Author: AIN Author

ಚಾಮರಾಜನಗರ:- ಜಿಲ್ಲೆಯ ಹನೂರು ತಾಲೂಕಿನ ಆಂಡಿಪಾಳ್ಯ ಗ್ರಾಮದಲ್ಲಿ ಚಿರತೆ ದಾಳಿಯಿಂದ ಮೇಕೆ ಸಾವನ್ನಪ್ಪಿದ ಘಟನೆ ಜರುಗಿದೆ. ಹನೂರು ತಾಲ್ಲೂಕಿನ ಲೊಕ್ಕನಹಳ್ಳಿ‌ ಸಮೀಪದ ಅಂಡಿಪಾಳ್ಯ‌ಗ್ರಾಮದ ಮಲ್ಲೆಶ್ ಎಂಬುವವರು ತಮ್ಮ ಜಮೀನಿನಲ್ಲಿ ಮೇಕೆ, ಕಟ್ಟಿದ್ದರು. ಚಿರತೆ ಶನಿವಾರ ರಾತ್ರಿ ವೇಳೆ ಧಾಳಿ‌ನೆಡೆಸಿ ಕೊಂದು ತಿಂದು ಹಾಕಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ರೈತ ಮಲ್ಲೇಶ್ ಮಾತನಾಡಿ, ಕಳೆದ ದಿನಗಳಿಂದ ನಿರಂತರವಾಗಿ ಚಿರತೆಗಳು ದಾಳಿ ಮಾಡಿ ರೈತರ ಸಾಕು ಪ್ರಾಣಿಗಳನ್ನು ಬಲಿ ಪಡೆಯುತ್ತಿವೆ. ಇದ್ದರಿಂದ ಲಕ್ಷಾಂತರ ರೂಪಾಯಿ ನಷ್ಟವಾಗುತ್ತಿದ್ದು, ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆ ಸೆರೆ ಹಿಡಿಯಲು ಕಾರ್ಯವನ್ನು ಚುರುಕುಗೊಳಿಸಬೇಕು ಅಲ್ಲದೇ ನಷ್ಟಕ್ಕೊಳಗಾದ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Read More

ಎಲ್ಲರ ಅಚ್ಚುಮೆಚ್ಚು ಬಾಂಬೆ ಮಿಠಾಯಿಯನ್ನು ಪುದುಚೇರಿಯಲ್ಲಿ ನಿಷೇಧಿಸಲಾಗಿದೆ. ಆರೋಗ್ಯಕ್ಕೆ ಹಾನಿಕರ­ವಾದ ರೊಡಮೈನ್‌-ಬಿ ಎಂಬ ವಿಷಕಾರಿ ಅಂಶ ಪತ್ತೆಯಾಗಿ­ರುವುದಾಗಿ ಆಹಾರ ಸುರಕ್ಷತಾ ಅಧಿಕಾರಿಗಳು ವರದಿ ನೀಡಿದ್ದಾರೆ. ಹಾಗಾಗಿ ಪುದುಚೇರಿಯಾದ್ಯಂತ ಇನ್ನು ಬಾಂಬೆ ಮಿಠಾಯಿ ಮಾರಾಟ ನಿಷೇಧಿಸಿರುವುದಾಗಿ ಲೆಫ್ಟಿನೆಂಟ್‌ ಗವರ್ನರ್‌ ತಮಿಳ್‌ಸಾಯಿ ಸುಂದರರಾಜನ್‌ ಹೇಳಿದ್ದಾರೆ. https://ainlivenews.com/defeat-to-india-in-the-final-what-did-captain-uday-saharan-say/ ಆದರೆ, ಆಹಾರ ಸುರಕ್ಷತಾ ಇಲಾಖೆಯಿಂದ ಗುಣಮಟ್ಟದ ಪ್ರಮಾಣ ಪತ್ರ ಪಡೆದ ಮಾರಾಟಗಾರರು ಕಾಟನ್ ಕ್ಯಾಂಡಿ ಮಾರಾಟ ಮುಂದುವರಿಸಬಹುದು. ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಸೌಂದರರಾಜನ್ ಅವರು ಶುಕ್ರವಾರ ಹೊರಡಿಸಿದ ಆದೇಶದಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ಕೇಂದ್ರಾಡಳಿತ ಪ್ರದೇಶದಲ್ಲಿ ಮಾರಾಟವಾಗುತ್ತಿದ್ದ ಕಾಟನ್ ಕ್ಯಾಂಡಿಯಲ್ಲಿ ‘ರೋಡಮೈನ್-ಬಿ’ ಎಂಬ ಹಾನಿಕಾರಕ ರಾಸಾಯನಿಕ ಅಂಶವನ್ನು ಪರೀಕ್ಷಿಸಿದಾಗ ಕಂಡುಬಂದಿದೆ. ಇದರ ಬೆನ್ನಲ್ಲೇ ಕಾಟನ್ ಕ್ಯಾಂಡಿ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಆಹಾರ ಸುರಕ್ಷತಾ ಪ್ರಮಾಣ ಪತ್ರ ಎಷ್ಟು ಬೇಗ ಸಿಗುತ್ತದೋ ಅಷ್ಟು ಬೇಗ ವ್ಯಾಪಾರ ಆರಂಭಿಸಬಹುದು. ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ

Read More

ಅಂಡರ್ 19 ಏಕದಿನ ವಿಶ್ವಕಪ್​ನಲ್ಲೂ ಆಸ್ಟ್ರೇಲಿಯಾ ತಂಡ ಭಾರತದ ಟ್ರೋಫಿ ಗೆಲ್ಲುವ ಕನಸನ್ನು ಮುರಿದಿದೆ. ಫೈನಲ್‌ನಲ್ಲಿ ಟೀಮ್ ಇಂಡಿಯಾ ಗೆಲುವಿಗೆ 254 ರನ್‌ಗಳ ಸವಾಲನ್ನು ಆಸ್ಟ್ರೇಲಿಯಾ ನೀಡಿತ್ತು. ಆದರೆ, ಆಸ್ಟ್ರೇಲಿಯದ ಬೌಲರ್‌ಗಳ ಮುಂದೆ ಮಂಡಿ ಊರಿದ ಭಾರತ 43.5 ಓವರ್‌ಗಳಲ್ಲಿ 174 ರನ್‌ಗಳಿಗೆ ಆಯಿತು. ಇದರೊಂದಿಗೆ ಆಸ್ಟ್ರೇಲಿಯ 2010ರ ನಂತರ ಮೊದಲ ಬಾರಿಗೆ ವಿಶ್ವಕಪ್ ಗೆದ್ದಿದೆ. ಆದರೆ, ಪಂದ್ಯ ಮುಗಿದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ ವೇಳೆ ಮಾತನಾಡಿದ ಟೀಮ್ ಇಂಡಿಯಾ ನಾಯಕ ಉದಯ್ ಸಹರಾನ್ ಅಚ್ಚುಕಟ್ಟಾಗಿ ಮಾತನಾಡಿದ್ದಾರೆ. ಸೋತರೂ ಎದೆಗುಂದದ ಉದಯ್, ನಮ್ಮ ಹುಡುಗರ ಬಗ್ಗೆ ನನಗೆ ಹೆಮ್ಮೆ ಇದೆ, ಅವರು ಚೆನ್ನಾಗಿ ಆಡಿದ್ದಾರೆ ಎಂದು ಹೇಳಿದ್ದಾರೆ. ನಮ್ಮ ತಂಡದ ಆಟಗಾರರು ಟೂರ್ನಿಯುದ್ದಕ್ಕೂ ಉತ್ತಮ ಹೋರಾಟದ ಮನೋಭಾವ ತೋರಿದರು. ನಾವು ಇಂದು ಕೆಲವು ಅನಗತ್ಯ ಶಾಟ್‌ಗಳನ್ನು ಆಡಿದ್ದೇವೆ, ಓವರ್​ಗಳ ಮಧ್ಯದಲ್ಲಿ ನಿಂತು ಆಡಲಿಲ್ಲ. ನಾವು ಫೈನಲ್ ಪಂದ್ಯಕ್ಕೆ ಎಲ್ಲ ಯೋಜನೆ ರೂಪಿಸಿದ್ದೆವು. ಆದರೆ ಯೋಜನೆಗಳನ್ನು ಕಾರ್ಯಗತಗೊಳಿಸಲು ಸಾಧ್ಯವಾಗಲಿಲ್ಲ ಎಂದು ಉದಯ್…

Read More

ರಾಯಚೂರು:- ಕಾನ್ಸ್​​​ಟೇಬಲ್ ಮೇಲೆ ಜೆಡಿಎಸ್​​​ ಶಾಸಕಿ ಕರೆಮ್ಮ ಪುತ್ರನಿಂದ ಹಲ್ಲೆ ನಡೆದಿದೆ. ದೇವದುರ್ಗ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಪುತ್ರ ಸಂತೋಷ್, ಪಿಎ ಇಲಿಯಾಸ್ ಸೇರಿದಂತೆ ಎಂಟು ಜನರು ದೇವದುರ್ಗ ಪೊಲೀಸ್​ ಠಾಣೆಯ ಕರ್ತವ್ಯನಿರತ ಕಾನ್ಸ್​​​ಟೇಬಲ್​ ಹನುಮಂತರಾಯ ಅವರ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಹಲ್ಲೆ ಮಾಡಿದ ಬಳಿಕ, ರಾಜಕೀಯ ಪ್ರಭಾವ ಬಳಸಿ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಹಲ್ಲೆಗೊಳಗಾದ ಕಾನ್ಸ್​​​ಟೇಬಲ್​ ಹನುಮಂತರಾಯ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. https://ainlivenews.com/satellite-based-toll-collection-on-bangalore-mysore-expressway/ ಹನುಮಂತರಾಯ ಅವರು ರವಿವಾರ (ಫೆ.11) ರಂದು ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್​ ಅನ್ನು​ ತಡೆದಿದ್ದರು. ಟ್ರ್ಯಾಕ್ಟರ್​ ತಡೆಹಿಡಿದ ವಿಚಾರಕ್ಕೆ ಶಾಸಕಿ ಪುತ್ರ ಸಂತೋಷ್​​ ಕಾನ್ಸ್​ಟೇಬಲ್ ಹನುಮಂತರಾಯ ಅವರಿಗೆ ​ಕರೆ ಮಾಡಿ ಟ್ರ್ಯಾಕ್ಟರ್​ ಬಿಡುವಂತೆ ಹೇಳಿದ್ದಾರೆ. ಒತ್ತಡಕ್ಕೆ ಮಣಿಯದ ಕಾನ್ಸ್​ಟೇಬಲ್ ಹನುಮಂತರಾಯ ಅವರು ಟ್ರ್ಯಾಕ್ಟರ್​ ಅನ್ನು ಪೊಲೀಸ್​ ಠಾಣೆಗೆ ತಂದು ಪರಿಶೀಲನೆ ನಡೆಸಿದ್ದಾರೆ. ಇದರಿಂದ ಆಕ್ರೋಶಗೊಂಡ…

Read More

ಬೆಂಗಳೂರು:- ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ ವೇಯಲ್ಲಿ ಉಪಗ್ರಹ ಆಧಾರಿತ ಟೋಲ್ ಸಂಗ್ರಹಿಸಲಾಗುತ್ತದೆ. ರಾಜ್ಯಸಭಾ ಸದಸ್ಯ ಲೆಹರ್​ಸಿಂಗ್ ಸಿರೋಯಾ ಅವರ ಪ್ರಶ್ನೆಯೊಂದಕ್ಕೆ ರಾಜ್ಯಸಭೆಯಲ್ಲಿ ಇತ್ತೀಚೆಗೆ ಉತ್ತರ ನೀಡಿದ ಸಾರಿಗೆ ಸಚಿವ ನಿತಿನ್ ಗಡ್ಕರಿ , ಕರ್ನಾಟಕದಲ್ಲಿ ಸಾಗುವ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಪ್ರಾಯೋಗಿಕವಾಗಿ ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಂ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ಜಿಎನ್​​ಎಸ್​ಎಸ್ ಆಧಾರಿತ ತಡೆರಹಿತ ಟೋಲಿಂಗ್‌ನಂತಹ ಹೊಸ ತಂತ್ರಜ್ಞಾನಗಳ ಅನುಷ್ಠಾನದ ಕುರಿತು ಸಲಹೆಗಳನ್ನು ನೀಡಲು ಸರ್ಕಾರವು ಸಲಹೆಗಾರರನ್ನು ನೇಮಿಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಎಷ್ಟು ಸಂಚರಿಸಿದೆ ಎಂಬುದರ ಮಾಹಿತಿ ಕಲೆ ಹಾಕಲು ಮತ್ತು ಪ್ರಯಾಣಿಸಿದ ದೂರದ ಆಧಾರದ ಮೇಲೆ ಬಳಕೆದಾರರ ಶುಲ್ಕವನ್ನು ಲೆಕ್ಕಾಚಾರ ಮಾಡುವ ಸಾಮರ್ಥ್ಯವನ್ನು ಜಿಎನ್​​ಎಸ್​ಎಸ್ ಹೊಂದಿದೆ ಎಂದು ಗಡ್ಕರಿ ತಿಳಿಸಿದ್ದಾರೆ. ಈ ತಂತ್ರಜ್ಞಾನ ಅಳವಡಿಕೆಗೆ ಸರ್ಕಾರ ಮೂರು ವರ್ಷಗಳಿಂದ ಚಿಂತನೆ ನಡೆಸುತ್ತಾ ಇದೆ. ಇದು ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಡುವುದಲ್ಲದೆ, ಟೋಲ್ ಪಾವತಿಗಾಗಿ ಸರದಿಯಲ್ಲಿ ಕಾಯುವುದನ್ನು ತಪ್ಪಿಸುತ್ತದೆ ಎಂದು…

Read More

ನವದೆಹಲಿ: ವಿವಿಧ ಬೇಡಿಕೆ ಈಡೇರಿಕೆಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲು ಸುಮಾರು 200 ರೈತ ಸಂಘಟನೆಗಳು ಮಂಗಳವಾರ ದೆಹಲಿ ಚಲೋಗೆl ನೀಡಿವರು. ದೆಹಲಿ ಚಲೋ’ ನಲ್ಲಿ ಸುಮಾರು 20,000 ರೈತರು (Farmers) ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಈಗಾಗಲೇ ಹಲವು ಕಡೆ ಗಡಿಗಳನ್ನು ಬ್ಯಾರಿಕೇಡ್‌ಗಳಿಂದ ಬಂದ್ ಮಾಡಲಾಗಿದೆ. ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಈ ಪ್ರತಿಭಟನೆಗೆ 200 ರೈತ ಸಂಘಟನೆಗಳು ಬೆಂಬಲ ನೀಡಿದ್ದು, ಸುಮಾರು 20,000 ರೈತರು ಪಾಲ್ಗೊಳ್ಳಲಿದ್ದಾರೆ ಎಂದು ಗುಪ್ತಚರ ಇಲಾಖೆ ಅಂದಾಜಿಸಿದೆ.

Read More

ವಿಶ್ವಕಪ್ ಗೆಲ್ಲುವ ಭಾರತದ ಕನಸು ಭಗ್ನ ಆಗಿದ್ದು, ಆಸೀಸ್​ಗೆ ಚಾಂಪಿಯನ್ ಕಿರೀಟ ಬಂದಿದೆ. ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 19 ವರ್ಷದೊಳಗಿನವರ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಉದಯ್ ಸಹಾರನ್ ನಾಯಕತ್ವದ ಟೀಂ ಇಂಡಿಯಾವನ್ನು ಮಣಿಸಿದ ಆಸ್ಟ್ರೇಲಿಯಾ ಯುವ ಪಡೆ ನಾಲ್ಕನೇ ಬಾರಿಗೆ ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ ನಿಗದಿತ 50 ಓವರ್​ಗಳಲ್ಲಿ 7 ವಿಕೆಟ್‌ಗಳನ್ನು ಕಳೆದುಕೊಂಡು 254 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ಭಾರತ ತಂಡ ಮತ್ತೊಮ್ಮೆ ಫೈನಲ್ ಭಯಕ್ಕೆ ತುತ್ತಾಗಿ 174 ರನ್​ಗಳಿಗೆ ಆಲೌಟ್ ಆಗುವ ಮೂಲಕ 79 ರನ್​ಗಳ ಹೀನಾಯ ಸೋಲು ಅನುಭವಿಸಿತು. ಈ ಮೂಲಕ ದಾಖಲೆಯ 6ನೇ ಬಾರಿಗೆ ಚಾಂಪಿಯನ್ ಆಗುವ ಅವಕಾಶದಿಂದ ವಂಚಿತವಾಯಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾಕ್ಕೆ ಉತ್ತಮ ಆರಂಭ ಸಿಗಲಿಲ್ಲ. ತಂಡದ ಆರಂಭಿಕ ಸ್ಯಾಮ್ ಕಾನ್ಸ್ಟಾಸ್ ಖಾತೆ ತೆರೆಯದೆ ವಿಕೆಟ್ ಒಪ್ಪಿಸಿದರು. ಹೀಗಾಗಿ ಕೇವಲ 16 ರನ್​ಗಳಿಗೆ ತಂಡದ ಮೊದಲ…

Read More

ರೆಫ್ರಿಜರೇಟರ್​ ಸಾಕಷ್ಟು ಪ್ರಯೋಜನಗಳನ್ನು ನೀಡಿದರೂ ಕೆಲವು ವಸ್ತುಗಳನ್ನು ಯಾವುದೇ ಕಾರಣಕ್ಕೂ ರೆಫ್ರಿಜರೇಟರ್​ನಲ್ಲಿ ಇಡಬಾರದು ಎನ್ನಲಾಗಿದೆ. ಏಕೆಂದರೆ, ಕೆಮಿಕಲ್ಸ್​ ರಿಯಾಕ್ಷನ್​ ಆಗಿ ಆಹಾರದ ಸ್ವರೂಪದಲ್ಲಿ ಆಘಾತಕಾರಿ ಬದಲಾವಣೆ ಆಗುತ್ತದೆ. ಆದ್ದರಿಂದ, ರೆಫ್ರಿಜರೇಟರ್​ನಲ್ಲಿ ಯಾವ ವಸ್ತುಗಳನ್ನು ಇರಿಸಬಹುದು? ಯಾವ ವಸ್ತುಗಳನ್ನು ಇಡಬಾರದು? ಎಂಬುದನ್ನು ನಾವೀಗ ತಿಳಿಯೋಣ. 1. ಸಿಪ್ಪೆ ಸುಲಿದ ಬೆಳ್ಳುಳ್ಳಿಯನ್ನು ಎಂದಿಗೂ ಶೈತ್ಯೀಕರಣಗೊಳಿಸಬೇಡಿ. ಬೆಳ್ಳುಳ್ಳಿಯನ್ನು ಹೊರಗೆ ಇಡಿ ಯಾವುದೇ ಕಾರಣಕ್ಕೂ ಫ್ರಿಡ್ಜ್​ನಲ್ಲಿ ಮಾತ್ರ ಇಡಬೇಡಿ. ಇದನ್ನು ಮೀರಿದರೆ ಬೆಳ್ಳುಳ್ಳಿಯ ಗುಣದಲ್ಲಿ ಮಾರಕ ಬದಲಾವಣೆಯಾಗುತ್ತದೆ. ಅಂದರೆ, ಬೆಳ್ಳುಳ್ಳಿ ವಿಷವಾಗಿ ಬದಲಾಗುವ ಸಾಧ್ಯತೆಯೂ ಇದೆ. 2. ಈರುಳ್ಳಿ ಸಾಮಾನ್ಯವಾಗಿ ಶೀತವನ್ನು ಸಹಿಸಿಕೊಳ್ಳುತ್ತದೆ. ಇದನ್ನು ರೆಫ್ರಿಜರೇಟರ್‌ನಲ್ಲಿ ಇರಿಸಿದಾಗ, ಪಿಷ್ಟವು ಸಕ್ಕರೆಯಾಗಿ ಬದಲಾಗಲು ಪ್ರಾರಂಭಿಸುತ್ತದೆ. ಅಲ್ಲದೆ ವಿಷಕಾರಿಯಾಗುವ ಸಾಧ್ಯತೆಯೂ ಇದೆ. 3. ಶುಂಠಿಯು ಆರೋಗ್ಯಕ್ಕೆ ಪ್ರಮುಖವಾದ ಗಿಡಮೂಲಿಕೆ ಪದಾರ್ಥಗಳಲ್ಲಿ ಒಂದಾಗಿದೆ. ಹೊರಗೆ ಇಟ್ಟರೂ ಗುಣಮಟ್ಟ ಬದಲಾಗುವುದಿಲ್ಲ. ಆದರೆ, ಫ್ರಿಡ್ಜ್​ನಲ್ಲಿ ಇಟ್ಟರೆ ಸ್ವರೂಪವೇ ಬದಲಾಗಲಿದೆ. 4. ಯಾವುದೇ ಕಾರಣಕ್ಕೂ ಅಕ್ಕಿಯನ್ನು ಫ್ರಿಡ್ಜ್​ನಲ್ಲಿ ಇಡಬೇಡಿ. ಅನ್ನ ಮಾತ್ರವಲ್ಲದೆ ಯಾವುದೇ ಪಿಷ್ಟಯುಕ್ತ ಆಹಾರವನ್ನು…

Read More

ಕೊಪ್ಪಳ:- ಗಂಗಾವತಿ ಕೇಂದ್ರಿಯ ಬಸ್ ನಿಲ್ದಾಣದ ಎದುರಿಗಿರುವ ಉದ್ಯಾನದಲ್ಲಿ ದಂಪತಿ ನಡುವಿನ ವೈಮನಸ್ಸು ಘೋರ ದುರಂತಕ್ಕೆ ಎಡೆ ಮಾಡಿಕೊಟ್ಟಿದೆ. ನಶೆಯಲ್ಲಿದ್ದ ಕಿರಾತಕರ ಗುಂಪೊಂದು ಪತಿಯನ್ನು ಥಳಿಸಿ ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಜರುಗಿದೆ. ಶ್ರೀಕೃಷ್ಣದೇವರಾಯ ವೃತ್ತದಲ್ಲಿರುವ ಕೇಂದ್ರ ಬಸ್ ನಿಲ್ದಾಣದಲ್ಲಿ ಗಲಾಟೆಯಾಗಿದ್ದು, ಬಳಿಕ ಮಹಿಳೆ ರಕ್ಷಣೆಗಾಗಿ ಸಮೀಪದ ನೆಹರೂ ಪಾರ್ಕ್‌ ಕಡೆಗೆ ಓಡಿ ಹೋಗಿದ್ದಾಳೆ. ಈ ಸಂದರ್ಭದಲ್ಲಿ ಆಕೆ ಮೇಲೆ ಎರಗಿದ ಕಿರಾತಕರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಪೈಕಿ ಲಿಂಗರಾಜ ಎಂಬ ಯುವಕ ಸಂತ್ರಸ್ತೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಿಕ್ಕ ಆರೋಪಿಗಳನ್ನು ಮೌಲಹುಸೇನ್, ಶಿವಕುಮಾರಸ್ವಾಮಿ, ಪ್ರಶಾಂತ, ಮಹೇಶ ಮತ್ತು ಮಾದೇಶ ಎಂದು ಗುರುತಿಸಲಾಗಿದೆ ಇನ್ನೂ ಬೆಂಗಳೂರಿನ ಗೊರಗುಂಟೆಪಾಳ್ಯದ 21 ವರ್ಷ ವಯಸ್ಸಿನ ಯುವತಿ, ಗಂಗಾವತಿ ತಾಲ್ಲೂಕಿನ ಸಿದ್ಧಾಪುರದ ಯುವಕನನ್ನು ಪ್ರೀತಿಸಿ ಮೂರು ತಿಂಗಳ ಹಿಂದೆಯಷ್ಟೇ ಹುಲಿಗಿ ಗ್ರಾಮದ ದೇವಸ್ಥಾನದಲ್ಲಿ ಮದುವೆಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ಮಧ್ಯೆ ದಾಂಪತ್ಯ ಜೀವನದಲ್ಲಿ ವಿರಸ…

Read More

ಕೊತ್ತಂಬರಿ ಬೀಜಗಳು ಸಂಭವನೀಯ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ. ನಿಮ್ಮ ದೈನಂದಿನ ದಿನಚರಿಯಲ್ಲಿ ಈ ಪೋಷಕಾಂಶಭರಿತ ಕೊತ್ತಂಬರಿ ಬೀಜವನ್ನು ಬಳಸುವುದರಿಂದ ಆಗುವ ಪ್ರಯೋಜನಗಳಿವು. ಮಸಾಲೆ ಪದಾರ್ಥವಾಗಿ ಮಾತ್ರವಲ್ಲದೆ ಕೊತ್ತಂಬರಿ ಬೀಜ ಅನೇಕ ಇತರೆ ಆರೋಗ್ಯ ಪ್ರಯೋಜನಗಳನ್ನು ಕೂಡ ಹೊಂದಿದೆ. ಕೊತ್ತಂಬರಿ ಬಹಳ ಹಳೆಯ ಮೂಲಿಕೆಯಾಗಿದ್ದು, ಇದು ಕ್ರಿ.ಪೂ. 5000ರಷ್ಟು ಹಿಂದೆಯೇ ಪರಿಚಿತವಾಗಿದೆ. ಇದನ್ನು ಮೊದಲು ಇಟಲಿಯಲ್ಲಿ ಬಳಸಲಾಯಿತು. ಭಾರತದ ಅಡುಗೆಯಲ್ಲಿ ಹೆಚ್ಚು ಬಳಸುವ ಕೊತ್ತಂಬರಿಭಾರತದ ಮೂಲದ್ದೇ ಅಲ್ಲ. ಕೊತ್ತಂಬರಿ ಬೀಜವನ್ನು ರಾತ್ರಿ ನೀರಿನಲ್ಲಿ ನೆನೆಸಿಟ್ಟು ಬೆಳಗ್ಗೆ ಆ ನೀರನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಯಾವ ಪ್ರಯೋಜನಗಳಿವೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ. ಥೈರಾಯ್ಡ್ ಅನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕೊತ್ತಂಬರಿ ನೀರನ್ನು ಸೇವಿಸುವ ಮೂಲಕ ಥೈರಾಯ್ಡ್ ಸಮಸ್ಯೆಗಳನ್ನು ಸುಧಾರಿಸಬಹುದು. ಥೈರಾಯ್ಡ್ ಸಮಸ್ಯೆಗಳು ಅಸಮತೋಲಿತ ವಾತ ಮತ್ತು ಕಫ ದೋಷದಿಂದ ಉಂಟಾಗುವ ಹಾರ್ಮೋನ್ ಅಸಮತೋಲನಗಳಾಗಿವೆ. – ಕಬ್ಬಿಣ, ಪೊಟ್ಯಾಸಿಯಮ್ ಮತ್ತು ಹಲವಾರು ಪ್ರಮುಖ ಖನಿಜಗಳು ಕೊತ್ತಂಬರಿ ಬೀಜಗಳನ್ನು ಒಳಗೊಂಡಿರುವ ಅನೇಕ ಪೋಷಕಾಂಶಗಳಲ್ಲಿ…

Read More