Author: AIN Author

ಬೆಂಗಳೂರು:- ನಗರದ ಉತ್ತರಹಳ್ಳಿ ಮತ್ತು ಕೆಂಗೇರಿ ಫುಡ್ ಬಳಿ ₹1.50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಆಹಾರ ನಿರೀಕ್ಷಕ ಮತ್ತು ಮ್ಯಾನೇಜರ್ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ಜರುಗಿದೆ. ಶ್ರೀಧರ್​ ಮತ್ತು ಮ್ಯಾನೇಜರ್ ಉಮೇಶ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು. ನ್ಯಾಯಬೆಲೆ ಅಂಡಗಿಗೆ ಲೈಸೆನ್ಸ್ ನೀಡಲು 2.5 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಈ ಮೊದಲು 1 ಲಕ್ಷ ರೂ. ಲಂಚ ಪಡೆದಿದ್ದ ಫುಡ್ ಇನ್ಸ್​ಪೆಕ್ಟರ್ ಶ್ರೀಧರ್. ಮುಂಗಡವಾಗಿ ಇಂದು 1 ಲಕ್ಷ ರೂ. ಪಡೆಯುತ್ತಿದ್ದಾಗ ಸಿಕ್ಕಿಬಿದಿದ್ದಾರೆ. ಈ ಕುರಿತಾಗಿ ಲೋಕಾಯುಕ್ತಕ್ಕೆ ರಫೀಕ್​ ಎಂಬುವವರು ದೂರು ನೀಡಿದ್ದರು. ಸದ್ಯ ಶ್ರೀಧರ್, ಉಮೇಶ್​ನನ್ನು ಬಂಧಿಸಿ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ

Read More

ಮಂಗಳೂರು:- ಶಿಕ್ಷಕನಿಂದ ಮಾನಹಾನಿ ಮೆಸೇಜ್ ರವಾನೆ ಹಿನ್ನೆಲೆ ಎಸ್​ಡಿಎಂ ಶಾಲೆಯಲ್ಲೇ ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನಿಸಿ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ಜರುಗಿದೆ. ಪ್ರಕರಣ ಸಂಬಂಧ ಚಿತ್ರಕಲಾ ಶಿಕ್ಷಕ ರೂಪೇಶ್ ಪೂಜಾರಿ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನ್ನ ಬಗ್ಗೆ ಮತ್ತೊಬ್ಬ ವಿದ್ಯಾರ್ಥಿನಿಗೆ ಚಿತ್ರಕಲಾ ಶಿಕ್ಷಕ ರೂಪೇಶ್ ಪೂಜಾರಿ ಮಾನಹಾನಿ ಮೆಸೇಜ್ ಮಾಡಿ ವಿಚಾರ ತಿಳಿದ 10ನೇ ತರಗತಿ ವಿದ್ಯಾರ್ಥಿನಿ ತನ್ನ ಪೋಷಕರಿಗೆ ತಿಳಿಸಿದ್ದಳು. ಅದರಂತೆ ಶಾಲೆಗೆ ತೆರಳಿ ವಿಚಾರಿಸಲಾಗಿತ್ತು. ಫೆಬ್ರವರಿ 7 ರಂದು ಎಂದಿನಂತೆ ಶಾಲೆಗೆ ಹೋಗುತ್ತಿದ್ದಾಗ ವಿದ್ಯಾರ್ಥಿನಿ ಬಿಸ್ಕೆಟ್ ಪ್ಯಾಕೇಟ್ ಜೊತೆಗೆ ಇಲಿ ಪಾಷಾಣ ಕೂಡ ಖರೀದಿಸಿ ಕೊಂಡು ಹೋಗಿದ್ದಳು. ಬಳಿಕ, ಶಾಲೆಯಲ್ಲಿ ಬಿಸ್ಕೇಟ್​ಗೆ ಇಲಿ ಪಾಷಾಣ ಲೇಪಿಸಿ ಸೇವನೆ ಮಾಡಿದ್ದಾಳೆ. ಇದರಿಂದ ಆಕೆ ಅಸ್ವಸ್ಥಗೊಂಡಿದ್ದು, ಕೂಡಲೇ ಶಿಕ್ಷಕರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಎರಡು ದಿನಗಳ ಹಿಂದೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಕಿಡ್ನಿ, ಲಿವರ್…

Read More

ನಿರ್ಮಾಪಕ & ಕ್ರಿಯೇಟಿವ್ ಡೈರೆಕ್ಟರ್ ರಾಘು ರವರ ಸೆವೆನ್ ಸ್ಟಾರ್ ಪಿಕ್ಚರ್ಸ್ ಅಡಿಯಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ ಹಾಗೂ ಕರ್ನಾಟಕದ ಚಿನ್ನಾರಿಮುತ್ತ ವಿಜಯ್ ರಾಘವೇಂದ್ರ ಅಭಿನಯಯದ, ವಿಜಯ್ ಕನ್ನಡಿಗ ನಿರ್ದೇಶನದ, “ಜೋಗ್ 101” ಚಿತ್ರದ ಮೊದಲನೆಯ ಹಾಡು “ಮುಂಜಾನೆ ಮಂಜನ್ನು ” ಹಾಡಿನ ಲಿರಿಕಲ್ ವಿಡಿಯೋ ಸೆವೆನ್ ಸ್ಟಾರ್ ಪಿಕ್ಚರ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಅವಿನಾಶ್ ಆರ್ ಬಾಸೂತ್ಕರ್ ಅವರ ಸಂಗೀತ ನಿರ್ದೇಶನವಿರುವ ಈ ಹಾಡಿಗೆ ಡಾ.ವಿ.ನಾಗೇಂದ್ರಪ್ರಸಾದ್ ರವರ ಸಾಹಿತ್ಯವಿದ್ದು, ಭಾರತದ ಸುಪ್ರಸಿದ್ಧ ಗಾಯಕ ರಘುದೀಕ್ಷಿತ್ ಹಾಡಿದ್ದಾರೆ ಹಾಗು ಈ ಹಾಡಿನ ಇಂಗ್ಲೀಷ್ ಭಾಷಾಂತರವನ್ನು ಸುಮನ್ ಜಾದೂಗಾರ್ ಮಾಡಿದ್ದಾರೆ. ಈ ಹಾಡಿನ ಬಿಡುಗಡೆಯ ವಿಚಾರವನ್ನು ತಾವುಗಳು ದೃಶ್ಯ ಮಾಧ್ಯಮದಲ್ಲಿ ಅಥವಾ ಪತ್ರಿಕೆ ಮಾಧ್ಯಮದಲ್ಲಿ ಪ್ರಕಟಿಸಿ ನಮ್ಮನ್ನು ಪ್ರೋತ್ಸಾಹಿಸಬೇಕೆಂದು ಕೋರಿಕೊಳ್ಳುತ್ತೇವೆ. ತಾವು ಎಂದಿನಂತೆ ನಮ್ಮ ಜೊತೆಯಲ್ಲಿದ್ದು, ಈ ಹಾಡನ್ನಾ ಜನಸಾಮಾನ್ಯರಿಗೆ ಮುಟಿಸುವಲ್ಲಿ ಸಹಕರಿಸಿಬೇಕೆಂದು ಸೆವೆನ್ ಸ್ಟಾರ್ ಪಿಕ್ಚರ್ಸ್ ಸಂಸ್ಥೆಯವರು ವಿನಂತಿ ಮಾಡಿಕೊಂಡಿದ್ದಾರೆ. ಸುನೀತ್ ಹಲಗೇರಿ ಛಾಯಾಗ್ರಹಣ, ಮೋಹನ್ ರಂಗಕಹಳೆ ಸಂಕಲನ, ಥ್ರಿಲ್ಲರ್ ಮಂಜು…

Read More

ದಾವಣಗೆರೆ:- ನಾಳೆಯಿಂದ ಆರಂಭವಾಗಲಿರುವ ದಾವಣಗೆರೆ ಜಿಲ್ಲೆಯ ‌ನ್ಯಾಮತಿ ತಾಲ್ಲೂಕಿನ ಸೂರಗೊಂಡಪ್ಪದಲ್ಲಿನ ಸಂತ ಸೇವಾಲಾಲ್ ಜಯಂತಿಗೆ ಭಕ್ತರು ಹರಿದು ಬರುತ್ತಿದ್ದಾರೆ. ಹೀಗೆ ಬರುವ ಮಾಲಾಧಾರಿಗಳಿಗೆ ಸಂವಿಧಾನ ಪೀಠಿಕೆ ಓದಿಸವುದು ನಡೆಸಲಾಗುತ್ತಿದೆ. ಫೆಬ್ರವರಿ 13,14,15 ರಂದು ನ್ಯಾಮತಿ ತಾ. ಸೂರಗೊಂಡನಕೊಪ್ಪದಲ್ಲಿ ನಡೆಯುವ ಸಂತ ಸೇವಾಲಾಲ್ ಜಯಂತಿಯಲ್ಲಿ ಭಾಗಿಯಾಗಲು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಹಾಗೂ ಮಾಲಾಧಾರಿಗಳು ಆಗಮಿಸುತ್ತಿದ್ದಾರೆ. ಇವರಿಗೆ ಆಯುಷ್ ಇಲಾಖೆಯಿಂದ ಹರಿಹರ ತಾಲ್ಲೂಕಿನ ಕೊಮಾರನಹಳ್ಳಿ ಮತ್ತು ಹೊನ್ನಾಳಿಯ ಹೀರೇಕಲ್ಮಠದಲ್ಲಿ ಮುಲಾಮು ವಿತರಿಸಿ ಆರೈಕೆ ಮಾಡಲಾಗುತ್ತಿದೆ. ಮತ್ತು ಮಾಲಾಧಾರಿಗಳಿಗೆ ಸಂವಿಧಾನ ಪೀಠಿಕೆ ಓದಿಸಲಾಗುತ್ತಿದೆ. ಇನ್ನು ಮೂರು ದಿನಗಳ ಕಾಲ ಸೂರಗೊಂಡನಕೊಪ್ಪಸಲ್ಲಿ ಅದ್ಧೂರಿಯಾದ ಜಾತ್ರೆ ನಡೆಯುತ್ತದೆ.

Read More

ಗದಗ:- ತಾಲೂಕಿನ ಬಳಗಾನೂರ ಗ್ರಾಮದ ಚಿಕ್ಕೇನಕೊಪ್ಪದ ಶ್ರೀ ಚನ್ನವೀರ ಶರಣರ ಜಾತ್ರೆ ಹಿನ್ನೆಲೆ ಶರಣರ ಬುತ್ತಿ ಕಟ್ಟಿಕೊಂಡು ಮಹಿಳೆಯರು ಹೊರಟಿದ್ದಾರೆ. ಗದಗ ಜಿಲ್ಲೆ ರೋಣ ತಾಲೂಕಿನ ಮೇಲ್ಮಠ ಗ್ರಾಮದ ಗ್ರಾಮಸ್ಥರು, ಶರಣರ ಬುತ್ತಿಯಲ್ಲಿ ಖಡಕ್ ಜೋಳದ ರೊಟ್ಟಿ, ಪಲ್ಯ, ಕರ್ಚಿಕಾಯಿ, ಶೇಂಗಾ ಹೋಳಿಗೆ ವಿವಿಧ ತೆರನಾದ ಖಾದ್ಯ ಮಾಡಿಕೊಂಡು ಹೊರಟಿರುವುದು ವಿಶೇಷವಾಗಿತ್ತು. ಗ್ರಾಮದಲ್ಲಿ ಮನೆ ಮೆನೆಯಿಂದ ಶರಣರ ಬುತ್ತಿ ತಯಾರಿ ಮಾಡಲಾಗಿದ್ದು, ಗ್ರಾಮದಲ್ಲಿ ವಾದ್ಯಮೇಳಗಳೊಂದಿಗೆ ಅದ್ದೂರಿ ಮೆರವಣಿಗೆ ನಡೆದಿದೆ. ಸುಮಾರು 200ಕ್ಕೂ ಹೆಚ್ಚು ಮಹಿಳೆಯರಿಂದ ಬುತ್ತಿಯಾತ್ರೆ ನಡೆದಿದ್ದು, ಗ್ರಾಮಸ್ಥರು ಸಹ ಶರಣರ ಬುತ್ತಿಯಾತ್ರೆಗೆ ಸಾಥ್ ನೀಡಿದ್ದಾರೆ

Read More

ಬೆಂಗಳೂರು:- ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಸರ್ಕಾರ ಎಂಬುದನ್ನು ರಾಜ್ಯದ ಸಂವಿಧಾನಿಕ ಮುಖ್ಯಸ್ಥರಾದ ರಾಜ್ಯಪಾಲರು ತಮ್ಮ ಭಾಷಣದ ಮೂಲಕ ಪ್ರತಿಪಾದಿಸಿದ್ದಾರೆ. ರಾಜ್ಯದ ಜನರಿಗೆ ಗ್ಯಾರಂಟಿ ಯೋಜನೆಯಿಂದ ಯಾವೆಲ್ಲ ಅನುಕೂಲವಾಗಿದೆ ಎಂಬ ಸತ್ಯ ಸಂಗತಿಯನ್ನು ಜನತೆ ಎದುರು ರಾಜ್ಯಪಾಲರು ತೆರೆದಿಟ್ಟಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ತಿಳಿಸಿದರು. ಕರ್ನಾಟಕ ರಾಜ್ಯದಲ್ಲಿ ಸುಮಾರು 7 ಕೋಟಿ ಜನಸಂಖ್ಯೆ ಇದೆ. ನಮ್ಮ ಗ್ಯಾರಂಟಿ ಯೋಜನೆಗಳಿಂದಾಗಿ 1.27 ಕೋಟಿ ಕುಟುಂಬದವರು ಬಡತನ ರೇಖೆಯಿಂದ ಹೊರಗೆ ಬಂದಿವೆ. ಸರಿಸುಮಾರು 5 ಕೋಟಿಗೂ ಹೆಚ್ಚು ಮಂದಿ ಮಧ್ಯಮ ವರ್ಗದ ಜೀವನ ಮಟ್ಟದ ಜೀವನ ಮಟ್ಟವನ್ನು ನಿರ್ವಹಣೆ ಮಾಡಲು ಸಹಾಯಕವಾಗಿದೆ. ಹೀಗಾಗಿ ನಮ್ಮ ಸರ್ಕಾರದ ಯೋಜನೆಗಳು ರಾಜ್ಯದ ಜನರಿಗೆ ಅನುಕೂಲಕರವಾಗಿದೆ. ಮಹಿಳೆಯರಿಗೆ “ಶಕ್ತಿ” ತುಂಬುವ ಉಚಿತ ಪ್ರಯಾಣ ಯೋಜನೆ, “ಭಾಗ್ಯ ಲಕ್ಷ್ಮಿ”, ಬಡವರಿಗೆ “ಅನ್ನಭಾಗ್ಯ” ,”ಯುವನಿಧಿ” ,ಎಲ್ಲರಿಗೂ ಪ್ರಕಾಶಮಾಬವಾಗಿ ಬೆಳಕು ನೀಡುವ “ಗೃಹಜ್ಯೋತಿ” ಹೀಗೆ ಜನರ ಆರ್ಥಿಕ ಶಕ್ತಿ ತುಂಬುವ ಮಹತ್ವದ ಯೋಜನೆ ಜಾರಿಗೊಳಿಸಿದ ರಾಜ್ಯ ಸರ್ಕಾರ ತನ್ನ ಜನಪರ…

Read More

ಕೋಲಾರ:- ತಾಲ್ಲೂಕು ಕಚೇರಿಗೆ ಕೋಲಾರ ಲೋಕಾಯುಕ್ತ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಲೋಕಾಯುಕ್ತ ಎಸ್ಪಿ ಉಮೇಶ್​ ಅವರ ನೇತೃತ್ವದ ಲೋಕಾಯುಕ್ತ ಅಧಿಕಾರಿಗಳ ತಂಡ ಬೇಟಿ ನೀಡಿ ಸುಮಾರು ಆರು ಗಂಟೆಗಳ ಕಾಲ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಕೋಲಾರ ತಾಲ್ಲೂಕು ಕಚೇರಿಯ ಮೇಲೆ ಮೇಲಿಂದ ಮೇಲೆ ದೂರು ಗಳು ಬಂದ ಹಿನ್ನೆಲೆ, ಜೊತೆಗೆ ತಾಲ್ಲೂಕು ಕಚೇರಿಯಲ್ಲಿ ಹಣ ನೀಡದೆ ಯಾವುದೇ ಕೆಲಸಗಳು ನಡೆಯೋದಿಲ್ಲ ಅನ್ನೋ ಸಾರ್ವಜನಿಕರ ದೂರಿನ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದ್ರು. ಅಧಿಕಾರಿಗಳು ಅನಗತ್ಯವಾಗಿ ಜನರ ಕೆಲಸವನ್ನು ಬಾಕಿ ಉಳಿಸಿಕೊಳ್ಳುವುದು, ಅಥವಾ ಹಣಕ್ಕಾಗಿ ಬೇಡಿಕೆ ಇಡುವ ಕುರಿತು ಪರಿಶೀಲನೆ ನಡೆಸಿದ್ರು.

Read More

ಚಾಮರಾಜನಗರ:- ಕುರಿಗಾಹಿಗಳ ಮೇಲೆ ಹುಲಿ ಎರಗಿದ ಪರಿಣಾಮ ಇಬ್ಬರಿಗೆ ಗಾಯವಾದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಶಿವಪುರ ಗ್ರಾಮದ ಹೊರವಲಯದಲ್ಲಿ ಜರುಗಿದೆ. ಶಿವಪುರ ಗ್ರಾಮದ ಜವರಶೆಟ್ಟಿ, ಶಿವಶೆಟ್ಟಿ ಎಂಬ ಕುರಿಗಾಹಿಗಳ ಮೇಲೆ ಹುಲಿ ದಾಳಿ ನಡೆದಿದ್ದು, ಬಂಡೀಪುರ ಹುಲಿಸಂರಕ್ಷಿತಾ ಪ್ರದೇಶದ ಶಿವಪುರ ಗ್ರಾಮದಲ್ಲಿ ಘಟನೆ ಜರುಗಿದೆ. ಕುರಿಗಾಹಿಗಳ ಎದೆ, ಮೊಣಕಾಲು, ತೊಡೆ, ಬೆನ್ನಿಗೆ ಪರಚಿ ಹುಲಿ ಗಾಯಗೊಳಿಸಿದೆ. ಹುಲಿ ಬಾಯಿಂದ ಮೇಕೆ ಬಚಾವ್ ಮಾಡಲು ಮುಂದಾದ ವೇಳೆ ಹುಲಿ ದಾಳಿ ಮಾಡಿದೆ. ಇಬ್ಬರಿಗೂ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Read More

ತುಮಕೂರು:- ವಿದ್ಯುತ್ ತಗುಲಿ ವ್ಯಕ್ತಿ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಜರುಗಿದೆ ಟ್ರಾನ್ಸಫಾರಂನಿಂದ ವಿದ್ಯುತ್ ಸ್ಪರ್ಶಿಸಿ ಗ್ರಾಮದ ದೇವರಾಜು 45 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಮಿಡಿಗೇಶಿ ಪೊಲೀಸರು ಹಾಗೂ ಬೆಸ್ಕಾಂ ಸಿಬ್ಬಂದಿ ಭೇಟಿ ಪರಿಶೀಲನೆ ಮಾಡಿದ್ದಾರೆ. ಮಿಡಿಗೇಶಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

Read More

ಕನ್ನಡ ಸಿನಿಮಾರಂಗವೀಗ ಬೇರೆಯದ್ದೇ ದಿಕ್ಕಿಗೆ ಹೊರಳಿದೆ. ಸೋಲು ಗೆಲುವಿನಾಚೆ ಲೆಕ್ಕಚಾರ ಹಾಕಿದರೂ ಹೊಸ ಹುರುಪು, ಹೊಸ ಹರಿವು, ಹೊಸ ಆಲೋಚನೆಗಳಿಂದ ಬೇರೆಯದ್ದೇ ಆಯಾಮ ಪಡೆದಿದೆ. ಅದರ ಮುಂದುವರೆದ ಭಾಗವಾಗಿ ಗೋಚರಿಸುತ್ತಿರುವ ಚಿತ್ರ ಫೋಟೋ..ಕಳೆದ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿದಲ್ಲಿ ಪ್ರೇಕ್ಷಕರಿಂದ ಲೈಕ್ ಪಡೆದ ಫೋಟೋ ಸಿನಿಮಾ ಸದ್ಯದಲ್ಲೇ ತೆರೆಗೆ ಬರ್ತಿದೆ. ಕೋವಿಡ್ ಸಮಯದ ಕಥೆಗೀಗ ಜೊತೆಯಾಗಿದ್ದಾರೆ ಬಹುಭಾಷಾ ಕಲಾವಿದ ಪ್ರಕಾಶ್ ರಾಜ್ . ಫೋಟೋ ಸಿನಿಮಾವನ್ನು ನಿರ್ದಿಗಂತದ ಮೂಲಕ ಪ್ರಕಾಶ್ ರಾಜ್ ಪ್ರೆಸೆಂಟ್ ಮಾಡುತ್ತಿದ್ದಾರೆ. ಈ ಮೂಲಕ ಹೈದ್ರಾಬಾದ್ ಕರ್ನಾಟಕದ ಕಥೆಗೆ ನಿರ್ದಿಗಂತ ಜೊತೆಯಾಗಿ ನಿಂತಿದೆ. ರಾಯಚೂರು‌ ಮೂಲದ ಯುವ ಪ್ರತಿಭೆ ಉತ್ಸವ್ ಗೋನವಾರ ಚೊಚ್ಚಲ ಪ್ರಯತ್ನ ಫೋಟೋ. ಕಳೆದ ಏಳು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿರುವ ಅವರು ಈ ಚಿತ್ರದ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟು ಸ್ವಾತಂತ್ರ್ಯ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಲಾಕ್‌ಡೌನ್‌ ಸಮಯದಲ್ಲಿ ನಡೆದ ಕಥೆ ಸುತ್ತ ಫೋಟೋ ಸಿನಿಮಾ ಸಾಗುತ್ತದೆ. ಅಪ್ಪ‌-ಮಗನ ಬಾಂಧವ್ಯ, ಭಾವನಾತ್ಮಕ ಎಳೆ ಇಟ್ಟುಕೊಂಡು ಹಲವು…

Read More