ಮಾಡಿದ್ದಾರೆ. ಇನ್ನು ಇವರು 106…

Read More

ಕೋಲ್ಕತಾ:- ಪತಿಯೊಬ್ಬ ಹೆಂಡತಿಯನ್ನು ಹತ್ಯೆಗೈದು ಬಳಿಕ ಆಕೆಯ ರುಂಡದೊಂದಿಗೆ ಅಲೆದಾಡಿದ ಘಟನೆ ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರದಲ್ಲಿ ಜರುಗಿದೆ. ಕೂಡಲೇ ಪೊಲೀಸರು ಆರೋಪಿ ಪತಿಯನ್ನು ಅರೆಸ್ಟ್ ಮಾಡಿದ್ದಾರೆ. ಗೌತಮ್ ಗುಚ್ಚೈತ್ (40) ಎಂಬಾತನನ್ನ ಚಿಸ್ತಿಪುರ ಬಸ್ ನಿಲ್ದಾಣದ ಬಳಿ ಸ್ಥಳೀಯರು ಗಮನಿಸಿದ್ದಾರೆ. ಅವನು ರಕ್ತದಲ್ಲಿ ತೊಯ್ದು ತನ್ನ ಕತ್ತರಿಸಿದ ತಲೆಯನ್ನು ಕೈಯಲ್ಲಿ ಹಿಡಿದುಕೊಂಡಿದ್ದನು. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಗುಚ್ಚೈತ್ ಮಾನಸಿಕವಾಗಿ ಅಸ್ಥಿರವಾಗಿದ್ದು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಂದು ಹರಿತವಾದ ಆಯುಧದಿಂದ ಆಕೆಯ ತಲೆಯನ್ನು ತುಂಡರಿಸಿದ್ದಾನೆ ಎನ್ನುವುದು ತಿಳಿದು ಬಂದಿದೆ. ಗುಚ್ಚೈತ್‌ನನ್ನು ಬಂಧಿಸಿದ ಪೊಲೀಸರು ಆತನ ಮನೆಯನ್ನು ಹುಡುಕಿ ಹೆಂಡತಿಯ ಶವವನ್ನು ಕಂಡುಕೊಂಡಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Read More