Author: AIN Author

ಬೆಂಗಳೂರು:- ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 16 ಸಾವಿರ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡುವಂತೆ ಪ್ರಸ್ತಾಪ ಇಟ್ಟಿದ್ದಕ್ಕೆ ರಾಜ್ಯ ಸರ್ಕಾರ ನಿರಾಕರಿಸಿದ್ದು, ಅತಿಥಿ ಉಪನ್ಯಾಸಕರ ಖಾಯಂ ಮಾಡಲು ನಿಯಮಗಳಲ್ಲಿ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದೆ. ವಿಧಾನ ಪರಿಷತ್‌ ಸದಸ್ಯ ಅ. ದೇವೇಗೌಡ ಅವರು ನಿಯಮ 72ರ ಅಡಿ ಅತಿಥಿ ಉಪನ್ಯಾಸಕರನ್ನು ಕಾಯಂ ಮಾಡುವಂತೆ ಗಮನ ಸೆಳೆಯುವ ಸೂಚನೆಯನ್ನು ಮಂಡಿಸಿದರು. ರಾಜ್ಯದಲ್ಲಿರುವ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 16 ಸಾವಿರ ಅತಿಥಿ ಉಪನ್ಯಾಸಕರನ್ನು ಕಾಯಂ ಮಾಡುವಂತೆ ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಉನ್ನತ ಶಿಕ್ಷಣ ಸಚಿವ ಸುಧಾಕರ್, ಖಾಲಿ ಹುದ್ದೆಗೆ ಖಾಯಂ ಮಾಡಲು ನಿಯಮಗಳಲ್ಲಿ ಅವಕಾಶ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಸುಧಾಕರ್ ಅವರು ಸದನಕ್ಕೆ ಉತ್ತರ ನೀಡಿದರು. ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆ ಬಗ್ಗೆ ಉನ್ನತ ಅಧಿಕಾರಿಗಳ ಸಮಿತಿ ರಚನೆ ಮಾಡಲಾಗಿದೆ. ಸಮಿತಿಯ ವರದಿಯ ಪ್ರಕಾರ ಪರಿಶೀಲನೆ ಮಾಡಲಾಗಿದೆ. ವಿವಿಧ ಮಾನದಂಡದ ಆಧಾರದ ಮೇಲೆ ವೇತನ…

Read More

ಬೆಂಗಳೂರು:- ಸ್ಥಳೀಯರಿಗೆ ಉದ್ಯೋಗ ನೀಡಲು ಅಸಡ್ಡೆ ತೋರಿದರೇ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರಾಜ್ಯ ಸರಕಾರದಿಂದ ರಿಯಾಯಿತಿ, ಪ್ರೊತ್ಸಾಹ ಧನ ಸೇರಿದಂತೆ ವಿವಿಧ ರೀತಿಯ ಸೌಲಭ್ಯಗಳನ್ನು ಪಡೆದುಕೊಂಡು ಉದ್ಯಮಗಳನ್ನ (industries) ಸ್ಥಾಪಿಸಿ,ನಂತರ ಸ್ಥಳೀಯರಿಗೆ ಉದ್ಯೋಗ(Jobs) ನೀಡಲು ಅಸಡ್ಡೆ ತೋರಿದರೇ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದರು. ಹುಬ್ಬಳ್ಳಿಯಲ್ಲಿ ಇನ್ಪೋಸಿಸ್ ಕಂಪನಿ ತನ್ನ ಘಟಕ ಸ್ಥಾಪಿಸುತ್ತದೆ ಅಂತೇಳಿ ಜಮೀನು ಪಡೆದುಕೊಂಡು ಗಿಡಗಳನ್ನು ನೆಟ್ಟು ತೋಟ ಮಾಡಿಕೊಂಡಿದ್ದಾರೆ. ಒಬ್ಬರಿಗೂ ಕೂಡ ಅವರು ಉದ್ಯೋಗ ನೀಡಿಲ್ಲ, ಜಮೀನು ಒದಗಿಸುವ ಸಂದರ್ಭದಲ್ಲಿ ಮಂಚೂಣಿಯಲ್ಲಿದ್ದ ನಾನು ಇಂದು ಅಲ್ಲಿನ ರೈತರ ಎದುರುಗಡೆ ನಿಂತು ಮಾತನಾಡಲು ಆಗುತ್ತಿಲ್ಲ ಎಂದು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್​ ಅಸಮಾಧಾನ ತೋಡಿಕೊಂಡರು. ಈ ವೇಳೆ ಪ್ರತಿಕ್ರಿಯಿಸಿದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಉದ್ಯಮಗಳನ್ನು ಸ್ಥಾಪಿಸುವ ಸಂದರ್ಭದಲ್ಲಿ ಭೂಮಿ ಕಳೆದುಕೊಂಡವರಿಗೆ ಅವರವರ ಅರ್ಹತೆಗೆ ಅನುಸಾರವಾಗಿ ಉದ್ಯೋಗ ನೀಡಬೇಕು ಎಂದು ಹೇಳಿದರು. ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಕೇಶವಪ್ರಸಾದ್…

Read More

ಬೆಂಗಳೂರು:- ನನ್ನ ವಿರುದ್ಧ ಎಫ್ ಐಆರ್ ಮಾಡಿರುವವರ ವಿರುದ್ದ ಕಾನೂನು ಹೋರಾಟ ಮಾಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಸಿಬಿಐನವರು ನನ್ನ ಸಂಸ್ಥೆಗಳಿಗೆ ಸ್ನೇಹಿತರಿಗೆ ಎಲ್ಲೆಲ್ಲಿ ವ್ಯವಹಾರ ಮಾಡಿದ್ದೇನೋ ಅಲ್ಲೆಲ್ಲಾ ನೂರಾರು ನೋಟಿಸ್ ಕೊಡ್ತಿದ್ದಾರೆ. ಸರ್ಕಾರ ವಾಪಸ್ ಪಡೆದ ನಂತರವೂ ನೋಟಿಸ್ ಕೊಡ್ತಿದ್ದಾರೆ ಯಾಕೆ ಕೊಡ್ತಿದ್ದಾರೋ ಗೊತ್ತಿಲ್ಲ ಎಂದರು ಸರ್ಕಾರ ವಿಥ್‌ ಡ್ರಾ ಮಾಡಿದ ನಂತರ ಲೋಕಾಯುಕ್ತಕ್ಕೆ ಟ್ರಾನ್ಸ್ ಫರ್ ಮಾಡಿದ್ದರು. ಈಗ ಉದ್ದೇಶ ಏನೋ ಗೊತ್ತಿಲ್ಲ, ನಾನು ಕಾನೂನು ಹೋರಾಟ ಮುಂದುವರಿಸುತ್ತೇನೆ. ಅದು ತಪ್ಪು ಇದು ತಪ್ಪು ಎರಡೂ ತಪ್ಪೇ. ಯಡಿಯೂರಪ್ಪ ಸರ್ಕಾರ ಸಿಬಿಐ ಗೆ ಕೊಟ್ಟಿದ್ದೇ ತಪ್ಪು. ಅವತ್ತಿನ ಅಡ್ವೋಕೆಟ್ ಜನರಲ್ ಕೊಡಬೇಡಿ ಎಂದ ಮೇಲೂ ಕೊಟ್ಟಿದ್ದರು. ನಾನು ಆರ್ ಟಿಐ ನಲ್ಲಿ ಎಲ್ಲಾ ಮಾಹಿತಿ ಅಂದೇ ತೆಗೆದುಕೊಂಡಿದ್ದೇನೆ. ಈಗ ಲೋಕಾಯುಕ್ತ ಎಫ್ ಐಆರ್ ಮಾಡಿದ್ದಾರೆ ನೋಡೋಣ ಎಂದಿದ್ದಾರೆ. ಇನ್ನೂ ಅಕ್ರಮ ಆಸ್ತಿಗಳಿಕೆ ಪ್ರಕರಣದ ತನಿಖೆಯ ಪೂರ್ವಾನುಮತಿಯನ್ನು ಹಿಂಪಡೆದ ಬಳಿಕ ಸರ್ಕಾರ…

Read More

ನವದೆಹಲಿ:- ಕಾಂಗ್ರೆಸ್ ಸಂಸದೆ ಸೋನಿಯಾ ಗಾಂಧಿ ಕೂಡ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಯೊಂದು ಹೊರಬಿದ್ದಿದೆ. ಈ ಬೆನ್ನಲ್ಲೇ ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂಬುದಾಗಿ ವರದಿಯಾಗಿದೆ. ಸೋನಿಯಾ ಗಾಂಧಿ (Sonia Gandhi) ಅವರು ಈ ಬಾರಿ ರಾಜ್ಯಸಭೆಗೆ ಸಿದ್ಧರಾಗಿದ್ದಾರೆ. ಅವರು ನಾಳೆ ನಾಮಪತ್ರ (Nomination) ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಸುವ ವೇಳೆ ಸೋನಿಯಾ ಗಾಂಧಿ ಅವರ ಜೊತೆ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಕೂಡ ಉಪಸ್ಥಿತರಿರುತ್ತಾರೆ ಎಂದು ಹೇಳಲಾಗುತ್ತಿದೆ. ಆದರೆ ಸೋನಿಯಾ ಗಾಂಧಿ ಯಾವ ರಾಜ್ಯದಿಂದ ಸ್ಪರ್ಧಿಸುತ್ತಾರೆ ಎಂಬುದು ಇಂದು ರಾತ್ರಿಯೊಳಗೆ ಅಂತಿಮ ನಿರ್ಧಾರವಾಗಲಿದೆ ಎನ್ನಲಾಗಿದೆ. ಕಾಂಗ್ರೆಸ್‌ನಿಂದ ಸೋನಿಯಾ ಗಾಂಧಿ ಅವರನ್ನು ರಾಜ್ಯಸಭೆಗೆ ಕಳುಹಿಸಬಹುದು ಎಂಬ ವಿಷಯ ಬಹಳ ದಿನಗಳಿಂದ ಚರ್ಚೆಯಲ್ಲಿದೆ. ತೆಲಂಗಾಣ ಅಥವಾ ರಾಜಸ್ಥಾನದಿಂದ ರಾಜ್ಯಸಭೆಗೆ ಸೋನಿಯಾ ನಾಮಪತ್ರ ಸಲ್ಲಿಸುವ ಸಾಧ್ಯತೆ ಹಲವು ಬಾರಿ ವ್ಯಕ್ತವಾಗಿದೆ. ಆದರೆ ಈ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.

Read More

ರಾಮನಗರ:- ರಾಮನಗರದಲ್ಲಿ 7 ವರ್ಷದಲ್ಲಿ ಕಾಡಾನೆ ದಾಳಿಗೆ 38ಕ್ಕೂ ಹೆಚ್ಚು ಜನರು ಬಲಿ ಆಗಿದ್ದಾರೆ ಎಂದು ಸದನದಲ್ಲಿ ಕಾಂಗ್ರೆಸ್ ಸದಸ್ಯ ರವಿ ವಿಷಯ ಪ್ರಸ್ತಾಪಿಸಿದ್ದಾರೆ. ಇದುವರೆಗೆ ಕಾಡಾನೆ ದಾಳಿಯಿಂದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಕೃಷಿ ಕೆಲಸಕ್ಕೆ ಹೋದ ರೈತರು ಮನೆಗೆ ಹಿಂದಿರುಗುವ ನಂಬಿಕೆಯಿಲ್ಲ. ಪ್ರತಿನಿತ್ಯ ಕಾಡಾನೆ ಸಮಸ್ಯೆ ಹೆಚ್ಚಳವಾಗುತ್ತಿದೆ. ಭೀತಿಯಿಂದ ಅದೆಷ್ಟೋ ರೈತರು ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಈ ಹಿನ್ನಲೆ ಕಾಡಾನೆ ನಿಯಂತ್ರಿಸುವಂತೆ ಜನರು ನಮಗೆ ಒತ್ತಾಯ ಮಾಡುತ್ತಿದ್ದಾರೆ ಎಂದರು. ಇದಕ್ಕೆ ಉತ್ತರಿಸಿದ ಅರಣ್ಯ ಸಚಿವ ಈಶ್ವರ್​ ಖಂಡ್ರೆ, ‘ ಈ ವರ್ಷ ಪ್ರಾಣಿ ದಾಳಿಯಿಂದ 55 ಮಂದಿ ಸಾವನ್ನಪ್ಪಿದ್ದಾರೆ. ಬನ್ನೇರುಘಟ್ಟ ಅರಣ್ಯ ವ್ಯಾಪ್ತಿಯಿಂದ ಆನೆಗಳು ರಾಮನಗರ, ಕನಕಪುರ ಭಾಗಕ್ಕೆ ಬರುತ್ತಿದ್ದಾವೆ. ಆನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬರದಂತೆ ಏನು ಕ್ರಮ ಕೈಗೊಳ್ಳಬೇಕೆಂದು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದರು.

Read More

ಬಳ್ಳಾರಿ:- ಸಿನಿಮೀಯ ರೀತಿಯಲ್ಲಿ ಎಟಿಎಂ ದರೋಡೆ ಮಾಡಿದ್ದ ಗ್ಯಾಂಗ್​ ಅರೆಸ್ಟ್ ಮಾಡಲಾಗಿದೆ. ಬೀದರ್(Bidar) ಎಸ್ಪಿ ಚೆನ್ನಬಸವಣ್ಣ ಎಸ್.ಎಲ್. ಅವರ ಮಾರ್ಗದರ್ಶನದಲ್ಲಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ ಭಾಗಿಯಾಗಿದ್ದು, ಅದರಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನುಳಿದ ನಾಲ್ವರು ಪರಾರಿಯಾಗಿದ್ದಾರೆ. ಶಾಹಿದ್ ಕಮಲಖಾನ್(45) ಅಲೀಂ ಅಕ್ಬರ್ ಖಾನ್ (26) ಇಲಿಯಾಸ್ ರೆಹಮಾನ್ ಬಂಧಿತ ಆರೋಪಿಗಳು. ಬೀದರ್ ಸೇರಿದಂತೆ ಬೆಳಗಾವಿ, ವಿಜಯಪುರ, ಬೆಳೆಗಾವಿ ಹಾಗೂ ಮಹಾರಾಷ್ಟ್ರ ಸೇರಿದಂತೆ ಒಟ್ಟು 12 ಕಡೆಗಳಲ್ಲಿ ಗ್ಯಾಸ್ ಕಟರ್ ಬಳಸಿ ಎಟಿಎಂ ಕಳ್ಳತನ ಮಾಡಿದ್ದರು. ಇದರಿಂದ ಬರೊಬ್ಬರಿ 1 ಕೋಟಿಗೂ ಅಧಿಕ ಹಣವನ್ನು ಸಿನಿಮೀಯ ರೀತಿಯಲ್ಲಿ ದರೋಡೆ ಮಾಡಿದ್ದರು.

Read More

ಬೆಂಗಳೂರು:- ಐಪಿಎಲ್ ಬೆಟ್ಟಿಂಗ್ ಹೋಗಲಾಡಿಸಲು ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿ ಎಂದು ಆರ್ ಅಶೋಕ್ ಹೇಳಿದ್ದಾರೆ. ಐಪಿಎಲ್ ನಡೆಯುವಾಗ ಬೆಂಗಳೂರು ನಗರದಲ್ಲೇ ಪ್ರತಿ ಪಂದ್ಯಕ್ಕೆ 1000 ಕೋಟಿ ರೂ. ಬೆಟ್ಟಿಂಗ್ ನಡೆಯುತ್ತದೆ, ಬೆಟ್ಟಿಂಗ್ ನಡೆಸುವ ಜನ ಕೋಟಿ ಕೋಟಿ ಬೆಲೆ ಬಾಳುವ ಮನೆಗಳನ್ನು ಕಟ್ಟಿಕೊಂಡು ವಾಸವಾಗಿದ್ದಾರೆ. ಆದರೆ ಬೆಟ್ಟಿಂಗ್ ನಲ್ಲಿ ತೊಡಗುವವರು ಮನೆಗಳನ್ನು ಕಳೆದುಕೊಂಡು ಬೀದಿಗೆ ಬಂದಿದ್ದಾರೆ ಎಂದು ಅಶೋಕ ಹೇಳಿದರು. ಜಯನಗರದ ಒಬ್ಬ ಡೆವೆಲಪರ್ 120 ಕೋಟಿ ರೂ ಕಳೆದುಕೊಂಡು ದಿವಾಳಿಯಾಗಿದ್ದಾನೆ ಎಂದು ಹೇಳಿದ ಅವರು ಬಿಟ್ಟಂಗ್ ದಂಧೆ ನಡೆಸುವವರು ಭಾರೀ ಪ್ರಭಾವಶಾಲಿಗಳಾಗಿದ್ದಾರೆ ಮತ್ತು ತಾವು ಗೃಹ ಸಚಿವನಾಗಿದ್ದಾಗ ಸದನದಲ್ಲಿದ್ದವರೇ ಬೆಟ್ಟಿಂಗ್ ದೊರೆಗಳ ಬಗ್ಗೆ ವಕಾಲತ್ತು ಮಾಡಲು ಬಂದಿದ್ದರು ಎಂದು ಹೇಳಿದರು. ಈಗ ರಾಜ್ಯದ ಗೃಹ ಸಚಿವರಾಗಿರುವ ಜಿ ಪರಮೇಶ್ವರ್ ಅವರು ಬೆಟ್ಟಿಂಗ್ ಪಿಡುಗನ್ನು ನಿರ್ಮೂಲ ಮಾಡಲು ಕೆಲ ಕಾಂಕ್ರೀಟ್ ಕ್ರಮಗಳನ್ನು ಕೈಗೆತ್ತಿಕೊಳ್ಳಬೇಕೆಂದು ಅಶೋಕ ಮನವಿ ಮಾಡಿದರು.

Read More

ಬೆಂಗಳೂರು:- ಸ್ನೇಹಿತ ಸಾಲ ವಾಪಸ್ ನೀಡಿಲ್ಲ ಎಂದು ವ್ಯಕ್ತಿಯೋರ್ವ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಮಾಕ್ಷಿಪಾಳ್ಯ ಸುಂಕದಕಟ್ಟೆ ಪೈಪ್ ಲೈನ್ ಬಳಿ ಘಟನೆ ಜರುಗಿದೆ. ವಿಷ ಕುಡಿದು 40 ವರ್ಷದ ನಂಜುಡಸ್ವಾಮಿ ಸಾವನ್ನಪ್ಪಿದ ವ್ಯಕ್ತಿ. ನಂಜುಂಡಗೌಡ , ನಂಜುಂಡಸ್ವಾಮಿಗೆ ಹಣ ನೀಡಬೇಕಿತ್ತು. ಇತ್ತೀಚೆಗೆ ಹಣ ನೀಡದೆ ಸತಾಯಿಸುತ್ತಿದ್ದ. ಇದ್ರಿಂದ ಬೇಸತ್ತು ಇಂದು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಚಾಮರಾಜನಗರ:- ರಾಜ್ಯ ಸರ್ಕಾರದ ಬಜೆಟ್ ವೇಳೆ ರೈತರ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಚಾಮರಾಜನಗರದಲ್ಲಿ ರೈತರು ಪ್ರತಿಭಟನೆ ಮಾಡಿದ್ದಾರೆ. ನಗರದ ಚಾಮರಾಜೇಶ್ವರ ದೇವಾಲಯದಿಂದ ಹೊರಟ ಪ್ರತಿಭಟನಾಕಾರರು ಭುವನೇಶ್ವರಿವೃತ್ತ ಹಾಗೂ ಬಿ.ರಾಚಯ್ಯ ಜೋಡಿ ಮೂಲಕ ಸಾಗಿ ಪ್ರತಿಭಟನೆ ಮಾಡಿದ್ದಾರೆ. ಇದೇ ವೇಳೆ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಪ್ರತಿಭಟನಾಕಾರರು ಯತ್ನಿಸಿದ್ದು, ಮುತ್ತಿಗೆ ಹಾಕುವುದನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ರೈತ ಹೋರಟಗಾರರು ಹಾಗೂ ಪೋಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ.

Read More

ಬಳ್ಳಾರಿ:- ಜಾರಿ ನಿರ್ದೇಶನಾಲಯವು ಬಳ್ಳಾರಿ ನಗರ ಕಾಂಗ್ರೆಸ್​ ಶಾಸಕ ನಾರಾಭರತ್ ರೆಡ್ಡಿ ನಿವಾಸದ ಮೇಲೆ ದಾಳಿ ನಡೆಸಿದ್ದರ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಲೆಕ್ಕಕ್ಕೆ ಸಿಗದ 31 ಲಕ್ಷ ರೂಪಾಯಿ ಪತ್ತೆಯಾಗಿರುವುದಾಗಿ ತಿಳಿಸಿದೆ. ನಾರಾಭರತ್ ರೆಡ್ಡಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಫೆಬ್ರವರಿ 10 ರಂದು ದಾಳಿ ನಡೆಸಿ ಪರಿಶೀಲನೆ ನಡೆಸಿತ್ತು. ಸೂರ್ಯ ನಾರಾಯಣ ರೆಡ್ಡಿ, ಭರತ್ ರೆಡ್ಡಿ ಮತ್ತು ಇತರರಿಗೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ಆಂಧ್ರಪ್ರದೇಶದ ಅನೇಕ ಸ್ಥಳಗಳಲ್ಲಿ 2002 ರ PMLA ನಿಬಂಧನೆಗಳ ಅಡಿಯಲ್ಲಿ ಇಡಿ 10.02.2024 ರಂದು ಶೋಧಕಾರ್ಯ ನಡೆಸಿದೆ. ಈ ಸಮಯದಲ್ಲಿ, ವಿವಿಧ ದಾಖಲೆಗಳು, ವ್ಯವಹಾರ ದಾಖಲೆಗಳು, ಸ್ಥಿರ ಮತ್ತು ಚರ ಆಸ್ತಿಗಳ ವಿವರಗಳು ಮತ್ತು ಲೆಕ್ಕಕ್ಕೆ ಬಾರದ 31 ಲಕ್ಷ ರೂಪಾಯಿ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದೆ. ನಗರದ ನೆಹರು ಕಾಲೋನಿಯಲ್ಲಿರುವ ಶಾಸಕ ಭರತ್ ರೆಡ್ಡಿ ಮತ್ತು ಅವರ ಚಿಕ್ಕಪ್ಪ ಪ್ರತಾಪರೆಡ್ಡಿ ಅವರ ಮನೆ ಮೇಲೆ ಹಾಗೂ ಗಾಂಧಿನಗರದಲ್ಲಿರುವ ಶಾಸಕರ ತಂದೆ‌ ಸೂರ್ಯನಾರಾಯಣ ರೆಡ್ಡಿ…

Read More